ಬೆಂಗಳೂರು: ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗೆ ನಡೆಯುವ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಕೆಸಿಇಟಿ) ಈ ಬಾರಿ ಮೇ ೨೦ ಮತ್ತು ೨೧ರಂದು ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ.
ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್ ೯ರಿಂದ ಆರಂಭವಾಗಲಿದ್ದು, ಅದು ಮುಗಿದ ಬಳಿಕ ಸುಮಾರು ಎರಡು ತಿಂಗಳಲ್ಲಿ ಸಿಇಟಿ ನಡೆಯಲಿದ್ದು, ಅಲ್ಲಿಯವರೆಗೆ ಓದಲು ಅವಕಾಶ ಸಿಗಲಿದೆ.
ಹೊರನಾಡು ಮತ್ತು ಗಡಿನಾಡು ವಿದ್ಯಾರ್ಥಿಗಳಿಗೆ ನಡೆಸುವ ಕಡ್ಡಾಯ ಕನ್ನಡ ಪರೀಕ್ಷೆ ಮೇ 22ರಂದು ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ : KCET Application Form | ಸಿಇಟಿ ಅರ್ಜಿ ತುಂಬಲು ತರಬೇತಿ; ಪದವಿಪೂರ್ವ ಕಾಲೇಜುಗಳಲ್ಲಿ ಸಹಾಯ ಕೇಂದ್ರ ಸ್ಥಾಪನೆ