Cauvery Dispute : ಸಮರ್ಥವಾಗಿ ವಾದ ಮಾಡದೆ ನಮಗೆ ಸೋಲಾಯಿತೇ? ಆರೋಪದಲ್ಲಿ ನಿಜವೆಷ್ಟು? ಸುಳ್ಳೆಷ್ಟು? - Vistara News

ಕರ್ನಾಟಕ

Cauvery Dispute : ಸಮರ್ಥವಾಗಿ ವಾದ ಮಾಡದೆ ನಮಗೆ ಸೋಲಾಯಿತೇ? ಆರೋಪದಲ್ಲಿ ನಿಜವೆಷ್ಟು? ಸುಳ್ಳೆಷ್ಟು?

Cauvery Dispute: ಕಾವೇರಿ ವಿಚಾರದಲ್ಲಿ ಎಲ್ಲ ಹಂತಗಳಲ್ಲಿ ನಮಗೆ ಸೋಲಾಗಲು ಪ್ರಮುಖ ಕಾರಣ, ನಾವು ಸರಿಯಾಗಿ ವಾದ ಮಾಡದೆ ಇರುವುದು, ವಾಸ್ತವಾಂಶ ತಿಳಿಸದೆ ಇರುವುದು. ಈ ಆರೋಪ ನಿಜವೇ? ಹಾಗಿದ್ದರೆ ಕರ್ನಾಟಕದ ವಾದ ಏನಿತ್ತು? ಬಾರ್‌ ಎಂಡ್‌ ಬೆಂಚ್‌ ವೆಬ್‌ಸೈಟ್‌ ಪ್ರಸ್ತುತಪಡಿಸಿದ ಅಧ್ಯಯನಾತ್ಮಕ ಅಂಶಗಳನ್ನು ನಿಮ್ಮ ಮುಂದಿಡಲಾಗಿದೆ.

VISTARANEWS.COM


on

Cauvery water Dispute
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕಾವೇರಿ ನೀರು ವಿಚಾರದಲ್ಲಿ (Cauvery Dispute) ಕರ್ನಾಟಕ ಎಲ್ಲ ಹಂತಗಳಲ್ಲೂ ಹಿನ್ನಡೆ ಅನುಭವಿಸಲು ಕಾರಣ ರಾಜ್ಯದ ಅಧಿಕಾರಿಗಳು (Officials of Karnataka) ಸರಿಯಾದ ವಾದ ಮಂಡಿಸದೇ ಇರುವುದು ಎನ್ನುವುದು ಹೆಚ್ಚಿನವರ ಆಪಾದನೆ. ಅದರಲ್ಲೂ ಕರ್ನಾಟಕದ ಅಧಿಕಾರಿಗಳು ವಿಡಿಯೋ ಕಾನ್ಫರೆನ್ಸ್‌ ಮೂಲಕ ವಾದ ಮಾಡಿದ್ದರಿಂದ ಸೋಲಾಯಿತು ಎನ್ನುವುದು ಇನ್ನೊಂದು ವಾದ. ಹಾಗಿದ್ದರೆ ಈ ಆರೋಪ ಸತ್ಯವೇ? ಅಥವಾ ರಾಜಕೀಯಪ್ರೇರಿತವೇ? ಹಾಗಿದ್ದರೆ ಕರ್ನಾಟಕ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (Cauvery Water Management Authority) ಮುಂದೆ ಏನೇನು ವಾದ ಮಾಡಿತ್ತು?

ಎಲ್ಲರಿಗೂ ತಿಳಿದಿರುವಂತೆ ಸೆ. 21ರಂದು ನಡೆದ ವಿಚಾರಣೆಯ ವೇಳೆ ಸುಪ್ರೀಂಕೋರ್ಟ್‌ (Supreme Court) ಎತ್ತಿ ಹಿಡಿದದ್ದು ಸೆ. 19ರಂದು ನಡೆದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಆದೇಶವನ್ನು. ಅದರಾಚೆಗೆ ಅದು ಯಾವ ಅಂಶವನ್ನೂ ಕೇಳಿಸಿಕೊಳ್ಳಲಿಲ್ಲ. ಹಾಗಿದ್ದರೆ ಸೆ. 19ರ ಪ್ರಾಧಿಕಾರದ ಸಭೆಯಲ್ಲಿ ಕರ್ನಾಟಕ ತನ್ನ ವಾದದಲ್ಲಿ ಸೋಲು ಕಂಡಿತೇ? ಹಾಗಾಗಿ ಪ್ರಾಧಿಕಾರ ಕರ್ನಾಟಕದ ವಿರುದ್ಧವಾಗಿ ತೀರ್ಪು ನೀಡಲು, ನೀರು ಬಿಡುಗಡೆಗೆ ಆದೇಶ ನೀಡಲು ಕಾರಣವಾಯಿತೇ ಎನ್ನುವುದು ಮುಖ್ಯ ಪ್ರಶ್ನೆ.

ಇದನ್ನು ತಿಳಿಯಬೇಕು ಎಂದಾದರೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸೆ.19ರಂದು ನಡೆಸಿರುವ 24ನೇ ಸಭೆಯ (ತುರ್ತು ಸಭೆ) ನಡಾವಳಿಗಳನ್ನು ಗಮನಿಸಬೇಕು.

ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಸೆ. 12ರಂದು ನೀಡಿದ ಆದೇಶದಲ್ಲಿ ಪ್ರತಿದಿನ 5000 ಕ್ಯೂಸೆಕ್‌ ನೀರು ಬಿಡುಗಡೆ ಮಾಡುವಂತೆ ಸೂಚಿಸಿತ್ತು. ವಾಸ್ತವವಾಗಿ ತಮಿಳುನಾಡಿನ ಅಧಿಕಾರಿಗಳು ಪ್ರತಿದಿನ 12,500 ಕ್ಯೂಸೆಕ್ಸ್‌ ನೀರು ಬಿಡುಗಡೆ ಮಾಡಬೇಕು ಎಂದು ಕೋರಿದ್ದರು. ಇದಕ್ಕೆ ಪ್ರತಿಯಾಗಿ ಕರ್ನಾಟಕದ ಅಧಿಕಾರಿಗಳು ವಾಸ್ತವಾಂಶಗಳನ್ನು ಮುಂದಿಟ್ಟು ತಮಿಳುನಾಡು ಕೋರಿಕೆಯನ್ನು ಮನ್ನಿಸಲು ಸಾಧ್ಯವಿಲ್ಲ. ತಾವು ಕೆಆರ್‌ಎಸ್‌ ಹಾಗೂ ಕಬಿನಿಯಿಂದ ಒಟ್ಟು 2500 ಕ್ಯೂಸೆಕ್ಸ್‌ ನೀರು ಮಾತ್ರ ಹರಿಸಬಹುದು ಎಂದು ವಾದ ಮಾಡಿದ್ದರು. ಅಂತಿಮವಾಗಿ ಪ್ರಾಧಿಕಾರವು ಪ್ರತಿದಿನ 5000 ಕ್ಯೂಸೆಕ್ಸ್‌ ನೀರು ಹರಿಸಲು ಕರ್ನಾಟಕಕ್ಕೆ ಸೂಚಿಸಿದ್ದ ಕಾವೇರಿ ನೀರು ನಿಯಂತ್ರಣ ಸಮಿತಿಯ (ಸಿಡಬ್ಲುಆರ್‌ಸಿ) ಸೆ.12ರ ಅದೇಶವನ್ನು ಎತ್ತಿಹಿಡಿದಿತ್ತು. ಹಾಗಿದ್ದರೆ 2500 ಕ್ಯೂಸೆಕ್‌ ನೀರು ಬಿಡಬಹುದು ಎಂದು ಒಪ್ಪಿದ್ದಾದರೂ ಯಾಕೆ ಎನ್ನುವ ಪ್ರಶ್ನೆಯೂ ಎದ್ದು ಬರುತ್ತದೆ. ಹೀಗೆ ಮಾಡಿದ್ದರಿಂದ ಸಮನ್ವಯ ಸೂತ್ರವಾಗಿ ಪ್ರಾಧಿಕಾರ 5000 ಕ್ಯೂಸೆಕ್‌ ನೀರು ಬಿಡಿ ಎಂದು ಹೇಳಿದೆ. ಕೊಡುವುದೇ ಇಲ್ಲ ಎಂದು ವಾದಿಸಬೇಕಿತ್ತು ಎನ್ನುವುದು ಕೆಲವರ ವಾದ.

ಹಾಗಿದ್ದರೆ ಒಟ್ಟಾರೆಯಾಗಿ ಪ್ರಾಧಿಕಾರದ ಅಂದಿನ ಸಭೆಯಲ್ಲಿ ಕರ್ನಾಟಕ ಮಾಡಿದ ವಾದ ಏನಾಗಿತ್ತು? ತಮಿಳುನಾಡು ಏನು ಹೇಳಿತ್ತು. ಬಾರ್‌ ಎಂಡ್‌ ಬೆಂಚ್‌ ವೆಬ್‌ ಸೈಟ್‌ ಸಂಗ್ರಹಿಸಿದ ಸಮಗ್ರ ಮಾಹಿತಿಯ ಸಾರವನ್ನು ಇಲ್ಲಿ ನೀಡಲಾಗಿದೆ.

ಪ್ರಾಧಿಕಾರದ ಮುಂದೆ ಕರ್ನಾಟಕದ ವಾದ ಏನಿತ್ತು?

  1. ಪ್ರಸಕ್ತ ವರ್ಷದಲ್ಲಿ ಮಳೆಯ ಅಭಾವ ಉಂಟಾಗಿದ್ದು, ಶೇ.75ರಷ್ಟು ನೈರುತ್ಯ ಮುಂಗಾರು ಇದಾಗಲೇ ಪೂರ್ಣಗೊಂಡಿದೆ. ಮಳೆ ಸಾಧ್ಯತೆ ಕ್ಷೀಣಿಸಿದ್ದು, ಒಂದೊಮ್ಮೆ ಮಳೆಯಾದರೂ ಕಾವೇರಿ ಜಲಾನಯನ ಪ್ರದೇಶದಲ್ಲಿನ ಪರಿಸ್ಥಿತಿ ಬದಲಾಗುವುದಿಲ್ಲ. ಪರಿಸ್ಥಿತಿಯು ಇನ್ನೂ ಕೆಟ್ಟ ಸ್ಥಿತಿಗೆ ಹೊರಳಬಹುದು ಎಂಬುದು ನಮ್ಮ ಆತಂಕವಾಗಿದೆ. ಇಂಥ ವಿಷಮ ಪರಿಸ್ಥಿತಿಯಲ್ಲಿ ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳು ಸಂಕಷ್ಟ ಹಂಚಿಕೆಗೆ ಮುಂದಾಗಬೇಕಿದೆ. ಕಾವೇರಿ ನೀರು ವಿವಾದ ನ್ಯಾಯ ಮಂಡಳಿಯ ಅಧಿಸೂಚನೆಯ ಕಲಂ VII ಜೊತೆಗೆ ಕಲಂ XIX(ಎ) ಅಡಿ ನಿರ್ದೇಶಿಸಿರುವಂತೆ ಸೂಕ್ತ ಅನುಪಾತದ ಅನ್ವಯ ನೀರು ಹಂಚಿಕೆಗೆ ಮುಂದಾಗಬೇಕು. ಈ ವಿಚಾರವನ್ನು ಸುಪ್ರೀಂ ಕೋರ್ಟ್ 2018ರ ತೀರ್ಪಿನಲ್ಲಿಯೂ ಬದಲು ಮಾಡಿಲ್ಲ.
  2. 2023ರ ಸೆಪ್ಟೆಂಬರ್ 12ರಂದು ನಡೆದ ಸಭೆಯಲ್ಲಿ ಸಿಡಬ್ಲ್ಯುಆರ್‌ಸಿ ಪ್ರತಿ ದಿನ 5 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ ತಪ್ಪಾಗಿ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 19ರಂದು ಸಿಡಬ್ಲ್ಯುಆರ್‌ಸಿಗೆ ಪತ್ರ ಬರೆದು ಹೊಸದಾಗಿ ಪ್ರಕರಣ ಪರಿಗಣಿಸಿ, ನಿರ್ದೇಶಿಸುವಂತೆ ಕೋರಲಾಗಿದೆ.
  3. ಜೂನ್ 1ರಿಂದ ಸೆಪ್ಟೆಂಬರ್ 11ರವರೆಗೆ ಕರ್ನಾಟಕದ ಜಲಾಶಗಳಿಗೆ 104.273 ಟಿಎಂಸಿ ನೀರು ಮಾತ್ರ ಹರಿದುಬಂದಿದೆ. ಕಳೆದ 30 ವರ್ಷಗಳ ಸರಾಸರಿ ಮಳೆ ಪ್ರಮಾಣದ ಹೋಲಿಕೆಯಲ್ಲಿ ಶೇ. 54.42ರಷ್ಟು ಕೊರತೆಯಾಗಿದೆ. ಸಾಮಾನ್ಯವಾಗಿ ಈ ಅವಧಿಯಲ್ಲಿ 228.793 ಟಿಎಂಸಿ ನೀರು ಹರಿದು ಬರುತ್ತಿತ್ತು.
  4. ಜೂನ್ 1ರಿಂದ ಸೆಪ್ಟೆಂಬರ್ 11ರವರೆಗೆ 46.271 ಟಿಎಂಸಿ ನೀರನ್ನು ಕಬಿನಿ ಮತ್ತು ಕೆಆರ್‌ಎಸ್‌ ಜಲಾಶಯದಿಂದ ಹರಿಸಲಾಗಿದೆ. ಕರ್ನಾಟಕವು ನೈರುತ್ಯ ಮುಂಗಾರಿನಿಂದ ಕೇವಲ 25.689 ಟಿಎಂಸಿ ನೀರು ಸಂಗ್ರಹಿಸಿದೆ. ತಮಿಳುನಾಡು ರಾಜ್ಯವು ಅಕ್ಟೋಬರ್-ಡಿಸೆಂಬರ್ ಅವಧಿಯಲ್ಲಿ ಬೆಳೆಗಳಿಗೆ ಈಶಾನ್ಯ ಮಾರುತ ಆಧರಿಸಿದ್ದು, ಕ್ಯಾರಿಓವರ್ ಸ್ಟೋರೇಜ್ (ಮುಂಬಳಕೆ ಸಂಗ್ರಹ) ಅನ್ನು ದುರ್ಬಳಕೆ ಮಾಡಿ ಈಗಾಗಲೇ 100 ಟಿಎಂಸಿ ನೀರನ್ನು ಕರ್ನಾಟಕದಿಂದ ಪಡೆದಿದೆ. ಸಂಕಷ್ಟದ ಸಂದರ್ಭದಲ್ಲಿ ತಮಿಳುನಾಡು ನೀರು ದುರ್ಬಳಕೆ ಮಾಡಿಕೊಂಡಿರುವುದನ್ನು ಎಲ್ಲರೂ ಕಾಣಬಹುದಾಗಿದೆ.
  5. ಮಳೆ ಕೊರತೆಯನ್ನು ನಿರ್ಧರಿಸುವಾಗ ನಿಯಂತ್ರಣ ಸಮಿತಿಯು ಕಾವೇರಿ ಪಾತ್ರದ ಒಟ್ಟು 81,155 ಚದರ ಕಿ ಮೀ ಜಲಾನಯನ ಪ್ರದೇಶವನ್ನು ಪರಿಗಣಿಸುವ ಬದಲಾಗಿ ಕರ್ನಾಟಕದ ನಾಲ್ಕು ಜಲಾಶಯಗಳ ಜಲಾನಯನ ಪ್ರದೇಶ 12,812 ಚದರ ಕಿ ಮೀ ಅನ್ನು ಮಾತ್ರವೇ ಪರಿಗಣಿಸುವ ಮೂಲಕ ಸ್ವೇಚ್ಛೆಯಿಂದ ನಿರ್ಧಾರ ತಳೆದಿದೆ. ಮಳೆಯ ಕೊರತೆಯನ್ನು ಆಧರಿಸಿ ಮಾತ್ರವೇ ಸಂಕಷ್ಟ ನಿರ್ಧರಿಸುವಂತಿಲ್ಲ. ಬದಲಿಗೆ ನದೀ ಮುಖಜ ಭೂಮಿಯಲ್ಲಿರುವ ಅಂತರ್ಜಲದ ಲಭ್ಯತೆಯನ್ನು ಪರಿಗಣಿಸಬೇಕು. ಅಲ್ಲದೇ, ನದೀ ಮುಖಜ ಭಾಗದಲ್ಲಿನ ಈಶಾನ್ಯ ಮಳೆಮಾರುತವನ್ನೂ ಸಹ ಪರಿಗಣಿಸಬೇಕು. ಸಂಕಷ್ಟದ ಸಂದರ್ಭದಲ್ಲಿ ರಾಜ್ಯಗಳ ಕನಿಷ್ಠ ಅವಶ್ಯಕತೆ ಹಾಗೂ ವಾಸ್ತವಿಕ ಅಂಶಗಳನ್ನು ಆಧರಿಸಿ ನೀರು ಹಂಚಿಕೆ ಮಾಡುವುದು ಸೂಕ್ತವಾದ ಮಾನದಂಡವಾಗಿದೆ.
  6. ಸಿಡಬ್ಲ್ಯುಆರ್‌ಸಿಯು ಕಳೆದ 30 ವರ್ಷಗಳ ಸರಾಸರಿ ಮಳೆ ಹಾಗೂ 2023ರ ಜೂನ್ 1ರಿಂದ ಸೆಪ್ಟೆಂಬರ್ 11ರವರೆಗಿನ ಬೆಳೆ ಆಧರಿಸಿ ಕೊರತೆ ಅಂದಾಜಿಸಿದೆ. ಆದರೆ, ಕಾವೇರಿ ನ್ಯಾಯ ಮಂಡಳಿಯು 1938-35ರಿಂದ 1971-27ರವರೆಗಿನ ಅಂಕಿ ಅಂಶ ಆಧರಿಸಿ ಸಾಮಾನ್ಯ ಮಳೆ ವರ್ಷದಲ್ಲಿ ಕಾವೇರಿ ಕೊಳ್ಳದ ನೀರು ಲಭ್ಯತೆಯನ್ನು 740 ಟಿಎಂಸಿ ಎಂದು ನಿರ್ಧರಿಸಿತ್ತು.
  7. ಕರ್ನಾಟಕ ಜಲಾಶಯಗಳ ಜಲಾನಯನ ಪ್ರದೇಶಗಳ ವಿಚಾರದಲ್ಲಿ, ಕರ್ನಾಟಕದ ಅಣೆಕಟ್ಟುಗಳ ಕೆಳಗಿರುವ ಹಾಗೂ ಬಿಳಿಗುಂಡ್ಲು ಅಂತರ ರಾಜ್ಯ ಗಡಿಗಿಂತ ಮೇಲಿರುವ ಸುಮಾರು 23,921 ಚ.ಕಿಮೀ ವ್ಯಾಪ್ತಿಯ ಮಧ್ಯಂತರ ಜಲಾನಯನ ಪ್ರದೇಶದಲ್ಲಿನ ಮಳೆ ಕೊರತೆಯನ್ನು ಸಿಡಬ್ಲ್ಯುಆರ್‌ಸಿಯು ಪ್ರಜ್ಞಾಪೂರ್ವಕವಾಗಿ ಮರೆಮಾಚಿದೆ. ಇದರ ವ್ಯಾಪ್ತಿಯು 23,921 ಚದರ ಕಿ ಮೀ ಆಗಿದೆ. ಈ ಪ್ರದೇಶದಲ್ಲಿನ ಮಳೆ ಕೊರತೆಯು ಕರ್ನಾಟಕದ ಅಣೆಕಟ್ಟುಗಳ ಮೇಲ್ಭಾಗದಲ್ಲಿರುವ ಜಲಾನಯನ ಪ್ರದೇಶದಲ್ಲಿ ಮಳೆಕೊರತೆ ಪ್ರಮಾಣವಾದ ಶೇ.54.42 ಕ್ಕಿಂತ ಹೆಚ್ಚಿದೆ.
  8. ಈ ಮಧ್ಯಂತರ ಜಲಾನಯನ ಪ್ರದೇಶದ 23,921 ಚದರ ಕಿಮೀ ವ್ಯಾಪ್ತಿಯಲ್ಲಿ 2023ರ ಜೂನ್ 1ರಿಂದ ಸೆಪ್ಟೆಂಬರ್ 11ರ ಅವಧಿಯಲ್ಲಿ ಅಂದಾಜು 14.286 ಟಿಎಂಸಿ ಹರಿಯುವ ನಿರೀಕ್ಷೆ ಇತ್ತು. ಆದರೆ, ಇದರಿಂದ 2 ಟಿಎಂಸಿಗೂ ಕಡಿಮೆ ಪ್ರಮಾಣದ ಕನಿಷ್ಠ ಹರಿವಾಗಿದೆ.
  9. ಸಾಮಾನ್ಯ ವರ್ಷದಲ್ಲಿ ಸೆಪ್ಟೆಂಬರ್ ತಿಂಗಳ ಕೋಟಾ ಪ್ರಕಾರ 36.76 ಟಿಎಂಸಿ ನೀರನ್ನು ಬಿಳಿಗುಂಡ್ಲು ಮೂಲಕ ಹರಿಸಬೇಕು. 2023ರ ಸೆಪ್ಟೆಂಬರ್ 13ರಿಂದ 27ರ ಅವಧಿಯಲ್ಲಿ 18.38 ಟಿಎಂಸಿ ಬಿಡಬೇಕಿದೆ. ಆದರೆ, ಮಳೆ ಕೊರತೆಯ ಕಾರಣಕ್ಕೆ 10.002 ಟಿಎಂಸಿ ಕಳೆದು 8.378 ಟಿಎಂಸಿ ಅಥವಾ ಪ್ರತಿ ದಿನ 6400 ಕ್ಯೂಸೆಕ್ಸ್ ನೀರು ಹರಿಸಬೇಕು ಎಂದು ನಿರ್ಧರಿಸುವ ಮೂಲಕ ಸಿಡಬ್ಲ್ಯುಆರ್‌ಸಿ ಪ್ರಮಾದ ಎಸಗಿದೆ. ಈ ಅಂದಾಜು ಸ್ವೇಚ್ಛೆಯಿಂದ ಕೂಡಿದೆ. ಏಕೆಂದರೆ ಸೆಪ್ಟೆಂಬರ್‌ನಲ್ಲಿ ನೈರುತ್ಯ ಮುಂಗಾರು ವಿಫಲವಾಗಿದೆ. ಅಲ್ಲದೆ, ಹವಾಮಾನ ಇಲಾಖೆಯ ಅಂದಾಜನ್ನು ಗಣನೆಗೆ ತೆಗೆದುಕೊಂಡರೆ ಮಧ್ಯಂತರ ಜಲಾನಯನ ಪ್ರದೇಶದಲ್ಲಿ ಮಳೆಯ ಕೊರತೆ ಇನ್ನೂ ಹೆಚ್ಚಿರಲಿದೆ. ಈ ನೆಲೆಯಲ್ಲಿ 2023ರ ಸೆಪ್ಟೆಂಬರ್ 27ರವರೆಗೆ ಪ್ರತಿದಿನ 5000 ಕ್ಯೂಸೆಕ್ಸ್ ನೀರು ಹರಿಸುವಂತೆ ಆದೇಶಿಸುವ ಮೂಲಕ ಸಿಡಬ್ಲ್ಯುಆರ್‌ಸಿ ತರ್ಕದಲ್ಲಿ ವಿಫಲವಾಗಿದೆ.
  10. ನದಿ ಮುಖಜ ಭಾಗದಲ್ಲಿನ ಅಂತರ್ಜಲ ಲಭ್ಯತೆಯನ್ನು ಸಿಡಬ್ಲ್ಯುಆರ್‌ಸಿ ಅನುಕೂಲಕ್ಕೆ ತಕ್ಕಂತೆ ಅವಗಣನೆ ಮಾಡಿದೆ. ಈಶಾನ್ಯ ಮಾರುತವು ತಮಿಳುನಾಡಿನ ಕೊರತೆಯನ್ನು ತುಂಬುವ ಸಾಧ್ಯತೆ ಇದೆ. ಇದನ್ನು ಸಿಡಬ್ಲ್ಯುಆರ್‌ಸಿ ಪರಿಗಣಿಸಿಲ್ಲ. ಬಾಕಿ ಇರುವ ತಿಂಗಳ ಅವಧಿಗೆ (ಮುಂದಿನ ಜೂನ್‌ವರೆಗೆ) ಕರ್ನಾಟಕಕ್ಕೆ ಕನಿಷ್ಠ ಅಗತ್ಯವಾಗಿ 106 ಟಿಎಂಸಿ ನೀರು ಬೇಕಿದೆ ಎಂಬುದನ್ನು ಸಿಡಬ್ಲ್ಯುಆರ್‌ಸಿ ಗಣನೆಗೆ ತೆಗೆದುಕೊಳ್ಳುವಲ್ಲಿ ಎಡವಿದೆ. ಕರ್ನಾಟಕದ ಜಲಾಶಯಗಳಲ್ಲಿ ಸದ್ಯ 54.114 ಟಿಎಂಸಿ ನೀರು ಇದ್ದು, ಸರಾಸರಿ ಮಳೆಯ ಪ್ರಮಾಣಕ್ಕೆ ಶೇ.54 ಮಳೆ ಕೊರತೆಯನ್ನು ಸೇರಿಸಿದರೆ ಒಳಹರಿವು 44.78 ಟಿಎಂಸಿ ಮಾತ್ರ ಇರುವ ಸಾಧ್ಯತೆ ಇದೆ. ಈ ಲೆಕ್ಕದಲ್ಲಿ ಒಟ್ಟ ನೀರು ಲಭ್ಯತೆಯ ಪ್ರಮಾಣ 98.854 ಟಿಎಂಸಿ ಮಾತ್ರ ಆಗಲಿದೆ. ಆದರೆ, ನಾವು ಕಳೆದ ಮೂವತ್ತು ವರ್ಷಗಳ ಅತಿ ಹೆಚ್ಚು ಮಳೆ ಕೊರತೆಯ ವರ್ಷಗಳಲ್ಲಿನ ಪ್ರತಿ ತಿಂಗಳ ಕನಿಷ್ಠ ಒಳಹರಿವನ್ನು ಪರಿಗಣಿಸಿ ಲೆಕ್ಕ ಹಾಕಿದರೆ ಸೆಪ್ಟೆಂಬರ್‌ ತಿಂಗಳ ಉಳಿಕೆ ಅವಧಿಯ 10 ಟಿಎಂಸಿಯೂ ಸೇರಿದಂತೆ ಡಿಸೆಂಬರ್‌ ವರೆಗಿನ ನೀರು ಲಭ್ಯತೆಯ ಪ್ರಮಾಣ ಒಟ್ಟು 20 ಟಿಎಂಸಿ ದಾಟುವುದಿಲ್ಲ. ಈ ನೆಲೆಯಲ್ಲಿ ಗಮನಿಸಿದರೆ ಕರ್ನಾಟಕಕ್ಕೆ ಲಭ್ಯವಾಗುವ ನೀರಿನ ಪ್ರಮಾಣ 74.114 ಟಿಎಂಸಿ ಮೀರುವ ಸಾಧ್ಯತೆ ಇಲ್ಲ. ಹಾಗಾಗಿ, ಕರ್ನಾಟಕದ ಅಗತ್ಯ ಬಳಕೆಗೆ ಮಿತಿಗೊಳಿಸಲಾದ 106 ಟಿಎಂಸಿ ನೀರಿನ ಪ್ರಮಾಣವು ಸಹ ಲಭ್ಯವಾಗದೆ ಹೋಗಬಹುದು.
  11. ಸಿಡಬ್ಲ್ಯುಆರ್‌ಸಿಯು ಬಿಳಿಗುಂಡ್ಲುವಿನಲ್ಲಿ ಕರ್ನಾಟಕದಿಂದ ಹರಿಸಬೇಕಾದ ನೀರಿನ ಪ್ರಮಾಣದಲ್ಲಿ 7.799 ಟಿಎಂಸಿ ಕೊರತೆಯಾಗಿದೆ ಎಂದು ಅಂದಾಜಿಸಿರುವುದು ಸಂಪೂರ್ಣವಾಗಿ ದೋಷಪೂರಿತವಾಗಿದೆ. ಇದಕ್ಕೆ ಯಾವುದೇ ಆಧಾರವಿಲ್ಲ. ಬರುವ ತಿಂಗಳುಗಳಲ್ಲಿ ಸಿಡಬ್ಲ್ಯುಆರ್‌ಸಿ ಅಂದಾಜಿಸಿರುವ ಕೊರತೆಯು ಶೇ. 45.58 ಮಾತ್ರವಲ್ಲ. ಇದು ಇನ್ನೂ ಹೆಚ್ಚಾಗಲಿದೆ.
  12. ಈಶಾನ್ಯ ಮಳೆಮಾರುತವು ತಮಿಳುನಾಡಿನಲ್ಲಿ ಸಾಧಾರಣವಾಗಿ 45 ದಿನ ಇರಲಿದೆ. ತಮಿಳುನಾಡಿನಲ್ಲಿ ಅಂತರ್ಜಲವು 20ರಿಂದ 30 ಟಿಎಂಸಿ ಇದ್ದು, ಹಾಲಿ ನೀರು ಸಂಗ್ರಹ ಮತ್ತು ಅಂದಾಜು 60 ಟಿಎಂಸಿ ನೀರು ಮಧ್ಯಂತರ ಜಲಾನಯನ ಪ್ರದೇಶದಿಂದ ಹರಿದು ಬರುವುದರಿಂದ ತಮಿಳುನಾಡು ಪರಿಸ್ಥಿತಿಯನ್ನು ನಿರ್ವಹಿಸಬಹುದಾಗಿದೆ. ಕರ್ನಾಟಕದ ರೈತರಿಗೆ ಅಗತ್ಯವಾಗಿರುವ ಕನಿಷ್ಠ ನೀರಾವರಿ ಅಗತ್ಯತೆ ಹಾಗೂ ಕುಡಿಯುವ ನೀರಿನ ಅಗತ್ಯತೆಯ ದೃಷ್ಟಿಯಿಂದ ನೀರು ಬಿಡುಗಡೆ ಮಾಡಲಾಗದು. ವಿಶೇಷವಾಗಿ ಜಗತ್ತಿನ ತಂತ್ರಜಾನ ಹಬ್ ಆಗಿರುವ ಬೆಂಗಳೂರು ವಾರ್ಷಿಕ 100 ಬಿಲಿಯನ್ ಡಾಲರ್ ವಿದೇಶಿ ವಿನಿಮಯ ಗಳಿಕೆ ಮಾಡುತ್ತಿದ್ದು, ಇದರ ಕುಡಿಯುವ ನೀರಿನ ಅವಶ್ಯಕತೆಯ ದೃಷ್ಟಿಯಿಂದ ನೀರು ಹರಿಸಲಾಗದು.
  13. ಕರ್ನಾಟಕದಲ್ಲಿ ಬರ ಪರಿಸ್ಥಿತಿ ಇದ್ದು, ಕಾವೇರಿ ಪ್ರದೇಶದಲ್ಲಿ ಬರುವ 15 ತಾಲ್ಲೂಕುಗಳು ಬರಪೀಡಿತವಾಗಿವೆ. ಇದನ್ನು ಸಹ ಪ್ರಾಧಿಕಾರವು ಪರಿಣಿಸಬೇಕಿದೆ.

ಇದನ್ನೂ ಓದಿ: Cauvery Dispute : ಕಾವೇರಿ ವಿವಾದದಲ್ಲಿ ಪ್ರಧಾನಿ ಮಧ್ಯಪ್ರವೇಶ ಕೋರುವುದು ತಪ್ಪಲ್ಲ; ಮಾಜಿ ಅಡ್ವೊಕೇಟ್‌ ಜನರಲ್‌ ಬಿ.ವಿ ಆಚಾರ್ಯ

ಹಾಗಿದ್ದರೆ ತಮಿಳುನಾಡು ವಾದ ಏನಾಗಿತ್ತು?

  • ತಮಿಳುನಾಡಿನಲ್ಲಿ ನೀರಾವರಿ ಪ್ರದೇಶ ವಿಸ್ತರಿಸಲಾಗಿದೆ ಮತ್ತು ದೊಡ್ಡ ಮಟ್ಟದಲ್ಲಿ ಫಸಲು ಬೆಳೆಯಲಾಗುತ್ತಿದೆ ಎಂಬ ಕರ್ನಾಟಕದ ವಾದದಲ್ಲಿ ಸತ್ಯವಿಲ್ಲ.
  • ನೀರು ಸಂಗ್ರಹಕ್ಕೆ ಸೌಲಭ್ಯ ಇದ್ದರೂ ತಮಿಳುನಾಡು ಸಮರ್ಥವಾಗಿ ನೀರು ಬಳಕೆ ಮಾಡುತ್ತಿಲ್ಲ ಎಂಬ ವಾದ ಸರ್ವಥಾ ಸರಿಯಲ್ಲ. ಕುರುವೈಗೆ ನ್ಯಾಯಮಂಡಳಿಯ ಬೆಳೆ ನೀರು ಅಗತ್ಯದ (ಸಿಡಬ್ಲುಆರ್) ಪ್ರಕಾರ ಜೂನ್-ಆಗಸ್ಟ್‌ನಲ್ಲಿ 30 ಟಿಎಂಸಿ ಬೇಕಿದೆ. ಜುಲೈ-ಆಗಸ್ಟ್‌ನಲ್ಲಿ ಸಾಂಬಾ ಬೆಳೆಗೆ 32 ಟಿಎಂಸಿ ನೀರು ಬೇಕಿದೆ. ಭೂಮಿ ಹದಗಳಿಸಲು ಮತ್ತು ಬಿತ್ತನೆಗೆ ಹೆಚ್ಚಿನ ನೀರು ಬೇಕಿದೆ. ಒಟ್ಟಾರೆ 95 ಟಿಎಂಸಿ ನೀರು ಬೇಕಿದ್ದು, ಜೂನ್ 12ರಿಂದ 31ರವರೆಗೆ ಮೆಟ್ಟೂರಿನಲ್ಲಿ 68.357 ಟಿಎಂಸಿ ಮಾತ್ರ ನೀರಿದೆ.
  • ಈಶಾನ್ಯ ಮಳೆಮಾರುತದ ಮೇಲೆ ಹೆಚ್ಚಿನ ನಿರೀಕ್ಷೆ ಇಟ್ಟುಕೊಳ್ಳಲಾಗುವುದಿಲ್ಲ. ಈ ವೇಳೆ ಚಂಡಮಾರುತದಿಂದಾಗಿ ಬೆಳೆಗೆ ಹಾನಿ ಉಂಟಾಗಿದ್ದೂ ಇದೆ. ನೈರುತ್ಯ ಮಾನ್ಸೂನ್ ವಿಫಲವಾಗಿರುವುದರಿಂದ ಈಶಾನ್ಯ ಮಾನ್ಸೂನ್ ಸಹ ವಿಫಲವಾಗುವ ಸಾಧ್ಯತೆ ಇದೆ.
  • ಪ್ರಸಕ್ತ ವರ್ಷದಲ್ಲಿ ಕರ್ನಾಟಕ 1.701 ಲಕ್ಷ ಎಕರೆ ಪ್ರದೇಶದಲ್ಲಿ ಫಸಲು ಮಾಡಿದೆ ಎಂದು ಹೇಳಿದೆ. 2023ರ ಜೂನ್ 1ರಿಂದ ಸೆಪ್ಟೆಂಬರ್ 11ರವರೆಗೆ ಕರ್ನಾಟಕವು 25.662 ಟಿಎಂಸಿ ನೀರನ್ನು ನಾಲ್ಕು ಪ್ರಮುಖ ಜಲಾಶಯಗಳಿಂದ ಕಾಲುವೆಗಳ ಮೂಲಕ ಹರಿಸಿಕೊಂಡಿದೆ. ಇದರ ಜೊತೆಗೆ ಕೆಆರ್‌ಎಸ್‌ ಮತ್ತು ಕಬಿನಿ ಅಣೆಕಟ್ಟುಗಳ ಕಾಲುವೆಗಳ ಮೂಲಕ ಹರಿಸಿರುವ ನೀರಿನ ಮಾಹಿತಿಯನ್ನು ಕರ್ನಾಟಕ ನೀಡಿಲ್ಲ.
  • 2023ರ ಜೂನ್‌ನಿಂದ 2024ರ ಜನವರಿಯವರೆಗೆ ನಾಲ್ಕು ಜಲಾಶಯಗಳಿಂದ 72 ಟಿಎಂಸಿ ಕರ್ನಾಟಕಕ್ಕೆ ಬೇಕಿದೆ. ಆದರೆ, ಕರ್ನಾಟಕವು ಈಗಾಗಲೇ ಶೇ. 50ರಷ್ಟು ನೀರುಬಳಕೆ ಮಾಡಿದೆ.
  • ತಮಿಳುನಾಡು ವಾದವನ್ನು ಪರಿಗಣಿಸದೇ ಸೆಪ್ಟೆಂಬರ್ 13ರಿಂದ 15 ದಿನ ಪ್ರತಿದಿನ 5 ಸಾವಿರ ಕ್ಯೂಸೆಕ್ಸ್ ನೀರು ಬಿಡುವಂತೆ ಕರ್ನಾಟಕಕ್ಕೆ ಸಿಡಬ್ಲ್ಯುಅರ್‌ಸಿ ಆದೇಶಿಸಿದೆ. ಪ್ರೊ-ರಾಟಾ ತತ್ವದ ಅಡಿ ವಿಮುಖವಾಗಿರುವುದು ಮತ್ತು 12,500 ಕ್ಯೂಸೆಕ್ಸ್‌ನಿಂದ 5 ಸಾವಿರ ಕ್ಯೂಸೆಕ್ಸ್‌ಗೆ ಇಳಿಸಿರುವುದಕ್ಕೆ ಯಾವುದೇ ಕಾರಣ ನೀಡಲಾಗಿಲ್ಲ ಎಂದು ತಮಿಳುನಾಡಿನ ಅಧಿಕಾರಿಗಳು ವಾದಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Victoria Hospital: ವಿಕ್ಟೋರಿಯಾ ಆಸ್ಪತ್ರೆಯಿಂದ ವಜಾಗೊಂಡಿದ್ದ 55 ಸಿಬ್ಬಂದಿ ಮರು ನೇಮಕ

Victoria Hospital: ವಿಕ್ಟೋರಿಯಾ ಆಸ್ಪತ್ರೆಯಿಂದ ಸಿಬ್ಬಂದಿ ವಜಾ ಬಗ್ಗೆ ಈ ಬಗ್ಗೆ ಮೇ 11ರಂದು ವಿಸ್ತಾರ ನ್ಯೂಸ್ ವಿಶೇಷ ವರದಿ ಪ್ರಸಾರ ಮಾಡಿ ಮೇಲಧಿಕಾರಿಗಳ ಗಮನ ಸೆಳೆದಿತ್ತು. ಇದರ ಬೆನ್ನಲ್ಲೇ 55 ಸಿಬ್ಬಂದಿಯನ್ನು ಮರುನೇಮಕ ಮಾಡಲಾಗಿದೆ.

VISTARANEWS.COM


on

Victoria Hospital
Koo

ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಯಿಂದ (Victoria Hospital) ವಜಾ ಅಗಿದ್ದ 55 ಸಿಬ್ಬಂದಿಯನ್ನು ಮರುನೇಮಕ ಮಾಡಲಾಗಿದೆ. ಕೆಲಸ ಕೂಲಿ ಕೇಳಿದ್ದಕ್ಕೆ ವಜಾ ಮಾಡಿದ್ದಾರೆ ಎಂದು ಆಡಳಿತ ಮಂಡಳಿ ವಿರುದ್ಧ ಸಿಬ್ಬಂದಿ ಪ್ರತಿಭಟನೆ ನಡೆಸಿ ಅಕ್ರೋಶ ಹೊರಹಾಕಿದ್ದರು. ಇದೀಗ ಮಾನವೀಯತೆ ಆಧಾರದ ಮೇಲೆ ಎಲ್ಲಾ 55 ಹೊರಗುತ್ತಿಗೆ ಸಿಬ್ಬಂದಿಯನ್ನು ಮರುನೇಮಕ ಮಾಡಲಾಗಿದೆ.

ಸಿಬ್ಬಂದಿ ವಜಾ ಬಗ್ಗೆ ಈ ಬಗ್ಗೆ ಮೇ 11ರಂದು ವಿಸ್ತಾರ ನ್ಯೂಸ್ ವಿಶೇಷ ವರದಿ ಪ್ರಸಾರ ಮಾಡಿ ಮೇಲಧಿಕಾರಿಗಳ ಗಮನ ಸೆಳೆದಿತ್ತು. ಇದರಿಂದ ಎಚ್ಚೆತ್ತುಕೊಂಡ ವಿಕ್ಟೋರಿಯಾ ಆಸ್ಪತ್ರೆ ಆಡಳಿತ ಮಂಡಳಿ, ವಜಾಗೊಂಡಿದ್ದ ಸಿಬ್ಬಂದಿಯನ್ನು ಮರು ನೇಮಕ ಮಾಡಿದೆ.

ಹೊಸ ಏಜೆನ್ಸಿ ಬಂದ ಹಿನ್ನೆಲೆ ಸುಮಾರು 55 ಮಂದಿಯನ್ನು ಕೈಬಿಡಲಾಗಿತ್ತು. ಏಜೆನ್ಸಿ ಹಾಗೂ ಆಡಳಿತ ಮಂಡಳಿ ನಿರ್ಲಕ್ಷ್ಯದ ಹಿನ್ನೆಲೆ ಸಿಬ್ಬಂದಿ ಆತಂಕಕ್ಕೆ ಒಳಗಾಗಿದ್ದರು. ಹೀಗಾಗಿ ವೈದ್ಯಕೀಯ ಶಿಕ್ಷಣ ಸಚಿವರ ಸೂಚನೆ ಬೆನ್ನಲ್ಲೇ ಸಭೆ ನಡೆಸಿದ್ದ ಹಿರಿಯ ಅಧಿಕಾರಿಗಳು, ಮಾನವೀಯತೆ ಆಧಾರದ ಮೇಲೆ ಎಲ್ಲಾ 55 ಹೊರಗುತ್ತಿಗೆ ಸಿಬ್ಬಂದಿಯನ್ನು ಮರುನೇಮಕ ಮಾಡಿದ್ದಾರೆ.

ಇದನ್ನೂ ಓದಿ | Hebbal flyover: ಬಿಡಿಎ ಕಾಮಗಾರಿ; ಹೆಬ್ಬಾಳ ಮೇಲ್ಸೇತುವೆಗೆ ಕೆ.ಆರ್.ಪುರಂನಿಂದ ಬರುವ ವಾಹನಗಳಿಗೆ ನಿರ್ಬಂಧ

ವಜಾ ಮಾಡಿದ್ದ ಸಿಬ್ಬಂದಿಯನ್ನು ಮರು ನೇಮಕ ಮಾಡಿದ್ದು, ಕಳೆದ ಎರಡು ತಿಂಗಳ ಸಂಬಳ ಸಹ ಶೀಘ್ರ ಪಾವತಿಗೆ ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಬೆಂಗಳೂರು ವೈದ್ಯಕೀಯ ಕಾಲೇಜು & ಸಂಶೋಧನಾ ಸಂಸ್ಥೆ ನಿರ್ದೇಶಕ ರಮೇಶ್ ಕೃಷ್ಣ ಮಾಹಿತಿ ನೀಡಿದ್ದಾರೆ.

ಕಳೆದ 20 ವರ್ಷಗಳಿಂದ ಸಿಬ್ಬಂದಿ ಡಿ ಗ್ರೂಪ್ ನೌಕರರಾಗಿ ಹೊರಗುತ್ತಿಗೆ ಆಧಾರದಲ್ಲಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು. ಆದರೆ ಕಳೆದ ಎರಡು ತಿಂಗಳು ಹಿಂದೆ ಏಜೆನ್ಸಿ ಬದಲಾದ ಹಿನ್ನೆಲೆ ಈ ಎಲ್ಲರನ್ನೂ ಕೈ ಬಿಡುವ ಮಾತು ಕೇಳಿಬಂದಿತ್ತು. ಆದರೆ ಕೆಲಸದಿಂದ ಕೈ ಬಿಡಲ್ಲ ಅಂತ ಹೇಳಿದ್ದ ಹೊಸ ಏಜೆನ್ಸಿ ಇವರೆಲ್ಲರನ್ನೂ ಮುಂದುವರಿಸಿತ್ತು. ಆದರೆ ಕೆಲಸ ಮಾಡಿಸಿಕೊಂಡಿತೇ ಹೊರತು ಸಂಬಳ ಮಾತ್ರ ನೀಡಿರಲಿಲ್ಲ.

ಇದನ್ನೂ ಓದಿ | Silicon City Hospital: ಲಕ್ಷಕ್ಕೆ ಇಬ್ಬರಿಗೆ ಬರುವ ಮೆದುಳಿನ ರಕ್ತನಾಳ ಒಡೆಯುವ ಕಾಯಿಲೆ; ಯಶಸ್ವಿ ಶಸ್ತ್ರಚಿಕಿತ್ಸೆಯಿಂದ ಬಾಲಕಿ ಪಾರು

ಯಾಕೆ ಸಂಬಳ ನೀಡಿಲ್ಲ ಅಂತ ಕಳೆದ 4 ದಿನಗಳ ಹಿಂದೆ ಕೇಳಿದಾಗ ನಿಮ್ಮನ್ನು ಕೆಲಸದಿಂದ ಕೈಬಿಡಲಾಗಿದೆ ಅಂತ ಏಜೆನ್ಸಿ ಹೇಳಿದೆ. ಈ ವಿಷಯ ಕೇಳಿ ದಿಗ್ಭ್ರಾಂತರಾದ ಸಿಬ್ಬಂದಿ ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿ ಸ್ಪಷ್ಟನೆ ಕೇಳಲು ಮುಂದಾಗಿದ್ದರು. ಬಳಿಕ ವಿವಿ ಪುರಂ ಪೊಲೀಸರು ಅಲ್ಲಿಂದ ಎಲ್ಲರನ್ನೂ ಬೇರೆಡೆಗೆ ಕರೆದೊಯ್ದು ಪರಿಸ್ಥಿತಿ ತಿಳಿಗೊಳಿಸಿದ್ದರು. ಮರು ನೇಮಕ ಮಾಡಿದ್ದರಿಂದ ಕೆಲಸ ಕಳೆದುಕೊಂಡು ಕಂಗಾಲಾಗಿದ್ದ ಸಿಬ್ಬಂದಿ ನಿರಾಳರಾಗಿದ್ದಾರೆ.

Continue Reading

ಕರ್ನಾಟಕ

Prajwal Revanna Case: ಪ್ರಜ್ವಲ್‌ ರೇವಣ್ಣ ನಾಳೆಯೇ ಜರ್ಮನಿಯಿಂದ ಭಾರತಕ್ಕೆ?; ವಿಸ್ತಾರ ನ್ಯೂಸ್‌ಗೆ ಮಹತ್ವದ ದಾಖಲೆ ಲಭ್ಯ

Prajwal Revanna Case: ವಿದೇಶದಲ್ಲಿರುವ ಸಂಸದ ಪ್ರಜ್ವಲ್‌ ರೇವಣ್ಣ ಭಾರತಕ್ಕೆ ಮರಳುವ ಬಗ್ಗೆ ವಿಸ್ತಾರ ನ್ಯೂಸ್‌ಗೆ ಖಚಿತ ಮಾಹಿತಿ ಲಭ್ಯವಾಗಿದೆ.‌ ಎಲ್ಲಿಂದ, ಯಾವಾಗ ಸಂಸದ ಆಗಮಿಸಲಿದ್ದಾರೆ ಎಂಬ ಮಾಹಿತಿ ಇಲ್ಲಿದೆ.

VISTARANEWS.COM


on

Prajwal Revanna Case
Koo
VISTARA-EXCLUSIVE

ಬೆಂಗಳೂರು: ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ (Prajwal Revanna Case) ಎಸ್‌ಐಟಿ ಮೋಸ್ಟ್ ವಾಂಟೆಡ್‌ ಲಿಸ್ಟ್‌ನಲ್ಲಿರುವ ಸಂಸದ ಪ್ರಜ್ವಲ್‌ ರೇವಣ್ಣ, ಯಾವಾಗ ವಿದೇಶದಿಂದ ಭಾರತಕ್ಕೆ ಬರಲಿದ್ದಾರೆ ಎಂದು ತನಿಖಾಧಿಕಾರಿಗಳು ಕಾಯುತ್ತಿದ್ದಾರೆ. ಈ ನಡುವೆ ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಬಂಧನವಾಗಿದ್ದ ಎಚ್‌.ಡಿ.ರೇವಣ್ಣ ಅವರಿಗೆ ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ಪ್ರಜ್ವಲ್‌ ನ್ಯಾಯಾಲಯಕ್ಕೆ ಶರಣಾಗಲಿದ್ದಾರೆ ಎನ್ನಲಾಗುತ್ತಿತ್ತು. ಇದೀಗ ಪ್ರಜ್ವಲ್‌ ರೇವಣ್ಣ ವಿದೇಶದಿಂದ ಯಾವಾಗ ವಾಪಸ್‌ ಬರಲಿದ್ದಾರೆ ಎಂಬ ಮಹತ್ವದ ಮಾಹಿತಿ ವಿಸ್ತಾರ ನ್ಯೂಸ್‌ಗೆ ಲಭ್ಯವಾಗಿದೆ.

ಹೌದು, ವಿದೇಶದಲ್ಲಿರುವ ಪ್ರಜ್ವಲ್‌ ರೇವಣ್ಣ ಭಾರತಕ್ಕೆ ಮರಳುವ ಬಗ್ಗೆ ವಿಸ್ತಾರ ನ್ಯೂಸ್‌ಗೆ ಖಚಿತ ಮಾಹಿತಿ (Vistara Exclusive) ಲಭ್ಯವಾಗಿದೆ.‌ ಜರ್ಮನಿಯಲ್ಲಿರುವ ಪ್ರಜ್ವಲ್‌, ಲುಫ್ತಾನ್ಸಾ ಏರ್‌ಲೈನ್ಸ್‌ ಮೂಲಕ ಪ್ರಜ್ವಲ್‌ ಭಾರತಕ್ಕೆ ಹಿಂತಿರುಗಲಿದ್ದಾರೆ. ಜರ್ಮನಿಯಲ್ಲಿ ನಾಳೆ (ಮೇ 15) ಬೆಳಗ್ಗೆ 11.20 ರಿಂದ 11.50ರೊಳಗೆ ಬೋರ್ಡಿಂಗ್‌ ಆಗಲಿದ್ದು, ಅವರಿಗಾಗಿ ಸೀಟ್‌ ನಂಬರ್‌ 6ಜಿ ಬುಕ್‌ ಮಾಡಲಾಗಿದೆ. LH0764 ವಿಮಾನದಲ್ಲಿ ಸಂಸದ ಆಗಮಿಸಲಿದ್ದಾರೆ.

ಹರಿಯಾಣದ ಅಕಲ್‌ ಟ್ರಾವೆಲ್ಸ್‌ನಿಂದ ಪ್ರಜ್ವಲ್‌ಗೆ ಟಿಕೆಟ್‌ ಬುಕ್‌ ಮಾಡಲಾಗಿದೆ. ಜರ್ಮನಿಯ ಮ್ಯೂನಿಚ್‌ನಲ್ಲಿ ಬೆಳಗ್ಗೆ 12.05ಕ್ಕೆ ಫ್ಲೈಟ್‌ ಟೇಕಾಫ್‌ ಆಗಲಿದ್ದು, ರಾತ್ರಿ 12.30ಕ್ಕೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದೆ.

ಇದನ್ನೂ ಓದಿ | HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

ವಿಚಾರಣೆಗೆ ಹಾಜರಾಗುವಂತೆ ಪ್ರಜ್ವಲ್‌ಗೆ ಲುಕ್‌ ಔಟ್‌ ನೋಟಿಸ್‌ ಹಾಗೂ ಬ್ಲೂ ಕಾರ್ನರ್‌ ನೋಟಿಸ್‌ ಜಾರಿ ಮಾಡಲಾಗಿತ್ತು. ತಂದೆಗೆ ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ವಿದೇಶದಲ್ಲಿರುವ ಪ್ರಜ್ವಲ್‌ ರೇವಣ್ಣ ನ್ಯಾಯಾಲಯದ ಮುಂದೆ ಶರಣಾಗುವ ಸಾಧ್ಯತೆ ಇದ್ದು, ಬಹುತೇಕ ಈ ವಾರದಲ್ಲೇ ವಿದೇಶದಿಂದ ಆಗಮಿಸಬಹುದು ಎನ್ನಲಾಗಿತ್ತು. ಇದೀಗ ಅವರು ನಾಳೆಯೇ ದೇಶಕ್ಕೆ ಆಗಮಿಸುವ ಮಾಹಿತಿ ಲಭ್ಯವಾಗಿದೆ.

ಎಸ್ಐಟಿ ಮುಂದೆ ಬುಧವಾರ ಭವಾನಿ ರೇವಣ್ಣ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದ್ದು, ಪ್ರಜ್ವಲ್‌ ರೇವಣ್ಣ ಬುಧವಾರ ಸಂಜೆ ಬೆಂಗಳೂರಿಗೆ ಬಂದು ಗುರುವಾರ ನ್ಯಾಯಾಲಯದ ಮುಂದೆ ಹಾಜರಾಗುವ ಸಾಧ್ಯತೆ ಇದೆ. ರೇವಣ್ಣಗೆ ಜಾಮೀನು ಸಿಕ್ಕ ಬಳಿಕ ನ್ಯಾಯಲಯದ ಮುಂದೆ ಹಾಜರಾಗುವಂತೆ ರೇವಣ್ಣ ಕುಟುಂಬದ ವಕೀಲರು ಸಲಹೆ ನೀಡಿದ್ದರಿಂದ ಪ್ರಜ್ವಲ್‌ ರೇವಣ್ಣ ವಿದೇಶದಿಂದ ಬರುತ್ತಿದ್ದಾರೆ ಎನ್ನಲಾಗಿದೆ.

ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

HD Revanna Released first reaction after release will be acquitted of all charges

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೆ.ಆರ್.‌ ನಗರದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪದಡಿ ಜೈಲು ಸೇರಿ ಜಾಮೀನಿನ ಮೇಲೆ ಬಿಡುಗಡೆ ಆಗಿರುವ ಮಾಜಿ ಸಚಿವ, ಹಾಲಿ ಶಾಸಕ ಎಚ್.ಡಿ. ರೇವಣ್ಣ (HD Revanna Released) ಮಾಧ್ಯಮಗಳಿಗೆ ಮೊದಲ ಪ್ರತಿಕ್ರಿಯೆಯನ್ನು ನೀಡಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಎಚ್.ಡಿ. ರೇವಣ್ಣ, ನನಗೆ ನ್ಯಾಯಾಂಗದ ಮೇಲೆ ನಂಬಿಕೆ ಇದೆ. ನ್ಯಾಯ ಸಿಗುತ್ತದೆ ಎಂಬ ವಿಶ್ವಾಸ ಇದೆ. ದೇವರಲ್ಲಿ ಅದನ್ನೇ ಪ್ರಾರ್ಥನೆ ಮಾಡಿಕೊಂಡಿದ್ದೇನೆ. ನಾನು ಹೆಚ್ಚಿಗೆ ಏನು ಮಾತನಾಡಲ್ಲ. ಕಳೆದ 11 ದಿನಗಳಿಂದ ನ್ಯಾಯಾಲಯದ ಕಾನೂನನ್ನು ಪಾಲಿಸಿದೇನೆ. ಈ ಆಪಾದನೆಯಿಂದ ಹೊರಗೆ ಬರುತ್ತೇನೆ ಎಂಬ ನಂಬಿಕೆ ಇದೆ ಎಂದು ಹೇಳಿದರು.

ಇದನ್ನೂ ಓದಿ | HD Revanna Released: ತಬ್ಬಿಕೊಂಡ ಎಚ್‌ಡಿಕೆ; ಕುಟುಂಬಸ್ಥರ ಕಂಡು ಕಣ್ಣೀರಿಟ್ಟ ರೇವಣ್ಣ, ಇಷ್ಟಾದರೂ ಬಾರದ ಭವಾನಿ!

Continue Reading

ಉತ್ತರ ಕನ್ನಡ

Uttara Kannada News: ಬದುಕಿನ ಪುರುಷಾರ್ಥಗಳ ಸಾಧನೆಗೆ ರಾಮಾಯಣ ಸಾಧನ; ಶ್ರೀರಾಘವೇಶ್ವರ ಭಾರತೀ ಸ್ವಾಮೀಜಿ

Uttara Kannada News: ಕರ್ನಾಟಕ ರಾಜ್ಯ ಸಂಸ್ಕೃತ ವಿಶ್ವವಿದ್ಯಾನಿಲಯ ಮತ್ತು ಶ್ರೀವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿರುವ ಭಾವ ರಾಮಾಯಣ- ರಾಮಾವತರಣ ಸರ್ಟಿಫಿಕೆಟ್ ಕೋರ್ಸ್ ಮತ್ತು ಅಲ್ಪಾವಧಿ ಕೋರ್ಸ್‍ಗಳ ತರಗತಿಗಳು ಮಂಗಳವಾರ ಆರಂಭವಾದವು. ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಸ್ವಾಮೀಜಿ ಅವರು 40 ನಿಮಿಷಗಳ ಕಾಲ ಭಾವರಾಮಾಯಣ ತರಗತಿ ನಡೆಸಿಕೊಟ್ಟರು.

VISTARANEWS.COM


on

Shri Raghaveshwar Bharati Swamiji spoke in Bhava Ramayana Ramavataran Certificate Course and Short Term Courses Class
Koo

ಗೋಕರ್ಣ: ಕರ್ನಾಟಕ ರಾಜ್ಯ ಸಂಸ್ಕೃತ ವಿಶ್ವವಿದ್ಯಾನಿಲಯ ಮತ್ತು ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಸಹಯೋಗದಲ್ಲಿ ಹಮ್ಮಿಕೊಂಡಿರುವ ಭಾವ ರಾಮಾಯಣ-ರಾಮಾವತರಣ ಸರ್ಟಿಫಿಕೆಟ್ ಕೋರ್ಸ್ ಮತ್ತು ಅಲ್ಪಾವಧಿ ಕೋರ್ಸ್‍ಗಳ ತರಗತಿಗಳು ಮಂಗಳವಾರ (Uttara Kannada News) ಆರಂಭವಾದವು.

ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ‌ ಸ್ವಾಮೀಜಿ ಅವರು 40 ನಿಮಿಷಗಳ ಕಾಲ ಭಾವರಾಮಾಯಣ ತರಗತಿ ನಡೆಸಿಕೊಟ್ಟರು.

ರಾಮಾಯಣದ ಅನುಸಂಧಾನ ಅನಿರ್ವಚನೀಯ ಆನಂದವನ್ನು ಕೊಡುವಂಥದ್ದು. ಬದುಕಿಗೆ ಯಾವುದು ಹಿತ ಯಾವುದು ಅಹಿತ ಎನ್ನುವುದನ್ನು ರಾಮಾಯಣ ತಿಳಿಸಿಕೊಡುತ್ತದೆ. ಬದುಕಿನ ಪುರುಷಾರ್ಥಗಳ ಸಾಧನೆಗೆ ರಾಮಾಯಣ ಸಾಧನ ಎಂದು ಶ್ರೀರಾಘವೇಶ್ವರ ಭಾರತೀ ಸ್ವಾಮೀಜಿ ವಿಶ್ಲೇಷಿಸಿದರು.

ಇದನ್ನೂ ಓದಿ: Ooty Tour: ಪ್ರತಿ ಸೀಸನ್‌ನಲ್ಲೂ ಭಿನ್ನ ಅನುಭವ! ನಿಮ್ಮ ಊಟಿ ಪ್ರವಾಸ ಯಾವಾಗ?

ರಾಮಾಯಣವನ್ನು ವಾಲ್ಮೀಕಿ ಸೀತಾಚರಿತೆ ಎಂದೂ ಕರೆದಿದ್ದಾರೆ. ರಾಮಾವತರಣದ ಕೊನೆಯಲ್ಲಿ ಬ್ರಹ್ಮ ಹೇಳುವಂತೆ ರಾಮ ಸಾಕ್ಷಾತ್ ವಿಷ್ಣುವಿನ ಅವತಾರ, ಸೀತೆ ಲಕ್ಷ್ಮಿಯ ಅವತಾರ. ರಾವಣ ಸಂಹಾರಕ್ಕಾಗಿ ವಿಷ್ಣು ಮನುಷ್ಯ ರೂಪದಲ್ಲಿ ಭುವಿಗೆ ಅವತರಿಸುತ್ತಾನೆ ಎಂದು ಶ್ರೀಗಳು ತಿಳಿಸಿದರು. ಬದುಕಿನಲ್ಲಿ ನಮಗೆ ಬೇಕಾದ ಎಲ್ಲವನ್ನೂ ಕೊಡುವಂಥದ್ದು ರಾಮಾಯಣ. ಇದರ ಅನುಸಂಧಾನದ ಮೂಲಕ ಬದುಕು ಸಾರ್ಥಕಪಡಿಸಿಕೊಳ್ಳೋಣ ಎಂದು ಶ್ರೀಗಳು ಕರೆ ನೀಡಿದರು.

ಝೂಮ್ ಮಾಧ್ಯಮದ ಮೂಲಕ ಶ್ರೀಗಳು ತರಗತಿ ನಡೆಸಿಕೊಟ್ಟರು. ಜತೆಗೆ ಸಾಮಾಜಿಕ ಜಾಲತಾಣಗಳಲ್ಲಿ ನೇರಪ್ರಸಾರ ಕೂಡಾ ವ್ಯವಸ್ಥೆ ಮಾಡಲಾಗಿತ್ತು.

ಇದನ್ನೂ ಓದಿ: WhatsApp Update: ಅಪ್‌ಡೇಟ್ ಆಗಲಿದೆ ವಾಟ್ಸ್‌ಆಪ್ ಚಾನೆಲ್; ಹೊಸ ಆಪ್ಶನ್‌ ಏನೇನು?

ಕಾರ್ಯಕ್ರಮದಲ್ಲಿ ಹವ್ಯಕ ಮಹಾಮಂಡಲ ಅಧ್ಯಕ್ಷ ಮೋಹನ ಭಾಸ್ಕರ ಹೆಗಡೆ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡಿದ್ದರು. ಪ್ರೊ.ಕೆ.ಎಸ್.ಕಣ್ಣನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಸ್ಕೃತ ವಿವಿ ಕುಲಸಚಿವ ಡಾ.ರಾಮಕೃಷ್ಣ ಭಟ್ ಕೂಟೇಲು ನಿರೂಪಿಸಿದರು.

Continue Reading

ಕರ್ನಾಟಕ

Karnataka weather: ಸಿಡಿಲಿಗೆ ಸಿದ್ದಾಪುರದ ವ್ಯಕ್ತಿ ಬಲಿ; ಇನ್ನೂ ನಾಲ್ಕು ದಿನ ಇದೆ ಭಾರಿ ಮಳೆ ಎಚ್ಚರಿಕೆ!

Karnataka weather: ಚಿಕ್ಕಮಗಳೂರಿನ ಶೃಂಗೇರಿಯಲ್ಲಿ ಗಾಳಿ ಸಹಿತ ಭಾರಿ ಮಳೆಯಾಗಿದೆ. ಮಂಗಳವಾರ ಸಂಜೆ ಶುರುವಾದ ಮಳೆಯು ಕಳೆದ ಒಂದು ಗಂಟೆಗೂ ಹೆಚ್ಚು ಸಮಯ ಸುರಿದಿದೆ. ಶೃಂಗೇರಿ ಪಟ್ಟಣ ಸೇರಿದಂತೆ ಸುತ್ತಮುತ್ತಲಿನಲ್ಲಿ ಧಾರಾಕಾರ ಮಳೆ‌ಯಾಗಿದ್ದು, ಪ್ರವಾಸಿಗರು ಹಾಗೂ ಜನ-ಜೀವನ ಅಸ್ತವ್ಯಸ್ತವಾಗಿದೆ. ಬಲವಾದ ಗಾಳಿ – ಮಳೆಗೆ ಶೃಂಗೇರಿ ತಾಲೂಕಿನ ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

VISTARANEWS.COM


on

Karnataka weather Man from Siddapura killed in lightning Heavy rain warning for four more days
Koo

ಬೆಂಗಳೂರು: ರಾಜ್ಯಾದ್ಯಂತ ಮಳೆಯಾರ್ಭಟ ಜೋರಾಗಿದೆ. ಗುಡುಗು – ಸಿಡಿಲಿನಿಂದ ಕೂಡಿದ ಮಳೆಯಾಗುತ್ತಿದೆ. ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಸಿಡಿಲು ಬಡಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಇನ್ನು ಮೇ 18ರ ವರೆಗೆ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು (Karnataka weather Forecast) ಹವಾಮಾನ ಇಲಾಖೆ ನೀಡಿದೆ.

ಸಿದ್ದಾಪುರ ಗ್ರಾಮದ ಸುರೇಶ್‌ ಶೆಟ್ಟಿ (38) ಮೃತ ದುರ್ದೈವಿ. ಇಂದು ಸಂಜೆ ಹೊತ್ತಿಗೆ ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿದಿದೆ. ಈ ವೇಳೆ ಸುರೇಶ್‌ ಶೆಟ್ಟಿ ಅವರಿಗೆ ಸಿಡಿಲು ಬಡಿದಿದ್ದು, ತೀವ್ರವಾಗಿ ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ.

ಚಿಕ್ಕಮಗಳೂರಿನ ಶೃಂಗೇರಿಯಲ್ಲಿ ಗಾಳಿ ಸಹಿತ ಭಾರಿ (Heavy Rain) ಮಳೆಯಾಗಿದೆ. ಮಂಗಳವಾರ ಸಂಜೆ ಶುರುವಾದ ಮಳೆಯು ಕಳೆದ ಒಂದು ಗಂಟೆಗೂ ಹೆಚ್ಚು ಸಮಯ ಸುರಿದಿದೆ. ಶೃಂಗೇರಿ ಪಟ್ಟಣ ಸೇರಿದಂತೆ ಸುತ್ತಮುತ್ತಲಿನಲ್ಲಿ ಧಾರಾಕಾರ ಮಳೆ‌ಯಾಗಿದ್ದು, ಪ್ರವಾಸಿಗರು ಹಾಗೂ ಜನ-ಜೀವನ ಅಸ್ತವ್ಯಸ್ತವಾಗಿದೆ. ಬಲವಾದ ಗಾಳಿ – ಮಳೆಗೆ ಶೃಂಗೇರಿ ತಾಲೂಕಿನ ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಸತತ ಮಳೆಯಿಂದಾಗಿ (Rain News) ತುಂಗಾ ನದಿಯ ಹರಿವು ಕೊಂಚ ಏರಿಕೆಯಾಗುವ ಸಾಧ್ಯತೆ ಇದೆ. ಧಾರವಾಡದಲ್ಲಿಯೂ ಭಾರಿ ಮಳೆಯಾಗಿದೆ.

ಉತ್ತರ ಕನ್ನಡದಲ್ಲೂ ವರುಣಾರ್ಭಟ

ಉತ್ತರ ಕನ್ನಡದ ಘಟ್ಟದ ಮೇಲಿನ ತಾಲೂಕುಗಳಲ್ಲೂ ವರುಣಾರ್ಭಟ ಜೋರಾಗಿದೆ. ಶಿರಸಿ, ಸಿದ್ದಾಪುರ ಭಾಗದಲ್ಲೂ ಭಾರಿ ಗಾಳಿ ಸಹಿತ ಮಳೆಯಾಗಿದೆ. ಶಿರಸಿಯಲ್ಲಿ ಭಾರಿ ಮಳೆಗೆ ಮರಗಳು ಧರೆಗುರುಳಿವೆ. ನಗರದ ಸಹ್ಯಾದ್ರಿ ಕಾಲೋನಿಯಲ್ಲಿ ಮರ ಬಿದ್ದು, ವಿದ್ಯುತ್ ಕಂಬ ಮುರಿದು ರಸ್ತೆ ಸಂಪೂರ್ಣ ಬ್ಲಾಕ್ ಆಗಿದೆ. ಹತ್ತಕ್ಕೂ ಅಧಿಕ ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ.

ಕುಮಟಾ ತಾಲೂಕಿನ ವಿವಿಧೆಡೆ ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದೆ. ಬಿಸಿಲಿಗೆ ಕಾದಿದ್ದ ಇಳೆಗೆ ವರುಣ ತಂಪೆರೆದಿದ್ದಾನೆ. ಅರ್ಧ ಗಂಟೆಗೂ ಅಧಿಕ ಕಾಲ ಧಾರಾಕಾರ ಮಳೆಯಾಗಿದೆ. ಘಟ್ಟದ ಮೇಲಿನ ತಾಲೂಕುಗಳಲ್ಲಿ ಮಳೆಯಾದರೂ ಕರಾವಳಿಗೆ ವರುಣ ಕಾಲಿಟ್ಟಿರಲಿಲ್ಲ. ಇದೀಗ ವರುಣಾಗಮನದಿಂದ ಕರಾವಳಿ ಜನತೆ ಖುಷಿಯಾಗಿದ್ದಾರೆ. ಭಟ್ಕಳ, ಹೊನ್ನಾವರ, ಅಂಕೋಲಾ, ಕಾರವಾರ ಭಾಗದಲ್ಲಿ ಮೋಡ ಕವಿದ ವಾತಾವರಣವಿದೆ.

ಧಾರವಾಡದಲ್ಲಿ ಮಳೆಯ ಅಬ್ಬರ

ಧಾರವಾಡದಲ್ಲಿ ಮಂಗಳವಾರ ಬೆಳಗ್ಗೆಯಿಂದಲ್ಲೂ ಮೋಡ ಕವಿದ ವಾತಾವರಣವಿತ್ತು. ಇಳಿ ಸಂಜೆಯಾಗುತ್ತಿದ್ದಂತೆ ಧಾರವಾಡ ನಗರಕ್ಕೆ ವರುಣನ ಆಗಮನವಾಗಿದೆ. ಕಳೆದ ಎರಡು ದಿನಗಳ ಹಿಂದೆ ಸುರಿದಿದ್ದ ಮಳೆಯು ಸ್ವಲ್ಪ ಸಮಯ ಬ್ರೇಕ್‌ ಕೊಟ್ಟಿತ್ತು. ಇಂದು ಮತ್ತೆ ಮಳೆ ಸುರಿದಿದ್ದು, ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.

ಮೇ 18ರ ವರೆಗೆ ಮಳೆ ಸಾಧ್ಯತೆ

ಮೇ 18ರ ವರೆಗೆ ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ತಜ್ಞರು ನೀಡಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಕೆಲವು ಕಡೆ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆಯಾಗಲಿದೆ.

ಕೊಡಗು, ಮೈಸೂರು, ಮಂಡ್ಯದ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿ (40-50 ಕಿಮೀ)ಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹಾಸನ, ಚಾಮರಾಜನಗರದಲ್ಲಿ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

ಉತ್ತರ ಕನ್ನಡ, ಧಾರವಾಡ, ಗದಗ, ಕೊಪ್ಪಳ, ಹಾವೇರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-50 kmph) ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ ಜಿಲ್ಲೆಯಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಣ ಹವೆ ಹೆಚ್ಚಾಗುವ ಸಾಧ್ಯತೆ ಇದೆ.

ಶ್ರೀರಂಗಪಟ್ಟಣದಲ್ಲಿ 16 ಸೆಂ.ಮೀ ಮಳೆ

ನಿನ್ನೆ ಸೋಮವಾರ (ಮೇ 13) ರಾಜ್ಯಾದ್ಯಂತ ಮಳೆಯಾಗಿದ್ದು, ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಶ್ರೀರಂಗಪಟ್ಟಣದಲ್ಲಿ 16 ಸೆಂ.ಮೀ ಮಳೆಯಾಗಿದ್ದು, ಮಂಡ್ಯದ ಪಿಟಿಒನಲ್ಲಿ 9 ಸೆಂ.ಮೀ ಮಳೆಯಾಗಿರುವ ವರದಿ ಆಗಿದೆ. ಶಿರಾಳಿಯಲ್ಲಿ ಗರಿಷ್ಠ ಉಷ್ಣಾಂಶ 38.4 ಡಿ.ಸೆನಷ್ಟು ದಾಖಲಾಗಿದೆ.

Continue Reading
Advertisement
Team India
ಪ್ರಮುಖ ಸುದ್ದಿ18 mins ago

Team India : ದ್ರಾವಿಡ್​ ಬಳಿಕ ಇವರೇ ಆಗ್ತಾರೆ ಭಾರತ ತಂಡದ ಕೋಚ್​​

Victoria Hospital
ಕರ್ನಾಟಕ30 mins ago

Victoria Hospital: ವಿಕ್ಟೋರಿಯಾ ಆಸ್ಪತ್ರೆಯಿಂದ ವಜಾಗೊಂಡಿದ್ದ 55 ಸಿಬ್ಬಂದಿ ಮರು ನೇಮಕ

KL Rahul
ಕ್ರೀಡೆ46 mins ago

KL Rahul : ಗಲಾಟೆ ಚಾಪ್ಟರ್ ಕ್ಲೋಸ್​​; ಕೆ. ಎಲ್​ ರಾಹುಲ್​ ಹಿಡಿದ ಕ್ಯಾಚ್​ಗೆ ಮೆಚ್ಚಿ ಚಪ್ಪಾಳೆ ತಟ್ಟಿದ ಗೋಯೆಂಕಾ

Prajwal Revanna Case
ಕರ್ನಾಟಕ2 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ನಾಳೆಯೇ ಜರ್ಮನಿಯಿಂದ ಭಾರತಕ್ಕೆ?; ವಿಸ್ತಾರ ನ್ಯೂಸ್‌ಗೆ ಮಹತ್ವದ ದಾಖಲೆ ಲಭ್ಯ

Bank Loan Fraud
ಪ್ರಮುಖ ಸುದ್ದಿ2 hours ago

Bank Loan Fraud : 34,000 ಕೋಟಿ ರೂ. ಬ್ಯಾಂಕ್​​ ವಂಚನೆ, ಡಿಎಚ್​​ಎಫ್ಎಲ್​​​ ಮಾಜಿ ನಿರ್ದೇಶಕನ ಬಂಧನ

Shri Raghaveshwar Bharati Swamiji spoke in Bhava Ramayana Ramavataran Certificate Course and Short Term Courses Class
ಉತ್ತರ ಕನ್ನಡ2 hours ago

Uttara Kannada News: ಬದುಕಿನ ಪುರುಷಾರ್ಥಗಳ ಸಾಧನೆಗೆ ರಾಮಾಯಣ ಸಾಧನ; ಶ್ರೀರಾಘವೇಶ್ವರ ಭಾರತೀ ಸ್ವಾಮೀಜಿ

Swati Maliwal
ಪ್ರಮುಖ ಸುದ್ದಿ2 hours ago

Swati Maliwal : ಸ್ವಾತಿ ಮಾಲಿವಾಲ್​​ ಮೇಲೆ ಕೇಜ್ರಿವಾಲ್ ಸಹಾಯಕನಿಂದ ಹಲ್ಲೆ; ಆಪ್​​ನಿಂದ ತಪ್ಪೊಪ್ಪಿಗೆ

Karnataka weather Man from Siddapura killed in lightning Heavy rain warning for four more days
ಕರ್ನಾಟಕ3 hours ago

Karnataka weather: ಸಿಡಿಲಿಗೆ ಸಿದ್ದಾಪುರದ ವ್ಯಕ್ತಿ ಬಲಿ; ಇನ್ನೂ ನಾಲ್ಕು ದಿನ ಇದೆ ಭಾರಿ ಮಳೆ ಎಚ್ಚರಿಕೆ!

Manjappa Magodi
ಚಿತ್ರದುರ್ಗ3 hours ago

Manjappa Magodi: ಕೆಇಎಸ್‌ ಅಧಿಕಾರಿ ಮಂಜಪ್ಪ ಮಾಗೊದಿಗೆ ಕುವೆಂಪು ವಿವಿಯಿಂದ ಡಾಕ್ಟರೇಟ್

Viral News
ವಿದೇಶ3 hours ago

Viral News: ಗಾಜಾದಲ್ಲಿ ಆಹಾರ ಸಿಗದೆ ನಾಣ್ಯ, ಕಲ್ಲು, ಬ್ಯಾಟರಿ ತಿನ್ನುತ್ತಿರುವ ಮಕ್ಕಳು!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ2 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ನಾಳೆಯೇ ಜರ್ಮನಿಯಿಂದ ಭಾರತಕ್ಕೆ?; ವಿಸ್ತಾರ ನ್ಯೂಸ್‌ಗೆ ಮಹತ್ವದ ದಾಖಲೆ ಲಭ್ಯ

HD Revanna Released first reaction after release will be acquitted of all charges
ರಾಜಕೀಯ4 hours ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20246 hours ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 202410 hours ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ10 hours ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು12 hours ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ18 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ1 day ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ1 day ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ1 day ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

ಟ್ರೆಂಡಿಂಗ್‌