ಹೆದ್ದಾರಿ 766: ಸಾವಿಗೆ ರಹದಾರಿ ನೀಡುತ್ತಿರುವ ಗುಂಡ್ಲುಪೇಟೆ ರಸ್ತೆ - Vistara News

ಚಾಮರಾಜನಗರ

ಹೆದ್ದಾರಿ 766: ಸಾವಿಗೆ ರಹದಾರಿ ನೀಡುತ್ತಿರುವ ಗುಂಡ್ಲುಪೇಟೆ ರಸ್ತೆ

ಬೆಂಗಳೂರು-ನೀಲಗಿರಿ ರಾಷ್ಟ್ರೀಯ ಹೆದ್ದಾರಿ 766. ನೆರೆ ರಾಜ್ಯ ಕೇರಳಕ್ಕೂ ಕೂಡ ಇದೇ ಹೆದ್ದಾರಿಯಲ್ಲಿ ಸಂಚರಿಸಬೇಕು. ರಾತ್ರಿ 9ರ ನಂತರ ವಾಹನ ಸಂಚಾರ ನಿಷೇಧಿಸಿರುವುದೂ ಅಪಘಾತಕ್ಕೆ ಕಾರಣಗಳಲ್ಲೊಂದು.

VISTARANEWS.COM


on

ರಾಷ್ಟ್ರೀಯ ಹೆದ್ದಾರಿ
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಾಮರಾಜನಗರ: ಹೆದ್ದಾರಿ ಇರುವುದು ಸುಗಮ ಸಂಚಾರಕ್ಕಾಗಿ. ಆದರೆ ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆಯ ಮೂಲಕ ತಮಿಳುನಾಡು ಹಾಗೂ ಕೇರಳಕ್ಕೆ ರಾಷ್ಟ್ರೀಯ ಹೆದ್ದಾರಿ ಹಾದು ಹೋಗಿದೆ. ಈ ರಸ್ತೆಯಲ್ಲಿ ಕಳೆದ 5 ತಿಂಗಳ ಅವಧಿಯಲ್ಲಿ 50ಕ್ಕೂ ಹೆಚ್ಚು ಅಪಘಾತ ಸಂಭವಿಸಿ 17ಕ್ಕೂ ಜನರು ಸಾವನ್ನಪ್ಪಿದ್ದಾರೆ. ಇದು ಸವಾರರ ಪಾಲಿಗೆ ಸಾವಿನ ಹೆದ್ದಾರಿಯಾಗಿದೆ.

ಬೆಂಗಳೂರು-ನೀಲಗಿರಿ ರಾಷ್ಟ್ರೀಯ ಹೆದ್ದಾರಿ 766. ನೆರೆ ರಾಜ್ಯ ಕೇರಳಕ್ಕೂ ಇದೇ ಹೆದ್ದಾರಿಯಲ್ಲಿ ಸಂಚರಿಸಬೇಕು. ನಿರಂತರ ಅಪಘಾತಕ್ಕೆ ಕಾರಣ ಹುಡುಕಲು ಹೊರಟರೆ ಹೆದ್ದಾರಿ ಕಾಮಗಾರಿ ಅವೈಜ್ಞಾನಿಕವಾಗಿದೆ ಎಂಬುದು ಸ್ಪಷ್ಟವಾಗಿ ಕಾಣುತ್ತದೆ. ಜತೆಗೆ ವಾಹನ ಸವಾರರ ಬೇಜವಾಬ್ದಾರಿಯೂ ಇದೆ.

ರಾತ್ರಿ ವೇಳೆ ಹೆಚ್ಚು ಅಪಘಾತ

ಬಂಡೀಪುರ ರಾಷ್ಟ್ರೀಯ ಉದ್ಯಾನದಿಂದ ತಮಿಳುನಾಡಿಗೆ ತೆರಳಲು ವಾಹನ ಸವಾರರು ಅವಸರಪಡುತ್ತಾರೆ. ರಾತ್ರಿ 9ರ ನಂತರ ವಾಹನ ಸಂಚಾರ ನಿಷೇಧಿಸಿರುವುದೇ ಇದಕ್ಕೆ ಮುಖ್ಯ ಕಾರಣವಾಗಿದೆ. ಹಿರೀಕಾಟಿ, ಬೇಗೂರು, ರಾಘವಾಪುರ, ಬೆಂಡರಹಳ್ಳಿ, ಗರಗನಹಳ್ಳಿ, ಬೆಂಡವಾಡಿ, ಹಿರೇಪುರ ವ್ಯಾಪ್ತಿಯಲ್ಲಿ ಹೆಚ್ಚು ಅಪಘಾತಗಳಾಗುತ್ತಿವೆ.

ಗ್ರಾಮೀಣ ಭಾಗದಿಂದ ರಾಷ್ಟ್ರೀಯ ಹೆದ್ದಾರಿ ತಲುಪುವ ಬೈಕ್, ಕಾರು ಚಾಲಕರಿಗೆ ಅನುಕೂಲವಾಗುವ ಉದ್ದೇಶದಿಂದ ಯಾವುದೇ ಸೂಚನಾ ಫಲಕ, ಹಂಪ್ಸ್ ನಿರ್ಮಿಸಿಲ್ಲ. ಇದರಲ್ಲಿ ಪೊಲೀಸ್ ಇಲಾಖೆಯ ವೈಫಲ್ಯವೂ ಎದ್ದು ಕಾಣುತ್ತಿದೆ. ರಸ್ತೆ ಸುರಕ್ಷತಾ ಸಪ್ತಾಹ ಎಂಬ ಅಭಿಯಾನವನ್ನು ಸಮರ್ಪಕವಾಗಿ ಮಾಡುವಲ್ಲಿ ಇಲಾಖೆ ವಿಫಲವಾಗಿದೆ.

ಈ ಬಗ್ಗೆ ಸ್ಥಳೀಯ ಶಾಸಕ ನಿರಂಜನ ಕುಮಾರ್‌ ಮಾತನಾಡಿ, ಎರಡು ರಾಜ್ಯಗಳಿಗೆ ಅಪಾರ ಸಂಖ್ಯೆಯಲ್ಲಿ ವಾಹನ ಸಂಚಾರವಾಗುತ್ತಿವೆ. ಅಪಘಾತ ಸಂಖ್ಯೆ ಕೂಡ ಹೆಚ್ಚಾಗಿದೆ. ಪೊಲೀಸರು ಸ್ವಲ್ಪ ಎಚ್ಚರಿಕೆ ವಹಿಸಿ ಕೆಲಸ ಮಾಡಬೇಕಿದೆ. ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕೆ ಈಗಾಗಲೆ ಪ್ರಸ್ತಾವನೆ ಕೂಡ ಸಲ್ಲಿಸಲಾಗಿದೆ. ಹೆದ್ದಾರಿ ಅಗಲೀಕರಣವಾದರೆ ಈ ಸಮಸ್ಯೆಯೆಲ್ಲ ಪರಿಹಾರವಾಗುತ್ತದೆ ಎಂದಿದ್ದಾರೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಕಾಣಿಸಬೇಕಿದೆ. ಅಪಘಾತಗಳಲ್ಲಿ ಮೃತಪಟ್ಟಿರುವ ಎಲ್ಲರೂ ಯುವಕರೇ ಎಂಬುದು ಕಳವಳಕಾರಿ ವಿಚಾರ. ಸಂಬಂಧಪಟ್ಟವರು ಸಮಸ್ಯೆಯನ್ನು ಇನ್ನಾದರೂ ಗಂಭೀರವಾಗಿ ಪರಿಗಣಿಸಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಆಗಬೇಕಿರುವ ಕಾಮಗಾರಿ ಕೈಗೆತ್ತಿಕೊಳ್ಳಬೇಕಿದೆ.

ಇದನ್ನೂ ಓದಿ| ಥೈಲ್ಯಾಂಡ್‌ ಮನೆಗಳಲ್ಲಿ ಗಾಂಜಾ ಉದ್ಯಾನ! 10 ಲಕ್ಷ ಸಸಿ ಉಚಿತ ವಿತರಣೆಗೆ ನಿರ್ಧಾರ! ಸ್ವಲ್ಪ ಹೆಚ್ಚು-ಕಡಿಮೆಯಾದ್ರೂ ದಂಡ, ಜೈಲು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Karnataka Rain : ಬಿರುಗಾಳಿ ಸಹಿತ ಭಾರಿ ಮಳೆಗೆ ಆಕಾಶದೆತ್ತರಕ್ಕೆ ಅಂಗಡಿಯ ತಗಡು ಹಾರಿ ಹೋಗಿದೆ. ಮತ್ತೊಂದು ಕಡೆ ರಸ್ತೆಗೆ ಮರವೊಂದು ಉರುಳಿದ ಪರಿಣಾಮ ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್‌ ಆಗಿದೆ.

VISTARANEWS.COM


on

By

karnataka Rain
Koo

ಚಿಕ್ಕಮಗಳೂರು/ಮಂಗಳೂರು: ಚಿಕ್ಕಮಗಳೂರಿನಲ್ಲಿ ಗಾಳಿ-ಮಳೆ ಅಬ್ಬರಕ್ಕೆ (Karnataka Rain) ಬೃಹತ್‌ ಮರವೊಂದು ರಸ್ತೆಗುರುಳಿದೆ. ಪರಿಣಾಮ ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್ ಆಗಿದೆ. ಎನ್ಆರ್‌ ಪುರ ತಾಲೂಕಿನಿಂದ ಕಳಸ ತಾಲೂಕಿಗೆ ಈ ಮಾರ್ಗ ಸಂಪರ್ಕ ಕಲ್ಪಿಸಲಿದೆ. ಮರ ಬಿದ್ದ ಪರಿಣಾಮ ಶನಿವಾರ ಬೆಳ್ಳಂಬೆಳಗ್ಗೆಯೇ ಬಾಳೆಹೊನ್ನೂರು-ಕಳಸ ರಸ್ತೆ, ಹೊರನಾಡಿಗೆ ಹೋಗಿ-ಬರುವ ಮಾರ್ಗವೂ ಬಂದ್ ಆಗಿತ್ತು. ಸುಮಾರು ಒಂದು ಗಂಟೆ ಕಾಲ ಟ್ರಾಫಿಕ್ ಜಾಮ್‌ ಉಂಟಾಗಿದ್ದರಿಂದ ಸ್ಥಳೀಯರೇ ಮರ ತೆರವು ಮಾಡಿದರು.

ಚಾರ್ಮಾಡಿಯಲ್ಲಿ ಮತ್ತೆ ಆತಂಕ ಮೂಡಿಸಿದ ರಸ್ತೆ ಬಿರುಕು

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಹೆದ್ದಾರಿಯಲ್ಲಿ ಮತ್ತೆ ರಸ್ತೆ ಬಿರುಕು ಬಿಡುವ ಆತಂಕ ಹೆಚ್ಚಿದೆ. ರಸ್ತೆ ಬಿರುಕು ಕಾಣಿಸಿಕೊಳ್ಳದಂತೆ ಮರೆಮಾಚಲು ಅಧಿಕಾರಿಗಳ ಯತ್ನಿಸುತ್ತಿದ್ದಾರೆ. ಹೆದ್ದಾರಿಯ ಹಲವು ತಿರುವುಗಳಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಕಾಂಕ್ರೀಟ್ ಮೂಲಕ ತೇಪೆ ಹಚ್ಚುತ್ತಿದ್ದಾರೆ. ಕೆಲವೇ ದಿನಗಳ ಹಿಂದೆ ನಡೆದಿರುವ ಕೋಟಿ ವೆಚ್ಚದ ಕಾಮಗಾರಿಯು, ಮಳೆಯಿಂದ ಹಾನಿಯಾಗಿದೆ.

ಉಕ್ಕಿ ಹರಿದ ತುಂಗಾಭದ್ರಾ ನದಿ; ಅಂಗಡಿಗಳು ಮುಳುಗಡೆ

ಮಲೆನಾಡಿನಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ತುಂಗಾಭದ್ರಾ ನದಿ ಪಾತ್ರದಲ್ಲಿ ನೀರಿನ ಮಟ್ಟ ಹೆಚ್ಚಿದೆ. ದಾವಣಗೆರೆ ಜಿಲ್ಲೆಯ ಉಕ್ಕಡಗಾತ್ರಿ ಸಮೀಪ ತುಂಗಾಭದ್ರಾ ನದಿ ಉಕ್ಕಿ ಹರಿದಿದೆ. ಉಕ್ಕಡಗಾತ್ರಿ ಸಮೀಪದ ಸ್ನಾನಘಟ್ಟದವರೆಗು ನೀರು ನುಗ್ಗಿದ್ದು, ಹತ್ತಾರು ಪೂಜಾಸಾಮಾಗ್ರಿ ಅಂಗಡಿಗಳು ಮುಳುಗಡೆಯಾಗಿವೆ. ಉಕ್ಕಡಗಾತ್ರಿ ಆಗಮಿಸುವ ಭಕ್ತರಿಗೆ ದೇವಸ್ಥಾನದ ಟ್ರಸ್ಟ್‌ನಿಂದ ತುಂಗಾಭದ್ರಾ ನದಿ ಪಾತ್ರಕ್ಕೆ ಸ್ನಾನ ಸೇರಿದಂತೆ ಇತರೇ ಕಾರಣಗಳಿಗೆ ನೀರಿಗೆ ಇಳಿಯದಂತೆ ಸೂಚನೆ ನೀಡಿದೆ.

ಮಳೆಯಿಂದಾಗಿ ಸೋರುತ್ತಿರುವ ಸರ್ಕಾರಿ ಆಸ್ಪತ್ರೆ

ವಿಜಯನಗರ ಜಿಲ್ಲೆಯಲ್ಲಿ ರಾತ್ರಿಯಿಡಿ ಜಿಟಿ ಜಿಟಿ ಮಳೆಯಿಂದಾಗಿ ಸರ್ಕಾರಿ ಆಸ್ಪತ್ರೆ ರೋಗಿಗಳು ರಾತ್ರಿಯಿಡಿ ಜಾಗರಣೆ ಮಾಡಬೇಕಾಯಿತು. ಮಳೆಯಿಂದಾಗಿ ಕೊಟ್ಟೂರು ತಾಲೂಕಿನ ಸರ್ಕಾರಿ ಆಸ್ಪತ್ರೆ ಸೋರುತ್ತಿದೆ. ಜನ ಸ್ಪಂದನ ಕಾರ್ಯಕ್ರಮ ಮಾಡಿದ್ದ ಡಿಸಿ ದಿವಾಕರ್ ಆಸ್ಪತ್ರೆಗೆ ಭೇಟಿ ನೀಡಬಹುದು ಎಂದು ಸಿಬ್ಬಂದಿ ಸ್ವಚ್ಚತೆ ಮಾಡಿದ್ದರು. ಆದರೆ ರಾತ್ರಿಯಿಡಿ ಜಿಟಿಜಿಟಿ ಮಳೆಯಿಂದ ರೋಗಿಗಳು ಮಲಗುವ ಬೆಡ್ ಮೇಲೆ ನೀರು ಸೋರಿದೆ. ಇದರ ಮಧ್ಯೆ ರಾತ್ರಿಯಿಡೀ ಆಸ್ಪತ್ರೆಯಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡು ಪರದಾಡಬೇಕಾಯಿತು. ಆಸ್ಪತ್ರೆಯ ಶೌಚಾಲಯ ಕೂಡಾ ಬ್ಲಾಕ್ ಆಗಿದೆ ಎಂದು ಆಸ್ಪತ್ರೆ ಅವ್ಯವಸ್ಥೆ ಸರಿಪಡಿಸದ ಇಲಾಖೆಯ ವಿರುದ್ಧ ರೋಗಿಗಳು ಹಿಡಿಶಾಪ ಹಾಕಿದರು.

ಮೂರು ಸಂಪರ್ಕ ಸೇತುವೆಗಳು ಮುಳುಗಡೆ

ಮಹಾರಾಷ್ಟ್ರ ಮತ್ತು ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆ ಮುಂದುವರಿದಿದ್ದು, ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯ ಮೂರು ಸಂಪರ್ಕ ಸೇತುವೆಗಳು ಮುಳುಗಡೆಯಾಗಿವೆ. ಕೃಷ್ಣಾ ವೇದಗಂಗಾ ಹಾಗೂ ದೂದಗಂಗಾ ನದಿ ಮೈದುಂಬಿ ಹರಿಯುತ್ತಿದ್ದು, ನಿಪ್ಪಾಣಿ ತಾಲೂಕಿನ ಕುನ್ನೂರ-ಬಾರವಾಡ ಸಂಪರ್ಕಿಸುವ ಸೇತುವೆ ಜಲಾವೃತಗೊಂಡಿದೆ. ವೇದಗಂಗಾ ನದಿಗೆ ಅಡ್ಡಲಾಗಿ ಇರುವ ಕೆಳ ಹಂತದ ಸೇತುವೆ ಮುಳುಗಡೆಯಾಗಿದೆ. ದೂದಗಂಗಾ ನದಿಯಿಂದ ಕಾರದಗಾ-ಬೋಜ್, ಕುನ್ನೂರ-ಭೋಜವಾಡಿ ಸಂಪರ್ಕಿಸುವ ಸೇತುವೆ ಜಲಾವೃತವಾಗಿದೆ. ನದಿಗೆ ಇಳಿಯದಂತೆ ಬೆಳಗಾವಿ ಜಿಲ್ಲಾಡಳಿತ ಮನವಿ ಮಾಡಿದೆ.

ಭಾರೀ ಮಳೆಗೆ ಕುಸಿದ ಸೇತುವೆ ಬದಿ ಮಣ್ಣು

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕಡವಾಡದ ಬೇಳೂರು ಗ್ರಾಮದ ಸಂಪರ್ಕ ಸೇತುವೆ ಬದಿಯ ಮಣ್ಣು ಕುಸಿದಿದೆ. ಇನ್ನೂ ಉದ್ಘಾಟನೆಯಾಗಬೇಕಿದ್ದ ನೂತನ ಸೇತುವೆ ಧಾರಾಕಾರ ಮಳೆಗೆ ಸೇತುವೆಯ ಎರಡೂ ಭಾಗದ ಮಣ್ಣು, ಕಾಂಕ್ರೀಟ್ ಕುಸಿದಿದೆ. ಸುಮಾರು 40 ಲಕ್ಷ ವೆಚ್ಚದಲ್ಲಿ ಲೋಕೋಪಯೋಗಿ ಇಲಾಖೆಯಿಂದ ಕಿರುಸೇತುವೆ ನಿರ್ಮಾಣವಾಗಿತ್ತು. ಆದರೆ ಕರಾವಳಿಯಲ್ಲಿ ಸುರಿಯುತ್ತಿರುವ ಮಳೆಗೆ ಸೇತುವ ಪಕ್ಷದ ಗುಡ್ಡದಲ್ಲಿ ಹೆಚ್ಚು ನೀರು ಹರಿದು ಗುಡ್ಡ ಕುಸಿದಿದ್ದು, ಗುಡ್ಡದ ಮಣ್ಣು ಸೇತುವೆ ಭಾಗಕ್ಕೆ ಬಿದ್ದಿದೆ. ಪರಿಣಾಮ ಸೇತುವೆಯ ಎರಡೂ ಭಾಗದ ಸಂಪರ್ಕಕ್ಕೆ ಹಾಕಿದ್ದ ಮಣ್ಣು ಹಾಗೂ ಕಾಂಕ್ರೀಟ್ ಕಿತ್ತುಹೋಗಿದೆ. ಇದರಿಂದಾಗಿ ವಾಹನ ಸಂಚಾರಕ್ಕೆ ಅವ್ಯವಸ್ಥೆ ಉಂಟಾಗಿದ್ದು ಗ್ರಾಮಸ್ಥರು ಆತಂಕಗೊಳ್ಳುವಂತಾಗಿದೆ.

ಮಳೆ ನಿಂತರೂ ಮತ್ತೆ ಭೂ ಕುಸಿತದ ಆತಂಕ!

ಮಳೆ ನಿಂತರೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಭೂ ಕುಸಿತದ ಆತಂಕ ಕಡಿಮೆ ಆಗಿಲ್ಲ. ಮಂಗಳೂರು-ಸೋಲಾಪುರ ರಾಷ್ಟ್ರೀಯ ಹೆದ್ದಾರಿ 169ರ ಸಮೀಪದಲ್ಲೇ ಭಾರೀ ಗುಡ್ಡ ಕುಸಿತ ಉಂಟಾಗಿದೆ. ಮಂಗಳೂರಿನ ವಾಮಂಜೂರು ಕೆತ್ತಿಕಲ್ ಬಳಿ ಭೂ ಕುಸಿತದ ಭೀತಿ ಎದುರಾಗಿದೆ. ಚತುಷ್ಪಥ‌ ಹೆದ್ದಾರಿ ಕಾಮಗಾರಿಗಾಗಿ ಗುಡ್ಡ ಕೊರೆದ ಪರಿಣಾಮ ಹೆದ್ದಾರಿಗೆ ತಾಗಿಕೊಂಡೇ ಇರೋ ಗುಡ್ಡದಲ್ಲಿ ಆಗಾಗ್ಗೆ ಮಣ್ಣು ಕುಸಿಯುತ್ತಿದೆ. ಗುಡ್ಡದ ತುದಿ ಭಾಗದಲ್ಲಿ ಭಾರೀ ಗಾತ್ರದ ಬಂಡೆಗಳು ಉರುಳಿ ಬೀಳುವ ಆತಂಕ ಇದೆ. ಇತ್ತ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಜಿಲಮೊಗರು ಸಮೀಪ ಗಾಳಿ ಸಹಿತ ಮಳೆಯಾಗಿದೆ. ಏಕಾಎಕಿ ಬಂದ ಗಾಳಿಗೆ ಅಂಗಡಿಯ ಶಿಟ್‌ಗಳು ಹಾರಿ ಹೋಗಿದ್ದವು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

Karnataka Weather Forecast : ವಾರಾಂತ್ಯದಲ್ಲಿ ಸಾಧಾರಣದೊಂದಿಗೆ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಕರಾವಳಿಯಲ್ಲಿ ನಾನ್‌ ಸ್ಟಾಪ್‌ ಮಳೆಯಾಗಲಿದ್ದು, ಮಲೆನಾಡಿನಲ್ಲೂ ಅಬ್ಬರಿಸಲಿದೆ. ಆರೆಂಜ್‌ ಹಾಗೂ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ಕರ್ನಾಟಕದ ಕರಾವಳಿಯಲ್ಲಿ ವ್ಯಾಪಕವಾಗಿ ಸಾಧಾರಣದಿಂದ ಭಾರಿ ಮಳೆಯಾಗುವ (Heavy Rain) ಸಾಧ್ಯತೆಯಿದೆ. ಮಲೆನಾಡು ಭಾಗಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯೊಂದಿಗೆ ಚದುರಿದ ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ (Rain News) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನಲ್ಲಿ ಪ್ರತ್ಯೇಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಸೇರಿದಂತೆ ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಉತ್ತರ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ರಾಯಚೂರು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಬೀದರ್, ಕಲಬುರಗಿ, ಧಾರವಾಡ ಮತ್ತು ಹಾವೇರಿ, ವಿಜಯಪುರ, ಗದಗ, ಕೊಪ್ಪಳ, ಯಾದಗಿರಿ, ಬಾಗಲಕೋಟೆಯಲ್ಲೂ ಮಳೆ ಇರಲಿದೆ.

ಮಲೆನಾಡಿನ ಹಾಸನ, ಕೊಡಗು ಜಿಲ್ಲೆಯಾದ್ಯಂತ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ ಮತ್ತು ಚಿಕ್ಕಮಗಳೂರಿನಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ವ್ಯಾಪಕ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲಿ ಚದುರಿದಂತೆ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಈ ಜಿಲ್ಲೆಗಳಿಗೆ ಆರೆಂಜ್‌-ಯೆಲ್ಲೋ ಅಲರ್ಟ್‌

ಗುಡುಗು ಸಹಿತ ಭಾರೀ ಮಳೆಯಾಗಲಿದ್ದು, 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ: Assault Case : ಜಮೀನು ವಿವಾದ; ನೀರಿನಲ್ಲಿ ಮುಳುಗಿಸಿ, ಕುಡುಗೋಲು, ಕಲ್ಲಿನಿಂದ ವ್ಯಕ್ತಿ ಮೇಲೆ ಹಲ್ಲೆ!

ಜುಲೈ 6ಕ್ಕೂ ಶಾಲಾ-ಕಾಲೇಜುಗಳಿಗೆ ರಜೆ

ಕರಾವಳಿಯಲ್ಲಿ ಭಾರೀ ಮಳೆ ಅಬ್ಬರ ಹಿನ್ನೆಲೆಯಲ್ಲಿ ಜುಲೈ 6 ರಂದು ಕುಮಟಾ, ಹೊನ್ನಾವರ, ಭಟ್ಕಳ ತಾಲೂಕಿನ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್‌ರಿಂದ ಆದೇಶ ಹೊರಡಿಸಲಾಗಿದೆ. ಪದವಿ ಕಾಲೇಜು ಹೊರತುಪಡಿಸಿ ಉಳಿದ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಕಳೆದ ಎರಡು ದಿನಗಳಿಂದ ಭಾರೀ ಪ್ರಮಾಣದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಹಲವೆಡೆ ರಸ್ತೆ, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿದೆ. ವಿದ್ಯಾರ್ಥಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಅಪಾಯದಲ್ಲಿರುವ ಬಳ್ಕುಂಜೆ -ಪಲಿಮಾರು ಸಂಪರ್ಕ ಸೇತುವೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯನ್ನು ಸಂಪರ್ಕಿಸುವ ಮುಲ್ಕಿ ಸಮೀಪದ ಬಳ್ಕುಂಜೆ -ಪಲಿಮಾರು ಸಂಪರ್ಕ ಸೇತುವೆ ಅಪಾಯದಲ್ಲಿದೆ. ಸ್ಥಳೀಯರ ದೂರಿನಂತೆ ಜಿಲ್ಲಾಡಳಿತವು ಘನ ವಾಹನ ಸಂಚಾರ ನಿಷೇಧಿಸಿದೆ. ಸೇತುವೆಯ ಅಡಿ ಭಾಗದಲ್ಲಿ ತುಂಡು ತುಂಡಾಗಿ ಬೀಮ್‌ಗಳ ಸಿಮೆಂಟ್‌ಗಳು ಬೀಳುತ್ತಿವೆ. ನಿರಂತರ ಅಕ್ರಮ ಮರುಳು ಸಾಗಾಟವೇ ಇದಕ್ಕೆ ಕಾರಣ ಎಂದು ಸ್ಥಳೀಯರು ದೂರಿದ್ದಾರೆ. ಈ ಭಾಗದಲ್ಲಿ ಪೋಲಿಸ್ ಚೆಕ್ ಪೋಸ್ಟ್ ಇಲ್ಲದಿರುವುದು ಮರಳು ದಂದೆಕೋರರಿಗೆ ವರದಾನವಾಗಿದೆ ಎಂದು ಕಿಡಿಕಾರಿದ್ದಾರೆ. ಬಳ್ಕುಂಜೆ ಭಾಗದಿಂದ ಪಲಿಮಾರು, ಉಡುಪಿ, ನಿಟ್ಟೆ, ಬೆಳ್ಮಣ್, ಕುದುರೆಮುಖ, ಹೆಬ್ರಿ, ಸಾಗರ ಮೊದಲಾದ ಕಡೆಗೆ ಸಂಪರ್ಕಿಸುವ ರಸ್ತೆ ಇದಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

Karnataka Weather Forecast : ಕರಾವಳಿಯಲ್ಲಿ ಮಳೆಯು (Rain news) ಅಬ್ಬರಿಸುತ್ತಿದ್ದು, ಅವಾಂತರವೇ ಸೃಷ್ಟಿಯಾಗಿದೆ. ಶುಕ್ರವಾರವೂ ಹಲವೆಡೆ ಮಳೆಯಾಗಿದ್ದು, ಸಂರ್ಪಕ ಕಲ್ಪಿಸುವ ಸೇತುವೆಗಳು ಮುಳುಗಡೆಯಾಗಿವೆ. ಮತ್ತೆ ಕೆಲವೆಡೆ ಗುಡ್ಡ ಕುಸಿತದ ಭೀತಿ ಹೆಚ್ಚಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ಒಳನಾಡು ಸೇರಿ ಮಲೆನಾಡು, ಕರಾವಳಿಯಲ್ಲಿ ಮಳೆಯು (Karnataka Weather Forecast) ಅಬ್ಬರಿಸುತ್ತಿದೆ. ಶುಕ್ರವಾರವೂ ಹಲವೆಡೆ ಮಳೆಯಾಗಿದೆ. ಧಾರವಾಡದಲ್ಲಿ ಕಳೆದ ಅರ್ಧ ಗಂಟೆಗೂ ಹೆಚ್ಚು ಸಮಯ (Rain News) ಮಳೆಯಾಗಿದೆ. ಕಳೆದ ಒಂದು ವಾರದಿಂದ ನಗರದಲ್ಲಿ ಜಿಟಿ ಜಿಟಿ ಮಳೆ ಸುರಿಯುತ್ತಿದೆ. ಧಾರವಾಡ ಗ್ರಾಮೀಣ ಭಾಗದಲ್ಲೂ ಮಳೆಯು ಅಬ್ಬರಿಸಿದೆ. ಇತ್ತ ಕೊಡಗಿನಲ್ಲಿ ಮತ್ತೆ ಮಳೆಯು ವ್ಯಾಪಿಸಿದೆ. ಎರಡು ದಿನಗಳಿಂದ ಕೊಂಚ ಬಿಡುವು ನೀಡಿದ್ದ ಮಳೆಯು, ಶುಕ್ರವಾರ ಮಧ್ಯಾಹ್ನದ ನಂತರ ಜಿಲ್ಲೆಯಾದ್ಯಂತ ಅಬ್ಬರಿಸಿದೆ. ಮಳೆಗೆ ಕಾವೇರಿ ನದಿ ತುಂಬಿ ಹರಿಯುತ್ತಿದ್ದು, ಹಾರಂಗಿ ಜಲಾಶಕ್ಕೆ ಹೆಚ್ಚಾದ ಒಳ ಹರಿವಿನ ಪ್ರಮಾಣ ಹೆಚ್ಚಳಗೊಂಡಿದೆ.

ಜುಲೈ 6ಕ್ಕೂ ಶಾಲಾ-ಕಾಲೇಜುಗಳಿಗೆ ರಜೆ

ಕರಾವಳಿಯಲ್ಲಿ ಭಾರೀ ಮಳೆ ಅಬ್ಬರ ಹಿನ್ನೆಲೆಯಲ್ಲಿ ಜುಲೈ 6 ರಂದು ಕುಮಟಾ, ಹೊನ್ನಾವರ, ಭಟ್ಕಳ ತಾಲೂಕಿನ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್‌ರಿಂದ ಆದೇಶ ಹೊರಡಿಸಲಾಗಿದೆ. ಪದವಿ ಕಾಲೇಜು ಹೊರತುಪಡಿಸಿ ಉಳಿದ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಕಳೆದ ಎರಡು ದಿನಗಳಿಂದ ಭಾರೀ ಪ್ರಮಾಣದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಹಲವೆಡೆ ರಸ್ತೆ, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿದೆ. ವಿದ್ಯಾರ್ಥಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಧಾರಾಕಾರ ಮಳೆಗೆ ಸೇತುವೆಗಳು ಮುಳುಗಡೆ

ಮಹಾರಾಷ್ಟ್ರ ಮತ್ತು ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯ ಎರಡು ಸಂಪರ್ಕ ಸೇತುವೆಗಳು ಮುಳುಗಡೆಯಾಗಿವೆ. ಕೃಷ್ಣಾ ವೇದಗಂಗಾ ಹಾಗೂ ದೂದಗಂಗಾ ನದಿ ಮೈದುಂಬಿ ಹರಿಯುತ್ತಿದ್ದು, ನಿಪ್ಪಾಣಿ ತಾಲೂಕಿನ ಬಾರವಾಡ-ಕುನ್ನೂರ ಸಂಪರ್ಕಿಸುವ ಸೇತುವೆ ಜಲಾವೃತಗೊಂಡಿದೆ.

ವೇದಗಂಗಾ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆ ಮುಳುಗಡೆಯಾಗಿದೆ. ದೂದಗಂಗಾ ನದಿಯಿಂದ ಕಾರದಗಾ-ಭೋಜ ಸಂಪರ್ಕಿಸುವ ಸೇತುವೆ ಜಲಾವೃತಗೊಂಡಿದೆ. ಕೃಷ್ಣಾ ನದಿಗೆ ಸುಮಾರು 50 ಸಾವಿರ ಕ್ಯೂಸೆಕ್ ನೀರಿನ ಒಳಹರಿವು ಹೆಚ್ಚಾಗಿದೆ. ಹೀಗಾಗಿ ನದಿಗೆ ಇಳಿಯದಂತೆ ಬೆಳಗಾವಿ ಜಿಲ್ಲಾಡಳಿತದಿಂದ ನದಿ ಪಾತ್ರದ ಜನರಿಗೆ ಸೂಚನೆ ನೀಡಿದೆ. ಆದರೆ ಜಿಲ್ಲಾಡಳಿತದ ಮನವಿಗೆ ಕ್ಯಾರೇ ಎನ್ನದ ಜನರು ನದಿಯಲ್ಲಿ ಇಳಿದು ಅಪಾಯಮಟ್ಟ ಮೀರಿ ಹರಿಯುತ್ತಿರುವ ನದಿಯಲ್ಲಿ ಮೀನು ಹಿಡಿಯಲು ಮುಂದಾಗಿದ್ದಾರೆ. ಹೀಗಾಗಿ ನದಿ ಬಳಿ ಬಂದೋಬಸ್ತ್ ಸಲುವಾಗಿ ಜಿಲ್ಲಾಡಳಿತದಿಂದ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.

karnataka Weather Forecast

ಶಿರೂರು ಸಮೀಪ ಗುಡ್ಡ ಕುಸಿಯುವ ಭೀತಿ

ಉಡುಪಿಯ ಶಿರೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿಯುವ ಭೀತಿ ಹೆಚ್ಚಾಗಿದೆ. ಬೈಂದೂರು ತಾಲೂಕು, ಶಿರೂರು ಸಮೀಪದಲ್ಲಿ ಗುಡ್ಡ ಜರಿಯುವ ಸಾಧ್ಯತೆ ಇದೆ. ಐಆರ್‌ಬಿ ಸಂಸ್ಥೆಯಿಂದ ರಾಷ್ಟ್ರೀಯ ಹೆದ್ದಾರಿ ಶತಶಪಥ ಕಾಮಗಾರಿಯ ವೇಳೆ ಗುಡ್ಡ ಕೊರೆಯಲಾಗಿತ್ತು. ಅವೈಜ್ಞಾನಿಕ ಕಾಮಗಾರಿ ಹಿನ್ನೆಲೆಯಲ್ಲಿ ಪ್ರತಿವರ್ಷ ಮಳೆಗಾಲದಲ್ಲಿ ಗುಡ್ಡ ಜರಿಯುವ ಭೀತಿ ಇದೆ.

ಕಳೆದ ಮೂರು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಒತ್ತಿನಣೆಯಲ್ಲಿ ನಿಧಾನವಾಗಿ ಜರಿದು ಗುಡ್ಡ ಬೀಳುತ್ತಿದೆ. ಮಳೆ ಮುಂದುವರೆದರೆ ಸಂಪೂರ್ಣ ಗುಡ್ಡ, ಹೆದ್ದಾರಿ ಮೇಲೆ ಕುಸಿಯುವ ಭೀತಿ ಇದೆ. ಒಂದು ವೇಳೆ ಗುಡ್ಡ ಜರಿದರೆ ಉತ್ತರ ಕನ್ನಡ, ಉಡುಪಿ ಜಿಲ್ಲೆಗೆ ಸಂಪರ್ಕ ಬಂದ್ ಆಗಲಿದೆ.

ಚಿತ್ರದುರ್ಗದಲ್ಲಿ ಶಾಲೆಗೆ ನುಗ್ಗಿದ ನೀರು

ಚಿತ್ರದುರ್ಗ ಜಿಲ್ಲೆಯಲ್ಲಿ ಹಲವೆಡೆ ಭಾರಿ ಮಳೆಯಾಗುತ್ತಿದ್ದು, ಕಳ್ಳಿಹಟ್ಟಿ ಗೊಲ್ಲರಹಟ್ಟಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನೀರು ನುಗ್ಗಿದೆ. ಜತೆಗೆ ಶಾಲಾ ಕೊಠಡಿಯಲ್ಲಿ ನೀರು ಸೋರುತ್ತಿದೆ. ಹೀಗಾಗಿ ಶಿಕ್ಷಕರು ಮಕ್ಕಳನ್ನು ಒಂದು ಮೂಲೆಗೆ ಕೂರಿಸಿದ್ದಾರೆ. ನೂತನ ಕಟ್ಟಡ ಅಥವಾ ಬೇರೊಂದು ಕಟ್ಟಡ ಕಟ್ಟಿಸಿಕೊಡುವಂತೆ ಹಲವು ಬಾರಿ ಶಾಲಾ ಸಿಬ್ಬಂದಿ ಮನವಿ ಮಾಡಿದ್ದಾರೆ. ಆದರೆ ಶಿಕ್ಷಣ ಇಲಾಖೆ ಅಧಿಕಾರಿಗಳು ಮೌನಕ್ಕೆ ಜಾರಿದ್ದಾರೆ.

ಒತ್ತಿನೆಣೆ ಬೀಚ್‌ನಲ್ಲಿ ಪ್ರವಾಸಿಗರ ಹುಚ್ಚಾಟ

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿರುವ ಪ್ರವಾಸಿ ತಾಣ ಒತ್ತಿನೆಣೆ ಬೀಚ್‌ನಲ್ಲಿ ಸುರಿಯುತ್ತಿರುವ ಮಳೆಯಲ್ಲಿ ಪ್ರವಾಸಿಗರ ಹುಚ್ಚಾಟ ಮಿತಿಮೀರಿದೆ. ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಬಹುತೇಕ ಎಲ್ಲಾ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶವನ್ನು ಜಿಲ್ಲಾಡಳಿತ ನಿಷೇಧ ಹೇರಿದೆ. ಅದರಲ್ಲೂ ಎಲ್ಲಾ ಬೀಚ್‌ಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ವಾಚ್ ಗಾರ್ಡ್ ಸಿಬ್ಬಂದಿ ಕಣ್ಗಾವಲು ಇದೆ. ಆದರೂ ಅಪ್ಪಳಿಸಿ ಬರುವ ಅಲೆಗಳ ಮುಂದೆ ಸೆಲ್ಫಿ ತೆಗೆಯಲು ಪ್ರವಾಸಿಗರು ಯತ್ನಿಸುತ್ತಿದ್ದಾರೆ.

ಅಪಾಯದಲ್ಲಿರುವ ಬಳ್ಕುಂಜೆ -ಪಲಿಮಾರು ಸಂಪರ್ಕ ಸೇತುವೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯನ್ನು ಸಂಪರ್ಕಿಸುವ ಮುಲ್ಕಿ ಸಮೀಪದ ಬಳ್ಕುಂಜೆ -ಪಲಿಮಾರು ಸಂಪರ್ಕ ಸೇತುವೆ ಅಪಾಯದಲ್ಲಿದೆ. ಸ್ಥಳೀಯರ ದೂರಿನಂತೆ ಜಿಲ್ಲಾಡಳಿತವು ಘನ ವಾಹನ ಸಂಚಾರ ನಿಷೇಧಿಸಿದೆ. ಸೇತುವೆಯ ಅಡಿ ಭಾಗದಲ್ಲಿ ತುಂಡು ತುಂಡಾಗಿ ಬೀಮ್‌ಗಳ ಸಿಮೆಂಟ್‌ಗಳು ಬೀಳುತ್ತಿವೆ. ನಿರಂತರ ಅಕ್ರಮ ಮರುಳು ಸಾಗಾಟವೇ ಇದಕ್ಕೆ ಕಾರಣ ಎಂದು ಸ್ಥಳೀಯರು ದೂರಿದ್ದಾರೆ. ಈ ಭಾಗದಲ್ಲಿ ಪೋಲಿಸ್ ಚೆಕ್ ಪೋಸ್ಟ್ ಇಲ್ಲದಿರುವುದು ಮರಳು ದಂದೆಕೋರರಿಗೆ ವರದಾನವಾಗಿದೆ ಎಂದು ಕಿಡಿಕಾರಿದ್ದಾರೆ. ಬಳ್ಕುಂಜೆ ಭಾಗದಿಂದ ಪಲಿಮಾರು, ಉಡುಪಿ, ನಿಟ್ಟೆ, ಬೆಳ್ಮಣ್, ಕುದುರೆಮುಖ, ಹೆಬ್ರಿ, ಸಾಗರ ಮೊದಲಾದ ಕಡೆಗೆ ಸಂಪರ್ಕಿಸುವ ರಸ್ತೆ ಇದಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

Karnataka Rain : ಕರಾವಳಿ ಭಾಗದಲ್ಲಿ ಸುರಿಯುತ್ತಿರುವ ಭಾರಿ ಮಳೆಯು (Rain Effect) ಅವಾಂತವರವೇ ಸೃಷ್ಟಿಸಿದೆ. ಕಾರವಾರ ಸಮೀಪ ಮಳೆಗೆ ಮನೆಗಳಿಗೆ ಹಾವುಗಳು (snake) ನುಗ್ಗುತ್ತಿವೆ. ಮತ್ತೊಂದು ಕಡೆ ಹೊನ್ನಾವಾರ-ಬೆಂಗಳೂರು ಹೆದ್ದಾರಿಯಲ್ಲಿ ಗುಡ್ಡ ಕುಸಿತ ಪ್ರಕರಣಗಳು ಮುಂದುವರಿದಿದೆ.

VISTARANEWS.COM


on

By

karnataka rain
Koo

ಕಾರವಾರ/ಉಡುಪಿ: ಕರ್ನಾಟಕ ಕರಾವಳಿ ಭಾಗದಲ್ಲಿ ಮಳೆಯು (Karnataka Rain) ಅಬ್ಬರಿಸುತ್ತಿದೆ. ಮಳೆಯಿಂದಾಗಿ ಕಾಡಿನಿಂದ ಮನೆಗಳತ್ತ ಹಾವುಗಳು ಬರುತ್ತಿವೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಸೋನಾರವಾಡ ಎಂಬಾಲ್ಲಿ ಮನೆಯ ಮೇಲೆ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷವಾಗಿತ್ತು. ಸುಮಾರು 12 ಅಡಿ ಉದ್ದದ ಹೆಬ್ಬಾವು ಕಂಡು ಸ್ಥಳೀಯರು ಆತಂಕಕ್ಕೊಳಗಾಗಿದ್ದರು.

ಅರಣ್ಯ ಪ್ರದೇಶದ ಸಮೀಪದಲ್ಲಿ ಇದ್ದು, ಮಳೆ ನೀರಿನಲ್ಲಿ ಹರಿದು ಬಂದು ಮನೆಯ ಮೇಲೆ ಹೆಬ್ಬಾವು ಸೇರಿಕೊಂಡಿದೆ. ಬಳಿಕ ಸ್ಥಳಕ್ಕಾಗಮಿಸಿದ ಉರಗ ಪ್ರೇಮಿ ಗೋಪಾಲ್ ಸುಮಾರು ಒಂದು ಗಂಟೆ ಕಾಲ‌ ಕಾರ್ಯಾಚರಣೆ ನಡೆಸಿ ಹಾವು ಹಿಡಿದು ರಕ್ಷಣೆ ಮಾಡಿದ್ದಾರೆ.

ಭಾರಿ ಮಳೆ-ಗಾಳಿಗೆ ಕುಸಿದು ಬಿದ್ದ ಮನೆ

ಇತ್ತ ಭಾರೀ ಗಾಳಿ ಮಳೆಗೆ ಮನೆಯೊಂದು ಭಾಗಶಃ ಕುಸಿದು ಬಿದ್ದಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ದೊಡ್ನಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕಳೆದೊಂದು ವಾರದಿಂದ ಶಿರಸಿ ಭಾಗದಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಈ ಅವಘಡ ಸಂಭವಿಸಿದೆ. ಸಂತೋಷ ಜೋಗಿ ಎಂಬುವವರ ಮನೆಯ ಮಣ್ಣಿನ ಗೋಡೆ ನೆನೆದು ಭಾಗಶಃ ಕುಸಿದು ಬಿದ್ದಿದೆ. ಪರಿಹಾರಕ್ಕಾಗಿ ಸರ್ಕಾರಕ್ಕೆ ಅಂಗಲಾಚಿದ್ದಾರೆ. ಸ್ಥಳಕ್ಕೆ ಪಿಡಿಓ ಪ್ರೀತಿ ಶೆಟ್ಟಿ, ಶಾನುಭೋಗ ಸುಕನ್ಯಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕರಾವಳಿಯಲ್ಲಿ ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಕಾರವಾರ, ಅಂಕೋಲಾ, ಕುಮಟಾ, ಭಟ್ಕಳ ತಾಲೂಕುಗಳಲ್ಲಿ ವರುಣಾರ್ಭಟ ಜೋರಾಗಿದೆ. ಹಲವು ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಮಳೆ ಹೆಚ್ಚಾದರೆ ಕಾರವಾರದ ಕದ್ರಾ ಜಲಾಶಯದಿಂದ ನೀರು ಹೊರ ಬರಲಿದೆ. ಕಾಳಿ ನದಿಗೆ ಅಡ್ಡಲಾಗಿ ಕಟ್ಟಿರುವ ಕದ್ರಾ ಜಲಾಶಯದಲ್ಲಿ ಸುರಕ್ಷಿತ ಮಟ್ಟ ಕಾಯ್ದುಕೊಳ್ಳಲು ಒಳಹರಿವು ಆಧರಿಸಿ ನೀರು ಬಿಡುಗಡೆಗೆ ನಿರ್ಧರಿಸಲಾಗಿದೆ.

ಇದನ್ನೂ ಓದಿ: Elephant Attack : ಕಾಫಿ ತೋಟದ‌ ಕೆಲಸಗಾರನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಒಂಟಿ ಸಲಗ

ಬೆಳಗಾವಿಯ ಸಪ್ತನದಿಗಳಿಗೆ ಜೀವ ಕಳೆ

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆಯ ಅಬ್ಬರದಿಂದಾಗಿ ಬೆಳಗಾವಿಯ ಸಪ್ತನದಿಗಳಿಗೆ ಜೀವ ಕಳೆ ಬಂದಿದೆ. ಘಟಪ್ರಭಾ ನದಿಗೆ ಒಳಹರಿವು ಹೆಚ್ಚಳದಿಂದಾಗಿ ಐತಿಹಾಸಿಕ ಗೋಕಾಕ್ ಫಾಲ್ಸ್‌ನಲ್ಲಿ ಜಲವೈಭತ ಸೃಷ್ಟಿಯಾಗಿದೆ. ಭಾರತದ ನಯಾಗಾರ ಫಾಲ್ಸ್ ಎಂದೇ‌ ಖ್ಯಾತವಾಗಿರುವ ಗೋಕಾಕ್ ಜಲಪಾತ, 180 ಅಡಿ ಮೇಲಿಂದ ಧುಮ್ಮಿಕ್ಕುವ ನೀರು, ಜಲಪಾತದ ರಮಣೀಯ ದೃಶ್ಯಕ್ಕೆ ಪ್ರವಾಸಿಗರು ಫಿದಾ ಆಗಿದ್ದಾರೆ. ಇನ್ನೂ ಸೆಲ್ಫಿ, ಜಲಪಾತದ ಫೋಟೊ ತೆಗೆಯಲು ಜಲಪಾತದ ತುದಿಗೆ ಹೋಗಿ ಪ್ರವಾಸಿಗರು ಹುಚ್ಚಾಟದ ಕಾರಣಕ್ಕೆ ನಿಗಾ ಇಡಲು ಪ್ರವಾಸೋದ್ಯಮ ಇಲಾಖೆಯ ಸಿಬ್ಬಂದಿ ‌ನಿಯೋಜನೆ ಮಾಡಲಾಗಿದೆ.

ತುಂಬಿ ಹರಿದ ವಾರಾಹಿ ಮತ್ತು ಕುಬ್ಬಾ ನದಿ

ಪಶ್ಚಿಮಘಟ್ಟದ ತಪ್ಪಲಲ್ಲಿ ಸುರಿದ ಭಾರೀ ಮಳೆ ಎಫೆಕ್ಟ್‌ನಿಂದಾಗಿ ಉಡುಪಿಯ ವಾರಾಹಿ ಮತ್ತು ಕುಬ್ಬಾ ನದಿ ತುಂಬಿ ಹರಿದಿದೆ. ನದಿ ತಟ ಕಂಡ್ಲೂರಿನಲ್ಲಿ ಲಂಗರು ಹಾಕಿದ್ದ ಆರು ನಾಡದೋಣಿಗಳು ನೀರುಪಾಲಾಗಿವೆ. ಹೊಳೆಯ ರಭಸಕ್ಕೆ ಎಲ್ಲಾ ನಾಡದೋಣಿಗಳು ಕೊಚ್ಚಿ ಹೋಗಿವೆ. ಮೀನುಗಾರರು ಕಳೆದ ಎರಡು ದಿನಗಳಿಂದ ಹುಡುಕಾಡುತ್ತಿದ್ದಾರೆ.

ಉಡುಪಿಯ ಈ ಶಾಲಾ-ಕಾಲೇಜುಗಳಿಗೆ ರಜೆ

ಉಡುಪಿ ಜಿಲ್ಲೆಯಲ್ಲಿ ಮೂರನೇ ದಿನಕ್ಕೆ ಮುಂದುವರಿದ ಭಾರಿ ಮಳೆಯಿಂದಾಗಿ ಮುಂಜಾಗ್ರತಾ ಕ್ರಮವಾಗಿ ಮೂರು ತಾಲೂಕುಗಳ ಶಾಲಾ- ಕಾಲೇಜು ರಜೆ ನೀಡಲಾಗಿದೆ. ಬೈಂದೂರು ಕುಂದಾಪುರ ಮತ್ತು ಬ್ರಹ್ಮಾವರ ತಾಲೂಕು ಶಾಲಾ-ಕಾಲೇಜು ಶುಕ್ರವಾರ ರಜೆ ನೀಡಲಾಗಿತ್ತು.

ಬೈಂದೂರು ತಾಲೂಕು, ಮರವಂತೆ ಬೀಚಿನಲ್ಲಿ ಭಾರಿ ಗಾತ್ರದ ಅಲೆಗಳು ಅಪ್ಪಳಿಸುತ್ತಿದೆ. ಹೀಗಾಗಿ ಮಳೆಗಾಲ ಮುಗಿಯುವವರೆಗೂ ಮುನ್ನೆಚ್ಚರಿಕೆ ಕ್ರಮವಾಗಿ ಬೀಚ್ ಬಂದ್ ಮಾಡಲಾಗಿದೆ. ಸೌಪರ್ಣಿಕ ನದಿ ಅರಬ್ಬಿ ಸಮುದ್ರ ಮಧ್ಯೆ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸುಮಾರು ಒಂದುವರೆ ಕಿಲೋಮೀಟರ್ ಉದ್ದವಿದ್ದು, ಯಾವುದೇ ತಡೆ ಬೇಲಿ ಇಲ್ಲ. ಈ ಹಿನ್ನೆಲೆಯಲ್ಲಿ ಹೆದ್ದಾರಿಯಲ್ಲಿ ತೆರಳುವ ಬಹುತೇಕರು ಕಡಲಿಗೆ ಇಳಿಯುವ ಸಾಧ್ಯತೆ ಇದೆ. ಮುಂಜಾಗ್ರತೆ ಕ್ರಮವಾಗಿ ಜಿಲ್ಲಾಡಳಿತ ಬೀಚ್ ಕಾವಲು ವ್ಯವಸ್ಥೆ ಮಾಡಿದೆ.

ಇದನ್ನೂ ಓದಿ: Physical Abuse : ಇವಳೇನು ಶಿಕ್ಷಕಿಯೋ ಕಾಮುಕಿಯೋ; ಬಾಲಕಿಯ ಖಾಸಗಿ ಅಂಗಾಂಗ ಮುಟ್ಟಿ ವಿಕೃತಿ

ಇಳಿಮುಖವಾದ ನೆರೆ

ಉಡುಪಿಯ ಬೈಂದೂರು ತಾಲೂಕು ನಾವುಂದದಲ್ಲಿ ನೆರೆ ಸಂಪೂರ್ಣ ಇಳಿಮುಖವಾಗಿದೆ. ನಿರಂತರವಾಗಿ ಸುರಿದ ಮಳೆಯಿಂದಾಗಿ ಸೌಪರ್ಣಿಕಾ ನದಿ ಉಕ್ಕಿ ಹರಿದಿತ್ತು. ಇದರಿಂದಾಗಿ 150 ಎಕರೆ ಮುಳುಗಡೆಯಾಗಿ ಕೃಷಿ ಭೂಮಿಯಲ್ಲಿ ಬೆಳೆದ ಭತ್ತ ನಾಶವಾಗಿತ್ತು. ಸದ್ಯ ಮಳೆ ಕಡಿಮೆಯಾದ ಹಿನ್ನೆಲೆಯಲ್ಲಿ ನೆರೆ ಸಂಪೂರ್ಣ ಇಳಿಮುಖವಾಗಿದೆ. ಒಮ್ಮೆ ಭತ್ತದ ನಾಟಿ ಮುಗಿಸಿದ್ದ ರೈತರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಮಳೆ ನಿಂತಿರುವುದರಿಂದ ಬಡಾಕೆರೆ ಕೃಷಿಕರು ಮತ್ತೆ ಬತ್ತದ ನಾಟಿ ಮಾಡುತ್ತಿದ್ದಾರೆ.

ಗುಡ್ಡ ಕುಸಿತ; ಮಣ್ಣು ತೆರವು ಕಾರ್ಯಾಚರಣೆ ಆರಂಭ

ಉತ್ತರಕನ್ನಡ ಜಿಲ್ಲೆಯ ಕಾರವಾರದ ಹೊನ್ನಾವರ-ಬೆಂಗಳೂರು ಹೆದ್ದಾರಿಯಲ್ಲಿ ಮತ್ತೆ ಗುಡ್ಡ ಕುಸಿದಿದೆ. ಹೊನ್ನಾವರದ ವರ್ನಕೇರಿ ಬಳಿ ನಿನ್ನೆ ಗುರುವಾರ ಮರ ಸಹಿತ ಗುಡ್ಡ ಕುಸಿದಿತ್ತು. ಇದರಿಂದಾಗಿ ಹೊನ್ನಾವರ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಹೊನ್ನಾವರದಿಂದ ಗೇರುಸೊಪ್ಪ, ಸಾಗರ, ಶಿವಮೊಗ್ಗ, ಬೆಂಗಳೂರು ಮಾರ್ಗದ ಸಂಚಾರಕ್ಕೆ ಅಡ್ಡಿಯಾಗಿದ್ದರಿಂದ ಏಕಮುಖ ಸಂಚಾರಕ್ಕೆ ಜಿಲ್ಲಾಡಳಿತ ವ್ಯವಸ್ಥೆ ಕಲ್ಪಿಸಿತ್ತು.

ಇಂದು ಶುಕ್ರವಾರ ಕಲ್ಲುಬಂಡೆ ಸಹಿತ ಕುಸಿತ ಗುಡ್ಡ ರಸ್ತೆಗೆ ಬಿದ್ದಿದೆ. ಹೀಗಾಗಿ ಹಿಟಾಚಿ ಮೂಲಕ ಗುಡ್ಡದ ಮಣ್ಣು ತೆರವು ಕಾರ್ಯಾಚರಣೆ ಪ್ರಾರಂಭವಾಗಿದೆ. ಮಣ್ಣು ತೆಗೆದರೂ ಮತ್ತೆ ಗುಡ್ಡ ಕುಸಿಯುತ್ತಿದ್ದು, ಹೊನ್ನಾವರ -ಬೆಂಗಳೂರು ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿದೆ.

ಅವೈಜ್ಞಾನಿಕ ಕಾಮಗಾರಿಯಿಂದ ಮನೆಗಳು ಜಲಾವೃತ

ಉತ್ತರಕನ್ನಡ ಜಿಲ್ಲೆಯ ಕಾರವಾರದ ಅರಗಾದಲ್ಲಿ ಹಲವು ಮನೆಗಳು ಜಲಾವೃತಗೊಂಡಿದೆ. ನೌಕಾನೆಲೆ ಕಾಂಪೌಂಡ್‌, ಅವೈಜ್ಞಾನಿಕ ಹೆದ್ದಾರಿ ಕಾಮಗಾರಿಯಿಂದ ನೀರು ಹರಿದುಹೋಗದೇ ಜಲಾವೃತಗೊಂಡಿದೆ. ಸಮುದ್ರಕ್ಕೆ ನೀರು ಸರಾಗವಾಗಿ ಹರಿದುಹೋಗದ ಪರಿಣಾಮ ಅರಗಾ ಗ್ರಾಮದ ನಿವಾಸಿಗಳು ಆತಂಕಗೊಂಡಿದ್ದಾರೆ. ಮಹಿಳೆಯರು, ಮಕ್ಕಳನ್ನು ಇಟ್ಟುಕೊಂಡು ಆತಂಕದಲ್ಲೇ ಕಾಲಕಳೆಯುವ ಪರಿಸ್ಥಿತಿ ಎದುರಾಗಿದೆ. ಮಳೆ ಹೆಚ್ಚಾದಲ್ಲಿ ಮನೆಗಳಿಗೆ ನೀರು ನುಗ್ಗುವ ಆತಂಕ ಇದೆ. ಪ್ರತಿವರ್ಷ ಮಳೆಗಾಲದಲ್ಲಿ ನೆರೆ ಪರಿಸ್ಥಿತಿಯನ್ನು ಅರಗಾ ಗ್ರಾಮಸ್ಥರು ಎದುರಿಸುತ್ತಿದ್ದಾರೆ. ನೀರು ಹರಿದುಹೋಗಲು ಸೂಕ್ತ ವ್ಯವಸ್ಥೆ ಇಲ್ಲದೇ ಅವ್ಯವಸ್ಥೆ ನಿರ್ಮಾಣವಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Mid Day Meal
ದೇಶ22 mins ago

Mid Day Meal: ಮಕ್ಕಳ ಬಿಸಿಯೂಟದಲ್ಲೂ ಕಳ್ಳಾಟ, ವಿದ್ಯಾರ್ಥಿಗಳಿಗೆ ಸಿಗೋದು ಬರೀ ಅನ್ನ-ಅರಿಶಿಣ; Video ಇದೆ

Dr HS Shetty: Rs 7 crore spent on charity; Businessman Dr. HS Shetty
ಪ್ರಮುಖ ಸುದ್ದಿ30 mins ago

Dr HS Shetty : ದಾನಗಳಿಗಾಗಿಯೇ ವರ್ಷದಲ್ಲಿ 7 ಕೋಟಿ ರೂ. ವಿನಿಯೋಗ

Vasishtha Simha starrer VIP Kannada movie
ಕರ್ನಾಟಕ40 mins ago

Kannada New Movie: ಖ್ಯಾತ ಗಾಯಕಿ ಕೆ.ಎಸ್.ಚಿತ್ರಾ ಕಂಠಸಿರಿಯಲ್ಲಿ ವಸಿಷ್ಠ ಸಿಂಹ ಅಭಿನಯದ ‘ವಿಐಪಿ’ ಚಿತ್ರದ ಹಾಡು

Asia Cup 2024
ಪ್ರಮುಖ ಸುದ್ದಿ1 hour ago

Asia Cup 2024 : ಮಹಿಳಾ ಏಷ್ಯಾಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

Viral Video
Latest1 hour ago

Viral Video: ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ; ಪ್ರಾಂಶುಪಾಲರನ್ನು ಕುರ್ಚಿ ಸಹಿತ ಹೊರಗೆಳೆದ ಸಿಬ್ಬಂದಿ

Kashmir Encounter
ದೇಶ1 hour ago

Kashmir Encounter: ಕಾಶ್ಮೀರದಲ್ಲಿ ಸೇನೆ ಭರ್ಜರಿ ಬೇಟೆ; ನಾಲ್ವರು ಉಗ್ರರ ಹತ್ಯೆ, ಇಬ್ಬರು ಯೋಧರು ಹುತಾತ್ಮ

Viral Video
Latest1 hour ago

Viral Video : ಹೀಗೆಲ್ಲಾ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಾರಾ…? ವಿಡಿಯೊ ನೋಡಿ

Viral News
Latest2 hours ago

Viral News: ಆಸ್ಪತ್ರೆಯಲ್ಲಿ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ವೇಳೆ ಅಚಾತುರ್ಯ; ದೃಷ್ಟಿ ಕಳೆದುಕೊಂಡ 16 ರೋಗಿಗಳು

Dengue cases in Karnataka
ಪ್ರಮುಖ ಸುದ್ದಿ2 hours ago

Dengue cases in Karnataka: ರಾಜ್ಯದಲ್ಲಿಂದು 175 ಡೆಂಗ್ಯೂ ಕೇಸ್‌ಗಳು ಪತ್ತೆ; ಸಕ್ರಿಯ ಪ್ರಕರಣಗಳ ಸಂಖ್ಯೆ 352ಕ್ಕೆ ಏರಿಕೆ!

Farmers record crop details through mobile app
ತುಮಕೂರು2 hours ago

Tumkur News: ರೈತರು ಮೊಬೈಲ್ ಆ್ಯಪ್ ಮೂಲಕ ಬೆಳೆ ವಿವರ ದಾಖಲಿಸಬೇಕು

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ4 hours ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ7 hours ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ8 hours ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು10 hours ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Wild Animal Attack Elephant attack
ರಾಮನಗರ12 hours ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

karnataka Weather Forecast
ಮಳೆ16 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

karnataka Weather Forecast
ಮಳೆ1 day ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

Lovers Fighting
ಚಿಕ್ಕಬಳ್ಳಾಪುರ1 day ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

Medical negligence
ದಾವಣಗೆರೆ1 day ago

Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

karnataka rain
ಮಳೆ1 day ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

ಟ್ರೆಂಡಿಂಗ್‌