ಬೆಂಗಳೂರು: ಕಾವೇರಿ ನೀರಿಗಾಗಿ ಹೋರಾಟದ (Cauvery Water Dispute) ಕಿಚ್ಚು ಹೆಚ್ಚಾಗುತ್ತಿದೆ. ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವುದನ್ನು ವಿರೋಧಿಸಿ ವಿವಿಧ ಕನ್ನಡ ಪರ, ರೈತ ಪರ ಸಂಘಟನೆಗಳಿಂದ ಕರ್ನಾಟಕ ಬಂದ್ (Karnataka Bandh) ಕರೆ ನೀಡಲಾಗಿದೆ. ಸೆ.29ಕ್ಕೆ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ನಿಗದಿಯಾಗಿದ್ದ ಪರೀಕ್ಷೆಗಳನ್ನು (Exams Postponed) ಮುಂದೂಡಲಾಗಿದೆ.
ಎಲ್ಲೆಲ್ಲಿ ಯಾವ್ಯಾವ ಪರೀಕ್ಷೆ ಮುಂದೂಡಿಕೆ?
1) ಬೆಂಗಳೂರು ನಗರ ವಿಶ್ವವಿದ್ಯಾನಿಲಯಲ್ಲಿ ಸೆ.29ರಂದು ನಡೆಯಬೇಕಿದ್ದ 2 ಮತ್ತು 4 ನೇ ಸೆಮಿಸ್ಟರ್ ಸ್ನಾತಕ ಪದವಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಮುಂದೂಡಿರುವ ಪರೀಕ್ಷೆಯನ್ನು ಅಕ್ಟೋಬರ್ 4ರಂದು ನಡೆಸಲಾಗುತ್ತದೆ.
2) ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಸೆ.29ರಂದು ನಡೆಯಬೇಕಾಗಿದ್ದ ವಿವಿಧ ಸ್ನಾತಕ ಪದವಿಗಳ ಪ್ರಥಮ ಸೆಮಿಸ್ಟರ್ ಪೂರಕ ಪರೀಕ್ಷೆಗಳು ಹಾಗೂ ಸ್ನಾತಕೋತ್ತರ ಪದವಿಗಳ 2ನೇ ಮತ್ತು 4ನೇ ಪರೀಕ್ಷೆಗಳನ್ನು ಕೂಡ ಮುಂದೂಡಲಾಗಿದೆ. ಮುಂದೂಡಲಾಗಿರುವ ಪ್ರಥಮ ಸೆಮಿಸ್ಟರ್ ಪರೀಕ್ಷೆಯನ್ನು ಅಕ್ಟೋಬರ್ 18ರಂದು ನಡೆಸಲಾಗುತ್ತದೆ. 2 ಮತ್ತು 4ನೇ ಸೆಮಿಸ್ಟರ್ ಪರೀಕ್ಷೆಯನ್ನು ಅಕ್ಟೋಬರ್ 12ರಂದು ನಡೆಸಲಾಗುವುದು.
3) ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಸ್ನಾತಕ ವಿಭಾಗದ 2, 4, 6ನೇ ಸೆಮಿಸ್ಟರ್‌ಗೆ ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ. ಬಿಎ, ಬಿಎಸ್ಸಿ, ಬಿಕಾಂ ಪದವಿಯ ಪರೀಕ್ಷೆಯನ್ನು ಮುಂದೂಡಲಾಗಿದೆ. ಸೆ.29ಕ್ಕೆ ನಡೆಯಬೇಕಿದ್ದ ಪರೀಕ್ಷೆಯನ್ನು ಅಕ್ಟೋಬರ್ 30 ಕ್ಕೆ ನಿಗದಿ ಮಾಡಲಾಗಿದೆ. ರಾಣಿ ಚನ್ನಮ್ಮ ವಿವಿ ಕುಲಸಚಿವ ಮೌಲ್ಯಮಾಪನ ಶಿವಾನಂದ ಗೋರ್ನಾಳೆ ಅವರು ಆದೇಶ ಹೊರಡಿಸಿದ್ದಾರೆ.
4) ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯಲ್ಲಿ ಸೆ.29ಕ್ಕೆ ನಡೆಯಬೇಕಿದ್ದ ಎಲ್ಲ ಯುಜಿ, ಪಿಜಿ ಕೋರ್ಸ್‌ಗಳ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದೆ. ಪದವಿ ಪರೀಕ್ಷೆಯನ್ನು ಸೆ. 30ಕ್ಕೆ ಹಾಗೂ ಸ್ನಾತಕೋತ್ತರ ಪರೀಕ್ಷೆಯನ್ನು ಅಕ್ಟೋಬರ್ 10 ಕ್ಕೆ ಮುಂದೂಡಲಾಗಿದೆ.
5) ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಚಿತ್ರದುರ್ಗದ ದಾವಣಗೆರೆ ವಿವಿಯಲ್ಲೂ ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ಪ್ರಕಟಿಸುವುದಾಗಿ ವಿವಿ ಕುಲಪತಿ ಡಾ.ಕೆ.ಶಿವಶಂಕರ ತಿಳಿಸಿದ್ದಾರೆ.
6) ಕಾವೇರಿ ನದಿ ನೀರು ಹಂಚಿಕೆ ಸಂಬಂಧ ರಾಜ್ಯಾದ್ಯಂತ ಮುಷ್ಕರ ಹಿನ್ನೆಲೆಯಲ್ಲಿ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲೂ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿಯ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಸೆ.26, 28 ಹಾಗೂ 29 ರಂದು ನಿಗದಿಯಾಗಿದ್ದ ಪರೀಕ್ಷೆಗಳಿಗೆ ಪರ್ಯಾಯ ದಿನಾಂಕವನ್ನು ನಿಗದಿ ಮಾಡಲಾಗಿದೆ. ಬಿಎ, ಬಿಕಾಂ, ಎಂ.ಎ, ಎಂ.ಕಾಂನ ಮುಂದೂಡಲ್ಪಟ್ಟ ಪರೀಕ್ಷೆಗಳನ್ನು ಅಕ್ಟೋಬರ್ 11, 12 ಮತ್ತು 13ಕ್ಕೆ ನಿಗದಿ ಮಾಡಲಾಗಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ