ಬೆಂಗಳೂರು: ತಮಿಳುನಾಡಿಗೆ 2.5 ಟಿಎಂಸಿ ಕಾವೇರಿ ನೀರು (Cauvery Dispute) ಹರಿಸುವಂತೆ ಕರ್ನಾಟಕಕ್ಕೆ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಸೂಚನೆ ನೀಡಿದೆ. ಮೇ ತಿಂಗಳ ಪಾಲಿನ 2.5 ಟಿಎಂಸಿ ಹರಿಸಲು ರಾಜ್ಯಕ್ಕೆ ಸಿಡಬ್ಲ್ಯುಎಂಎ ನಿರ್ದೇಶನ ನೀಡಿದೆ.
ಇತ್ತೀಚೆಗೆ ನಡೆದ ಕಾವೇರಿ ನೀರು ನಿರ್ವಹಣಾ ಸಮಿತಿ (CWRC) ಸಮಿತಿ ಸಭೆಯಲ್ಲಿ ಕರ್ನಾಟಕದಲ್ಲಿ ಬರಗಾಲದ ಹಿನ್ನೆಲೆಯಲ್ಲಿ ನೀರು ಬಿಡಲು ಸಾಧ್ಯವಿಲ್ಲ ಎಂದು ಸಮಿತಿಯು ತಮಿಳುನಾಡಿಗೆ ಸೂಚಿಸಿತ್ತು. ಆದರೆ, ಇದೀಗ ಮಂಗಳವಾರ ನಡೆದ ಸಭೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಸಭೆಯಲ್ಲಿ 2.5 ಟಿಎಂಸಿ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚಿಸಲಾಗಿದೆ.
ಫೆಬ್ರವರಿಯಿಂದ ಮೇವರೆಗೆ ಕರ್ನಾಟಕವು ಪ್ರತಿ ತಿಂಗಳು 2.50 ಟಿಎಂಸಿಯಂತೆ ಪರಿಸರ ಹರಿವನ್ನು ನಿರಂತರವಾಗಿ ಬಿಡುಗಡೆ ಮಾಡಬೇಕು ಎಂದು ಕಳೆದ ಫೆಬ್ರವರಿಯಲ್ಲಿಯೇ ತಮಿಳುನಾಡು ಸಿಡಬ್ಲ್ಯೂಆರ್‌ಸಿ ಸಭೆಯಲ್ಲಿ ವಾದ ಮಂಡಿಸಿತ್ತು. ಸುಪ್ರೀಂ ಕೋರ್ಟ್ ಆದೇಶದಂತೆ ಮಾರ್ಚ್ ಹಾಗೂ ಏಪ್ರಿಲ್‌ನಲ್ಲಿ ಕರ್ನಾಟಕವು ತಮಿಳುನಾಡಿಗೆ ನೀರು ಬಿಟ್ಟಿತ್ತು. ಆದರೆ, ಮೇ ಅಂತ್ಯದವರೆಗೂ ನೀರು ಬಿಡಬೇಕು ಎಂಬುದು ತಮಿಳುನಾಡಿನ ವಾದವಾಗಿತ್ತು. ಇದನ್ನು ಸಿಡಬ್ಲ್ಯೂಆರ್‌ಸಿ ನಿರಾಕರಿಸಿತ್ತು. ಆದರೆ, ಈಗ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಕರ್ನಾಟಕಕ್ಕೆ ನಿರ್ದೇಶನ ನೀಡಿದೆ.
ಗರಿಷ್ಠ ತಾಪಮಾನ ಇಳಿಕೆ; ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ
ಬೆಂಗಳೂರು: ಮೇ 21ರಂದು ಚದುರಿದಂತೆ ಮಧ್ಯಮ ಮಳೆಯಾಗಲಿದ್ದು, ರಾಜ್ಯಾದ್ಯಂತ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯಾಗುವ (Rain News) ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಮತ್ತು 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (karnataka Weather Forecast) ಎಚ್ಚರಿಕೆಯನ್ನು ನೀಡಿದೆ.
ದಕ್ಷಿಣ ಒಳನಾಡಿನ ತುಮಕೂರು, ಮೈಸೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿ ವ್ಯಾಪಕವಾಗಿ ಮಧ್ಯಮ ಮಳೆಯಾಗಲಿದೆ. ಉತ್ತರ ಒಳನಾಡಿನ ಹಾವೇರಿ, ಬಳ್ಳಾರಿ ಮತ್ತು ಬೆಳಗಾವಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ವಿಜಯಪುರ, ರಾಯಚೂರು, ಕೊಪ್ಪಳ, ವಿಜಯನಗರ ಮತ್ತು ಧಾರವಾಡ ಜಿಲ್ಲೆಯಲ್ಲಿ ಹಗುರವಾದ ಮಳೆಯಾಗಲಿದೆ.
ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನ ಅನುಕ್ರಮವಾಗಿ ಸುಮಾರು 29 ಮತ್ತು 22 ಡಿ.ಸೆ ಇರಲಿದೆ.
ಇದನ್ನೂ ಓದಿ: Food Department : ಜೀವಂತ ಇದ್ದವಳನ್ನು ಸತ್ತಿದ್ದಾಗಿ ಘೋಷಿಸಿದ ಆಹಾರ ಇಲಾಖೆ; ರೇಷನ್ ಕಾರ್ಡ್‌ನಿಂದಲೇ ಹೆಸರು ಡಿಲೀಟ್
ಬಿರುಗಾಳಿ ಎಚ್ಚರಿಕೆ
ಗುಡುಗು ಸಹಿತ ಭಾರೀ ಮಳೆಯೊಂದಿಗೆ ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಗಾಳಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಚಿತ್ರದುರ್ಗ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಉಡುಪಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಉತ್ತರ ಕನ್ನಡ, ಧಾರವಾಡ, ಗದಗ ಮತ್ತು ಹಾವೇರಿ, ದಾವಣಗೆರೆ, ವಿಜಯನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ