Site icon Vistara News

ಚಿತ್ರದುರ್ಗದಲ್ಲಿ ಡಿವೈಡರ್‌ಗೆ ಕಾರು ಡಿಕ್ಕಿ, ಮೂವರು ಸಾವು

car

ಚಿತ್ರದುರ್ಗ: ಚಿತ್ರದುರ್ಗದ ಪ್ರವಾಸಿ ಮಂದಿರ ಬಳಿ ರೋಡ್ ಡಿವೈಡರ್‌ಗೆ ಕಾರೊಂದು ಡಿಕ್ಕಿಯಾಗಿದ್ದು, ಕಾರ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರಿಗೆ ಗಂಭೀರ ಗಾಯಗಳಾಗಿವೆ.

ಸೋಮವಾರ ತಡರಾತ್ರಿ ವೇಳೆ ನಡೆದಿರುವ ಭೀಕರ ಅಪಘಾತ ಇದಾಗಿದೆ. ಮೃತರನ್ನು ಚಿತ್ರದುರ್ಗ ತಾಲೂಕಿನ ಮೆದೇಹಳ್ಳಿ ಗ್ರಾಮದ ಹರೀಶ್ (25), ಸಚಿನ್ (25), ಚಳ್ಳಕೆರೆ ತಾಲೂಕಿನ ಕಾಮಸಮುದ್ರ ಗ್ರಾಮದ ಚಾಲಕ ಮನು (21) ಎಂದು ಗುರುತಿಸಲಾಗಿದೆ. ಇಬ್ಬರು ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮೃತರು ಹಬ್ಬಕ್ಕಾಗಿ ಸ್ವಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ನಡೆದಿದೆ. ಅಪಘಾತದಲ್ಲಿ KA 01 AF 2700 ನೋಂದಣಿ ಸಂಖ್ಯೆಯ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಚಾಲಕನ ಅಜಾಗರೂಕತೆಯಿಂದ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಚಿತ್ರದುರ್ಗ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version