ಹುಬ್ಬಳ್ಳಿ: ಸರಳವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಹತ್ಯೆ [Chandrasekhar Guruji Murder Case] ಪ್ರಕರಣದ ಆರೋಪಿಗಳನ್ನು ಪೊಲೀಸ್ ಕಸ್ಟಡಿ ಸೋಮವಾರ (ಜುಲೈ ೧೮) ಕೊನೆಗೊಂಡಿದ್ದು, ಮಂಗಳವಾರ ನ್ಯಾಯಾಲಯಕ್ಕೆ ಹಾಜರುಪಡಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಪ್ರಕರಣದ ತನಿಖೆ ಬಹುತೇಕ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಪೊಲೀಸರು ಮತ್ತೆ ಆರೋಪಿಗಳನ್ನು ತಮ್ಮ ವಶಕ್ಕೆ ಒಪ್ಪಿಸುವಂತೆ ಮನವಿ ಮಾಡಲಿಲ್ಲ. ಆರಂಭದಲ್ಲಿ ಹೆಚ್ಚಿನ ವಿಚಾರಣೆಗೆಂದು ಪೊಲೀಸರು ಮೊದಲು 6 ದಿನಗಳ ಕಾಲ ಕಸ್ಟಡಿಗೆ ಪಡೆದುಕೊಂಡಿದ್ದರು. ಬಳಿಕ ಮತ್ತೆ 6 ದಿನಗಳ ಕಾಲ ಅವಧಿಯನ್ನು ವಿಸ್ತರಿಸಲಾಗಿತ್ತು. ಈಗ ಈ ಅವಧಿಯು ಪೂರ್ಣಗೊಂಡ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಿದ್ದಾರೆ.
ಇದನ್ನೂ ಓದಿ | ಚಂದ್ರಶೇಖರ ಗುರೂಜಿ ಹತ್ಯೆಗೂ ಮುಂಚೆ ವಾಟ್ಸ್‌ಆ್ಯಪ್‌ನಲ್ಲಿ ಕ್ರಿಯೇಟ್ ಆಗಿತ್ತು ಗ್ರೂಪ್!
ಆರೋಪಿಗಳಾದ ಮಹಾಂತೇಶ ಶಿರೂರ ಹಾಗೂ ಮಂಜುನಾಥ ಮರೇವಾಡನನ್ನು ವಿದ್ಯಾನಗರ ಠಾಣೆ ಪೊಲೀಸರು ಹುಬ್ಬಳ್ಳಿಯ ಹೆಚ್ಚುವರಿ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪಿಗಳನ್ನು ನ್ಯಾಯಾಂಗ ಬಂಧಕ್ಕೆ ಒಪ್ಪಿಸಿದ್ದಾರೆ.
ಇದನ್ನೂ ಓದಿ | ಮಹಾಂತೇಶನ ಕೊಲೆಗೇ ಸಂಚು ರೂಪಿಸಿದ್ದರಂತೆ ಚಂದ್ರಶೇಖರ ಗುರೂಜಿ