ಬೆಂಗಳೂರು: ಕೇರಳದ (Kerala Landslide) ವೈನಾಡಿನಲ್ಲಿ ಸಂಭವಿಸಿದ ಭಾರಿ ಭೂಕುಸಿತ (Wayanad Landslide) ಹಾಗೂ ಜೀವಹಾನಿಯ ಕುರಿತು ಟ್ವೀಟ್ ಮಾಡಿರುವ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ (HD Kumaraswamy) ಅವರು, ದುರಂತ ಸಾವುಗಳಿಗಾಗಿ ಶೋಕ ವ್ಯಕ್ತಪಡಿಸಿದ್ದಾರೆ.
ಕೇರಳದ ವಯನಾಡು ಬಳಿ ಉಂಟಾಗಿರುವ ಭೀಕರ ಭೂಕುಸಿತದಿಂದ (Wayanad Landslide) ಅನೇಕರು ದಾರುಣ ಸಾವನ್ನಪ್ಪಿರುವ ಘಟನೆ ನನಗೆ ತೀವ್ರ ಆಘಾತ ಉಂಟು ಮಾಡಿದೆ. ಇನ್ನು ಅನೇಕರು ಮಣ್ಣಿನಡಿಯಲ್ಲಿ ಸಿಲುಕಿದ್ದು, ಅವರನ್ನು ರಕ್ಷಿಸುವ ಕಾರ್ಯ ಸಮರೋಪಾದಿಯಲ್ಲಿ ಸಾಗಿದೆ. ಗೌರವಾನ್ವಿತ ಪ್ರಧಾನಿ ಮೋದಿ ಅವರು ತುರ್ತಾಗಿ ಸ್ಪಂದಿಸಿದ್ದು, ಕೇರಳದ ಸಿಎಂ ಜತೆ ಮಾತನಾಡಿ ರಕ್ಷಣಾ ಕಾರ್ಯಗಳಿಗೆ ಸಕಲ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ಹೀಗಾಗಿ ಮಾನ್ಯ ಪ್ರಧಾನಿಗಳನ್ನು ನಾನು ಅಭಿನಂದಿಸುತ್ತೇನೆ. ಈ ದುರಂತದಲ್ಲಿ ಸಾವನ್ನಪ್ಪಿದವರಿಗೆ ಚಿರಶಾಂತಿ ಸಿಗಲಿ. ದುಃಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಎಲ್ಲಾ ಕುಟುಂಬಗಳಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಎಚ್‌ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.
I am deeply shocked by the devastating landslide near Wayanad in Kerala, which has claimed many lives. Many others are still trapped under the mud, and rescue operations are ongoing.
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 30, 2024
The Hon'ble Prime Minister, Shri @narendramodi, responded promptly by speaking with the Chief…
ಕೇರಳ ಸೇರಿ ದೇಶದೆಲ್ಲೆಡೆ ಭಾರೀ ಮಳೆ ಆಗುತ್ತಿದ್ದು ಭೂಕುಸಿತ, ನೆರೆ ಉಂಟಾಗಿದೆ. ಕರ್ನಾಟಕದಲ್ಲಿಯೂ ಅನೇಕ ಜಿಲ್ಲೆಗಳಲ್ಲಿ ಇದೇ ಸಮಸ್ಯೆ ಸೃಷ್ಟಿಯಾಗಿದೆ. ಈ ಬಗ್ಗೆ ಸಾರ್ವಜನಿಕರು ಬಹಳ ಎಚ್ಚರಿಕೆ ವಹಿಸಬೇಕು. ರಾಜ್ಯ ಸರಕಾರವೂ 24X7 ರಕ್ಷಣಾ ಸಿಬ್ಬಂದಿಯನ್ನು ಸನ್ನದ್ಧ ಸ್ಥಿತಿಯಲ್ಲಿಟ್ಟು, ಅಪಾಯವಿರುವ ಸ್ಥಳಗಳಲ್ಲಿ ಅಧಿಕಾರಿಗಳನ್ನು ನಿಯೋಜಿಸಬೇಕು ಎಂದು ಕೇಂದ್ರ ಸಚಿವರು ಟ್ವೀಟ್ ಮಾಡಿದ್ದಾರೆ.
ವಯನಾಡ್ ಭೂಕುಸಿತದಲ್ಲಿ 40 ದಾಟಿದ ಸಾವಿನ ಸಂಖ್ಯೆ
ವಯನಾಡ್: ದೇವರನಾಡು ಕೇರಳ (Kerala) ದಲ್ಲಿ ಭಾರೀ ಮಳೆಗೆ ಭೂಕುಸಿತಕ್ಕೆ (Kerala Landslide) ಸಿಲುಕಿ ಸಾವನ್ನಪ್ಪಿದವರ ಸಂಖ್ಯೆ 20ಕ್ಕೆ ಏರಿಕೆ ಆಗಿದ್ದು, ನೂರಾರು ಮಂದಿ ಅವಶೇಷದಡಿಯಲ್ಲಿ ಸಿಲುಕಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಗುಡ್ಡಗಾಡು ಪ್ರದೇಶವಾಗಿರುವ ಮೆಪ್ಪಡಿ ಪ್ರದೇಶದಲ್ಲಿ ಭೀಕರ ಭೂಕುಸಿತ ಸಂಭವಿಸಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆ ಆಗುವ ಭೀತಿ ಎದುರಾಗಿದೆ.
ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಕೆಎಸ್‌ಡಿಎಂಎ) ಫೈರ್‌ಫೋರ್ಸ್ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡಗಳನ್ನು ಪೀಡಿತ ಪ್ರದೇಶಕ್ಕೆ ಸಜ್ಜುಗೊಳಿಸಿದ್ದು, ನೂರಾರು ಮಂದಿ ಸಿಲುಕಿರುವ ಶಂಕೆ ಇದೆ. ಕಣ್ಣೂರು ರಕ್ಷಣಾ ಭದ್ರತಾ ದಳದ ಎರಡು ತಂಡಗಳೊಂದಿಗೆ ಹೆಚ್ಚುವರಿ ಎನ್‌ಡಿಆರ್‌ಎಫ್ ತಂಡ ಕೂಡ ಸಹಾಯಕ್ಕೆ ತೆರಳುತ್ತಿದೆ.
ಇನ್ನು ಎಡೆಬಿಡದೇ ಸುರಿಯುತ್ತಿರುವ ಭಾರೀ ಮಳೆ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಮಲಪ್ಪುರಂ ಜಿಲ್ಲೆಯ ನೀಲಂಬುರ್ ಪ್ರದೇಶದಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು, ಚಾಲಿಯಾರ್ ನದಿಯಲ್ಲಿ ಅನೇಕರು ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ಮುಂದಕ್ಕೈ ಪ್ರದೇಶದಲ್ಲಿ ಅನೇಕ ಮನೆಗಳು. ಅಂಗಡಿಗಳು ಮತ್ತು ವಾಹನಗಳು ಜಲಾವೃತಗೊಂಡಿವೆ.
ಪ್ರಧಾನಿ ಮೋದಿ ಕಳವಳ
ಪ್ರಧಾನಮಂತ್ರಿ ನರೇಂದ್ರ ಮೋದಿ ಭೂಕುಸಿತದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ, ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿರುವ ಎಲ್ಲರೊಂದಿಗೆ ಭಗವಂತ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಹೇಳಿದ್ದಾರೆ. ಪರಿಸ್ಥಿತಿಗೆ ಸ್ಪಂದಿಸಿ ಕೇಂದ್ರ ಸರ್ಕಾರ ಎಲ್ಲ ರೀತಿಯ ನೆರವು ನೀಡಲಿದೆ ಎಂದು ಭರವಸೆ ನೀಡಿದರು. ಏತನ್ಮಧ್ಯೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ದುಃಖಿತ ಕುಟುಂಬಗಳಿಗೆ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ ಮತ್ತು “ಇನ್ನೂ ಅವಶೇಷಡಿಯಲ್ಲಿ ಸಿಲುಕಿರುವವರನ್ನು ಶೀಘ್ರದಲ್ಲೇ ಸುರಕ್ಷಿತವಾಗಿ ಕರೆತರಲಾಗುವುದು ಎಂದು ನಾನು ಭಾವಿಸುತ್ತೇನೆ. ಪರಿಹಾರ ಕಾರ್ಯಗಳಿಗೆ ಅಗತ್ಯವಿರುವ ಯಾವುದೇ ಸಹಾಯವನ್ನು ನಾವು ನೀಡುತ್ತೇವೆ ಎಂದಿದ್ದಾರೆ.
ಇದನ್ನೂ ಓದಿ: Kerala Landslide: ಕೇರಳದಲ್ಲಿ ಭೀಕರ ಭೂ ಕುಸಿತ; ಸಾವಿನ ಸಂಖ್ಯೆ 20ಕ್ಕೆ ಏರಿಕೆ, ಮತ್ತಷ್ಟು ಮಂದಿ ಸಿಲುಕಿರುವ ಭೀತಿ