Site icon Vistara News

ಆರೋಗ್ಯ ವಿಚಾರಣೆ: ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿ ಮಾಡಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌

devegowda

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಗುರುವಾರ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ದೇವೇಗೌಡರ ಪದ್ಮನಾಭ ನಗರ ನಿವಾಸಕ್ಕೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್ ಅವರು ತುಂಬ ಹೊತ್ತು ಉಭಯಕುಶಲೋಪರಿ ನಡೆಸಿದರು. ದೇವೇಗೌಡರು ಅವರನ್ನು ಸ್ವಾಗತಿಸಿ ಹಲವಾರು ವಿಚಾರಗಳ ಬಗ್ಗೆ ಉತ್ಸಾಹದಿಂದ ಚರ್ಚಿಸಿದರು. ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ದೇವೇಗೌಡರಿಗೆ ಕೆಲವು ವಾರಗಳ ಹಿಂದೆ ಸ್ವಲ್ಪ ಅನಾರೋಗ್ಯ ಉಂಟಾಗಿತ್ತು. ಆಗ ಪ್ರಧಾನಿ ಮೋದಿ ಅವರು ಟ್ವೀಟ್‌ ಮಾಡಿ ಆರೋಗ್ಯ ಸುಧಾರಣೆಗೆ ಶುಭ ಹಾರೈಸಿದ್ದರು. ಅದಾದ ಬಳಿಕ ಹಲವು ನಾಯಕರು ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸುತ್ತಿದ್ದಾರೆ.

ಮೊದಲು ಕಂದಾಯ ಸಚಿವ ಆರ್‌. ಅಶೋಕ್‌, ಬಳಿಕ ಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್‌ ನಾಯಕರು, ಸಿಎಂ ಬಸವರಾಜ ಬೊಮ್ಮಾಯಿ ಅವರು ದೇವೇಗೌಡರನ್ನು ಭೇಟಿಯಾಗಿದ್ದಾರೆ.
ಮನೆಗೆ ಭೇಟಿ ನೀಡಿದ ಪ್ರತಿಯೊಬ್ಬರ ನಾಯಕರನ್ನೂ ಸ್ವತಃ ದೇವೇಗೌಡರೇ ಅತ್ಯಂತ ಆತ್ಮೀಯವಾಗಿ ಸ್ವಾಗತಿಸಿ ಮಾತನಾಡಿಸುತ್ತಿದ್ದಾರೆ.

ಇದನ್ನೂ ಓದಿ | ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರ ಆರೋಗ್ಯ ವಿಚಾರಿಸಿದ ಸಿಎಂ ಬೊಮ್ಮಾಯಿ

Exit mobile version