ಚಾಮರಾಜನಗರ
Barachukki Falls | ಕದ್ದುಮುಚ್ಚಿ ಭರಚುಕ್ಕಿ ವೀಕ್ಷಣೆ, ಪ್ರವಾಸಿಗರಿಗೆ ಬಸ್ಕಿ ಶಿಕ್ಷೆ
ನಿರ್ಬಂಧದ ನಡುವೆಯೂ ಭರಚುಕ್ಕಿ ಜಲಪಾತ (Barachukki Falls) ವೀಕ್ಷಣೆಗೆ
ತೆರಳಿದ್ದ ಪ್ರವಾಸಿಗರಿಗೆ ಪೊಲೀಸರು ಸರಿಯಾದ ಬುದ್ಧಿ ಕಲಿಸಿದ್ದಾರೆ.
ಚಾಮರಾಜನಗರ: ಭರಚುಕ್ಕಿ ಜಲಪಾತ(Barachukki Falls)ವನ್ನು ಕದ್ದು ಮುಚ್ಚಿ ನೋಡಲು ಹೋಗಿದ್ದ ಯುವಕರಿಗೆ ಪೊಲೀಸ್ ಅಧಿಕಾರಿಗಳು ಬಸ್ಕಿ ಶಿಕ್ಷೆ ಕೊಟ್ಟಿದ್ದಾರೆ!
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಭರಚುಕ್ಕಿ ಜಲಪಾತ ಭೋರ್ಗರೆಯುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿತ್ತು. ನಿರ್ಬಂಧ ಇದ್ದರೂ ಯುವಕ, ಯುವತಿಯರ ಗುಂಪು ಪೊಲೀಸರ ಕಣ್ಣು ತಪ್ಪಿಸಿ ಜಲಪಾತ ತುದಿಗೆ ಹೋಗಿತ್ತು. ಅಲ್ಲಿ ನಿಂತು ಫೋಟೊ, ಸೆಲ್ಫಿ ತೆಗೆದುಕೊಳ್ಳುವ ದುಸ್ಸಾಹಸದಲ್ಲಿ ಈ ಗುಂಪು ತೊಡಗಿತ್ತು. ಇವರ ಹುಚ್ಚಾಟ ಮಿತಿ ಮೀರಿದಾಗ ಅದು ಪೊಲೀಸರ ಗಮನಕ್ಕೆ ಬಂತು. ಯುವಕರಿಗೆ ಬಸ್ಕಿ ಹೊಡೆಸಿದ ಪೊಲೀಸರು, ಮತ್ತೊಮ್ಮೆ ಕದ್ದು ಮುಚ್ಚಿ ಇಲ್ಲಿಗೆ ಬರದಂತೆ ಬುದ್ಧಿವಾದ ಹೇಳಿ ಕಳಿಸಿದರು.
ಇದನ್ನೂ ಓದಿ | ಕಾವೇರಿ ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನ ರಕ್ಷಣೆ
ಇದನ್ನೂ ಓದಿ | ಕೆಆರ್‌ಎಸ್ ಭರ್ತಿಗೆ ಒಂದೇ ಅಡಿ ಬಾಕಿ; ಕಾವೇರಿ ನದಿ ಪಾತ್ರದ ಜನರಿಗೆ ಪ್ರವಾಹ ಭೀತಿ
ಉಡುಪಿ
Weather Report: ಉತ್ತರ ಒಳನಾಡಿನಲ್ಲಿ ವರುಣನಿಗೆ ವಿರಾಮ; ಕರಾವಳಿ, ದಕ್ಷಿಣ ಒಳನಾಡಲ್ಲಿ ಮುಂದುವರಿದ ಮಳೆ
Weather Report: ರಾಜ್ಯದ ಹಲವೆಡೆ ಇನ್ನೆರಡು ದಿನಗಳು ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ (Rain alert) ನೀಡಿದೆ. ಉತ್ತರ ಒಳನಾಡಲ್ಲಿ ವರುಣ ದುರ್ಬಲಗೊಂಡಿದ್ದರೆ, ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಮಳೆಯ ಅಬ್ಬರ ಮುಂದುವರಿದಿದೆ.
ಬೆಂಗಳೂರು: ಮುಂದಿನ 24 ಗಂಟೆಗಳಲ್ಲಿ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ (Rain news) ಸಾಧ್ಯತೆ ಇದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿಯಲ್ಲಿ ಭಾರಿ ಮಳೆಯಾಗುವ (Weather report) ಸಾಧ್ಯತೆ ಇದೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ರಾಮನಗರ, ಮಂಡ್ಯ ಸೇರಿದಂತೆ ಚಾಮರಾಜನಗರದಲ್ಲೂ ಮಳೆಯ ಅಬ್ಬರ ಇರಲಿದೆ. ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಕೊಡಗು ಸೇರಿದಂತೆ ಕೋಲಾರದಲ್ಲೂ ವ್ಯಾಪಕ ಮಳೆಯಾಗಲಿದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ಅಥವಾ ರಾತ್ರಿಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 32 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಗುಡುಗು ಮುನ್ನೆಚ್ಚರಿಕೆ
ಮುಂದಿನ 24 ಗಂಟೆಯಲ್ಲಿ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಬಿರುಗಾಳಿಸಹಿತ ಗುಡುಗು ಮಿಂಚಿನ ಸಾಧ್ಯತೆ ಇದೆ. ಗಾಳಿಯ ವೇಗವು ಗಂಟೆಗೆ 30 ರಿಂದ 40 ಕಿ.ಮೀ. ಇರುವ ಸಾಧ್ಯತೆ ಇದೆ. ಮಳೆ ನಡುವೆಯು ಗರಿಷ್ಠ ಉಷ್ಣಾಂಶವು ರಾಜ್ಯದ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.
ಇದನ್ನೂ ಓದಿ: Cooker Blast: ರಾಮನಗರದಲ್ಲಿ ಎಲೆಕ್ಷನ್ ಪ್ರಚಾರದ ವೇಳೆ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ
ರಾಯಚೂರಿನಲ್ಲಿ ತಾಪಮಾನ ಏರಿಕೆ; ರಾಜ್ಯಾದ್ಯಂತ ಮಳೆ ಅಬ್ಬರ
ರಾಜ್ಯದಲ್ಲಿ ಗುರುವಾರ ಮಳೆಯಾಗಿದ್ದು, ಇದರ ನಡುವೆಯೂ ರಾಯಚೂರಿನಲ್ಲಿ ಗರಿಷ್ಠ ಉಷ್ಣಾಂಶ 39.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ದಕ್ಷಿಣ ಕನ್ನಡದ ಸುಳ್ಯದಲ್ಲಿ 5, ಕೊಳ್ಳೇಗಾಲ, ಕೊಣನೂರು, ಹೊಸಪೇಟೆಯಲ್ಲಿ ತಲಾ 4 ಸೆಂ.ಮೀ ಮಳೆಯಾಗಿದೆ. ಸುಬ್ರಹ್ಮಣ್ಯ, ನಾಪೋಕ್ಲು, ಮದ್ದೂರು, ತುಮಕೂರಲ್ಲಿ ತಲಾ 3, ಬುಕ್ಕಪಟ್ಟಣ, ಹೊಸದುರ್ಗದಲ್ಲಿ ತಲಾ 2ಸೆಂ.ಮೀ ಮಳೆಯಾಗಿದೆ. ಹುಣಸೂರು, ಮಧುಗಿರಿ, ಬೆಂಗಳೂರು ಎಚ್‌ಎಎಲ್ ವಿಮಾನ ನಿಲ್ದಾಣ, ಚಿಕ್ಕಮಗಳೂರು, ಕೊಟ್ಟಿಗೆಹಾರ , ಚಂದೂರಾಯನಹಳ್ಳಿ ತಲಾ 1 ಸೆಂ.ಮೀ ಮಳೆಯಾಗಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಉಡುಪಿ
Weather Report: ಮುಂದುವರಿಯಲಿದೆ ವರುರ್ಣಾಭಟ, ಇರಲಿ ಎಚ್ಚರ; ನಾಲ್ಕು ಜಿಲ್ಲೆಗಳಲ್ಲಿ ಭಾರಿ ಮಳೆ
Weather Report: ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಬಿರುಗಾಳಿ ಸಹಿತ ಗುಡುಗು, ಮಿಂಚಿನ ಮಳೆಯಾಗುವ (weather Update) ಸಾಧ್ಯತೆ ಇದೆ. ಯಾವ್ಯಾವ ಜಿಲ್ಲೆಗಳಲ್ಲಿ ಮಳೆಯ ಅಬ್ಬರ (rain news) ಇರಲಿದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ.
ಬೆಂಗಳೂರು: ರಾಜ್ಯಾದ್ಯಂತ ಇನ್ನೆರಡು ದಿನ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ (Weather Report) ಇಲಾಖೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ (Weather Update) ಸಾಧ್ಯತೆ ಇದೆ.
ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉಳಿದಂತೆ ಬೆಳಗಾವಿ ಮತ್ತು ಧಾರವಾಡ, ಚಾಮರಾಜನಗರ, ಮೈಸೂರು, ರಾಮನಗರ ಸೇರಿದಂತೆ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಗರಿಷ್ಠ ಉಷ್ಣಾಂಶದ ಮುನ್ಸೂಚನೆ
ಮುಂದಿನ 48 ಗಂಟೆಯಲ್ಲಿ ಗರಿಷ್ಠ ಉಷ್ಣಾಂಶವು ಕರಾವಳಿಯ ಕೆಲವು ಕಡೆಗಳಲ್ಲಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. ಇತ್ತ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯೊಂದಿಗೆ ಗುಡುಗು ಮಿಂಚಿನ ಸಾಧ್ಯತೆ ಇದೆ.
ಬಿರುಗಾಳಿ ಸಹಿತ ಭಾರಿ ಮಳೆ ಎಚ್ಚರಿಕೆ
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ಅಥವಾ ರಾತ್ರಿಯ ವೇಳೆಗೆ ಬಿರುಗಾಳಿ ಸಹಿತ ಗುಡುಗು, ಮಿಂಚಿನ ಮಳೆಯಾಗುವ ಸಾಧ್ಯತೆ ಇದೆ. ಗಾಳಿಯ ವೇಗವು ಗಂಟೆಗೆ 30 ರಿಂದ 40 ಕಿ.ಮೀ ಇರಲಿದೆ. ಗರಿಷ್ಠ ಉಷ್ಣಾಂಶ 32 ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇದನ್ನೂ ಓದಿ: Road Accident: ಅಪರಿಚಿತ ವಾಹನ ಡಿಕ್ಕಿಯಾಗಿ ವೃದ್ಧೆ ಸಾವು; ಭೀಕರ ಅಪಘಾತದಲ್ಲಿ ಚಾಲಕ ದುರ್ಮರಣ
ರಾಯಚೂರಿನಲ್ಲಿ ಗರಿಷ್ಠ ಉಷ್ಣಾಂಶ ದಾಖಲು
ರಾಜ್ಯದಲ್ಲಿ ಬುಧವಾರ ಗರಿಷ್ಠ ಉಷ್ಣಾಂಶ 39.8 ಡಿಗ್ರಿ ಸೆಲ್ಸಿಯಸ್ ರಾಯಚೂರಿನಲ್ಲಿ ದಾಖಲಾಗಿದೆ. ಚಿತ್ರದುರ್ಗದಲ್ಲಿ 7 ಸೆಂ.ಮೀ, ನಾಪೋಕ್ಲು 6 ಮಳೆಯಾಗಿದೆ. ರಾಣಿಬೆನ್ನೂರು, ರಾಯಲಪಾಡು, ನಾಯಕನಹಟ್ಟಿ ತಲಾ 3 ಸೆಂ.ಮೀ ಹಾಗೂ ಸೇಡಂ, ಸರಗೂರು, ಚಿತ್ರದುರ್ಗದಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ. ಮಂಗಳೂರು, ಮಂಗಳೂರು ವಿಮಾನ ನಿಲ್ದಾಣ, ಕುಮಟಾ, ನರಗುಂದ, ಕುಷ್ಟಗಿ, ತಾಳಿಕೋಟೆ, ಬೆಂಗಳೂರು ಕೆಐಎಎಲ್, ಹೊಸಕೋಟೆ, ಚನ್ನಗಿರಿ, ಹಿರಿಯೂರು ಹಾಗೂ ಚಿಂತಾಮಣಿ ಪಿಟಿಒ ತಲಾ 1 ಸೆಂ.ಮೀ ಮಳೆಯಾಗಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಕರ್ನಾಟಕ
Weather Report: ರಾಜ್ಯಾದ್ಯಂತ ಮಳೆ ಭರ್ಜರಿ; ಇನ್ನೆರಡು ದಿನ ತಪ್ಪದ ವರುಣನ ಕಿರಿಕಿರಿ
Rain news: ರಾಜ್ಯದಲ್ಲಿ ಮೇ 24, 25ರಂದು ಬಿರುಗಾಳಿ ಸಹಿತ ಗುಡುಗು, ಮಿಂಚಿನ ಮಳೆಯಾಗುವ (Weather report) ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಯಾವ್ಯಾವ ಜಿಲ್ಲೆಗಳಿಗೆ ಅಲರ್ಟ್ ಘೋಷಿಸಲಾಗಿದೆ (Rain alert) ಇಲ್ಲಿದೆ ನೋಡಿ ಮಾಹಿತಿ.
ಬೆಂಗಳೂರು: ರಾಜ್ಯಾದ್ಯಂತ ಮುಂದಿನ 48 ಗಂಟೆಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರು (Bangalore Rain) ಸೇರಿದಂತೆ ಕರಾವಳಿಯಲ್ಲಿ ಮಳೆ ರಗಳೆ (Weather report) ಮುಂದುವರಿಯಲಿದೆ. ಇನ್ನೆರಡು ದಿನ ಮಳೆ ಆರ್ಭಟ ಇರಲಿದ್ದು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ರಾಮನಗರ, ಮಂಡ್ಯ ಹಾಗೂ ಚಾಮರಾಜನಗರದಲ್ಲಿ ವರುಣ ಅಬ್ಬರಿಸಲಿದ್ದಾನೆ.
ಶಿವಮೊಗ್ಗ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು ಭಾಗದಲ್ಲೂ ವ್ಯಾಪಕ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ ಮತ್ತು ಹಾಸನ, ಕೊಡಗು, ಕೋಲಾರ, ತುಮಕೂರು, ಕಲಬುರಗಿ ಸೇರಿದಂತೆ ಉತ್ತರ ಕನ್ನಡದಲ್ಲಿ ಧಾರಾಕಾರ ಮಳೆಯಾಗಲಿದೆ.
50 ಕಿ.ಮೀ ವೇಗದಲ್ಲಿ ಬೀಸಲಿರುವ ಗಾಳಿ
ರಾಜ್ಯಾದ್ಯಂತ ಬಿರುಗಾಳಿ ಸಹಿತ ಗುಡುಗು ಮಿಂಚಿನ ಮಳೆಯಾಗುವ ಸಾಧ್ಯತೆ ಇದೆ. ಈ ವೇಳೆ ಗಾಳಿ ವೇಗವು 40-50ಕಿ.ಮೀ ಇರಲಿದೆ. ಮಳೆ ನಡುವೆಯೂ ಗರಿಷ್ಠ ಉಷ್ಣಾಂಶವು ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. ಬೆಂಗಳೂರಲ್ಲಿ ಸಾಮಾನ್ಯವಾಗಿ ಮುಂಜಾನೆ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ವೇಳೆಗೆ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 33 ಹಾಗೂ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇದನ್ನೂ ಓದಿ: Rain News: ಶುರುವಾಗಿದೆ ಮಳೆ ಅವಘಡ, ವರುಣಾರ್ಭಟಕ್ಕೆ ಎಲ್ಲೆಡೆ ಗಡಗಡ; ಗಾಳಿ-ಮಳೆಗೆ ಕುಸಿದ ಮನೆಗಳು
ವಿಜಯಪುರದಲ್ಲಿ ಗರಿಷ್ಠ ಉಷ್ಣಾಂಶ ದಾಖಲು
ಸೋಮವಾರ ಗರಿಷ್ಠ ಉಷ್ಣಾಂಶ 40.2 ಡಿಗ್ರಿ ಸೆಲ್ಸಿಯಸ್ ವಿಜಯಪುರದಲ್ಲಿ ದಾಖಲಾಗಿದೆ. ಬೆಳಗಾವಿಯ ಕಣಬರ್ಗಿ, ಮಂಡ್ಯದ ಬೆಳ್ಳೂರಲ್ಲಿ ತಲಾ 6 ಸೆಂ.ಮೀ ಮಳೆಯಾಗಿದೆ. ಉತ್ತರ ಕನ್ನಡ, ಧಾರವಾಡದ ಅಣ್ಣಿಗೆರೆಯಲ್ಲಿ ತಲಾ 5 ಸೆಂ.ಮೀ ಹಾಗೂ ಕುಂದಗೋಳದಲ್ಲಿ 4 ಸೆಂ.ಮೀ ಮಳೆಯಾಗಿರುವ ವರದಿ ಆಗಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆ ವರುಣ ಅಬ್ಬರಿಸಿದ್ದಾನೆ.
ಸಿಎಂಗೆ ಶಾಸಕ ಸುರೇಶ್ ಕುಮಾರ್ ಪತ್ರ
ನಗರದ ಎಲ್ಲೆಡೆ ಶಿಥಿಲವಾಗಿರುವ ಮರಗಳು ಮತ್ತು ರೆಂಬೆಗಳಿಂದ ಆಗುತ್ತಿರುವ ಹಾನಿ ತಡೆಯುವಂತೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರಿಗೆ ಶಾಸಕ ಸುರೇಶ್ ಕುಮಾರ್ ಪತ್ರ ಬರೆದಿದ್ದಾರೆ. ಇತ್ತೀಚೆಗೆ ನಗರದಲ್ಲಿ ಭಾರಿ ಗಾಳಿಯೊಂದಿಗೆ ಮಳೆ ಬಂದಾಗ ಅನೇಕ ಮರಗಳು ಮತ್ತು ದೊಡ್ಡ ರೆಂಬೆಗಳು ಕೆಳಕ್ಕೆ ಬೀಳುತ್ತಿದೆ. ಇದರಿಂದಾಗಿ ವ್ಯಕ್ತಿಗಳಿಗೆ ಮತ್ತು ವಾಹನಗಳಿಗೆ ಹಾನಿಯಾಗುತ್ತಿದೆ.
ಇದೀಗ ಮಳೆಗಾಲ ಶುರುವಾಗುತ್ತಿದ್ದು, ಇದರಿಂದ ಮರಗಳು ಇರುವ ರಸ್ತೆಗಳಲ್ಲಿ ಸಹಜವಾಗಿ ಆತಂಕ ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ಆದ್ಯತೆಯ ಮೇರೆಗೆ ಎಲ್ಲ ರಸ್ತೆಗಳಲ್ಲಿರುವ ಮರಗಳ ಪರಿಶೀಲನೆ ಮಾಡಿ, ಬಿದ್ದು ಹೋಗಬಹುದಾದ ಮರಗಳು ಮತ್ತು ಕೊಂಬೆಗಳನ್ನು ಪಟ್ಟಿ ಮಾಡಿ ಅವುಗಳನ್ನು ಕೂಡಲೇ ತೆರವುಗೊಳಿಸಬೇಕೆಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ಕುರಿತು ಅಗತ್ಯ ಕ್ರಮಕೈಗೊಳ್ಳಲು ವಿಶೇಷ ವ್ಯವಸ್ಥೆ ಯೋಜಿಸಲು ಬಿಬಿಎಂಪಿ ಮತ್ತು ಅಯುಕ್ತರಿಗೆ ಆದೇಶ ನೀಡಬೇಕೆಂದು ಕೋರಿದ್ದಾರೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಕರ್ನಾಟಕ
Rain News: ಬೆಂಗಳೂರಲ್ಲಿ ಸಂಜೆಗೆ ಮಳೆ ದಾಳಿ; ಚಾಮರಾಜನಗರದಲ್ಲಿ ಧರೆಗುರುಳಿದ ಬೃಹತ್ ಮರ
Bangalore Rain: ರಾಜಧಾನಿಯಲ್ಲಿ ಬೆಂಗಳೂರು ಸೇರಿದಂತೆ ಸೋಮವಾರ ವಿವಿಧೆಡೆ ಭಾರಿ ಮಳೆಯಾಗಿದೆ. ಗಾಳಿ ಮಳೆಗೆ ಹಲವು ಕಡೆ ಮರಗಳು ಧರೆಗೆ ಉರುಳಿವೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದವೆ. ಇತ್ತ ಚಾಮರಾಜನಗರದಲ್ಲಿ ಮಳೆಯು (Rain News) ಅವಾಂತರವನ್ನೇ ಸೃಷ್ಟಿಸಿದೆ.
ಬೆಂಗಳೂರು: ರಾಜಧಾನಿ ಬೆಂಗಳೂರಲ್ಲಿ ಸೋಮವಾರವೂ ವರುಣ (Bangalore Rain) ಅಬ್ಬರಿಸಿದ್ದಾನೆ. ಕಚೇರಿ ಮುಗಿಸಿ ಮನೆಗೆ ಸೇರಿಕೊಳ್ಳಬೇಕಾದವರು ರೋಡಿನಲ್ಲಿ ನಿಲ್ಲುವಂತಾಯ್ತು. ಧಾರಾಕಾರ ಮಳೆಯಿಂದಾಗಿ (Rain News) ಉಂಟಾದ ಟ್ರಾಫಿಕ್ ಜಾಮ್‌ನಿಂದಾಗಿ ಮಳೆಯಲ್ಲೇ ದ್ವಿಚಕ್ರ ವಾಹನ ಸವಾರರು ನೆನೆಯುವಂತಾದರೆ, ಇತ್ತ ಆಟೋ, ಓಲಾ ಉಬರ್ ಕ್ಯಾಬ್, ಕಾರುಗಳು, ಬಸ್ಸುಗಳು ನಿಂತಲ್ಲೇ ನಿಂತು ನಿಧಾನಗತಿಯಲ್ಲಿ ಸಂಚರಿಸುತ್ತಿದ್ದವು.
ಮೆಜೆಸ್ಟಿಕ್, ಯಶವಂತಪುರ, ಮಹಾಲಕ್ಷ್ಮಿ ಲೇಔಟ್, ರಾಜಾಜಿನಗರ ಸೇರಿದಂತೆ ಭಾಗಶಃ ಎಲ್ಲ ಭಾಗದಲ್ಲೂ ವ್ಯಾಪಕ ಮಳೆಯಾಗಿದೆ. ಮಳೆಯಿಂದ ವಾಹನ ಸವಾರರ ಪರದಾಟ ಒಂದು ಕಡೆಯಾದರೆ ಮತ್ತೊಂದು ಕಡೆ ದಾರಿಹೋಕರು ಪೆಟ್ರೋಲ್ ಬಂಕ್, ಅಂಗಡಿ ಮುಂಗಟ್ಟು, ಸ್ಕೈವಾಕ್ ಬಳಿ ಆಶ್ರಯ ಪಡೆದುಕೊಂಡರು.
ಬಿರುಗಾಳಿ ಸಹಿತ ಮಳೆಗೆ ಹಾರಿ ಹೋದ ಹಂಚು
ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಅಂಕಹಳ್ಳಿ ಹಾಗೂ ಬಾಚಹಳ್ಳಿ ಗ್ರಾಮದಲ್ಲಿ ಹಲವು ಮನೆಗಳಿಗೆ ಹಾನಿಯಾಗಿವೆ. ಮಳೆಗೆ ಮರವೊಂದು ಮನೆ ಮೇಲೆ ಬಿದ್ದಿದ್ದರೆ ಮತ್ತೊಂದು ಕಡೆ ಬಿರುಗಾಳಿಗೆ ಹಂಚುಗಳೆಲ್ಲವೂ ಹಾರಿ ಹೋಗಿವೆ.
ಚಲಿಸುತಿದ್ದ ಕೆಎಸ್‌ಆರ್‌ಟಿಸಿ ಬಸ್ ಹಿಂದೆ ಮುಂದೆ ಮರಗಳು ಧರೆಗುರಳಿವೆ. ಕೂದಲೆಳೆ ಅಂತರದಲ್ಲಿ ಬಸ್‌ನಲ್ಲಿದ್ದವರು ಪಾರಾಗಿದ್ದಾರೆ.
ಇದನ್ನೂ ಓದಿ: Bangalore Rain: ಬೆಂಗಳೂರಲ್ಲಿ ಅಸುರಕ್ಷಿತ ಅಂಡರ್‌ಪಾಸ್ ಬಂದ್; ಮಳೆಗಾಲ ಮುಗಿಯುವವರೆಗೆ ಕ್ರಮ
-
ಕರ್ನಾಟಕ22 hours ago
ವಿಸ್ತಾರ ಯುಗಾದಿ ಕಥಾ ಸ್ಪರ್ಧೆ ಬಹುಮಾನ: ಚಂದ್ರಶೇಖರ್ ಡಿ.ಆರ್ ಪ್ರಥಮ, ದಾದಾಪೀರ್ ಜೈಮನ್ ದ್ವಿತೀಯ, ಪೂರ್ಣಿಮಾ ಮಾಳಗಿಮನಿ ತೃತೀಯ
-
ಕರ್ನಾಟಕ21 hours ago
Karnataka Cabinet Expansion: ಪ್ರಮಾಣ ವಚನ ಸಮಾರಂಭ ಬಹಿಷ್ಕಾರ; ಊರಿಗೆ ಹೊರಟ ಒಂದೇ ಜಿಲ್ಲೆಯ 5 ಶಾಸಕರು!
-
ಕಿರುತೆರೆ20 hours ago
Deepak Gowda: ‘ಶ್ರೀರಸ್ತು ಶುಭಮಸ್ತು’ಧಾರಾವಾಹಿಯಿಂದ ಹೊರನಡೆದ ದೀಪಕ್ ಗೌಡ; ಪಾತ್ರಕ್ಕೆ ಬಂದವರು ಕಿರುತೆರೆಗೆ ಹೊಸಬರಲ್ಲ!
-
ಕರ್ನಾಟಕ16 hours ago
Karnataka Cabinet: ತಾತನನ್ನು ಮಿನಿಸ್ಟರ್ ಮಾಡಿ ಪ್ಲೀಸ್: ರಾಹುಲ್ ಗಾಂಧಿಗೆ ಪತ್ರ ಬರೆದ ಟಿ.ಬಿ. ಜಯಚಂದ್ರ ಮೊಮ್ಮಗಳು
-
ದೇಶ4 hours ago
New Parliament Building: ಇಂದು ಹೊಸ ಸಂಸತ್ ಭವನ ಉದ್ಘಾಟನೆ; ಹೇಗೆ ನಡೆಯಲಿದೆ ಕಾರ್ಯಕ್ರಮ?
-
ಕ್ರಿಕೆಟ್11 hours ago
World Cup 2023 : ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್ ವೇಳೆ ವಿಶ್ವಕಪ್ ವೇಳಾಪಟ್ಟಿ ಪ್ರಕಟ
-
ಕರ್ನಾಟಕ12 hours ago
Tumkur News: ಹೆಜ್ಜೇನು ದಾಳಿ; ಮೂವರು ಮಕ್ಕಳು ಸೇರಿ 9 ಮಂದಿಗೆ ಗಾಯ
-
EXPLAINER2 hours ago
ವಿಸ್ತಾರ Explainer: ಹೊಸ ಸಂಸತ್ ಭವನದಲ್ಲಿ ಸ್ಥಾಪಿತಗೊಂಡ ತಮಿಳುನಾಡಿನ ಚಿನ್ನದ ಸೆಂಗೋಲ್; ಏನಿದರ ಮಹತ್ವ?