Site icon Vistara News

Cabinet Meeting: ಸಮವಸ್ತ್ರ ಪೂರೈಕೆಗೆ ತಡೆಹಿಡಿದಿದ್ದ ಹಣ ಬಿಡುಗಡೆಗೆ ಸಚಿವ ಸಂಪುಟ ಸಮ್ಮತಿ

Siddaramaiah

ಬೆಂಗಳೂರು: 2022-23ನೇ ಸಾಲಿಗೆ ಗುಣಮಟ್ಟ ವಿಚಲನೆ ಹೊಂದಿದ ಒಂದನೇ ಜೊತೆ ಸಮವಸ್ತ್ರ ಪೂರೈಸಿರುವುದಕ್ಕೆ ವಿಳಂಬ ದಂಡ ಮತ್ತು ವಿಚಲನೆಗೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆಯಿಂದ ತಡೆಹಿಡಿಯಲಾದ ಮೊತ್ತವನ್ನು ಕೆ.ಎಸ್.ಟಿ.ಐ.ಡಿ.ಸಿ. ಸಂಸ್ಥೆಗೆ ಬಿಡುಗಡೆ ಮಾಡಲು ಸಚಿವ ಸಂಪುಟ (Cabinet Meeting) ಸಮ್ಮತಿ ಸೂಚಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ಗುರುವಾರ ನಡೆಯಿತು. ಇನ್ನು 2024ನೇ ಸಾಲಿಗೆ ಸಾರ್ವತ್ರಿಕ ರಜೆ ಹಾಗೂ ಪರಿಮಿತ ರಜೆಗಳನ್ನು ಘೋಷಿಸಸಲು ತೀರ್ಮಾನ ಮಾಡಲಾಗಿದ್ದು, ರಾಜ್ಯ ಸಿವಿಲ್ ಸೇವೆಗಳಲ್ಲಿನ ಹುದ್ದೆಗಳಿಗೆ ನೀಡುವ ಮುಂಬಡ್ತಿಯಲ್ಲಿ ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿ ಮಾಡುವ ಹೆಚ್ಚುವರಿ ಬಿಂದುಗಳನ್ನು ಗುರುತಿಸಲು ಮತ್ತು ಎದ್ದುಕಾಣುವ ವಿಶೇಷಚೇತನರ ಮೀಸಲಾತಿಯನ್ನೊಳಗೊಂಡ ಒಂದೇ ರೋಸ್ಟರನ್ನು ಸಿದ್ಧಪಡಿಸಲು ಒಪ್ಪಿಗೆ ನೀಡಲಾಗಿದೆ.

ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ 2731 ಆರೋಗ್ಯ ಸಂಸ್ಥೆಗಳಲ್ಲಿ ಜೈವಿಕ ವೈದ್ಯಕೀಯ ಸಲಕರಣೆಗಳ ಮೇಲ್ವಿಚಾರಣೆ ಮತ್ತು ನಿರ್ವಹಣೆಯನ್ನು ವಾರ್ಷಿಕ ವೆಚ್ಚ ರೂ. 32.74 ಕೋಟಿಗಳ ಅಂದಾಜು ವೆಚ್ಚದಲ್ಲಿ 3 ವರ್ಷಗಳ ಅವಧಿಗೆ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ನಿರ್ವಹಣೆ ಮಾಡಲು ಅನುಮೋದನೆ ನೀಡಲು ಒಪ್ಪಿಗೆ.

ಇದನ್ನೂ ಓದಿ | DK Shivakumar : ಡಿ.ಕೆ. ಶಿವಕುಮಾರ್‌ ಮೇಲಿನ ಸಿಬಿಐ ಕೇಸ್‌ ವಾಪಸ್‌; ಕ್ಯಾಬಿನೆಟ್‌ ಮಹತ್ವದ ನಿರ್ಣಯ

ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ, ಹುಬ್ಬಳ್ಳಿಯ ಆವರಣದಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳ ವಸತಿ ನಿಲಯ ಕಟ್ಟಡ ಕಾಮಗಾರಿಗೆ ರೂ.16.18 ಕೋಟಿಗಳ ಮತ್ತು ಸ್ನಾತಕ ವಿದ್ಯಾರ್ಥಿನಿಯರ ವಸತಿ ನಿಲಯ ಕಟ್ಟಡ ಕಾಮಗಾರಿಗೆ ರೂ. 11.00 ಕೋಟಿಗಳ ಪರಿಷ್ಕೃತ ಅಂದಾಜು ವೆಚ್ಚಕ್ಕೆ ಆಡಳಿತಾತ್ಮಕ ಅನುಮೋದನೆ.

ಪಾರ್ಶ್ವವಾಯು ಮತ್ತು ತಲೆಗೆ ತೀವ್ರ ಪೆಟ್ಟಾದ ರೋಗಿಗಳ ಆರೈಕೆಗಾಗಿ ಕರ್ನಾಟಕದಲ್ಲಿ “ಹಬ್ ಮತ್ತು ಸ್ಪೋಕ್ ಮಾದರಿಯನ್ನು ಎರಡು ಹಂತಗಳಲ್ಲಿ ರೂ. 51.44 ಕೋಟಿಗಳಲ್ಲಿ ಅನುಷ್ಠಾನಗೊಳಿಸಲು, ಮೊದಲನೇ ಹಂತದಲ್ಲಿ ನಿಮ್ಹಾನ್ಸ್, ಬೆಂಗಳೂರನ್ನು ‘ಹಬ್’ ಮತ್ತು ಕಿಮ್ಸ್ ಹುಬ್ಬಳ್ಳಿಯನ್ನು ‘ಸ್ಪೋಕ್’ ಆಗಿ ಕಾರ್ಯನಿರ್ವಹಿಸಲು ಒಟ್ಟು 11.26 ಕೋಟಿಗಳ ವೆಚ್ಚದಲ್ಲಿ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ.

ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ವೈದ್ಯಕೀಯ ಸಂಸ್ಥೆಗಳಿಗೆ ಕೋವಿಡ್ ಸಂದರ್ಭದಲ್ಲಿ ಮೆ| “ಪ್ರೋಡೆಂಟ್ ಮ್ಯಾನೇಜ್‌ಮೆಂಟ್ ಸಲ್ಯೂಷನ್ಸ್, ಮುಂಬೈ ಮತ್ತು ಲಾಜ್ ಎಕ್ಸ್‌ಪೋರ್ಟ್ ಲಿಮಿಟೆಡ್, ಬೆಂಗಳೂರು ಇವರು ಪಿಪಿಇ ಕಿಟ್‌ಗಳನ್ನು ಸರಬರಾಜು ಮಾಡಿರುವ ಬಗ್ಗೆ ಬಿಲ್ ಪಾವತಿ ಸಂಬಂಧ ಉಚ್ಛ ನ್ಯಾಯಾಲಯ 15.09.2023 ರಂದು ನೀಡಿರುವ ತೀರ್ಪಿನಂತೆ ರೂ. 38.26 ಕೋಟಿಗಳ ಮೊತ್ತವನ್ನು ಉಚ್ಚ ನ್ಯಾಯಾಲಯದಲ್ಲಿ ಠೇವಣಿ ಇಡಲು ಆ ತೀರ್ಪಿನ ವಿರುದ್ಧ ಮೇಲ್ಮನವಿ ಮಾಡಬಹುದು ಎಂಬ ಕಾರಣಕ್ಕೆ ಕಾನೂನು ಇಲಾಖೆಗೆ ಶಿಫರಾಸು.

ಶ್ರೀ ಶಿರಡಿ ಸಾಯಿ ಸದ್ಭಕ್ತ ಮಂಡಳಿ, ಹುಬ್ಬಳ್ಳಿ ಇವರಿಗೆ ಸಾಯಿ ಮಂದಿರಕ್ಕಾಗಿ ಲೀಸ್ ಆಧಾರದ ಮೇಲೆ ನೀಡಲಾಗಿದ್ದ ಹುಬ್ಬಳ್ಳಿ ವಿಭಾಗದ ಹಳೇ ಕೋರ್ಟ್ ಹತ್ತಿರ ಇರುವ ಹುಬ್ಬಳ್ಳಿ ಶಹರದ ಸಿ.ಟಿ.ಎಸ್. ನಂ. 498ರಲಿನ ಲೋಕೋಪಯೋಗಿ ಇಲಾಖೆಯ ಜಾಗವನ್ನು 100/108 ಜಾಗವನ್ನು 5.02.2023 ಪೂರ್ವಾನ್ವಯವಾಗುವಂತೆ ಮುಂದಿನ 30 ವರ್ಷಗಳ ಅವಧಿಗೆ ಲೀಸ್ ಅವಧಿಯನ್ನು ವಿಸ್ತರಿಸಲು ಸಮ್ಮತಿ.

2023-24ರ ಶೈಕ್ಷಣಿಕ ವರ್ಷದಲ್ಲಿ 17 ಜಿಲ್ಲೆಗಳ 93 ಮಹತ್ವಾಕಾಂಕ್ಷೆಯ ತಾಲೂಕುಗಳಲ್ಲಿನ 24,347 ಶಾಲೆಗಳಿಗೆ ರೂ. 20 ಕೋಟಿಗಳ ವೆಚ್ಚದಲ್ಲಿ ಪುಸ್ತಕ ಮತ್ತು ನಿಯತಕಾಲಿಕೆಗಳನ್ನು ಖರೀದಿಸಲು ಅನುಮೋದನೆ.

ಕಸ್ತೂರಬಾ ಗಾಂಧಿ ಬಾಲಕಿಯರ ಹಾಸ್ಟೆಲ್‌ಗಳಲ್ಲಿ ಡಾರ್ಮಿಟರಿ ನಿರ್ಮಾಣ, ವಸತಿ ಶಾಲೆಗಳ ದುರಸ್ತಿ ಮತ್ತು ಸ್ಮಾರ್ಟ್ ಕ್ಲಾಸ್ ರೂಂ ಅಭಿವೃದ್ಧಿ ಹಾಗೂ ವಸತಿ ಶಾಲೆ ಮತ್ತು ಹಾಸ್ಟೆಲ್‌ಗಳಿಗೆ ಬಂಕ್ವೆಟ್ ಕಾಟ್‌ಗಳ ಖರೀದಿ ಒಟ್ಟು ರೂ. 50 ಕೋಟಿಗಳ ಮೊತ್ತದ ಯೋಜನೆಗೆ ಅನುಮೋದನೆ.

ಬಾಗಲಕೋಟೆ ಜಿಲ್ಲೆಯ ಬಾದಾಮಿ ಮತ್ತು ಕೆರೂರು ಪಟ್ಟಣಗಳು ಹಾಗೂ ಮಾರ್ಗ ಮಧ್ಯದ 18 ಗ್ರಾಮಗಳಿಗೆ ಆಲಮಟ್ಟಿ ಜಲಾಶಯದ ಹಿನ್ನೀರು ಮೂಲದಿಂದ ಕುಡಿಯುವ ನೀರು ಸರಬರಾಜು ಮಾಡುವ ಯೋಜನೆಯ ರೂ. 250.36 ಕೋಟಿಗಳ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ.

ಎನ್‌ಜಿಟಿ ಪರಿಸರ ಪರಿಹಾರ ನಿಧಿಯಡಿ ತ್ವರಿತವಾಗಿ ಎರಡನೇ ಹಂತದ 53 ಆದ್ಯತೆಯ ನಗರ ಸ್ಥಳೀಯ ಸಂಸ್ಥೆಗಳಿಗೆ ಒಳಚರಂಡಿ ಮಲ್ದರ್ಜೆಗೇರಿಸುವ ಕಾಮಗಾರಿಗೆ ಅನುಮೋದನೆ. ಮಂಗಳೂರು, ಶಿವಮೊಗ್ಗ, ಹುಬ್ಬಳ್ಳಿ, ದಾರವಾಡ, ಬೆಳಗಾವಿ ವಿಜಯಪುರ, ದಾವಣಗೆರೆ ಉಡುಪಿ ಗಂಗಾವತಿ ಮಂಡ್ಯ ರಾಯಚೂರು, ಬೀದರ್ ಕೋಲಾರ, ಚಿಕ್ಕಮಗಳೂರು ಹೊಸಪೇಟೆ, ಗದಗ್ ಬೆಟ್ಗೇರಿ, ರಾಣೆ ಬೆನ್ನೂರುನಲ್ಲಿ 15-80 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಅನುಮೋದನೆ.

Exit mobile version