Site icon Vistara News

Cabinet Meeting: ನಾಮಫಲಕಗಳಲ್ಲಿ ಶೇ.60 ಕನ್ನಡ ಕಡ್ಡಾಯಕ್ಕೆ ಸಚಿವ ಸಂಪುಟ ಒಪ್ಪಿಗೆ

Cabinet approves amendments to 60% mandatory Kannada on signboards

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ- 2024 ಮಂಡನೆಗೆ ಸಚಿವ ಸಂಪುಟ (Cabinet Meeting) ಅನುಮೋದನೆ ನೀಡಿದ್ದು, ಅಂಗಡಿ-ಮುಂಗಟ್ಟುಗಳ ನಾಮಫಲಕಗಳಲ್ಲಿ ಶೇ.60 ಕಡ್ಡಾಯವಾಗಿ ಕನ್ನಡ ಅಳವಡಿಸಲು ಕಾಯ್ದೆ ತಿದ್ದುಪಡಿಗೆ ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಶುಕ್ರವಾರ ಸಚಿವ ಸಂಪುಟ ಸಭೆ ನಡೆದ ಬಳಿಕ ಕಾನೂನು ಸಚಿವ ಎಚ್‌.ಕೆ..ಪಾಟೀಲ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಕೇಂದ್ರ ಪುರಸ್ಕೃತ ಯೋಜನೆಯಾದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಗಣಕೀಕರಣ ಯೋಜನೆಯಲ್ಲಿ 5491 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ (ಪ್ಯಾಕ್ಸ್‌ಗಳ) Data Digitization and Migration Support ಕಾರ್ಯವನ್ನು ರೂ. 71.38 ಕೋಟಿಗಳ ಮೊತ್ತದಲ್ಲಿ ಪೂರ್ಣಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಿದ್ದೇವೆ

2023-24ನೇ ಸಾಲಿನಲ್ಲಿ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳನ್ನು ಭರ್ತಿ ಮಾಡಲು KPSC ಹೊರಡಿಸುವ ಅಧಿಸೂಚನೆಯಲ್ಲಿ ಎಲ್ಲಾ ಅರ್ಹ ಅಭ್ಯರ್ಥಿಗಳಿಗೆ ಒಂದು ಬಾರಿಯ ಕ್ರಮವಾಗಿ (One time measure) ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ಮಾಡಲು ಒಪ್ಪಿಗೆ ನೀಡಿದ್ದೇವೆ. ಕೋವಿಡ್ ನಿಂದ ಆಗಿರುವ ಪರಿಣಾಮ ವಯೋಮಿತಿಯನ್ನ ಸಡಿಲಿಕೆ ಮಾಡಿ ನಿರ್ಣಯ ಮಾಡಿದ್ದೇವೆ ಎಂದು ಮಾಹಿತಿ ನೀಡಿದರು.

ಬಿವಿಬಿ ಎಂಜಿನಿಯರಿಂಗ್ ಮಹಾವಿದ್ಯಾಲಯ, ಹುಬ್ಬಳ್ಳಿ, ಇಲ್ಲಿನ ಅನುದಾನಿತ ಬೋಧಕ, ಬೋಧಕೇತರ ಸಿಬ್ಬಂದಿಯ ಸೇವೆಯನ್ನು ಕೆ.ಎಲ್.ಇ ತಾಂತ್ರಿಕ ವಿವಿ ಅನುದಾನಿತ ವಿಭಾಗಗಳಿಗೆ ಮುಂದುವರೆಸುವ ತೊಂದರೆಯಾಗದಂತೆ ಸ್ಯಾಲರಿ ಅನುದಾನ ನೀಡುತ್ತೇವೆ. ಬೆಂಗಳೂರಿನ ವಿಶ್ವೇಶ್ವರಯ್ಯ ಕಾಲೇಜ್ ಎಂಜಿನಿಯರಿಂಗ್ ಯೂನಿವರ್ಸಿಟಿಯನ್ನು (UVCE) ಉನ್ನತೀಕರಣಗೊಳಿಸಲು, ಮೂಲಭೂತ ಸೌಕರ್ಯಗಳನ್ನು ಒದಗಿಸಲು 25.00 ಕೋಟಿಗಳ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ಮಂಜೂರು ಮಾಡಿದ್ದೇವೆ ಎಂದು ತಿಳಿಸಿದರು.

“ಕರ್ನಾಟಕ ವಿಧಾನಮಂಡಲ (ಅನರ್ಹತಾ ನಿವಾರಣೆ) (ತಿದ್ದುಪಡಿ) ವಿಧೇಯಕ, 2024ಕ್ಕೆ ಅನುಮೋದನೆ ನೀಡಿದ್ದೇವೆ. ತಾಂತ್ರಿಕ ಸಮಸ್ಯೆ ಆಗಬಾರದು ಅಂತ ಸುಗ್ರೀವಾಜ್ಞೆ ಮೂಲಕ ಜಾರಿ ಮಾಡಲಾಗುತ್ತದೆ. ಇನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ “ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ, 2024”ಕ್ಕೆ ಅನುಮೋದನೆ ನೀಡಲಾಗಿದ್ದು, ನಾಮಫಲಕದಲ್ಲಿ ಶೇ. 60 ಕನ್ನಡ, ಶೇ.40 ಇತರ ಭಾಷೆ ಹಾಕಲು ಕಾಯ್ದೆ ತಿದ್ದುಪಡಿಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ತಿಳಿಸಿದರು.

ಕರ್ನಾಟಕ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ವಿಧೇಯಕ, 2023, ಕರ್ನಾಟಕ ಸಿವಿಲ್ ನ್ಯಾಯಾಲಯಗಳ (ತಿದ್ದುಪಡಿ) ವಿಧೇಯಕ, 2023, ಹಾಗೂ ಕರ್ನಾಟಕ ಉಚ್ಚ ನ್ಯಾಯಾಲಯ (ತಿದ್ದುಪಡಿ) ವಿಧೇಯಕ, 2023ಕ್ಕೆ ಘಟನೋತ್ತರ ಅನುಮೋದನೆ ನೀಡಿದ್ದೇವೆ ಎಂದರು.

ಇದನ್ನೂ ಓದಿ | ಮೊಗಸಾಲೆ ಅಂಕಣ: ಮಗ್ಗುಲ ಮುಳ್ಳಾದ ಯತ್ನಾಳ್, ಹರಿಪ್ರಸಾದ್; ಪರಿಹಾರ ಕಾಣದ ಬಿಜೆಪಿ, ಕಾಂಗ್ರೆಸ್!

ಟೆಂಡರ್‌ನಲ್ಲಿ ಮೀಸಲಾತಿ ಕಾನೂನುಗೆ ಅನುಮೋದನೆ ನೀಡಿದ್ದೇವೆ. ಬಿಬಿಎಂಪಿ ವ್ಯಾಪ್ತಿಯಲ್ಲಿ
800.00 ಕೋಟಿಗಳ ಅ‌ನುದಾನದಲ್ಲಿ 43 ವೈಟ್ ಟಾಪಿಂಗ್ ಕಾಮಗಾರಿಗಳನ್ನು ಕೈಗೊಳ್ಳುವ ಕ್ರಿಯಾ ಯೋಜನೆಗೆ ಅನುಮೋದನೆ ನೀಡಿದ್ದೇವೆ ಎಂದು ತಿಳಿಸಿದರು.

ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

  1. 1. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಡಳಿತ ವೈದ್ಯಾಧಿಕಾರಿ ಡಾ. ಬಿ.ಎಂ. ಯೋಗೇಶ್ ಗೌಡ ಮೇಲೆ ಲೋಕಾಯುಕ್ತ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಗಳು ಸಾಬೀತಾಗಿರುವ ಹಿನ್ನೆಲೆಯಲ್ಲಿ ಸರ್ಕಾರಿ ಸೇವೆಯಿಂದ ಕಡ್ಡಾಯ ನಿವೃತ್ತಿಗೊಳಿಸಿ ಹೊರಡಿಸಿರುವ ಆದೇಶಕ್ಕೆ ಘಟನೋತ್ತರ ಅನುಮೋದನೆ ನೀಡಲು ತೀರ್ಮಾನ.
Exit mobile version