Site icon Vistara News

Karnataka Election 2023: ದೇವರಾಜ ಅರಸು ಬಳಿಕ ಹಿಂದುಳಿದವರಿಗೆ ನ್ಯಾಯ ಒದಗಿಸಿರುವುದು ಬಿಜೆಪಿ ಸರ್ಕಾರ ಮಾತ್ರ: ಬಿ.ವೈ.ವಿಜಯೇಂದ್ರ

BY Vijayendra says After Devaraj Urs, only BJP govt has done justice to backward classes

#image_title

ವಿಜಯಪುರ: ಮೋದಿ ಬಂದ ಬಳಿಕ ಕಾಶ್ಮೀರದಲ್ಲಿ ಶಾಂತಿ ನೆಲೆಸುವಂತೆ ಮಾಡಿದ್ದಾರೆ. ರಾಜ್ಯದಲ್ಲಿ ಬಡವರ ಪರವಾಗಿ ಯಡಿಯೂರಪ್ಪ ಹೋರಾಟ ಮಾಡಿಕೊಂಡು ಬಂದಿದ್ದು, ಅವರ ಪರಿಶ್ರಮದಿಂದ ಬಿಜೆಪಿ ಅಧಿಕಾರಕ್ಕೆ ಬಂತು. ರೈತರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿ ಮಾದರಿಯಾದ ಬಿಎಸ್‌ವೈ, ಬಸವಣ್ಣನ ರೀತಿಯಲ್ಲಿ ಎಲ್ಲ ಸಮುದಾಯಗಳಿಗೆ ನ್ಯಾಯ ಒದಗಿಸಿದರು. ದೇವರಾಜ್‌ ಅರಸು ಬಳಿಕ ಹಿಂದುಳಿದ ವರ್ಗಗಳಿಗೆ ನ್ಯಾಯ ಒದಗಿಸಿರುವುದು ಬಿಜೆಪಿ ಸರ್ಕಾರ (Karnataka Election 2023) ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಜಾಲವಾದ ಗ್ರಾಮದಲ್ಲಿ ನಡೆದ ಬಿಜೆಪಿ ಒಬಿಸಿ ಮೋರ್ಚಾ ಸಮಾವೇಶದಲ್ಲಿ ಮಾತನಾಡಿದ ಅವರು, ಯುಪಿಎ ಸರ್ಕಾರದ ಅವಧಿಯಲ್ಲಿ ಈ ದೇಶಕ್ಕೆ ಭವಿಷ್ಯವೇ ಇಲ್ಲ ಎನ್ನುವಂತಹ ಪರಿಸ್ಥಿತಿ ಉಂಟಾಗಿತ್ತು. 2014ರಲ್ಲಿ ಮೋದಿ ಪ್ರಧಾನಿಯಾದ ಬಳಿಕ ದೇಶದಲ್ಲಿ ಬದಲಾವಣೆ ಸಾಧ್ಯವಾಯಿತು. ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದ ಬಳಿಕ ದೇಶದಲ್ಲಿ ಬದಲಾವಣೆ ಕಾಣುತ್ತಿದೆ ಎಂದು ಹೇಳಿದರು.

ಇದನ್ನೂ ಓದಿ | ಮಂಗಳೂರು ಸ್ಫೋಟಕ್ಕೆ ಸಾದಾ ಕುಕ್ಕರ್‌ ಎಂದು ಹೇಳಿದ್ದ ಡಿ.ಕೆ. ಶಿವಕುಮಾರ್‌ ಈಗ ಏನು ಹೇಳ್ತಾರೆ: ಸಿಎಂ ಬೊಮ್ಮಾಯಿ ಪ್ರಶ್ನೆ

ಮೋದಿ ಸರ್ಕಾರದ ವಿರುದ್ಧ ಒಂದೇ ಒಂದು ಭ್ರಷ್ಟಾಚಾರದ ಆರೋಪವಿಲ್ಲ. ಇಡೀ ಜಗತ್ತೇ ಪ್ರಧಾನಿ ಮೋದಿ ಅವರ ನಾಯಕತ್ವ ಒಪ್ಪಿಕೊಂಡಿದೆ. ಪ್ರಧಾನಿ ಮೋದಿಯೇ ರಷ್ಯಾ ಹಾಗೂ ಉಕ್ರೇನ್ ಯುದ್ಧವನ್ನು ನಿಲ್ಲಿಸುವಂತೆ ಹೇಳಿದ್ದರು, ಇಡೀ ಜಗತ್ತಿನಲ್ಲಿ ಯಾವ ನಾಯಕನೂ ಯುದ್ಧ ನಿಲ್ಲಿಸುವಂತೆ ಹೇಳಿಲ್ಲ ಎಂದರು.

ಬಿಜೆಪಿ ಎಂದರೆ ಅಲ್ಪ ಸಂಖ್ಯಾತರ ವಿರೋಧಿ ಎಂದು ಆರೋಪ ಮಾಡುತ್ತಾರೆ. ಆದರೆ, ಮೋದಿ ಅಧಿಕಾರಕ್ಕೆ ಬಂದ ಬಳಿಕ ಎಲ್ಲವೂ ಬದಲಾಗಿದೆ. ಕಾಂಗ್ರೆಸ್ ಪಕ್ಷ ಎಂದಿಗೂ ಮುಸ್ಲಿಂ ಮಹಿಳೆಯರಿಗೆ ನ್ಯಾಯ ಕೊಡಿಸಲಿಲ್ಲ. ಮೋದಿ ಸರ್ಕಾರದಲ್ಲಿ ಅಧಿಕಾರಕ್ಕೆ ಬಂದ ಬಳಿಕ ತ್ರಿವಳಿ ತಲಾಖ್ ರದ್ದು ಮಾಡಿದ್ದಾರೆ. ಕಾಶ್ಮೀರದಲ್ಲಿ ಶಾಂತಿ ಕಾಪಾಡಲೂ ಮೋದಿ ಕ್ರಮ ಕೈಗೊಂಡರು ಎಂದು ಹೇಳಿದರು.

ಇದನ್ನೂ ಓದಿ | Ramesh Jarkiholi: ರಮೇಶ್‌ ಜಾರಕಿಹೊಳಿ ಮೆಂಟಲ್‌ ಕೇಸ್‌; ಆತನ ಬಗ್ಗೆ ನನಗೆ ಕೇಳಲೇಬೇಡಿ: ಡಿ.ಕೆ. ಶಿವಕುಮಾರ್

ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವಾಗ ಮುಂದಿನ ದಿನಗಳಲ್ಲಿ ಬಿಜೆಪಿ ಅಧಿಕಾರಕ್ಕೆ ತರಲು ಪ್ರಯತ್ನ ಮಾಡಲಾಗುವುದು ಎಂದಿದ್ದರು. ಅವರು ಹೇಳಿದ ಮಾತಿನಂತೆ ಪಕ್ಷ ಅಧಿಕಾರಕ್ಕೆ ತರಲು ಶ್ರಮಿಸುತ್ತಿದ್ದಾರೆ. ಅವರು ಹಾಗೂ ವಿಜಯಪುರ ಜಿಲ್ಲೆಗೆ ಅವಿನಾಭಾವ ಸಂಬಂಧ ಇದೆ. ಮುಂದಿನ ದಿನಗಳಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಬೇಕು. ಇದಕ್ಕಾಗಿ ಜನರು ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು.

Exit mobile version