Site icon Vistara News

Karnataka By Election: ವಿಧಾನ ಪರಿಷತ್‌ನ 3 ಸ್ಥಾನಗಳಿಗೆ ಜೂ.30ಕ್ಕೆ ಉಪ ಚುನಾವಣೆ

Vidhana soudha in Bangalore

#image_title

ಬೆಂಗಳೂರು: ವಿಧಾನ ಪರಿಷತ್‌ನ 3 ಸ್ಥಾನಗಳಿಗೆ ಜೂನ್‌ 30ಕ್ಕೆ ಉಪ ಚುನಾವಣೆ (Karnataka By Election) ನಡೆಯಲಿದೆ. ಬಾಬುರಾವ್ ಚಿಂಚನಸೂರ್, ಆರ್. ಶಂಕರ್ ಮತ್ತು ಲಕ್ಷ್ಮಣ್ ಸವದಿ ರಾಜೀನಾಮೆಯಿಂದ ತೆರವಾಗಿದ್ದ ಮೂರು ಸ್ಥಾನಗಳಳಿಗೆ ಉಪ ಚುನಾವಣೆ ನಡೆಸುವುದಾಗಿ ಕೇಂದ್ರ ಚುನಾವಣಾ ಆಯೋಗ ಮಾಹಿತಿ ನೀಡಿದೆ.

ಇದನ್ನೂ ಓದಿ | JDS Karnataka: ದೇಶದಲ್ಲಿ ಬಿಜೆಪಿ ಜತೆ ಕೈಜೋಡಿಸದ ಪಕ್ಷ ಇದ್ದರೆ ತೋರಿಸಿ: ಬಿಜೆಪಿ ವಿರೋಧಿ ಕೂಟ ಸೇರದ ಬಗ್ಗೆ ಎಚ್‌.ಡಿ. ದೇವೇಗೌಡ ಸುಳಿವು

ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆಯುವ ಉಪ ಚುನಾವಣೆಯ ಅಧಿಸೂಚನೆ ಜೂನ್‌ 13ರಂದು ಪ್ರಕಟವಾಗಲಿದ್ದು, ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಜೂನ್‌ 20 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಜೂನ್‌ 21 ನಾಮಪತ್ರ ಪರಿಶೀಲನೆ, ಜೂನ್‌ 23 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಜೂನ್‌ 30ಕ್ಕೆ ಮತದಾನ ನಡೆಯಲಿದ್ದು, ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆ ತನಕ ಮತದಾನ ನಡೆಯಲಿದೆ. ಅದೇ ದಿನ ಸಂಜೆ 5 ಗಂಟೆಗೆ ಮತ ಎಣಿಕೆ ಕಾರ್ಯ ನಡೆದು ಫಲಿತಾಂಶ ಘೋಷಣೆಯಾಗಲಿದೆ.

ಈ ಹಿಂದೆ ವಿಧಾನಸಭೆಯಿಂದ ವಿಧಾನಪರಿಷತ್‌ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿಯಿಂದ ಬಾಬುರಾವ್ ಚಿಂಚನಸೂರ್, ಆರ್. ಶಂಕರ್ ಮತ್ತು ಲಕ್ಷ್ಮಣ್ ಸವದಿ ಆಯ್ಕೆಯಾಗಿದ್ದರು. ಆದರೆ, ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್‌ ನೀಡದ ಹಿನ್ನೆಲೆಯಲ್ಲಿ ಇವರು ಬಿಜೆಪಿಗೆ ರಾಜೀನಾಮೆ ನೀಡಿದ್ದರು.

ವಿಧಾನಸಭಾ ಚುನಾವಣೆಯಲ್ಲಿ ಗುರುಮಿಠಕಲ್‌ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಬಾಬುರಾವ್ ಚಿಂಚನಸೂರ್‌ ಸ್ಪರ್ಧಿಸಿ ಸೋತಿದ್ದರು. ಅದೇ ರೀತಿ ರಾಣೆಬೆನ್ನೂರಿನಿಂದ ಆರ್‌.ಶಂಕರ್‌ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲು ಅನುಭವಿಸಿದ್ದರು. ಆದರೆ, ಅಥಣಿ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಲಕ್ಷ್ಮಣ್‌ ಸವದಿ ಗೆಲುವು ಪಡೆದಿದ್ದರು.

Exit mobile version