Site icon Vistara News

‌Cauvery water dispute : ಕಾವೇರಿ ಬಿಕ್ಕಟ್ಟು ಚರ್ಚೆಗೆ ನಾಳೆ ದೆಹಲಿಯಲ್ಲಿ ಮಹತ್ವದ ಸಭೆ; ಸಿಎಂ, ಡಿಸಿಎಂ ಭಾಗಿ

DK Shivakumar and CM Siddaramaiah

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದ (‌‌‌‌Cauvery water dispute), ಕೇಂದ್ರ ಸರ್ಕಾರದ ಮುಂದೆ ಬಾಕಿ ಇರುವ ರಾಜ್ಯದ ಯೋಜನೆಗಳು ಹಾಗೂ ಬರ ಪರಿಹಾರ ವಿಷಯಗಳಿಗೆ (Drought relief issue) ಸಂಬಂಧಿಸಿದಂತೆ ಚರ್ಚಿಸಲು ದೆಹಲಿಯ ಖಾಸಗಿ ಹೋಟೆಲ್‌ನಲ್ಲಿ ಬುಧವಾರ (ಸೆಪ್ಟೆಂಬರ್‌ 20) ಬೆಳಗ್ಗೆ ಮಹತ್ವದ ಸಭೆಯನ್ನು ಕರೆಯಲಾಗಿದೆ. ಅಲ್ಲದೆ, ಕಾನೂನು ತಜ್ಞರ (Legal experts) ಜತೆ ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ (DCM DK Shivakumar) ಚರ್ಚೆ ನಡೆಸಲಿದ್ದಾರೆ.

ರಾಜ್ಯ ಪ್ರತಿನಿಧಿಸುವ ಕೇಂದ್ರದ ಸಚಿವರು (Union Ministers), ಲೋಕಸಭಾ ಸದಸ್ಯರು (Lok Sabha Members) ಹಾಗೂ ರಾಜ್ಯಸಭಾ ಸದಸ್ಯರು (Rajya Sabha Members) ಈ ಮಹತ್ವದ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಜತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ‌‌.ಕೆ. ಶಿವಕುಮಾರ್, ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿಬಿ ಜಯಚಂದ್ರ, ಕಾನೂನು ಸಚಿವ ಎಚ್.ಕೆ. ಪಾಟೀಲ್‌, ಕೃಷಿ ಸಚಿವ ಚಲುವರಾಯಸ್ವಾಮಿ ಹಾಗೂ ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಭಾಗಿಯಾಗಲಿದ್ದಾರೆ.

ಇದನ್ನೂ ಓದಿ: Krishna ByreGowda : ಅಕ್ಟೋಬರ್‌ 1ರಿಂದ ಶೇ. 30ರಷ್ಟು ಆಸ್ತಿ ಮಾರ್ಗಸೂಚಿ ದರ ಹೆಚ್ಚಳ!

ಕೇಂದ್ರ ಸಚಿವರ ಭೇಟಿ

ದೆಹಲಿಗೆ ತೆರಳುವ ಮುನ್ನ ಸದಾಶಿವನಗರ ನಗರದ ನಿವಾಸದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ಸಿಎಂ, ನಾನು , ಕಾನೂನು ಮಿನಿಸ್ಟರ್, ಚೆಲುವರಾಯಸ್ವಾಮಿ, ಮಹದೇವಪ್ಪ ಅವರು ದೆಹಲಿಗೆ ಹೋಗುತ್ತಿದ್ದೇವೆ. ಎಲ್ಲ ಸಂಸದರನ್ನು ಭೇಟಿ ಮಾಡುತ್ತೇವೆ. ಹಾಗೆಯೇ ಕೇಂದ್ರ ಸಚಿವರನ್ನು ಭೇಟಿ ಮಾಡುತ್ತೇವೆ. ನಮ್ಮ ರೈತರಿಗೆ ನ್ಯಾಯ ಒದಗಿಸುವ ಕೆಲಸ ಮಾಡುತ್ತೇವೆ. ಬುಧವಾರ ಬೆಳಗ್ಗೆ ಎಲ್ಲ ಸಂಸದರ ಸಭೆಯನ್ನು ಸಿಎಂ ನೇತೃತ್ವದಲ್ಲಿ ಕರೆಯಲಾಗಿದೆ ಎಂದು ಹೇಳಿದರು.

ತಮಿಳುನಾಡಿಗೆ 15 ದಿನಗಳ ಕಾಲ 5 ಸಾವಿರ ಕ್ಯೂಸೆಕ್‌ ಕಾವೇರಿ ನೀರನ್ನು ಬಿಡುಗಡೆ ಮಾಡಬೇಕು ಎಂಬ ಆದೇಶದ ಹಿನ್ನೆಲೆಯಲ್ಲಿ ಬುಧವಾರ ದೆಹಲಿಯಲ್ಲಿ ಕಾನೂನು ತಜ್ಞರ ಜತೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ಸಭೆ ನಡೆಸಲಿದ್ದಾರೆ.

ಕಾನೂನು ತಜ್ಞರೊಂದಿಗೆ ಚರ್ಚೆ

ರಾಜ್ಯದಲ್ಲಿ ಕಾವೇರಿ ನದಿ ನೀರಿನ ಪರಿಸ್ಥಿತಿ, ಇಲ್ಲಿನ ಕುಡಿಯುವ ನೀರಿನ ಸಮಸ್ಯೆ, ಬೆಳೆಗಳಿಗೆ ನೀರಿಲ್ಲದಿರುವುದು ಸೇರಿದಂತೆ ಇನ್ನಿತರ ಸಮಸ್ಯೆಗಳ ಬಗ್ಗೆ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವ ಮುನ್ನ‌ ಈ ಸಭೆಯಲ್ಲಿ ಕಾನೂನು ತಜ್ಞರೊಂದಿಗೆ ಸಭೆ ನಡೆಸಿ ಚರ್ಚೆ ಮಾಡಲಾಗುತ್ತದೆ. ಸೆಪ್ಟೆಂಬರ್‌ 21ಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಕಾವೇರಿ ವಿವಾದಕ್ಕೆ ಸಂಬಂಧಪಟ್ಟಂತೆ ಅರ್ಜಿ ವಿಚಾರಣೆ ಇದೆ. ಈ ನಡುವೆ ರಾಜ್ಯ ಸರ್ಕಾರ ಸಮರ್ಥ ವಾದ ಮಂಡಿಸಲು ಸಿದ್ಧತೆಗಳನ್ನು ನಡೆಸುತ್ತಿವೆ.

ಇದನ್ನೂ ಓದಿ: Land Auditing : ಬೆಂಗಳೂರಲ್ಲಿ 75000 ಎಕರೆ ಸರ್ಕಾರಿ ಭೂ ಒತ್ತುವರಿ; ಲ್ಯಾಂಡ್‌ ಆಡಿಟಿಂಗ್‌ಗೆ ಸಿಎಂ ಸೂಚನೆ

ಕೇಂದ್ರಕ್ಕೆ ಮೊರೆ

ಕಾವೇರಿ ನದಿ ನೀರು ಹಂಚಿಕೆ ವಿವಾದ ಸೇರಿದಂತೆ ಕೇಂದ್ರ ಸರ್ಕಾರದ ಮುಂದೆ ಬಾಕಿ ಇರುವ ರಾಜ್ಯದ ಯೋಜನೆಗಳು ಹಾಗೂ ಬರ ಪರಿಹಾರ ವಿಷಯಗಳಿಗೆ ಸಂಬಂಧಿಸಿದಂತೆ ಕೇಂದ್ರದ ಜಲಸಂಪನ್ಮೂಲ ಸಚಿವರ ಬಳಿ ಚರ್ಚೆ ನಡೆಸಲು ಸಹ ಸಿದ್ಧತೆ ನಡೆಸಲಾಗಿದೆ.

Exit mobile version