Site icon Vistara News

Chaithra Kundapura: ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ಕೋಟ್ಯಂತರ ರೂ. ವಂಚನೆ; ಚೈತ್ರಾ ಕುಂದಾಪುರ ಸಿಸಿಬಿ ವಶಕ್ಕೆ

Chaitra Kundapura

ಉಡುಪಿ: ಉದ್ಯಮಿಗೆ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಬಹುಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಪ್ರಮುಖ ಆರೋಪಿ, ಹಿಂದು ಕಾರ್ಯಕರ್ತೆ ಚೈತ್ರಾ ಕುಂದಾಪುರ (Chaithra Kundapura) ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಳೆದ ಕೆಲ ಸಮಯದಿಂದ ಚೈತ್ರಾ ಕುಂದಾಪುರ ತಲೆಮರೆಸಿಕೊಂಡಿದ್ದರು. ಉಡುಪಿ ಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ಮಿಂಚಿನ ಕಾರ್ಯಾಚರಣೆ ನಡೆಸಿ ಚೈತ್ರಾ ಕುಂದಾಪುರ ಸೇರಿ ಇಬ್ಬರನ್ನು ಬೆಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಉಡುಪಿ ಜಿಲ್ಲೆ ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬುವವರಿಗೆ ಬೈಂದೂರು ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ಚೈತ್ರಾ ಕುಂದಾಪುರ ಅವರು ಸುಮಾರು 7 ಕೋಟಿ ರೂಪಾಯಿ ಪಡೆದು ವಂಚನೆ ಮಾಡಿದ್ದರು ಎಂಬ ಆರೋಪವಿದೆ. ಸಮಾಜ ಸೇವಕರಾಗಿ ಗುರುತಿಸಿಕೊಂಡಿದ್ದ ಬಿಲ್ಲವ ನಾಯಕ, ಉದ್ಯಮಿಯ ಮುಗ್ಧತೆಯನ್ನು ಬಳಸಿಕೊಂಡು ವಂಚನೆ ಮಾಡಿದ್ದರಿಂದ ಚೈತ್ರಾ ಕುಂದಾಪುರ ಹಾಗೂ ಸಹಚರರ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದೀಗ ಚೈತ್ರಾ ಕುಂದಾಪುರ ಬಂಧನದಿಂದ ಪ್ರಕರಣದಲ್ಲಿ ಒಟ್ಟು ನಾಲ್ವರನ್ನು ಬಂಧಿಸಿದಂತಾಗಿದೆ.

ಉತ್ತರ ಕರ್ನಾಟಕ ಭಾಗದಲ್ಲಿ ಭಾಷಣಕಾರ್ತಿಯಾಗಿ ಗುರುತಿಸಿಕೊಂಡಿರುವ ಹಿಂದು ಕಾರ್ಯಕರ್ತೆ ಚೈತ್ರಾ ಕುಂದಾಪುರ ಸೇರಿ ನಾಲ್ಕೈದು ಜನರ ತಂಡ, ಬೃಹನ್ನಾಟಕವಾಡಿ ಕೇಂದ್ರದ ನಾಯಕರು, ಆರ್‌ಎಸ್‌ಎಸ್‌ ಪ್ರಮುಖರ ಹೆಸರಿನಲ್ಲಿ ಉದ್ಯಮಿಗೆ ಪಂಗನಾಮ ಹಾಕಿದೆ. ಆರ್‌ಎಸ್‌ಎಸ್ ಪ್ರಮುಖರು ಎಂದು ನಕಲಿ ನಾಯಕರನ್ನು ಚೈತ್ರಾ ಕುಂದಾಪುರ ಟೀಮ್ ಸೃಷ್ಟಿ ಮಾಡಿತ್ತು.

ಇದನ್ನೂ ಓದಿ | Students Fall Sick: ಚಿತ್ರದುರ್ಗದಲ್ಲಿ ಬಿಸಿಯೂಟ ಸೇವಿಸಿ 30 ಮಕ್ಕಳು ಅಸ್ವಸ್ಥ

ಪ್ರಕರಣ ಸಂಬಂಧ ಮಂಗಳವಾರ ಪ್ರಮುಖ ಆರೋಪಿ ಚೈತ್ರಾ ಕುಂದಾಪುರ, ಶ್ರೀಕಾಂತ್ ನಾಯಕ್ ಪೆಲತ್ತೂರುವನ್ನು ಸಿಸಿಬಿ ಪೊಲೀಸರು ಪೊಲೀಸರು ವಶಕ್ಕೆ ಪಡೆದಿದ್ದಾರೆ.‌ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ಉದ್ಯಮಿಯಿಂದ ಮೂರು ಹಂತದಲ್ಲಿ ಸುಮಾರು 7 ಕೋಟಿ ರೂಪಾಯಿಗಳನ್ನು ಆರೋಪಿಗಳು ಪಡೆದಿದ್ದರು. ಪ್ರಕರಣದಲ್ಲಿ ಈಗ ಚೈತ್ರಾ ಕುಂದಾಪುರ, ಗಗನ್ ಕಡೂರು, ಶ್ರೀಕಾಂತ ನಾಯಕ್, ಪ್ರಸಾದ್ ಸೇರಿ ನಾಲ್ವರು ಆರೋಪಿಗಳು ಸಿಸಿಬಿ ಪೊಲೀಸ್ ವಶದಲ್ಲಿದ್ದಾರೆ.

Exit mobile version