ರಾಯಚೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಅವಹೇಳನಕಾರಿ ಪದ ಬಳಕೆ ಮಾಡಿದ ಹಿನ್ನೆಲೆಯಲ್ಲಿ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರ ಮೇಲೆ ದೂರು ದಾಖಲಾಗಿದೆ. ವಿಚಾರಣೆಗೆಂದು ಸಿರವಾರ ಪೊಲೀಸರು ತೆರಳಿರುವುದರಿಂದ ಚಕ್ರವರ್ತಿ ಸೂಲಿಬೆಲೆ (Chakravarthy Sulibele) ಅವರಿಗೆ ಬಂಧನ ಭೀತಿ ಎದುರಾಗಿದೆ.
ಜ.18 ರಂದು ನಮೋ ಬ್ರಿಗೇಡ್ ವತಿಯಿಂದ ಜಿಲ್ಲೆಯ ಮಾನ್ವಿ ತಾಲೂಕಿನ ಸಿರವಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ‘ಅಯೋಗ್ಯ’ ಎಂದು ಚಕ್ರವರ್ತಿ ಸೂಲಿಬೆಲೆ ನಿಂದಿಸಿದ್ದಾರೆ. ಹೀಗಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕಲಬುರಗಿಯಲ್ಲಿ ಜಗದೇವ್ ಗುತ್ತೇದಾರ್ ಕಾಳಗಿ ಎಂಬುವವರು ದೂರು ನೀಡಿದ್ದರು. ಪ್ರಕರಣವನ್ನು ಕಲಬುರಗಿಯಿಂದ ಸಿರವಾರ ಪೋಲೀಸ್ ಠಾಣೆಗೆ ವರ್ಗಾವಣೆ ಮಾಡಿದ ಹಿನ್ನೆಲೆಯಲ್ಲಿ ಸೂಲಿಬೆಲೆ ವಿಚಾರಣೆಗಾಗಿ ಖಾಕಿ ತಂಡ ಬೆಂಗಳೂರಿಗೆ ತೆರಳಿದೆ.
ಇದನ್ನೂ ಓದಿ | CM Siddaramaiah: BJP-RSS ಸಂವಿಧಾನ ವಿರೋಧಿ, ಇವರನ್ನು ತಿರಸ್ಕರಿಸಿ; ಗುಡುಗಿದ ಸಿದ್ದರಾಮಯ್ಯ
ಖರ್ಗೆ ಅವರನ್ನು ‘ಅಯೋಗ್ಯ’ ಎಂದು ಭಾಷಣದಲ್ಲಿ ನಿಂದಿಸಿದ ಹಿನ್ನೆಲೆಯಲ್ಲಿ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಜ. 20ರಂದು ಕಲಂ 353, 338, 352, 342,153A, 153B, 295A, 505 ಹಾಗೂ ಇತರೆ ಕಾಲಂ ಅನ್ವಯ ಪ್ರಕರಣ ದಾಖಲಾಗಿದ್ದು, ಎಸ್ಸಿ-ಎಸ್ಟಿ, ಪಿಎ ಆ್ಯಕ್ಟ್ ಅಡಿಯಲ್ಲಿಯೂ ದೂರು ದಾಖಲಾಗಿದೆ.
ಮಂಡ್ಯ ಹನುಮಧ್ವಜ ಕೇಸ್; ಹಸಿರು ಧ್ವಜ ತೋರಿಸ್ತೇವೆ ತೆಗೆಯುತ್ತೀರಾ? ಸುನಿಲ್ ಕುಮಾರ್ ಪ್ರಶ್ನೆ
ಬೆಂಗಳೂರು: ಮಂಡ್ಯ ಜಿಲ್ಲೆಯ ಕೆರೆಗೋಡು ಗ್ರಾಮದಲ್ಲಿ ಶನಿವಾರ ರಾತ್ರಿ ಹನುಮಧ್ವಜ (Hanuman Flag) ಹಾರಿಸಿದ್ದು, ಪೊಲೀಸರನ್ನು ಬಳಸಿ ಧ್ವಜವನ್ನು ಕೆಳಗೆ ಇಳಿಸಿದ್ದನ್ನು ಖಂಡಿಸುತ್ತೇನೆ. ಒಂದು ಧ್ವಜ ಇಳಿಸಿದ್ರೆ, ಸಾವಿರಾರು ಧ್ವಜ ಹಾರಿಸಬೇಕಾಗುತ್ತವೆ. ಎಂದು ಎಚ್ಚರಿಕೆ ನೀಡಿರುವ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಸಚಿವ ವಿ. ಸುನಿಲ್ ಕುಮಾರ್ (V Sunil Kumar), ಈಗ ರಾಜ್ಯದ ಹಲವು ಕಡೆ ಇರುವ ಹಸಿರು ಧ್ವಜ ತೆಗೆಯುತ್ತೀರಾ? ಎಂದು ಪ್ರಶ್ನೆ ಮಾಡಿದ್ದಾರೆ.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಭಾನುವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಸುನಿಲ್ ಕುಮಾರ್, ಇದಕ್ಕೆ ಗೃಹ ಇಲಾಖೆ ನೇರ ಹೊಣೆ ಆಗಲಿದೆ ಅಂತ ಸರ್ಕಾರಕ್ಕೆ ಎಚ್ಚರಿಸುತ್ತೇವೆ. ಸ್ಥಳೀಯ ಅಧಿಕಾರಿಗಳು ದೊಡ್ಡ ವಿವಾದ ಮಾಡಲು ಹೊರಟಿದ್ದಾರೆ. ಇದು ಆಕ್ಷೇಪಾರ್ಹ ಎಂದು ತಿಳಿಸಿದರು.
ಸಿದ್ದರಾಮಯ್ಯ ನನಗೆ ಕೇಸರಿ ಕಂಡರೆ ಆಗಲ್ಲ ಅಂದಿದ್ದರು
ಗ್ರಾಮದ ಜನ ಒಗ್ಗಟ್ಟಾಗಿ ಹನುಮ ಧ್ವಜ ಹಾರಿಸಲು ಮುಂದಾಗಿದ್ದಾರೆ. ಅಲ್ಲದೆ, ಸ್ಥಳೀಯರ ಮೇಲೆ ಲಾಠಿ ಪ್ರಹಾರ ನಡೆದಿದೆ. ಯಾಕೆ ಇಳಿಸಲಾಗುತ್ತಿದೆ ಎಂದು ಕೇಸರಿ ವಿರೋಧಿ ಸರ್ಕಾರ ಸ್ಪಷ್ಟಪಡಿಸಬೇಕು. ಸ್ವತಃ ಸಿಎಂ ಸಿದ್ದರಾಮಯ್ಯ (CM Siddaramaiah) ನನಗೆ ಕೇಸರಿ ಕಂಡರೆ ಆಗಲ್ಲ ಅಂದಿದ್ದರು ಎಂದು ಸುನಿಲ್ ಕುಮಾರ್ ವಿವರಿಸಿದರು.
ಇನ್ಯಾವುದನ್ನು ಸಹಿಸ್ತೀರಾ?
ಅಯೋಧ್ಯೆ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ ದಿನ ಎಲ್ಲರೂ ಸಂಭ್ರಮದಿಂದ ಪಾಲ್ಗೊಂಡಿದ್ದಾರೆ. ಸಹಜವಾಗಿ ಎಲ್ಲರ ಮನೆ ಮೇಲೆ ಕೇಸರಿ ಧ್ವಜ ಹಾರಿಸಿದ್ದಾರೆ. ಜತೆಗೆ ನಂದಾ ದೀಪ ಹಚ್ಚಿದ್ದಾರೆ. ಆ ಗ್ರಾಮದಲ್ಲಿ ಕೂಡ ಧ್ವಜ ಹಾರಿಸಿ, ರಾಮನ ಫೋಟೊ ಹಾಕಿ ಪೂಜೆ ಮಾಡಿದ್ದಾರೆ. ಇದನ್ನು ಸರ್ಕಾರ ಸಹಿಸುತ್ತಿಲ್ಲ, ಇನ್ಯಾವುದನ್ನು ಸಹಿಸ್ತೀರಾ? ಎಂದು ಸುನಿಲ್ ಕುಮಾರ್ ಕೇಳಿದರು.
ಹಸಿರು ಧ್ವಜ ತೆಗೆಯುತ್ತೀರಾ?
ಹಿಂದು ಧ್ವಜ ಹಾರಿಸೋದನ್ನು ತಡೆಯುತ್ತೀರಾ? ರಾಜ್ಯದ ಎಲ್ಲೆಂದರೆ ಅಲ್ಲಿ ಘೋರಿ ಇದೆ. ಹಸಿರು ಧ್ವಜ ಹಾರಾಡುತ್ತಿದೆ. ಅದನ್ನು ನಾವು ತೋರಿಸುತ್ತೇವೆ. ತೆರವು ಮಾಡುವ ಕ್ರಮ ಮಾಡ್ತೀರಾ? ಎಂದು ಪ್ರಶ್ನೆಯನ್ನು ಮುಂದಿಟ್ಟರು. ಅನಧಿಕೃತ ಧ್ವಜ ತೆರವಿಗೆ ಸರ್ಕಾರದ ನಿರ್ದೇಶನ, ಕ್ರಮ ಏನಿದೆ ಎಂದು ಸ್ಪಷ್ಟಪಡಿಸಲು ಆಗ್ರಹಿಸಿದರು.
ನಮ್ಮ ನಾಯಕರು ಮಂಡ್ಯಕ್ಕೆ ಭೇಟಿ ನೀಡ್ತಾರೆ
ಒಂದು ಕಡೆ ಕಾಂಗ್ರೆಸ್ ನಾಯಕರು ಅಯೋಧ್ಯೆಗೆ ಹೋಗಲ್ಲ ಅಂತಾರೆ. ಮತ್ತೊಂದು ಕಡೆ ಪೊಲೀಸರನ್ನು ಬಳಸಿ ಕೇಸರಿ ಧ್ವಜ ಇಳಿಸುವ ಕೆಲಸ ಮಾಡುತ್ತಿದೆ ಎಂದು ಆಕ್ಷೇಪಿಸಿದ ಸುನಿಲ್ ಕುಮಾರ್, ನಮ್ಮ ನಾಯಕರು ಮಂಡ್ಯ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ ಎಂದು ತಿಳಿಸಿದರು.
ಇದನ್ನೂ ಓದಿ | Hanuman Flag: ಮಂಡ್ಯ ಹನುಮ ಧ್ವಜ ಪ್ರಕರಣ; ತ್ರಿವರ್ಣ ಧ್ವಜ ಬಿಟ್ಟು ಭಗವಾಧ್ವಜ ಹಾರಿಸಿದ್ದು ಸರಿಯಲ್ಲ: ಸಿದ್ದರಾಮಯ್ಯ
ಊರಿನ ಜನ ಸ್ವಯಂಪ್ರೇರಿತರಾಗಿ ಹಾಕಿದ್ದಾರೆ. ಸರ್ಕಾರ ಕೇಸರಿ ವಿರೋಧಿ ನೀತಿಯಿಂದ ಹೊರಗೆ ಬರಬೇಕು. ಕಾಂಗ್ರೆಸ್ಸಿಗರು ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕು ಎಂದು ಸುನಿಲ್ ಕುಮಾರ್ ಆಗ್ರಹಿಸಿದರು.