ಇಂಡಿಗೋ ವಿಮಾನದ ಟಾಯ್ಲೆಟ್‌ನಲ್ಲಿ ಸಿಗರೇಟ್‌ ಸೇದಿ ಸಿಕ್ಕಿಬಿದ್ದ; ಒಂದು ಸಿಗರೇಟ್‌ಗಾಗಿ ಜೈಲು ಸೇರಿದ! - Vistara News

ಕರ್ನಾಟಕ

ಇಂಡಿಗೋ ವಿಮಾನದ ಟಾಯ್ಲೆಟ್‌ನಲ್ಲಿ ಸಿಗರೇಟ್‌ ಸೇದಿ ಸಿಕ್ಕಿಬಿದ್ದ; ಒಂದು ಸಿಗರೇಟ್‌ಗಾಗಿ ಜೈಲು ಸೇರಿದ!

ಸಿಗರೇಟ್‌ ಸೇದಬೇಕೆಂಬ ಅತಿಯಾದ ಚಟವೊಂದು ವ್ಯಕ್ತಿಯೊಬ್ಬನನ್ನು ಜೈಲು ಸೇರುವಂತೆ ಮಾಡಿದೆ. ವಿಮಾನದಲ್ಲಿ ತೆಪ್ಪಗೆ ಪ್ರಯಾಣಿಸಬೇಕಿದ್ದ ವ್ಯಕ್ತಿಯೊಬ್ಬ ಅಲ್ಲಿನ ಶೌಚಾಲಯದಲ್ಲಿ ಸಿಗರೇಟ್‌ ಸೇದಿದ್ದು, ಈಗ ಪೊಲೀಸರ ಅತಿಥಿಯಾಗಿದ್ದಾನೆ.

VISTARANEWS.COM


on

caught smoking in toilet of flight he Jailed for a cigarette
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದೇವನಹಳ್ಳಿ: ಇದು ಒಂದು ಸಿಗರೇಟಿನ ಕಥೆ. ಚಟ ಎಂಥವನನ್ನೂ ಬಲಹೀನವನ್ನಾಗಿಸುತ್ತದೆ ಎಂಬುದಕ್ಕೆ ಈ ಪ್ರಕರಣವೇ ಸಾಕ್ಷಿ. ಆತ ಇನ್ನೊಂದು ಸ್ವಲ್ಪ ಹೊತ್ತು ತಡೆದುಕೊಂಡಿದ್ದರೆ ಈ ಗತಿ ಬರುತ್ತಿರಲಿಲ್ಲ. ವಿಮಾನದಲ್ಲಿ ಹೊಗೆ ಹಾಕಲು ಹೋಗಿ ಈಗ ಪೊಲೀಸ್‌ ಠಾಣೆಯಲ್ಲಿ ಕಂಬಿ ಎಣಿಸುವಂತಾಗಿದೆ. ಅಸ್ಸಾಂನಿಂದ ಬೆಂಗಳೂರಿಗೆ ಬರುತ್ತಿದ್ದ ವಿಮಾನದ ಶೌಚಾಲಯದಲ್ಲಿ ಧೂಮಪಾನ ಮಾಡಿ ಆತಂಕ ಸೃಷ್ಟಿಸಿದ್ದ ಪ್ರಯಾಣಿಕನನ್ನು ಪೊಲೀಸರು ಬಂಧಿಸಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಕರಣ ಬೆಳಕಿಗೆ ಬಂದಿದೆ.

6E 716 ಇಂಡಿಗೋ ವಿಮಾನದಲ್ಲಿ ಮಧ್ಯರಾತ್ರಿ 01:30 ರಲ್ಲಿ ಈ ಘಟನೆ ನಡೆದಿದೆ. ಶೇಹರಿ ಚೌದರಿ ಎಂಬಾತ ವಿಮಾನದ ಶೌಚಾಲಯದಲ್ಲಿ ಸಿಗರೇಟ್ ಸೇದಿ ಸಿಕ್ಕಿಬಿದ್ದಿದ್ದಾನೆ.

ವಿಮಾನದ ಶೌಚಾಲಯದಲ್ಲಿ ಹೊಗೆ ಮತ್ತು ವಾಸನೆ ಬಂದ ಹಿನ್ನೆಲೆ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಶೇಹರಿ ಚೌದರಿ ಶೌಚಾಲಯವನ್ನು ಬಳಸಿ ಹೋಗಿರುವುದು ಗೊತ್ತಾಗಿದೆ. ಆದ್ದರಿಂದ ಆತನೇ ಸಿಗರೇಟ್‌ ಸೇದಿದ್ದಾನೆ ಎಂದು ಅರಿತ ವಿಮಾನ ಸಿಬ್ಬಂದಿ ಫ್ಲೈಟ್‌ ಬೆಂಗಳೂರಿಗೆ ಬಂದ ಕೂಡಲೇ ಆತನನ್ನು ಭದ್ರತಾ ಪಡೆಯ ವಶಕ್ಕೆ ನೀಡಿದ್ದಾರೆ. ಪ್ರಕರಣ ದಾಖಲು ಮಾಡಿಕೊಂಡಿರುವ ಏರ್‌ಪೋರ್ಟ್‌ ಪೊಲೀಸರು ತನಿಖೆ ನಡೆಸಿದ್ದಾರೆ.

ಇದನ್ನೂ ಓದಿ: Murder Case: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ತಮ್ಮನನ್ನೇ ತುಂಡು ತುಂಡಾಗಿ ಕತ್ತರಿಸಿದ್ದ ಅಕ್ಕ; 8 ವರ್ಷಗಳ ಬಳಿಕ ಸೆರೆ ಸಿಕ್ಕಿದ್ದು ಹೇಗೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Lok Sabha Election 2024: ಕರ್ನಾಟಕದಲ್ಲಿ ದಾಖಲೆಯ ಮತದಾನ; ಕಳೆದ ಬಾರಿಗಿಂತ ಏರಿಕೆ, ಮಂಡ್ಯದಲ್ಲಿ ಅತಿ ಹೆಚ್ಚು!

Lok Sabha Election 2024: ರಾಜ್ಯದಲ್ಲಿ 2019ರ ಲೋಕಸಭಾ ಚುನಾವಣೆಯಲ್ಲಿ ಎರಡೂ ಹಂತಗಳಲ್ಲೂ ಒಟ್ಟು ಶೇ. 68.96 ಮತದಾನ ನಡೆದಿತ್ತು. ಈ ಬಾರಿ ಮೊದಲ ಹಂತದಲ್ಲಿ ಶೇ.69.23 ವೋಟಿಂಗ್‌ ನಡೆದಿದೆ, ಇನ್ನು ರಾಜ್ಯದ ಎಲ್ಲ ಮತಗಟ್ಟೆಗಳಲ್ಲಿ ಬಹುತೇಕ ಶಾಂತಿಯುತವಾಗಿ ಶುಕ್ರವಾರ ಮತದಾನವಾಗಿದೆ.

VISTARANEWS.COM


on

Koo

ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆ 2024ರ (Lok Sabha Election 2024) ಮೊದಲ ಹಂತದ ಮತದಾನ ಶುಕ್ರವಾರ ಮುಕ್ತಾಯವಾಗಿದೆ. ಒಂದೆರಡು ಕಡೆ ಸಣ್ಣಪುಟ್ಟ ಅಹಿತಕರ ಘಟನೆಗಳು ಹೊರತುಪಡಿಸಿದರೆ ಎಲ್ಲೆಡೆ ಬಹುತೇಕ ಶಾಂತಿಯುತವಾಗಿ ಮತದಾನ ಜರುಗಿದ್ದು, 14 ಕ್ಷೇತ್ರಗಳಲ್ಲಿ ಸಂಜೆ 6 ಗಂಟೆವರೆಗೆ ಒಟ್ಟು ಶೇ.69.23 ಮತದಾನ ದಾಖಲಾಗಿದೆ. ಮಂಡ್ಯ ಕ್ಷೇತ್ರದಲ್ಲಿ ಅತಿಹೆಚ್ಚು ಮತದಾನವಾಗಿದ್ದು, ಬೆಂಗಳೂರು ಸೆಂಟ್ರಲ್‌ ಕ್ಷೇತ್ರದಲ್ಲಿ ಅತಿ ಕಡಿಮೆ ಮತದಾನ ದಾಖಲಾಗಿದೆ.

ಮಂಡ್ಯ ಕ್ಷೇತ್ರದಲ್ಲಿ ಅತಿ ಹೆಚ್ಚು ಅಂದರೆ ಶೇ.81.48 ಮತದಾನವಾಗಿದ್ದು, ಬೆಂಗಳೂರು ಸೆಂಟ್ರಲ್‌ ಕ್ಷೇತ್ರದಲ್ಲಿ ಅತಿ ಕಡಿಮೆ ಅಂದರೆ 52.81 ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಇನ್ನು ಮೊದಲ ಹಂತದಲ್ಲಿ ಒಟ್ಟು 2,88,08,182 ಮತದಾರರು ಮತ ಚಲಾಯಿಸಿದ್ದು, 14 ಕ್ಷೇತ್ರಗಳಲ್ಲಿ 118 ಪಕ್ಷೇತರ ಅಭ್ಯರ್ಥಿಗಳು ಸೇರಿ 247 ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆಯಲ್ಲಿ ಭದ್ರವಾಗಿದೆ. ಇದರಲ್ಲಿ 226 ಪುರುಷ, 21 ಮಹಿಳಾ ಅಭ್ಯರ್ಥಿಗಳಿದ್ದಾರೆ. ಜೂನ್‌ 4ರಂದು ಫಲಿತಾಂಶ ಹೊರಬೀಳಲಿದೆ.

14 ಕ್ಷೇತ್ರಗಳ ಶೇಕಡಾವಾರು ಮತದಾನ ಪಟ್ಟಿ

ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನ?

ಕ್ಷೇತ್ರಲೋಕಸಭಾ ಚುನಾವಣೆ-2024ಲೋಕಸಭಾ ಚುನಾವಣೆ-2019
ಉಡುಪಿ-ಚಿಕ್ಕಮಗಳೂರುಶೇ. 76.06ಶೇ. 76.07
ಹಾಸನಶೇ. 77.51ಶೇ. 77.35
ದಕ್ಷಿಣ ಕನ್ನಡ
ಶೇ. 77.43ಶೇ. 77.99
ಚಿತ್ರದುರ್ಗ
ಶೇ. 73.11ಶೇ. 70.80
ತುಮಕೂರು
ಶೇ. 77.70ಶೇ. 77.43
ಮಂಡ್ಯಶೇ. 81.48ಶೇ. 80.59
ಮೈಸೂರುಕೊಡಗು
ಶೇ. 70.45ಶೇ. 69.51
ಚಾಮರಾಜನಗರ
ಶೇ. 76.59ಶೇ. 75.35
ಬೆಂಗಳೂರು ಗ್ರಾಮಾಂತರ
ಶೇ.67.29ಶೇ. 64.98
ಬೆಂಗಳೂರು ಉತ್ತರ
ಶೇ.54.42ಶೇ. 54.76
ಬೆಂಗಳೂರು ಸೆಂಟ್ರಲ್‌
ಶೇ. 52.81ಶೇ. 54.32
ಬೆಂಗಳೂರು ದಕ್ಷಿಣ
ಶೇ. 53.15ಶೇ. 53.70
ಚಿಕ್ಕಬಳ್ಳಾಪುರ
ಶೇ. 76.82ಶೇ. 76.74
ಕೋಲಾರಶೇ. 78.07
ಶೇ. 77.25
ಒಟ್ಟು ಶೇಕಡಾವಾರು ಮತದಾನ 69.23

2019ರ ಲೋಕಸಭಾ ಚುನಾವಣೆಯ ಒಟ್ಟು ಮತದಾನ ಎಷ್ಟು?
2019ರ ಲೋಕಸಭಾ ಚುನಾವಣೆಯಲ್ಲಿ ಎರಡೂ ಹಂತ ಸೇರಿ ಒಟ್ಟು ಶೇ. 68.96 ಮತದಾನ ನಡೆದಿತ್ತು. ಮಂಡ್ಯದಲ್ಲಿ ಅತಿಹೆಚ್ಚು ಶೇ. 80.59, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಅತಿ ಕಡಿಮೆ ಶೇ. 53.70 ಮತದಾನ ದಾಖಲಾಗಿತ್ತು.

ಇದನ್ನೂ ಓದಿ | Lok Sabha Election 2024: ಮತ ಹಾಕದವರನ್ನು ಮತ ಪಟ್ಟಿಯಿಂದ ತೆಗೆದುಹಾಕಬೇಕು: ಅನಂತ್ ನಾಗ್ ಸಲಹೆಗೆ ಏನಂತೀರಿ?

ಇಂಡಿಗನತ್ತ ಮತಗಟ್ಟೆಯಲ್ಲಿ ಮರು ಮತದಾನ ಸಾಧ್ಯತೆ

ಚಾಮರಾಜನಗರದ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದ ಮತಗಟ್ಟೆಯಲ್ಲಿ ಮರು ಮತದಾನ ನಡೆಯುವ ಸಾಧ್ಯತೆ ಇದೆ. ಶುಕ್ರವಾರ ಕೇವಲ 10 ಮತದಾರರು ಮಾತ್ರ ಹಕ್ಕು ಚಲಾವಣೆ ಮಾಡಿದ್ದಾರೆ. ಮತಗಟ್ಟೆಯಲ್ಲಿ ಮೂಲಸೌಕರ್ಯ ಇಲ್ಲ ಎಂದು ಮತದಾರರು ಅಸಮಾಧಾನ ಹೊರಹಾಕಿ ಮತದಾನ ಬಹಿಷ್ಕರಿಸಿದ್ದರು. ಹೀಗಾಗಿ 2 ದಿನಗಳೊಳಗೆ ಅಧಿಕಾರಿಗಳು ಮಾತುಕತೆ ನಡೆಸಿ ಮರು ಮತದಾನ ಮಾಡಿಸುವ ಸಾಧ್ಯತೆ ಇದೆ.

ಬೆಳಗ್ಗೆ ಏಳು ಗಂಟೆಗೆ ಆರಂಭಗೊಂಡ ಮತದಾನ ಪಕ್ರಿಯೆ ಸಂಜೆ 6 ಗಂಟೆಗೆ ಸರಿಯಾಗಿ ಅಂತ್ಯಗೊಂಡಿತು. ನಿಗದಿತ ಸಮಯವಾಗುತ್ತಿದ್ದಂತೆ ಅಧಿಕಾರಿಗಳು ಮತಗಟ್ಟೆಯ ಪ್ರಮುಖ ದ್ವಾರಗಳನ್ನು ಮುಚ್ಚಿದರು. ಸಂಜೆ ಐದು ಗಂಟೆಯ ವೇಳೆಗೆ ಶೇ 63.90 ಮತದಾನ ದಾಖಲಾಗಿತ್ತು. ಮತದಾನ ಅವಧಿ ಮುಕ್ತಾಯಗೊಂಡ ಬಳಿಕ 6 ಗಂಟೆ ವೇಳೆಗೆ ಸಾಲಿನಲ್ಲಿದ್ದವರಿಗೆ ಮಾತ್ರ ಮತದಾನಕ್ಕೆ ಅವಕಾಶ ಮಾಡಿಕೊಡಲಾಗಿದೆ.

ಇವಿಎಂಗಳಿಗೆ ಸೀಲ್​

ಮತದಾನದ ಸಮಯ ಮುಕ್ತಾಯಗೊಳ್ಳುತ್ತಿದ್ದಂತೆ ಅಧಿಕಾರಿಗಳು ಗೇಟ್​ ಮುಚ್ಚಿದರು. ಈ ವೇಳೆ ಮೊದಲೇ ಬಂದು ಸರತಿಯಲ್ಲಿ ಸಾಲಿನಲ್ಲಿ ನಿಂತವರಿಗೆ ಮಾತ್ರ ಅವಕಾಶ ನೀಡಲಾಯಿತು. ಕೆಲವರು ಅ ಬಳಿಕ ಬಂದರೂ ಅವರಿಗೆ ಅವಕಾಶ ನೀಡಲು ಹಿರಿಯ ಅಧಿಕಾರಿಗಳು ಒಪ್ಪಲಿಲ್ಲ. ಎಲ್ಲರೂ ಮತ ಚಲಾವಣೆ ಮಾಡಿದ ಬಳಿಕ ಹಿರಿಯ ಅಧಿಕಾರಿಗಳು ಇವಿಎಂ ಯಂತ್ರಗಳಿಗೆ ಸೀಲ್ ಮಾಡಿದರು. ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಅವರು ಮತ ಯಂತ್ರಗಳನ್ನು ಪ್ಯಾಕ್ ಮಾಡಿದರು. ಈ ಮತಪೆಟ್ಟಿಗಳು ಇನ್ನು ಭಾರೀ ಭದ್ರತೆಯೊಂದಿಗೆ ನಿಗದಿತ ಸ್ಟ್ರಾಂಗ್ ರೂಮ್​ಗೆ ರವಾನೆಯಾಗಲಿವೆ.

ಇದನ್ನೂ ಓದಿ | Lok Sabha Election 2024: ಹೃದಯಾಘಾತಕ್ಕೆ 3 ಬಲಿ; ಮೈಸೂರು, ತುಮಕೂರಿನಲ್ಲಿ ಮತ ಹಾಕಿದ್ದ, ಕೊಡಗಲ್ಲಿ ವೋಟ್‌ ಹಾಕಲು ನಿಂತಿದ್ದವ ಸಾವು!

ಭರ್ಜರಿ ಪ್ರತಿಕ್ರಿಯೆ

ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಕರ್ನಾಟಕದಲ್ಲಿ ಮುಂಜಾನೆಯಿಂದಲೇ ಜನರು ಅತ್ಯಂತ ಉತ್ಸಾಹದಿಂದ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡರು. ಬೇಸಿಗೆ ಬಿಸಿಲು ಹೆಚ್ಚಿರಬಹುದು ಎಂಬ ಕಾರಣಕ್ಕೆ ಮುಂಜಾನೆ ಅವಧಿಯಲ್ಲಿ ಮತಗಟ್ಟೆಗಳ ಬಳಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಕಂಡು ಬಂದರು. ಕೆಲವೊಂದು ಜನನಿಬಿಡ ಮತಗಟ್ಟೆಗಳಲ್ಲಿ 2 ಗಂಟೆಗಳಷ್ಟು ಕಾಲ ಜನ ಮತ ಚಲಾಯಿಸಲು ಸರತಿ ಸಾಲಿನಲ್ಲಿ ನಿಂತಿದ್ದರು.

Continue Reading

ಕರ್ನಾಟಕ

Udupi Sri Krishna Temple: ಮತದಾನದ ದಿನ ಕಮಲಾರೂಢನಾದ ಉಡುಪಿ ಕೃಷ್ಣ! ಇಲ್ಲಿದೆ ಫೋಟೊ ಝಲಕ್‌

Udupi Sri Krishna Temple: ಉಡುಪಿ ಕೃಷ್ಣ ದೇವಸ್ಥಾನದಲ್ಲಿ ಬೆಳ್ಳಿಯ ಕಮಲ ಪುಷ್ಪದಲ್ಲಿ ಕುಳಿತು ಕೈಯಲ್ಲಿ ಕಮಲದ ಹೂ ಹಿಡಿದ ಕೃಷ್ಣದೇವರನ್ನು ಸಾವಿರಾರು ಭಕ್ತರು ದರ್ಶನ ಮಾಡಿದರು.

VISTARANEWS.COM


on

Udupi Sri Krishna Temple
Koo

ಉಡುಪಿ: ಲೋಕಸಭಾ ಚುನಾವಣೆಯ ಮತದಾನದ ಹಿನ್ನೆಲೆಯಲ್ಲಿ ಉಡುಪಿ ಶ್ರೀ ಕೃಷ್ಣನಿಗೆ ಶುಕ್ರವಾರ ವಿಶೇಷ ಅಲಂಕಾರ ಮಾಡಲಾಗಿತ್ತು. ಕಮಲಾರೂಢನಾಗಿ ಶ್ರೀ ಕೃಷ್ಣ, ಭಕ್ತರಿಗೆ ದರ್ಶನ ನೀಡಿದ. ಪುತ್ತಿಗೆ ಶ್ರೀಗಳು ವಿಶೇಷ ಅಲಂಕಾರ ಮಾಡಿ ಪೂಜೆ ನೆರವೇರಿಸಿದರು. ಬೆಳ್ಳಿಯ ಕಮಲ ಪುಷ್ಪದಲ್ಲಿ ಕುಳಿತು ಕೈಯಲ್ಲಿ ಕಮಲದ ಹೂ ಹಿಡಿದ ಕೃಷ್ಣದೇವರನ್ನು ಸಾವಿರಾರು ಭಕ್ತರು ದರ್ಶನ ಮಾಡಿದರು.

ಇದನ್ನೂ ಓದಿ | Lok Sabha Election 2024: 2ನೇ ಬಾರಿಗೆ ಬಂದು ಮತದಾನ ಮಾಡಿದ ಅದಮಾರು ಮಠದ ಶ್ರೀ ವಿಶ್ವಪ್ರಿಯ ತೀರ್ಥರು!

Continue Reading

ಕರ್ನಾಟಕ

Lok Sabha Election 2024: ಮತದಾನ ಬಹಿಷ್ಕರಿಸಿದ್ದ 2 ಗ್ರಾಮದ ಜನ, ಸಂಜೆಗೆ ಮನವೊಲಿಕೆ; 7 ಗಂಟೆ ದಾಟಿದರೂ ಮುಗಿಯದ ಮತದಾನ

Lok Sabha Election 2024: ಯರೆಹಳ್ಳಿ, ಸಿದ್ದಾಪುರ ಗ್ರಾಮದ ಜನತೆಯು ತಮಗೆ ಮೂಲ ಸೌಕರ್ಯ ಕಲ್ಪಿಸಿಲ್ಲ. ಎಷ್ಟೇ ಮನವಿ ಮಾಡಿದರೂ ಜನಪ್ರತಿನಿಧಿಗಳು ಕ್ಯಾರೇ ಎನ್ನುತ್ತಿಲ್ಲ. ಚುನಾವಣೆ ಬಂದಾಗ ಮಾತ್ರ ನಮ್ಮ ನೆನಪು ಬರುತ್ತದೆ. ಹೀಗಾಗಿ ನಾವು ಈ ಬಾರಿ ಮತವನ್ನೇ ಚಲಾವಣೆ ಮಾಡುವುದಿಲ್ಲ ಎಂದು ಪಟ್ಟು ಹಿಡಿದು, ಮತದಾನವನ್ನು ಬಹಿಷ್ಕರಿಸಿ ಕುಳಿತಿದ್ದರು. ಆದರೆ, ಚುನಾವಣಾ ಅಧಿಕಾರಿಗಳು ಈ ಗ್ರಾಮಸ್ಥರ ಮನವೊಲಿಕೆಗೆ ಬೆಳಗ್ಗೆಯಿಂದಲೇ ಕಸರತ್ತು ನಡೆಸಿದ್ದರು. ಕೊನೆಗೂ ಅವರ ಮನವೊಲಿಸುವಲ್ಲಿ ಸಫಲರಾದರು.

VISTARANEWS.COM


on

Lok Sabha Election 2024 2 villagers who boycotted voting cast their votes in evening
Koo

ಚಿತ್ರದುರ್ಗ: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಶುಕ್ರವಾರ (ಏಪ್ರಿಲ್‌ 26) ಮೊದಲ ಹಂತದ ಮತದಾನ (First phase of polling) ಎಲ್ಲ ಕಡೆ ಮುಕ್ತಾಯಗೊಂಡಿದೆ. ಆದರೆ, ಜಿಲ್ಲೆಯ ಯರೆಹಳ್ಳಿ, ಸಿದ್ದಾಪುರ ಗ್ರಾಮದಲ್ಲಿ ಮಾತ್ರ ಸಂಜೆ 7 ಗಂಟೆಯಾದರೂ ಮತದಾನ ನಿಂತಿಲ್ಲ!

ಹೌದು. ಯರೆಹಳ್ಳಿ, ಸಿದ್ದಾಪುರ ಗ್ರಾಮದ ಜನತೆಯು ತಮಗೆ ಮೂಲ ಸೌಕರ್ಯ ಕಲ್ಪಿಸಿಲ್ಲ. ಎಷ್ಟೇ ಮನವಿ ಮಾಡಿದರೂ ಜನಪ್ರತಿನಿಧಿಗಳು ಕ್ಯಾರೇ ಎನ್ನುತ್ತಿಲ್ಲ. ಚುನಾವಣೆ ಬಂದಾಗ ಮಾತ್ರ ನಮ್ಮ ನೆನಪು ಬರುತ್ತದೆ. ಹೀಗಾಗಿ ನಾವು ಈ ಬಾರಿ ಮತವನ್ನೇ ಚಲಾವಣೆ ಮಾಡುವುದಿಲ್ಲ ಎಂದು ಪಟ್ಟು ಹಿಡಿದು, ಮತದಾನವನ್ನು ಬಹಿಷ್ಕರಿಸಿ ಕುಳಿತಿದ್ದರು.

ಆದರೆ, ಚುನಾವಣಾ ಅಧಿಕಾರಿಗಳು ಈ ಗ್ರಾಮಸ್ಥರ ಮನವೊಲಿಕೆಗೆ ಬೆಳಗ್ಗೆಯಿಂದಲೇ ಕಸರತ್ತು ನಡೆಸಿದ್ದರು. ಕೊನೆಗೂ ಅವರ ಮನವೊಲಿಸುವಲ್ಲಿ ಸಫಲರಾದರು. ಹೀಗಾಗಿ ಸಂಜೆ ವೇಳೆಗೆ ಮತದಾನ ಪ್ರಕ್ರಿಯೆ ಶುರುವಾಯಿತು. ಇದರಿಂದಾಗಿ ಸಂಜೆ 7 ಗಂಟೆಯಾದರೂ ಮತದಾನ ಮುಕ್ತಾಯವಾಗಿರಲಿಲ್ಲ.

Lok Sabha Election 2024 2 villagers who boycotted voting cast their votes in evening
ಇವಿಎಂ, ವಿವಿಪ್ಯಾಟ್‌ನೊಂದಿಗೆ ಸ್ಟ್ರಾಂಗ್‌ ರೂಂನತ್ತ ಚುನಾವಣಾಧಿಕಾರಿಗಳು

ಉಳಿದೆಡೆ ಸ್ಟ್ರಾಂಗ್‌ ರೂಂನತ್ತ ಇವಿಎಂ, ವಿವಿಪ್ಯಾಟ್‌

ಮತದಾನ ಮುಕ್ತಾಯವಾದ ಕಡೆ ಚುನಾವಣಾಧಿಕಾರಿಗಳು ಇವಿಎಂ (EVM), ವಿವಿ ಪ್ಯಾಟ್‌ ಬಾಕ್ಸ್‌ಗಳನ್ನು ಪ್ಯಾಕಿಂಗ್ ಮಾಡುವ ಕಾರ್ಯದಲ್ಲಿ ನಿರತರಾಗಿದ್ದರು. ಪ್ಯಾಕಿಂಗ್ ಮಾಡಿದವರು ಚಾಮರಾಜನಗರದ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿರುವ ಸ್ಟ್ರಾಂಗ್ ರೂಂಗೆ ತೆಗೆದುಕೊಂಡು ಹೋಗಿ ಇಡುತ್ತಿದ್ದಾರೆ. ದೂರದ ಕಡೆಗಳಿಂದ ಬರುವವರು ಸ್ಟ್ರಾಂಗ್‌ ರೂಂನತ್ತ ಬರುತ್ತಿದ್ದಾರೆ.

ಆಕ್ಸಿಜನ್‌ ಸಹಾಯದಿಂದ ಮತ ಚಲಾಯಿಸಿದ ಮಹಿಳೆ; ವೋಟು ಹಾಕಿ ಕುಸಿದು ಮೃತಪಟ್ಟ ವೃದ್ಧೆ!

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಶುಕ್ರವಾರ (ಏಪ್ರಿಲ್‌ 26) ಮೊದಲ ಹಂತದ ಮತದಾನ (First phase of polling) ನಡೆಯುತ್ತಿದ್ದು, ಎಲ್ಲರೂ ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದಾರೆ. ಬೆಂಗಳೂರಿನಲ್ಲಿ ವೃದ್ಧೆಯೊಬ್ಬರು ಆಸ್ಪತ್ರೆಗೆ ದಾಖಲಾಗಿದ್ದರೂ, ಆಕ್ಸಿಜನ್‌ ಸಮೇತ ಮತಗಟ್ಟೆಗೆ ಬಂದು ಹಕ್ಕು ಚಲಾಯಿಸಿದ್ದಾರೆ. ಇನ್ನು ಮೈಸೂರಿನ ಹುಣಸೂರಿನಲ್ಲಿ ವೃದ್ಧೆಯೊಬ್ಬರು ಮತ ಚಲಾಯಿಸಿ ಮೃತಪಟ್ಟಿದ್ದಾರೆ.

ಆಕ್ಸಿಜನ್ ಸಮೇತ ಹಕ್ಕು ಚಲಾಯಿಸಿದ ವೃದ್ಧೆ

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ (Bangalore South Lok Sabha constituency) ಜಯನಗರದಲ್ಲಿ ವೃದ್ಧೆಯೊಬ್ಬರು ಆಕ್ಸಿಜನ್‌ ಸಹಾಯದಿಂದಲೇ ಮತಗಟ್ಟೆಗೆ ಬಂದು ಹಕ್ಕು ಚಲಾವಣೆ ಮಾಡಿದ್ದಾರೆ. 78 ವರ್ಷದ ಕಲಾವತಿ ಎಂಬುವವರೇ ಆಕ್ಸಿಜನ್ ಸಮೇತ ಹಕ್ಕು ಚಲಾಯಿಸಿದ ವೃದ್ಧೆಯಾಗಿದ್ದಾರೆ. ಕಲಾವತಿ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಇವರನ್ನು ಏಪ್ರಿಲ್‌ 23ರಂದು ಜಯನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶುಕ್ರವಾರ ಅವರನ್ನು ಆಂಬ್ಯುಲೆನ್ಸ್‌ ಮೂಲಕ ವೈದ್ಯಕೀಯ ಸಿಬ್ಬಂದಿ ಜತೆ ಕರೆತರಲಾಗಿದ್ದು, ಮತ ಚಲಾವಣೆಗೆ ಅವಕಾಶ ಕಲ್ಪಿಸಲಾಗಿತ್ತು. ಕೊನೆಗೂ ಅವರು ತಮ್ಮ ಹಕ್ಕು ಚಲಾವಣೆ ಮಾಡಿದ್ದಾರೆ.

ವೋಟು ಹಾಕಿ ಬಂದು ವೃದ್ಧೆ ನಿಧನ

ಮೈಸೂರು: ಮೈಸೂರು ಲೋಕಸಭಾ ಕ್ಷೇತ್ರದ (Mysore Lok Sabha constituency) ಹುಣಸೂರು ತಾಲೂಕಿನ ತಿಪ್ಪೂರು ಗ್ರಾಮದ ವೃದ್ಧೆಯೊಬ್ಬರು ತಿಪ್ಪೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 172ರಲ್ಲಿ ಮತ ಚಲಾವಣೆ ಮಾಡಿದ್ದಾರೆ. ಮತ ಹಾಕಿ ಹೊರ ಬರುತ್ತಿದ್ದಂತೆ ಅವರು ಕುಸಿದು ಮೃತಪಟ್ಟಿದ್ದಾರೆ.

Lok Sabha Election 2024 Woman casts her vote with the help of oxygen elderly woman dies after casting her vote

ಹುಣಸೂರು ತಾಲೂಕಿನ ತಿಪ್ಪೂರು ಗ್ರಾಮದ ಪುಟ್ಟಮ್ಮ (90) ಮೃತರು. ಇವರು ಪ್ರತಿ ಚುನಾವಣೆಯಂತೆ ಈ ಬಾರಿಯೂ ತಮ್ಮ ಹಕ್ಕನ್ನು ತಪ್ಪದೇ ಚಲಾವಣೆ ಮಾಡಿದ್ದಾರೆ. ಮತ ಹಾಕಿ ಅದೇ ಖುಷಿಯಲ್ಲಿ ವಾಪಸಾಗುತ್ತಿದ್ದಾಗ ದಿಢೀರ್‌ ಕುಸಿದುಬಿದ್ದಿದ್ದು, ಅಲ್ಲಿಯೇ ಮೃತಪಟ್ಟಿದ್ದಾರೆ.

ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮೊದಲ ಹಂತದ ಮತದಾನ (First phase of polling) ಪ್ರಕ್ರಿಯೆಗೆ ಚಾಲನೆ ಸಿಕ್ಕಿದ್ದು, ಜೆ.ಪಿ.ನಗರ 8ನೇ ಹಂತದ ಜಂಬೂ ಸವಾರಿ ದಿನ್ನೆಯಲ್ಲಿ ಮತ ಚಲಾಯಿಸಲು ಬಂದ ಮಹಿಳೆಯೊಬ್ಬರಿಗೆ ಹೃದಯ ಸ್ತಂಭನ (cardiac arrest) ಆಗಿದೆ. ಬಳಿಕ ಅಲ್ಲಿಯೇ ಮತ ಚಲಾಯಿಸಲು ಬಂದಿದ್ದರಿಂದ ಅವರ ಜೀವ ಉಳಿದಿದೆ. ಜೆ.ಪಿ. ನಗರದ 8ನೇ ಹಂತದ ಜಂಬೂ ಸವಾರಿ ದಿನ್ನೆಯಲ್ಲಿ ಮಹಿಳೆಯೊಬ್ಬರು ಮತದಾನ ಮಾಡಲು ಬಂದಿದ್ದಾರೆ. ಅವರು ಆಯಾಸವಾಗಿದೆ ಎಂದು ಮತಗಟ್ಟೆಯಲ್ಲಿ ಇಟ್ಟಿದ್ದ ನೀರು ಕುಡಿಯಲು ಹೋಗಿದ್ದಾರೆ. ಅದೇ ವೇಳೆಗೆ ಅವರು ಕುಸಿದು ಬಿದ್ದಿದ್ದಾರೆ. ಅದೇ ಸಮಯದಲ್ಲಿ ಅಲ್ಲಿಗೆ ಬಂದಿದ್ದ ಬೊಮ್ಮಸಂದ್ರದ ನಾರಾಯಣ ಆರೋಗ್ಯ ಕೇಂದ್ರದ ಮೂತ್ರಪಿಂಡ ತಜ್ಞ ಡಾ. ಗಣೇಶ್ ಶ್ರೀನಿವಾಸ ಪ್ರಸಾದ್ ಅವರು ರಕ್ಷಣೆಗೆ ದಾವಿಸಿದ್ದಾರೆ.

ನಾಡಿಮಿಡಿತವನ್ನು ಪರಿಶೀಲಿಸಿದ ಡಾ. ಗಣೇಶ್ ಶ್ರೀನಿವಾಸ ಪ್ರಸಾದ್, ಪಲ್ಸ್‌ ರೇಟ್‌ ಕಡಿಮೆಯಾಗುತ್ತಿರುವುದನ್ನು ಗಮನಿಸಿದ್ದಾರೆ. ಆ ಸಮಯದಲ್ಲಿ ದೇಹ ಕೂಡ ಯಾವುದೇ ಸ್ಪಂದನೆಯನ್ನು ಮಾಡುತ್ತಿರಲಿಲ್ಲ. ಹೀಗಾಗಿ ಕೂಡಲೇ ಸಿಪಿಆರ್‌ ಮಾಡಿದ್ದು, ಪರಿಸ್ಥಿತಿಯು ಕೊಂಚ ಮಟ್ಟಿಗೆ ಸುಧಾರಿಸುವಂತೆ ಮಾಡಿದ್ದಾರೆ. ಚುನಾವಣಾ ಕರ್ತವ್ಯದಲ್ಲಿದ್ದವರು ಧಾವಿಸಿ ಜ್ಯೂಸ್ ನೀಡಿದ್ದಾರೆ. ಕೂಡಲೇ ಆಂಬ್ಯುಲೆನ್ಸ್‌ಗೆ ಕರೆ ಮಾಡಲಾಗಿದೆ. ಐದು ನಿಮಿಷದೊಳಗೆ ಮತಗಟ್ಟೆ ಬಳಿ ಆಂಬ್ಯುಲೆನ್ಸ್ ಬಂದಿದ್ದು, ಮಹಿಳೆಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Continue Reading

Lok Sabha Election 2024

Modi in Karnataka: ನಾಳೆ ರಾಜ್ಯಕ್ಕೆ ಮೋದಿ, ಬೆಳಗಾವಿಯಲ್ಲಿ ವಾಸ್ತವ್ಯ; 2 ದಿನ ಪ್ರವಾಸ, 5 ಕಡೆ ಬೃಹತ್‌ ಸಮಾವೇಶ

Modi in Karnataka: ಏಪ್ರಿಲ್ 28 ರಂದು ಬೆಳಗಾವಿ ಸೇರಿದಂತೆ ರಾಜ್ಯದ ನಾಲ್ಕು ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗಿಯಾಗಲಿದ್ದಾರೆ. ಆದರೆ, ಏಪ್ರಿಲ್ 29ರಂದು ಒಂದೇ ಸಮಾವೇಶದಲ್ಲಿ ಭಾಗಿಯಾಗಲಿದ್ದು, ಬಳಿಕ ಅಲ್ಲಿಂದ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ಹೀಗಾಗಿ ಮೋದಿ ಕರ್ನಾಟಕದ ಕೆಲವು ಕ್ಷೇತ್ರಗಳಲ್ಲಿ ಪ್ರಚಾರವನ್ನು ಕೈಬಿಟ್ಟಿದ್ದಾರೆ. ಇದಕ್ಕೂ ಮುಂಚೆ ಮೋದಿ ಪ್ರವಾಸದಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ. ಹೀಗಾಗಿ ಕಲಬುರಗಿ, ಕೊಪ್ಪಳ, ರಾಯಚೂರು ಜಿಲ್ಲೆಗಳಿಗೆ ಮೋದಿ ಸಮಾವೇಶ ಇತ್ತು ಎನ್ನಲಾಗಿತ್ತು. ಆದರೆ, ಅದರಲ್ಲೀಗ ಬದಲಾವಣೆಯಾಗಿದೆ.

VISTARANEWS.COM


on

Modi in Karnataka stay in Belagavi tomorrow and Huge gatherings at five places
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಈಗಾಗಲೇ ಒಂದು ಸುತ್ತಿನ ಮತ ಬೇಟೆ ಮುಗಿಸಿ ತೆರಳಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಎರಡನೇ ಹಂತದ ಚುನಾವಣೆಗೆ ರಿಎಂಟ್ರಿ ಕೊಡಲಿದ್ದಾರೆ. ಈ ವೇಳೆ ಮೋದಿ (Modi in Karnataka) ಎರಡು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಏಪ್ರಿಲ್‌ 28 ಹಾಗೂ 29ರಂದು ಕರ್ನಾಟಕದಲ್ಲಿ ಜನರನ್ನು ಮೋಡಿ ಮಾಡಲು ಮೋದಿ ಮುಂದಾಗಿದ್ದಾರೆ. ಈ ಸಂಬಂಧ ಶನಿವಾರ ರಾತ್ರಿಯೇ ಬೆಳಗಾವಿಗೆ ಆಗಮಿಸಲಿದ್ದು, ಅಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ.

ಏಪ್ರಿಲ್ 28 ರಂದು ಬೆಳಗಾವಿ ಸೇರಿದಂತೆ ರಾಜ್ಯದ ನಾಲ್ಕು ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗಿಯಾಗಲಿದ್ದಾರೆ. ಆದರೆ, ಏಪ್ರಿಲ್ 29ರಂದು ಒಂದೇ ಸಮಾವೇಶದಲ್ಲಿ ಭಾಗಿಯಾಗಲಿದ್ದು, ಬಳಿಕ ಅಲ್ಲಿಂದ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ಹೀಗಾಗಿ ಮೋದಿ ಕರ್ನಾಟಕದ ಕೆಲವು ಕ್ಷೇತ್ರಗಳಲ್ಲಿ ಪ್ರಚಾರವನ್ನು ಕೈಬಿಟ್ಟಿದ್ದಾರೆ.

ಶನಿವಾರ (ಏಪ್ರಿಲ್‌ 27) ರಾತ್ರಿ 8:45ಕ್ಕೆ ಬೆಳಗಾವಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಹೀಗಾಗಿ ಬೆಳಗಾವಿಯಲ್ಲೇ ಪ್ರಧಾನಿ ಮೋದಿ ವಾಸ್ತವ್ಯ ಹೂಡಲಿದ್ದಾರೆ. ಏಪ್ರಿಲ್‌ 28ರ ಬೆಳಗ್ಗೆ 11 ಗಂಟೆಗೆ ಬೆಳಗಾವಿಯ ಸಮಾವೇಶದಲ್ಲಿ ಮೋದಿ ಭಾಗಿಯಾಗಲಿದ್ದಾರೆ. 11:40ರ ವರೆಗೂ ಬೆಳಗಾವಿಯಲ್ಲಿ ಸಮಾವೇಶ ನಡೆಯಲಿದ್ದು, ಬಳಿಕ ಅಲ್ಲಿಂದ ಉತ್ತರ ಕನ್ನಡ ಜಿಲ್ಲೆಗೆ ಮೋದಿ ಪ್ರಯಾಣ ಬೆಳೆಸಲಿದ್ದಾರೆ.

ಶಿರಸಿಯಲ್ಲಿ ಬೃಹತ್‌ ಸಮಾವೇಶ

ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಪಕ್ಷದ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಮತಯಾಚನೆ ಮಾಡಲಿದ್ದಾರೆ. ಅಲ್ಲಿ ಮಧ್ಯಾಹ್ನ 1 ರಿಂದ 1.50ರ ವರೆಗೂ ನಡೆಯಲಿರುವ ಬೃಹತ್‌ ಸಮಾವೇಶದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಅಲ್ಲಿಂದ ದಾವಣಗೆರೆ ಜಿಲ್ಲೆಗೆ ಪ್ರಯಾಣ ಬೆಳೆಸಲಿರುವ ಪ್ರಧಾನಿ ನರೇಂದ್ರ ಮೋದಿ, ಮಧ್ಯಾಹ್ನ 3 ರಿಂದ 3.50 ವರೆಗೂ ನಡೆಯಲಿರುವ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಬಳ್ಳಾರಿ ಜಿಲ್ಲೆಗೆ ಪ್ರಧಾನಿ ಮೋದಿ ಪ್ರಯಾಣಿಸಲಿದ್ದಾರೆ. ಅಲ್ಲಿನ ಪುನೀತ್ ರಾಜ್‍ಕುಮಾರ್ ಆಟದ ಮೈದಾನದಲ್ಲಿ ಸಂಜೆ 5ರಿಂದ 5.50ರ ವರೆಗೂ ಮೋದಿ ಸಮಾವೇಶದಲ್ಲಿ ಮಾತನಾಡಲಿದ್ದಾರೆ.

ಏಪ್ರಿಲ್ 28ರಂದು ರಾತ್ರಿ ಬಳ್ಳಾರಿಯ ಹೊಸಪೇಟೆಯಲ್ಲೇ ನರೇಂದ್ರ ಮೋದಿ ವಾಸ್ತವ್ಯ ಹೂಡಲಿದ್ದಾರೆ. ಮರುದಿನ ಏಪ್ರಿಲ್‌ 29ರಂದು ಬಳ್ಳಾರಿಯಿಂದ ಬಾಗಲಕೋಟೆಗೆ ಪ್ರವಾಸ ಮಾಡಲಿರುವ ಮೋದಿ, ಬಾಗಲಕೋಟೆಯಲ್ಲಿ ಮಧ್ಯಾಹ್ನ 12 ರಿಂದ, 12.55 ರವರೆಗೂ ನಡೆಯಲಿರುವ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಬಾಗಲಕೋಟೆಯಿಂದ ಮಹಾರಾಷ್ಟ್ರಕ್ಕೆ‌ ಮೋದಿ ಪ್ರಯಾಣ ಬೆಳೆಸಲಿದ್ದಾರೆ.

2ನೇ ಹಂತದ ಚುನಾವಣೆಗೆ ಬಿಜೆಪಿ ಪ್ಲ್ಯಾನ್‌ ರೆಡಿ

ಮೊದಲ ಹಂತದ ಚುನಾವಣೆಗೆ ಏಪ್ರಿಲ್‌ 26ರಂದು ಮತದಾನ ನಡೆಯುವುದರಿಂದ ಕರ್ನಾಟಕದಲ್ಲಿನ 2ನೇ ಹಂತದ ಚುನಾವಣೆ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕರೆಸಲಾಗುತ್ತಿದೆ. ಉತ್ತರ ಕರ್ನಾಟಕ ಸೇರಿದಂತೆ ಹಲವು ಕಡೆ ಮೋದಿ ಅಭಿಮಾನಿಗಳು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಅಲ್ಲದೆ, ಯುವ ಸಮುದಾಯಕ್ಕೆ ಮೋದಿ ಅಚ್ಚುಮೆಚ್ಚು. ಇಂತಹ ಯುವ ವರ್ಗದ ಮತಗಳನ್ನು ಸಾಕಷ್ಟು ಸಂಖ್ಯೆಯಲ್ಲಿ ಸೆಳೆಯಲು ಪ್ಲ್ಯಾನ್‌ ಮಾಡಿಕೊಳ್ಳಲಾಗಿದೆ.

ಇವಿಎಂನಲ್ಲಿ ನಿಮ್ಮ ಮತ ದಾಖಲಾಗುವುದು ಹೇಗೆ? ವಿವಿಪ್ಯಾಟ್‌ ಕೆಲಸ ಏನು? ಇಲ್ಲಿದೆ ಸಮಗ್ರ ವಿವರ

ವಿದ್ಯುನ್ಮಾನ ಮತಯಂತ್ರಗಳ (EVM- ಇವಿಎಂ) ಕುರಿತು ಸುಪ್ರೀಂ ಕೋರ್ಟ್‌ನಲ್ಲಿ (Supreme Court) ಕಾನೂನು ಹೋರಾಟದ ನಡುವೆಯೇ ಲೋಕಸಭೆ ಚುನಾವಣೆ (Lok Sabha Election 2024) ಮೊದಲ ಹಂತದ ಮತದಾನ (1st phase Voting) ನಡೆಯುತ್ತಿದೆ. ಇವಿಎಂಗಳಲ್ಲಿ ಚಲಾವಣೆಯಾದ 100% ಮತಗಳನ್ನೂ ವಿವಿಪ್ಯಾಟ್ (VVPAT) ವ್ಯವಸ್ಥೆಯ ಮೂಲಕ ಪರಿಶೀಲಿಸುವ ವ್ಯವಸ್ಥೆ ಜಾರಿ ಮಾಡಬೇಕು (VVPAT Verification) ಎಂದು ಅರ್ಜಿದಾರರು ಕೋರಿದ್ದಾರೆ. ಈ ಸಂದರ್ಭದಲ್ಲಿ, ಇವಿಎಂ ವ್ಯವಸ್ಥೆ ಹೇಗೆ ಕೆಲಸ ಮಾಡುತ್ತದೆ, ವಿವಿಪ್ಯಾಟ್‌ ಮೂಲಕ ಅದರ ಪರಿಶೀಲನೆ ಹೇಗೆ, ಎಂಬುದನ್ನು ವಿವರವಾಗಿ ತಿಳಿಯೋಣ.

ಕೋರ್ಟ್‌ನಲ್ಲಿ ನಡೆಸದ ವಾದವಿವಾದಗಳ ಸಮಯದಲ್ಲಿ, ಬ್ಯಾಲೆಟ್ ವೋಟಿಂಗ್ ಸಿಸ್ಟಮ್‌ಗೆ ಹಿಂತಿರುಗಲು ಸಲಹೆಗಳು ಬಂದಿವೆ. ಅರ್ಜಿದಾರರು ಯುರೋಪಿಯನ್ ರಾಷ್ಟ್ರಗಳ ಉದಾಹರಣೆ ತೋರಿಸಿದ್ದಾರೆ. ಆದರೆ, “ಪಶ್ಚಿಮ ಬಂಗಾಳದ ಜನಸಂಖ್ಯೆಯೇ ಜರ್ಮನಿಗಿಂತ ಹೆಚ್ಚಿರುವುದನ್ನು ಗಮನಿಸಿ. ಇಂತಹ ಹೋಲಿಕೆಗಳನ್ನು ಮಾಡಬೇಡಿ” ಎಂದು ನ್ಯಾಯಾಲಯವು ಅರ್ಜಿದಾರರಿಗೆ ಹೇಳಿದೆ. ನಿನ್ನೆ, ಭಾರತೀಯ ಚುನಾವಣಾ ಆಯೋಗದ ವಕೀಲರು ಇವಿಎಂ ವ್ಯವಸ್ಥೆಯು ಹೇಗೆ ಕಾರ್ಯನಿರ್ವಹಿಸುತ್ತದೆ ಮತ್ತು ಯಾವುದೇ ರೀತಿಯ ಟ್ಯಾಂಪರಿಂಗ್ ವಿರುದ್ಧ ಹೇಗೆ ದೋಷರಹಿತವಾಗಿದೆ ಎಂಬುದನ್ನು ವಿವರಿಸಿದರು.

ಇವಿಎಂ ಕೆಲಸ ಮಾಡುವುದು ಹೇಗೆ?

EVM ಎರಡು ಘಟಕಗಳನ್ನು ಹೊಂದಿದೆ- ನಿಯಂತ್ರಣ ಘಟಕ ಮತ್ತು ಮತದಾನ ಘಟಕ. ಇವುಗಳನ್ನು ಕೇಬಲ್ ಮೂಲಕ ಸಂಪರ್ಕಿಸಲಾಗಿದೆ. ಇವಿಎಂ ನಿಯಂತ್ರಣ ಘಟಕವು ಪೋಲಿಂಗ್ ಆಫೀಸರ್‌ ಬಳಿ ಇರುತ್ತದೆ. ಮತಯಂತ್ರ ಸಾಮಾನ್ಯವಾಗಿ ಮತದಾರನ ಖಾಸಗಿತನಕ್ಕಾಗಿ ಮುಚ್ಚಿದ ಆವರಣದೊಳಗೆ ಇರುತ್ತದೆ.

ಮತಗಟ್ಟೆಯಲ್ಲಿ, ಮತಗಟ್ಟೆ ಅಧಿಕಾರಿಯು ನಿಮ್ಮ ಗುರುತನ್ನು ಪರಿಶೀಲಿಸುತ್ತಾರೆ. ನಂತರ ನೀವು ಮತ ​​ಚಲಾಯಿಸಲು ಅನುವು ಮಾಡಿಕೊಡುವ ಬ್ಯಾಲೆಟ್ ಬಟನ್ ಅನ್ನು ಒತ್ತುತ್ತಾರೆ. ಬ್ಯಾಲೆಟ್ ಯೂನಿಟ್‌ನಲ್ಲಿ ಅಭ್ಯರ್ಥಿಗಳ ಹೆಸರುಗಳು ಮತ್ತು ಚಿಹ್ನೆಗಳು ಅವುಗಳ ಪಕ್ಕದಲ್ಲಿ ನೀಲಿ ಬಟನ್‌ಗಳಿರುತ್ತವೆ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯ ಹೆಸರಿನ ಮುಂದಿನ ಬಟನ್ ಅನ್ನು ಒತ್ತಬೇಕು.

ಮತದಾನ ಪ್ರಕ್ರಿಯೆ

ಮತಗಟ್ಟೆ ಅಧಿಕಾರಿಯ ನಿಯಂತ್ರಣ ಘಟಕವು ಬಹು ಬಟನ್‌ಗಳನ್ನು ಹೊಂದಿದೆ. ಅವುಗಳಲ್ಲಿ ಒಂದು ʼballot’ ಎಂಬ ಶೀರ್ಷಿಕೆಯಿದು. ಒಮ್ಮೆ ಅಧಿಕಾರಿಯು ಈ ಗುಂಡಿಯನ್ನು ಒತ್ತಿದರೆ, ʼಬ್ಯುಸಿ’ ಎಂಬ ಶೀರ್ಷಿಕೆಯ ಕೆಂಪು ದೀಪವು ಬೆಳಗುತ್ತದೆ. ಒಂದು ಮತವನ್ನು ದಾಖಲಿಸಲು ನಿಯಂತ್ರಣ ಘಟಕ ಸಿದ್ಧವಾಗಿದೆ ಎಂದು ಇದು ಸೂಚಿಸುತ್ತದೆ. ಮತದಾರ ಇರುವ ಬ್ಯಾಲೆಟ್ ಯೂನಿಟ್‌ನಲ್ಲಿ ಹಸಿರು ದೀಪ ಆನ್ ಆಗಿದ್ದು, ಮತದಾನಕ್ಕೆ ಯಂತ್ರ ಸಿದ್ಧವಾಗಿದೆ ಎಂದು ಸಂಕೇತಿಸುತ್ತದೆ. ನಂತರ ಮತದಾರನು ತನ್ನ ಆಯ್ಕೆಯ ಅಭ್ಯರ್ಥಿಯ ಹೆಸರಿನ ಮುಂದಿನ ಬಟನ್ ಅನ್ನು ಒತ್ತುತ್ತಾನೆ. ಬ್ಯಾಲೆಟ್ ಯೂನಿಟ್ ದೃಷ್ಟಿಹೀನ ಮತದಾರರಿಗೆ ಬ್ರೈಲ್ ಲಿಪಿಯನ್ನು ಸಹ ಹೊಂದಿದೆ.

ಮತದಾರರು ಮತದಾನ ಮಾಡಿದ ನಂತರ, ನಿಯಂತ್ರಣ ಘಟಕವು ಬೀಪ್ ಧ್ವನಿಯನ್ನು ಹೊರಸೂಸುತ್ತದೆ. ಇದು ಮತದಾನ ಪೂರ್ಣಗೊಂಡಿದೆ ಎಂದು ಸೂಚಿಸುತ್ತದೆ. ನಿಯಂತ್ರಣ ಘಟಕವು ಎಲ್‌ಇಡಿ ಪರದೆ ಮತ್ತು ಬಟನ್‌ಗಳನ್ನು ಹೊಂದಿದ್ದು, ಅದರಲ್ಲಿ ದಾಖಲಾಗಿರುವ ಒಟ್ಟು ಮತಗಳ ಸಂಖ್ಯೆಯನ್ನು ನೋಡಲು ಬಳಸಬಹುದು. ಎಲ್ಲಾ ಮತಗಳು ದಾಖಲಾದ ನಂತರ, ಮತಗಟ್ಟೆ ಅಧಿಕಾರಿಯು ನಿಯಂತ್ರಣ ಘಟಕದ ಬದಿಯಲ್ಲಿರುವ ಗುಂಡಿಯನ್ನು ಒತ್ತಿ, ಯಂತ್ರವನ್ನು ಮುಚ್ಚುತ್ತಾರೆ. ಎಣಿಕೆಯ ದಿನದಂದು, ಪ್ರತಿ ಅಭ್ಯರ್ಥಿ ಪಡೆದ ಒಟ್ಟು ಮತಗಳನ್ನು ನೋಡಲು ʼresult’ ಶೀರ್ಷಿಕೆಯ ಬಟನ್ ಅನ್ನು ಬಳಸಲಾಗುತ್ತದೆ. ನಿಯಂತ್ರಣ ಘಟಕದಿಂದ ಎಲ್ಲಾ ಡೇಟಾವನ್ನು ಅಳಿಸಲು ಬಳಸಬಹುದಾದ ʼclear’ ಬಟನ್ ಕೂಡ ಇದೆ.

VVPAT ಎಂದರೇನು?

VVPAT ಎಂದರೆ ವೋಟರ್ ವೆರಿಫೈಡ್ ಪೇಪರ್ ಆಡಿಟ್ ಟ್ರಯಲ್. ಮತವನ್ನು ಸರಿಯಾಗಿ ಚಲಾಯಿಸಲಾಗಿದೆಯೇ ಮತ್ತು ಮತದಾರ ಚಲಾಯಿಸಿದ ಅಭ್ಯರ್ಥಿಗೇ ಆ ಮತ ಹೋಗಿದೆಯೇ ಎಂದು ನೋಡಲು ಅವಕಾಶವಿರುವ ಯಂತ್ರ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯ ಹೆಸರಿನ ಮುಂದಿನ ಬಟನ್ ಅನ್ನು ಒಮ್ಮೆ ಒತ್ತಿದರೆ, ಕಂಟ್ರೋಲ್ ಯೂನಿಟ್ ಮತ್ತು ಬ್ಯಾಲೆಟ್ ಯೂನಿಟ್‌ಗೆ ಸಂಪರ್ಕಗೊಂಡಿರುವ VVPAT, ಏಳು ಸೆಕೆಂಡುಗಳ ಕಾಲ ಮತದಾರರಿಗೆ ಗೋಚರಿಸುವ ಕಾಗದದ ಸ್ಲಿಪ್ ಅನ್ನು ಉತ್ಪಾದಿಸುತ್ತದೆ. ಅದರ ನಂತರ, ಪೇಪರ್ ಸ್ಲಿಪ್ VVPAT ಯಂತ್ರದಲ್ಲಿರುವ ಡ್ರಾಪ್ ಬಾಕ್ಸ್‌ಗೆ ಬೀಳುತ್ತದೆ.

ಪ್ರಸ್ತುತ, ಪ್ರತಿ ಅಸೆಂಬ್ಲಿ ವಿಭಾಗದಲ್ಲಿಯೂ 5 ವಿವಿಪ್ಯಾಟ್ ಯಂತ್ರಗಳಲ್ಲಿ ದಾಖಲಾದ ಮತಗಳನ್ನು ಇವಿಎಂಗಳೊಂದಿಗೆ ಕ್ರಾಸ್-ಚೆಕ್ ಮಾಡಲಾಗುತ್ತದೆ. 100 ಶೇಕಡ ಇವಿಎಂಗಳಲ್ಲಿ ದಾಖಲಾದ ಮತಗಳೊಂದಿಗೆ ವಿವಿಪ್ಯಾಟ್ ಸ್ಲಿಪ್‌ಗಳನ್ನು ಕ್ರಾಸ್ ಚೆಕ್ ಮಾಡಬೇಕೆಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿಗಳು ಬಯಸಿವೆ. ವಿವಿಪ್ಯಾಟ್‌ನಲ್ಲಿ ಏಳು ಸೆಕೆಂಡ್ ಲೈಟ್ ಆನ್ ಆಗಿದ್ದು, ಮತದಾರರು ತಮ್ಮ ಮತವನ್ನು ಸರಿಯಾಗಿ ದಾಖಲಿಸಲಾಗಿದೆಯೇ ಎಂದು ಪರಿಶೀಲಿಸಬಹುದು ಎಂದು ಅರ್ಜಿದಾರರು ಕೋರಿದ್ದಾರೆ. ಪೇಪರ್ ಸ್ಲಿಪ್ ಅನ್ನು ಮತದಾರರಿಗೆ ನೀಡುವುದು ಮತ್ತೊಂದು ಸಲಹೆಯಾಗಿದೆ. ಚುನಾವಣಾ ಆಯೋಗ ಇದನ್ನು ವಿರೋಧಿಸಿದೆ. ಇದು ಮತದಾನದ ಗೌಪ್ಯತೆಯ ಮೇಲೆ ಪರಿಣಾಮ ಬೀರುತ್ತದೆ ಮತ್ತು ದುರ್ಬಳಕೆಯಾಗಬಹುದು ಎಂದು ಹೇಳಿದೆ.

ಇದನ್ನೂ ಓದಿ: Lok Sabha Election 2024: ಚಾಮರಾಜನಗರದಲ್ಲಿ ಮತ ಯಂತ್ರ ಪೀಸ್‌ ಪೀಸ್‌; ಮತಗಟ್ಟೆ ಧ್ವಂಸ, ಲಾಠಿ ಚಾರ್ಜ್‌!

ಸಮಯ ಉಳಿಕೆ

ಚುನಾವಣಾ ಆಯೋಗದ ಪ್ರಕಾರ ಇವಿಎಂ ವ್ಯವಸ್ಥೆ ಫೂಲ್ ಪ್ರೂಫ್ ಆಗಿದೆ. ಇದು ಮತ ಎಣಿಕೆ ಸಮಯವನ್ನು ಉಳಿಸುತ್ತದೆ, ಟ್ಯಾಂಪರ್ ಪ್ರೂಫ್ ಮತ್ತು ಬಳಕೆದಾರ ಸ್ನೇಹಿಯಾಗಿದೆ ಎಂದು ಚುನಾವಣಾ ಸಂಸ್ಥೆ ಹೇಳಿದೆ. ಇವಿಎಂಗಳು ಹಗುರವಾಗಿವೆ ಮತ್ತು ಸದೃಢವಾಗಿವೆ- ಮತಗಟ್ಟೆ ಅಧಿಕಾರಿಗಳು ದೂರದ ಕುಗ್ರಾಮಗಳು, ಗುಡ್ಡಗಾಡು ಪ್ರದೇಶಗಳನ್ನು ತಲುಪಲು ಟ್ರೆಕ್ಕಿಂಗ್‌ ಮಾಡಬೇಕಾದ ದೇಶದಲ್ಲಿ ಇದು ನಿರ್ಣಾಯಕವಾಗಿದೆ.

ಎಲ್ಲರ ಸಮ್ಮುಖದಲ್ಲಿ ಪರಿಶೀಲನೆ

ಇವಿಎಂಗಳಿಗೆ ವಿದ್ಯುತ್ ಅಗತ್ಯವಿಲ್ಲ ಮತ್ತು ಬ್ಯಾಟರಿ/ಪವರ್ ಪ್ಯಾಕ್‌ ಇದರೊಂದಿಗೆ ಬರುತ್ತದೆ. ಸ್ಥಿರವಾದ ವಿದ್ಯುತ್ ಸರಬರಾಜನ್ನು ಹೊಂದಿರದ ಪ್ರದೇಶಗಳಲ್ಲಿ ಮತದಾನವನ್ನು ಸಕ್ರಿಯಗೊಳಿಸಲು ಇದು ಮತ್ತೊಂದು ನಿರ್ಣಾಯಕ ವೈಶಿಷ್ಟ್ಯ. ಪ್ರತಿ ಚುನಾವಣೆಗೂ ಮುನ್ನ ಇವಿಎಂ ಮತ್ತು ವಿವಿಪ್ಯಾಟ್‌ಗಳ ಮೊದಲ ಹಂತದ ತಪಾಸಣೆ (ಎಫ್‌ಎಲ್‌ಸಿ) ನಡೆಸಲಾಗುತ್ತದೆ. ಈ ಪರಿಶೀಲನೆಯ ಸಮಯದಲ್ಲಿ, ಇವಿಎಂಗಳಲ್ಲಿನ ಡೇಟಾವನ್ನು ಅಳಿಸಲಾಗುತ್ತದೆ ಮತ್ತು ವಿವಿಧ ಘಟಕಗಳ ಕಾರ್ಯವನ್ನು ಪ್ರದರ್ಶಿಸಲಾಗುತ್ತದೆ. ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ಈ ಪರಿಶೀಲನೆ ನಡೆಸಲಾಗುತ್ತದೆ.

Continue Reading
Advertisement
ಕರ್ನಾಟಕ13 mins ago

Lok Sabha Election 2024: ಕರ್ನಾಟಕದಲ್ಲಿ ದಾಖಲೆಯ ಮತದಾನ; ಕಳೆದ ಬಾರಿಗಿಂತ ಏರಿಕೆ, ಮಂಡ್ಯದಲ್ಲಿ ಅತಿ ಹೆಚ್ಚು!

Mohammad Shami
ಪ್ರಮುಖ ಸುದ್ದಿ60 mins ago

Mohammad Shami : ಸರ್ಜರಿ ಗಾಯದ ನಡುವೆಯೂ ಮತದಾನ ಮಾಡಿದ ಮೊಹಮ್ಮದ್​ ಶಮಿ

Narendra modi
ಪ್ರಮುಖ ಸುದ್ದಿ1 hour ago

Lok Sabha Election : ಎನ್​ಡಿಎಗೆ ಶುಭ ಶಕುನ : 2ನೇ ಹಂತದ ಮತದಾನದ ಬಳಿಕ ಪ್ರಧಾನಿ ಮೋದಿ ಹೀಗಿತ್ತು

Udupi Sri Krishna Temple
ಕರ್ನಾಟಕ2 hours ago

Udupi Sri Krishna Temple: ಮತದಾನದ ದಿನ ಕಮಲಾರೂಢನಾದ ಉಡುಪಿ ಕೃಷ್ಣ! ಇಲ್ಲಿದೆ ಫೋಟೊ ಝಲಕ್‌

IPL 2024
ಕ್ರೀಡೆ2 hours ago

IPL 2024 : ಅಂಕಪಟ್ಟಿಯ ಅಗ್ರಸ್ಥಾನಿ ರಾಜಸ್ಥಾನ್​ಗೆ ಸವಾಲೊಡ್ಡುವುದೇ ಲಕ್ನೊ ಸೂಪರ್​ ಜೈಂಟ್ಸ್​​

Lok Sabha Election 2024 2 villagers who boycotted voting cast their votes in evening
ಕರ್ನಾಟಕ2 hours ago

Lok Sabha Election 2024: ಮತದಾನ ಬಹಿಷ್ಕರಿಸಿದ್ದ 2 ಗ್ರಾಮದ ಜನ, ಸಂಜೆಗೆ ಮನವೊಲಿಕೆ; 7 ಗಂಟೆ ದಾಟಿದರೂ ಮುಗಿಯದ ಮತದಾನ

Modi in Karnataka stay in Belagavi tomorrow and Huge gatherings at five places
Lok Sabha Election 20243 hours ago

Modi in Karnataka: ನಾಳೆ ರಾಜ್ಯಕ್ಕೆ ಮೋದಿ, ಬೆಳಗಾವಿಯಲ್ಲಿ ವಾಸ್ತವ್ಯ; 2 ದಿನ ಪ್ರವಾಸ, 5 ಕಡೆ ಬೃಹತ್‌ ಸಮಾವೇಶ

BJP National President JP Nadda Election campaign in Surapura
ಕರ್ನಾಟಕ3 hours ago

Lok Sabha Election 2024: ದೇಶದ ರಕ್ಷಣೆಗಾಗಿ ಮತ್ತೆ ಬಿಜೆಪಿಯನ್ನು ಬೆಂಬಲಿಸಿ: ಜೆ.ಪಿ.ನಡ್ಡಾ

deepfake
ತಂತ್ರಜ್ಞಾನ3 hours ago

Deep Fakes: ಶೇ. 75 ಭಾರತೀಯರು ಡೀಪ್‌ಫೇಕ್‌ಗೆ ಒಳಗಾಗಿದ್ದಾರೆ; ಗೊತ್ತಾಗಿದ್ದು ಶೇ.22 ಮಂದಿಗೆ ಮಾತ್ರ!

Lok Sabha Election 2024 Bjp workers clash in Chikmagalur
Lok Sabha Election 20243 hours ago

Lok Sabha Election 2024: ಚಿಕ್ಕಮಗಳೂರಲ್ಲಿ ಬಿಜೆಪಿ ಕಾರ್ಯಕರ್ತರ ಮಧ್ಯೆಯೇ ಮಾರಾಮಾರಿ; ಮುಖಂಡನ ತಲೆಗೆ ಏಟು!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ10 hours ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 202411 hours ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 202411 hours ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ17 hours ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ1 day ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ1 day ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ1 day ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20241 day ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ3 days ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

ಟ್ರೆಂಡಿಂಗ್‌