Site icon Vistara News

Self Harming : ಮಗಳ ನಗ್ನ ಫೋಟೊ ತೋರಿಸಿ ಪ್ರಿಯಕರ ಬ್ಲ್ಯಾಕ್‌ಮೇಲ್‌; ಮರ್ಯಾದೆಗೆ ಅಂಜಿ ವಿಷ ಸೇವಿಸಿದ ಕುಟುಂಬಸ್ಥರು

Self Harming

ಚಾಮರಾಜನಗರ: ಮಲೆಮಹದೇಶ್ವರ ಬೆಟ್ಟದಲ್ಲಿ (MM Hills) ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ (Self Harming) ಯತ್ನಿಸಿದ ಪ್ರಕರಣಕ್ಕೆ ಟ್ವಿಸ್ಟ್‌ ಸಿಕ್ಕಿದೆ. ಚಂದಗಾಲು ಗ್ರಾಮದ ಮಹದೇವನಾಯಕ (65) ಅವರ ಪುತ್ರಿ ರಿಷಿಕಾ ಅನ್ಯಕೋಮಿನ ಯುವಕನನ್ನು ಪ್ರೀತಿಸುತ್ತಿದ್ದಳು. ಆದರೆ ಇತ್ತೀಚೆಗೆ ಆತನಿಂದ ಅಂತರ ಕಾಯ್ದುಕೊಂಡಾಗ ರಿಷಿಕಾಳ ಜತೆಗಿದ್ದ ನಗ್ನ ವಿಡಿಯೊ ಹಾಗೂ ಫೋಟೋ ಇಟ್ಟುಕೊಂಡು ಬೆದರಿಕೆ (Black mail Case) ಹಾಕುತ್ತಿದ್ದ ಎನ್ನಲಾಗಿದೆ.

ಈ ವಿಚಾರವಾಗಿ ಅನೇಕ ಬಾರಿ ಯುವಕನ ಹಾಗು ರಿಷಿಕಾ ಕುಟುಂಬದ ಜತೆ ಗಲಾಟೆ ಸಹ ಆಗಿದೆ. ಈತನ ಕಾಟಕ್ಕೆ ಬೇಸತ್ತ ಕುಟುಂಬ, ಮರ್ಯಾದೆಗೆ ಅಂಜಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ವಿಷ ಸೇವಿಸಿ ಅಸ್ವಸ್ಥಳಾಗಿದ್ದ ರಿಷಿಕಾಳನ್ನು ಹನೂರು ತಾಲೂಕಿನ ಹೋಲಿ ಕ್ರಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾಳೆ. ತಾಯಿ ಗೌರಮ್ಮ ಹಾಗೂ ಲೀಲಾವತಿಗೆ ಹೆಚ್ಚಿನ ಚಿಕಿತ್ಸೆಗೆಂದು ಕೊಳ್ಳೇಗಾಲದಿಂದ ಚಾಮರಾಜನಗರ ಸಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆಯಲ್ಲಿ ರಿಷಿಕಾ ತಂದೆ ಮಹದೇವನಾಯಕ ಅವರು ಮೃತಪಟ್ಟಿದ್ದಾರೆ.

ಇದನ್ನೂ ಓದಿ: Love‌ Torture : ಪ್ರೀತ್ಸೆ ಅಂತ ಪ್ರಾಣ ತಿಂದ; ಒಪ್ಪದೇ ಇದ್ದಾಗ ಯುವತಿಯ ಖಾಸಗಿ ಫೋಟೋ ಹರಿಬಿಟ್ಟ ಪಾಗಲ್‌ ಪ್ರೇಮಿ

ಮಾದಪ್ಪನ ದರ್ಶನ ಮಾಡಿ ವಿಷ ಸೇವಿಸಿದ ಕುಟುಂಬ

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ (Self Harming) ಯತ್ನಿಸಿದ್ದಾರೆ. ನಾಲ್ವರು ವಿಷ ಸೇವಿಸಿದ್ದು, ವ್ಯಕ್ತಿಯೊಬ್ಬರು ಮೃತಪಟ್ಟರೆ, ಮೂವರು ತೀವ್ರ ಅಸ್ವಸ್ಥಗೊಂಡಿದ್ದಾರೆ. ಮಲೆಮಹದೇಶ್ವರ ಬೆಟ್ಟ (MM Hills) ವ್ಯಾಪ್ತಿಯ ತಾಳಬೆಟ್ಟದಲ್ಲಿ ಘಟನೆ ನಡೆದಿತ್ತು.

ಚಂದಗಾಲು ಗ್ರಾಮದ ಮಹದೇವನಾಯಕ (65) ಮೃತ ದುರ್ದೈವಿ. ಅಸ್ವಸ್ಥಗೊಂಡ ಮಹದೇವನಾಯಕನ ಪತ್ನಿ ಗೌರಮ್ಮ(60), ರಿಷಿತಾ (21), ಲೀಲಾವತಿ (45) ಎಂಬುವವರು ತೀವ್ರ ಅಸ್ವಸ್ಥಗೊಂಡಿದ್ದಾರೆ. ಮೈಸೂರಿನ ಕೆಆರ್‌ನಗರ ತಾಲೂಕಿನ ಚಂದಗಾಲು ಗ್ರಾಮಸ್ಥರು ಎಂದು ತಿಳಿದು ಬಂದಿದೆ.

ಮಹದೇಶ್ವರ ಬೆಟ್ಟಕ್ಕೆ ಬಂದು ದೇವರ ದರ್ಶನ ಪಡೆದು ವಾಪಸ್ ಬರುವಾಗ ತಾಳ ಬೆಟ್ಟದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮಹದೇವನಾಯಕ ವಿಷ ಸೇವಿಸಿದ ಕೂಡಲೇ ಒದ್ದಾಡಿ ಮೃತಪಟ್ಟಿದ್ದಾರೆ. ಇತ್ತ ಗೌರಮ್ಮ, ಲೀಲಾವತಿ, ರಿಷಿತಾ ವಿಷ ಸೇವನೆ ಮಾಡಿದ್ದಾರೆ. ಆದರೆ ದೇಹದಲ್ಲಿ ಉರಿ ಕಾಣಿಸಿಕೊಂಡು ಜೋರಾಗಿ ಕೂಗಿಕೊಂಡು ನರಳಾಡಿದ್ದಾರೆ.

ಈ ವೇಳೆ ತಾಳ ಬೆಟ್ಟದಲ್ಲಿದ್ದ ಸ್ಥಳೀಯರು ಪರಿಶೀಲನೆ ನಡೆಸಿದಾಗ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವುದು ಕಂಡು ಬಂದಿದೆ. ಕೂಡಲೇ ಅಲ್ಲಿದ್ದವರು ನಾಲ್ವರನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ಮಹದೇವನಾಯಕರಿಗೆ ವಿಷ ದೇಹದೊಳಗೆ ಸೇರಿದ್ದರಿಂದ ಅದಾಗಲೇ ಉಸಿರು ಚೆಲ್ಲಿದ್ದರು. ಸದ್ಯ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version