Wayanad Landslide: ಕೇರಳದ ಭೂಕುಸಿತ ದುರಂತಕ್ಕೆ ಶೋಕ ವ್ಯಕ್ತಪಡಿಸಿದ ಕೇಂದ್ರ ಸಚಿವ ಎಚ್‌ಡಿಕೆ - Vistara News

ಕರ್ನಾಟಕ

Wayanad Landslide: ಕೇರಳದ ಭೂಕುಸಿತ ದುರಂತಕ್ಕೆ ಶೋಕ ವ್ಯಕ್ತಪಡಿಸಿದ ಕೇಂದ್ರ ಸಚಿವ ಎಚ್‌ಡಿಕೆ

Wayanad Landslide: ಕರ್ನಾಟಕದಲ್ಲಿಯೂ ಅನೇಕ ಜಿಲ್ಲೆಗಳಲ್ಲಿ ಇದೇ ಸಮಸ್ಯೆ ಸೃಷ್ಟಿಯಾಗಿದೆ. ಈ ಬಗ್ಗೆ ಸಾರ್ವಜನಿಕರು ಬಹಳ ಎಚ್ಚರಿಕೆ ವಹಿಸಬೇಕು. ರಾಜ್ಯ ಸರಕಾರವೂ 24X7 ರಕ್ಷಣಾ ಸಿಬ್ಬಂದಿಯನ್ನು ಸನ್ನದ್ಧ ಸ್ಥಿತಿಯಲ್ಲಿಟ್ಟು, ಅಪಾಯವಿರುವ ಸ್ಥಳಗಳಲ್ಲಿ ಅಧಿಕಾರಿಗಳನ್ನು ನಿಯೋಜಿಸಬೇಕು ಎಂದು ಕೇಂದ್ರ ಸಚಿವರು ಟ್ವೀಟ್‌ ಮಾಡಿದ್ದಾರೆ.

VISTARANEWS.COM


on

HD Kumaraswamy
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕೇರಳದ (Kerala Landslide) ವೈನಾಡಿನಲ್ಲಿ ಸಂಭವಿಸಿದ ಭಾರಿ ಭೂಕುಸಿತ (Wayanad Landslide) ಹಾಗೂ ಜೀವಹಾನಿಯ ಕುರಿತು ಟ್ವೀಟ್‌ ಮಾಡಿರುವ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ (HD Kumaraswamy) ಅವರು, ದುರಂತ ಸಾವುಗಳಿಗಾಗಿ ಶೋಕ ವ್ಯಕ್ತಪಡಿಸಿದ್ದಾರೆ.

ಕೇರಳದ ವಯನಾಡು ಬಳಿ ಉಂಟಾಗಿರುವ ಭೀಕರ ಭೂಕುಸಿತದಿಂದ (Wayanad Landslide) ಅನೇಕರು ದಾರುಣ ಸಾವನ್ನಪ್ಪಿರುವ ಘಟನೆ ನನಗೆ ತೀವ್ರ ಆಘಾತ ಉಂಟು ಮಾಡಿದೆ. ಇನ್ನು ಅನೇಕರು ಮಣ್ಣಿನಡಿಯಲ್ಲಿ ಸಿಲುಕಿದ್ದು, ಅವರನ್ನು ರಕ್ಷಿಸುವ ಕಾರ್ಯ ಸಮರೋಪಾದಿಯಲ್ಲಿ ಸಾಗಿದೆ. ಗೌರವಾನ್ವಿತ ಪ್ರಧಾನಿ ಮೋದಿ ಅವರು ತುರ್ತಾಗಿ ಸ್ಪಂದಿಸಿದ್ದು, ಕೇರಳದ ಸಿಎಂ ಜತೆ ಮಾತನಾಡಿ ರಕ್ಷಣಾ ಕಾರ್ಯಗಳಿಗೆ ಸಕಲ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ಹೀಗಾಗಿ ಮಾನ್ಯ ಪ್ರಧಾನಿಗಳನ್ನು ನಾನು ಅಭಿನಂದಿಸುತ್ತೇನೆ. ಈ ದುರಂತದಲ್ಲಿ ಸಾವನ್ನಪ್ಪಿದವರಿಗೆ ಚಿರಶಾಂತಿ ಸಿಗಲಿ. ದುಃಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಎಲ್ಲಾ ಕುಟುಂಬಗಳಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಎಚ್‌ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.

ಕೇರಳ ಸೇರಿ ದೇಶದೆಲ್ಲೆಡೆ ಭಾರೀ ಮಳೆ ಆಗುತ್ತಿದ್ದು ಭೂಕುಸಿತ, ನೆರೆ ಉಂಟಾಗಿದೆ. ಕರ್ನಾಟಕದಲ್ಲಿಯೂ ಅನೇಕ ಜಿಲ್ಲೆಗಳಲ್ಲಿ ಇದೇ ಸಮಸ್ಯೆ ಸೃಷ್ಟಿಯಾಗಿದೆ. ಈ ಬಗ್ಗೆ ಸಾರ್ವಜನಿಕರು ಬಹಳ ಎಚ್ಚರಿಕೆ ವಹಿಸಬೇಕು. ರಾಜ್ಯ ಸರಕಾರವೂ 24X7 ರಕ್ಷಣಾ ಸಿಬ್ಬಂದಿಯನ್ನು ಸನ್ನದ್ಧ ಸ್ಥಿತಿಯಲ್ಲಿಟ್ಟು, ಅಪಾಯವಿರುವ ಸ್ಥಳಗಳಲ್ಲಿ ಅಧಿಕಾರಿಗಳನ್ನು ನಿಯೋಜಿಸಬೇಕು ಎಂದು ಕೇಂದ್ರ ಸಚಿವರು ಟ್ವೀಟ್‌ ಮಾಡಿದ್ದಾರೆ.

ವಯನಾಡ್‌ ಭೂಕುಸಿತದಲ್ಲಿ 40 ದಾಟಿದ ಸಾವಿನ ಸಂಖ್ಯೆ

ವಯನಾಡ್‌: ದೇವರನಾಡು ಕೇರಳ (Kerala) ದಲ್ಲಿ ಭಾರೀ ಮಳೆಗೆ ಭೂಕುಸಿತಕ್ಕೆ (Kerala Landslide) ಸಿಲುಕಿ ಸಾವನ್ನಪ್ಪಿದವರ ಸಂಖ್ಯೆ 20ಕ್ಕೆ ಏರಿಕೆ ಆಗಿದ್ದು, ನೂರಾರು ಮಂದಿ ಅವಶೇಷದಡಿಯಲ್ಲಿ ಸಿಲುಕಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಗುಡ್ಡಗಾಡು ಪ್ರದೇಶವಾಗಿರುವ ಮೆಪ್ಪಡಿ ಪ್ರದೇಶದಲ್ಲಿ ಭೀಕರ ಭೂಕುಸಿತ ಸಂಭವಿಸಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆ ಆಗುವ ಭೀತಿ ಎದುರಾಗಿದೆ.

ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಕೆಎಸ್‌ಡಿಎಂಎ) ಫೈರ್‌ಫೋರ್ಸ್ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡಗಳನ್ನು ಪೀಡಿತ ಪ್ರದೇಶಕ್ಕೆ ಸಜ್ಜುಗೊಳಿಸಿದ್ದು, ನೂರಾರು ಮಂದಿ ಸಿಲುಕಿರುವ ಶಂಕೆ ಇದೆ. ಕಣ್ಣೂರು ರಕ್ಷಣಾ ಭದ್ರತಾ ದಳದ ಎರಡು ತಂಡಗಳೊಂದಿಗೆ ಹೆಚ್ಚುವರಿ ಎನ್‌ಡಿಆರ್‌ಎಫ್ ತಂಡ ಕೂಡ ಸಹಾಯಕ್ಕೆ ತೆರಳುತ್ತಿದೆ.

ಇನ್ನು ಎಡೆಬಿಡದೇ ಸುರಿಯುತ್ತಿರುವ ಭಾರೀ ಮಳೆ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಮಲಪ್ಪುರಂ ಜಿಲ್ಲೆಯ ನೀಲಂಬುರ್‌ ಪ್ರದೇಶದಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು, ಚಾಲಿಯಾರ್‌ ನದಿಯಲ್ಲಿ ಅನೇಕರು ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ಮುಂದಕ್ಕೈ ಪ್ರದೇಶದಲ್ಲಿ ಅನೇಕ ಮನೆಗಳು. ಅಂಗಡಿಗಳು ಮತ್ತು ವಾಹನಗಳು ಜಲಾವೃತಗೊಂಡಿವೆ.

ಪ್ರಧಾನಿ ಮೋದಿ ಕಳವಳ

ಪ್ರಧಾನಮಂತ್ರಿ ನರೇಂದ್ರ ಮೋದಿ  ಭೂಕುಸಿತದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ, ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿರುವ ಎಲ್ಲರೊಂದಿಗೆ ಭಗವಂತ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಹೇಳಿದ್ದಾರೆ. ಪರಿಸ್ಥಿತಿಗೆ ಸ್ಪಂದಿಸಿ ಕೇಂದ್ರ ಸರ್ಕಾರ ಎಲ್ಲ ರೀತಿಯ ನೆರವು ನೀಡಲಿದೆ ಎಂದು ಭರವಸೆ ನೀಡಿದರು. ಏತನ್ಮಧ್ಯೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ದುಃಖಿತ ಕುಟುಂಬಗಳಿಗೆ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ ಮತ್ತು “ಇನ್ನೂ ಅವಶೇಷಡಿಯಲ್ಲಿ ಸಿಲುಕಿರುವವರನ್ನು ಶೀಘ್ರದಲ್ಲೇ ಸುರಕ್ಷಿತವಾಗಿ ಕರೆತರಲಾಗುವುದು ಎಂದು ನಾನು ಭಾವಿಸುತ್ತೇನೆ. ಪರಿಹಾರ ಕಾರ್ಯಗಳಿಗೆ ಅಗತ್ಯವಿರುವ ಯಾವುದೇ ಸಹಾಯವನ್ನು ನಾವು ನೀಡುತ್ತೇವೆ ಎಂದಿದ್ದಾರೆ.

ಇದನ್ನೂ ಓದಿ: Kerala Landslide: ಕೇರಳದಲ್ಲಿ ಭೀಕರ ಭೂ ಕುಸಿತ; ಸಾವಿನ ಸಂಖ್ಯೆ 20ಕ್ಕೆ ಏರಿಕೆ, ಮತ್ತಷ್ಟು ಮಂದಿ ಸಿಲುಕಿರುವ ಭೀತಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉತ್ತರ ಕನ್ನಡ

Uttara Kannada News: ನಿಯಮ ಪಾಲಿಸದ ಯಲ್ಲಾಪುರದ 3 ಖಾಸಗಿ ಆಸ್ಪತ್ರೆಗಳಿಗೆ ಬೀಗ

Uttara Kannada News: ಕೆಪಿಎಂಇ ಕಾಯ್ದೆಯಡಿಯಲ್ಲಿ ಅಗತ್ಯ ನಿಯಮಗಳನ್ನು ಪಾಲಿಸದೇ ವೈದ್ಯಕೀಯ ವೃತ್ತಿಯಲ್ಲಿ ನಿರತರಾಗಿದ್ದ ಯಲ್ಲಾಪುರ ತಾಲೂಕಿನ ಕಿರವತ್ತಿಯ ಮೂರು ಖಾಸಗಿ ಆಸ್ಪತ್ರೆಗಳಿಗೆ ತಾಲೂಕು ವೈದ್ಯಾಧಿಕಾರಿಗಳ ತಂಡ ಬೀಗ ಹಾಕಿದೆ.

VISTARANEWS.COM


on

3 private hospitals in Yallapur have been locked for not following the necessary rules under the KPME Act
Koo

ಯಲ್ಲಾಪುರ: ಕೆಪಿಎಂಇ ಕಾಯ್ದೆಯಡಿಯಲ್ಲಿ ಅಗತ್ಯ ನಿಯಮಗಳನ್ನು ಪಾಲಿಸದೇ ವೈದ್ಯಕೀಯ ವೃತ್ತಿಯಲ್ಲಿ ನಿರತರಾಗಿದ್ದ ತಾಲೂಕಿನ (Uttara Kannada News) ಕಿರವತ್ತಿಯ ಮೂರು ಖಾಸಗಿ ಆಸ್ಪತ್ರೆಗಳಿಗೆ ತಾಲೂಕು ವೈದ್ಯಾಧಿಕಾರಿಗಳ ತಂಡ ಬೀಗ ಜಡಿದಿದ್ದಾರೆ.

ಈ ಆಸ್ಪತ್ರೆಗಳ ಮೇಲೆ ಹಠಾತ್‌ ದಾಳಿ ನಡೆಸಿದ ತಾಲೂಕು ವೈದ್ಯಾಧಿಕಾರಿಗಳ ತಂಡ ಅನೇಕ ನ್ಯೂನತೆಗಳನ್ನು ಪತ್ತೆಹಚ್ಚಿದೆ. ಬೀಗ ಹಾಕಲಾದ ಆಸ್ಪತ್ರೆಗಳಲ್ಲಿ ಬಯೋ ಮೆಡಿಕಲ್ ವೇಸ್ಟ್‌ ಸರಿಯಾದ ಕ್ರಮದಲ್ಲಿ ವಿಲೇವಾರಿ ಮಾಡಲಾಗುತ್ತಿಲ್ಲ. ಸೂಜಿ, ಸಿರಿಂಜ್‌, ಕಾಟನ್‌, ಸಲಾಯಿನ್‌ ಬಾಟಲ್‌, ಖಾಲಿ ಆಂಪಲ್‌ಗಳನ್ನು ನಿಯಮಾನುಸಾರ ವಿಲೇವಾರಿ ಮಾಡದೆ, ಕಸದ ವಾಹನದಲ್ಲಿ ಕಳಿಸಲಾಗುತ್ತಿದೆ.

ಇದನ್ನೂ ಓದಿ: The RajaSaab Movie: ‘ದಿ ರಾಜಾಸಾಬ್’; ಎಲ್ಲರ ಗಮನ ಸೆಳೆಯುತ್ತಿದೆ ರೆಬೆಲ್‌ ಸ್ಟಾರ್‌ ಪ್ರಭಾಸ್‌ ಡ್ಯಾಶಿಂಗ್‌ ಲುಕ್‌!

ತಾಂತ್ರಿಕ ಪರಿಣಿತಿ ಹಾಗೂ ನಿಗದಿತ ವಿದ್ಯಾರ್ಹತೆ ಇಲ್ಲದ ಸಿಬ್ಬಂದಿಗಳನ್ನು ಔಷಧ ವಿತರಣೆಗೆ, ರಕ್ತದೊತ್ತಡ, ಡಯಾಬಿಟಿಸ್‌ ಪರೀಕ್ಷೆಗೆ ನೇಮಿಸಿಕೊಂಡು ಕಾರ್ಯನಿರ್ವಹಿಸಲಾಗುತ್ತಿತ್ತು. ಆಸ್ಪತ್ರೆಯಲ್ಲಿ ಸ್ವಚ್ಛತೆಯ ಕೊರತೆಯಿದೆ. ಒಂದು ಖಾಸಗಿ ಆಸ್ಪತ್ರೆಯು ಕೆಪಿಎಂಇ ಅಡಿಯಲ್ಲಿ ನೋಂದಣಿ ಆಗಿರುವುದಿಲ್ಲ. ಇದಲ್ಲದೇ ಸ್ವಂತ ಮನೆಯ ರೂಮ್‌ ಒಂದರಲ್ಲಿ ಒಬ್ಬರು ಯಾವುದೇ ವೈದ್ಯಕೀಯ ವಿದ್ಯಾರ್ಹತೆ ಹೊಂದದೆ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದರು.

ಈ ಎಲ್ಲಾ ಕಾರಣಗಳಿಂದಾಗಿ ಗುರುಪ್ರಸಾದ ಪಾಲಿ ಕ್ಲಿನಿಕ್‌, ಕೀರ್ತಿ ಕ್ಲಿನಿಕ್‌ ಹಾಗೂ ನೇಮಿಣಿ ಗಲ್ಲಿಯ ಮನೆಯೊಂದರಲ್ಲಿ ನಡೆಸಲಾಗುತ್ತಿದ್ದ ಕ್ಲಿನಿಕ್‌ಗೆ ಬೀಗ ಜಡೆಯಲಾಗಿದ್ದು, ಒಂದು ವಾರದೊಳಗೆ ಎಲ್ಲ ವ್ಯವಸ್ಥೆ ಸರಿಪಡಿಸಿಕೊಂಡು ಕೆಪಿಎಂಇ ಕಾಯ್ದೆಗೆ ಅನುಗುಣವಾಗಿ ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ತಾಲೂಕು ವೈದ್ಯಾಧಿಕಾರಿ ನರೇಂದ್ರ ಪವಾರ್‌ ತಿಳಿಸಿದ್ದಾರೆ.

ಇದನ್ನೂ ಓದಿ: Jio Games: ಜಿಯೋಗೇಮ್ಸ್‌ನಲ್ಲಿ ಗೂಗಲ್‌ನ ಗೇಮ್‌ಸ್ನ್ಯಾಕ್ಸ್‌ ಗೇಮ್ಸ್‌ ಲಭ್ಯ

ಈ ಸಂದರ್ಭದಲ್ಲಿ ಆರೋಗ್ಯ ಶಿಕ್ಷಣಾಧಿಕಾರಿ ಎಸ್‌.ಟಿ. ಭಟ್ಟ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಮಹೇಶ ತಾಳಿಕೋಟಿ, ಯು. ಜೋಸೆಫ್‌, ಪೊಲೀಸ್‌ ಹವಾಲ್ದಾರ ರಾಘವೇಂದ್ರ ನಾಯ್ಕ ಇದ್ದರು.

Continue Reading

ಕರ್ನಾಟಕ

MUDA scam: ಸಮಾಜವಾದಿ ಮುಖವಾಡ, ಅಹಿಂದ ಅಲಂಕಾರ, ಸತ್ಯವಂತನ ಸಿಂಗಾರ ಕಳಚಿಬಿದ್ದಿದೆ: ಸಿಎಂ ವಿರುದ್ಧ ಎಚ್‌ಡಿಕೆ ಕಿಡಿ

MUDA scam: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಹಾಲಿ ಸಿಎಂ ಮತ್ತು ಮಾಜಿ ಸಿಎಂ ನಡುವೆ ಟ್ವಿಟ್ ವಾರ್ ನಡೆದಿದೆ. ಮಾಜಿ ಸಿಎಂ ಎಚ್‌ಡಿಕೆ ಮತ್ತು ಕುಟುಂಬದವರು ಮುಡಾದಲ್ಲಿ ಸೈಟ್ ಪಡೆದಿದ್ದಾರೆ ಎಂದು ಆರೋಪಿಸಿ ಸಿಎಂ ಸಿದ್ದರಾಮಯ್ಯ ಟ್ವಿಟ್ ಮಾಡಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

VISTARANEWS.COM


on

MUDA scam
Koo

ಬೆಂಗಳೂರು: ಸುಳ್ಳು ಹೇಳುವುದು ನಿಮಗೆ ಅಭ್ಯಾಸವೋ, ಆಚಾರವೋ, ಚಾಳಿಯೋ ಗೊತ್ತಿಲ್ಲ. ಹಸಿಹಸಿ ಸುಳ್ಳು ಹೇಳುತ್ತಿರುವ ನಿಮ್ಮಲ್ಲಿ ನೈತಿಕತೆ ಸತ್ತಿದೆ. ಆರೋಪಿ ಸ್ಥಾನದಲ್ಲಿರುವ ನೀವು (MUDA scam) ನನ್ನ ಬಗ್ಗೆ, ನನ್ನ ತಂದೆಯವರ ಬಗ್ಗೆ ಆಡುತ್ತಿರುವ ಸುಳ್ಳುಗಳು ನಿಮ್ಮ ಯೋಗ್ಯತೆಗೆ ತಕ್ಕುದಲ್ಲ ಸಿದ್ದರಾಮಯ್ಯನವರೇ… ನಮ್ಮ ಬಗ್ಗೆ ಮಾತನಾಡುವ ಯೋಗ್ಯತೆಯೂ ನಿಮಗಿದೆ ಎಂದು ನನಗೆ ಅನಿಸುವುದಿಲ್ಲ ಎಂದು ಕೇಂದ್ರ ಸಚಿವ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ (HD Kumaraswamy) ಕಿಡಿಕಾರಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ಮುಡಾದವರು ನನಗೆ ನಿವೇಶನ ಹಂಚಿದ್ದಾರೆ, ನಿಜ. ಸ್ವಾಧೀನ ಪತ್ರವವನ್ನೂ ನೀಡಿದ್ದಾರೆ. ಆ ಪತ್ರವನ್ನು ನಾನು ಮಾಧ್ಯಮಗಳ ಮುಂದೆಯೂ ತೋರಿಸಿದ್ದೇನೆ. ಹಂಚಿದ ನಿವೇಶನದ ಜಾಗವನ್ನು ನನ್ನ ಸುಪರ್ದಿಗೆ ಕೊಡಬೇಕಲ್ಲವೇ? ಕೊಟ್ಟಿಲ್ಲ. ಹಾಗಾದರೆ, ಇದರಲ್ಲಿ ‘ಸಿದ್ದರಾಮಯ್ಯ ಮಾಡಿದ ಸಂಶೋಧನೆ ಏನಿದೆ?’ ‘ಸುಳ್ಳು ಸಂಶೋಧಕ ಸಿದ್ದರಾಮಯ್ಯ’ನವರೇ, ನಿಮ್ಮ ಮುಖಕ್ಕೆ ಮೆತ್ತಿಕೊಂಡಿರುವ ಕೊಳಕನ್ನು ನನ್ನ ಮೇಲೆ, ಇನ್ನಿತರರ ಮೇಲೆ ಸಿಡಿಸಲು ಹೊರಟು ಲಜ್ಜೆಗೇಡಿತನದ ಪರಮಾವಧಿ ಮೆರೆದಿದ್ದೀರಿ ಎಂದು ಟೀಕಿಸಿದ್ದಾರೆ.

ಮುಡಾ ಭೂಮಿಯನ್ನು ಮುಖ್ಯಮಂತ್ರಿ ಕುಟುಂಬ ಮುಕ್ಕಿ ತಿಂದಿದೆ’ ಎಂದು ಇಡೀ ದೇಶ ಮಾತನಾಡುತ್ತಿದೆ. ದಾಖಲೆಗಳು ಹಾದಿಬೀದಿಯಲ್ಲಿ ಹೊರಳಾಡುತ್ತಿವೆ! ನಿಮ್ಮ ಸಮಾಜವಾದಿ ಮುಖವಾಡ, ಅಹಿಂದ ಅಲಂಕಾರ, ಸತ್ಯವಂತನ ಸಿಂಗಾರ.. ಇದೆಲ್ಲವೂ ಕಳಚಿಬಿದ್ದಿದೆ. ಅಸಹ್ಯವಾಗುವಷ್ಟು ಅನಾಚಾರ ಮಾಡಿ ಅಹಿಂದ ರಕ್ಷಣೆ ಪಡೆಯಲು ಯತ್ನಿಸುತ್ತಿರುವ ನಿಮ್ಮ ಅಸಹಾಯತೆ ನನಗೆ ಅರ್ಥವಾಗುತ್ತದೆ. ಪಾಪ.. ನಿಮ್ಮ ಪಕ್ಷದವರೇ ನಿಮಗೆ ‘ಶರಪಂಜರ’ ಸೃಷ್ಟಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಕುಮಾರಸ್ವಾಮಿ ರಾಜ್ಯಕ್ಕೆ ಕೈಗಾರಿಕೆ ತರಲಿ, ರಾಜ್ಯಕ್ಕೆ ಒಳ್ಳೆಯದು ಮಾಡಲಿ ಎನ್ನುತ್ತೀರಿ. ಅದು ನನಗೆ ಗೊತ್ತಿದೆ. ನಾನು ಕೇಂದ್ರ ಸಚಿವನಾಗಿ ಇನ್ನೂ ಎರಡು ತಿಂಗಳಾಗಿಲ್ಲ. ರಾಜ್ಯದ ಕೆಲಸ ಮಾಡೋಣ ಎಂದರೆ ನಿಮ್ಮ ಅಸಹಕಾರ, ಅಸೂಯೆ ಅಡ್ಡಿ. ಒಂದು ನಾಲಿಗೆ ಮೇಲೆ ಸಹಕಾರ, ಅಸಹಕಾರ.. ಇದು ಹೇಗೆ ಸಾಧ್ಯ ಸಿದ್ದರಾಮಯ್ಯನವರೇ ಎಂದು ಪ್ರಶ್ನಿಸಿದ್ದಾರೆ.

ಎರಡು ಮುಖ, ಎರಡು ನಾಲಿಗೆ, ಎರಡು ವ್ಯಕ್ತಿತ್ವ, ಎರಡು ನೀತಿ.. ನಿಮ್ಮ ಐಡಿಯಾಲಜಿ! ಆ Siddalogy ನನಗೆ ಗೊತ್ತಿಲ್ಲದಲ್ಲ ಸಿದ್ದರಾಮಯ್ಯನವರೇ.. ರಾಜ್ಯಕ್ಕೆ ಒಳ್ಳೆಯದಾಗಲಿ ಎನ್ನುವ ಆಶಯ ಇರಲಿ, ನನ್ನ ಮೇಲೆ ಅಸೂಯೆ ಏಕೆ? ನಿಮ್ಮ ಸಕಲ ಗುಣಗಳ #Siddalogy ನನಗೆ ಚೆನ್ನಾಗಿಯೇ ಗೊತ್ತಿದೆ ಎಂದು ಹೇಳಿದ್ದಾರೆ.

Continue Reading

ಬೆಂಗಳೂರು

Shiradi Landslide: ಕೇರಳದ ಬೆನ್ನಿಗೇ ಶಿರಾಡಿ ಘಾಟಿಯಲ್ಲಿ ಭಾರೀ ಭೂಕುಸಿತ, ಮಣ್ಣಿನಡಿ ಸಿಲುಕಿದ ಕಾರುಗಳು, ಟ್ಯಾಂಕರ್‌

Shiradi Landslide: ಬೆಂಗಳೂರು- ಮಂಗಳೂರು ಅನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟಿಯ ಸಕಲೇಶಪುರ ತಾಲೂಕಿನ ದೊಡ್ಡತಪ್ಲೆ ಬಳಿ ಮತ್ತೆ ಬೃಹತ್‌ ಭೂಕುಸಿತವಾಗಿದೆ. ಕನಿಷ್ಠ ಎರಡು ಕಾರುಗಳು, ಒಂದು ಟ್ಯಾಂಕರ್ ಸೇರಿ ಆರು ವಾಹನಗಳು ಇದರಡಿ ಸಿಲುಕಿಕೊಂಡಿವೆ.

VISTARANEWS.COM


on

Shiradi Landslide
Koo

ಹಾಸನ: ಕೇರಳದ ವಯನಾಡಿನಲ್ಲಿ (Wayanad Landslide) ಬೃಹತ್ ಭೂಕುಸಿತ ಸಂಭವಿಸಿ 70ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ ಘಟನೆಯ ಬೆನ್ನಿನಲ್ಲಿಯೇ, ಹಾಸನದ ಶಿರಾಡಿ ಘಾಟಿಯಲ್ಲಿಯೂ ರಸ್ತೆಯ ಮೇಲೆ ಭಾರೀ ಭೂಕುಸಿತ (Shiradi Landslide) ಸಂಭವಿಸಿದೆ. ಮಣ್ಣಿನಡಿ ಹಲವು ವಾಹನಗಳು ಸಿಲುಕಿಕೊಂಡಿದ್ದು, ಇನ್ನಷ್ಟು ಕುಸಿತದ ಆತಂಕ ಎದುರಾಗಿದೆ. ಘಾಟಿಯಲ್ಲಿ ವಾಹನ ಸಂಚಾರ ಪೂರ್ತಿ ರದ್ದುಗೊಳಿಸಲಾಗಿದೆ.

ಬೆಂಗಳೂರು- ಮಂಗಳೂರು ಅನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟಿಯ ಸಕಲೇಶಪುರ ತಾಲೂಕಿನ ದೊಡ್ಡತಪ್ಲೆ ಬಳಿ ಮತ್ತೆ ಬೃಹತ್‌ ಭೂಕುಸಿತವಾಗಿದೆ. ಕನಿಷ್ಠ ಎರಡು ಕಾರುಗಳು, ಒಂದು ಟ್ಯಾಂಕರ್ ಸೇರಿ ಆರು ವಾಹನಗಳು ಇದರಡಿ ಸಿಲುಕಿಕೊಂಡಿವೆ. ತಕ್ಷಣ ಸ್ಥಳದಲ್ಲಿದ್ದವರು ವಾಹನಗಳಲ್ಲಿ ಇದ್ದವರನ್ನು ಹೊರಗೆ ಎಳೆತಂದಿದ್ದಾರೆ. ಮಣ್ಣಿನಡಿ ಇನ್ನೂ ವ್ಯಕ್ತಿಗಳು ಸಿಲುಕಿಕೊಂಡಿದ್ದಾರೆಯೇ ಎಂಬುದು ಗೊತ್ತಾಗಿಲ್ಲ.

ಸತತ ಮಳೆಯಿಂದ ಸಕಲೇಶಪುರ ತಾಲ್ಲೂಕಿನ ದೊಡ್ಡತಪ್ಲೆ ಬಳಿ ಕಳೆದ ವಾರವೂ ಭೂಕುಸಿತವಾಗಿತ್ತು. ಕಳೆದ ಹದಿನೈದು ದಿನಗಳಿಂದ ಇಲ್ಲಿ ಮಣ್ಣಿನ ರಾಶಿ ಕುಸಿಯುತ್ತಿದೆ. ಇಂದು ಮತ್ತೆ ಭಾರಿ ಪ್ರಮಾಣದಲ್ಲಿ ಮಣ್ಣು ರಸ್ತೆಗೆ ಕುಸಿದಿದೆ. ಹಲವು ಪ್ರಯಾಣಿಕರು ಕಾರಿನಲ್ಲೇ ಸಿಲುಕಿದ್ದಾರೆ. ಕಾರ್ಯಾಚರಣಾ ಸಿಬ್ಬಂದಿ ಜೆಸಿಬಿ ಮೂಲಕ‌ ಮಣ್ಣು ತೆರವು ಮಾಡುತ್ತಿದ್ದು, ಸ್ಥಳದಲ್ಲಿ ಆತಂಕ ಹೆಚ್ಚಿದೆ. ಮತ್ತಷ್ಟು ಮಣ್ಣು ಕುಸಿದರೆ ದೊಡ್ಡ ಅನಾಹುತವೇ ನಡೆಯುವ ಭೀತಿಯಿದೆ. ಸಾಗರೋಪಾದಿಯಲ್ಲಿ ಮಣ್ಣು ತೆರವು ಮಾಡಲು ಪ್ರಯತ್ನ ನಡೆಯುತ್ತಿದೆ.

ಕಳೆದ ತಿಂಗಳು ಉತ್ತರ ಕನ್ನಡದ ಅಂಕೋಲಾ ಶಿರೂರಿನಲ್ಲಿ ಗುಡ್ಡ ಕುಸಿದು ಹಲವಾರು ವಾಲಹನಗಳು ಹಾಗೂ ಜನರು ಜಲಸಮಾಧಿಯಾಗಿದ್ದರು. 11 ಜನ ಸತ್ತಿದ್ದು, ಇವರಲ್ಲಿ 8 ಜನರ ದೇಹಗಳು ದೊರೆತಿವೆ. ಇನ್ನೂ ಮೂವರು ದೇಹಗಳು ದೊರೆತಿಲ್ಲ. ಶೋಧ ಕಾರ್ಯಾಚರಣೆ ನಡೆಯುತ್ತಿದೆ.

ದೇವರನಾಡು ಕೇರಳ (Kerala) ದಲ್ಲಿ ಭಾರೀ ಮಳೆಗೆ ಭೂಕುಸಿತಕ್ಕೆ (Kerala Landslide) ಸಿಲುಕಿ ಸಾವನ್ನಪ್ಪಿದವರ ಸಂಖ್ಯೆ 70ಕ್ಕೆ ಏರಿಕೆ ಆಗಿದ್ದು, ನೂರಾರು ಮಂದಿ ಅವಶೇಷದಡಿಯಲ್ಲಿ ಸಿಲುಕಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಗುಡ್ಡಗಾಡು ಪ್ರದೇಶವಾಗಿರುವ ಮೆಪ್ಪಡಿ ಪ್ರದೇಶದಲ್ಲಿ ಭೀಕರ ಭೂಕುಸಿತ ಸಂಭವಿಸಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆ ಆಗುವ ಭೀತಿ ಎದುರಾಗಿದೆ. ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಕೆಎಸ್‌ಡಿಎಂಎ) ಫೈರ್‌ಫೋರ್ಸ್ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡಗಳನ್ನು ಪೀಡಿತ ಪ್ರದೇಶಕ್ಕೆ ಸಜ್ಜುಗೊಳಿಸಿದ್ದು, ನೂರಾರು ಮಂದಿ ಸಿಲುಕಿರುವ ಶಂಕೆ ಇದೆ. ಕಣ್ಣೂರು ರಕ್ಷಣಾ ಭದ್ರತಾ ದಳದ ಎರಡು ತಂಡಗಳೊಂದಿಗೆ ಹೆಚ್ಚುವರಿ ಎನ್‌ಡಿಆರ್‌ಎಫ್ ತಂಡ ಕೂಡ ಸಹಾಯಕ್ಕೆ ತೆರಳುತ್ತಿದೆ.

ಕರ್ನಾಟಕದ ಕೊಡಗು ಭಾಗ, ಹಾಸನ, ಚಿಕ್ಕಮಗಳೂರು ಭಾಘದ ಹಲವು ಕಡೆಗಳಲ್ಲಿ ಭೂಕುಸಿತದ ವರದಿಯಾಗುತ್ತಿದೆ. 2018ರಲ್ಲಿ ಕೊಡಗಿನಲ್ಲಿ ಭಾರೀ ಭೂಕುಸಿತ ಸಂಭವಿಸಿ ನೂರಾರು ಜನರು ಸತ್ತಿದ್ದರು. ಕೋಟ್ಯಂತರ ಆಸ್ತಿಪಾಸ್ತಿ ನಷ್ಟವಾಗಿತ್ತು. ಸಾವಿರಾರು ಜನ ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದರು. ಅದೇ ವರ್ಷ ಕೇರಳದಲ್ಲಿಯೂ ಜಲಪ್ರಳಯ ನಡೆದಿತ್ತು.

ಇದನ್ನೂ ಓದಿ: Wayanad Landslide: ಎಲ್ಲೆಂದರಲ್ಲಿ ಮಣ್ಣಿನ ರಾಶಿ: ಕೊಚ್ಚಿ ಹೋದ ಸೇತುವೆ, ರಸ್ತೆ: ವಯನಾಡಿನಲ್ಲಿ ಮೃತರ ಸಂಖ್ಯೆ 70ಕ್ಕೆ ಏರಿಕೆ

Continue Reading

ಮಳೆ

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Karnataka Rain : ಕೆಲವೆಡೆ ಬಿಡುವು ನೀಡಿದ್ದ ಮಳೆಯು ಮತ್ತೆ ಅಬ್ಬರಿಸುತ್ತಿದೆ. ಚಿಕ್ಕಮಗಳೂರಿನಲ್ಲಿ ಮಳೆಗೆ ಅವಾಂತರವೇ ಸೃಷ್ಟಿಯಾಗಿದೆ. ಚಿಕ್ಕೋಡಿಯಲ್ಲಿ ಹೆಸ್ಕಾಂ ಸಿಬ್ಬಂದಿ ನೀರಿಗೆ ಜಿಗಿದು ವಿದ್ಯುತ್‌ ಸರಿಪಡಿಸಿದ್ದಾರೆ. ಹಾಸನದಲ್ಲಿ ಶಾಲೆ ಜಲಾವೃತಗೊಂಡಿದೆ.

VISTARANEWS.COM


on

By

Karnataka Rain
Koo

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲೂ ಮಳೆಯ ( Karnataka Rain) ಆರ್ಭಟಕ್ಕೆ ಜನರು ಕಂಗಾಲಾಗಿದ್ದಾರೆ. ಚಿಕ್ಕಮಗಳೂರಿನ ಬಾಳೆಹೊನ್ನೂರಿನಲ್ಲಿ ದೋಬಿ ಹಳ್ಳ ಪ್ರವಾಹಕ್ಕೆ ತಗ್ಗು ಪ್ರದೇಶದ ಮನೆಗಳು ಮುಳುಗಡೆಯಾಗಿವೆ. ಮನೆಯಿಂದ ಹೊರಬರಲು ಆಗದೆ ಸಣ್ಣ ಬೋಟ್ ಬಳಸಿ ನೆರೆಯಲ್ಲಿ ಸಿಲುಕಿದ್ದ ಜನರನ್ನು ರಕ್ಷಣೆ ಮಾಡಲಾಗಿದೆ. ಶಾಲೆ, ಮದರಸ, ಸಂತೆ ಮಾರುಕಟ್ಟೆ, ಮನೆಗಳು ಜಲಾವೃತಗೊಂಡಿದೆ. ಸದ್ಯ ಒಂದು ಕಡೆಯಿಂದ ಮತ್ತೊಂದು ಕಡೆ ಹೋಗಲು ಬೋಟ್ ಬಳಕೆ ಮಾಡುವಂತಾಗಿದೆ.

ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಹೇರೂರು ಸಮೀಪದ ದೇವಗೋಡು ಗ್ರಾಮದಲ್ಲಿ ಸುಮಾರು ಎರಡು ಎಕರೆ ವಿಸ್ತೀರ್ಣದ ಕೆರೆಯು ಕೋಡಿ ಹೊಡೆದಿದೆ. ಪರಿಣಾಮ ಭತ್ತ ನಾಟಿ ಮಾಡಿದ್ದ ಜಮೀನು ಜಲಾವೃತಗೊಂಡಿದೆ. ಚಿಕ್ಕಮಗಳೂರಿನ ಕಳಸ ತಾಲೂಕಿನ ಚನ್ನಹಡ್ಲು ಗ್ರಾಮದಲ್ಲಿ ಭೂ ಕುಸಿದಿದೆ. ಮಲ್ಲೇಶ್ವರ ಗುಡ್ಡದಲ್ಲಿ ಭಾರಿ ಪ್ರಮಾಣದ ಧರೆ ಕುಸಿದು, ರಸ್ತೆಯ ಅರ್ಧ ಭಾಗಕ್ಕೆ ಗುಡ್ಡದ ಮಣ್ಣು ಬಂದಿದೆ. 2019ರಲ್ಲಿ ಕುಸಿತ ಕಂಡಿದ್ದ ಸ್ಥಳದ ಸಮೀಪವೇ ಧರೆ ಕುಸಿದಿದೆ. ಬಾಳೆಹೊಳೆ, ಚನ್ನಹಡ್ಲು, ಬಾಳೆಹೊನ್ನೂರು ರಸ್ತೆಯಲ್ಲಿ ಘಟನೆ ನಡೆದಿದೆ.

ತುಂಗಾ ನದಿಯ ಅಬ್ಬರ ಶೃಂಗೇರಿ ಪಟ್ಟಣದ ಗಾಂಧಿ ಮೈದಾನ ಜಲಾವೃತವಾಗಿದ್ದು, ಅಂಗಡಿ ಮಳಿಗಗಳು, ಭಾರತಿ ತೀರ್ಥ ರಸ್ತೆಯೂ ಮುಳುಗಡೆಯಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ನದಿಯತ್ತ ಜನರ ಓಡಾಟಕ್ಕೆ ನಿಷೇಧ ಹೇರಲಾಗಿದೆ. ತಾತ್ಕಾಲಿಕವಾಗಿ ಸುಮಾರು 20ಕ್ಕೂ ಹೆಚ್ಚು ಅಂಗಡಿ ಮಳಿಗೆಗಳು ಕ್ಲೋಸ್ ಆಗಿವೆ. ಇನ್ನೂ ಎನ್.ಆರ್.ಪುರ ತಾಲೂಕಿನ ಮಹಲ್ಗೋಡು ಸೇತುವೆ ಮುಳುಗಡೆಯಾಗಿದ್ದು, ಬಾಳೆಹೊನ್ನೂರು-ಕಳಸ ಮಾರ್ಗ ಸಂಪೂರ್ಣ ಬಂದ್ ಆಗಿದೆ.

ಚಿಕ್ಕಮಗಳೂರಿನಲ್ಲಿ ಭಾರಿ ಮಳೆಗೆ ಅವಾಂತರವೇ ಸೃಷ್ಟಿಯಾಗಿದೆ. ರಾ.ಹೆ.173ರ ಚಾರ್ಮಾಡಿ ಘಾಟಿಯಲ್ಲಿ ಬೃಹತ್ ಮರವೊಂದು ರಸ್ತೆಗುರುಳಿದೆ. ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸಂಪೂರ್ಣ ಬಂದ್ ಆಗಿದೆ. ಚಿಕ್ಕಮಗಳೂರು-ಮಂಗಳೂರು ಮಾರ್ಗ ಸಂಪೂರ್ಣ ಬಂದ್ ಆಗಿದ್ದರಿಂದ ಕೊಟ್ಟಿಗೆಹಾರದಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ.

ಕಳೆದ ಮೂರು ದಿನದಿಂದ ಸಂಪೂರ್ಣ ಬಿಡುವು ನೀಡಿದ್ದ ವರುಣ ಸೋಮವಾರ ರಾತ್ರಿಯಿಡೀ ಭಾರೀ ಮಳೆಗೆ ತತ್ತರಿಸಿ ಹೋಗಿದ್ದಾರೆ. ಭಾರೀ ಮಳೆಗೆ ರಾಷ್ಟ್ರೀಯ ಹೆದ್ದಾರಿ 169 ಬಂದ್ ಆಗಿದೆ. ಶೃಂಗೇರಿಯ ನೆಮ್ಮಾರು ಬಳಿ ರಸ್ತೆ ಮೇಲೆ ಹರಿಯುತ್ತಿರೋ ನೀರಿನಿಂದಾಗಿ ರಾಷ್ಟ್ರೀಯ ಹೆದ್ದಾರಿ ಸೇತುವೆ ಜಲಾವೃತವಾಗಿದೆ. ಟಿಪ್ಪರ್ ಲಾರಿ ಚಾಲಕ ಸೇತುವೆ ಮೇಲೆ ಸಂಚರಿಸಲು ಹೋಗಿ ಭಯಗೊಂಡು ವಾಪಾಸ್‌ ಆಗಿದ್ದಾರೆ. ಶೃಂಗೇರಿ-ಕಾರ್ಕಳ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್ ಆಗಿದೆ.

karnataka Rain
karnataka Rain

ಇದನ್ನೂ ಓದಿ: Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

ನೀರಿಗೆ ಜಿಗಿದು ವಿದ್ಯುತ್‌ ಸರಿಪಡಿಸಿದ ಹೆಸ್ಕಾಂ ಸಿಬ್ಬಂದಿ

ಮಹಾರಾಷ್ಟ್ರದಲ್ಲಿ ಮಳೆ ಅಬ್ಬರಕ್ಕೆ ಚಿಕ್ಕೋಡಿ ಉಪವಿಭಾಗದ ನದಿಗಳು ಸಮುದ್ರದಂತಾಗಿದೆ. ಪ್ರವಾಹ ಸಮಯದಲ್ಲಿ ಹೆಸ್ಕಾಂ ಸಿಬ್ಬಂದಿ ಕರ್ತವ್ಯ ನಿಷ್ಠೆ ಮೆರೆದಿದ್ದಾರೆ. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಜೂಗುಳ ಗ್ರಾಮದಲ್ಲಿ ನೀರಿನಲ್ಲಿ ಧುಮುಕಿ ವಿದ್ಯುತ್ ಸರಿಪಡಿಸಿದ್ದಾರೆ. ಆನಂದ ಹೆರವಾಡಿ ಹೆಸ್ಕಾಂ ಸಿಬ್ಬಂದಿ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಲ್ಯಾಳ ಬಳಿ ಇರುವ ಸೇತುವೆ ಜಲಾವೃತಗೊಂಡಿದೆ. ಅಥಣಿ ಗೋಕಾಕ್ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಇದಾಗಿದೆ. ಕೃಷ್ಣಾ ನದಿ ದಂಡೆಯ 20 ಗ್ರಾಮಗಳಿಗೆ ನದಿ ನೀರು ಕಂಟಕ ಎದುರಾಗಿದೆ.

ಹಾಸನದಲ್ಲಿ ಶಾಲೆ ಜಲಾವೃತ

ಹಾಸನದಲ್ಲಿ ಮಳೆಯ ಅವಾಂತರ ಮುಂದುವರಿದಿದೆ. ಅರಕಲಗೂಡು ತಾಲೂಕಿನ ಯಗಟಿ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯು ಸಂಪೂರ್ಣ ಜಲಾವೃತಗೊಂಡಿತ್ತು. ಭಾರಿ ಮಳೆಗೆ ಸೇತುವೆ ಮೇಲೆ ಭಾರಿ ಪ್ರಮಾಣದ ನೀರು ಹರಿಯುತ್ತಿದ್ದು, ಹಲವು ಗ್ರಾಮಗಳಿಗೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ಸಕಲೇಶಪುರ ತಾಲೂಕಿನ ಮಠಸಾಗರ ಗ್ರಾಮದಲ್ಲಿ ಘಟನೆ ನಡೆದಿದೆ. ಮಠಸಾಗದ ಗ್ರಾಮದ ಸೇತುವೆ ಸಂಪೂರ್ಣ ಜಲಾವೃತ ಗೊಂಡಿರುವುದರಿಂದ ಜನರು ಹೊರಬರಲಾಗದ ಸ್ಥಿತಿ ನಿರ್ಮಾಣವಾಗಿದೆ. ಮಠಸಾಗರ-ಕೃಷ್ಣಾಪುರ-ಸಕಲೇಶಪುರ ರಸ್ತೆ ಮುಳುಗಡೆಯಿಂದಾಗಿ ರಸ್ತೆ ಸಂಪರ್ಕವಿಲ್ಲದೆ ವಿದ್ಯಾರ್ಥಿಗಳು, ಗ್ರಾಮಸ್ಥರ ಪರದಾಡಿದರು.

ಬೇಲೂರು ತಾಲೂಕಿನ ಸುಳ್ಳಕ್ಕಿ ಗ್ರಾಮದಲ್ಲಿ ಭಾರಿ ಮಳೆಗೆ ರಸ್ತೆಯು ಕೊಚ್ಚಿ ಹೋಗಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿದೆ. ಸುಳ್ಳಕ್ಕಿ-ಮೈಲಹಳ್ಳಿ-ಆಲೂರು-ಬೇಲೂರು-ಕೋನೇರ್ಲು ಸೇರಿದಂತೆ ಹತ್ತಕ್ಕೂ ಹೆಚ್ಚು ಗ್ರಾಮಗಳಿಗೆ ರಸ್ತೆ ಸಂಪರ್ಕ ಕಟ್ ಆಗಿದೆ. ನೂರಾರು ಎಕರೆ ಭತ್ತದ ಗದ್ದೆಗಳು ಜಲಾವೃತಗೊಂಡಿದೆ.

ಕೊಡಗಿನ ವಿರಾಜಪೇಟೆ ತಾಲ್ಲೂಕಿನ ಬೆಟ್ಟಿಗೇರಿ ಪಂಚಾಯಿತಿ ವ್ಯಾಪ್ತಿಯಲ್ಲಿ ಬರೆ ಜರಿದು ಕಾಂಕ್ರೀಟ್ ರಸ್ತೆ ಕುಸಿದು ಬೀಳುವ ಹಂತದಲ್ಲಿದೆ. ಶ್ರೀರಾಮ ಮತ್ತು ಶ್ರೀದೇವಿ ದೇವಸ್ಥಾನದ ರಸ್ತೆಯ ಸಮೀಪ ಬರೆ ಕುಸಿದು ಮಣ್ಣೆಲ್ಲ ಕೆಳಭಾಗದ ಗದ್ದೆಗೆ ಬಂದು ನಿಂತಿದೆ. ನಾಟಿಗೆ ತಯಾರಾಗಿದ್ದ ಭತ್ತದ ಗದ್ದೆಗೆ ಮಣ್ಣು, ನೀರು ನುಗ್ಗಿ ಅಪಾರ ಹಾನಿಯಾಗಿದೆ. 30 ಮನೆಗಳಿರುವ ಗ್ರಾಮಕ್ಕೆ ತೆರಳುವ ರಸ್ತೆ ಇದೀಗ ಅಪಾಯದಲ್ಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Namaz row
ದೇಶ45 seconds ago

Namaz Row: “ನಮಾಜ್‌ ಮಾಡೋಕೆ ಕಾಲೇಜಿನಲ್ಲಿ ಪ್ರತ್ಯೇಕ ಕೊಠಡಿ ಬೇಕು”-ವಿದ್ಯಾರ್ಥಿಗಳ ಗಲಾಟೆ; ಭುಗಿಲೆದ್ದಿದೆ ಮತ್ತೊಂದು ವಿವಾದ

Viral Video
Latest9 mins ago

Viral Video: ಕುದಿಯುತ್ತಿರುವ ಹಾಲಿನ ಮಡಿಕೆಯೊಳಗೆ ಮಗುವನ್ನು ಮುಳುಗಿಸಿದ ಅರ್ಚಕ! ಗಾಬರಿಗೊಳಿಸುವ ವಿಡಿಯೊ

Jaya Bachchan
ದೇಶ17 mins ago

Parliament Session: ಪತಿ ಅಮಿತಾಬ್‌ ಹೆಸರು ಜಯಾ ಬಚ್ಚನ್‌ಗೆ ಅಲರ್ಜಿ! ಸಂಸತ್‌ನಲ್ಲಿ ಆ ಹೆಸರು ಹೇಳಬೇಡಿ ಎಂದ ನಟಿ!

3 private hospitals in Yallapur have been locked for not following the necessary rules under the KPME Act
ಉತ್ತರ ಕನ್ನಡ25 mins ago

Uttara Kannada News: ನಿಯಮ ಪಾಲಿಸದ ಯಲ್ಲಾಪುರದ 3 ಖಾಸಗಿ ಆಸ್ಪತ್ರೆಗಳಿಗೆ ಬೀಗ

Viral Video
Latest28 mins ago

Viral Video: ಸಾಕ್ಸ್‌ನೊಳಗೆ ವಿದೇಶಿ ಕರೆನ್ಸಿ ಕಳ್ಳಸಾಗಣೆ; ಸಿಕ್ಕಿಬಿದ್ದ ಪಾಕ್‌ ಗಗನಸಖಿ!

MUDA scam
ಕರ್ನಾಟಕ49 mins ago

MUDA scam: ಸಮಾಜವಾದಿ ಮುಖವಾಡ, ಅಹಿಂದ ಅಲಂಕಾರ, ಸತ್ಯವಂತನ ಸಿಂಗಾರ ಕಳಚಿಬಿದ್ದಿದೆ: ಸಿಎಂ ವಿರುದ್ಧ ಎಚ್‌ಡಿಕೆ ಕಿಡಿ

Shiradi Landslide
ಬೆಂಗಳೂರು1 hour ago

Shiradi Landslide: ಕೇರಳದ ಬೆನ್ನಿಗೇ ಶಿರಾಡಿ ಘಾಟಿಯಲ್ಲಿ ಭಾರೀ ಭೂಕುಸಿತ, ಮಣ್ಣಿನಡಿ ಸಿಲುಕಿದ ಕಾರುಗಳು, ಟ್ಯಾಂಕರ್‌

Manu Bhaker
ಕ್ರೀಡೆ1 hour ago

Manu Bhaker: ಒಂದೇ ಆವೃತ್ತಿಯಲ್ಲಿ 2 ಪದಕ ಗೆದ್ದು ಐತಿಹಾಸಿಕ ಸಾಧನೆ ಮಾಡಿದ ಮನು ಭಾಕರ್

WhatsApp Shut down
ದೇಶ1 hour ago

Whatsapp Shutdown: ಭಾರತದಲ್ಲಿ ಇನ್ಮುಂದೆ ಬಂದ್‌ ಆಗುತ್ತಾ ವಾಟ್ಸ್‌ಆ್ಯಪ್‌? ಕೇಂದ್ರ ಸರ್ಕಾರ ಹೇಳೋದೇನು?

Karnataka Rain
ಮಳೆ1 hour ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 hour ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ2 hours ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ21 hours ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ22 hours ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ1 day ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ2 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ2 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ2 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ2 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

Karnataka weather Forecast
ಮಳೆ3 days ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ಟ್ರೆಂಡಿಂಗ್‌