Power Point with HPK : ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆಗಿದ್ರೂ ಐದಲ್ಲ, ಒಂದು ಗ್ಯಾರಂಟಿಯೂ ಜಾರಿ ಆಗ್ತಿರಲಿಲ್ಲ! - Vistara News

ಕರ್ನಾಟಕ

Power Point with HPK : ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆಗಿದ್ರೂ ಐದಲ್ಲ, ಒಂದು ಗ್ಯಾರಂಟಿಯೂ ಜಾರಿ ಆಗ್ತಿರಲಿಲ್ಲ!

Power Point with HPK : ವಿಸ್ತಾರ ನ್ಯೂಸ್‌ ಪ್ರಧಾನ ಸಂಪಾದಕ ಹರಿಪ್ರಕಾಶ್‌ ಕೋಣೆಮನೆ ಅವರು ನಡೆಸಿಕೊಡುವ “ಪವರ್‌ ಪಾಯಿಂಟ್‌ ವಿತ್‌ ಎಚ್‌ಪಿಕೆ” ವಿಶೇಷ ಸಂದರ್ಶನದಲ್ಲಿ ಕೃಷಿ ಸಚಿವ ಎನ್.‌ ಚಲುವರಾಯಸ್ವಾಮಿ, ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಿದ್ದಾರೆ. ಸಿದ್ದರಾಮಯ್ಯ ಅವರನ್ನು ಬಿಟ್ಟು ಬೇರೆ ಯಾರೇ ಮುಖ್ಯಮಂತ್ರಿಯಾಗಿದ್ದರೂ ಈ ಯೋಜನೆ ಜಾರಿ ಅಸಾಧ್ಯ ಎಂಬುದಾಗಿ ಹೇಳಿದ್ದಾರೆ.

VISTARANEWS.COM


on

Chaluvarayaswamy in powerpoint with HPK
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ನಮ್ಮದು ಜನಪರವಾದ ಸರ್ಕಾರವಾಗಿದೆ. ಏನೇ ಕಷ್ಟ ಬಂದರೂ ನಾವು ಅದನ್ನು ಎದುರಿಸುತ್ತೇವೆ. ಬರಕ್ಕೆ ಪರಿಹಾರವನ್ನು ನೀಡುತ್ತೇವೆ. ಎರಡೂವರೆ ಲಕ್ಷ ರೂಪಾಯಿ ಇದ್ದ ರಾಜ್ಯ ಮಟ್ಟದ ಸಾಲವನ್ನು 5 ಲಕ್ಷ ರೂಪಾಯಿಗೆ ಬಿಜೆಪಿಯವರು ತೆಗೆದುಕೊಂಡು ಹೋದಂತೆ ನಾವು ಮಾಡುವುದಿಲ್ಲ. ಸಿದ್ದರಾಮಯ್ಯ (CM Siddaramaiah) ಅವರು ಅಲ್ಲದೆ ಬೇರೆ ಯಾರೇ ಮುಖ್ಯಮಂತ್ರಿಯಾಗಿದ್ದರೂ ಐದು ಗ್ಯಾರಂಟಿ ಅಲ್ಲ. ಒಂದೇ ಒಂದು ಗ್ಯಾರಂಟಿಯನ್ನೂ (Congress Guarantee scheme) ಜಾರಿ ಮಾಡಲು ಆಗುತ್ತಿರಲಿಲ್ಲ. ಐದರಲ್ಲಿ ನಾಲ್ಕು ಗ್ಯಾರಂಟಿಯನ್ನು ನಾವು ಯಶಸ್ವಿಯಾಗಿ ಜಾರಿ ಮಾಡಿದ್ದೇವೆ ಎಂದು ಕೃಷಿ ಸಚಿವ ಎನ್.‌ ಚಲುವರಾಯಸ್ವಾಮಿ (Agriculture Minister N Chaluvarayaswamy) ಅವರು ಪವರ್‌ ಪಾಯಿಂಟ್‌ ವಿತ್ ಎಚ್‌ಪಿಕೆ (Power Point with HPK) ಸಂದರ್ಶನದಲ್ಲಿ ಹೇಳಿದರು.

ವಿಸ್ತಾರ ನ್ಯೂಸ್‌ ಪ್ರಧಾನ ಸಂಪಾದಕ ಹರಿಪ್ರಕಾಶ್‌ ಕೋಣೆಮನೆ (Hariprakash Konemane) ಅವರು ನಡೆಸಿಕೊಡುವ “ಪವರ್‌ ಪಾಯಿಂಟ್‌ ವಿತ್‌ ಎಚ್‌ಪಿಕೆ” ವಿಶೇಷ ಸಂದರ್ಶನದಲ್ಲಿ ಮಾತನಾಡಿದ‌ ಕೃಷಿ ಸಚಿವ ಎನ್.‌ ಚಲುವರಾಯಸ್ವಾಮಿ, ನಮ್ಮ ಗ್ಯಾರಂಟಿ ಯೋಜನೆಗಳು ಇಂಥ ಬರಗಾಲದಲ್ಲಿ ಜನರಿಗೆ ಬಹಳವೇ ಉಪಯೋಗಕ್ಕೆ ಬರುತ್ತದೆ. ಪ್ರತಿ ಮನೆಗೆ 4ರಿಂದ 5 ಸಾವಿರ ರೂಪಾಯಿ ದುಡ್ಡು ಸಿಗುತ್ತದೆ. ರೈತರಿಗೆ ಹೆಚ್ಚು ಅನುಕೂಲವಾಗುತ್ತಿದೆ. ನಾನು ಹಲವು ಹಳ್ಳಿಗಳಿಗೆ ಭೇಟಿ ನೀಡಿದಾಗ ಎಲ್ಲರೂ ಗ್ಯಾರಂಟಿ ಬಗ್ಗೆ ಖುಷಿ ವ್ಯಕ್ತಪಡಿಸಿದ್ದಾರೆ. ಆ ಗ್ರಾಮದ ಎಲ್ಲರಿಗೂ ಉಚಿತ ವಿದ್ಯುತ್‌ ಸಿಗುತ್ತಿದೆ. ಎರಡು ಸಾವಿರ ರೂಪಾಯಿ ಸಹ ನೂರರಲ್ಲಿ ಒಬ್ಬರಿಗೆ ಮಾತ್ರ ಸಿಕ್ಕಿಲ್ಲ. ಉಳಿದವರೆಲ್ಲರಿಗೂ ಸಿಕ್ಕಿದೆ. ಇನ್ನು ಮಹಿಳೆಯರಿಗೆ ನೀಡಿರುವ ಉಚಿತ ಬಸ್‌ ಸೌಲಭ್ಯ ಸಹ ಇಂತಹ ಪರಿಸ್ಥಿತಿಯಲ್ಲಿ ಜನರಿಗೆ ಅನುಕೂಲವಾಗಿದೆ ಎಂದು ಹೇಳಿದರು.

ಬೇರೆಯವರು ಮಾಡಲು ಆಗದೇ ಇರುವುದನ್ನು ಕಾಂಗ್ರೆಸ್‌ ಮಾಡುವುದೇ ವಿಶೇಷ. ಬರಗಾಲ ಇರಬಹುದು, ರೈತರ ಏನೇ ಸಮಸ್ಯೆಗಳು ಇರಬಹುದು ಎಲ್ಲವನ್ನೂ ನೋಡಿಕೊಳ್ಳುತ್ತೇವೆ. ರಾಜ್ಯದ ಅಭಿವೃದ್ಧಿ ಜತೆಗೆ ಗ್ಯಾರಂಟಿಯನ್ನು ತೆಗೆದುಕೊಂಡು ಹೋಗುತ್ತೇವೆ. ಈ ನಿಟ್ಟಿನಲ್ಲಿ ಏನೇ ಸಮಸ್ಯೆ ಬಂದರೂ ನಾವು ಎದುರಿಸುತ್ತೇವೆ. ಇನ್ನು ಗ್ಯಾರಂಟಿಗೆ ಈ ವರ್ಷ ಬೇಕಿರುವ 37 ಸಾವಿರ ಕೋಟಿ ರೂಪಾಯಿಯನ್ನು ಈಗಾಗಲೇ ಬಜೆಟ್‌ನಲ್ಲಿ ಕಾಯ್ದಿರಿಸಲಾಗಿದೆ ಎಂದು ಎನ್.‌ ಚಲುವರಾಯಸ್ವಾಮಿ ತಿಳಿಸಿದರು.

ರಾಜ್ಯದ ಪಾಲನ್ನು ಕೇಂದ್ರ ಕೊಡಲೇಬೇಕು

ಒಕ್ಕೂಟದ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ಸಹಕಾರ ಕೊಡಬೇಕು. ನಮಗೆ ಕೊಡಬೇಕಾದ ದುಡ್ಡನ್ನು ಕೊಡಬೇಕು. ಕೇಂದ್ರದವರೇನು ನಮಗೆ ಪುಕ್ಕಟೆ ದುಡ್ಡು ಕೊಡುತ್ತಾರೆಯೇ? ಆಯಾ ರಾಜ್ಯದಿಂದ ತೆರಿಗೆ ಸಂಗ್ರಹದ ಆಧಾರದ ಮೇಲೆ ಅನುದಾನವನ್ನು ಕೊಡಬೇಕಾಗುತ್ತದೆ. ಏನು ಯೋಜನೆಗಳು ಇರುತ್ತವೆಯೋ ಅದನ್ನು ಮಾಡಬೇಕು. ಇನ್ನು ಬರಗಾಲಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸರ್ಕಾರವೇ ಮಾನದಂಡವನ್ನು ನಿಗದಿ ಮಾಡಿದೆ. ಅದರ ಅನುಸಾರ ಅವರು ರಾಜ್ಯದ ಪಾಲು ಏನು ಇರುತ್ತದೆಯೋ ಅದನ್ನು ಕೊಡಲೇಬೇಕಾಗುತ್ತದೆ. ಇನ್ನು ನಮ್ಮ ಕಡೆಯಿಂದ ಏನು ಅನುದಾನ ಹಾಕಬೇಕೋ ಅದನ್ನು ಹಾಕುತ್ತೇವೆ ಎಂದು ಎನ್.‌ ಚಲುವರಾಯಸ್ವಾಮಿ ಹೇಳಿದರು.

ಇದನ್ನೂ ಓದಿ: Power Point with HPK : ಬರ ಘೋಷಣೆಯಲ್ಲಿ ನಾವೇ ಮುಂದು; ಬಿಜೆಪಿಗೆ ಇನ್ನೊಂದು ತಿಂಗಳಾದರೂ ಆಗದು!

ಇನ್ನು ಮುಂದೆ ಬರುವ ಮಳೆಯಿಂದ ರೈತರಿಗೆ ಅನುಕೂಲ ಆಗುವುದಿಲ್ಲ. ರೈತರಿಗೆ ಆದಾಯ ತರುವಂತ ಬೆಳೆ ಬೆಳೆಯಲು ಸಾಧ್ಯವಿಲ್ಲ.ಕೆಲವೇ ಕೆಲವು ಜಿಲ್ಲೆಗಳಲ್ಲಿ ಮಾತ್ರ ಉಪಯೋಗ ಆಗಬಹುದು. ಇನ್ನು ಸುರಿಯುವ ಮಳೆಯಿಂದ ಡ್ಯಾಂಗಳು ತುಂಬಬಹುದು ಅಷ್ಟೇ. ಇದರಿಂದ ಕುಡಿಯುವ ನೀರಿನ ಸಮಸ್ಯೆ, ಮೇವಿನ ಸಮಸ್ಯೆ ನೀಗಲಿದೆ. ಈಗ ಪ್ರತಿ ವಾರ ಅಥವಾ 10 ದಿನಕ್ಕೆ ರಾಜ್ಯದ ಸ್ಥಿತಿಗತಿಗಳನ್ನು ಅವಲೋಕಿಸಿ ತೀರ್ಮಾನವನ್ನು ಕೈಗೊಳ್ಳಲು ಸಿಎಂ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದು, ಅದರಂತೆ ನಾವು ಕಾರ್ಯನಿರ್ವಹಣೆ ಮಾಡುತ್ತಿದ್ದೇವೆ ಎಂದು ಚಲುವರಾಯಸ್ವಾಮಿ ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

ಬಿಜೆಪಿ ನಾಯಕನ ಮಗನಿಗೆ ಹೈಕೋರ್ಟ್ ಬಿಸಿ: ಮದುವೆಯಾಗದೆ ಮಗು ನೀಡಿದ ಲವರ್‌ಗೆ ಮಾಸಿಕ 75 ಸಾವಿರ ರೂ. ಜೀವನಾಂಶ ದಂಡ

VISTARANEWS.COM


on

ಬೆಂಗಳೂರು: ಯುವತಿಯನ್ನು ಪ್ರೀತಿಸಿ, ಮದುವೆಯಾಗುವುದಾಗಿ ನಂಬಿಸಿ ಆಕೆಯ ಮಗುವಿಗೆ ತಂದೆಯಾದ ಆರೋಪ ಎದುರಿಸುತ್ತಿರುವ ಪುತ್ತೂರಿನ ಬಿಜೆಪಿ ಮುಖಂಡ ಪಿ.ಜಿ. ಜಗನ್ನಿವಾಸ ರಾವ್ ಪುತ್ರ ಕೃಷ್ಣ ಜೆ. ರಾವ್ ಅವರಿಗೆ ಕರ್ನಾಟಕ ಹೈಕೋರ್ಟ್ ಕಠಿಣ ಷರತ್ತು ವಿಧಿಸಿದೆ. ಆರೋಪಿಯ ವಿರುದ್ಧದ ಕ್ರಿಮಿನಲ್ ಪ್ರಕರಣಕ್ಕೆ ನ್ಯಾಯಾಲಯ ಸದ್ಯ ತಡೆ ನೀಡಿದ್ದರೂ, ಸಂತ್ರಸ್ತೆ ಹಾಗೂ ಮಗುವಿನ ಜೀವನ ನಿರ್ವಹಣೆಗಾಗಿ ಪ್ರತಿ ತಿಂಗಳು 75,000 ರೂಪಾಯಿ ಪಾವತಿಸುವಂತೆ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಆದೇಶಿಸಿದೆ. “ಮಗುವಿಗೆ ನೀನೇ ತಂದೆ ಎಂಬುದು ದೃಢಪಟ್ಟಿರುವಾಗ ಸಂತ್ರಸ್ತೆಯನ್ನು ಮದುವೆಯಾಗುವುದೇ ಸೂಕ್ತ” ಎಂದು ನ್ಯಾಯಾಲಯ ಈ ಸಂದರ್ಭದಲ್ಲಿ ಖಡಕ್ ಆಗಿ ಹೇಳಿದೆ.

ಈ ಪ್ರಕರಣದ ವಿಚಾರಣೆ ವೇಳೆ ಆರೋಪಿಯನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್, ಒಂದು ವೇಳೆ ಯುವತಿಯನ್ನು ಮದುವೆಯಾಗಿ ಬಂದರೆ ಮಾತ್ರ ಕ್ರಿಮಿನಲ್ ಪ್ರಕರಣವನ್ನು ಸಂಪೂರ್ಣವಾಗಿ ರದ್ದುಪಡಿಸುವುದಾಗಿ ಸ್ಪಷ್ಟಪಡಿಸಿದೆ. ಮದುವೆಯಾದ ನಂತರವೂ ಯುವತಿಯನ್ನು ತ್ಯಜಿಸಿದರೆ ಕೇಸ್ ಮತ್ತೆ ಮರುಸ್ಥಾಪನೆಯಾಗಲಿದೆ ಎಂದು ನ್ಯಾಯಾಧೀಶರು ಎಚ್ಚರಿಕೆ ನೀಡಿದ್ದಾರೆ. ಸದ್ಯದ ಆದೇಶದಂತೆ, ಆರೋಪಿಯು ಮುಂದಿನ ಒಂದು ವಾರದೊಳಗೆ ಮೊದಲ ಕಂತಿನ 75 ಸಾವಿರ ರೂಪಾಯಿಗಳನ್ನು ಪಾವತಿಸಬೇಕು ಮತ್ತು ತದನಂತರ ಪ್ರತಿ ತಿಂಗಳು ಈ ಮೊತ್ತವನ್ನು ಸಂತ್ರಸ್ತೆಗೆ ನೀಡುತ್ತಿರಬೇಕು ಎಂದು ಷರತ್ತು ವಿಧಿಸಲಾಗಿದೆ.

ಆರೋಪಿ ಪರ ವಕೀಲರು ಇದು ರಾಜಕೀಯ ಪ್ರೇರಿತ ಪಿತೂರಿ ಮತ್ತು ಇಬ್ಬರೂ ವಯಸ್ಕರಾಗಿದ್ದಾಗ ನಡೆದ ದೈಹಿಕ ಸಂಬಂಧ ಎಂದು ವಾದಿಸಿ ಪ್ರಕರಣ ರದ್ದತಿಗೆ ಕೋರಿದ್ದರು. ಆದರೆ, ನ್ಯಾಯಾಲಯವು ಮಗುವಿನ ಹಿತದೃಷ್ಟಿ ಮತ್ತು ಸಂತ್ರಸ್ತೆಯ ಭವಿಷ್ಯಕ್ಕೆ ಆದ್ಯತೆ ನೀಡಿದೆ. ಪುತ್ತೂರಿನ ಯುವತಿಯೊಬ್ಬಳು ನೀಡಿದ ದೂರಿನನ್ವಯ ದಾಖಲಾಗಿದ್ದ ಈ ಕ್ರಿಮಿನಲ್ ಪ್ರಕರಣವು ಈಗ ಒಂದು ಮಹತ್ವದ ತಿರುವು ಪಡೆದುಕೊಂಡಿದ್ದು, ಆರೋಪಿಯು ಸಂತ್ರಸ್ತೆಯನ್ನು ಮದುವೆಯಾಗುತ್ತಾರೋ ಅಥವಾ ಪ್ರತಿ ತಿಂಗಳು ಜೀವನಾಂಶ ನೀಡುತ್ತಾ ಕಾನೂನು ಹೋರಾಟ ಮುಂದುವರಿಸುತ್ತಾರೋ ಎಂಬುದು ಕುತೂಹಲ ಮೂಡಿಸಿದೆ.

Continue Reading

Latest

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಮತ್ತೆ ವಿವಾದ: ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಸಿಬ್ಬಂದಿ; ಕಾಲೇಜು ಆಡಳಿತ ಮಂಡಳಿ ವಿರುದ್ಧ ಪೋಷಕರ ಆಕ್ರೋಶ

VISTARANEWS.COM


on

ರಾಜ್ಯಾದ್ಯಂತ ಸಿಇಟಿ ಪರೀಕ್ಷೆಗಳು ಆರಂಭವಾಗುತ್ತಿದ್ದಂತೆಯೇ ಮತ್ತೆ ಹಳೆಯ ವಿವಾದವೊಂದು ಮುನ್ನೆಲೆಗೆ ಬಂದಿದೆ. ಬೆಂಗಳೂರಿನ ಮಡಿವಾಳದಲ್ಲಿರುವ ಕೃಪಾನಿಧಿ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಸಿಬ್ಬಂದಿಗಳು ವಿದ್ಯಾರ್ಥಿಗಳು ಧರಿಸಿದ್ದ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ನಡೆದಿದೆ. ತಪಾಸಣೆ ನೆಪದಲ್ಲಿ ಆನಂದ್ ಸುಧೀರ್ ರಾವ್ ಸೇರಿದಂತೆ ಐದಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ತಡೆದ ಸಿಬ್ಬಂದಿ, “ಜನಿವಾರ ತೆಗೆಯದಿದ್ದರೆ ಪರೀಕ್ಷಾ ಕೇಂದ್ರದಿಂದ ಹೊರಹೋಗಿ” ಎಂದು ಧಮ್ಕಿ ಹಾಕಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಪೋಷಕರೇ ಮನನೊಂದು ಜನಿವಾರ ತೆಗೆಸಿ ಮಕ್ಕಳನ್ನು ಪರೀಕ್ಷೆಗೆ ಕಳುಹಿಸುವಂತಾಯಿತು.

ಈ ವಿಚಾರ ಕಾಡ್ಗಿಚ್ಚಿನಂತೆ ಹರಡುತ್ತಿದ್ದಂತೆಯೇ ಶಿಕ್ಷಣ ಇಲಾಖೆ ಮತ್ತು ಸಿಇಟಿ ಸೆಲ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೂಲಗಳ ಪ್ರಕಾರ, ಈ ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸಿದ ಅಧಿಕಾರಿಗಳು, ಪೋಷಕರಿಂದ “ದೂರು ನೀಡುವುದಿಲ್ಲ” ಎಂಬ ಪತ್ರ ಬರೆಸಿಕೊಂಡಿದ್ದಾರೆ ಎನ್ನಲಾಗಿದೆ. ಆದರೆ, ಈ ವರ್ತನೆಯು ಧಾರ್ಮಿಕ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ಪೋಷಕರು ಮತ್ತು ಧಾರ್ಮಿಕ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರೀಕ್ಷಾ ನಿಯಮಗಳ ಹೆಸರಿನಲ್ಲಿ ಅನಗತ್ಯವಾಗಿ ಧಾರ್ಮಿಕ ಸಂಕೇತಗಳನ್ನು ಗುರಿ ಮಾಡಲಾಗುತ್ತಿದೆ ಎಂದು ಸಾರ್ವಜನಿಕ ವಲಯದಲ್ಲಿ ಚರ್ಚೆಗಳು ಶುರುವಾಗಿವೆ.

ಇದೇ ವೇಳೆ ಚಿಕ್ಕಮಗಳೂರಿನ ಎಂಇಎಸ್ (MES) ಕಾಲೇಜಿನಲ್ಲೂ ಪರೀಕ್ಷಾ ಸಿಬ್ಬಂದಿಗಳ ಕಟ್ಟುನಿಟ್ಟಿನ ಕ್ರಮ ವಿದ್ಯಾರ್ಥಿನಿಯರಿಗೆ ಸಂಕಷ್ಟ ತಂದೊಡ್ಡಿದೆ. ಪರೀಕ್ಷಾ ಕೇಂದ್ರಕ್ಕೆ ಮೆಟಲ್ ವಸ್ತುಗಳನ್ನು ಧರಿಸಿ ಬರುವಂತಿಲ್ಲ ಎಂಬ ನಿಯಮವಿದ್ದ ಕಾರಣ, ಮೂಗುತಿ ಧರಿಸಿದ್ದ ವಿದ್ಯಾರ್ಥಿನಿಯರನ್ನು ಗೇಟ್‌ನಲ್ಲೇ ತಡೆಹಿಡಿಯಲಾಗಿತ್ತು. ಕೊನೆಗೆ ಸಿಬ್ಬಂದಿಗಳು ವಿದ್ಯಾರ್ಥಿನಿಯರ ಮೂಗುತಿಗೆ ಗಮ್ ಟೇಪ್ ಅಂಟಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿದರು. ಒಟ್ಟಾರೆಯಾಗಿ ಸಿಇಟಿ ಪರೀಕ್ಷೆಯ ಮೊದಲ ದಿನವೇ ಪರೀಕ್ಷಾ ಕೇಂದ್ರಗಳಲ್ಲಿ ನಿಯಮಗಳ ಹೆಸರಿನಲ್ಲಿ ನಡೆದ ಇಂತಹ ಕಿರಿಕ್‌ಗಳು ವಿದ್ಯಾರ್ಥಿಗಳು ಮತ್ತು ಪೋಷಕರ ಆತಂಕಕ್ಕೆ ಕಾರಣವಾಗಿವೆ.

Continue Reading

Latest

ಸಚಿವ ಡಿ. ಸುಧಾಕರ್ ಸ್ಥಿತಿ ಗಂಭೀರ: ಶ್ವಾಸಕೋಶದ ಸೋಂಕಿನಿಂದ ಐಸಿಯುಗೆ ದಾಖಲು; ಲಂಗ್ಸ್ ಟ್ರಾನ್ಸ್‌ಪ್ಲಾಂಟೇಷನ್‌ಗೆ ವೈದ್ಯರ ಸಿದ್ಧತೆ

VISTARANEWS.COM


on

ಯೋಜನೆ ಮತ್ತು ಸಾಂಖಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ತೀವ್ರವಾಗಿ ಹದಗೆಟ್ಟಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ಪಡೆಯುತ್ತಿದ್ದಾರೆ. ಮೂಲತಃ ಮೊಣಕಾಲು ಶಸ್ತ್ರಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರಿಗೆ, ಆಪರೇಷನ್ ನಂತರ ಶ್ವಾಸಕೋಶದಲ್ಲಿ ಗಂಭೀರ ಸೋಂಕು ಕಾಣಿಸಿಕೊಂಡಿದೆ. ಕಳೆದ ಮಾರ್ಚ್ 31ರಂದು ಸಹ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದರು. ಆದರೆ ಈಗ ಮತ್ತೆ ಸಮಸ್ಯೆ ಮರುಕಳಿಸಿದ್ದು, ಅವರು ಚಿಕಿತ್ಸೆಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

ಸಚಿವರ ಶ್ವಾಸಕೋಶಗಳು ತೀವ್ರವಾಗಿ ಹಾನಿಗೊಳಗಾಗಿರುವ ಹಿನ್ನೆಲೆಯಲ್ಲಿ, ವೈದ್ಯರು ‘ಲಂಗ್ಸ್ ಟ್ರಾನ್ಸ್‌ಪ್ಲಾಂಟೇಷನ್’ (ಶ್ವಾಸಕೋಶ ಕಸಿ) ಶಸ್ತ್ರಚಿಕಿತ್ಸೆ ನಡೆಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಇದು ವೈಫಲ್ಯಕ್ಕೊಳಗಾದ ಶ್ವಾಸಕೋಶಗಳನ್ನು ತೆಗೆದುಹಾಕಿ, ಬ್ರೈನ್ ಡೆಡ್ ಆದ ದಾನಿಗಳಿಂದ ಪಡೆದ ಆರೋಗ್ಯಕರ ಶ್ವಾಸಕೋಶಗಳನ್ನು ಅಳವಡಿಸುವ ಅತ್ಯಂತ ಸಂಕೀರ್ಣ ಪ್ರಕ್ರಿಯೆಯಾಗಿದೆ. ಶಸ್ತ್ರಚಿಕಿತ್ಸೆಯ ನಂತರ ದೇಹವು ಹೊಸ ಅಂಗವನ್ನು ಸ್ವೀಕರಿಸಲು ಮತ್ತು ಸೋಂಕು ತಡೆಯಲು ರೋಗಿಗಳು ಜೀವನಪರ್ಯಂತ ಕಟ್ಟುನಿಟ್ಟಾದ ವೈದ್ಯಕೀಯ ಕ್ರಮಗಳನ್ನು ಪಾಲಿಸಬೇಕಾಗುತ್ತದೆ. ಸದ್ಯ ಸಚಿವರ ಸ್ಥಿತಿ ಏರಿಳಿತದಿಂದ ಕೂಡಿದ್ದು, ತಜ್ಞ ವೈದ್ಯರ ತಂಡ ನಿರಂತರ ನಿಗಾ ವಹಿಸಿದೆ.

ಚಿತ್ರದುರ್ಗದ ಹಿರಿಯೂರು ಕ್ಷೇತ್ರದ ಶಾಸಕರಾಗಿರುವ ಡಿ. ಸುಧಾಕರ್ ಅವರು ಸಿದ್ದರಾಮಯ್ಯ ಸಂಪುಟದಲ್ಲಿ ಸಕ್ರಿಯ ಸಚಿವರಾಗಿದ್ದಾರೆ. ಈ ಹಿಂದೆ ಬಿಜೆಪಿ ಸರ್ಕಾರದಲ್ಲೂ ಸಮಾಜ ಕಲ್ಯಾಣ ಸಚಿವರಾಗಿ ಸೇವೆ ಸಲ್ಲಿಸಿದ್ದ ಇವರು, ರಾಜಕೀಯದಲ್ಲಿ ದಶಕಗಳ ಅನುಭವ ಹೊಂದಿದ್ದಾರೆ. ಸಚಿವರ ಆರೋಗ್ಯದಲ್ಲಿ ಚೇತರಿಕೆ ಕಂಡುಬರಲಿ ಎಂದು ಅವರ ಬೆಂಬಲಿಗರು ಹಾಗೂ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ. ಶಸ್ತ್ರಚಿಕಿತ್ಸೆಯ ಯಶಸ್ಸು ಮತ್ತು ನಂತರದ ರೋಗನಿರೋಧಕ ಶಕ್ತಿಯ ನಿರ್ವಹಣೆ ಸಚಿವರ ಚೇತರಿಕೆಯಲ್ಲಿ ಪ್ರಮುಖ ಪಾತ್ರ ವಹಿಸಲಿದೆ.

Continue Reading

Latest

ರಾಜ್ಯಾದ್ಯಂತ ಸುಡುವ ಬಿಸಿಲು: ಉತ್ತರ ಕರ್ನಾಟಕದಲ್ಲಿ ಉಷ್ಣಾಂಶ ಏರಿಕೆ, ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ

VISTARANEWS.COM


on

ರಾಜ್ಯಾದ್ಯಂತ ಬಿಸಿಲ ತಾಪ ಅತಿಯಾಗಿದ್ದು, ಕರುನಾಡು ಸದ್ಯ ಬೆಂಕಿಯ ಉಂಡೆಯಂತಾಗಿದೆ. ಅದರಲ್ಲೂ ಉತ್ತರ ಕರ್ನಾಟಕದ ಜಿಲ್ಲೆಗಳಾದ ರಾಯಚೂರು ಮತ್ತು ಕಲಬುರಗಿಯಲ್ಲಿ ತಾಪಮಾನವು 42°C ದಾಟಿದ್ದು, ಜನರು ಮನೆಯಿಂದ ಹೊರಬರಲು ಹೆದರುವಂತಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೂ ಸಹ ಬಿಸಿಲು ವಾಡಿಕೆಗಿಂತ ಹೆಚ್ಚಾಗಿದ್ದು, 37°C ಆಸುಪಾಸಿನ ಉಷ್ಣಾಂಶ ದಾಖಲಾಗುತ್ತಿದೆ. ಮುಂದಿನ ಕೆಲವು ದಿನಗಳ ಕಾಲ ತಾಪಮಾನವು ಇನ್ನೂ 2 ರಿಂದ 4 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ತೀವ್ರವಾದ ಸೆಕೆಯ ನಡುವೆಯೇ ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಜನರಿಗೆ ವರುಣ ದೇವ ತಂಪೆರೆಯುವ ಸೂಚನೆ ನೀಡಿದ್ದಾನೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಇನ್ನು ಕರಾವಳಿ ಭಾಗದ ಮಂಗಳೂರು ಮತ್ತು ಉಡುಪಿಯಲ್ಲಿ ತಾಪಮಾನ ಅಷ್ಟಾಗಿ ಹೆಚ್ಚಿಲ್ಲದಿದ್ದರೂ, ಗಾಳಿಯಲ್ಲಿನ ಆರ್ದ್ರತೆ (Humidity) ಹೆಚ್ಚಾಗಿರುವುದರಿಂದ ಜನರಿಗೆ ಅತಿಯಾದ ಸೆಕೆ ಮತ್ತು ಬೆವರಿನ ಅನುಭವವಾಗುತ್ತಿದೆ.

ಬಿಸಿಲಿನ ಝಳ ಹೆಚ್ಚಿರುವ ಕಾರಣ ಆರೋಗ್ಯ ಇಲಾಖೆಯು ಸಾರ್ವಜನಿಕರಿಗೆ ಕೆಲವು ಪ್ರಮುಖ ಮುನ್ನೆಚ್ಚರಿಕೆಗಳನ್ನು ನೀಡಿದೆ. ವಿಶೇಷವಾಗಿ ಮಧ್ಯಾಹ್ನ 11:30 ರಿಂದ ಸಂಜೆ 4:00 ರವರೆಗೆ ನೇರ ಸೂರ್ಯನ ಬೆಳಕಿಗೆ ಮೈಯೊಡ್ಡಬಾರದು ಮತ್ತು ಕೆಲಸವಿಲ್ಲದೆ ಹೊರಗೆ ಓಡಾಡಬಾರದು ಎಂದು ತಿಳಿಸಲಾಗಿದೆ. ದೇಹದಲ್ಲಿ ನೀರಿನಂಶ ಕಡಿಮೆಯಾಗದಂತೆ ನೋಡಿಕೊಳ್ಳಲು ಹೆಚ್ಚಿನ ಪ್ರಮಾಣದ ನೀರು, ಮಜ್ಜಿಗೆ ಅಥವಾ ಎಳನೀರು ಕುಡಿಯುವ ಮೂಲಕ ‘ಹೈಡ್ರೇಟೆಡ್’ ಆಗಿರಲು ವೈದ್ಯರು ಸಲಹೆ ನೀಡಿದ್ದಾರೆ

Continue Reading
Advertisement
Latest4 hours ago

ಇನ್ನು ಮುಂದೆ ಒಳಮೀಸಲಾತಿ ಅನ್ವಯ ಹುದ್ದೆಗಳ ಭರ್ತಿ: ಸಿಎಂ ಸಿದ್ದರಾಮಯ್ಯ ಘೋಷಣೆ

Latest4 hours ago

29 ವರ್ಷಗಳ ‘ನೋ ಕಿಸ್ ಪಾಲಿಸಿ’ ಮುರಿದ ಕಾಜೋಲ್: ಆ ಒಂದು ದೃಶ್ಯಕ್ಕಾಗಿ ಕಟ್ಟುನಿಟ್ಟಿನ ನಿಯಮ ಬದಿಗಿಟ್ಟಿದ್ದೇಕೆ?

Latest5 hours ago

ಒಳ ಮೀಸಲಾತಿ ಹಂಚಿಕೆ: ಎಡಗೈ, ಬಲಗೈ ಜಾತಿಗಳಿಗೆ ತಲಾ ಶೇ. 5.25 ಸ್ಪೃಶ್ಯ ಜಾತಿಗೆ ಶೇ.4.5 ಹಂಚಿಕೆ; ಸಚಿವ ಸಂಪುಟ ಮಹತ್ವದ ನಿರ್ಧಾರ

Latest5 hours ago

ಬ್ಯಾಟಿಂಗ್‌ನಲ್ಲಿ ಮಾತ್ರವಲ್ಲ, ಬಿಸಿನೆಸ್‌ನಲ್ಲೂ ಸಚಿನ್ ಅವರದ್ದೇ ಸಿಕ್ಸರ್! ತೆಂಡೂಲ್ಕರ್‌ ಒಟ್ಟು ಆಸ್ತಿ ಎಷ್ಟು ಗೊತ್ತಾ?

Latest5 hours ago

ಇಂಜಿನಿಯರಿಂಗ್‌ ಶುಲ್ಕ: ಅಂತಿಮ ನಿರ್ಧಾರ ಮಾಡಿಲ್ಲ: ಸಚಿವ ಡಾ. ಎಂ.ಸಿ. ಸುಧಾಕರ್‌

Latest6 hours ago

ಶೀಘ್ರದಲ್ಲೇ ಪಶ್ಚಿಮ ಬೆಂಗಳೂರಿನಲ್ಲಿ ಜಯದೇವ 100 ಹಾಸಿಗೆ ಕಾರ್ಡಿಯಾಕ್ ಹಬ್: ಒಪ್ಪಂದಕ್ಕೆ ಸಹಿ

Latest6 hours ago

ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಆರೋಗ್ಯ ಸ್ಥಿತಿ ಗಂಭೀರ?; ಕೃತಕ ಕಾಲು,ಸೀಳು ತುಟಿ, ಒಡೆದ ಮುಖ…

bigbreaking6 hours ago

ಬಿಜೆಪಿಗೆ ಸೇರಿದ ಎಎಪಿ ದಿಗ್ಗಜ ರಾಘವ್ ಚಡ್ಡಾ: ಆಮ್ ಆದ್ಮಿ ಪಕ್ಷಕ್ಕೆ ಬಿಗ್ ಶಾಕ್! ಪಕ್ಷಾಂತರಕ್ಕೆ ಕೊಟ್ಟ ಕಾರಣವೇನು?

Latest6 hours ago

ಒಳಮೀಸಲಾತಿ ನೀಡುವ ಬದಲು ಗೊಂದಲ ಸೃಷ್ಟಿಸುತ್ತಿದ್ದೀರಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಸಂಸದ ಗೋವಿಂದ ಕಾರಜೋಳ ವಾಗ್ದಾಳಿ

Latest7 hours ago

ಬಿಜೆಪಿ ನಾಯಕನ ಮಗನಿಗೆ ಹೈಕೋರ್ಟ್ ಬಿಸಿ: ಮದುವೆಯಾಗದೆ ಮಗು ನೀಡಿದ ಲವರ್‌ಗೆ ಮಾಸಿಕ 75 ಸಾವಿರ ರೂ. ಜೀವನಾಂಶ ದಂಡ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ2 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌