ಹಾಸನ: ವಿಧಾನಸಭೆ ಚುನಾವಣೆಯ (Sakleshpur Election Results) ಫಲಿತಾಂಶ ಹೊರಬಿದ್ದಿದ್ದು, ಜಿಲ್ಲೆಯ ಸಕಲೇಶಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸಿಮೆಂಟ್ ಮಂಜು ಗೆದ್ದಿದ್ದಾರೆ. ಇವರು 2,056 ಮತಗಳ ಅಂತರದಿಂದ ಜೆಡಿಎಸ್ ಅಭ್ಯರ್ಥಿ ಎಚ್.ಕೆ.ಕುಮಾರಸ್ವಾಮಿ ವಿರುದ್ಧ ಗೆಲುವು ಕಂಡಿದ್ದಾರೆ.
ಸಕಲೇಶಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸಿಮೆಂಟ್ ಮಂಜು 58,604 ಮತಗಳನ್ನು ಪಡೆದಿದ್ದು, ಜೆಡಿಎಸ್ ಅಭ್ಯರ್ಥಿ ಎಚ್.ಕೆ.ಕುಮಾರಸ್ವಾಮಿ 56,548 ಮತ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಮುರುಳಿಮೋಹನ್ ಅಭ್ಯರ್ಥಿ 42,811 ಮತಗಳನ್ನು ಪಡೆದಿದ್ದಾರೆ.
ಕಳೆದ ಚುನಾವಣೆ ಫಲಿತಾಂಶ
2018ರ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಎಚ್.ಕೆ. ಕುಮಾರಸ್ವಾಮಿ ಅವರು 62,262 ಮತಗಳನ್ನು ಪಡೆದು ಜಯ ಗಳಿಸಿದ್ದರು. ಬಿಜೆಪಿ ಅಭ್ಯರ್ಥಿ ನಾರ್ವೆ ಸೋಮಶೇಖರ್ 57,320 ಮತ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಸಿದ್ದಯ್ಯ 37,002 ಮತಗಳನ್ನು ಪಡೆದಿದ್ದರು.
ಇದನ್ನೂ ಓದಿ | Belur Election Results: ಬೇಲೂರಿನಲ್ಲಿ ಬಿಜೆಪಿಯ ಎಚ್.ಕೆ.ಸುರೇಶ್‌ಗೆ ಜಯ
ಸತತ ಆರು ಬಾರಿ ಜೆಡಿಎಸ್‌ನ ಎಚ್.ಕೆ. ಕುಮಾರಸ್ವಾಮಿ ಶಾಸಕರಾಗಿ ಆಯ್ಕೆಯಾಗಿದ್ದರು. ಇದೇ ಕ್ಷೇತ್ರದಲ್ಲಿ ಮೂರು ಹಾಗೂ ಪಕ್ಕದ ಬೇಲೂರಿನಲ್ಲಿ ಮೂರು ಬಾರಿ ಗೆಲುವು ಸಾಧಿಸಿದ್ದರು. ಈಗ ಸಕಲೇಶಪುರ ಕ್ಷೇತ್ರದಲ್ಲಿ ನಾಲ್ಕನೇ ಬಾರಿ ಸ್ಪರ್ಧಿಸಿ, ಬಿಜೆಪಿ ಅಭ್ಯರ್ಥಿ ಸಿಮೆಂಟ್ ಮಂಜು ವಿರುದ್ಧ ಸೋತಿದ್ದಾರೆ.