Site icon Vistara News

ಅಡ್ಡ ಬಂದ ನಾಯಿ, ನಿಯಂತ್ರಣ ತಪ್ಪಿದ ಕಾರು, ಇಬ್ಬರ ಸಾವು

car accident

ಚಿತ್ರದುರ್ಗ: ಅಡ್ಡ ಬಂದ ನಾಯಿಯನ್ನು ಉಳಿಸಲು ಹೋದ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಡಿವೈಡರ್‌ಗೆ ಅಪ್ಪಳಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಚಿತ್ರದುರ್ಗ ಜಿಲ್ಲೆಯ ಚಿಕ್ಕಬೆನ್ನೂರು ಸಮೀಪದ ಹೆದ್ದಾರಿಯಲ್ಲಿ ದುರ್ಘಟನೆ ನಡೆದಿದೆ. ಮೃತ ದುರ್ದೈವಿಗಳನ್ನು ಮಹಾರಾಷ್ಟ್ರ ಮೂಲದ ಮಾನ್ಸಿ (೪೦) ಹಾಗೂ ಉಜ್ವಲ್‌ ಬಾರ್ವಿ (೪೪) ಎಂದು ಗುರುತಿಸಲಾಗಿದೆ. ಇವರು ತಿರುಪತಿ ದರ್ಶನ ಮುಗಿಸಿ ವಾಪಸ್ ಮಹಾರಾಷ್ಟ್ರಕ್ಕೆ ತೆರಳುವಾಗ ಈ ಘಟನೆ ಸಂಭವಿಸಿದೆ. ಚಾಲಕನ ನಿಯಂತ್ರಣ ಕಳೆದುಕೊಂಡು ಕಾರು ಡಿವೈಡರ್‌ಗೆ ಅಪ್ಪಳಿಸಿತ್ತು. ಒಬ್ಬನಿಗೆ ಗಂಭೀರ ಗಾಯಗಳಾಗಿವೆ. ಗಾಯಾಳು ಸಚ್ಚಿನ್ ಬಾರ್ವಿಯನ್ನು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಸ್ಥಳಕ್ಕೆ ಭರಮಸಾಗರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಇದನ್ನೂ ಓದಿ | ಗಂಡನ ಕಿರುಕುಳ, ಸೀಮಂತ ಮಾಡಿದ ಮೂರೇ ದಿನಕ್ಕೆ ಗರ್ಭಿಣಿ ಆತ್ಮಹತ್ಯೆ

Exit mobile version