ಬೆಂಗಳೂರು: ಬೆಂಗಳೂರು ಮಹಾರಾಣಿ ಕಾಲೇಜು ಕ್ಯಾಂಪಸ್‌ನಲ್ಲಿ ಭೀಕರ ಅಪಘಾತ ನಡೆದಿದೆ. ಪ್ರೊಫೆಸರ್‌ವೊಬ್ಬರ ಎಡವಟ್ಟು ಚಾಲನೆಯಿಂದಾಗಿ ಎರಡು ಕಾರುಗಳ (Car Accident) ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಕ್ಯಾಂಪಸ್‌ನಲ್ಲಿದ್ದ ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯವಾಗಿದೆ.
ಇಂಗ್ಲೀಷ್ ಉಪನ್ಯಾಸಕ ಎಚ್.ನಾಗರಾಜ್ ಅವರು ಓವರ್ ಸ್ಪೀಡ್ ಆಗಿ ಕಾರು ಓಡಿಸಿಕೊಂಡು ಕ್ಯಾಂಪಸ್‌ಗೆ ಬಂದಿದ್ದಾರೆ. ಈ ವೇಳೆ ಬ್ರೇಕ್ ಹಾಕಲು ಹೋಗಿ ಎಕ್ಸಿಲೇಟರ್ ಒತ್ತಿದ್ದಾರೆ. ಪರಿಣಾಮ ಕಾರು ನಿಯಂತ್ರಣಕ್ಕೆ ಸಿಗದೇ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಬಳಿಕ ಕಾರು ಮರಕ್ಕೆ ಗುದ್ದಿದೆ. ಘಟನೆಯಲ್ಲಿ ಸ್ಕೂಟರ್‌ವೊಂದು ಡ್ಯಾಮೇಜ್ ಆಗಿದೆ.
ಘಟನೆಯಲ್ಲಿ ಮ್ಯೂಸಿಕ್ ಟೀಚರ್ ಜ್ಯೋತಿ ಎಂಬುವವರು ಗಾಯಗೊಂಡಿದ್ದಾರೆ. ಬಿ.ಕಾಂ ವಿದ್ಯಾರ್ಥಿನಿ ಅಶ್ವಿನಿ ತಲೆಗೆ ತೀವ್ರ ಪೆಟ್ಟಾಗಿದ್ದು ಆಕೆಯನ್ನು ಸೆಂಟ್ ಮಾರ್ಥಾಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮತ್ತೊಬ್ಬ ವಿದ್ಯಾರ್ಥಿನಿ ನಂದುಪ್ರಿಯಾಗೂ ಗಾಯವಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಡಿಸಿಪಿ ಸಚ್ಚಿನ್ ಘೋರ್ಷಣೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಬೆಳಗ್ಗೆ ಪ್ರೊಫೆಸರ್ ನಾಗರಾಜ್ ಅವರು ಕಾರಿನಲ್ಲಿ ಬರುವಾಗ ಬ್ರೇಕ್ ಬದಲು ಎಕ್ಸಿಲೇಟರ್ ಪ್ರೆಸ್ ಮಾಡಿದ್ದಾರೆ. ಹೀಗಾಗಿ ಈ ಅಪಘಾತ ನಡೆದಿದೆ. ಘಟನೆಯಲ್ಲಿ ಅಶ್ಚಿನಿ (19) ಎಂಬಾಕೆ ವರ್ಷ ತಲೆ ಹಾಗೂ ಕಾಲಿಗೆ ಗಾಯವಾಗಿದೆ. ಮತ್ತೊಬ್ಬ ವಿದ್ಯಾರ್ಥಿನಿ ನಂದುಪ್ರಿಯಾ ಗಾಯಗೊಂಡಿದ್ದು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಹೈಗ್ರೌಂಡ್ಸ್ ಟ್ರಾಫಿಕ್ ಪೊಲೀಸರು ಭೇಟಿ ನೀಡಿದ್ದಾರೆ. ಅಶ್ವಿನಿ ಕಾಲಿಗೆ ತೀವ್ರ ಪೆಟ್ಟಾಗಿದ್ದು ಬೇರೆ ಆಸ್ಪತ್ರೆಗೆ ರವಾನಿಸಲು ತಯಾರಿ ನಡೆದಿದೆ. ಆಸ್ಪತ್ರೆಗೆ ಗಾಯಾಳು ಅಶ್ಚಿನಿ ಕುಟುಂಬಸ್ಥರು ಭೇಟಿ ನೀಡಿದ್ದಾರೆ. ಅಶ್ಚಿನಿ ತಂದೆ ಅಮರೇಶ್ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದು, ಮಗಳ ಅಪಘಾತದ ವಿಷಯ ತಿಳಿಯುತ್ತಿದ್ದಂತೆ ಆಸ್ಪತ್ರೆಗೆ ದೌಡಾಯಿಸಿದ್ದಾರೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ