Cauvery Dispute : ಸಮರ್ಪಕ ವಾದ ಮಾಡದೆ ನಮಗೆ ಹಿನ್ನಡೆ; ಈಗಲಾದರೂ ಸ್ಟಾಲಿನ್‌ ಜತೆ ಮಾತಾಡಿ ಎಂದ ಬಿಎಸ್‌ವೈ - Vistara News

ಕರ್ನಾಟಕ

Cauvery Dispute : ಸಮರ್ಪಕ ವಾದ ಮಾಡದೆ ನಮಗೆ ಹಿನ್ನಡೆ; ಈಗಲಾದರೂ ಸ್ಟಾಲಿನ್‌ ಜತೆ ಮಾತಾಡಿ ಎಂದ ಬಿಎಸ್‌ವೈ

Cauvery Dispute : ಕಾವೇರಿ ವಿಚಾರದಲ್ಲಿ ಸರ್ಕಾರ ಸಮರ್ಪಕ ವಾದ ಮಾಡಿಲ್ಲ ಎಂದು ಬಿಎಸ್‌ ಯಡಿಯೂರಪ್ಪ ಹೇಳಿದರು. ಮೇಲ್ಮನವಿ ಮಾಡುವಂತೆ ಸರ್ಕಾರಕ್ಕೆ ಸಲಹೆ ನೀಡಿದರು.

VISTARANEWS.COM


on

BS Yediyurappa
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯ ಸರ್ಕಾರ (Karnataka Government) ಸಮರ್ಪಕ ವಾದ ಮಾಡದೆ ಇದ್ದುದರಿಂದ, ವಾಸ್ತವಿಕ ಸ್ಥಿತಿಯನ್ನು ಸಮರ್ಥವಾಗಿ ಮನದಟ್ಟು ಮಾಡಿಕೊಡಲು ವಿಫಲವಾಗಿದ್ದರಿಂದ ಕಾವೇರಿ ವಿಚಾರದಲ್ಲಿ ಸುಪ್ರೀಂಕೋರ್ಟ್‌ನಲ್ಲಿ (Supreme court) ರಾಜ್ಯಕ್ಕೆ ಹಿನ್ನಡೆಯಾಯಿತು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.‌ ಯಡಿಯೂರಪ್ಪ (BS Yediyurappa) ವಿಶ್ಲೇಷಿಸಿದ್ದಾರೆ.

ಸುಪ್ರೀಂಕೋರ್ಟ್‌ ತೀರ್ಪಿನ ಬಳಿಕ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸರ್ಕಾರ ನೀರು ಬಿಟ್ಟು ತಪ್ಪು ಮಾಡಿತು. ಈಗ ಕೋರ್ಟ್ ಮುಂದೆ ಸಮರ್ಪಕವಾದ ವಾದ ಮಂಡಿಸುವಲ್ಲಿ ವಿಫಲವಾಯಿತು. ಸರಿಯಾಗಿ ಹೋಂ ವರ್ಕ್ ಮಾಡದೆ ಕೋರ್ಟ್ ಮೆಟ್ಟಿಲೇರಿರುವುದು ಸಾಬೀತಾಗಿದೆ ಎಂದರು.

ಕೋರ್ಟ್ ಆದೇಶಕ್ಕೂ ಮೊದಲೇ ನೀರು ಬಿಟ್ಟು ತಪ್ಪು ಮಾಡಿದರು. ಈಗ ಕೋರ್ಟ್ ಲ್ಲಿ ಸರಿಯಾಗಿ ವಾದ ಮಂಡಿಸದೇ ವಿಫಲರಾದರು. ಈಗ ಮತ್ತೆ ತಪ್ಪು ಮಾಡುವುದು ಬೇಡ, ಮೇಲ್ಮನವಿ ಸಲ್ಲಿಸುವ ಕೆಲಸ ಆಗಬೇಕು ಎಂದು ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಸಲಹೆ ನೀಡಿದರು.

ಈಗಲಾದರೂ ಸ್ಟಾಲಿನ್‌ ಜತೆ ಮಾತನಾಡಿ

ಇನ್ನಾದರೂ ಕಾಂಗ್ರೆಸ್‌ ನಾಯಕರು ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಜತೆ ಮಾತುಕತೆ ನಡೆಸಿ ಸಮಸ್ಯೆಯನ್ನು ಬಗೆಹರಿಸಲು ಪ್ರಯತ್ನಿಸಬೇಕು ಎಂದು ಹೇಳಿದ್ದಾರೆ. ಸಮಸ್ಯೆಯನ್ನು ಬಗೆಹರಿಸುವಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡುವಂತೆ ಒತ್ತಾಯ ಮಾಡುವುದು ಸರಿಯಲ್ಲ, ಕಾಂಗ್ರೆಸ್ ತನ್ನ ಮಿತ್ರ ಪಕ್ಷವಾದ ಡಿಎಂಕೆಯ ನಾಯಕರ ಜೊತೆ ಮಾತನಾಡಬೇಕು ಎಂದು ಅವರು ಹೇಳಿದರು.

ಕಾವೇರಿ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್‌ ನಡುವೆ ವೈಮನಸ್ಸು ಇರುವುದು ಜಗಜ್ಜಾಹೀರಾಗಿದೆ ಎಂದೂ ಬಿ.ಎಸ್‌. ಯಡಿಯೂರಪ್ಪ ಹೇಳಿದರು.

ಮುಂದೇನು ಮಾಡಬೇಕು?: ಬಿಎಸ್‌ವೈ ಸಲಹೆಗಳು ಇಂತಿವೆ.

  1. ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆಯಾಗಿರುವುದರಿಂದ ಡಿಎಂಕೆ ನಾಯಕರ ಜತೆ ಮಾತುಕತೆ ನಡೆಸಿ ಪರಿಹಾರ ಕಂಡುಕೊಳ್ಳಬಹುದು. ಇದನ್ನು ಕಾಂಗ್ರೆಸ್‌ ನಾಯಕರು ಪ್ರಯತ್ನಿಸಬೇಕು.
  2. ಹೋಂ ವರ್ಕ್ ಮಾಡದೆ ಕೋರ್ಟ್ ಮೆಟ್ಟಿಲೇರಿರುವ ಸರಕಾರ ತಕ್ಷಣವೇ ಸುಪ್ರೀಂ ಕೋರ್ಟ್ ಆದೇಶಕ್ಕೆ ಮೇಲ್ಮನವಿ ಸಲ್ಲಿಸಿ ವಾಸ್ತವಿಕ ಪರಿಸ್ಥಿತಿ ವಿವರಿಸಬೇಕು.
  3. ಸುಪ್ರೀಂ ಕೋರ್ಟ್ನ ನ್ಯಾಯಾಧೀಶರ ಸಮಿತಿಯನ್ನು ರಾಜ್ಯಕ್ಕೆ ಕಳುಹಿಸಿ ಜಲಾಶಯಗಳಿಗೆ ಭೇಟಿ ಕೊಟ್ಟು ವಾಸ್ತವ ಸ್ಥಿತಿ ಅಧ್ಯಯನ ಮಾಡಲು ಆದೇಶ ನೀಡುವಂತೆ ಮೇಲ್ಮನವಿ ಸಲ್ಲಿಸಬೇಕು.
  4. ಪ್ರಾಧಿಕಾರದ ಆದೇಶಕ್ಕೆ ನಾವು ಮಧ್ಯ ಪ್ರವೇಶ ಮಾಡಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದ್ದರಿಂದ ಸುಪ್ರೀಂ ಕೋರ್ಟ್ ಜಲಾಶಯಗಳ ವೀಕ್ಷಣೆಗೆ ಯಾವುದಾದರೂ ಸಮಿತಿಯನ್ನು ಕಳುಹಿಸಿ ಕೊಡಲಿ ಇದನ್ನ ಸರ್ಕಾರ ಮೇಲ್ಮನವಿಯಲ್ಲಿ ಮನವಿ ಮಾಡಬೇಕು.

ಕಾವೇರಿ ಸಮಸ್ಯೆಗೆ ಡಿಎಂಕೆ-ಕಾಂಗ್ರೆಸ್‌ ಹೊಂದಾಣಿಕೆ ಕಾರಣ ಎಂದ ಬಿಎಸ್‌ವೈ

ಸರ್ಕಾರ ಮೊದಲಿನಿಂದಲು ಕಾವೇರಿ ವಿಚಾರದಲ್ಲಿ ತಪ್ಪು ಮಾಡಿಕೊಂಡು ಬಂದಿದೆ. ಡಿಎಂಕೆ ಹಾಗೂ ಕಾಂಗ್ರೆಸ್ ನಡುವೆ ಹೊಂದಾಣಿಕೆ ಕೂಡಾ ಇದಕ್ಕೆ ಒಂದು ಕಾರಣ ಎಂದು ಯಡಿಯೂರಪ್ಪ ಆಕ್ಷೇಪಿಸಿದರು.

ʻʻರಾಜ್ಯಕ್ಕೆ ಬಹಳ ಇಕ್ಕಟ್ಟಿನ ಪರಿಸ್ಥಿತಿ ಇದೆ. ಸುಪ್ರೀಂಕೋರ್ಟ್‌ ಹೇಳಿದಂತೆ ನೀರು ಬಿಟ್ಟರೆ ಕುಡಿಯುವ ನೀರಿನ ಹಾಹಾಕಾರ ಎದುರಾಗಲಿದೆ. ಆಗ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಮಸ್ಯೆ ಎದುರಾಗುತ್ತದೆ. ರಾಜ್ಯದ ಜನ ಕಾನೂನು ಸುವ್ಯವಸ್ಥೆ ಕಾಪಾಡಬೇಕು. ಕಾನೂನು ಹೋರಾಟ ಮುಂದುವರಿಸುವಂತೆ ಸರ್ಕಾರಕ್ಕೆ ಒತ್ತಾಯ ಮಾಡೋಣʼʼ ಎಂದು ಹೇಳಿದರು.

ಇದನ್ನೂ ಓದಿ: Cauvery Dispute : ಸುಪ್ರೀಂ ಆದೇಶ ಪಾಲಿಸಿದರೆ ಬರಿದಾಗಲಿದೆ KRS; ಇಕ್ಕಟ್ಟಿನಲ್ಲಿ ರಾಜ್ಯ ಸರ್ಕಾರ, ಎಲ್ಲಿಂದ ತರೋದು ನೀರು?

ಪಾದಯಾತ್ರೆಯಿಂದ ಕಾವೇರಿ ಸಮಸ್ಯೆ ಬಗೆಹರಿಯದು ಎಂದು ಬಿಎಸ್‌ವೈ

ಕಾವೇರಿ ವಿಚಾರದಲ್ಲಿ ಬಿಜೆಪಿ ಹೋರಾಟ ವಿಚಾರದ ಬಗ್ಗೆ ಪ್ರಸ್ತಾಪಿಸಿದಾಗ, ʻʻಹೋರಾಟ ಮಾಡುವುದೇನಿದೆ? ರಾಜ್ಯ ಸರ್ಕಾರ ಕಾನೂನು ಹೋರಾಟ ಮುಂದುವರಿಸಬೇಕು. ರಾಜ್ಯದ ಜನ ಕಾನೂನು ಸುವ್ಯವಸ್ಥೆ ಕಾಪಾಡಬೇಕುʼʼ ಎಂದರು. ಪಾದಯಾತ್ರೆಯಿಂದ ಯಾವುದೇ ಪ್ರಯೋಜನ ಆಗುವುದಿಲ್ಲ. ಇದು ಕೋರ್ಟ್ ಕೆಲಸ ಎಂದರು ಬಿಎಸ್‌ವೈ.

ಬಿಜೆಪಿ ಜತೆ ಮೈತ್ರಿ ಬಗ್ಗೆ ಚರ್ಚೆ ಮಾಡಲು ಜೆಡಿಎಸ್‌ ನಾಯಕ ಎಚ್‌.ಡಿ ಕುಮಾರಸ್ವಾಮಿ ದೆಹಲಿಗೆ ಹೋದ ವಿಚಾರದ ಬಗ್ಗೆ ಕೇಳಿದಾಗ ನನಗೆ ಯಾವುದೇ ಮಾಹಿತಿ ಇಲ್ಲ. ಮೈತ್ರಿ ಬಗ್ಗೆ ವರಿಷ್ಠರು ನಿರ್ಧಾರ ಮಾಡ್ತಾರೆ ಎಂದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Road Accident: ರಾಜಕಾಲುವೆಗೆ ಬಿದ್ದು ಕೊಚ್ಚಿಕೊಂಡು ಹೋದ ಬೈಕ್‌ ಸವಾರ

Road Accident: ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ರಾತ್ರಿ ಸುಮಾರು 10:30ಕ್ಕೆ ಈ ದುರ್ಘಟನೆ ನಡೆದಿದೆ. ಜ್ಞಾನ ಭಾರತಿ ಮೆಟ್ರೋ ಸ್ಟೆಷನ್ ಬಳಿ ವೇಗವಾಗಿ ಬೈಕ್‌ ಚಲಾಯಿಸಿದ್ದರಿಂದ, ಬೈಕ್‌ ಡಿವೈಡರ್‌ಗೆ ಗುದ್ದಿದ ಪರಿಣಾಮ ಸವಾರ ಚಿಮ್ಮಿ ರಾಜಕಾಲುವೆ ಒಳಗೆ ಬಿದ್ದಿದ್ದಾರೆ. ಸಣ್ಣದಾಗಿ ಮಳೆ ಬರುತ್ತಿದ್ದುದರಿಂದ ಡಿವೈಡರ್‌ ಗುರುತಿಸಲು ಸಾಧ್ಯವಾಗಿರಲಿಕ್ಕಿಲ್ಲ.

VISTARANEWS.COM


on

road accident bike
Koo

ಬೆಂಗಳೂರು: ವೇಗವಾಗಿ ಬೈಕ್‌ ಚಲಾಯಿಸಿದ (Bike Rider) ಸವಾರರೊಬ್ಬರು ರಾಜಕಾಲುವೆ (Rajakaluve) ಪಾಲಾದ ಘಟನೆ (Road Accident) ಕೆಂಗೇರಿಯಲ್ಲಿ (Kengeri) ನಡೆದಿದೆ. ಮೋರಿಗೆ ಬಿದ್ದು ನಾಪತ್ತೆಯಾಗಿರುವ ಬೈಕ್ ಸವಾರನನ್ನು ಬ್ಯಾಟರಾಯನಪುರದ ಹೇಮಂತ ಕುಮಾರ್ (27) ಎಂದು ಗುರುತಿಸಲಾಗಿದೆ.

ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ರಾತ್ರಿ ಸುಮಾರು 10:30ಕ್ಕೆ ಈ ದುರ್ಘಟನೆ ನಡೆದಿದೆ. ಜ್ಞಾನ ಭಾರತಿ ಮೆಟ್ರೋ ಸ್ಟೆಷನ್ ಬಳಿ ವೇಗವಾಗಿ ಬೈಕ್‌ ಚಲಾಯಿಸಿದ್ದರಿಂದ, ಬೈಕ್‌ ಡಿವೈಡರ್‌ಗೆ ಗುದ್ದಿದ ಪರಿಣಾಮ ಸವಾರ ಚಿಮ್ಮಿ ರಾಜಕಾಲುವೆ ಒಳಗೆ ಬಿದ್ದಿದ್ದಾರೆ. ಸಣ್ಣದಾಗಿ ಮಳೆ ಬರುತ್ತಿದ್ದುದರಿಂದ ಡಿವೈಡರ್‌ ಗುರುತಿಸಲು ಸಾಧ್ಯವಾಗಿರಲಿಕ್ಕಿಲ್ಲ.

ಕೂಡಲೇ ಅಗ್ನಿಶಾಮಕದಳದ ಸಿಬ್ಬಂದಿಯನ್ನು ಕರೆಸಿ ಕಾರ್ಯಾಚರಣೆ ನಡೆಸಲಾಯಿತಾದರೂ, ಸವಾರನ ಪತ್ತೆಯಾಗಲಿಲ್ಲ. ರಾಜಕಾಲುವೆಯಲ್ಲಿ ಸುಮಾರು 4 ಅಡಿ ನೀರು ತುಂಬಿದ್ದು, ಈ ನೀರಿನಲ್ಲಿ ವ್ಯಕ್ತಿ ಕೊಚ್ಚಿ ಹೋಗಲು ಸಾಧ್ಯವೇ ಎಂಬ ಅನುಮಾನವೂ ಮೂಡಿದೆ. ಕಾರ್ಯಾಚರಣೆ ನೋಡಲು ಜನ ನಿಂತ ಪರಿಣಾಮ ರಾತ್ರಿ ಮೈಸೂರು ರೋಡ್‌ನಲ್ಲಿ ಟ್ರಾಫಿಕ್ ಜಾಮ್ ಉಂಟಾಯಿತು. ರಾತ್ರಿ ಶೋಧ ಸ್ಥಗಿತಗೊಂಡಿದ್ದು, ಬೆಳಗ್ಗೆ ಮತ್ತೆ ಪುನರಾರಂಭಗೊಂಡಿದೆ.

ಪ್ರೀತಿಸುವ ನಾಟಕವಾಡಿ ಕೈಕೊಟ್ಟ ಯುವಕನಿಗೆ ಚಳಿ ಬಿಡಿಸಿದ ಗರ್ಭಿಣಿ

ಚಿಕ್ಕಬಳ್ಳಾಪುರ: ಪ್ರಿಯಕರನೊಬ್ಬ ಪ್ರೀತಿಸುವ ನಾಟಕವಾಡಿ ಏಳು ತಿಂಗಳ ಗರ್ಭಿಣಿ ಮಾಡಿ ಕೈಕೊಟ್ಟಿರುವ (Lovers Fighting) ಘಟನೆ ಚಿಕ್ಕಬಳ್ಳಾಪುರದ ಬಾಗೇಪಲ್ಲಿಯಲ್ಲಿ ನಡೆದಿದೆ. ನಡುರಸ್ತೆಯಲ್ಲೇ ಪ್ರೇಮಿಗಳು ರಂಪಾಟ ನಡೆಸಿದ್ದು, ಬಳಿಕ ಪರಿಸ್ಥಿತಿ ಹೊಡೆದಾಟ ಬಡೆದಾಟಕ್ಕೂ (Cheating Case) ಹೋಗಿದೆ. ಬಾಗೇಪಲ್ಲಿ ತಾಲೂಕಿನ ಮಲ್ಲಸಂದ್ರ ಗ್ರಾಮದ ನಿವಾಸಿಗಳಾದ ಸೂರ್ಯಪ್ರಕಾಶ್‌, ಗಗನ ಎಂಬುವವರ ರಂಪಾಟವನ್ನು ಸ್ಥಳೀಯರು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ.

ಸೂರ್ಯಪ್ರಕಾಶ ಹಾಗೂ ಗಗನ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಗಗನ ಯಾವಾಗ ಮದುವೆ ವಿಷಯ ಪ್ರಸ್ತಾಪ ಮಾಡಿದ್ದಳೋ ಆಗ ಅಂತರ ಕಾಯ್ದುಕೊಳ್ಳಲು ಮುಂದಾಗಿದ್ದ. ಸೂರ್ಯಪ್ರಕಾಶ್ ಮದುವೆಯನ್ನು ನಿರಾಕರಿಸಿದಾಗ ಆತನ ವಿರುದ್ಧ ಗಗನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಳು.

ದೂರು ದಾಖಲಾಗುತ್ತಿದ್ದಂತೆ ಸೂರ್ಯ ಪ್ರಕಾಶ್‌ ಪೋಷಕರು ಮದುವೆ ಮಾಡಿಸುವುದಾಗಿ ನಂಬಿಸಿ ಬೇಲ್ ಪೇಪರ್ ಮೇಲೆ ಸಹಿ ಮಾಡಿಸಿಕೊಂಡಿದ್ದರು. ಬೇಲ್ ಪಡೆದ ಬಳಿಕ ಪ್ರಿಯಕರನ ಪೋಷಕರು ಉಲ್ಟಾ ಹೊಡೆದಿದ್ದರು. ಇದರಿಂದ ರೋಸಿ ಹೋದ ಗಗನ ಮದುವೆಯಾಗುವಂತೆ ಸೂರ್ಯನನ್ನು ನಡುಬೀದಿಯಲ್ಲಿ ನಿಲ್ಲಿಸಿದ್ದಳು. ಪ್ರೇಮಿಗಳ ನಡುವಿನ ಮಾತಿನ ಚಕಮಕಿ ಹಾಗೂ ಪರಸ್ಪರ ಹೊಡೆದಾಟ ಬಡೆದಾಟವನ್ನು ಸ್ಥಳೀಯರು ವಿಡಿಯೊ ಮಾಡಿಕೊಂಡಿದ್ದರು.

ಠಾಣೆ ಮೆಟ್ಟಿಲೇರಿದ್ದ ಯುವತಿ

ಪ್ರೀತಿ ಹೆಸರಲ್ಲಿ ತನ್ನನ್ನು ಗರ್ಭಿಣಿ (Pregnant) ಮಾಡಿ ವಂಚಿಸಿ (Fraud Case) ಪ್ರಿಯಕರ ಪರಾರಿಯಾಗಿದ್ದಾನೆ ಎಂದು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲ್ಲೂಕಿನ ಗಗನ ಪೊಲೀಸರಿಗೆ ದೂರು ನೀಡಿದ್ದಳು. ಇದೀಗ ಆಕೆ ಗರ್ಭಿಣಿ ಆಗಿದ್ದು, ಪ್ರಿಯಕರನನ್ನು ಹುಡುಕಿ ಕೊಡುವಂತೆ ಪೊಲೀಸ್ ಠಾಣೆಗೆ ದೂರು ನೀಡಿದ್ದಳು.

ಕಾಲೇಜಿನಲ್ಲಿ ಓದುವಾಗಲೇ ಈ ಜೋಡಿ ಪರಸ್ಪರ ಪ್ರೀತಿಸಿದ್ದರು. ತನ್ನನ್ನು ವಿವಾಹ ಆಗುವುದಾಗಿ ನಂಬಿಸಿ ತನ್ನನ್ನು ಬಳಸಿಕೊಂಡಿದ್ದು, ಇದೀಗ ತಾನು ಗರ್ಭಿಣಿಯಾಗಿದ್ದೇನೆ. ಆತನನ್ನು ಹುಡುಕಿಕೊಡಿ ಎಂದು ಗಗನ ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನೂ ದಾಖಲಿಸಿದ್ದಳು. ಆದರೆ ಹೀಗೆ ಪೊಲೀಸರಿಗೆ ಲಾಕ್‌ ಆಗಿದ್ದ ಸೂರ್ಯ ಮದುವೆ ಆಗುವುದಾಗಿ ಹೇಳಿ ಮತ್ತೆ ಕೈಕೊಟ್ಟಿದ್ದಾನೆ.

ಇದನ್ನೂ ಓದಿ: Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

Continue Reading

ಕರ್ನಾಟಕ

Foreign Investment: ರಾಜ್ಯದಲ್ಲಿ ಸ್ಮಾರ್ಟ್ ಫೋನ್ ಕ್ಯಾಮೆರಾ ಬಿಡಿಭಾಗ ತಯಾರಿಕೆ ಘಟಕ; ದ.ಕೊರಿಯಾ ಜತೆ ಕರ್ನಾಟಕ ಒಪ್ಪಂದ

Foreign Investment: ರಾಜ್ಯದಲ್ಲಿ ಸ್ಮಾರ್ಟ್‌ಫೋನ್‌ಗಳ ಕ್ಯಾಮೆರಾ ಪರೀಕ್ಷಿಸುವ ಯಂತ್ರಗಳನ್ನು ತಯಾರಿಸುವ ಘಟಕ ಆರಂಭಿಸುವ ಯೋಜನೆಯ ಒಪ್ಪಂದಕ್ಕೆ ದಕ್ಷಿಣ ಕೊರಿಯಾದ ಹೈವಿಷನ್ ಕಂಪನಿಯು ಕರ್ನಾಟಕ ಸರ್ಕಾರದ ಜತೆ ಶುಕ್ರವಾರ ಸೋಲ್‌ನಲ್ಲಿ ಒಪ್ಪಂದಕ್ಕೆ ಸಹಿ ಹಾಕಿದೆ. ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ನೇತೃತ್ವದಲ್ಲಿನ ರಾಜ್ಯದ ಉನ್ನತ ಮಟ್ಟದ ನಿಯೋಗವು ಹೈವಿಷನ್‌ ಸಿಇಒ ಚೋಯಿ ಡೂ-ವನ್‌ ಅವರನ್ನು ಭೇಟಿಯಾದ ಸಂದರ್ಭದಲ್ಲಿ ಈ ಒಪ್ಪಂದಕ್ಕೆ ಸಹಿ ಹಾಕಲಾಯಿತು.

VISTARANEWS.COM


on

A high level delegation of the state led by Minister MB Patil
Koo

ಬೆಂಗಳೂರು: ರಾಜ್ಯದಲ್ಲಿ ಸ್ಮಾರ್ಟ್‌ಫೋನ್‌ಗಳ ಕ್ಯಾಮೆರಾ ಪರೀಕ್ಷಿಸುವ ಯಂತ್ರಗಳನ್ನು ತಯಾರಿಸುವ ಘಟಕ ಆರಂಭಿಸುವ ಯೋಜನೆಯ ಒಪ್ಪಂದಕ್ಕೆ ದಕ್ಷಿಣ ಕೊರಿಯಾದ ಹೈವಿಷನ್ ಕಂಪನಿಯು ಕರ್ನಾಟಕ ಸರ್ಕಾರದ ಜತೆ ಶುಕ್ರವಾರ ಸೋಲ್‌ನಲ್ಲಿ ಒಪ್ಪಂದಕ್ಕೆ ಸಹಿ (Foreign Investment) ಹಾಕಿದೆ.

ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ನೇತೃತ್ವದಲ್ಲಿನ ರಾಜ್ಯದ ಉನ್ನತ ಮಟ್ಟದ ನಿಯೋಗವು ಹೈವಿಷನ್‌ ಸಿಇಒ ಚೋಯಿ ಡೂ-ವನ್‌ ಅವರನ್ನು ಭೇಟಿಯಾದ ಸಂದರ್ಭದಲ್ಲಿ ಈ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಈ ಕ್ಯಾಮೆರಾ ಇನ್‌ಸ್ಪೆಕ್ಷನ್‌ ಮಷಿನ್ಸ್‌ ತಯಾರಿಕಾ ಘಟಕವು ಫಾಕ್ಸ್‌ಕಾನ್‌ನ ತಯಾರಿಕಾ ಘಟಕದ ಸಮೀಪ ಕಾರ್ಯಾರಂಭ ಮಾಡಲಿದೆ. ಇದರಿಂದ ರಾಜ್ಯದ ಎಲೆಕ್ಟ್ರಾನಿಕ್ಸ್‌ ತಯಾರಿಕಾ ಉದ್ಯಮದ ಬೆಳವಣಿಗೆಗೆ ನೆರವಾಗಲಿದೆ.

ಎಲೆಕ್ಟ್ರಾನಿಕ್ಸ್‌ ವಲಯಕ್ಕೆ ದೇಶದಲ್ಲಿಯೇ ಗರಿಷ್ಠ ಮಟ್ಟವಾಗಿರುವ ಶೇ 30-35ರಷ್ಟು ಸಬ್ಸಿಡಿಯನ್ನು ಕರ್ನಾಟಕ ಸರ್ಕಾರ ನೀಡುತ್ತಿರುವುದನ್ನು ಸಚಿವ ಎಂ.ಬಿ. ಪಾಟೀಲ ಅವರು, ಹೈವಿಷನ್‌ ಕಂಪನಿಯ ಮುಖ್ಯಸ್ಥರ ಗಮನಕ್ಕೆ ತಂದರು.

ರಾಜ್ಯದ ಉನ್ನತ ಮಟ್ಟದ ನಿಯೋಗವು ಎಲ್ಎಕ್ಸ್ ಇಂಟರ್‌ನ್ಯಾಷನಲ್ ಕಾರ್ಪ್‌, ಸ್ಯಾಮ್‌ಸಂಗ್‌ ಎಲೆಕ್ಟ್ರಾನಿಕ್ಸ್‌ ಮುಖ್ಯಸ್ಥರನ್ನೂ ಭೇಟಿಯಾಗಿ ಮಾತುಕತೆ ನಡೆಸಿತು.

ಇದನ್ನೂ ಓದಿ: Bengaluru News: ಬೆಂಗಳೂರಿನಲ್ಲಿ ಜು. 6,7ರಂದು ʼನಟನ ತರಂಗಿಣಿʼ 20ನೇ ವರ್ಷೋತ್ಸವ

ಎಲ್ಎಕ್ಸ್ ಇಂಟರ್‌ನ್ಯಾಷನಲ್ ಕಾರ್ಪ್‌ ಮುಖ್ಯಸ್ಥರ ಭೇಟಿ ಸಂದರ್ಭದಲ್ಲಿ ವಿದ್ಯುತ್‌ ಚಾಲಿತ ವಾಹನ, ಬ್ಯಾಟರಿ ತಯಾರಿಕೆ ಸಾಧ್ಯತೆ ಮತ್ತು ವಹಿವಾಟು ವಿಸ್ತರಣೆ ಅವಕಾಶಗಳ ಬಗ್ಗೆ ಸಚಿವ ಎಂ.ಬಿ. ಪಾಟೀಲ ಚರ್ಚೆ ನಡೆಸಿದರು.

ಎಲ್‌ಜಿ ಕಾರ್ಪ್‌ನ ಪ್ರತ್ಯೇಕ ಕಂಪನಿಯಾಗಿರುವ ಎಲ್‌ಎಕ್ಸ್‌ ಇಂಟರ್‌ನ್ಯಾಷನಲ್‌ ಕಾರ್ಪ್‌ನ ವಿಭಿನ್ನ ವಹಿವಾಟುಗಳಾದ ಎಲ್‌ಎಕ್ಸ್‌ ಸೆಮಿಕಾನ್‌, ಎಲ್‌ಎಕ್ಸ್‌ ಗ್ಲಾಸ್‌, ಎಲ್‌ಎಕ್ಸ್‌ ಪ್ಲಾಸ್ಟಿಕ್‌ ಮತ್ತು ಎಲ್‌ಎಕ್ಸ್‌ ಹೌಸಸ್‌ ವಹಿವಾಟು ಮತ್ತು ಎಲ್‌ಜಿ ಎನರ್ಜಿ ಸೊಲುಷನ್ಸ್‌ ಜತೆಗಿನ ಸಹಯೋಗದ ಬಗ್ಗೆ ಚರ್ಚೆ ನಡೆಸಲಾಯಿತು.

ಸ್ಯಾಮ್‌ಸಂಗ್‌ ಎಲೆಕ್ಟ್ರಾನಿಕ್ಸ್‌ ಮುಖ್ಯಸ್ಥರ ಜತೆಗಿನ ಭೇಟಿ ಸಂದರ್ಭದಲ್ಲಿ ಸ್ಮಾರ್ಟ್‌ಫೋನ್‌, ಎಲೆಕ್ಟ್ರಾನಿಕ್ಸ್‌, ಬ್ಯಾಟರಿ ಸೆಲ್‌ ತಯಾರಿಕೆಗೆ ಕರ್ನಾಟಕದಲ್ಲಿ ಇರುವ ಅನುಕೂಲತೆಗಳನ್ನು ನಿಯೋಗವು ಮನವರಿಕೆ ಮಾಡಿಕೊಟ್ಟಿತು. ಸೆಮಿಕಂಡಕ್ಟರ್, ವಿದ್ಯುತ್‌ಚಾಲಿತ ವಾಹನ, ಜೈವಿಕ ತಂತ್ರಜ್ಞಾನ ವಲಯಗಳಲ್ಲಿ ಕರ್ನಾಟಕವು ಉತ್ಕೃಷ್ಟ ಮೂಲಸೌಲಭ್ಯ, ಪರಿಣತ ತಂತ್ರಜ್ಞರು, ಪೂರಕ ಪರಿಸರದ ನೆರವಿನಿಂದ ಜಾಗತಿಕ ಆವಿಷ್ಕಾರದಲ್ಲಿ ಮುನ್ನಡೆ ಸಾಧಿಸುತ್ತಿರುವುದನ್ನು ವಿವರಿಸಲಾಗಿದೆ.

ಇದನ್ನೂ ಓದಿ: Namma Metro: ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌; ನಾಳೆಯಿಂದ ನೇರಳೆ ಮಾರ್ಗದಲ್ಲಿ ಹೆಚ್ಚುವರಿ ರೈಲು ಸೇವೆ

ಭಾರತದ ರಾಯಭಾರಿಗೆ ಕೃತಜ್ಞತೆ ಸಲ್ಲಿಕೆ

ವಿವಿಧ ಕಂಪನಿಗಳ ಜತೆಗಿನ ಭೇಟಿ ಮತ್ತು ಸೋಲ್‌ನಲ್ಲಿ ಏರ್ಪಡಿಸಿದ್ದ ರೋಡ್‌ಷೋದ ಯಶಸ್ಸಿಗೆ ಸಹಕರಿಸಿದ ದಕ್ಷಿಣ ಕೊರಿಯಾದಲ್ಲಿನ ಭಾರತದ ರಾಯಭಾರಿ ಅಮಿತ್‌ ಕುಮಾರ್‌ ಅವರಿಗೆ ಸಚಿವ ಎಂ.ಬಿ. ಪಾಟೀಲ್‌ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.

Continue Reading

ವಿಜಯನಗರ

Vijayanagara News: ಕೊಟ್ಟೂರಿನಲ್ಲಿ ಜನಸ್ಪಂದನ ಕಾರ್ಯಕ್ರಮ; ಸಾರ್ವಜನಿಕರ ಅಹವಾಲು ಆಲಿಸಿದ ಡಿಸಿ

Vijayanagara News: ಕೊಟ್ಟೂರಿನ ಎಪಿಎಂಸಿ ಆವರಣದಲ್ಲಿನ ಸಭಾಂಗಣದಲ್ಲಿ ಶುಕ್ರವಾರ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್‌, ಸಾರ್ವಜನಿಕರ ಅಹವಾಲು ಆಲಿಸಿದರು.

VISTARANEWS.COM


on

Janaspandana programme in Kottur
Koo

ಕೊಟ್ಟೂರು: ನಗರದ ಎಪಿಎಂಸಿ ಆವರಣದಲ್ಲಿನ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಜನಸ್ಪಂದನ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್‌, ಸಾರ್ವಜನಿಕರ ಅಹವಾಲು (Vijayanagara News) ಆಲಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ತಾಲೂಕಾಡಳಿತ ಮತ್ತು ತಾಲೂಕು ಪಂಚಾಯಿತಿ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ನೇಮಿರಾಜ ನಾಯ್ಕ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ನೋಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಮ ಶಾ, ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಲೀಮ್ ಪಾಶಾ ಮತ್ತು ಜಿಲ್ಲಾಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳ ನೇತೃತ್ವದಲ್ಲಿ ಡಿಸಿ ಎಂ.ಎಸ್. ದಿವಾಕರ್‌, ಸ್ವೀಕೃತವಾದ ಅರ್ಜಿಗಳನ್ನು ಪರಿಶೀಲಿಸಿದರು.

ಜಂಟಿ ಕೃಷಿ ನಿರ್ದೇಶಕ ಶರಣಪ್ಪ ಮುದಗಲ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ರಾಮಚಂದ್ರಪ್ಪ ಕೆ.ಬಿ., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆಯ ಅಧಿಕಾರಿ ಡಾ.ಶಂಕರ ನಾಯ್ಕ, ಆಹಾರ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಶ್ವೇತಾ ಸೇರಿದಂತೆ ವಿವಿಧ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದು, ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಆಯಾ ಇಲಾಖೆಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ಪರಿಶೀಲಿಸಿ, ಮಾಹಿತಿ ನೀಡಿದರು.

ಇದನ್ನೂ ಓದಿ: Bengaluru News: ಬೆಂಗಳೂರಿನಲ್ಲಿ ಜು. 6,7ರಂದು ʼನಟನ ತರಂಗಿಣಿʼ 20ನೇ ವರ್ಷೋತ್ಸವ

ಕುಡಿಯುವ ನೀರು ಪೂರೈಕೆ, ಮಾಸಾಶನ, ರಸ್ತೆ ಸುಧಾರಣೆ, ವಿದ್ಯುತ್ ಸಂಪರ್ಕ, ವಿವಿಧ ಭವನಗಳ ಮಂಜೂರಾತಿ ಸೇರಿದಂತೆ ನಾನಾ ವಿಷಯಗಳ ಬಗ್ಗೆ ಸಾರ್ವಜನಿಕರು ತಮ್ಮ ಅಹವಾಲನ್ನು ಸಲ್ಲಿಸಿದರು. ಅಧಿಕಾರಿಗಳ ಸಮ್ಮುಖದಲ್ಲಿ ಜಿಲ್ಲಾಧಿಕಾರಿಗಳು ಸಾರ್ವಜನಿಕ ಅಹವಾಲುಗಳ ಬಗ್ಗೆ ಚರ್ಚಿಸಿ ಕೆಲವು ಅಹವಾಲುಗಳನ್ನು ಸ್ಥಳದಲ್ಲಿಯೇ ಇತ್ಯರ್ಥಪಡಿಸಿದರು.

113 ಅರ್ಜಿಗಳು ಸ್ವೀಕೃತ

ಕಂದಾಯ ಇಲಾಖೆಗೆ 61, ಪಟ್ಟಣ ಪಂಚಾಯಿತಿಗೆ 19, ಕೃಷಿ ಇಲಾಖೆಗೆ 12, ತಾಲೂಕು ಪಂಚಾಯಿತಿಗೆ 10, ಜೆಸ್ಕಾಂ ಮತ್ತು ಸಿಡಿಪಿಓಗೆ ತಲಾ 4., ಸಾರಿಗೆ, ಭೂಮಾಪನ ಮತ್ತು ಆಹಾರ ಇಲಾಖೆಗೆ ತಲಾ 3, ಶಿಕ್ಷಣ ಇಲಾಖೆಗೆ 2, ಪಶುಪಾಲನೆ, ಎಪಿಎಂಸಿ, ಆರೋಗ್ಯ ಇಲಾಖೆ, ತೋಟಗಾರಿಕಾ ಇಲಾಖೆಗಳಿಗೆ ತಲಾ 1 ಅರ್ಜಿಗಳು ಸೇರಿ ಒಟ್ಟು 113 ಅರ್ಜಿಗಳು ಸ್ವೀಕೃತವಾದವು. ಸ್ವೀಕೃತವಾದ ಒಟ್ಟು ಅರ್ಜಿಗಳ ಪೈಕಿ 12 ಅರ್ಜಿಗಳನ್ನು ಸ್ಥಳದಲ್ಲಿಯೇ ವಿಲೇ ಮಾಡಲಾಯಿತು.

ಕೃಷಿ, ತೋಟಗಾರಿಕೆ, ಶಾಲಾ ಶಿಕ್ಷಣ ಇಲಾಖೆ, ಆಹಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರಿಗೆ, ಲೋಕೋಪಯೋಗಿ, ಕಾರ್ಮಿಕ, ಅಬಕಾರಿ, ನೋಂದಣಿ ಮತ್ತು ಮುದ್ರಾಂಕ, ಸರ್ವೆ ಇಲಾಖೆ, ಜೆಸ್ಕಾಂ, ಪ್ರಾದೇಶಿಕ ಸಾರಿಗೆ, ಸಣ್ಣ ನೀರಾವರಿ ಮತ್ತು ಅಂತರ್ಜಲ ಇಲಾಖೆ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಮತ್ತು ಕೆಆರ್‌ಐಡಿಎಲ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯಕ್ರಮದಲ್ಲಿ ಸಾರ್ವಜನಿಕರು ನೀಡುವ ಅರ್ಜಿಗಳನ್ನು ನೋಂದಾಯಿಸಿಕೊಂಡರು.

ಆರೋಗ್ಯ ತಪಾಸಣೆ

ತಾಲೂಕು ಆರೋಗ್ಯ ಇಲಾಖೆಯಿಂದ ಕಾರ್ಯಕ್ರಮದ ಸ್ಥಳದಲ್ಲಿ ಉಚಿತವಾಗಿ ಮಧುಮೇಹ, ರಕ್ತದೊತ್ತಡ ಸೇರಿದಂತೆ ವಿವಿಧ ಕಾಯಿಲೆಗಳ ಬಗ್ಗೆ ಪರೀಕ್ಷೆ ನಡೆಸಿ ಔಷಧೋಪಚಾರ ನೀಡಲಾಯಿತು.

ಇದನ್ನೂ ಓದಿ: Uttara Kannada News: ರೈತ ಯುವಕರು, ವಿಕಲಚೇತನರ ವಿವಾಹಕ್ಕೆ ಉ.ಕ ಜಿಲ್ಲಾಡಳಿತದಿಂದ ವಿನೂತನ ಪ್ರಯತ್ನ!

ಕಾರ್ಯಕ್ರಮದಲ್ಲಿ ತಹಸೀಲ್ದಾರ್‌ ಅಮರೇಶ ಜಿ.ಕೆ., ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ವೈ.ರವಿಕುಮಾರ್, ಸಿಡಿಪಿಒ ವಿಜಯಲಕ್ಷ್ಮಿ, ಬಿಇಒ ಪದ್ಮನಾಭ ಕರ್ಣಂ, ತಾಲೂಕು ಆರೋಗ್ಯಾಧಿಕಾರಿ ಡಾ.ಪ್ರದೀಪ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಇತರರು ಇದ್ದರು.

Continue Reading

ಮಳೆ

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

Karnataka Weather Forecast : ವಾರಾಂತ್ಯದಲ್ಲಿ ಸಾಧಾರಣದೊಂದಿಗೆ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಕರಾವಳಿಯಲ್ಲಿ ನಾನ್‌ ಸ್ಟಾಪ್‌ ಮಳೆಯಾಗಲಿದ್ದು, ಮಲೆನಾಡಿನಲ್ಲೂ ಅಬ್ಬರಿಸಲಿದೆ. ಆರೆಂಜ್‌ ಹಾಗೂ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ಕರ್ನಾಟಕದ ಕರಾವಳಿಯಲ್ಲಿ ವ್ಯಾಪಕವಾಗಿ ಸಾಧಾರಣದಿಂದ ಭಾರಿ ಮಳೆಯಾಗುವ (Heavy Rain) ಸಾಧ್ಯತೆಯಿದೆ. ಮಲೆನಾಡು ಭಾಗಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯೊಂದಿಗೆ ಚದುರಿದ ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ (Rain News) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನಲ್ಲಿ ಪ್ರತ್ಯೇಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಸೇರಿದಂತೆ ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಉತ್ತರ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ರಾಯಚೂರು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಬೀದರ್, ಕಲಬುರಗಿ, ಧಾರವಾಡ ಮತ್ತು ಹಾವೇರಿ, ವಿಜಯಪುರ, ಗದಗ, ಕೊಪ್ಪಳ, ಯಾದಗಿರಿ, ಬಾಗಲಕೋಟೆಯಲ್ಲೂ ಮಳೆ ಇರಲಿದೆ.

ಮಲೆನಾಡಿನ ಹಾಸನ, ಕೊಡಗು ಜಿಲ್ಲೆಯಾದ್ಯಂತ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ ಮತ್ತು ಚಿಕ್ಕಮಗಳೂರಿನಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ವ್ಯಾಪಕ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲಿ ಚದುರಿದಂತೆ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಈ ಜಿಲ್ಲೆಗಳಿಗೆ ಆರೆಂಜ್‌-ಯೆಲ್ಲೋ ಅಲರ್ಟ್‌

ಗುಡುಗು ಸಹಿತ ಭಾರೀ ಮಳೆಯಾಗಲಿದ್ದು, 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ: Assault Case : ಜಮೀನು ವಿವಾದ; ನೀರಿನಲ್ಲಿ ಮುಳುಗಿಸಿ, ಕುಡುಗೋಲು, ಕಲ್ಲಿನಿಂದ ವ್ಯಕ್ತಿ ಮೇಲೆ ಹಲ್ಲೆ!

ಜುಲೈ 6ಕ್ಕೂ ಶಾಲಾ-ಕಾಲೇಜುಗಳಿಗೆ ರಜೆ

ಕರಾವಳಿಯಲ್ಲಿ ಭಾರೀ ಮಳೆ ಅಬ್ಬರ ಹಿನ್ನೆಲೆಯಲ್ಲಿ ಜುಲೈ 6 ರಂದು ಕುಮಟಾ, ಹೊನ್ನಾವರ, ಭಟ್ಕಳ ತಾಲೂಕಿನ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್‌ರಿಂದ ಆದೇಶ ಹೊರಡಿಸಲಾಗಿದೆ. ಪದವಿ ಕಾಲೇಜು ಹೊರತುಪಡಿಸಿ ಉಳಿದ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಕಳೆದ ಎರಡು ದಿನಗಳಿಂದ ಭಾರೀ ಪ್ರಮಾಣದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಹಲವೆಡೆ ರಸ್ತೆ, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿದೆ. ವಿದ್ಯಾರ್ಥಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಅಪಾಯದಲ್ಲಿರುವ ಬಳ್ಕುಂಜೆ -ಪಲಿಮಾರು ಸಂಪರ್ಕ ಸೇತುವೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯನ್ನು ಸಂಪರ್ಕಿಸುವ ಮುಲ್ಕಿ ಸಮೀಪದ ಬಳ್ಕುಂಜೆ -ಪಲಿಮಾರು ಸಂಪರ್ಕ ಸೇತುವೆ ಅಪಾಯದಲ್ಲಿದೆ. ಸ್ಥಳೀಯರ ದೂರಿನಂತೆ ಜಿಲ್ಲಾಡಳಿತವು ಘನ ವಾಹನ ಸಂಚಾರ ನಿಷೇಧಿಸಿದೆ. ಸೇತುವೆಯ ಅಡಿ ಭಾಗದಲ್ಲಿ ತುಂಡು ತುಂಡಾಗಿ ಬೀಮ್‌ಗಳ ಸಿಮೆಂಟ್‌ಗಳು ಬೀಳುತ್ತಿವೆ. ನಿರಂತರ ಅಕ್ರಮ ಮರುಳು ಸಾಗಾಟವೇ ಇದಕ್ಕೆ ಕಾರಣ ಎಂದು ಸ್ಥಳೀಯರು ದೂರಿದ್ದಾರೆ. ಈ ಭಾಗದಲ್ಲಿ ಪೋಲಿಸ್ ಚೆಕ್ ಪೋಸ್ಟ್ ಇಲ್ಲದಿರುವುದು ಮರಳು ದಂದೆಕೋರರಿಗೆ ವರದಾನವಾಗಿದೆ ಎಂದು ಕಿಡಿಕಾರಿದ್ದಾರೆ. ಬಳ್ಕುಂಜೆ ಭಾಗದಿಂದ ಪಲಿಮಾರು, ಉಡುಪಿ, ನಿಟ್ಟೆ, ಬೆಳ್ಮಣ್, ಕುದುರೆಮುಖ, ಹೆಬ್ರಿ, ಸಾಗರ ಮೊದಲಾದ ಕಡೆಗೆ ಸಂಪರ್ಕಿಸುವ ರಸ್ತೆ ಇದಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
road accident bike
ಬೆಂಗಳೂರು11 mins ago

Road Accident: ರಾಜಕಾಲುವೆಗೆ ಬಿದ್ದು ಕೊಚ್ಚಿಕೊಂಡು ಹೋದ ಬೈಕ್‌ ಸವಾರ

Lok Sabha Election 2024
Lok Sabha Election 202434 mins ago

Lok Sabha Election 2024: ಲೋಕಸಭೆ ಚುನಾವಣೆಯಲ್ಲಿ 7 ಸಂಸದರಿಗೆ ಸಿಕ್ಕಿದ್ದು ಶೇ. 70ಕ್ಕಿಂತ ಹೆಚ್ಚು ಮತ; ಯಾರಿವರು?

A high level delegation of the state led by Minister MB Patil
ಕರ್ನಾಟಕ35 mins ago

Foreign Investment: ರಾಜ್ಯದಲ್ಲಿ ಸ್ಮಾರ್ಟ್ ಫೋನ್ ಕ್ಯಾಮೆರಾ ಬಿಡಿಭಾಗ ತಯಾರಿಕೆ ಘಟಕ; ದ.ಕೊರಿಯಾ ಜತೆ ಕರ್ನಾಟಕ ಒಪ್ಪಂದ

Janaspandana programme in Kottur
ವಿಜಯನಗರ41 mins ago

Vijayanagara News: ಕೊಟ್ಟೂರಿನಲ್ಲಿ ಜನಸ್ಪಂದನ ಕಾರ್ಯಕ್ರಮ; ಸಾರ್ವಜನಿಕರ ಅಹವಾಲು ಆಲಿಸಿದ ಡಿಸಿ

Superfoods
ಆರೋಗ್ಯ41 mins ago

Superfoods: ಮಾರುಕಟ್ಟೆಯಲ್ಲಿ ಸೂಪರ್‌ಫುಡ್‌ಗಳೆನ್ನುವ ಈ ಆಹಾರಗಳು ನಿಜಕ್ಕೂ ಸೂಪರ್‌ಫುಡ್‌ಗಳೇ?

Latest42 mins ago

Branded Company: ಬ್ರಾಂಡೆಡ್‌ ಬ್ಯಾಗ್‌ ಕಂಪನಿಗಳ ಲೂಟಿ; ಸಾವಿರಕ್ಕೆ ಖರೀದಿಸಿ ಲಕ್ಷಕ್ಕೆ ಸೇಲ್‌!

karnataka Weather Forecast
ಮಳೆ1 hour ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

Dina Bhavishya
ಭವಿಷ್ಯ3 hours ago

Dina Bhavishya : ಈ ರಾಶಿಯವರು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಮುನ್ನ ಆಲೋಚಿಸಿ

Cheating Case
ಪ್ರಮುಖ ಸುದ್ದಿ8 hours ago

Cheating case : ಭಕ್ತರ 40 ಲಕ್ಷ ರೂ. ಗುಳುಂ ಮಾಡಲು ದರೋಡೆ ಕತೆ ಕಟ್ಟಿದ ಸ್ವಾಮೀಜಿ!

Snake
ವೈರಲ್ ನ್ಯೂಸ್8 hours ago

ತನಗೆ ಒಮ್ಮೆ ಕಚ್ಚಿದ ಹಾವಿಗೆ ಮೂರು ಬಾರಿ ಕಚ್ಚಿ ಸೇಡು ತೀರಿಸಿಕೊಂಡ ವ್ಯಕ್ತಿ; ಕೊನೆಗೆ ಬದುಕುಳಿದಿದ್ದು ಯಾರು?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ1 hour ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

karnataka Weather Forecast
ಮಳೆ14 hours ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

Lovers Fighting
ಚಿಕ್ಕಬಳ್ಳಾಪುರ15 hours ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

Medical negligence
ದಾವಣಗೆರೆ16 hours ago

Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

karnataka rain
ಮಳೆ18 hours ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

Elephant attack in Hassan and Chikmagalur
ಹಾಸನ19 hours ago

Elephant Attack : ಕಾಫಿ ತೋಟದ‌ ಕೆಲಸಗಾರನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಒಂಟಿ ಸಲಗ

Physical Abuse
ಬೆಂಗಳೂರು20 hours ago

Physical Abuse : ಇವಳೇನು ಶಿಕ್ಷಕಿಯೋ ಕಾಮುಕಿಯೋ; ಬಾಲಕಿಯ ಖಾಸಗಿ ಅಂಗಾಂಗ ಮುಟ್ಟಿ ವಿಕೃತಿ

Self Harming in bengaluru
ಬೆಂಗಳೂರು21 hours ago

Self Harming : ವರದಕ್ಷಿಣೆ ಟಾರ್ಚರ್‌; ಫ್ಯಾನಿಗೆ ನೇಣು ಬಿಗಿದುಕೊಂಡು ಟೆಕ್ಕಿ ಸೂಸೈಡ್‌

karnataka Weather Forecast Rain
ಮಳೆ1 day ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

ಟ್ರೆಂಡಿಂಗ್‌