ಬೆಂಗಳೂರು: ರಾಷ್ಟ್ರೀಯ ಪಿಂಚಣಿ ಯೋಜನೆ (NPS News) ರದ್ದತಿ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವ ಸಂಪುಟ ಸದಸ್ಯರೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘದ ಪದಾಧಿಕಾರಿಗಳು ಶನಿವಾರ ಭೇಟಿಯಾದ ವೇಳೆ ಮಾತನಾಡಿದ ಅವರು, ಎನ್.ಪಿ.ಎಸ್ ರದ್ದತಿಯ ಸಾಧ್ಯಾಸಾಧ್ಯತೆಗಳ ಕುರಿತು ಚರ್ಚಿಸಿ ತೀರ್ಮಾನಕ್ಕೆ ಬರಲಾಗುವುದು. ಇದನ್ನು ರದ್ದು ಪಡಿಸಿದ ಇತರ ರಾಜ್ಯಗಳಲ್ಲಿ ಅನುಸರಿಸಿರುವ ಕ್ರಮಗಳ ಕುರಿತೂ ಪರಿಶೀಲಿಸಲಾಗುವುದು. ಆರ್ಥಿಕ ಇಲಾಖೆ ಕೂಡ ಈ ಬಗ್ಗೆ ಕೂಲಂಕುಷವಾಗಿ ಪರಿಶೀಲಿಸಲಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ | DK Shivakumar: ತೆರಿಗೆ ಪಾವತಿಗೆ ಹೆಚ್ಚಿನ ಕಾಲಾವಕಾಶ, ಸರಳ ವಿಧಾನ: ಡಿಕೆಶಿ
ಮುಖ್ಯಮಂತ್ರಿಗಳ ಹಾಗೂ ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ಡಾ. ತ್ರಿಲೋಕ್ ಚಂದ್ರ , ಎನ್‌ಪಿಎಸ್ ನೌಕರರ ಸಂಘದ ಅಧ್ಯಕ್ಷ ಶಾಂತಾರಾಂ ತೇಜ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ನಾಗೇಶ್, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಲಿ ಹಾಗೂ ವಿವಿಧ ಸರ್ಕಾರಿ ಸಂಘಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ | ಶಾಂತಿ, ನಿರ್ಭೀತ ವಾತಾವರಣ ಸೃಷ್ಟಿಸಿ; ಬೆಂಗಳೂರು ಪೊಲೀಸರಿಗೆ ಸಿಎಂ ಸೂಚನೆ
ರಾಜ್ಯದಲ್ಲಿ ಹೊಸ ಪಿಂಚಣಿ ವ್ಯವಸ್ಥೆಯನ್ನು (ಎನ್‌ಪಿಎಸ್) ರದ್ದು ಮಾಡಿ ಹಳೇ ಪಿಂಚಣಿ ಯೋಜನೆಯನ್ನೇ (Old Pension Scheme-OPS) ಮರು ಜಾರಿ ಮಾಡಬೇಕು ಎಂದು ಹಲವು ವರ್ಷಗಳಿಂದ ಸರ್ಕಾರಿ ನೌಕರರು ಒತ್ತಾಯಿಸುತ್ತಲೇ ಬಂದಿದ್ದಾರೆ. ಇದೀಗ ಮತ್ತೊಮ್ಮೆ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಎನ್‌ಪಿಎಸ್ ರದ್ದು ಪಡಿಸಲು ಮನವಿ ಮಾಡಲಾಗಿದೆ.