Cauvery Water Dispute: ಕಾವೇರಿ ವಿಚಾರ ರಾಜ್ಯದ ಸಂಸದರ ಜತೆ ಚರ್ಚೆ ಬಳಿಕ ಸುಪ್ರೀಂ ಕೋರ್ಟ್‌ಗೆ ಅರ್ಜಿ: ಡಿಕೆಶಿ Vistara News
Connect with us

ಕರ್ನಾಟಕ

Cauvery Water Dispute: ಕಾವೇರಿ ವಿಚಾರ ರಾಜ್ಯದ ಸಂಸದರ ಜತೆ ಚರ್ಚೆ ಬಳಿಕ ಸುಪ್ರೀಂ ಕೋರ್ಟ್‌ಗೆ ಅರ್ಜಿ: ಡಿಕೆಶಿ

Cauvery Water Dispute: ಎರಡು ರಾಜ್ಯಗಳಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಲು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

VISTARANEWS.COM


on

DCM DK Shivakumar
Koo

ಬೆಂಗಳೂರು: ಕಾವೇರಿ ನೀರು ವಿಚಾರದಲ್ಲಿ (Cauvery Water Dispute) ಈಗ ನಮಗೆ ಉಳಿದಿರುವುದು ಒಂದೇ ದಾರಿ. ನಾವು ಸುಪ್ರೀಂಕೋರ್ಟ್‌ಗೆ ಹೋಗಬೇಕಿದೆ, ವಾಸ್ತವಾಂಶ ತಿಳಿಸಲೇಬೇಕಿದೆ. ಈ ಬಗ್ಗೆ ಸಿಎಂ ಅವರ ಜತೆಯೂ ಮಾತನಾಡಿದ್ದೇನೆ. ನಾಳೆ ಅಥವಾ ನಾಡಿದ್ದು ದೆಹಲಿಗೆ ಹೋಗಿ ಸಂಸದರನ್ನು ಭೇಟಿ ಮಾಡಿ, ಮುಂದಿನ ಹೋರಾಟದ ಬಗ್ಗೆ ಚರ್ಚೆ ಮಾಡಿದ ನಂತರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಹಾಕುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ತಮಿಳುನಾಡಿಗೆ ಮತ್ತೆ 5000 ಕ್ಯೂಸೆಕ್‌ ನೀರು ಬಿಡುಗಡೆಗೆ ಆದೇಶದ ಬಗ್ಗೆ ಪ್ರತಿಕ್ರಿಯಿಸಿ, ರಾಜ್ಯದ ಜಲಾಶಯಗಳಿಗೆ ಒಳಹರಿವು ಸಾಕಾಗುತ್ತಿಲ್ಲ. ರಾಜ್ಯದ ಸಂಸದರೆಲ್ಲ ರಾಜ್ಯದ ಹಿತಕ್ಕೆ ಬದ್ಧ ಎಂದು ಹೇಳಿದ್ದಾರೆ. ನಾನು ಕೂಡ ಕೇಂದ್ರ ಸಚಿವರನ್ನು ಭೇಟಿ ಮಾಡಿದ್ದೇನೆ, ಅವರು ಸಹ ಕೇಂದ್ರ ಸಚಿವರನ್ನು ಭೇಟಿ ಮಾಡಲು ಪ್ರಯತ್ನ ಮಾಡುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ನೀರು ಬಿಡುವ ವಿಚಾರವಾಗಿ ನಮ್ಮ ಕಾನೂನು ತಜ್ಞರು ಸಲಹೆ ನೀಡಿದ್ದಾರೆ. ನೀರನ್ನು ಬಿಡದೆ ಸುಪ್ರೀಂಕೋರ್ಟ್‌ಗೆ ಹೋದರೆ ಕೋರ್ಟ್‌ ನಮ್ಮನ್ನು ಪ್ರಶ್ನೆ ಮಾಡುತ್ತದೆ. ನೀವು ಆದೇಶ ಪಾಲಿಸಿದ್ದೀರಾ ಎಂದು ಕೇಳಿದ್ರೆ ನಾವು ಏನು ಉತ್ತರ ನೀಡುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ | Cauvery water dispute : ಕಾವೇರಿ ಸಮಸ್ಯೆ ಪರಿಹಾರಕ್ಕೆ ಸಂಧಾನ ಸೂತ್ರ ಪ್ರಸ್ತಾಪವಿಟ್ಟ ದೇವೇಗೌಡರು

5000 ಕ್ಯೂಸೆಕ್‌ ನೀರು ಬಿಟ್ಟರೆ ಅಲ್ಲಿ ಹೋಗುವುದೇ 2000 ಕ್ಯೂಸೆಕ್‌, ನಾವು ಜಾಸ್ತಿ ನೀರನ್ನು ಬಿಟ್ಟಿಲ್ಲ. ನಾವು ರಾಜ್ಯವನ್ನು ಕಾಪಾಡಬೇಕು, ಹೀಗಾಗಿ ಕೋರ್ಟ್‌ ಮುಂದೆ ಪ್ರಬಲವಾಗಿ ವಾದ ಮಂಡಿಸುತ್ತೇವೆ. ನೀವು ಎರಡು ರಾಜ್ಯಕ್ಕೆ ಬಂದು ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿ ಎಂದು ಮನವಿ ಮಾಡುತ್ತೇವೆ, ಆಗ ಅವರಿಗೆ ಮನವರಿಗೆ ಆಗುತ್ತದೆ ಎಂದು ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ

ಉಡುಪಿ

Weather Report : ಉತ್ತರ ಕರ್ನಾಟಕದಲ್ಲಿ ಮಳೆ ಚುರುಕು; ಬೆಂಗಳೂರಲ್ಲಿ ಹೇಗೆ?

Rain News : ಉತ್ತರ ಒಳನಾಡಲ್ಲಿ ಮುಂಗಾರು ಚುರುಕುಗೊಂಡಿದ್ದು, ಸೆ. 26ರಂದು ಹಲವೆಡೆ ಭಾರಿ ಮಳೆಯಾಗುವ ಮುನ್ನೆಚ್ಚರಿಕೆಯನ್ನು (Weather report) ಐಎಂಡಿ ನೀಡಿದೆ. 6 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

VISTARANEWS.COM


on

Edited by

Girl standing in rain
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಉತ್ತರ ಒಳನಾಡಿನ ಹಲವು ಕಡೆ ಭಾರಿ ಮಳೆಯಾಗುವ (Rain News) ಮುನ್ಸೂಚನೆ ಇದೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಲಘುವಾಗಿ, ಬೆಂಗಳೂರಲ್ಲಿ ಸಂಜೆ ವೇಳೆಗೆ ಸಾಧಾರಣ ಮಳೆ (Weather report) ಸುರಿಯಲಿದೆ. ಕೆಲವು ಕಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ನಾಲ್ಕು ಜಿಲ್ಲೆಗಳಿಗೆ ಅಲರ್ಟ್‌

ಮುಂದಿನ 24 ಗಂಟೆಯಲ್ಲಿ ಉತ್ತರ ಒಳನಾಡಿನ ಬಾಗಲಕೋಟೆ, ಗದಗ, ಕಲಬುರಗಿ, ಕೊಪ್ಪಳ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದ್ದು, ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರಲಿದೆ.

ಒಳನಾಡಲ್ಲಿ ಹಗುರ ಮಳೆ

ದಕ್ಷಿಣ ಒಳನಾಡಿನ ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯದಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಮೈಸೂರಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಚಾಮರಾಜನಗರದಲ್ಲಿ ಅತಿ ಕಡಿಮೆ ಮಳೆಯಾಗಲಿದೆ.

ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಉತ್ತರ ಒಳನಾಡಿನ ರಾಯಚೂರು, ಬೀದರ್, ಬೆಳಗಾವಿ, ಧಾರವಾಡದ ಹಲವೆಡೆ ಅಲ್ಲಲ್ಲಿ ಹಗುರ ಮಳೆಯಾಗಲಿದೆ. ಮಲೆನಾಡಿನ ಕೊಡಗು, ಹಾಸನ, ಶಿವಮೊಗ್ಗ ಮತ್ತು ಚಿಕ್ಕಮಗಳೂರಲ್ಲಿ ಚದುರಿದಂತೆ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಟಿ ಜಿಟಿ ಮಳೆ ಸುರಿಯಲಿದೆ

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 29 ಡಿ.ಸೆ – 21 ಡಿ.ಸೆ
ಮಂಗಳೂರು: 30 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 30 ಡಿ.ಸೆ – 20 ಡಿ.ಸೆ
ಗದಗ: 31 ಡಿ.ಸೆ – 20 ಡಿ.ಸೆ
ಹೊನ್ನಾವರ: 30 ಡಿ.ಸೆ- 23 ಡಿ.ಸೆ
ಕಲಬುರಗಿ: 29 ಡಿ.ಸೆ – 23 ಡಿ.ಸೆ
ಬೆಳಗಾವಿ: 29 ಡಿ.ಸೆ – 21 ಡಿ.ಸೆ
ಕಾರವಾರ: 31 ಡಿ.ಸೆ – 24 ಡಿ.ಸೆ

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಕರ್ನಾಟಕ

Road Accident : ಆಕ್ಸೆಲ್ ಕಟ್‌ ಆಗಿ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಬಸ್‌; 20ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಗಾಯ

Road Accident : ಬೆಳಗಾವಿಯಲ್ಲಿ ಶಾಲಾ ಮಕ್ಕಳೇ ಅಧಿಕವಾಗಿದ್ದ ಬಸ್‌ ಒಂದು ಆಕ್ಸೆಲ್‌ ಕಟ್‌ ಆಗಿ ಪಲ್ಟಿಯಾಗಿದೆ. ಶಾಲೆಗೆ ಹೊರಟಿದ್ದ 20ಕ್ಕೂ ಅಧಿಕ ಮಕ್ಕಳು ಗಾಯಗೊಂಡಿದ್ದಾರೆ.

VISTARANEWS.COM


on

Edited by

Bus Overturns after axel cut near Belagavi
ಆಕ್ಸೆಲ್‌ ಕಟ್‌ ಆಗಿ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಬಸ್‌
Koo

ಬೆಳಗಾವಿ: ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಬಿಜಗುಪ್ಪಿ ಗ್ರಾಮದಲ್ಲಿ ಬಸ್‌ ಒಂದು ಆ‌ಕ್ಸೆಲ್‌ ಕಟ್‌ (Bus overturns after Axel cut) ಆಗಿ ಪಲ್ಟಿಯಾದ (Road accident) ಪರಿಣಾಮ 20ಕ್ಕೂ ಅಧಿಕ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

Accident near Ramadurga

ಚಿಕ್ಕೊಪ್ಪ ಗ್ರಾಮದಿಂದ ರಾಮದುರ್ಗಕ್ಕೆ ಹೊರಟಿದ್ದ ಬಸ್ ಇದಾಗಿದ್ದು, ಇದರಲ್ಲಿ 50ಕ್ಕೂ ಅಧಿಕ ಪ್ರಯಾಣಿಕರು ಇದ್ದರು. ರಾಮದುರ್ಗಕ್ಕೆ ಹೋಗುತ್ತಿದ್ದ ಬಸ್ ಚಲಿಸುತ್ತಿದ್ದಾಗಲೇ ಬಸ್‌ನ ಆಕ್ಸೆಲ್‌ ಕಟ್ ಆಗಿದೆ. ಆಕ್ಸೆಲ್‌ ಕಟ್‌ ಆದ ಕೂಡಲೇ ನಿಯಂತ್ರಣ ಕಳೆದುಕೊಂಡ ಬಸ್‌ ಮರಕ್ಕೆ ಡಿಕ್ಕಿ ಹೊಡೆದಿದೆ. ಮರಕ್ಕೆ ಡಿಕ್ಕಿ ಹೊಡೆದ ಬಸ್‌ ಅಲ್ಲೇ ಪಲ್ಟಿಯಾಗಿದೆ.

Ramadurga accident Axel cut scene

ಬೆಳಗ್ಗಿನ ಹೊತ್ತಾಗಿರುವುದರಿಂದ ಬಸ್‌ನಲ್ಲಿ ವಿದ್ಯಾರ್ಥಿಗಳೇ ಹೆಚ್ಚಾಗಿದ್ದರು. ಗ್ರಾಮಸ್ಥರು ಕೂಡಲೇ ಅಂಬ್ಯುಲೆನ್ಸ್‌ಗೆ ಕರೆ ಮಾಡಿ ಗಾಯಾಗಳುಗಳನ್ನು ಆಸ್ಪತ್ರೆಗೆ ದಾಖಲಿಸಿದರು. ಹಲವರಿಗೆ ಗಾಯಗಳಾಗಿದ್ದರು ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎನ್ನುವುದು ಸಮಾಧಾನದ ವಿಷಯ. ಕಟಕೋಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Bangalore rain : ಮನೆ ಮುಂದೆ ವಾಕ್‌ ಮಾಡುತ್ತಿದ್ದಾಗ ಉರುಳಿದ ಮರ; ತಾಯಿ ಮೃತ್ಯು, 5 ವರ್ಷದ ಮಗು ಗಂಭೀರ

ಆಟೋಗೆ ಶಾಲಾ ಬಸ್‌ ಡಿಕ್ಕಿ, ಐವರ ದುರ್ಮರಣ

ಮಂಗಳೂರು: ಶಾಲಾ ಬಸ್ ಹಾಗೂ ಆಟೋ ನಡುವೆ (bus auto accident) ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಪ್ರಯಾಣಿಕರು ದುರ್ಮರಣ ಹೊಂದಿದ ಘಟನೆ (Road Accident) ಕೇರಳ- ಕರ್ನಾಟಕ ಗಡಿಭಾಗದಲ್ಲಿ ನಡೆದಿದೆ.

bus auto accident

ಕೇರಳದ ಕಾಸರಗೋಡು ಜಿಲ್ಲೆಯ ಬದಿಯಡ್ಕ ಸಮೀಪ ಈ ದುರ್ಘಟನೆ ನಿನ್ನೆ ಸಂಜೆ ವೇಳೆ ನಡೆದಿದೆ. ಕಾಸರಗೋಡಿನ ಮೊಗ್ರಾಲ್ ಪುತ್ತೂರು ಎಂಬಲ್ಲಿನ ಆಟೋ ರಿಕ್ಷಾಗೆ ಪೆರ್ಲ ಸಮೀಪದ ಆಂಗ್ಲ ಮಾಧ್ಯಮ ಶಾಲೆಯ ಬಸ್ ಡಿಕ್ಕಿ ಹೊಡೆದಿದೆ. ಬಸ್ ಡಿಕ್ಕಿಯಾದ ರಭಸಕ್ಕೆ ಆಟೋ ಸಂಪೂರ್ಣ ಛಿದ್ರವಾಗಿದ್ದು, ಆಟೋದಲ್ಲಿದ್ದ ಇಬ್ಬರು ಪುರುಷರು ಹಾಗೂ ಮೂವರು ಮಹಿಳೆಯರು ಸಾವಿಗೀಡಾಗಿದ್ದಾರೆ. ಬದಿಯಡ್ಕ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬಸ್‌ ಪಲ್ಟಿಯಾಗಿ 10 ಜನರಿಗೆ ಗಾಯ

ವಿಜಯನಗರ: ಖಾಸಗಿ ಬಸ್ ಪಲ್ಟಿಯಾಗಿ 10ಕ್ಕೂ ಹೆಚ್ಚು ಜನರಿಗೆ ಗಾಯವಾದ ಘಟನೆ ವಿಜಯನಗರದ MB ಅಯ್ಯನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ಗಾಯಗೊಂಡ ಡ್ರೈವರ್ ಸ್ಥಿತಿ ಗಂಭೀರವಾಗಿದೆ.

ಬೆಂಗಳೂರಿನಿಂದ ಕಲ್ಬುರ್ಗಿಗೆ ತೆರಳುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅದೃಷ್ಟವಶಾತ್ ದೊಡ್ಡ ಅನಾಹುತ ತಪ್ಪಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರಗೆ ದಾಖಲು ಮಾಡಲಾಗಿದೆ. ಕಾನಾಹೊಸಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Continue Reading

ಕರ್ನಾಟಕ

Bangalore Bandh : ಪ್ರತಿಭಟನಾಕಾರರ ಬಂಧನಕ್ಕೆ ಎಚ್‌ಡಿಕೆ ಕೆಂಡಾಮಂಡಲ; ಇದು ಸ್ಟಾಲಿನ್‌ನ ಬಾಡಿಗೆ ಸರ್ಕಾರವೇ?

Bangalore Bandh: ಕಾವೇರಿ ನೀರು ಬಿಡುಗಡೆ ವಿರುದ್ಧ ಪ್ರತಿಭಟನೆ ನಡೆಸಿದ ಹೋರಾಟಗಾರರು ಮತ್ತು ನಾಯಕರನ್ನು ಬಂಧಿಸಿದ್ದನ್ನು ಮಾಜಿ ಸಿಎಂ ಕುಮಾರಸ್ವಾಮಿ ಖಂಡಿಸಿದ್ದಾರೆ. ಇದು ಸ್ಟಾಲಿನ್‌ನ ಬಾಡಿಗೆ ಸರ್ಕಾರವೇ ಎಂದು ಕೇಳಿದ್ದಾರೆ.

VISTARANEWS.COM


on

Edited by

HD Kumaraswamy Bandh
ಹೋರಾಟಗಾರರನ್ನು ಬಂಧಿಸಿದ್ದಕ್ಕೆ ಕುಮಾರಸ್ವಾಮಿ ಆಕ್ರೋಶ
Koo

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರುದ್ಧ (Cauvery Water Dispute) ಬೆಂಗಳೂರು ಬಂದ್‌ಗೆ (Bangalore Bandh) ಕರೆ ನೀಡಿದವರು ಮತ್ತು ಬೆಂಬಲ ನೀಡಿದ ಸಂಘಟನೆಗಳ ನಾಯಕರು ಮತ್ತು ಕಾರ್ಯಕರ್ತರನ್ನು ಬಂಧಿಸುತ್ತಿರುವ (Protesters and Leaders deatained) ಸರ್ಕಾರದ ಕ್ರಮದ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ (HD Kumaraswamy) ಕೆಂಡಾಮಂಡಲರಾಗಿದ್ದಾರೆ.

ಮೇಕೆದಾಟು ಪಾದಯಾತ್ರೆ ಮಾಡಿದವರು ಈಗ ಕಾವೇರಿಗಾಗಿ ಬೀದಿಗಿಳಿದು ಹೋರಾಟ ಮಾಡುತ್ತಿರುವುದು ಕಿಡಿಗೇಡಿತನದ ಪರಮಾವಧಿ ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ, ಇದು ಕನ್ನಡಿಗರ ಸರ್ಕಾರವೋ, ಸ್ಟಾಲಿನ್‌ನ ಬಾಡಿಗೆ ಸರ್ಕಾರವೋ? ಕಾಂಗ್ರೆಸ್‌ ಡಿಎಂಕೆಯ ಬಿ ಟೀಮಾ ಎಂದು ಅವರು ಪ್ರಶ್ನೆ ಮಾಡಿದ್ದಾರೆ. ಬೆಂಗಳೂರು_ಬಂದ್‌ ಕಾವೇರಿ_ನಮ್ಮದು ಎಂಬ ಹ್ಯಾಷ್‌ ಟ್ಯಾಗ್‌ನಲ್ಲಿ ಅವರು ಟ್ವೀಟ್‌ ಮಾಡಿದ್ದಾರೆ.

ಕಾಂಗ್ರೆಸಿಗರಿಗೆ ಒಂದು ನ್ಯಾಯ, ಕನ್ನಡಿಗರಿಗೆ ಒಂದು ನ್ಯಾಯವೇ

ಇದೆಂಥಾ ಚೋದ್ಯ? ಒಂದು ಕಡೆ ಮೇಕೆದಾಟು ಬೇಕು ಎಂದು ಪಾದಯಾತ್ರೆ ಮಾಡಿದವರು, ಇಂದು ಕಾವೇರಿಗಾಗಿ ಬೀದಿಗಿಳಿದು ಹೋರಾಟ ನಡೆಸುತ್ತಿದ್ದ ರೈತರನ್ನು, ಹೋರಾಟಗಾರರನ್ನು ಬಂಧಿಸಿದ್ದಾರೆ. ರಾತ್ರೋರಾತ್ರಿ ಹೋರಾಟಗಾರರನ್ನು ಬಂಧಿಸಿರುವುದು ಕರ್ನಾಟಕದ ಕಾಂಗ್ರೆಸ್ ಸರಕಾರದ ಕಿಡಿಗೇಡಿತನದ ಪರಮಾವಧಿ. ಕರ್ನಾಟಕದಲ್ಲಿ ಕಾಂಗ್ರೆಸ್ಸಿಗರಿಗೆ ಒಂದು ನ್ಯಾಯ, ಕನ್ನಡಿಗರಿಗೆ ಇನ್ನೊಂದು ನ್ಯಾಯ ಎನ್ನುವುದು ಇದೆಯಾ?- ಎಂದು ಕುಮಾರಸ್ವಾಮಿ ಕೇಳಿದ್ದಾರೆ.

ಕಾವೇರಿಗಾಗಿ ಕನ್ನಡಿಗರು ಪ್ರತಿಭಟನೆ ಮಾಡಬಾರದೇ?

ಕೋವಿಡ್ ನಿಯಮ ಉಲ್ಲಂಘಿಸಿ ಕಾಂಗ್ರೆಸ್ ನಾಯಕರು ಮೇಕೆದಾಟು ಪಾದಯಾತ್ರೆ ಮಾಡಬಹುದಾದರೆ, ನಾಡಿನ ಜೀವನಾಡಿ ಕಾವೇರಿಗಾಗಿ ಕನ್ನಡಿಗರು ಪ್ರತಿಭಟನೆ ನಡೆಸಬಾರದೇ? ಶಾಂತವಾಗಿ ಹೋರಾಟ ನಡೆಸುತ್ತಿದ್ದ ರೈತರು, ಹೋರಾಟಗರನ್ನು ಬಂಧಿಸಿರುವುದು ಖಂಡನೀಯ. ಇದೇನು ಕನ್ನಡಿಗರ ಸರಕಾರವೋ? ಸ್ಟಾಲಿನ್ ಅಧೀನದಲ್ಲಿರುವ ಬಾಡಿಗೆ ಸರಕಾರವೋ? ಇಷ್ಟಕ್ಕೂ ಕನ್ನಡಿಗರು ಮತ ಹಾಕಿದ್ದು ಯಾರಿಗೆ?

ಇದನ್ನೂ ಓದಿ: Bangalore Bandh : ನಾಯಕರ ಪ್ರತಿಷ್ಠೆಯಿಂದ ಬೆಂಗಳೂರಿಗೆ ಡಬಲ್‌ ಬಂದ್‌ ಬಿಸಿ, ಬೇಕಿತ್ತಾ ಎರಡೆರಡು ಬಂದ್‌?

ಹೋರಾಟಗಾರರನ್ನು ಕೂಡಲೇ ಬಿಡುಗಡೆ ಮಾಡಿ ಎಂದ ಎಚ್‌ಡಿಕೆ

ಹೋರಾಟಗಾರರು, ರೈತರನ್ನು ಕೂಡಲೇ ಬಂಧಮುಕ್ತಗೊಳಿಸಬೇಕು. ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ನಿಲ್ಲಿಸಬೇಕು. ಕಾಂಗ್ರೆಸ್ ಪಕ್ಷವು ಡಿಎಂಕೆ ಪಕ್ಷದ ಬಿ ಟೀಂ ಆಗಿ ಪರಿವರ್ತನೆ ಆದ ಪರಿಣಾಮವೇ ಈ ಕಾವೇರಿ ಬಿಕ್ಕಟ್ಟು ಎನ್ನುವುದು ಕನ್ನಡಿಗರಿಗೆ ಈಗ ಸ್ಪಷ್ಟವಾಗಿ ಅರ್ಥವಾಗಿದೆ ಎಂದಿದ್ದಾರೆ.

ಇದನ್ನೂ ಓದಿ: Bangalore Bandh : ಮೈಸೂರು ಬ್ಯಾಂಕ್‌ ಸರ್ಕಲ್‌ನಲ್ಲಿ ಪ್ರತಿಭಟನೆ: ಕುರುಬೂರು ಶಾಂತ ಕುಮಾರ್‌ ಪೊಲೀಸ್‌ ವಶಕ್ಕೆ

ರಾತ್ರೋರಾತ್ರಿ 150ಕ್ಕೂ ಅಧಿಕ ಮಂದಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರು ಬಂದ್‌ ಹಿನ್ನೆಲೆಯಲ್ಲಿ ಹಿಂದೆ ಬಂದ್‌ ವೇಳೆ ಗಲಾಟೆಗೆ ಕಾರಣರಾಗಿದ್ದ ಕೆಲವು ನಾಯಕರು ಮತ್ತು ರೌಡಿ ಶೀಟರ್‌ಗಳನ್ನು ಪೊಲೀಸರು ಬಂಧಿಸಿದ್ದರು.

ʻʻಹಳೆ ಪ್ರಕರಣಗಳಲ್ಲಿ ಇನ್ವಾಲ್ ಆಗಿದ್ದ ರೌಡಿಶೀಟರ್‌ಗಳನ್ನು ಕಸ್ಟಡಿಗೆ ತಗೊಂಡಿದ್ದೇವೆ. ನಿನ್ನೆ ರಾತ್ರಿನೇ ಹಳೆ ಕೇಸ್ ಗಳಲ್ಲಿ ಭಾಗಿಯಾಗಿದ್ದ 150 ಜನರನ್ನ ವಶಕ್ಕೆ ಪಡೆದಿದ್ದೇವೆ. ಅದು ಇವತ್ತು ತುಂಬಾನೇ ಹೆಲ್ಪ್ ಆಗಿದೆ. ಬೆಳಗ್ಗೆ 4 ಘಂಟೆಯಿಂದಲೂ ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿತ್ತು. ಒಂದಷ್ಟು ಲೀಡರ್‌ಗಳನ್ನು ವಶಕ್ಕೆ ಪಡೆದಿದ್ದೇವೆ. ಎಲ್ಲಾ ರೀತಿಯ ಭದ್ರತೆ ವಹಿಸಿದ್ದೇವೆʼʼ ಎಂದು ಪಶ್ಚಿಮ ವಿಭಾಗದ ಡಿಸಿಪಿ ಗಿರೀಶ್ ಹೇಳಿದ್ದಾರೆ.

ಜಲಸಂರಕ್ಷಣಾ ಸಮಿತಿಯ ಕುರುಬೂರು ಶಾಂತ ಕುಮಾರ್‌ ಸೇರಿದಂತೆ ಹಲವಾರು ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದ ಎಲ್ಲ ನಾಯಕರನ್ನು ಫ್ರೀಡಂ ಪಾರ್ಕ್‌ಗೆ ತಂದು ಬಿಡಲಾಗುತ್ತಿದ್ದು, ಅಲ್ಲಿಂದ ಹೊರಗೆ ಹೋಗಲು ಬಿಡುತ್ತಿಲ್ಲ.

Continue Reading

ತುಮಕೂರು

Road Accident: ಮಧುಗಿರಿಯಲ್ಲಿ ಕಾರಿಗೆ ಲಾರಿ ಡಿಕ್ಕಿ, ಮೂವರ ಸಾವು

ಬೆಂಗಳೂರಿನಿಂದ ಪಾವಗಡ ಕಡೆ ತೆರಳುತ್ತಿದ್ದ ಕಾರಿಗೆ ಪಾವಗಡದಿಂದ ತುಮಕೂರು ಕಡೆ ಬರುತ್ತಿದ್ದ ಲಾರಿ ಡಿಕ್ಕಿಯಾಗಿದೆ (Road Accident). ಡಿಕ್ಕಿಯ ಪರಿಣಾಮ ಕಾರು ನಜ್ಜುಗುಜ್ಜಾಗಿದೆ.

VISTARANEWS.COM


on

Edited by

madhugiri accident
Koo

ತುಮಕೂರು: ಕಾರಿಗೆ ಲಾರಿ ಡಿಕ್ಕಿಯಾದ (lorry car crash) ಪರಿಣಾಮ ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವಿಗೀಡಾದ ದುರ್ಘಟನೆ (Road Accident) ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ನಡೆದಿದೆ.

ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆಕಾಶ್ (20), ಹೇಮಂತ್ (28) ಹಾಗೂ ಶಿವಕುಮಾರ್ ಸಾವಿಗೀಡಾದವರು. ಉಜ್ವಲ್ ಕೃಷ್ಣ ಎಂಬವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುವನ್ನು ತುಮಕೂರು ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿದೆ.

ಬೆಂಗಳೂರಿನಿಂದ ಪಾವಗಡ ಕಡೆ ತೆರಳುತ್ತಿದ್ದ ಕಾರಿಗೆ ಪಾವಗಡದಿಂದ ತುಮಕೂರು ಕಡೆ ಬರುತ್ತಿದ್ದ ಲಾರಿ ಡಿಕ್ಕಿಯಾಗಿದೆ. ಡಿಕ್ಕಿಯ ಪರಿಣಾಮ ಕಾರು ನಜ್ಜುಗುಜ್ಜಾಗಿದೆ. ಮೃತರೆಲ್ಲರೂ ಪಾವಗಡ ಮೂಲದವರು ಎಂಬ ಮಾಹಿತಿ ದೊರೆತಿದೆ. ಮಿಡಿಗೇಶಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಆಟೋಗೆ ಶಾಲಾ ಬಸ್‌ ಡಿಕ್ಕಿ, ಐವರ ದುರ್ಮರಣ

ಮಂಗಳೂರು: ಶಾಲಾ ಬಸ್ ಹಾಗೂ ಆಟೋ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಪ್ರಯಾಣಿಕರು ದುರ್ಮರಣ ಹೊಂದಿದ ಘಟನೆ ಕೇರಳ- ಕರ್ನಾಟಕ ಗಡಿಭಾಗದಲ್ಲಿ ನಡೆದಿದೆ.

ಕೇರಳದ ಕಾಸರಗೋಡು ಜಿಲ್ಲೆಯ ಬದಿಯಡ್ಕ ಸಮೀಪ ಈ ದುರ್ಘಟನೆ ನಿನ್ನೆ ಸಂಜೆ ವೇಳೆ ನಡೆದಿದೆ. ಕಾಸರಗೋಡಿನ ಮೊಗ್ರಾಲ್ ಪುತ್ತೂರು ಎಂಬಲ್ಲಿನ ಆಟೋ ರಿಕ್ಷಾಗೆ ಪೆರ್ಲ ಸಮೀಪದ ಆಂಗ್ಲ ಮಾಧ್ಯಮ ಶಾಲೆಯ ಬಸ್ ಡಿಕ್ಕಿ ಹೊಡೆದಿದೆ. ಬಸ್ ಡಿಕ್ಕಿಯಾದ ರಭಸಕ್ಕೆ ಆಟೋ ಸಂಪೂರ್ಣ ಛಿದ್ರವಾಗಿದ್ದು, ಆಟೋದಲ್ಲಿದ್ದ ಇಬ್ಬರು ಪುರುಷರು ಹಾಗೂ ಮೂವರು ಮಹಿಳೆಯರು ಸಾವಿಗೀಡಾಗಿದ್ದಾರೆ. ಬದಿಯಡ್ಕ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬಸ್‌ ಪಲ್ಟಿಯಾಗಿ 10 ಜನರಿಗೆ ಗಾಯ

ವಿಜಯನಗರ: ಖಾಸಗಿ ಬಸ್ ಪಲ್ಟಿಯಾಗಿ 10ಕ್ಕೂ ಹೆಚ್ಚು ಜನರಿಗೆ ಗಾಯವಾದ ಘಟನೆ ವಿಜಯನಗರದ MB ಅಯ್ಯನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ಗಾಯಗೊಂಡ ಡ್ರೈವರ್ ಸ್ಥಿತಿ ಗಂಭೀರವಾಗಿದೆ.

ಬೆಂಗಳೂರಿನಿಂದ ಕಲ್ಬುರ್ಗಿಗೆ ತೆರಳುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅದೃಷ್ಟವಶಾತ್ ದೊಡ್ಡ ಅನಾಹುತ ತಪ್ಪಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರಗೆ ದಾಖಲು ಮಾಡಲಾಗಿದೆ. ಕಾನಾಹೊಸಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Road Accident : ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿಯಾಗಿ ಇಬ್ಬರ ಸವಾರರು ದಾರುಣ ಸಾವು

Continue Reading
Advertisement
Girl standing in rain
ಉಡುಪಿ2 mins ago

Weather Report : ಉತ್ತರ ಕರ್ನಾಟಕದಲ್ಲಿ ಮಳೆ ಚುರುಕು; ಬೆಂಗಳೂರಲ್ಲಿ ಹೇಗೆ?

manipur
ದೇಶ18 mins ago

Manipur Horror: ಮೈತಿ ವಿದ್ಯಾರ್ಥಿಗಳಿಬ್ಬರ ಶವಗಳ ಫೋಟೊ ವೈರಲ್;‌ ಮಣಿಪುರ ಮತ್ತೆ ಉದ್ವಿಗ್ನ?

Bus Overturns after axel cut near Belagavi
ಕರ್ನಾಟಕ27 mins ago

Road Accident : ಆಕ್ಸೆಲ್ ಕಟ್‌ ಆಗಿ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಬಸ್‌; 20ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಗಾಯ

Saurashtra Cricket Association Stadium Rajkot
ಕ್ರಿಕೆಟ್40 mins ago

IND vs AUS 3rd ODI: ರಾಜ್​ಕೋಟ್​ನ​ ಪಿಚ್​ ರಿಪೋರ್ಟ್​ ದಾಖಲೆಯೇ ವಿಚಿತ್ರ

HD Kumaraswamy Bandh
ಕರ್ನಾಟಕ50 mins ago

Bangalore Bandh : ಪ್ರತಿಭಟನಾಕಾರರ ಬಂಧನಕ್ಕೆ ಎಚ್‌ಡಿಕೆ ಕೆಂಡಾಮಂಡಲ; ಇದು ಸ್ಟಾಲಿನ್‌ನ ಬಾಡಿಗೆ ಸರ್ಕಾರವೇ?

madhugiri accident
ತುಮಕೂರು60 mins ago

Road Accident: ಮಧುಗಿರಿಯಲ್ಲಿ ಕಾರಿಗೆ ಲಾರಿ ಡಿಕ್ಕಿ, ಮೂವರ ಸಾವು

Bangalore bandh Attibele border
ಕರ್ನಾಟಕ1 hour ago

Bangalore Bandh: ತಮಿಳುನಾಡು ಬಸ್‌ಗಳು ಗಡಿ ಭಾಗದಿಂದಲೇ ವಾಪಸ್‌, ಬಾಯ್‌ ಬಾಯ್‌ ಎಂದ ಕಂಡಕ್ಟರ್

Rahul Dravid’s son
ಕ್ರಿಕೆಟ್2 hours ago

Vinoo Mankad Trophy: ಅಂಡರ್‌ 19 ಕರ್ನಾಟಕ ತಂಡಕ್ಕೆ ದ್ರಾವಿಡ್​ ಪುತ್ರ ಆಯ್ಕೆ

cauvery protest bng vv
ಕರ್ನಾಟಕ2 hours ago

Bangalore Bandh: ಬೆಂಗಳೂರು ಸ್ತಬ್ಧ: ರೈತರ ಅರೆಬೆತ್ತಲೆ ಪ್ರತಿಭಟನೆ, ಬಿಗಿ ಬಂದೋಬಸ್ತ್, ಶಾಲೆಗಳಿಗೆ ರಜೆ, ಬೀದಿಗಿಳಿಯದ ಜನ

Cauvery protest in Bangalore
ಕರ್ನಾಟಕ2 hours ago

Bangalore Bandh : ಬೆಂಗಳೂರಿನ ಈ ಭಾಗದಲ್ಲಿ ಪ್ರತಿಭಟನೆ ಜೋರು, ಆ ಕಡೆ ಹೋಗುವಾಗ ಹುಷಾರು

7th Pay Commission
ನೌಕರರ ಕಾರ್ನರ್11 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ8 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ4 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ8 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

kpsc recruitment 2023 pdo recruitment 2023
ಉದ್ಯೋಗ2 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Rajendra Singh Gudha
ದೇಶ3 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Village Accountant Recruitment
ಉದ್ಯೋಗ7 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike; Order from Govt
ನೌಕರರ ಕಾರ್ನರ್7 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ9 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ11 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Dina Bhavishya
ಪ್ರಮುಖ ಸುದ್ದಿ6 hours ago

Dina Bhavishya : ಈ ರಾಶಿಯ ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಸುದ್ದಿ

At the Janata Darshan event MP S Muniswamy MLA SN Narayanaswamy is fighting
ಕರ್ನಾಟಕ17 hours ago

Janata Darshan : ವೇದಿಕೆಯಲ್ಲಿ ಭೂ ಗಲಾಟೆ; ಹೊಡೆದಾಟಕ್ಕೆ ಮುಂದಾದ ಶಾಸಕ-ಸಂಸದ

Davanagere bandh
ಕರ್ನಾಟಕ19 hours ago

Davanagere bandh : ಭದ್ರಾ ನೀರಿಗಾಗಿ ಬೀದಿಗಿಳಿಯಲಿಲ್ಲ ಭತ್ತ ಬೆಳೆಗಾರರು!

HD Devegowda Press meet
ಕರ್ನಾಟಕ22 hours ago

Cauvery water dispute : ಜಲ ಶಕ್ತಿ ಇಲಾಖೆಯಿಂದ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಲಿ, ಮೋದಿ ಮಧ್ಯ ಪ್ರವೇಶಿಸಲಿ: ಎಚ್.ಡಿ. ದೇವೇಗೌಡ

Farmers protest Mundargi bandh
ಕರ್ನಾಟಕ22 hours ago

Mundargi Bandh : ಬರ ಪೀಡಿತ ತಾಲೂಕು ಘೋಷಣೆಗೆ ಒತ್ತಾಯಿಸಿ ಮುಂಡರಗಿ ಬಂದ್!

Dina bhavishya
ಪ್ರಮುಖ ಸುದ್ದಿ1 day ago

Dina Bhavishya : ಈ ರಾಶಿಯವರಿಗೆ ಇಂದು ಹೂಡಿಕೆ ಬೇಡ! ಕೆಲ ವಿಷಯದಲ್ಲಿ ಇರಲಿ ಗೌಪ್ಯತೆ

Actor padhmini Kirk
ಕರ್ನಾಟಕ2 days ago

Viral News : ಕಿರುತೆರೆ ನಟಿ ಕಿರಿಕ್‌; ಕೆಲಸ ಕಳೆದುಕೊಂಡ ಓಲಾ ಆಟೋ ಡ್ರೈವರ್‌!

dina bhavishya
ಪ್ರಮುಖ ಸುದ್ದಿ2 days ago

Dina Bhavishya : ಈ ರಾಶಿಯವರಿಗೆ ಕೋಪವೇ ಮುಳುವು!

Dina bhavishya
ಪ್ರಮುಖ ಸುದ್ದಿ3 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಇಂದು ಬಾಸ್‌ನಿಂದ ಕಿರಿಕ್‌!

Dina Bhavishya
ಪ್ರಮುಖ ಸುದ್ದಿ4 days ago

Dina Bhavishya : ದಿನದ ಮಟ್ಟಿಗೆ ಈ ರಾಶಿಯವರು ಹೂಡಿಕೆ ಮಾಡ್ಬೇಡಿ!

ಟ್ರೆಂಡಿಂಗ್‌