ಮಂಗಳೂರು: ಸೌದಿ ಅರೇಬಿಯಾದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ (Accident at Riyadh) ಮಂಗಳೂರಿನ ಮೂವರು ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ. ವೇಗವಾಗಿ ಸಾಗುತ್ತಿದ್ದ ಕಾರು ಹೆದ್ದಾರಿಗೆ ನುಗ್ಗಿ ಬಂದ ಒಂಟೆಗೆ ಡಿಕ್ಕಿ ಹೊಡೆದ ಬಳಿಕ ಪಲ್ಟಿಯಾಗಿ ಈ ದುರಂತ ಸಂಭವಿಸಿದೆ.
ಸೌದಿ ಅರೇಬಿಯಾದ ರಿಯಾದ್ ಪ್ರಾಂತ್ಯದ ಖುರೈಸ್ ರಸ್ತೆಯ ಬಳಿ ಅಪಘಾತ ಸಂಭವಿಸಿದ್ದು, ಮೃತಪಟ್ಟ ಮಂಗಳೂರು ಮೂಲದ ಯುವಕರನ್ನು ಅಕೀಲ್, ನಾಸಿರ್, ರಿಝ್ವಾನ್ ಎಂದು ಗುರುತಿಸಲಾಗಿದೆ.
ನಾಲ್ವರು ಕಾರಿನಲ್ಲಿ ಹೋಗುತ್ತಿದ್ದಾಗ ಖುರೈಸ್ ರಸ್ತೆಯ ಬಳಿ ಒಂಟೆಯೊಂದು ಅಡ್ಡಬಂದಿತ್ತು. ಆಗ ಚಾಲಕನಿಗೆ ನಿಯಂತ್ರಣ ಸಾಧ್ಯವಾಗದೆ ಡಿಕ್ಕಿ ಹೊಡೆದಿತ್ತು. ಬಳಿಕ ಕಾರು ಪಲ್ಟಿಯಾಗಿ ಸಾವು ಸಂಭವಿಸಿದೆ. ಮೃತಪಟ್ಟ ನಾಲ್ಕನೇ ವ್ಯಕ್ತಿ ಬಾಂಗ್ಲಾ ದೇಶ ಮೂಲದವರು ಎಂದು ತಿಳಿದುಬಂದಿದೆ.
ಕಾರಿನಲ್ಲಿದ್ದ ನಾಲ್ವರು ಕೂಡ SAQCO ಎಂಬ ಕಂಪನಿಯಲ್ಲಿ ನೌಕರರಾಗಿದ್ದರು. ಮೃತದೇಹಗಳನ್ನು ಸೌದಿಯ ಅಲ್ ಹಸ್ಸಾ ಆಸ್ಪತ್ರೆಗೆ ಸಾಗಿಸಲಾಗಿದೆ.
ಅಕೀಲ್ ಮಂಗಳೂರಿನ ಬೋಳಾರ್ ನಿವಾಸಿಯಾಗಿದ್ದು, ರಿಝ್ವಾನ್ ಹಳೆಯಂಗಡಿಯ ಕದಿಕೆ ನಿವಾಸಿಯಾಗಿದ್ದಾರೆ. ಮಂಗಳೂರಿನ ಸಂತ್ರಸ್ತ ಕುಟುಂಬವನ್ನು ಸಂಪರ್ಕಿಸಿ ಮಾಹಿತಿ ನೀಡಲಾಗಿದೆ ಎಂದು ತಿಳಿಬಂದಿದೆ.
ಇದನ್ನೂ ಓದಿ : Road accident : ಚಾಲಕನ ನಿಯಂತ್ರಣ ತಪ್ಪಿ ನದಿಗೆ ಉರುಳಿದ ಆಟೋ ರಿಕ್ಷಾ: ಮಹಿಳೆ ಸ್ಥಳದಲ್ಲೇ ಮೃತ್ಯು, ಇಬ್ಬರಿಗೆ ಗಾಯ