Site icon Vistara News

Cabinet Decision : ತಮ್ಮದೇ ಮೇಲಿನ ಕೇಸ್‌ಗಳನ್ನು ಹಿಂಪಡೆಯಲು ಮುಂದಾದ ರಾಜ್ಯ ಸಂಪುಟ ಸದಸ್ಯರು?

DK Shivakumar in Mekedatu padayatre

ಬೆಂಗಳೂರು: ಕನ್ನಡಪರ ಸಂಘಟನೆಗಳು ಸೇರಿದಂತೆ ರೈತರು ಹಾಗೂ ಹೋರಾಟಗಾರರ ಮೇಲೆ ಹಾಕಿರುವ ಪ್ರಕರಣಗಳನ್ನು ಹಿಂಪಡೆಯುವ ಸಲುವಾಗಿ ಸಂಪುಟ ಉಪಸಮಿತಿ ರಚನೆಗೆ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯ ಸಂಪುಟ ಸಭೆ ತೀರ್ಮಾನ ಮಾಡಿದೆ. ಆದರೆ ವಿವಿಧ ಸಂಘಟನೆಗಳಿಗಿಂತಲೂ ಮುಖ್ಯವಾಗಿ ಕೋವಿಡ್‌ ಸಮಯದಲ್ಲಿ ಸ್ವತಃ ತಾವು ಕಾನೂನು ಉಲ್ಲಂಘಿಸಿ ದಾಖಲಾಗಿರುವ ಪ್ರಕರಣಗಳನ್ನು ಹಿಂಪಡೆಯಲು ಸಂಪುಟ ಈ ನಿರ್ಧಾರ (Cabinet Decision) ಮಾಡಿದೆ ಎನ್ನಲಾಗುತ್ತಿದೆ.

ಕೋವಿಡ್‌ 19 ಸಂದರ್ಭದಲ್ಲಿ ಲಾಕ್‌ಡೌನ್‌ ವಿಧಿಸಲಾಗಿತ್ತು. ಲಾಕ್‌ಡೌನ್‌ ತೆರವಿನ ನಂತವೂ ಪ್ರಕೃತಿ ವಿಕೋಪ ಕಾಯ್ದೆ, ಹಾಗೂ ಸಿಆರ್‌ಪಿಸಿ ಅಡಿಯಲ್ಲಿ, ಹೆಚ್ಚಿನ ಜನರು ಒಂದೆಡೆ ಸೇರುವುದನ್ನು ನಿರ್ಬಂಧಿಸಲಾಗಿತ್ತು. ಈ ಸಮಯದಲ್ಲಿ, ಇದೀಗ ಡಿಸಿಎಂ ಆಗಿರುವ ಡಿ.ಕೆ. ಶಿವಕುಮಾರ್‌ ಅವರ ನೇತೃತ್ವದಲ್ಲಿ ಮೇಕೆದಾಟು ಪಾದಯಾತ್ರೆ ನಡೆಸಲಾಗಿತ್ತು.

ಮೇಕೆದಾಟುವಿನಿಂದ ಬೆಂಗಳೂರಿನವರೆಗೆ ನಡೆದ ಪಾದಯಾತ್ರೆಯಲ್ಲಿ, ಈಗಿನ ಸಿಎಂ ಸಿದ್ದರಾಮಯ್ಯ ಸೇರಿ ಈಗ ಸಂಪುಟದಲ್ಲಿ ಸಚಿವರಾಗಿರುವ ಬಹುತೇಕರು ಭಾಗವಹಿಸಿದ್ದರು. ಕಾಯ್ದೆ ಉಲ್ಲಂಘನೆಗೆ ಆಗಿನ ಬಿಜೆಪಿ ಸರ್ಕಾರ, ಭಾಗವಹಿಸಿದವರ ವಿರುದ್ಧ ಪ್ರಕರಣ ದಾಖಲಿಸಿದೆ.

ಸಿದ್ದರಾಮಯ್ಯ, ಡಿ,ಕೆ, ಶಿವಕುಮಾರ್, ಡಾ.ಜಿ. ಪರಮೇಶ್ವರ್, ಎಂ.ಬಿ. ಪಾಟೀಲ್, ಎಚ್. ಕೆ. ಪಾಟೀಲ್, ಸಲೀಂ ಅಹಮದ್, ಲಕ್ಷ್ಮೀ ಹೆಬ್ಬಾಳ್ಕರ್, ಜಮೀರ್ ಅಹಮದ್ ಖಾನ್, ಕೆ.ಜೆ. ಜಾರ್ಜ್, ರಾಮಲಿಂಗಾರೆಡ್ಡಿ, ಸತೀಶ್ ಜಾರಕಿಹೊಳಿ, ಬೈರತಿ ಸುರೇಶ್, ಕೃಷ್ಣಬೈರೇಗೌಡ, ಪ್ರಿಯಾಂಕ್‌ ಖರ್ಗೆ ಅವರ ವಿರುದ್ಧ ಪ್ರಕರಣಗಳಿದ್ದು, ಹಲವರಿಗೆ ನ್ಯಾಯಾಲಯ ನೋಟೀಸ್ ಜಾರಿ ಮಾಡಿದೆ.

ಇದನ್ನೂ ಓದಿ: ICMR Report: ಕೋವಿಡ್ ವ್ಯಾಕ್ಸಿನ್‌ಗೂ ಹಾರ್ಟ್ ಅಟ್ಯಾಕ್‌ಗೂ ಇದ್ಯಾ ನಂಟು? ಐಸಿಎಂಆರ್ ಅಧ್ಯಯನ ವರದಿಯಲ್ಲಿ ಏನಿದೆ?

ನ್ಯಾಯಾಲಯದ ಚಾಟಿಯಿಂದ ತಪ್ಪಿಸಿಕೊಳ್ಳುವ ಸಲುವಾಗಿ ಸಂಪುಟ ಸದಸ್ಯರೆಲ್ಲರೂ ಸೇರಿ ಇದೀಗ ಉಪಸಮಿತಿ ರಚನೆಗೆ ಮುಂದಾಗಿದ್ದಾರೆ. ತಮ್ಮ ಪ್ರಕರಣಗಳ ಜತೆಗೆ ಕೆಲವು ಕನ್ನಡಪರ ಸಂಘಟನೆಗಳು ಹಾಗೂ ರೈತಸಂಘದ ಸದಸ್ಯರ ಮೇಲಿನ ಪ್ರಕರಣಗಳನ್ನೂ ಸೇರಿಸಿ ತಮ್ಮ ಮೇಲಿನ ತೂಗುಗತ್ತಿಯಿಂದ ತಪ್ಪಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎನ್ನಲಾಗಿದೆ.

Exit mobile version