ಬೆಂಗಳೂರು: ಜೂನ್ ಮಧ್ಯಭಾಗದಲ್ಲಿ ನಡೆಸಲಾಗಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) (CET Result) ಫಲಿತಾಂಶವನ್ನು ಇದೇ ಜುಲೈ 30ರಂದು ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿವಿಧ ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಪಡೆದುಕೊಳ್ಳಲು ಅನುಕೂಲವಾಗುವ ಸಿಇಟಿ ಪರೀಕ್ಷೆಯನ್ನು ಈ ಬಾರಿ ಬಿಗಿ ಭದ್ರತೆ ನಡುವೆ, ಕಟ್ಟುನಿಟ್ಟಾಗಿ ನಡೆಸಲಾಗಿತ್ತು ಎಂದು ತಿಳಿಸಿದರು.
ಸಿಇಟಿ ಪರೀಕ್ಷೆ ನಡೆಸುವಾಗ ಸಿಬಿಎಸ್‌ಸಿ ಮತ್ತು ಐಸಿಎಸ್ಇ ಪಠ್ಯಕ್ರಮದಲ್ಲಿ 12ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿಗಳಿಗೂ ಅವಕಾಶ ಕೊಡಲಾಗಿತ್ತು. ಈಗ ಅವರ ಫಲಿತಾಂಶವೂ ಬಂದಿದ್ದು, ಸಿಇಟಿ ಬರೆದಿದ್ದ ಈ ವಿದ್ಯಾರ್ಥಿಗಳು, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ತಮ್ಮ ಅಂಕಗಳನ್ನು ಜು.26ರ ಸಂಜೆಯೊಳಗೆ ಅಪ್ಲೋಡ್ ಮಾಡಬೇಕು ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ | Teacher Recruitment 2022 | ಅರ್ಹ ಅಭ್ಯರ್ಥಿಗಳ ಕೊರತೆ ಎದುರಾದರೆ ಮತ್ತೊಮ್ಮೆ ಸಿಇಟಿ