Site icon Vistara News

Tiger Attack : ಮರಿಯಾನೆ ಕೊಂದ ಹುಲಿ; ಶವ ಬಿಟ್ಟು ಕದಲದ ತಾಯಿ ಆನೆ ರೋಧನೆ

tiger attack

ಚಾಮರಾಜನಗರ: ಮರಿಯಾನೆ ಮೇಲೆ ಹುಲಿಯೊಂದು ದಾಳಿ (Tiger Attack) ಮಾಡಿದೆ. ಹುಲಿಯ ದಾಳಿಗೆ ತುತ್ತಾದ ಮರಿ ಆನೆಯು (Elephant death) ಮೃತಪಟ್ಟ ಘಟನೆ ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಅಭಯಾರಣ್ಯದಲ್ಲಿ (Bandipura Road) ನಡೆದಿದೆ.

ರಸ್ತೆ ಪಕ್ಕದಲ್ಲೇ ಮರಿಯಾನೆ ಮೃತಪಟ್ಟ ಕಾರಣದಿಂದಾಗಿ ತಾಯಿ ಆನೆಯು ಮರಿಯನ್ನು ಬಿಟ್ಟು ಕದಲದೇ ನಿಂತಿತ್ತು. ಮರಿಯಾನೆಯ ಶವವನ್ನು ಮುಟ್ಟುತ್ತಾ ಎಬ್ಬಿಸಲು ಪ್ರಯತ್ನಿಸುತ್ತಿತ್ತು. ಮರಿಯಾನೆ ಮುಂದೆ ಆನೆ ರೋಧನೆಯು ಎಂತಹವರಿಗೂ ಕರುಳು ಚುರುಕ್‌ ಎನ್ನುವಂತೆ ಮಾಡಿತ್ತು.

ರಸ್ತೆ ಪಕ್ಕದಲ್ಲೇ ಆನೆ ನಿಂತಿದ್ದರಿಂದ ಕಿಲೋ ಮೀಟರ್ ಗಟ್ಟಲೇ ವಾಹನಗಳು ಸಾಲುಗಟ್ಟಿ ನಿಂತಿತ್ತು. ಬಂಡೀಪುರ ಅರಣ್ಯ ವ್ಯಾಪ್ತಿಯ ಮೈಸೂರು- ಊಟಿ ರಸ್ತೆ ಸಂಚಾರ ಅಸ್ತವ್ಯಸ್ತವಾಗಿತ್ತು. ಆನೆಯನ್ನು ದಾಟಿ ವಾಹನಗಳು ಮುಂದೆ ಹೋಗಲು ಆಗದೆ ನಿಂತಲ್ಲೇ ನಿಲ್ಲುವಂತಾಗಿತ್ತು.

ಇದನ್ನೂ ಓದಿ: Forest Bathing: ಬೆಂಗಳೂರಲ್ಲೂ ಶುರು ಫಾರೆಸ್ಟ್‌ ಬಾಥಿಂಗ್‌; ಕಬ್ಬನ್ ಪಾರ್ಕ್‌ನಲ್ಲಿ ಮರ ಅಪ್ಪಲು ಕೊಡಬೇಕು 1500 ರೂ.!

ನಿಟ್ಟೂರು ಗ್ರಾಮದಲ್ಲಿ ಹುಲಿ ದಾಳಿಗೆ ವ್ಯಕ್ತಿ ಬಲಿ; ಕನಕಗಿರಿಯಲ್ಲಿ ಕರಡಿ ದಾಳಿಗೆ ವೃದ್ಧ ಸಾವು

ಕೊಡಗು: ಹುಲಿ ದಾಳಿಗೆ (Wild Animals Attack) ವ್ಯಕ್ತಿಯೊಬ್ಬ ಬಲಿಯಾಗಿದ್ದಾನೆ. ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ನಿಟ್ಟೂರು ಗ್ರಾಮದ ರಾಜಪುರ ರಸ್ತೆ ಸಮೀಪ ಗುರುವಾರ ಸಂಜೆ ಈ ಘಟನೆ ನಡೆದಿದೆ.

ಅಸ್ಸಾಂ ಮೂಲದ ಮೊಹಿಸೂರು ರೆಹಮಾನ್ (51) ಹುಲಿ ದಾಳಿಗೆ ಬಲಿಯಾದ ವ್ಯಕ್ತಿ. ಹಸುವಿನ ಮೇಲೆ ದಾಳಿ ಮಾಡಲು ಬಂದಂತಹ ಹುಲಿ, ಅಲ್ಲೇ ಇದ್ದ ಅಸ್ಸಾಂ ಮೂಲದ ಕಾರ್ಮಿಕ ಮೊಹಿಸೂರು ರೆಹಮಾನ್ ಮೇಲೆ ಎಗರಿ ಬಲಿ ತೆಗೆದುಕೊಂಡಿದೆ.

ಇದನ್ನೂ ಓದಿ: DRDO Test: ದೇಶೀಯ ತಂತ್ರಜ್ಞಾನದ ಕ್ರೂಸ್‌ ಕ್ಷಿಪಣಿಯ ಯಶಸ್ವಿ ಪರೀಕ್ಷೆ

ಘಟನೆಯ ಕುರಿತು ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಕೂಡಲೇ ಹುಲಿಯನ್ನು ಸೆರೆಹಿಡಿಯುವಂತೆ ಒತ್ತಾಯಿಸಿದ್ದಾರೆ. ಈ ಹುಲಿ ದಾಳಿಯಿಂದ ದಕ್ಷಿಣ ಕೊಡಗಿನ ಜನತೆ ಭಯ ಭೀತರಾಗಿದ್ದು, ಒಬ್ಬೋಬ್ಬರೆ ಓಡಾಡಲು ಹಾಗೂ ಕಾಫಿ ತೋಟದಲ್ಲಿ ಕೆಲಸ ಮಾಡಲು ಭಯಪಡುವ ಸ್ಥಿತಿ ನಿರ್ಮಾಣವಾಗಿದೆ. ಪೊನ್ನಂಪೇಟೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಕನಕಗಿರಿಯಲ್ಲಿ ಕರಡಿ ದಾಳಿಗೆ ವೃದ್ಧ ಬಲಿ

ಕರಡಿ ದಾಳಿಯಿಂದ ತೀವ್ರ ಗಾಯಗೊಂಡಿದ್ದ ವೃದ್ಧನೋರ್ವ ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ರಾಂಪುರ ಗ್ರಾಮದಲ್ಲಿ ಗುರುವಾರ ನಡೆದಿದೆ.

ಕರಡಿ ದಾಳಿ ಹಿನ್ನಲೆ ಘಟನಾ ಸ್ಥಳಕ್ಕೆ ಆಗಮಿಸಿದ್ದ ಅರಣ್ಯ ಇಲಾಖೆಯ ಅಧಿಕಾರಿಗಳನ್ನು ಸ್ಥಳೀಯರು ತೀವ್ರ ತರಾಟೆಗೆ ತೆಗೆದುಕೊಂಡರು.

ಚೆನ್ನಪ್ಪ (74) ಮೃತಪಟ್ಟ ವೃದ್ಧ. ರಾಂಪುರ ಗ್ರಾಮದ ಹೊರವಲಯದ ಕೆರೆ ಬಳಿ ಇರುವ ಆಂಜನೇಯ ದೇವಸ್ಥಾನದ ಬಳಿ ದುರ್ಘಟನೆ ನಡೆದಿದೆ.

ಘಟನೆಯ ಹಿನ್ನೆಲೆ

ದೇವಸ್ಥಾನದಲ್ಲಿದ್ದ ಕರಡಿಯನ್ನು ಗಮನಿಸಿದ್ದ ಗ್ರಾಮಸ್ಥರು ಅದನ್ನು ಕೂಡಿಹಾಕಿದ್ದರು. ಆದರೆ ಅಲ್ಲಿಂದ ತಪ್ಪಿಸಿಕೊಂಡು ಹೊರ ಬಂದ ಕರಡಿಯು ವೃದ್ಧ ಚೆನ್ನಪ್ಪನ ಮೇಲೆ ದಾಳಿ ನಡೆಸಿದ್ದು, ತೀವ್ರ ಗಾಯಗೊಂಡಿದ್ದ ವೃದ್ಧನನ್ನು ಚಿಕಿತ್ಸೆಗಾಗಿ ಕೊಪ್ಪಳ ಜಿಲ್ಲಾಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ವೃದ್ಧ ಚೆನ್ನಪ್ಪ ಸಾವನ್ನಪ್ಪಿದ್ದಾನೆ.

ಘಟನೆಯ ಹಿನ್ನಲೆಯಲ್ಲಿ ಸ್ಥಳಕ್ಕೆ ಆಗಮಿಸಿದ್ದ ಅರಣ್ಯ ಇಲಾಖೆಯ ಅಧಿಕಾರಿಗಳನ್ನು ಸ್ಥಳೀಯರು ತೀವ್ರ ತರಾಟೆಗೆ ತೆಗೆದುಕೊಂಡರು. ಕರಡಿಯನ್ನು ಸೆರೆ ಹಿಡಿಯಲು ಬೇಕಾದ ಬೋನು ಮತ್ತು ಇತರೆ ಪರಿಕರಗಳನ್ನು ತರದೇ ಹಾಗೆ ಬರೀಗೈಯ್ಯಲ್ಲಿ ಬಂದಿದ್ದ ಅಧಿಕಾರಿ, ಸಿಬ್ಬಂದಿಯನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡು, ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಕರಡಿ ಉಪಟಳವನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಕನಕಗಿರಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version