Can Central Leaders Make BJP Win In Karnataka ElectionKarnataka Election: 'ರಾಜ್ಯʼದಲ್ಲಿ ಬೀಡು ಬಿಟ್ಟ 'ಕೇಂದ್ರ' ಸಂಪುಟ; ಇವರಿಂದ ಬಿಜೆಪಿ ಅಭ್ಯರ್ಥಿಗಳ ಜಯ ಎಷ್ಟು ದಿಟ? - Vistara News

ಕರ್ನಾಟಕ

Karnataka Election: ‘ರಾಜ್ಯʼದಲ್ಲಿ ಬೀಡು ಬಿಟ್ಟ ‘ಕೇಂದ್ರ’ ಸಂಪುಟ; ಇವರಿಂದ ಬಿಜೆಪಿ ಅಭ್ಯರ್ಥಿಗಳ ಜಯ ಎಷ್ಟು ದಿಟ?

Karnataka Election: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕೇಂದ್ರ ನಾಯಕರ ಪ್ರಚಾರದ ಅಬ್ಬರವೇ ಜೋರಾಗಿದೆ. ಹಾಗಾಗಿ, ಇದೇನು ರಾಜ್ಯ ವಿಧಾನಸಭೆ ಚುನಾವಣೆಯೋ, ಲೋಕಸಭೆ ಚುನಾವಣೆಯೋ ಎಂಬ ಗೊಂದಲ ಬಿಜೆಪಿಯ ಸ್ಥಳೀಯ ನಾಯಕರು ಹಾಗೂ ಮತದಾರರನ್ನು ಕಾಡುತ್ತಿದೆ.

VISTARANEWS.COM


on

Can Central Leaders Make BJP Win In Karnataka Election
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನರೇಂದ್ರ ಮೋದಿ, ಅಮಿತ್‌ ಶಾ ಅವರು ಇರುವುದೇ ಹಾಗೆ. ದೇಶದಲ್ಲಿ ಯಾವುದೇ ಭಾಗದಲ್ಲಿ ಚುನಾವಣೆ ನಡೆದರೂ ಅವರಿಗೆ ಹಬ್ಬ. ಎಲ್ಲಿಯೇ ಚುನಾವಣೆ (Karnataka Election) ನಡೆದರೂ ಮೋದಿ, ಅಮಿತ್‌ ಶಾ ಫೀಲ್ಡಿಗೆ ಇಳಿಯುತ್ತಾರೆ. ಅಬ್ಬರದ ಪ್ರಚಾರ, ರೋಡ್‌ ಶೋ ಮೂಲಕ ಮತಗಳನ್ನು ಸೆಳೆಯುತ್ತಾರೆ. ಆದರೆ, ಈ ಬಾರಿ ಕರ್ನಾಟಕದಲ್ಲಿ ಮೋದಿ, ಶಾ, ಯೋಗಿ ಜತೆಗೆ ಕೇಂದ್ರ ಸಂಪುಟದ ಸಚಿವರೇ ರಾಜ್ಯದಲ್ಲಿ ಬೀಡು ಬಿಟ್ಟಿದ್ದಾರೆ. ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಕೂಡ ಕರ್ನಾಟಕದಲ್ಲಿ ಪ್ರಚಾರ ಆರಂಭಿಸಿದ್ದಾರೆ.

ಒಂದು ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಕೇಂದ್ರ ಸರ್ಕಾರದ ಪ್ರಮುಖ ಸಚಿವರೇ ರಾಜ್ಯದಲ್ಲಿ ಬೀಡುಬಿಟ್ಟಿದ್ದರೂ, ಇವರು ಅಭ್ಯರ್ಥಿಗಳನ್ನು ಗೆಲ್ಲಿಸುವ ವರ್ಚಸ್ಸು ಹೊಂದಿದ್ದಾರಾ ಎಂಬ ಪ್ರಶ್ನೆ ಎದುರಾಗಿದೆ. ಮಂಡ್ಯದಲ್ಲಿ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಪ್ರಚಾರ ಕೈಗೊಂಡಿದ್ದಾರೆ. ಉಡುಪಿ, ಮಂಗಳೂರು, ಕೊಡಗಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅಬ್ಬರದ ಪ್ರಚಾರದಲ್ಲಿ ತೊಡಗಿದ್ದಾರೆ. ಕೊಪ್ಪಳದಲ್ಲಿ ಬಿಜೆಪಿ ಅಭ್ಯರ್ಥಿ ಪರ ಸ್ಮೃತಿ ಇರಾನಿ ಮತಯಾಚಿಸುತ್ತಿದ್ದಾರೆ. ಗದಗದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಕೂಡ ಪ್ರಚಾರ ಕೈಗೊಳ್ಳುತ್ತಿದ್ದಾರೆ.

ಅಭ್ಯರ್ಥಿಗಳನ್ನು ಗೆಲ್ಲಿಸುವ ಚಾರ್ಮ್‌ ಇದೆಯಾ?

ರಾಜನಾಥ್‌ ಸಿಂಗ್‌, ಶಿವರಾಜ್‌ ಸಿಂಗ್‌ ಚೌಹಾಣ್‌, ಸ್ಮೃತಿ ಇರಾನಿ ಅವರು ಉನ್ನತ ಹುದ್ದೆಯಲ್ಲಿದ್ದರೂ, ಅವರು ವಾಚಾಳಿಗಳಲ್ಲ. ಅಬ್ಬರದ ಭಾಷಣ ಮಾಡಿ, ಜನರನ್ನು ಹಿಡಿದಿಡುವಂತಹ ವಾಕ್ಚಾತುರ್ಯವೂ ಇಲ್ಲ. ಹಾಗೆಯೇ, ಶಿವರಾಜ್‌ ಸಿಂಗ್‌ ಚೌಹಾಣ್‌ ಅವರಂತಹವರ ಬಗ್ಗೆ ಸ್ಥಳೀಯರಿಗೆ ಅಷ್ಟೇನೂ ಗೊತ್ತಿರುವುದಿಲ್ಲ. ಕೇಂದ್ರದ ನಾಯಕರಿಗೆ ವಿಧಾನಸಭೆ ಕ್ಷೇತ್ರಗಳ ಸಮಸ್ಯೆಗಳ ಬಗ್ಗೆ ಗೊತ್ತಿರುವುದಿಲ್ಲ. ಹೀಗಿರುವಾಗ, ಕೇಂದ್ರ ಸಂಪುಟ ಸಚಿವರನ್ನು, ಬೇರೆ ರಾಜ್ಯದ ಮುಖ್ಯಮಂತ್ರಿಯನ್ನು ಬಿಜೆಪಿಯು ಸ್ಟಾರ್‌ ಪ್ರಚಾರಕರನ್ನಾಗಿ ಮಾಡಿರುವುದು ಅಷ್ಟೇನೂ ಒಳಿತಲ್ಲ‌ ಎಂಬ ಭಾವನೆ ಬಿಜೆಪಿಯ ಸ್ಥಳೀಯ ನಾಯಕರಲ್ಲಿ ಮೂಡಿದೆ ಎಂದು ತಿಳಿದುಬಂದಿದೆ.

ಮಡಿಕೇರಿಯಲ್ಲಿ ಅಮಿತ್‌ ಶಾ ರೋಡ್‌ ಶೋ

ಹಿಂದಿಯಲ್ಲೇ ಭಾಷಣ, ಗೊಂದಲದ ರಿಂಗಣ

ಕೇಂದ್ರ ನಾಯಕರಿಗೆ ಕನ್ನಡ ಬರುವುದಿಲ್ಲ. ಮಂಡ್ಯ, ಗದಗ, ಮೈಸೂರು, ಮಂಗಳೂರು ಸೇರಿ ಹಲವೆಡೆ ಜನರಿಗೆ ಬಿಡಿ, ಅಭ್ಯರ್ಥಿಗಳಿಗೇ ಹಿಂದಿ ಮಾತನಾಡಲು ಬರುವುದಿಲ್ಲ. ಹೀಗಿರುವಾಗ, ಕೇಂದ್ರದ ನಾಯಕರು ಬಂದು, ಹಿಂದಿಯಲ್ಲಿ ಭಾಷಣ ಮಾಡಿ ಹೋದರೆ, ಅವರ ಮಾತು, ಆಶಯಗಳು ಜನರಿಗೆ ತಲುಪುವುದು ಕಷ್ಟ ಎಂಬ ಮಾತುಗಳು ಕೂಡ ಕೇಳಿಬರುತ್ತಿವೆ.

ಕಲಘಟಗಿಯಲ್ಲಿ ನಡ್ಡಾ ಪ್ರಚಾರ

ಇದನ್ನೂ ಓದಿ: Modi in Karnataka : ನೀವು ಮತ ಹಾಕುವುದು ಸರ್ಕಾರ ರಚನೆಗಲ್ಲ, ರಾಜ್ಯವನ್ನು ದೇಶದಲ್ಲೇ ನಂ. 1 ಮಾಡಲು; ಮೋದಿ ಹೊಸ ವ್ಯಾಖ್ಯಾನ

ಟಿಕೆಟ್‌ ಹಂಚಿಕೆ, ಸಂಪುಟ ರಚನೆ, ವಿಸ್ತರಣೆ ಸೇರಿ ಯಾವುದೇ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾದರೂ ರಾಜ್ಯ ಬಿಜೆಪಿ ನಾಯಕರು ಹೈಕಮಾಂಡ್‌ ನಾಯಕರ ಆಣತಿ, ಮರ್ಜಿಗೆ ಕಾಯಬೇಕು. ಈಗ ರಾಜ್ಯ ವಿಧಾನಸಭೆ ಚುನಾವಣೆಯ ಪ್ರಚಾರವೂ ಕೇಂದ್ರ ನಾಯಕರ ಮೂಗಿನ ನೇರಕ್ಕೇ ನಡೆಯುತ್ತಿರುವುದು ಸ್ಥಳೀಯ ನಾಯಕರಲ್ಲಿ ಅಸಮಾಧಾನ ಮೂಡಿಸಿದೆ ಎನ್ನಲಾಗಿದೆ. ಇದರಿಂದ ಸ್ಥಳೀಯ ವಿಷಯಗಳನ್ನು ಜನರಿಗೆ ಮನದಟ್ಟು ಮಾಡುವಲ್ಲಿಯೂ ಹಿನ್ನಡೆಯಾಗುತ್ತಿದೆ ಎಂಬ ಆಕ್ಷೇಪವಿದೆ. ಅಷ್ಟಕ್ಕೂ, ಕೇಂದ್ರ ಸಚಿವರು, ಬೇರೆ ರಾಜ್ಯದ ಮುಖ್ಯಮಂತ್ರಿಗಳು ರಾಜ್ಯದಲ್ಲಿ ಎಷ್ಟರಮಟ್ಟಿಗೆ ಪ್ರಭಾವ ಬೀರುತ್ತಾರೆ ಎಂಬುದಕ್ಕೆ ಚುನಾವಣೆ ಫಲಿತಾಂಶದವರೆಗೆ ಕಾಯಲೇಬೇಕಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

UGCET 2024 : ಯುಜಿಸಿಇಟಿ ಆಪ್ಶನ್ ದಾಖಲಿಸಲು ಮತ್ತಷ್ಟು ದಿನ ಅವಕಾಶ

UGCET 2024 : ಯುಜಿಸಿಇಟಿ ಆಪ್ಶನ್ ದಾಖಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮತ್ತಷ್ಟು ದಿನ ಅವಕಾಶ ಕಲ್ಪಿಸಿದೆ.

VISTARANEWS.COM


on

By

UGCET 2024
Koo

ಬೆಂಗಳೂರು: ಯುಜಿಸಿಇಟಿ-24ರ ಎಂಜಿನಿಯರಿಂಗ್, ಆರ್ಕಿಟೆಕ್ಚರ್, ನ್ಯಾಚುರೋಪಥಿ- ಯೋಗ, ಪಶು ವೈದ್ಯಕೀಯ ಇತ್ಯಾದಿ ಕೋರ್ಸುಗಳ ಪ್ರವೇಶಕ್ಕೆ ಆಪ್ಶನ್ (ಇಚ್ಛೆ) ಗಳನ್ನು (UGCET 2024) ದಾಖಲಿಸಲು ಮತ್ತಷ್ಟು ದಿನ ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಕಾರ್ಯನಿರ್ವಾಹಕ ನಿರ್ದೇಶಕ ಎಚ್ ಪ್ರಸನ್ನ ತಿಳಿಸಿದ್ದಾರೆ.

ಈ ಮೊದಲು ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ಏಳು ದಿನ ಅವಕಾಶ ನೀಡಿದ್ದು ಅದು ಇವತ್ತಿಗೆ (ಜು.30) ಕೊನೆ ಆಗಬೇಕಿತ್ತು. ಅಭ್ಯರ್ಥಿಗಳ ಮನವಿ ಮೇರೆಗೆ ಮತ್ತೂ ಅವಕಾಶ ನೀಡಿದ್ದು ಅಭ್ಯರ್ಥಿಗಳು ಎಚ್ಚರಿಕೆಯಿಂದ ಇಚ್ಛೆಗಳನ್ನು ದಾಖಲು ಮಾಡಬೇಕು. ಮುಂದಿನ ಆದೇಶದ ವರೆಗೆ ಅವಕಾಶ ಕಲ್ಪಿಸಲಾಗದೆ. ಯೋಗ ಮತ್ತು ನ್ಯಾಚುರೋಪತಿ ಕೋರ್ಸುಗಳ ಸೀಟ್ ಮ್ಯಾಟ್ರಿಕ್ಸ್ ಬಂದಿದ್ದು, ಅದಕ್ಕೂ ಆಯ್ಕೆಗಳನ್ನು ದಾಖಲಿಸಲು ಈಗ ಅವಕಾಶ ನೀಡಲಾಗಿದೆ.

ಇದನ್ನೂ ಓದಿ: Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

ಪ್ರಕಟಿಸಲಾದ ಸೀಟ್ ಮ್ಯಾಟ್ರಿಕ್ಸ್‌ ಅನ್ನು ಪರಿಶೀಲಿಸಿ ಇಚ್ಚೆ / ಆಯ್ಕೆಗಳನ್ನು ದಾಖಲಿಸುವ ಸಮಯದಲ್ಲಿ ಆದ್ಯತಾ ಕ್ರಮಗಳನ್ನು ಅನುಸರಿಸಲು ಸೂಚಿಸಲಾಗಿದೆ. ಆಪ್ಶನ್‌ಗಳನ್ನು ದಾಖಲಿಸುವ ಬಗ್ಗೆ, ಸೀಟು ಹಂಚಿಕೆಯ ವಿವಿಧ ಹಂತಗಳ ಕುರಿತು ವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಯುಜಿಸಿಇಟಿ-24ರ ಸೀಟು ಹಂಚಿಕೆಯ ಮಾಹಿತಿ ಪುಸ್ತಕದಲ್ಲಿ ನೀಡಿರುವ ಸೂಚನೆಗಳನ್ನು ಓದಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.

ರಾಷ್ಟ್ರೀಯ ವೈದ್ಯಕೀಯ ಮಂಡಳಿ, ಕಾಲಕಾಲಕ್ಕೆ ಹೊರಡಿಸುವ ಸೂಚನೆಗಳು / ಅಧಿಸೂಚನೆಗಳ ಅನ್ವಯ ವೈದ್ಯಕೀಯ ಮತ್ತು ದಂತ ವೈದ್ಯಕ್ಯೀಯ ಕೋರ್ಸುಗಳಿಗೆ ಪ್ರವೇಶ ಪ್ರಕ್ರಿಯೆ ನಡೆಸಲಾಗುತ್ತದೆ.

ಚಟುವಟಿಕೆಗಳ ವಿವರ ಹೀಗಿದೆ
-ಜು.23ರಿಂದಲೇ Option Entry ಪೋರ್ಟಲ್‌ ತೆರೆಯಲಾಗಿದೆ. ಅಭ್ಯರ್ಥಿಗಳು ಆದ್ಯತಾ ಕ್ರಮದಲ್ಲಿ ಇಚ್ಛೆ/ಆಯ್ಕೆಗಳನ್ನು ದಾಖಲಿಸಬಹುದು. ಆಯ್ಕೆಗಳನ್ನು ದಾಖಲಿಸಲು 7 ದಿನಗಳ ಕಾಲಾವಕಾಶವನ್ನು ನೀಡಲಾಗಿತ್ತು. ಇದೀಗ ಮತ್ತಷ್ಟು ದಿನ ವಿಸ್ತರಣೆ ಆಗಿದೆ.

-ಇಚ್ಛೆ/ಆಯ್ಕೆಗಳನ್ನು ದಾಖಲಿಸುವುದಕ್ಕೆ ನಿಗದಿಪಡಿಸಿದ ಕೊನೆಯ ದಿನಾಂಕದ 3 ದಿನಗಳ ನಂತರ ಅಣುಕು ಸೀಟು ಹಂಚಿಕೆಯ ಫಲಿತಾಂಶವನ್ನು ಪ್ರಕಟಿಸಲಾಗುವುದು.

-ಅಣುಕು ಸೀಟು ಹಂಚಿಕೆಯ ಫಲಿತಾಂಶ ಪ್ರಕಟಣೆಯ ನಂತರ ಇಚ್ಛೆ-ಆಯ್ಕೆಗಳನ್ನು ಸೇರಿಸಲು/ಅಳಿಸಲು/ಬದಲಾಯಿಸಲು/ಮಾರ್ಪಡಿಸಲು 3 ದಿನಗಳ ಕಾಲಾವಕಾಶ ನೀಡಲಾಗುತ್ತದೆ.

ಈ ಮೇಲಿನ ಪ್ರಕ್ರಿಯೆ ಮುಕ್ತಾಯವಾದ 3 ದಿನಗಳ ನಂತರ ಮೊದಲನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ಪ್ರಕಟಿಸಲಾಗುವುದು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Hindu Girl Murder: ಯುವತಿ ಬರ್ಬರ ಕೊಲೆ ಪ್ರಕರಣ; ಹಂತಕ ದಾವೂದ್‌ ಶೇಖ್‌ ಹಿಂಬಾಲಿಸುತ್ತಿದ್ದ ಸಿಸಿಟಿವಿ ದೃಶ್ಯ ಪತ್ತೆ

Hindu Girl Murder: ಮುಂಬಯಿಯ ಉರಾನ್‌ನ ಯಶಶ್ರೀ ಶಿಂಧೆ ಕೊಲೆ ಪ್ರಕರಣದ (Murder Case) ತನಿಖೆ ನಡೆಸುತ್ತಿದ್ದ ವೇಳೆ ಸಿಸಿಟಿವಿ ದೃಶ್ಯಾವಳಿಗಳು ಪತ್ತೆಯಾಗಿದ್ದು, ಇದರಲ್ಲಿ ಯುವತಿಯನ್ನು ಆರೋಪಿ ಹಿಂಬಾಲಿಸುತ್ತಿರುವ ದೃಶ್ಯವಿದೆ. ಪ್ರಕರಣದ ಆರೋಪಿ ದಾವುದ್ ಶೇಖ್‌ನನ್ನು ಬಂಧಿಸಿದ ಕೆಲವೇ ಗಂಟೆಗಳ ಅನಂತರ ಈ ವಿಡಿಯೋ ಸಿಕ್ಕಿದೆ.

VISTARANEWS.COM


on

By

Hindu Girl Murder
Koo

ನವಿ ಮುಂಬಯಿ: ಯಶಶ್ರೀ ಶಿಂಧೆ ಕೊಲೆ ಪ್ರಕರಣಕ್ಕೆ (Hindu Girl Murder) ಮಹತ್ವದ ಸಾಕ್ಷಿಯೊಂದು ಲಭ್ಯವಾಗಿದೆ. ಆರೋಪಿ ದಾವೂದ್‌ ಶೇಖ್ (Accused Daud Shaikh) ಯುವತಿಯನ್ನು ಹಿಂಬಾಲಿಸುತ್ತಿರುವ ಸಿಸಿಟಿವಿ ದೃಶ್ಯಗಳು (CCTV footage) ಪತ್ತೆಯಾಗಿದೆ. ದಾವುದ್‌ ಶೇಖ್‌ನನ್ನು ಈಗಾಗಲೇ ಕರ್ನಾಟಕದ ಗುಲ್ಬರ್ಗದಲ್ಲಿ ನವಿ ಮುಂಬೈ ಕ್ರೈಂ ಬ್ರಾಂಚ್ (Navi Mumbai Crime Branch) ಘಟಕದ ಪೊಲೀಸರು ಬಂಧಿಸಿದ್ದಾರೆ.

ಉರಾನ್‌ನ 20 ವರ್ಷದ ಯಶಶ್ರೀ ಶಿಂಧೆ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವಾಗ ಹೊಸ ಸಿಸಿಟಿವಿ ದೃಶ್ಯಾವಳಿಗಳು ಕಂಡು ಬಂದಿವೆ. ಇದರಲ್ಲಿ ಯಶಶ್ರೀಯನ್ನು ಆರೋಪಿ ಹಿಂಬಾಲಿಸುತ್ತಿರುವ ದೃಶ್ಯವಿದೆ. ಪ್ರಕರಣದ ಆರೋಪಿ ದಾವೂದ್‌ ಶೇಖ್‌ನನ್ನು ಬಂಧಿಸಿದ ಕೆಲವೇ ಗಂಟೆಗಳ ಅನಂತರ ಈ ವಿಡಿಯೋ ಸಿಕ್ಕಿದೆ.

Murder Case
Murder Case


ಜುಲೈ 25ರ ಸಿಸಿಟಿವಿ ದೃಶ್ಯಾವಳಿಯಲ್ಲಿ ಯಶಶ್ರೀ ಶಿಂಧೆ ಮುಂಬಯಿಯ ಉರಾನ್ ಮಾರುಕಟ್ಟೆಯ ಹಿಂದಿನ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವುದನ್ನು ಕಾಣಬಹುದು. ಕೆಲವೇ ನಿಮಿಷಗಳಲ್ಲಿ ಆರೋಪಿ ದಾವುದ್‌ ಶೇಖ್ ಆಕೆಯನ್ನು ಹಿಂಬಾಲಿಸಿಕೊಂಡು ಅದೇ ಸ್ಥಳದಿಂದ ಹಾದುಹೋಗುವುದನ್ನು ಕಾಣಬಹುದು. ಜುಲೈ 25ರಿಂದ ನಾಪತ್ತೆಯಾಗಿದ್ದ ಯಶಶ್ರೀ ಮೃತ ದೇಹ ಜುಲೈ 27ರ ಮುಂಜಾನೆ ಉರಾನ್ ರೈಲು ನಿಲ್ದಾಣದ ಬಳಿಯ ಪೊದೆಗಳಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.

ಕರ್ನಾಟಕದಲ್ಲಿ ಆರೋಪಿಯ ಬಂಧನ

ಪ್ರಕರಣದ ತನಿಖೆ ನಡೆಸಿಕೊಂಡು ಕರ್ನಾಟಕಕ್ಕೆ ಬಂದ ನವಿ ಮುಂಬಯಿ ಅಪರಾಧ ವಿಭಾಗದ ಕೇಂದ್ರ ಘಟಕವು 24 ವರ್ಷದ ದಾವುದ್ ಶೇಖ್‌ನನ್ನು ಗುಲ್ಬರ್ಗ ಜಿಲ್ಲೆಯ ಶಾಹಪುರ್ ಬೆಟ್ಟದ ಪ್ರದೇಶದಿಂದ ಬಂಧಿಸಿದೆ.

2019ರಲ್ಲಿ ಯಶಶ್ರೀಯ ಬಗ್ಗೆ ತಿಳಿದಿದ್ದ ಶೇಖ್ ಆಕೆಯೊಂದಿಗೆ ಸ್ನೇಹ ನಡೆಸಲು ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಆತನ ವಿರುದ್ಧ ಸಂತ್ರಸ್ತೆಯ ತಂದೆ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆಯಡಿ ಪ್ರಕರಣ ದಾಖಲಿಸಿದ ಅನಂತರ ಬಂಧಿಸಲಾಗಿತ್ತು. ಸುಮಾರು ಆರು ತಿಂಗಳು ಜೈಲಿನಲ್ಲಿದ್ದ ಶೇಖ್ ಬಿಡುಗಡೆಯಾದ ಬಳಿಕ ತನ್ನ ತವರೂರು ಕರ್ನಾಟಕಕ್ಕೆ ಬಂದು ಡ್ರೈವರ್ ಕೆಲಸ ಮಾಡಿಕೊಂಡಿದ್ದ.

ತ್ರಿಕೋನ ಪ್ರೇಮ

ಪೊಲೀಸರ ಪ್ರಕಾರ ತ್ರಿಕೋನ ಪ್ರೇಮದಿಂದಾಗಿ ಶೇಖ್ ಮತ್ತು ಶಿಂಧೆ ನಡುವಿನ ಸಂಬಂಧವು ಹದಗೆಡಲು ಪ್ರಾರಂಭಿಸಿತು. ಸಂತ್ರಸ್ತೆ ಬೇರೊಬ್ಬ ಹುಡುಗನನ್ನು ಪ್ರೀತಿಸುತ್ತಿದ್ದಳು ಎಂದು ಹೇಳಲಾಗಿದ್ದು, ಇದು ಶೇಖ್‌ನನ್ನು ಕೆರಳಿಸಿತು ಎನ್ನಲಾಗಿದೆ. ಜುಲೈ 22ರಂದು ಕರೆ ದಾಖಲೆಗಳ ಪ್ರಕಾರ ಶೇಖ್ ಉರಾನ್‌ಗೆ ಬಂದು ಜುಲೈ 25ರಿಂದ ಫೋನ್ ಸ್ವಿಚ್ ಆಫ್ ಮಾಡಿದ್ದ ಎಂದು ಅಪರಾಧ ವಿಭಾಗದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


ಶೇಖ್ ಹತಾಶೆಗೊಂಡಿರುವುದು ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಂದ ಸ್ಪಷ್ಟವಾಗಿದೆ. ಜುಲೈ 25ರಂದು ಶಿಂಧೆಯನ್ನು ಇರಿದು ಕೊಲೆ ಮಾಡಲು ಕಾರಣವಾದ ನಿಖರವಾದ ಘಟನೆಗಳು ಇನ್ನೂ ತಿಳಿದು ಬರಬೇಕಿದೆ. ಹೆಚ್ಚಿನ ವಿಚಾರಣೆಗಾಗಿ ಆರೋಪಿಯನ್ನು ನವಿ ಮುಂಬೈಗೆ ಕರೆದುಕೊಂಡು ಹೋಗಲಾಗಿದೆ.

ಇದನ್ನೂ ಓದಿ: Brutal Murder: ಮುಂಬಯಿ ಯುವತಿಯನ್ನು ಬರ್ಬರವಾಗಿ ಕೊಂದ ಪಾತಕಿ ದಾವೂದ್ ಯಾದಗಿರಿಯಲ್ಲಿ ಆರೆಸ್ಟ್‌

ಶಿಂಧೆಯ ಹತ್ಯೆಯನ್ನು ‘ಕ್ರೂರ’ ಎಂದು ವಿವರಿಸುವ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳು ಸುಳ್ಳು ಎಂದು ವಲಯ I ರ ಉಪ ಪೊಲೀಸ್ ಆಯುಕ್ತ ವಿವೇಕ್ ಪನ್ಸಾರೆ ಸ್ಪಷ್ಟಪಡಿಸಿದ್ದಾರೆ. ಶಿಂಧೆಯವರನ್ನು ಇರಿದು ಸಾಯಿಸಲಾಗಿದೆ. ಆದರೆ ಆಕೆಯ ಖಾಸಗಿ ಅಂಗಗಳಿಗೆ ಗಾಯವಾಗಿದೆ. ಆಕೆಯ ತಲೆಯನ್ನು ಒಡೆದು ಹಾಕಲಾಗಿದೆ, ಆಕೆಯ ಸ್ತನಗಳು, ಕೈಗಳನ್ನು ಕತ್ತರಿಸಲಾಗಿದೆ ಎಂಬ ಹೇಳಿಕೆಗಳು ತಪ್ಪುದಾರಿಗೆಳೆಯುವ ಮತ್ತು ಸುಳ್ಳು ಮಾಹಿತಿ. ಕೊಲೆಯ ಹಿಂದಿನ ಉದ್ದೇಶ ತ್ರಿಕೋನ ಪ್ರೇಮವೇ ಹೊರತು ಲವ್ ಜಿಹಾದ್ ಅಲ್ಲ ಎನ್ನುವುದು ಪೊಲೀಸರ ಹೇಳಿಕೆಯಾಗಿದೆ.

Continue Reading

ಕರ್ನಾಟಕ

Kodi Mutt Swamiji: ಕೆಟ್ಟದ್ದೇ ಜಾಸ್ತಿ, ಪ್ರಕೃತಿ ವಿಕೋಪಗಳು ಮುಂದುವರಿಯುತ್ತವೆ: ಭಯಾನಕ ಭವಿಷ್ಯ ನುಡಿದ ಕೋಡಿಮಠ ಶ್ರೀ!

Kodi Mutt Swamiji: ನನ್ನ ಪ್ರಕಾರ ಅಮಾವಾಸ್ಯೆವರೆಗೆ ಮಳೆ ಇರುತ್ತದೆ, ಬಳಿಕ ಬೇರೆ ಭಾಗಕ್ಕೆ ಹೋಗುತ್ತದೆ. ಇದು ಕ್ರೋಧಿನಾಮ ಸಂವತ್ಸರ, ಕ್ರೋಧಿ ಅಂದರೆ ಸಿಟ್ಟು, ಇದರಲ್ಲಿ ಒಳ್ಳೆಯದು, ಕೆಟ್ಟದ್ದು ಇದೆ. ಆ ಪೈಕಿ ಕೆಟ್ಟದ್ದೇ ಜಾಸ್ತಿ ಇರುತ್ತದೆ ಎಂದು ಕೋಡಿಮಠ ಸ್ವಾಮೀಜಿ ತಿಳಿಸಿದ್ದಾರೆ.

VISTARANEWS.COM


on

Kodi Mutt Swamiji
Koo

ಬೆಳಗಾವಿ: ಭಾರಿ ಮಳೆಯಿಂದ ದೇಶದ ವಿವಿಧೆಡೆ ಪ್ರವಾಹ, ಭೂಕುಸಿತದಿಂದ ಅಪಾರ ಪ್ರಮಾಣದ ಸಾವು-ನೋವು ಸಂಭವಿಸುತ್ತಿದೆ. ಈ ಹಿನ್ನೆಲೆಯಲ್ಲಿ ಇದೀಗ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ಭಯಾನಕ ಭವಿಷ್ಯ ನುಡಿದಿದ್ದಾರೆ. ಕಳೆದ ಇಪ್ಪತ್ತು ದಿನಗಳ ಹಿಂದೆ ನಾನು ಧಾರವಾಡದಲ್ಲಿ ಈ ರೀತಿ ಆಗುತ್ತೆ ಅಂತ ಹೇಳಿದ್ದೆ. ಮಳೆ ಆಗುತ್ತೆ, ಗುಡ್ಡ ಉರುಳುತ್ತೆ, ಜನರು ಸಾಯುತ್ತಾರೆ, ರೋಗರುಜಿನಗಳು ಹೆಚ್ಚಾಗುತ್ತವೆ ಅಂತ ಹೇಳಿದ್ದೆ. ಇದು ಕ್ರೋಧಿನಾಮ ಸಂವತ್ಸರ, ಪ್ರಾಕೃತಿಕ ವಿಕೋಪಗಳು ಮುಂದುವರಿಯುತ್ತೆವೆ ಎಂದು ಕೋಡಿಮಠ ಸ್ವಾಮೀಜಿ (Kodi Mutt Swamiji) ತಿಳಿಸಿದ್ದಾರೆ.

ಕೇರಳದ ವಯನಾಡು ಭೂಕುಸಿತ ಬಗ್ಗೆ ನಗರದಲ್ಲಿ ಪ್ರತಿಕ್ರಿಯಿಸಿದ ಅವರು, ದೇಶದಲ್ಲಿ ಮಾತ್ರವಲ್ಲ, ಜಾಗತಿಕ ಮಟ್ಟದಲ್ಲಿ ಕೆಲವು ರಾಜ್ಯಗಳು ಮುಳುಗುತ್ತವೆ ಅಂತ ಹೇಳಿದ್ದೆ. ನನ್ನ ಪ್ರಕಾರ ಅಮಾವಾಸ್ಯೆವರೆಗೆ ಮಳೆ ಇರುತ್ತದೆ, ಬಳಿಕ ಬೇರೆ ಭಾಗಕ್ಕೆ ಹೋಗುತ್ತದೆ. ಇದು ಕ್ರೋಧಿನಾಮ ಸಂವತ್ಸರ, ಕ್ರೋಧಿ ಅಂದರೆ ಸಿಟ್ಟು, ಇದರಲ್ಲಿ ಒಳ್ಳೆಯದು, ಕೆಟ್ಟದ್ದು ಇದೆ. ಆ ಪೈಕಿ ಕೆಟ್ಟದ್ದೇ ಜಾಸ್ತಿ ಇರುತ್ತದೆ ಎಂದು ನುಡಿದಿದ್ದಾರೆ.

ಇದನ್ನೂ ಓದಿ | Shiradi Landslide: ಕೇರಳದ ಬೆನ್ನಿಗೇ ಶಿರಾಡಿ ಘಾಟಿಯಲ್ಲಿ ಭಾರೀ ಭೂಕುಸಿತ, ಮಣ್ಣಿನಡಿ ಸಿಲುಕಿದ ಕಾರುಗಳು, ಟ್ಯಾಂಕರ್‌

ಈ ವರ್ಷದಲ್ಲಿ ಪ್ರಾಕೃತಿಕ ದೋಷಗಳು ಮುಂದುವರಿಯುತ್ತವೆ. ಅಮವಾಸ್ಯೆಗೆ ಒಂದು ಭಾಗಕ್ಕೆ ಮಳೆ ನಿಲ್ಲುತ್ತೆ, ಮತ್ತೊಂದು ಭಾಗಕ್ಕೆ ಹೋಗುತ್ತೆ. ಮುಂದೆ ಅನಿಷ್ಟ ಜಾಸ್ತಿ ಇದೆ, ಕತ್ತಲು ಬೆಳಕು ಎರಡು ಇರುತ್ತದೆ, ಅದರಲ್ಲಿ ಕತ್ತಲು ಜಾಸ್ತಿ ಇರುತ್ತೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಸಿಎಂ ಬದಲಾಗಲ್ಲ

ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ಸ್ವಾಮೀಜಿ ಪ್ರತಿಕ್ರಿಯಿಸಿ, ಸದ್ಯಕ್ಕೆ ಏನು ತೊಂದರೆ ಕಾಣುತ್ತಿಲ್ಲ ಎಂದು ಹೇಳಿದರು. ಮುಂದೆ ತೊಂದರೆ ಆಗುತ್ತಾ ಎಂಬ ಪ್ರಶ್ನೆಗೆ, ‘ಬೇಡ ಸನ್ಯಾಸಿ’ ಕತೆಯನ್ನು ಸ್ವಾಮೀಜಿ ಹೇಳಿದರು.

ಏನಾದರೂ ಹೇಳಿದರೆ ಮುಂದೆ ಓಡಾಡದ ಹಾಗೆ ಮಾಡಿಬಿಟ್ಟೀರಾ? ಜನರು ಎಲ್ಲವನ್ನೂ ಮನಶಾಂತಿಯಿಂದ ತೆಗೆದುಕೊಳ್ಳುತ್ತಿಲ್ಲ, ದ್ವೇಷ ಭಾಷೆಯಿಂದ ತೆಗೆದುಕೊಳ್ಳುತ್ತಿದ್ದಾರೆ. ಆತ್ಮಸಾಕ್ಷಿಯಾಗಿ ಜನರು‌ ಮತ ನೀಡುತ್ತಿಲ್ಲ, ಎಲ್ಲಿಯವರೆಗೆ ಮತ ಮಾರಾಟ ಮಾಡಿಕೊಳ್ಳುತ್ತಾರೋ, ಅಲ್ಲಿಯವರೆಗೆ ಲಾಭ ನಷ್ಟ ಇರುತ್ತದೆ. ಹಿಂದಿನ‌ ಕಾಲದಲ್ಲಿ ಧರ್ಮದ ಅನುಮತಿ ಪಡೆದು ರಾಜಕಾರಣ ಮಾಡುತ್ತಿದ್ದರು. ಈಗ ಧರ್ಮವೂ ಇಲ್ಲ, ಗುರಿಯೂ ಇಲ್ಲ, ದುಡ್ಡು ಮಾಡೋದಷ್ಟೇ ಗುರಿ. ಹಾಗಾಗಿ ಬಹುಬೇಗ ಇವರಿಗೆ ಅಪಘಾತಗಳು ಆಗುತ್ತಿವೆ ಎಂದು ಹೇಳಿದರು.

ಇದನ್ನೂ ಓದಿ | ಕುದಿಯುತ್ತಿರುವ ಹಾಲಿನ ಮಡಿಕೆಯೊಳಗೆ ಮಗುವನ್ನು ಮುಳುಗಿಸಿದ ಅರ್ಚಕ! ಗಾಬರಿಗೊಳಿಸುವ ವಿಡಿಯೊ

ಮನುಷ್ಯ ಯಾವುದೇ ಅಪೇಕ್ಷೆ ಇಲ್ಲದೇ ಯಾವಾಗ ಮತ ಹಾಕುತ್ತಾನೋ, ಅಲ್ಲಿಯವರೆಗೆ ರಾಮರಾಜ್ಯ ಸಿಗಲ್ಲ. ಬರುವ ದಿನಗಳಲ್ಲಿ ರೋಗರುಜಿನಗಳು ಸ್ವಲ್ಪ ಜಾಸ್ತಿಯಾಗುತ್ತೆ, ಅಲ್ಪಾಯಸ್ಸು ಇರುತ್ತೆ, ಜನರು ಮಾನಸಿಕ ಸ್ಥೈರ್ಯ ಕಳೆದುಕೊಳ್ಳುತ್ತಿದ್ದಾರೆ. ಬರುವ ದಿನಗಳು ಅಷ್ಟೊಂದು ಶುಭವಾಗಿಲ್ಲ. ಒಳ್ಳೆಯದು ಇದೆ, ಆದರೆ, ಬೆಳಕು ಕಪ್ಪು ಓರೆ ಮಾಡಿದಾಗ ಕಪ್ಪೇ ಜಾಸ್ತಿ ಎಂದು ಸ್ವಾಮೀಜಿ ಹೇಳಿದರು.

Continue Reading

ಉತ್ತರ ಕನ್ನಡ

Uttara Kannada News: ನಿಯಮ ಪಾಲಿಸದ ಯಲ್ಲಾಪುರದ 3 ಖಾಸಗಿ ಆಸ್ಪತ್ರೆಗಳಿಗೆ ಬೀಗ

Uttara Kannada News: ಕೆಪಿಎಂಇ ಕಾಯ್ದೆಯಡಿಯಲ್ಲಿ ಅಗತ್ಯ ನಿಯಮಗಳನ್ನು ಪಾಲಿಸದೇ ವೈದ್ಯಕೀಯ ವೃತ್ತಿಯಲ್ಲಿ ನಿರತರಾಗಿದ್ದ ಯಲ್ಲಾಪುರ ತಾಲೂಕಿನ ಕಿರವತ್ತಿಯ ಮೂರು ಖಾಸಗಿ ಆಸ್ಪತ್ರೆಗಳಿಗೆ ತಾಲೂಕು ವೈದ್ಯಾಧಿಕಾರಿಗಳ ತಂಡ ಬೀಗ ಹಾಕಿದೆ.

VISTARANEWS.COM


on

3 private hospitals in Yallapur have been locked for not following the necessary rules under the KPME Act
Koo

ಯಲ್ಲಾಪುರ: ಕೆಪಿಎಂಇ ಕಾಯ್ದೆಯಡಿಯಲ್ಲಿ ಅಗತ್ಯ ನಿಯಮಗಳನ್ನು ಪಾಲಿಸದೇ ವೈದ್ಯಕೀಯ ವೃತ್ತಿಯಲ್ಲಿ ನಿರತರಾಗಿದ್ದ ತಾಲೂಕಿನ (Uttara Kannada News) ಕಿರವತ್ತಿಯ ಮೂರು ಖಾಸಗಿ ಆಸ್ಪತ್ರೆಗಳಿಗೆ ತಾಲೂಕು ವೈದ್ಯಾಧಿಕಾರಿಗಳ ತಂಡ ಬೀಗ ಜಡಿದಿದ್ದಾರೆ.

ಈ ಆಸ್ಪತ್ರೆಗಳ ಮೇಲೆ ಹಠಾತ್‌ ದಾಳಿ ನಡೆಸಿದ ತಾಲೂಕು ವೈದ್ಯಾಧಿಕಾರಿಗಳ ತಂಡ ಅನೇಕ ನ್ಯೂನತೆಗಳನ್ನು ಪತ್ತೆಹಚ್ಚಿದೆ. ಬೀಗ ಹಾಕಲಾದ ಆಸ್ಪತ್ರೆಗಳಲ್ಲಿ ಬಯೋ ಮೆಡಿಕಲ್ ವೇಸ್ಟ್‌ ಸರಿಯಾದ ಕ್ರಮದಲ್ಲಿ ವಿಲೇವಾರಿ ಮಾಡಲಾಗುತ್ತಿಲ್ಲ. ಸೂಜಿ, ಸಿರಿಂಜ್‌, ಕಾಟನ್‌, ಸಲಾಯಿನ್‌ ಬಾಟಲ್‌, ಖಾಲಿ ಆಂಪಲ್‌ಗಳನ್ನು ನಿಯಮಾನುಸಾರ ವಿಲೇವಾರಿ ಮಾಡದೆ, ಕಸದ ವಾಹನದಲ್ಲಿ ಕಳಿಸಲಾಗುತ್ತಿದೆ.

ಇದನ್ನೂ ಓದಿ: The RajaSaab Movie: ‘ದಿ ರಾಜಾಸಾಬ್’; ಎಲ್ಲರ ಗಮನ ಸೆಳೆಯುತ್ತಿದೆ ರೆಬೆಲ್‌ ಸ್ಟಾರ್‌ ಪ್ರಭಾಸ್‌ ಡ್ಯಾಶಿಂಗ್‌ ಲುಕ್‌!

ತಾಂತ್ರಿಕ ಪರಿಣಿತಿ ಹಾಗೂ ನಿಗದಿತ ವಿದ್ಯಾರ್ಹತೆ ಇಲ್ಲದ ಸಿಬ್ಬಂದಿಗಳನ್ನು ಔಷಧ ವಿತರಣೆಗೆ, ರಕ್ತದೊತ್ತಡ, ಡಯಾಬಿಟಿಸ್‌ ಪರೀಕ್ಷೆಗೆ ನೇಮಿಸಿಕೊಂಡು ಕಾರ್ಯನಿರ್ವಹಿಸಲಾಗುತ್ತಿತ್ತು. ಆಸ್ಪತ್ರೆಯಲ್ಲಿ ಸ್ವಚ್ಛತೆಯ ಕೊರತೆಯಿದೆ. ಒಂದು ಖಾಸಗಿ ಆಸ್ಪತ್ರೆಯು ಕೆಪಿಎಂಇ ಅಡಿಯಲ್ಲಿ ನೋಂದಣಿ ಆಗಿರುವುದಿಲ್ಲ. ಇದಲ್ಲದೇ ಸ್ವಂತ ಮನೆಯ ರೂಮ್‌ ಒಂದರಲ್ಲಿ ಒಬ್ಬರು ಯಾವುದೇ ವೈದ್ಯಕೀಯ ವಿದ್ಯಾರ್ಹತೆ ಹೊಂದದೆ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದರು.

ಈ ಎಲ್ಲಾ ಕಾರಣಗಳಿಂದಾಗಿ ಗುರುಪ್ರಸಾದ ಪಾಲಿ ಕ್ಲಿನಿಕ್‌, ಕೀರ್ತಿ ಕ್ಲಿನಿಕ್‌ ಹಾಗೂ ನೇಮಿಣಿ ಗಲ್ಲಿಯ ಮನೆಯೊಂದರಲ್ಲಿ ನಡೆಸಲಾಗುತ್ತಿದ್ದ ಕ್ಲಿನಿಕ್‌ಗೆ ಬೀಗ ಜಡೆಯಲಾಗಿದ್ದು, ಒಂದು ವಾರದೊಳಗೆ ಎಲ್ಲ ವ್ಯವಸ್ಥೆ ಸರಿಪಡಿಸಿಕೊಂಡು ಕೆಪಿಎಂಇ ಕಾಯ್ದೆಗೆ ಅನುಗುಣವಾಗಿ ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ತಾಲೂಕು ವೈದ್ಯಾಧಿಕಾರಿ ನರೇಂದ್ರ ಪವಾರ್‌ ತಿಳಿಸಿದ್ದಾರೆ.

ಇದನ್ನೂ ಓದಿ: Jio Games: ಜಿಯೋಗೇಮ್ಸ್‌ನಲ್ಲಿ ಗೂಗಲ್‌ನ ಗೇಮ್‌ಸ್ನ್ಯಾಕ್ಸ್‌ ಗೇಮ್ಸ್‌ ಲಭ್ಯ

ಈ ಸಂದರ್ಭದಲ್ಲಿ ಆರೋಗ್ಯ ಶಿಕ್ಷಣಾಧಿಕಾರಿ ಎಸ್‌.ಟಿ. ಭಟ್ಟ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಮಹೇಶ ತಾಳಿಕೋಟಿ, ಯು. ಜೋಸೆಫ್‌, ಪೊಲೀಸ್‌ ಹವಾಲ್ದಾರ ರಾಘವೇಂದ್ರ ನಾಯ್ಕ ಇದ್ದರು.

Continue Reading
Advertisement
Viral Video
Latest6 mins ago

Viral Video: ಹಾವನ್ನೇ ಮಣಿಸಿ ʼಸ್ನೇಹಿತʼನ ಜೀವ ಉಳಿಸಿದ ಹಲ್ಲಿ! ಅದ್ಭುತ ವಿಡಿಯೊ; ತಪ್ಪದೇ ನೋಡಿ!

Double Ismart
ಸಿನಿಮಾ10 mins ago

Double Ismart: ‘ಡಬಲ್ ಇಸ್ಮಾರ್ಟ್’ ಚಿತ್ರದ ಮೂರನೇ ಹಾಡು ರಿಲೀಸ್; ರೋಮ್ಯಾಂಟಿಕ್ ಆಗಿ ಹೆಜ್ಜೆ ಹಾಕಿದ ರಾಮ್ ಪೋತಿನೇನಿ-ಕಾವ್ಯಾ ಥಾಪರ್

Olympics 2024
ಕ್ರೀಡೆ20 mins ago

Olympics 2024: ಕಂಚು ಗೆದ್ದ ಮನು-ಸರಬ್ಜೋತ್​ ಜೋಡಿಗೆ ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ, ಐಒಸಿ ಸದಸ್ಯೆ ನೀತಾ ಅಂಬಾನಿ ಅಭಿನಂದನೆ

Viral News
Latest21 mins ago

Street Girlfriends: 115 ರೂ.ಗೆ ಚುಂಬನ, 11 ರೂ.ಗೆ ಬಿಸಿ ಅಪ್ಪುಗೆಯ ಸುಖ; ಸ್ಟ್ರೀಟ್‌ ಗರ್ಲ್‌ಫ್ರೆಂಡ್ ಟ್ರೆಂಡ್‌!

Pavel Durov
ವಿದೇಶ26 mins ago

Pavel Durov: ಮದುವೆಯಾಗದೆ 100 ಮಕ್ಕಳಿಗೆ ತಂದೆಯಾದ ಟೆಲಿಗ್ರಾಂ ಸಿಇಒ ಪಾವೆಲ್‌ ದುರೋವ್! ಈತ ರಿಯಲ್‌ ಲೈಫ್‌ ‘ವಿಕ್ಕಿ ಡೋನರ್’

UGCET 2024
ಬೆಂಗಳೂರು28 mins ago

UGCET 2024 : ಯುಜಿಸಿಇಟಿ ಆಪ್ಶನ್ ದಾಖಲಿಸಲು ಮತ್ತಷ್ಟು ದಿನ ಅವಕಾಶ

Viral Video
Latest30 mins ago

Viral Video: ಪ್ರೇಮಿಯೊಂದಿಗೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮಹಿಳೆ; ಗ್ರಾಮಸ್ಥರು ನೀಡಿದರು ಅಮಾನುಷ ಶಿಕ್ಷೆ

Murder Attempt
ಕ್ರೈಂ39 mins ago

Murder Attempt: ದಟ್ಟ ಅರಣ್ಯದಲ್ಲಿ ಮಹಿಳೆಯನ್ನು ಸರಪಳಿಯಿಂದ ಕಟ್ಟಿ ಪರಾರಿಯಾದ ಮಾಜಿ ಪತಿ!

Viral Video
ವೈರಲ್ ನ್ಯೂಸ್46 mins ago

Viral Video: ಯೋಗಿ ಆದಿತ್ಯನಾಥ್‌ ಕಾಲಿಗೆ ಎರಗಿದ ರಾಜಾ ಭಯ್ಯಾ; ಉತ್ತರ ಪ್ರದೇಶ ರಾಜಕೀಯದಲ್ಲಿ ಹೊಸ ಅಧ್ಯಾಯ ಎಂದ ನೆಟ್ಟಿಗರು

Viral Video
Latest50 mins ago

Viral Video: ಸಿಬ್ಬಂದಿಗೆ ಗನ್ ತೋರಿಸಿ ಆಭರಣ ಅಂಗಡಿ ದರೋಡೆ ಮಾಡಿದ ಹೆಲ್ಮೆಟ್‌ಧಾರಿಗಳು; ವಿಡಿಯೊ ನೋಡಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ2 hours ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ3 hours ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ22 hours ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ23 hours ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ1 day ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ2 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ2 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ2 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ2 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

Karnataka weather Forecast
ಮಳೆ3 days ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ಟ್ರೆಂಡಿಂಗ್‌