Site icon Vistara News

ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲಿ ಮತ್ತೆ ಜಿಲ್ಲಾಸ್ಪತ್ರೆ ಆರಂಭ

ಚಾಮರಾಜನಗರ

ಚಾಮರಾಜನಗರ: ನಗರದ ಹೊರವಲಯದ ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಸಿಮ್ಸ್‌)ಗೆ ಜಿಲ್ಲಾಸ್ಪತ್ರೆಯನ್ನು ಸ್ಥಳಾಂತರ ಮಾಡಿದ್ದಕ್ಕೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಮತ್ತೆ ಮೊದಲಿದ್ದ(ಜಿಲ್ಲಾ ಕೇಂದ್ರ) ಸ್ಥಳದಲ್ಲೇ ಜಿಲ್ಲಾಸ್ಪತ್ರೆಯನ್ನು ಆರಂಭಿಸಲಾಗಿದೆ.

ಜನರಿಗೆ ಉತ್ತಮ ಆರೋಗ್ಯ ವ್ಯವಸ್ಥೆ ಕಲ್ಪಿಸಿಕೊಡಬೇಕು ಎಂದು ಜಿಲ್ಲಾ ಕೇಂದ್ರ ಭಾಗದಿಂದ ಸುಮಾರು 8 ಕಿ.ಮೀ. ದೂರದಲ್ಲಿ ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಸಿಮ್ಸ್‌) ನಿರ್ಮಾಣ ಮಾಡಲಾಗಿತ್ತು. ಇದಾದ ಬಳಿಕ ನಗರದಲ್ಲಿದ್ದ ಜಿಲ್ಲಾಸ್ಪತ್ರೆಯನ್ನು ಸಿಮ್ಸ್‌‌ ಸ್ವಾಧೀನಕ್ಕೆ ನೀಡಿ ಅಲ್ಲಿಗೆ ಸ್ಥಳಾಂತರಿಸಲಾಯಿತು. ಇದಕ್ಕೆ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಇದೀಗ ಮತ್ತೆ ಮೊದಲಿದ್ದ ಸ್ಥಳಕ್ಕೆ ಜಿಲ್ಲಾಸ್ಪತ್ರೆಯನ್ನು ಸ್ಥಳಾಂತರಿಸಲಾಗಿದೆ.

ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಸಿಮ್ಸ್‌)

ಚಾಮರಾಜನಗರದ ಹೃದಯ ಭಾಗದಲ್ಲಿದ್ದ ಜಿಲ್ಲಾಸ್ಪತ್ರೆಯನ್ನು ನಗರದ ಹೊರವಲಯದಲ್ಲಿರುವ ಯಡಬೆಟ್ಟದ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಿದ್ದರಿಂದ ರೋಗಿಗಳ ಓಡಾಟಕ್ಕೆ ಸಮಸ್ಯೆಯಾಗಿತ್ತು. ಹೀಗಾಗಿ ಸಾರ್ವಜನಿಕರು ಹಾಗೂ ಕೆಲ ಸಾಮಾಜಿಕ ಹೋರಾಟಗಾರರು ಆಸ್ಪತ್ರೆಯನ್ನು ನಗರದಲ್ಲೇ ಮತ್ತೆ ಆರಂಭ ಮಾಡಬೇಕು ಎಂದು ಆಗ್ರಹಿಸಿದ್ದರು. ಹೀಗಾಗಿ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರ ಆದೇಶದ ಮೇಲೆ ಮತ್ತೆ ಹಳೇ ಜಿಲ್ಲಾಸ್ಪತ್ರೆ ತೆರೆದು ಒಪಿಡಿ ವ್ಯವಸ್ಥೆ ಮಾಡಲಾಗಿದ್ದು, ಜನರು ಸಣ್ಣ ಪುಟ್ಟ ರೋಗಗಳಿಗೆ ಇಲ್ಲಿಯೇ ಚಿಕಿತ್ಸೆ ಪಡೆದುಕೊಳ್ಳಬಹುದು ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ವಿಶ್ವೇಶ್ವರಯ್ಯ ತಿಳಿಸಿದ್ದಾರೆ.

ಇದನ್ನೂ ಓದಿ | KPCC president Election | ನನ್ನ ಸ್ಪರ್ಧೆ ಬಗ್ಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುವೆ; ಡಿ.ಕೆ.ಶಿವಕುಮಾರ್‌

Exit mobile version