Site icon Vistara News

Cauvery Dispute: ಮಧ್ಯಂತರ ಆದೇಶಕ್ಕೆ ಸುಪ್ರೀಂ ಕೋರ್ಟ್ ನಕಾರ, ನೀರಿಗೆ ಬೇಡಿಕೆ ಇಟ್ಟಿದ್ದ ತಮಿಳುನಾಡಿಗೆ ಹಿನ್ನಡೆ

Supreme Court

Supreme Court Strikes Down Electoral Bonds Scheme: What Are The Reasons? What is the Scheme?

ನವದೆಹಲಿ: 24,000 ಕ್ಯುಸೆಕ್‌ ಕಾವೇರಿ ನೀರು ಬಿಡುಗಡೆಗೆ ತಮಿಳುನಾಡು (Tamil Nadu Plea) ಸಲ್ಲಿಸಿದ್ದ ಮನವಿಗೆ ಮಧ್ಯಂತರ ಆದೇಶ (No Interim Order) ನೀಡಲು ಸುಪ್ರೀಂ ಕೋರ್ಟ್‌ (Supreme Court) ಶುಕ್ರವಾರ ನಿರಾಕರಿಸಿದ್ದು, ನ್ಯಾಯಾಲಯಕ್ಕೆ ಈ ವಿಚಾರದಲ್ಲಿ ಯಾವುದೇ ಪರಿಣತಿ ಇಲ್ಲ ಎಂದು ಅಭಿಪ್ರಾಯಪಟ್ಟಿದೆ. ಈ ಮೊದಲು ಕರ್ನಾಟಕ ಸರ್ಕಾರವು(Karnataka Government) ಬಿಡುಗಡೆ ಮಾಡಿದ ನೀರಿನ ಪ್ರಮಾಣದ ಬಗ್ಗೆ ನ್ಯಾಯಾಲಯವು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದಿಂದ (Cauvery Water Management Authority – CWMA)ವರದಿ ಕೇಳಿದೆ.

ಜಸ್ಟೀಸ್ ಬಿ ಆರ್ ಗವಾಯಿ ನೇತೃತ್ವದ ತ್ರಿಸದಸ್ಯ ಪೀಠವು, ಈ ವರೆಗೆ ತಮಿಳುನಾಡಿಗೆ ಕರ್ನಾಟಕ ಬಿಡುಗಡೆ ಮಾಡಿರುವ ನೀರಿನ ಪ್ರಮಾಣದ ವರದಿ ನೀಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಸೂಚಿಸಿದೆ. ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯ ಭಾಟಿ ಅವರು ಸೋಮವಾರ ಪ್ರಾಧಿಕಾರದ ಸಭೆ ನಡೆಯಲಿದೆ ಎಂಬ ಮಾಹಿತಿಯನ್ನು ಪೀಠದ ಗಮನಕ್ಕೆ ತಂದರು.

ನಾವು ಈ ವಿಷಯದಲ್ಲಿ ಯಾವುದೇ ಪರಿಣತಿಯನ್ನು ಹೊಂದಿಲ್ಲ. ಮುಂದಿನ ಹದಿನೈದು ದಿನಗಳ ಕಾಲ ನೀರು ಬಿಡುವುದನ್ನು ನಿರ್ಧರಿಸಲು ಅಧಿಕಾರಿಗಳು ಸೋಮವಾರ ಸಭೆ ನಡೆಸುತ್ತಿದ್ದಾರೆ ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಅವರು ತಿಳಿಸಿದ್ದಾರೆ ಎಂದು ಪೀಠ ಹೇಳಿದೆ.

ನೀರು ಬಿಡಲು ನೀಡಿರುವ ನಿರ್ದೇಶನಗಳನ್ನು ಪಾಲಿಸಲಾಗಿದೆಯೇ ಅಥವಾ ಇಲ್ಲವೇ ಎಂಬುದರ ಕುರಿತು ಕಾವೇರ ನೀರು ನಿರ್ವಹಣಾ ಪ್ರಾಧಿಕಾರ ತನ್ನ ವರದಿಯನ್ನು ಪೀಠಕ್ಕೆ ಸಲ್ಲಿಸುವುದು ಸೂಕ್ತವಾಗುತ್ತದೆ ಎಂದು ನ್ಯಾಯಮೂರ್ತಿಗಳಾದ ಪಿ.ಎಸ್.ನರಸಿಂಹ ಮತ್ತು ಪಿ.ಕೆ.ಮಿಶ್ರಾ ಅವರನ್ನೊಳಗೊಂಡ ಪೀಠ ತಿಳಿಸಿತು.

ಈ ಸುದ್ದಿಯನ್ನೂ ಓದಿ: Cauvery water dispute : ಮೊದಲು ಪ್ರಾಧಿಕಾರಕ್ಕೆ ದೂರು ಕೊಡಿ ತಮಿಳುನಾಡಿಗೆ ಸುಪ್ರೀಂ ತಾಕೀತು; ಸೆ. 1ಕ್ಕೆ ವಿಚಾರಣೆ ಮುಂದೂಡಿಕೆ

ನಿಂತಿರುವ ಬೆಳೆಗಳಿಗೆ ಪ್ರತಿದಿನ 24,000 ಕ್ಯೂಸೆಕ್ ಕಾವೇರಿ ನೀರನ್ನು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್‌ಗೆ ನಿರ್ದೇಶನ ಕೋರಿ ತಮಿಳುನಾಡು ಮಾಡಿದ ಮನವಿಯನ್ನು ಕರ್ನಾಟಕ ಸರ್ಕಾರವು “ಸಂಪೂರ್ಣ ತಪ್ಪು ಕಲ್ಪನೆ” ಎಂದು ಬಣ್ಣಿಸಿದೆ. ಬೆಳೆದು ನಿಂತಿರುವ ಬೆಳೆಗಳಿಗೆ ಪ್ರತಿ ದಿನ 24 ಸಾವಿರ ಕ್ಯುಸೆಕ್ ಕಾವೇರಿ ನೀರು ಬಿಡುಗಡೆಗೆ ಕೋರಿ ತಮಿಳುನಾಡು ಸಲ್ಲಿಸಿರುವ ಅರ್ಜಿ ತಪ್ಪು ಕಲ್ಪನೆಯಿಂದ ಕೂಡಿದೆ ಎಂದು ಕರ್ನಾಟಕವು ಹೇಳಿದೆ. ಕರ್ನಾಟಕ ಸರ್ಕಾರವು ಅಫಿಡವಿಟ್ ಸಲ್ಲಿಸಿದ್ದು, ತಮಿಳುನಾಡಿನ ಮನವಿಯು “ಪ್ರಸ್ತುತ ಜಲ ವರ್ಷವು ಸಾಮಾನ್ಯ ನೀರಿನ ವರ್ಷವಾಗಿದೆ ಮತ್ತು ಸಂಕಷ್ಟದ ನೀರಿನ ವರ್ಷವಲ್ಲ” ಎಂಬ ತಪ್ಪು ಕಲ್ಪನೆಯನ್ನು ಆಧರಿಸಿದೆ ಎಂದು ಹೇಳಿದೆ.

ದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Exit mobile version