ಚಾಮರಾಜನಗರ: ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೊಳ್ಳೇಗಾಲ ವಿಧಾನಸಭೆ ಕ್ಷೇತ್ರದ ಬಿಜೆಪಿ ಶಾಸಕ ಎನ್.ಮಹೇಶ್ ಅವರು ಮೈಸೂರಿನಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. (N.Mahesh) ವೈದ್ಯರು, ಶಾಸಕರಿಗೆ ಭಾನುವಾರ ಆ್ಯಂಜಿಯೋಗ್ರಾಮ್ ಮಾಡಿದ್ದಾರೆ.
ಸದ್ಯ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಯಾವುದೇ ಅಪಾಯ ಇಲ್ಲ. ಇನ್ನು ಒಂದು ದಿನ ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯುವುದು ಸೂಕ್ತ ಎಂದು ವೈದ್ಯರು ಸಲಹೆ ನೀಡಿದ್ದಾರೆ. ಶನಿವಾರ ರಾತ್ರಿ ಊಟ ಮಾಡಿದ ನಂತರ ಸ್ವಲ್ಪ ಎದೆ ಉರಿಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಎನ್. ಮಹೇಶ್ ಅವರು ಆಸ್ಪತ್ರೆಗೆ ದಾಖಲಾಗಿದ್ದರು.