Site icon Vistara News

CM Siddaramaiah: CWRC ಆದೇಶಕ್ಕೆ ಆಕ್ಷೇಪಣೆ ಸಲ್ಲಿಸಲು ನಿರ್ಧಾರ ಎಂದ ಸಿದ್ದರಾಮಯ್ಯ

CM siddaramaiah at Chamarajanagar

ಚಾಮರಾಜನಗರ (ಹನೂರು): ಕಾವೇರಿ ನೀರು ನಿಯಂತ್ರಣ ಸಮಿತಿಯು (Cauvery water regulation Committee) ತಮಿಳುನಾಡಿಗೆ ಪ್ರತಿದಿನ 3000 ಕ್ಯೂಸೆಕ್ ನೀರನ್ನು (3000 Cusec water) ಹರಿಸಲು ಆದೇಶಿಸಿದೆ. ಈ ಬಗ್ಗೆ ಕಾನೂನು ತಂಡದೊಂದಿಗೆ ಚರ್ಚಿಸಿದ್ದು ಇದಕ್ಕೆ ಆಕ್ಷೇಪಣೆ ಸಲ್ಲಿಸಲು ಕಾನೂನು ತಂಡ ಸಲಹೆ ನೀಡಿದೆ. ನೀರು ಬಿಡಲು ನಮ್ಮ ಬಳಿ ನೀರಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು. ಅವರು ಶ್ರೀ ಮಲೈ ಮಹದೇಶ್ವರ ಬೆಟ್ಟದ (Male mahadeshwara betta) ಬಳಿ ಮಾಧ್ಯಮದವರಿಗೆ ಬುಧವಾರ ಪ್ರತಿಕ್ರಿಯೆ ನೀಡಿದರು.

ಕಾವೇರಿ ನೀರು ನಿಯಂತ್ರಣ ಸಮಿತಿಯು ಮಂಗಳವಾರ ನೀಡಿದ ಆದೇಶದಲ್ಲಿ ಸೆ. 28ರಿಂದ ಅಕ್ಟೋಬರ್‌ 15ರವರೆಗೆ ಪ್ರತಿದಿನವೂ 3000 ಕ್ಯೂಸೆಕ್‌ ನೀರು ಬಿಡಲು ಆದೇಶ ನೀಡಿತ್ತು. ಇದನ್ನು ಪ್ರಾಧಿಕಾರದ ಮುಂದೆ ಪ್ರಶ್ನಿಸುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ, ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನೆ ಮಾಡಬೇಕು ಎಂದು ಪ್ರತಿಪಕ್ಷಗಳು ಆಗ್ರಹಿಸಿವೆ.

ಸಿಎಂ ಮತ್ತು ಡಿಸಿಎಂ ಇಬ್ಬರೂ ನಮ್ಮಲ್ಲಿ ನೀರು ಇಲ್ಲ ಎಂದು ಹೇಳುತ್ತಲೇ ಪ್ರಾಧಿಕಾರ ಹೇಳಿದಷ್ಟು ನೀರು ಬಿಡುಗಡೆ ಮಾಡಿದ್ದೇ ಸಮಿತಿಗೆ ಸರಾಗ ಆದೇಶ ನೀಡಲು ಕಾರಣವಾಗಿದೆ ಎಂದು ಆರೋಪಿಸಲಾಗಿದೆ. ಇದೀಗ ಸೆ. 29ರಂದು ಇದರ ವಿರುದ್ಧ ರಾಜ್ಯವ್ಯಾಪಿ ಬಂದ್‌ಗೆ ಕರೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಹೇಳಿಕೆ ಮಹತ್ವ ಪಡೆದುಕೊಂಡಿದೆ.

ಮಳೆಗಾಗಿ ಮಹದೇಶ್ವರನಲ್ಲಿ ಪ್ರಾರ್ಥನೆ

ಮಳೆ ಕೈಕೊಟ್ಟು 195 ತಾಲ್ಲೂಕು ಗಳನ್ನು ಬರಪೀಡಿತ ಎಂದು ಘೋಷಿಸಿದ್ದು, ಮಹದೇಶ್ವರನಲ್ಲಿ ಮಳೆಗಾಗಿ, ರಾಜ್ಯದ ಜನರಿಗೆ, ರೈತರಿಗೆ ಸೌಖ್ಯವಾಗಲಿ ಎಂದು ಪ್ರಾರ್ಥಿಸಿರುವುದಾಗಿ ಸಿದ್ದರಾಮಯ್ಯ ತಿಳಿಸಿದರು.

ಮೂಢನಂಬಿಕೆ, ಮೌಢ್ಯ, ಕಂದಾಚಾರದಲ್ಲಿ ನಂಬಿಕೆ ಇಲ್ಲ

ಮೂಢನಂಬಿಕೆ, ಮೌಢ್ಯ, ಕಂದಾಚಾರದಲ್ಲಿ ನಂಬಿಕೆ ಇಲ್ಲ. ಅದಕ್ಕಾಗಿಯೇ ಹಿಂದೆ ಮುಖ್ಯಮಂತ್ರಿ ಯಾದ ಕೂಡಲೇ ಚಾಮರಾಜನಗರಕ್ಕೆ ಭೇಟಿ ನೀಡಿದೆ. ಸುಮಾರು 12 ಬಾರಿ ಭೇಟಿ ನೀಡಿದ್ದು, 5 ವರ್ಷ ಗಟ್ಟಿಯಾಗಿ ಇದ್ದೆ. ಚಾಮರಾಜನಗರ ಕ್ಕೆ ಭೇಟಿ ನೀಡಿದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಮೌಢ್ಯ ಈಗ ಹೋಗಿದೆ ಎಂದರು.

ಬಂದ್‌ನಿಂದ ಯಾರಿಗೂ ತೊಂದರೆಯಾಗಬಾರದು

ಸೆಪ್ಟೆಂಬರ್ 29 ರಂದು ಕರ್ನಾಟಕ ಬಂದ್ ಗೆ ಕರೆನೀಡಿರುವ ಬಗ್ಗೆ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ಗೆ ಅವಕಾಶವಿದೆ. ಆದರೆ ಇತರರಿಗೆ ತೊಂದರೆಯಾಗಬಾರದು ಎಂದು ಸುಪ್ರೀಂಕೋರ್ಟ್ ಆದೇಶಿಸಿದೆ. ನಾವು ಈ ಆದೇಶ ಗಮನದಲ್ಲಿಟ್ಟುಕೊಂಡು ಕಾರ್ಯನಿರ್ವಹಿಸುತ್ತೇವೆ ಎಂದರು.

ಇದನ್ನೂ ಓದಿ: CM Siddaramaiah: ಕೃಷಿಗೆ ಸಾಲ ಮಾಡಿ ಮದುವೆ ಛಮಾಡುವುದನ್ನು ನಿಲ್ಲಿಸಿ: ಸಿಎಂ ಸಿದ್ದರಾಮಯ್ಯ ಮನವಿ

Exit mobile version