ಚಿಕ್ಕಮಗಳೂರು: ತಾಲೂಕಿನ ಪ್ರಸಿದ್ಧ ದತ್ತಪೀಠದಲ್ಲಿ ಪ್ರವಾಸಿ ಬಸ್ ಒಂದು ಪಲ್ಟಿಯಾಗಿದ್ದು, 6 ವರ್ಷದ ಬಾಲಕ ಮೃತಪಟ್ಟಿದ್ದಾನೆ. ಇನ್ನು 29 ಮಂದಿ ಗಾಯಗೊಂಡಿದ್ದು, ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚಿಕ್ಕಮಗಳೂರು (Chikkamagalur) ದತ್ತಪೀಠ-ಮಾಣಿಕ್ಯಾಧಾರ ಮಾರ್ಗ ಮಧ್ಯೆ 100 ಅಡಿ ಆಳಕ್ಕೆ ಬಸ್ ಬಿದ್ದ ಕಾರಣ ಹೆಚ್ಚಿನ ಜನರಿಗೆ ಗಾಯಗಳಾಗಿವೆ. ಗಾಯಾಳುಗಳಲ್ಲಿ ಆರು ಜನರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಂದಿದೆ.
ತುಮಕೂರು ಜಿಲ್ಲೆ ಶಿರಾ ತಾಲೂಕಿನ ಪ್ರವಾಸಿಗರು ಮಾಣಿಕ್ಯಾಧಾರ, ದತ್ತಪೀಠ, ಮುಳ್ಳಯ್ಯನಗಿರಿಗೆ ಪ್ರವಾಸಕ್ಕೆ ತೆರಳಿದ್ದರು. ಇದೇ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಅಪಘಾತದಲ್ಲಿ ಗಾಯಗೊಂಡಿದ್ದವರಲ್ಲಿ ಮೊಹಮ್ಮದ್ ಸವಾಜ್ ಎಂಬ ಆರು ವರ್ಷದ ಬಾಲಕನು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಮಾಣಿಕ್ಯಾರದಿಂದ ದತ್ತಪೀಠದ ಬಳಿ ಹೋಗುತ್ತಿದ್ದಾಗ ಬಸ್ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ.
ಕಾರು ಪಲ್ಟಿಯಾಗಿ ಯುವತಿ ಸಾವು
ಭಾನುವಾರವೇ (ಏಪ್ರಿಲ್ 28) ಅತಿ ವೇಗದಲ್ಲಿ ಸಾಗುತ್ತಿದ್ದ ಇನೋವಾ ಕಾರು ಪಲ್ಟಿಯಾಗಿ ಯುವತಿಯೊಬ್ಬಳು ಮೃತಪಟ್ಟ ಘಟನೆ ನಡೆದಿದೆ. ಕುಂದಾಪುರ ಸಮೀಪದ ಹುಣ್ಸೆಮಕ್ಕಿ ಬಳಿಯ ಗುಡ್ಡೆಯಂಗಡಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಚೆನ್ನಪಟ್ಟಣ ಮೂಲದ ಯುವತಿ ಕೀರ್ತಿ ಎಂಬುವರು ಅಪಘಾತದಲ್ಲಿ ಮೃತಪಟ್ಟವರು.
ಚೆನ್ನಪಟ್ಟಣ ಮೂಲದ ಅವರು ಧರ್ಮಸ್ಥಳಕ್ಕೆ ಬಂದಿದ್ದರು. ಅಲ್ಲಿಂದ ಅವರು ಮುರುಡೇಶ್ವರಕ್ಕೆ ಹೊರಟಿದ್ದರು. ಅತಿ ವೇಗದಲ್ಲಿ ಸಾಗುತ್ತಿದ್ದ ಕಾರು ಹುಣ್ಸೆಮಕ್ಕಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಮರದ ದಿಮ್ಮಿಗೆ ಡಿಕ್ಕಿ ಹೊಡೆದಿದೆ. ಬಳಿಕ ಬಳಿಕ ರಸ್ತೆ ಬದಿಯ ಮರಕ್ಕೂ ಢಿಕ್ಕಿ ಹೊಡೆದು ಇನ್ನೋವಾ ಮಾತು ಪಲ್ಟಿಯಾಗಿದೆ. ಕಾರು ಪಲ್ಟಿಯಾದ ತೀವ್ರತೆಗೆ ಕಾರಿನಲ್ಲಿದ್ದ 5 ಮಂದಿಗೆ ಗಂಭೀರ ಗಾಯಗೊಂಡಿದ್ದಾರೆ. ಅಲ್ಲದೆ ಯುವತಿಯೊಬ್ಬಳು ಮೃತಪಟ್ಟಿದ್ದಾಳೆ. ಕೋಟ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ಕೆಲ ದಿನಗಳ ಹಿಂದಷ್ಟೇ ವಿಜಯಪುರ ಜಿಲ್ಲೆಯಲ್ಲಿ ಕಾರು ಪಲ್ಟಿಯಾಗಿ, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರ ಗಾಯಗೊಂಡಿದ್ದರು. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಡವಳಗಿ ಬಳಿ ಅಪಘಾತ ನಡೆದಿತ್ತು. ದೊಡ್ಡಯ್ಯ ಪುರಾಣಿಕಮಠ (37), ಪುಷ್ಪಾವತಿ (55) ಮೃತರು.
ಇದನ್ನೂ ಓದಿ: Car Accident: ಮಾದಾವರ ಟೋಲ್‌ಗೇಟ್ ಬಳಿ ಕಾರು ಅಪಘಾತ ಪ್ರಕರಣ; ಗಾಯಗೊಂಡಿದ್ದ ಮೂವರು ಚಿಕಿತ್ಸೆ ಫಲಿಸದೆ ಸಾವು