ವಿಜಯನಗರ: ಜಿಲ್ಲೆಯ ಹೊಸಪೇಟೆ ತಾಲೂಕಿನ ಕಮಲಾಪುರದ ಅಟಲ್ ಬಿಹಾರಿ ವಾಜಪೇಯಿ ಮೃಗಾಲಯದಲ್ಲಿ ಕಳೆದ ಒಂದು ವಾರದಿಂದ ಆರೈಕೆಯಲ್ಲಿರುವ ದಾಂಡೇಲಿಯ ಹೆಣ್ಣು ಹುಲಿ (Tiger Rescue) ಚೇತರಿಸಿಕೊಂಡಿದೆ.
ದಾಂಡೇಲಿಯ ಕಾಳಿ ಹುಲಿ ಸಂರಕ್ಷಿತ ಅರಣ್ಯದಲ್ಲಿ ನಿತ್ರಾಣಗೊಂಡಿದ್ದ ಹೆಣ್ಣು ಹುಲಿಯನ್ನು ಸೆರೆ ಹಿಡಿದಿದ್ದ ಅರಣ್ಯ ಅಧಿಕಾರಿಗಳು ಆರೈಕೆಗಾಗಿ ಡಿ.19 ರಂದು ಹಂಪಿಯ ಮೃಗಾಲಯಕ್ಕೆ ಸ್ಥಳಾಂತರಿಸಿದ್ದರು.
ಮೃಗಾಲಯದ ಆಸ್ಪತ್ರೆಯಲ್ಲಿ ಡಾ. ವಾಣಿ ಅವರು ನೀಡಿದ ಚಿಕಿತ್ಸೆ ಮತ್ತು ಪೌಷ್ಟಿಕ ಆಹಾರ ಒದಗಿಸಿದ್ದರಿಂದ ಬಹುಬೇಗ ಹುಲಿ ಚೇತರಿಸಿಕೊಂಡಿದೆ. ದಿನವಿಡೀ ಚಟುವಟಿಕೆಯಿಂದ ಕೂಡಿರುತ್ತದೆ. ಇಲಾಖೆಯ ಮೇಲಧಿಕಾರಿಗಳ ಆದೇಶದ ಮೇರೆಗೆ ಹುಲಿಯನ್ನು ಪುನಃ ಕಾಡಿಗೆ ಬಿಡುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಕಿರಣ್ ತಿಳಿಸಿದ್ದಾರೆ.
ಇದನ್ನೂ ಓದಿ | Coronavirus | ಎಲ್ಲ ರಾಜ್ಯಗಳಲ್ಲೂ ಇಂದು ಅಣಕು ಕಾರ್ಯಾಚರಣೆ, ಏನಿದು ಮಾಕ್ ಡ್ರಿಲ್?