Site icon Vistara News

Cauvery water Dispute : ರಾಜ್ಯದ ಹಿತ ಕಾಯಲು ಏನು ಮಾಡಬೇಕು? : ಸಿಎಂಗೆ ಸಲಹೆ ನೀಡಿದ ಬೊಮ್ಮಾಯಿ

Siddaramaiah and Bommai

ಬೆಂಗಳೂರು: ಕಾವೇರಿ ನೀರಿನ ಹಂಚಿಕೆ (Cauvery Water distribution) ವಿಚಾರದಲ್ಲಿ ತಮಿಳುನಾಡು ಸರ್ಕಾರ (Tamilandu Government) ಮತ್ತೆ ಕ್ಯಾತೆ ತೆಗೆದಿದ್ದು, ಈ ಸಂದರ್ಭದಲ್ಲಿ ರಾಜ್ಯ ಸರ್ಕಾರ (Karnataka Government) ರಾಜ್ಯದ ರೈತರ ಹಿತ ಕಾಯುವ ನಿರ್ಧಾರಕ್ಕೆ ಬದ್ಧವಾಗಿರಬೇಕು (Cauvery Water Dispute) ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

ಪತ್ರದಲ್ಲಿರುವ ಪ್ರಮುಖ ಅಂಶಗಳೇನು?

  1. ತಮಿಳುನಾಡು ಸರ್ಕಾರ ಕಾವೇರಿ ನೀರಿನ ಹಂಚಿಕೆ ವಿಚಾರದಲ್ಲಿ ಮತ್ತೆ ಕ್ಯಾತೆ ತೆಗೆದಿದ್ದು ನಿಮ್ಮ ಗಮನಕ್ಕೆ ಬಂದಿದೆ ಎಂದು ಭಾವಿಸಿದ್ದೇನೆ ಹಾಗೂ ತಮಿಳುನಾಡು ಸುಪ್ರಿಂ ಕೋರ್ಟ್‌ಗೆ ಹೋಗಬಹುದೆಂದು ಮಾಧ್ಯಮದಲ್ಲಿ ನಾವು ನೋಡಿದ್ದೇವೆ. ಈ ವಿಚಾರದಲ್ಲಿ ಕೆಳಕಂಡ ಮಹತ್ವದ ವಾಸ್ತವಿಕ ಅಂಶಗಳನ್ನು ಇಟ್ಟುಕೊಂಡು ಬರುವ ದಿನಗಳಲ್ಲಿ ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕೆಂದು ನಾನು ಈ ಪತ್ರ ಬರೆಯುತ್ತಿದ್ದೇನೆ‌.
  2. ಜೂನ್ 1ರಂದು ಕರ್ನಾಟಕದ ನಾಲ್ಕು ಜಲಾಶಯಗಳಲ್ಲಿ ಒಟ್ಟು 24.352 ಟಿಎಂಸಿ ನೀರಿತ್ತು. ಅದೇ ರೀತಿ ಮೆಟ್ಟೂರು ಜಲಾಶಯದಲ್ಲಿ 69.77 ಟಿಎಂಸಿ, ಭವಾನಿ ಸಾಗರ ಜಲಾಶಯದಲ್ಲಿ 16.653 ಟಿಎಂಸಿ ಇದ್ದು, ಬಿಳಿಗುಂಡ್ಲು ಮಾಪನ ಕೇಂದ್ರದಿಂದ 6-8-2023ಕ್ಕೆ 14.054 ಟಿಎಂಸಿ ನೀರು ಹೋಗಿರುವುದು ಮಾಧ್ಯಮಗಳಿಂದ ಗೊತ್ತಾಗಿದೆ. ಒಟ್ಟು ತಮಿಳುನಾಡಿನ ಮೆಟ್ಟೂರು ಡ್ಯಾಮ್‌ನಲ್ಲಿ ಈ ವರ್ಷ 83.831 ಟಿಎಂಸಿ ನೀರು ಬಂದಿದೆ.
  3. ತಮಿಳುನಾಡು ಕಾವೇರಿ ಜಲ ನಿರ್ವಹಣಾ ನ್ಯಾಯಮಂಡಳಿ (ಸಿಡಬ್ಲುಡಿಟಿ) ಪ್ರಕಾರ ಕುರುವೈ ಬೆಳೆಗೆ 1 ಲಕ್ಷ 80 ಸಾವಿರ ಎಕರೆ ಪ್ರದೇಶದಲ್ಲಿ ಬೆಳೆ ಬೆಲೆಯಬೇಕು ಹಾಗೂ 32 ಟಿಎಂಸಿ ನೀರು ಬಳಸಬೇಕು.
  4. ಆದರೆ, ತಮಿಳುನಾಡು 7-8-23 ಕ್ಕೆ 60.97 ಟಿಎಂಸಿ ನೀರನ್ನು ಕುರುವೈ ಬೆಳೆಗೆ ಬಳಕೆ ಮಾಡಿದ್ದು ಸಿಡಬ್ಲುಡಿಟಿ ಆದೇಶದ ಎರಡು ಪಟ್ಡು ಹೆಚ್ಚಾಗಿದೆ.
  5. ಕಾವೇರಿ ಜಲಾನಯನ ಪ್ರದೇಶದಲ್ಲಿ ನೀರಿನ ಕೊರತೆ ಇರುವುದನ್ನು ‌ಲೆಕ್ಕಿಸದೇ ಸಿಡಬ್ಲುಡಿಟಿ ಆದೇಶ ಉಲ್ಲಂಘನೆ ಮಾಡಿ ನಾಲ್ಕು ಪಟ್ಟು ಕುರುವೈ ಏರಿಯಾ ಬೆಳೆಗೆ ನೀರನ್ನು ಒದಗಿಸಿದೆ. ಇದನ್ನು ನಮ್ಮ ಅಧಿಕಾರಿಗಳು ಸಿಡಬ್ಲುಎಂಎದಲ್ಲಿ ಪ್ರತಿಭಟಿಸದೇ ಸುಮ್ಮನೆ ಇದ್ದದ್ದು ರಾಜ್ಯದ ಹಿತಾಸಕ್ತಿಗೆ ಧಕ್ಕೆಯಾಗಿದೆ.
  6. ಈಗಿರುವ ನಮ್ಮ ನಾಲ್ಕು ಡ್ಯಾಮ್‌ಗಳ ನೀರಿನ ಮಟ್ಟ ಬೆಂಗಳೂರು ನಗರ, ಕಾವೇರಿ ಜಲಾನಯನ ಪ್ರದೇಶದ ನಗರ ಮತ್ತು ಗ್ರಾಮಗಳ ಕುಡಿಯುವ ನೀರಿಗೆ ಕೊರತೆಯಾಗುತ್ತದೆ.
  7. ಅದೇ ರೀತಿ ಕಾವೇರಿ ‌ಜಲಾನಯನ ಪ್ರದೇಶದ ಖಾರಿಫ್‌ ಬೆಳೆಗಳಿಗೆ ನೀರಿನ ಕೊರತೆಯಾಗುತ್ತದೆ. ಹೀಗಾಗಿ ನೀರು ಬಿಡುವುದು ಕರ್ನಾಟಕದ ಜನತೆ ಮತ್ತು ರೈತರನ್ನು ಸಂಕಷ್ಟಕ್ಕೆ ಈಡು ಮಾಡುತ್ತದೆ.
  8. ತಮಿಳುನಾಡಿಗೆ ಸೌಥ್ ವೆಸ್ಟ್ ಮತ್ತು ನಾರ್ಥ್ ಈಸ್ಟ್ ಮಾನ್ಸೂನ್‌ ಮಳೆ ಆಗುತ್ತಿರುವುದರಿಂದ ನಮಗೆ ನೀರು ಬಿಡಲು ಸಾಧ್ಯವಿಲ್ಲ ಎಂದು ಈ ವಾಸ್ತವಾಂಶದ ಮೇಲೆ ನಾವು ಗಟ್ಟಿ ನಿಲುವು ತೆಗೆದುಕೊಳ್ಳಬೇಕೆಂದು ನಾನು ತಮ್ಮಲ್ಲಿ ಆಗ್ರಹ ಮಾಡುತ್ತೇನೆ.
  9. ತಾವು ಕಾವೇರಿ ಜಲಾನಯನ ಪ್ರದೇಶದ ನೀರಿನ ಹಿತಾಸಕ್ತಿ ಕಾಪಾಡುತ್ತೀರೆಂದು ನಂಬಿರುವೆ ಎಂದು ಪತ್ರದ ಮೂಲಕ ತಿಳಿಸಿದ್ದಾರೆ‌ ಬಸವರಾಜ ಬೊಮ್ಮಾಯಿ.

ಇದನ್ನೂ ಓದಿ: Cauvery Water Dispute: ಕಾವೇರಿಗಾಗಿ ಮತ್ತೆ ಕ್ಯಾತೆ ತೆಗೆದ ತಮಿಳುನಾಡು; ಸುಪ್ರೀಂ ಕೋರ್ಟ್‌ಗೆ ಅರ್ಜಿ

Exit mobile version