Site icon Vistara News

ಐವರು ಸರಗಳ್ಳರು ಪೊಲೀಸ್‌ ಬಲೆಗೆ, 20 ಸುಲಿಗೆ ಪ್ರಕರಣಗಳು ಬಯಲಿಗೆ!

ಬೆಂಗಳೂರು: ಸರಗಳ್ಳತನ ಮಾಡುತ್ತಿದ್ದ ಐವರು ದುಷ್ಕರ್ಮಿಗಳನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದಾಗ ಒಂದಲ್ಲ, ಎರಡಲ್ಲ ಬರೋಬ್ಬರಿ 20 ಹಳೆಯ ಪ್ರಕರಣಗಳು ಬೆಳಕಿಗೆ ಬಂದಿವೆ.

ನಗರದ ಅನ್ನಪೂರ್ಣೇಶ್ವರಿ ನಗರ ಪೊಲೀಸ್‌ ಠಾಣೆಯ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಐವರು ಕುಖ್ಯಾತ ಸರಚೋರರನ್ನು ಬಂಧಿಸಿದ್ದರು.

ಇದನ್ನೂ ಓದಿ | ಸರ್ಕಾರ ಕೊಟ್ಟರೂ ಪೊಲೀಸರು ಕೊಡಲಿಲ್ಲ: ಬೆಂಗಳೂರಿನಲ್ಲಿ 24/7 ಹೋಟೆಲ್‌ ನಡೆಸಲು ಅನುಮತಿಗೆ ಮನವಿ

ಆರೋಪಿಗಳು ಕಳೆದ ಏ. 9ರಂದು ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವ್ಯಕ್ತಿಯ ಕುತ್ತಿಗೆಗೆ ಕೈ ಹಾಕಿ 20 ಗ್ರಾಂ ಚಿನ್ನದ ಸರ ಕಿತ್ತು ಪರಾರಿಯಾಗಿದ್ದರು. ಈ ಪ್ರಕರಣವನ್ನು ಪೊಲೀಸರು ಸವಾಲಾಗಿ ಸ್ವೀಕರಿಸಿದ್ದರು. ಆರೋಪಿಗಳನ್ನು ಬಲೆಗೆ ಬೀಳಿಸಿ ತೀವ್ರ ವಿಚಾರಣೆ ನಡೆಸಿದಾಗ, ಈ ಗ್ಯಾಂಗ್‌ ಈ ಹಿಂದೆ ನಡೆಸಿದ್ದ 20ಕ್ಕೂ ಹೆಚ್ಚು ಇಂಥದ್ದೇ ಪ್ರಕರಣಗಳು ಪತ್ತೆಯಾಗಿವೆ. ಈ ಗ್ಯಾಂಗ್‌ ಲೀಡರ್‌ ಹೇಮಂತ್‌ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ವೆಂಕಟೇಶ್‌, ಶ್ರೀಶೈಲ, ಅವಿನಾಶ್‌, ಪ್ರಕಾಶ್‌ ಇತರ ಬಂಧಿತ ಆರೋಪಿಗಳಾಗಿದ್ದಾರೆ.

ಬಂಧಿತರಿಂದ 17 ಬೈಕ್‌ ಮತ್ತು 20 ಗ್ರಾಂ ತೂಕದ ಚಿನ್ನದ ಸರವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ | ಆಸ್ತಿ ವಿಚಾರಕ್ಕೆ ಮಗನಿಗೇ ಬೆಂಕಿಯಿಟ್ಟ ಅಪ್ಪ: ವಾರ ನರಳಿ ಪ್ರಾಣ ಬಿಟ್ಟ ಪುತ್ರ

Exit mobile version