ಮಹಾಂತೇಶನ ಕೊಲೆಗೇ ಸಂಚು ರೂಪಿಸಿದ್ದರಂತೆ ಚಂದ್ರಶೇಖರ ಗುರೂಜಿ - Vistara News

ಕರ್ನಾಟಕ

ಮಹಾಂತೇಶನ ಕೊಲೆಗೇ ಸಂಚು ರೂಪಿಸಿದ್ದರಂತೆ ಚಂದ್ರಶೇಖರ ಗುರೂಜಿ

ಚಂದ್ರಶೇಖರ್‌ ಗುರೂಜಿ ನನ್ನನ್ನೇ ಕೊಲೆ ಮಾಡಲು ಸ್ಕೆಚ್‌ ಹಾಕಿದ್ದರು. ಜೀವ ಭಯದಲ್ಲಿ ಅವರನ್ನೇ ಹತ್ಯೆ ಮಾಡಿದೆ ಎಂದು ಹಂತಕ ಮಹಾಂತೇಶ ಶಿರೂರ್‌ ತನಿಖಾಧಿಕಾರಿಗಳ ಮುಂದೆ ಹೇಳಿಕೆ ಕೊಟ್ಟಿದ್ದಾನೆ

VISTARANEWS.COM


on

ಚಂದ್ರಶೇಖರ ಗುರೂಜಿ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹುಬ್ಬಳ್ಳಿ: ಗುರೂಜಿ ನನ್ನನ್ನೇ ಕೊಲೆ ಮಾಡಲು ಸಂಚು ರೂಪಿಸಿದ್ದರು. ಅದಕ್ಕೆ ಪ್ರಯತ್ನಗಳನ್ನೂ ನಡೆಸಿದ್ದರು. ಹೀಗಾಗಿ ಅವರನ್ನೇ ಹತ್ಯೆ ಮಾಡಿದೆ. ಹೀಗೆಂದು ಹೇಳಿಕೆ ಕೊಟ್ಟು ತನಿಖಾಧಿಕಾರಿಗಳನ್ನೇ ಬೆಚ್ಚಿ ಬೀಳಿಸಿದ್ದಾನೆ ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣ ಆರೋಪಿ ಮಹಾಂತೇಶ ಶಿರೂರ್‌.

ಕೊಲೆ ಆರೋಪಿಗಳನ್ನು ಹುಬ್ಬಳ್ಳಿಯಲ್ಲಿ ತೀವ್ರ ವಿಚಾರಣೆ ಒಳಪಡಿಸಲಾಗುತ್ತಿದ್ದು, ಕ್ಷಣಕ್ಷಣಕ್ಕೂ ಅಚ್ಚರಿಯ ಸಂಗತಿಗಳನ್ನು ಬಾಯ್ಬಿಡುತ್ತಿದ್ದಾರೆ.

ತನ್ನನ್ನು ಕೊಲೆ ಮಾಡಲು ಗುರೂಜಿ ಸ್ಕೆಚ್‌ ಹಾಕಿದ್ದರು. ಅಲ್ಲದೇ ತಮ್ಮ ಹಿಂಬಾಲಕರ ಮೂಲಕ ಹಲ್ಲೆ ಮಾಡಿಸಿದ್ದರು. ಹುಬ್ಬಳ್ಳಿಯ ಅಮರಗೋಳದ ನ್ಯಾಯಾಧೀಶರ ಕಾಲೊನಿಯಲ್ಲಿ ಹಲ್ಲೆ ಮಾಡಲಾಗಿದೆ ಎಂದು ಆರೋಪಿ ಮಹಾಂತೇಶ ಪೊಲೀಸರ ಮುಂದೆ ಹೇಳಿಕೆ ಕೊಟ್ಟಿದ್ದಾನೆ.

ಸರಳವಾಸ್ತು ಕಚೇರಿ ಸಿಬ್ಬಂದಿಯಿಂದಲೇ ಹಲ್ಲೆ

ನನ್ನ ಮೇಲೆ ಚಂದ್ರಶೇಖರ ಗುರೂಜಿಯವರ ಸರಳವಾಸ್ತು ಕಚೇರಿಯ ಸಿಬ್ಬಂದಿ ಹಲ್ಲೆ ನಡೆಸಿದ್ದಾರೆ. ಈ ಕುರಿತು ನವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದೆ. ಅವರು ಹಲ್ಲೆ ನಡೆಸಿದ ಬಳಿಕ ಜೀವ ಭಯ ಕಾಡುತ್ತಿತ್ತು ಎಂಬುದು ಮಹಾಂತೇಶನ ಹೇಳಿಕೆಯಾಗಿದೆ.

4.5 ಎಕರೆ ಜಮೀನಿನ ಗಲಾಟೆ

ಹುಬ್ಬಳ್ಳಿಯ ತಾರಿಹಾಳ ಕೈಗಾರಿಕಾ ಪ್ರದೇಶದಲ್ಲಿರುವ 4.5 ಎಕರೆ ಜಮೀನಿಗಾಗಿ ಚಂದ್ರಶೇಖರ ಗುರೂಜಿ ಹಾಗೂ ಹಂತಕ ಮಹಾಂತೇಶನ ನಡುವೆ ತಿಕ್ಕಾಟವಿತ್ತು ಎಂದು ಹೇಳಲಾಗುತ್ತಿದೆ.

10 ಕೋಟಿ ಬೆಲೆ ಬಾಳುವ ಆ ಆಸ್ತಿಗಾಗಿ ಇಬ್ಬರ ನಡುವೆ ಕಲಹ ನಡೆಯುತ್ತಿತ್ತು. ಸರಳ ವಾಸ್ತು ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಾಗ ಮಹಾಂತೇಶನ ಹೆಸರಲ್ಲಿ ಗುರೂಜಿ ಆಸ್ತಿ ಖರೀದಿ ಮಾಡಿದ್ದರು. ಆದರೆ ಕೆಲಸ ಬಿಟ್ಟ ಬಳಿಕ ಜಮೀನು ವಾಪಸ್‌ ಕೊಡಲು ನಿರಾಕರಿಸಿದ್ದ. ಹೀಗಾಗಿ ಚಂದ್ರಶೇಖರ ಗುರೂಜಿ ತನ್ನ ಮೇಲೆ ಏನಾದರೂ ಕ್ರಮ ಕೈಗೊಳ್ಳಬಹುದು ಎಂಬ ಆತಂಕದಿಂದ ಕೊಲೆ ಮಾಡಿದ್ದಾನೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಚಂದ್ರಶೇಖರ ಗುರೂಜಿ ಹತ್ಯೆ ನಂತರ ಹುಬ್ಬಳ್ಳಿ ಪ್ರೆಸಿಡೆಂಟ್‌ ಹೋಟೆಲ್‌ನಲ್ಲಿ ಸುದರ್ಶನ ಹೋಮ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Prajwal Revanna Case: ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಜಾ; ಮತ್ತೆ ಜೈಲೇ ಗತಿ

Prajwal Revanna Case: ಮನೆಗೆಲಸದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಹೊಳೆನರಸೀಪುರ ಟೌನ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಪ್ರಜ್ವಲ್‌ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ, 82ನೇ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ವಜಾ ಮಾಡಿದೆ.

VISTARANEWS.COM


on

Prajwal revanna Case
Koo

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna Case) ಜಾಮೀನು ಅರ್ಜಿ ವಜಾಗೊಂಡಿದೆ. ಹೊಳೆನರಸೀಪುರ ಪ್ರಕರಣದಲ್ಲಿ ಪ್ರಜ್ವಲ್‌ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ, 82ನೇ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಜಡ್ಜ್‌ ಸಂತೋಷ್‌ ಗಜಾನನ ಭಟ್‌ ಅವರು ಜಾಮೀನು ಅರ್ಜಿ ವಜಾಗೊಳಿಸಿದ್ದು, ಇದರಿಂದ ಸದ್ಯ ಪ್ರಜ್ವಲ್‌ಗೆ ಜೈಲೇ ಗತಿಯಾಗಿದೆ.

ಮನೆಗೆಲಸದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಹೊಳೆನರಸೀಪುರ ಟೌನ್ ಠಾಣೆಯಲ್ಲಿ ಮೊದಲು ಪ್ರಕರಣ ದಾಖಲಾಗಿತ್ತು. ನಂತರ ಪ್ರಜ್ವಲ್ ಮೇಲೆ ಅತ್ಯಾಚಾರ ಆರೋಪವನ್ನು ಪ್ರಕರಣದಲ್ಲಿ ಸೇರಿಸಲಾಗಿತ್ತು. ಪ್ರಕರಣದಲ್ಲಿ ಈಗಾಗಲೇ ಮಾಜಿ ಸಚಿವ ಎಚ್‌.ಡಿ. ರೇವಣ್ಣ ಜಾಮೀನು ಪಡೆದುಕೊಂಡಿದ್ದರು. ಆದರೆ, ಪ್ರಜ್ವಲ್‌ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ.

ʼಪ್ರತಿ ದಿನ ಫೋನ್‌ ಮಾಡಿ ಬಟ್ಟೆ ಕಳಚಲು ಹೇಳ್ತಿದ್ದ…ʼ ಪ್ರಜ್ವಲ್‌ ವಿರುದ್ಧ ದಾಖಲಾದ 4ನೇ ದೂರಿನಲ್ಲಿ ಏನಿದೆ?

prajwal revanna case 4th


ಬೆಂಗಳೂರು: ಲೈಂಗಿಕ ದೌರ್ಜನ್ಯ (Physical Abuse) ಪ್ರಕರಣದ ಆರೋಪಿ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna Case) ವಿರುದ್ಧ ನಾಲ್ಕನೇ ಪ್ರಕರಣ ದಾಖಲಾಗಿದ್ದು, ಆರೋಪಿಯ ಕುರಿತು ಇನ್ನಷ್ಟು ವಿಕೃತಿಯ ದೂರುಗಳು ದಾಖಲಾಗಿವೆ. ಈ ಪ್ರಕರಣದಲ್ಲಿ ಮಾಜಿ ಶಾಸಕ ಪ್ರೀತಂ ಗೌಡ (Preetham Gowda) ಹೆಸರು ಕೂಡ ತಳುಕು ಹಾಕಿಕೊಂಡಿದೆ.

ಸಿಐಡಿ ಸೈಬರ್ ಕ್ರೈಂ (CID Cyber Crime) ಠಾಣೆಯಲ್ಲಿ ಸಂತ್ರಸ್ತೆ ನೀಡಿದ ದೂರಿನನ್ವಯ ಎಫ್ಐಆರ್ (FIR) ದಾಖಲಾಗಿದೆ. ಎಫ್ಐಆರ್‌ನಲ್ಲಿ ಸಂತ್ರಸ್ತೆಯಿಂದ ಉಲ್ಲೇಖವಾಗಿರುವ ಅಂಶಗಳು ಹೀಗಿವೆ: ಮಗನ ಶಾಲೆ‌ ವಿಚಾರಕ್ಕೆ ಪ್ರಜ್ವಲ್‌ನನ್ನು ಸಂತ್ರಸ್ತ ಮಹಿಳೆ ಭೇಟಿಯಾಗಿದ್ದರು. ಭೇಟಿ ವೇಳೆ ಸಂತ್ರಸ್ತೆಯಿಂದ ಪ್ರಜ್ವಲ್‌ ಫೋನ್‌ ನಂಬರ್ ಪಡೆದಿದ್ದ. ನಂಬರ್‌ ಪಡೆದು ವಿಡಿಯೊ ಕಾಲ್ ಮಾಡಿ ದಿನ ನಿತ್ಯ ಮಾತಾಡುತ್ತಿದ್ದ.

ನಂತರ ಮಹಿಳೆಗೆ ವಿಡಿಯೊ ಕಾಲ್ ಮಾಡಿ ವಿವಸ್ತ್ರವಾಗುವಂತೆ ಒತ್ತಾಯಿಸುತ್ತಿದ್ದ. ವಿವಸ್ತ್ರಗೊಂಡ ಮಹಿಳೆಯನ್ನು ನೋಡುತ್ತ ಹಸ್ತಮೈಥುನ ಮಾಡಿಕೊಳ್ಳುತ್ತಿದ್ದ. ವಿವಸ್ತ್ರವಾಗಲು ಒಪ್ಪದಿದ್ದಾಗ ವಿಡಿಯೊ ಸೇವ್ ಮಾಡಿಕೊಂಡಿರುವುದಾಗಿಯೂ, ವೈರಲ್ ಮಾಡುವುದಾಗಿಯೂ ಬೆದರಿಕೆ ಹಾಕಿದ್ದ ಎಂದು ಆರೋಪಿಸಲಾಗಿದೆ.

ನಂತರ ಏಕಾಏಕಿ ಸಾಮಾಜಿಕ ಜಾಲತಾಣದಲ್ಲಿ ಈ ಫೋಟೊ ವೈರಲ್ ಆಗಿರುವ ವಿಚಾರ ಸಂತ್ರಸ್ತೆ ಗಮನಕ್ಕೆ ಬಂದಿದೆ. ಈ ಕುರಿತು ಪ್ರಜ್ವಲ್‌ನನ್ನು ಸಂತ್ರಸ್ತ ಮಹಿಳೆ ಸಂಪರ್ಕ ಮಾಡಿದ್ದಾರೆ. ಆಗ ʼಸ್ಟೇ ತಂದಿದ್ದೇನೆ, ಏನೂ ಆಗಲ್ಲʼ ಎಂದಿದ್ದರಂತೆ. ಎರಡನೇ ಬಾರಿ ಫೋಟೊ ವೈರಲ್ ಆದಾಗ ಸಂತ್ರಸ್ತೆ ದೂರು ನೀಡಲು ಮುಂದಾಗಿದ್ದರು.

ಇದನ್ನೂ ಓದಿ: Suraj Revanna Case: ಸೂರಜ್‌ ರೇವಣ್ಣಗೇ ʼಹಿಂದಿನಿಂದ ಇರಿದವರುʼ ಯಾರು?

ವೈರಲ್ ಆದ ಕೆಲವು ಫೋಟೊಗಳನ್ನು ಕಿರಣ್, ಶರತ್ ಹಾಗೂ ಪ್ರೀತಂ ಗೌಡ ವೈರಲ್‌ ಮಾಡಿಸಿರುವ ಆರೋಪ ಇದೆ. ಈ ಹಿನ್ನೆಲೆಯಲ್ಲಿ ಒಟ್ಟು ನಾಲ್ಕು ಜನರ ಮೇಲೆ ದೂರು ನೀಡಲು ಮಹಿಳೆ ಮುಂದಾಗಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಎಸ್ಐಟಿ ಅಧಿಕಾರಿಗಳಿಂದ ತನಿಖೆ‌ ಚುರುಕುಗತಿ ಪಡೆದುಕೊಂಡಿದೆ.

Continue Reading

ಕರ್ನಾಟಕ

Renuka Swamy Murder: ರೇಣುಕಾಸ್ವಾಮಿ ಕೊಲೆ ಕೇಸ್‌; ಬೆಂಗಳೂರಿನಿಂದ ತುಮಕೂರು ಜೈಲು ಸೇರಿದ ನಾಲ್ವರು ಆರೋಪಿಗಳು

Renuka Swamy Murder: ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಆದೇಶದ ಹಿನ್ನೆಲೆ‌ಯಲ್ಲಿ ರೇಣುಕಾಸ್ವಾಮಿ ಕೊಲೆ ಕೇಸ್‌ನ ನಾಲ್ವರು ಆರೋಪಿಗಳನ್ನು ಬೆಂಗಳೂರಿನಿಂದ ತುಮಕೂರು ಜೈಲಿಗೆ ಸ್ಥಳಾಂತರ ಮಾಡಲಾಗಿದೆ.

VISTARANEWS.COM


on

Renuka Swamy Murder
Koo

ತುಮಕೂರು‌: ನಟ ದರ್ಶನ್ ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣ (Renuka Swamy Murder) ನಾಲ್ವರು ಆರೋಪಿಗಳನ್ನು ತುಮಕೂರಿನ ಜೈಲಿಗೆ ಪೊಲೀಸರು ಕರೆತಂದಿದ್ದಾರೆ. ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಆದೇಶದ ಹಿನ್ನೆಲೆ‌ಯಲ್ಲಿ ನಾಲ್ವರು ಆರೋಪಿಗಳನ್ನು ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಿಂದ ತುಮಕೂರು ಜೈಲಿಗೆ ಶಿಫ್ಟ್‌ ಮಾಡಲಾಗಿದೆ.‌

ಆರೋಪಿಗಳಾದ ರವಿಶಂಕರ್, ಕಾರ್ತಿಕ್, ಕೇಶವ್, ನಿಖಿಲ್ ತುಮಕೂರು ಜೈಲಿಗೆ ಸ್ಥಳಾಂತರಗೊಂಡಿದ್ದಾರೆ. ಬಿಗಿ ಪೊಲೀಸ್ ಭದ್ರತೆಯಲ್ಲಿ ನಾಲ್ವರು ಆರೋಪಿಗಳನ್ನು ತುಮಕೂರಿನ ಊರುಕೆರೆ ಬಳಿಯ ರಂಗಾಪುರದಲ್ಲಿರುವ ಜಿಲ್ಲಾ ಕಾರಾಗೃಹಕ್ಕೆ ಸ್ಥಳಾಂತರ ಮಾಡಲಾಗಿದೆ. ಕಾರಾಗೃಹ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಭದ್ರತಾ ದೃಷ್ಟಿಯಿಂದ ಈ ನಾಲ್ವರು ಆರೋಪಿಗಳನ್ನು ಪ್ರತ್ಯೇಕವಾಗಿಡಲು ಕೋರ್ಟ್ ಆದೇಶಿಸಿತ್ತು. ಹೀಗಾಗಿ ತುಮಕೂರು ಜಿಲ್ಲಾ ಕಾರಾಗೃಹಕ್ಕೆ ಆರೋಪಿಗಳನ್ನು ಕರೆತರಲಾಗಿದೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣದ (Renuka Swamy Murder) ನಾಲ್ವರು ಆರೋಪಿಗಳನ್ನು ತುಮಕೂರು ಜೈಲಿಗೆ ಶಿಫ್ಟ್ ಮಾಡಲು 24ನೇ ಎಸಿಎಂಎಂ ಕೋರ್ಟ್ ಜೂನ್‌ 24ರಂದು ಆದೇಶ ನೀಡಿತ್ತು. ಅರ್ಜಿ ವಿಚಾರಣೆ ವೇಳೆ ಆರೋಪಿಗಳ ಪರ ವಕೀಲರು ತುಮಕೂರು ಜೈಲಿಗೆ ವರ್ಗಾವಣೆಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಆದರೆ, ಆರೋಪಿಗಳ ವರ್ಗಾವಣೆ ಯಾಕೆ ಅಗತ್ಯ ಎಂದು ಎಸ್‌ಪಿಪಿ ಪ್ರಸನ್ನ ಕುಮಾರ್ ವಿವರಿಸಿದ್ದರು.

ಇದನ್ನೂ ಓದಿ | Actor Darshan: ರೇಣುಕಾಸ್ವಾಮಿ ಹಲ್ಲೆಗೆ ಬಳಸಿದ್ದ ʻಪೊಲೀಸ್ ಲಾಠಿʼ ಪತ್ತೆ! ʻಡಿ ಗ್ಯಾಂಗ್‌ʼಗೆ ಸಿಕ್ಕಿದ್ದು ಹೇಗೆ?

ಕೊಲೆ ನಡೆದ ಬಳಿಕ ಮೊದಲು ಪೊಲೀಸರ ಮುಂದೆ ಕಾರ್ತಿಕ್‌, ಕೇಶವ್ ಮತ್ತು ನಿಖಿಲ್ ಶರಣಾಗಿದ್ದರು. ಈ ಮೂವರು ಕೊಲೆ ಬಗ್ಗೆ ಸಂಪೂರ್ಣವಾಗಿ ಪೊಲೀಸರ ಮುಂದೆ ಬಾಯ್ಬಿಟ್ಟಿದ್ದರು. ಇದರಿಂದ ದರ್ಶನ್ ಮತ್ತು ಗ್ಯಾಂಗ್ ಅರೆಸ್ಟ್ ಆಗಿತ್ತು. ಒಂದೇ ಜೈಲಿನಲ್ಲಿದ್ದರೇ ಅವರವರೇ ಹೊಡೆದಾಡಿಕೊಳ್ಳುವ ಸಾಧ್ಯತೆ ಇದ್ದು, ನಾಲ್ವರು ಆರೋಪಿಗಳ ಜೀವಕ್ಕೆ ಅಪಾಯ ಇರುವ ಸಾಧ್ಯತೆ ಹಿನ್ನೆಲೆಯಲ್ಲಿ ಅವರನ್ನು ತುಮಕೂರು ಜೈಲಿಗೆ ಶಿಫ್ಟ್‌ ಮಾಡಲು ಕ್ರಮ ಕೈಗೊಳ್ಳಲಾಗಿದೆ.

ರೇಣುಕಾಸ್ವಾಮಿಯನ್ನ ಹೀರೊ ಮಾಡೋದು ನಿಲ್ಲಿಸಿ, ದರ್ಶನ್‌ನ ಬಿಟ್ಟುಕೊಡಲ್ಲ ಎಂದ ಖ್ಯಾತ ನಿರೂಪಕಿ!

Actor Darshan support by anchor hemalatha

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿಯ ಭೀಕರ (Actor Darshan) ಹತ್ಯೆಯಲ್ಲಿ ಪವಿತ್ರಾ ಗೌಡ ಹಾಗೂ ದರ್ಶನ್​ 14ದಿನಗಳ ವರೆಗೆ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. ಹಲವರು ನಟನ ಬೆಂಬಲಕ್ಕೆ ನಿಂತಿದ್ದರು. ನಟಿ ಸಂಜನಾ ಗಲ್ರಾನಿ ಅವರು ಕೂಡ ಸ್ಪಷ್ಟ ಅಭಿಪ್ರಾಯ ನೀಡಿ ದರ್ಶನ್ ತೂಗುದೀಪ ಬೆಂಬಲಕ್ಕೆ ನಿಂತಿದ್ದರು. ಇದರ ಬೆನ್ನಲ್ಲೇ ಕನ್ನಡದ ಖ್ಯಾತ ನಿರೂಪಕಿ ಹೇಮಾಲತಾ ತಮ್ಮ ಇನ್‌ಸ್ಟಾ ಖಾತೆಯಲ್ಲಿ ದರ್ಶನ್‌ ಜೊತೆಗಿನ ಫೋಟೋ ಹಂಚಿಕೊಂಡು ಮೃತ ರೇಣುಕಾಸ್ವಾಮಿಯನ್ನು ಹೀರೋ ಮಾಡುವುದನ್ನು ನಿಲ್ಲಿಸಿ ಎಂದು ಬರೆದುಕೊಂಡಿದ್ದಾರೆ.

ನಿರೂಪಕಿ ಹೇಮಾಲತಾ ಪೋಸ್ಟ್‌ನಲ್ಲಿ ʻʻಸಾವಿರ ಜನ ಸಾವಿರ ಮಾತನಾಡಲಿ.. ಒಮ್ಮೆ ಬೆಳೆದ ಸ್ನೇಹಕ್ಕೆ ಕಡಲಿನಸ್ಟಿರುವ ಪ್ರೀತಿಗೆ ನಾವೆಲ್ಲರೂ ಋಣಿಗಳೇ.. ಸ್ನೇಹಾವೆಂಬ ಸಂಕೋಲೆಯಲಿ ಒಮ್ಮೆ ಸಿಕ್ಕಿಕೊಂಡರೆ ಕೊಂಡಿ ಕಳಚುವುದಿಲ್ಲ…
ಅಂದಿಗೂ ಇಂದಿಗೂ ಎಂದೆಂದಿಗೂ ಮರೆಯುವುದಿಲ್ಲ, ಬಿಡುವುದಿಲ್ಲ, ಬಿಟ್ಟುಕೊಡುವುದಿಲ್ಲ. ಈ ಘಟನೆಗೆ ಏನು ಹೇಳಬೇಕು ಎಂದು ತಿಳಿಯುತ್ತಿಲ್ಲ, ಕಾನೂನಿನ ಮುಖಾಂತರ ಅಂತ್ಯವನ್ನಾಡಿ ಎಲ್ಲಾ ಕಳಂಕವನ್ನು ತೊಳೆದುಕೊಂಡು ಹೊರಗೆ ಬನ್ನಿ. ನಿಮ್ಮ ಮೇಲಿರುವ ಪ್ರೀತಿ ಗೌರವ ಎಂದಿಗೂ ಕಮ್ಮಿ ಆಗುವುದಿಲ್ಲ. ಅಲ್ಲದೇ ಕೊಲೆಯಾಗಿರುವ ರೇಣುಕಾಸ್ವಾಮಿಯನ್ನು ಹೀರೋ ಎನ್ನುವಂತೆ ಬಿಂಬಿಸಬೇಡಿʼʼ ಎಂದು ನಿರೂಪಕಿ ಹೇಮಾಲತಾ ಮನವಿ ಮಾಡಿದ್ದಾರೆ.

ಇದನ್ನೂ ಓದಿ: Actor Darshan: ರೇಣುಕಾಸ್ವಾಮಿ ಹಲ್ಲೆಗೆ ಬಳಸಿದ್ದ ʻಪೊಲೀಸ್ ಲಾಠಿʼ ಪತ್ತೆ! ʻಡಿ ಗ್ಯಾಂಗ್‌ʼಗೆ ಸಿಕ್ಕಿದ್ದು ಹೇಗೆ?

ಇನ್ನು ಈ ಹಿಂದೆ ಬಿಗ್‌ಬಾಸ್‌ ಸ್ಪರ್ಧಿ ಇಶಾನಿ ದರ್ಶನ್‌ ಜೊತೆಗಿನ ಫೋಟೋ ಹಂಚಿಕೊಂಡು, ದರ್ಶನ್ ಸರ್ ತಪ್ಪು ಮಾಡಿದ್ದರೆ ಅವರಿಗೆ ಶಿಕ್ಷೆಯಾಗಲಿ ಎಂದಿದ್ದಾರೆ. ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಇಶಾನಿ, ನಿಜಕ್ಕೂ ಇದು ಅಘಾತಕಾರಿ ಸುದ್ದಿ. ಒಬ್ಬ ಅಣ್ಣನ ರೂಪದಲ್ಲಿ ನಾನು ಕಂಡ ದರ್ಶನ್ ಸರ್ ನಿಜಕ್ಕೂ ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂದು ಕೇಳಿದಾಗ ನಂಬಲು ಸಾಧ್ಯವಾಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

Continue Reading

ಬೆಂಗಳೂರು

Bengaluru News: ಗೋ ಶಾಲೆಗಳಿಗೆ 51 ಲಕ್ಷ ರೂ. ದೇಣಿಗೆ ನೀಡಿದ ಗೋಪ್ರೇಮಿ ಮಹೇಂದ್ರ ಮುನ್ನೋತ್

Bengaluru News: ನಮ್ಮ ತಂದೆ-ತಾಯಿಯ ಋಣವನ್ನು ತೀರಿಸಲು ಅಸಾಧ್ಯ. ಆದರೆ ಜೀವನಪೂರ್ತಿ ಪಂಚಾಮೃತವನ್ನು ನೀಡುವ ಗೋಮಾತೆಯ ಋಣವನ್ನು ಖಂಡಿತಾ ತೀರಿಸಬಹುದು. ಗೋವು ನಮ್ಮ ಸನಾತನ ಪರಂಪರೆಯ ದೈವೀಮೂರ್ತಿ ಮಾತ್ರವಲ್ಲ ಒಂದು ರೀತಿಯ ಪಾಪನಾಶಿನಿ. ಅಲ್ಲದೇ ಭಾರತೀಯ ಕೃಷಿ ವ್ಯವಸ್ಥೆಯ ಮಹಾಪಾತ್ರ ಮತ್ತು ಅನ್ನದಾತನ ಜೀವಬಂಧು ಎಂದು ನಟ, ನಿರ್ಮಾಪಕ ಹಾಗೂ ಗೋಪ್ರೇಮಿ ಮಹೇಂದ್ರ ಮನ್ನೋತ್ ಅಭಿಪ್ರಾಯಪಟ್ಟರು.

VISTARANEWS.COM


on

actor producer and Cow lover Mahendra Munnoth donated 51 lakh rupees to cow shelter
Koo

ಬೆಂಗಳೂರು: ತಾಯಿಯ ಋಣವನ್ನು ತೀರಿಸಲು ಅಸಾಧ್ಯ. ಆದರೆ ತಾಯಿಯಂತೆ ನಮ್ಮನ್ನು ಪೊರೆಯುವ ಗೋಮಾತೆಯ ಋಣವನ್ನು ತೀರಿಸಲು ಖಂಡಿತಾ ಸಾಧ್ಯ ಎಂದು ನಟ, ನಿರ್ಮಾಪಕ ಹಾಗೂ ಗೋಪ್ರೇಮಿ ಮಹೇಂದ್ರ ಮುನ್ನೋತ್ ತಿಳಿಸಿದರು.

ನಗರದ ಕನಕಪುರ ರಸ್ತೆಯ ದಿಣ್ಣೆಪಾಳ್ಯದಲ್ಲಿರುವ ಅಮೃತಧಾರಾ ಗೋಶಾಲೆಯಲ್ಲಿ ಹಮ್ಮಿಕೊಂಡಿದ್ದ ಗೋಪೂಜೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ನಮ್ಮ ತಂದೆ-ತಾಯಿಯ ಋಣವನ್ನು ತೀರಿಸಲು ಅಸಾಧ್ಯ. ಆದರೆ ಜೀವನಪೂರ್ತಿ ಪಂಚಾಮೃತವನ್ನು ನೀಡುವ ಗೋಮಾತೆಯ ಋಣವನ್ನು ಖಂಡಿತಾ ತೀರಿಸಬಹುದು. ಅಲ್ಲದೇ ಗೋವು ನಮ್ಮ ಸನಾತನ ಪರಂಪರೆಯ ದೈವೀಮೂರ್ತಿ ಮಾತ್ರವಲ್ಲ ಒಂದು ರೀತಿಯ ಪಾಪನಾಶಿನಿ. ಅಲ್ಲದೇ ಭಾರತೀಯ ಕೃಷಿ ವ್ಯವಸ್ಥೆಯ ಮಹಾಪಾತ್ರ ಮತ್ತು ಅನ್ನದಾತನ ಜೀವಬಂಧು. ಅಂತಹ ಗೋವನ್ನು ಉಳಿಸಿದರೆ ಕೇವಲ ಗ್ರಾಮ ಮಾತ್ರವಲ್ಲ ಇಡೀ ದೇಶ ಸಮೃದ್ಧಿ, ಸಂಪದ್ಭರಿತ ಭೂಮಿಯಾಗುತ್ತದೆ. ಈ ನಂಬಿಕೆಯನ್ನು ಪ್ರತಿಯೊಬ್ಬ ಭಾರತೀಯನೂ ಅರ್ಥೈಸಿಕೊಳ್ಳಬೇಕಿದೆ ಎಂದು ತಿಳಿಸಿದರು.

ಇದನ್ನೂ ಓದಿ: Kalaburagi News: ಪಂಢರಪುರ, ತುಳಜಾಪುರ ಮಾದರಿಯಲ್ಲಿ ಗಾಣಗಾಪುರ ಕ್ಷೇತ್ರ ಅಭಿವೃದ್ಧಿ

ಬೆಂಗಳೂರಿನ ವಿಜಯನಗರ ಮಾರುತಿ ಮೆಡಿಕಲ್ಸ್‌ನ, ಗೋಸೇವಕ ಮಹೇಂದ್ರ ಮುನ್ನೋತ್, ಗೋಶಾಲೆಗಳ ಉಳಿವಿಗಾಗಿ ಮತ್ತು ಗೋವುಗಳ ಸಂರಕ್ಷಣೆಗಾಗಿ ದೇಣಿಗೆ ನೀಡುವ ಮೂಲಕ ಇತರರಿಗೆ ಸ್ಫೂರ್ತಿಯಾಗಿದ್ದಾರೆ. ತಮ್ಮ ವ್ಯಾಪಾರದಲ್ಲಿ ಸಂಗ್ರಹಿಸಿದ ಬಹುಪಾಲು ಹಣವನ್ನು ಗೋವುಗಳ ರಕ್ಷಣೆಗೆ, ಪಾಲನೆಗಾಗಿ ವ್ಯಯಿಸುತ್ತಿರುವ ಮಹೇಂದ್ರ ಮನ್ನೋತ್‌ ಅವರ ಕುಟುಂಬ. ಕಳೆದ ಹದಿನಾಲ್ಕು ವರ್ಷಗಳಿಂದ ಪ್ರತೀ ವರ್ಷ ಗೋಶಾಲೆಗಳಿಗೆ ಲಕ್ಷಾಂತರ ರೂಪಾಯಿಗಳನ್ನು ದೇಣಿಗೆ ನೀಡುತ್ತಾರೆ. ಈ ವರ್ಷ ಅವರು ನಾಡಿನ ವಿವಿಧ ಗೋಶಾಲೆಗಳಿಗೆ 51 ಲಕ್ಷ ರೂಪಾಯಿಗಳನ್ನು ದೇಣಿಗೆ ನೀಡಿದ್ದಾರೆ.

ನಾಡಿನಲ್ಲಿ ಅಕ್ರಮವಾಗಿ ಸಾಗಿಸಲ್ಪಡುವ ಗೋವುಗಳನ್ನು ಕಾನೂನಾತ್ಮಕವಾಗಿ ರಕ್ಷಿಸಿದ ನಂತರ ಆ ಗೋವುಗಳನ್ನು ಈ ಗೋಶಾಲೆಗಳಿಗೆ ತಂದು ಬಿಡಲಾಗುತ್ತದೆ. ಅಂತಹ ಗೋವುಗಳನ್ನು ಪೊರೆಯಲು ಗೋಶಾಲೆಗಳಿಗೆ ಶಕ್ತಿಯನ್ನು ತುಂಬವ ಕೆಲಸವನ್ನು ಮಹೇಂದ್ರ ಮುನ್ನೋತ್‌ ಅವರು ತಮ್ಮ ಮಾತಾಪಿತೃಗಳ ಪುಣ್ಯಸ್ಮರಣೆಯ ಹೆಸರಿನಲ್ಲಿ ಈ ಸೇವೆಯನ್ನು ಮಾಡಿಕೊಂಡು ಬಂದಿದ್ದಾರೆ.

ಕನಕಪುರ ರಸ್ತೆಯ ದಿಣ್ಣೆಪಾಳ್ಯದಲ್ಲಿರುವ ಅಮೃತಧಾರಾ ಗೋಶಾಲೆಯಲ್ಲಿ 20ಕ್ಕೂ ಹೆಚ್ಚು ಗೋಶಾಲೆಯ ಮುಖ್ಯಸ್ಥರಿಗೆ ಚೆಕ್‌ ರೂಪದಲ್ಲಿ ಹಣವನ್ನು ನೀಡಲಾಯಿತು.

ಇದನ್ನೂ ಓದಿ: PGCET 2024: ಪಿಜಿಸಿಇಟಿ ಪರೀಕ್ಷೆ ಮುಂದೂಡಿಕೆ; ಶೀಘ್ರದಲ್ಲೇ ಹೊಸ ದಿನಾಂಕ ಪ್ರಕಟ

ಈ ವೇಳೆ ಮಹೇಂದ್ರ ಮುನ್ನೋತ್‌ ಅವರ ಪತ್ನಿ ಸುರಕ್ಷಾ ಹಾಗೂ ಕುಟುಂಬದ ಸದಸ್ಯರು, ಗೋಶಾಲೆಯಲ್ಲಿ ನೂರಕ್ಕೂ ಹೆಚ್ಚು ಸಸಿಗಳನ್ನು ನೆಡುವುದರೊಂದಿಗೆ ಗೋಪೂಜೆಯನ್ನೂ ಮಾಡಲಾಯಿತು.

Continue Reading

ಕರ್ನಾಟಕ

Book Release: ಬೆಂಗಳೂರಿನಲ್ಲಿ ಜೂ.29ರಂದು ‘ಭಾವರಾಮಾಯಣ ರಾಮಾವತರಣʼ ಪುಸ್ತಕ ಲೋಕಾರ್ಪಣೆ

Bengaluru News: ಶ್ರೀ ಸಂಸ್ಥಾನ ಶ್ರೀ ರಾಮಚಂದ್ರಾಪುರ ಮಠ ವಿರಚಿತ “ಭಾವರಾಮಾಯಣ ರಾಮಾವತರಣ” ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮವನ್ನು ನಗರದ ಹೊಸಕೆರೆಹಳ್ಳಿಯ ಪಿ.ಇ.ಎಸ್‌. ವಿಶ್ವವಿದ್ಯಾಲಯದ ಜಿ.ಜೆ.ಬಿ.ಸಿ. ಸಭಾಂಗಣದಲ್ಲಿ ಇದೇ ಜೂ. 29ರಂದು ಶನಿವಾರ ಸಂಜೆ 5 ಗಂಟೆಗೆ ಏರ್ಪಡಿಸಲಾಗಿದೆ.

VISTARANEWS.COM


on

Bhaavaramayana Ramavatarana book release programme on June 29 in Bengaluru
Koo

ಬೆಂಗಳೂರು: ಶ್ರೀ ಸಂಸ್ಥಾನ ಶ್ರೀ ರಾಮಚಂದ್ರಾಪುರ ಮಠ ವಿರಚಿತ ʼಭಾವರಾಮಾಯಣ ರಾಮಾವತರಣʼ ಪುಸ್ತಕ ಲೋಕಾರ್ಪಣೆ (Book Release) ಕಾರ್ಯಕ್ರಮವನ್ನು ನಗರದ ಹೊಸಕೆರೆಹಳ್ಳಿಯ ಪಿ.ಇ.ಎಸ್‌. ವಿಶ್ವವಿದ್ಯಾಲಯದ ಜಿ.ಜೆ.ಬಿ.ಸಿ. ಸಭಾಂಗಣದಲ್ಲಿ ಇದೇ ಜೂ. 29ರಂದು ಶನಿವಾರ ಸಂಜೆ 5 ಗಂಟೆಗೆ ಏರ್ಪಡಿಸಲಾಗಿದೆ.

ಇದನ್ನೂ ಓದಿ: Gold Rate Today: ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌; ಚಿನ್ನದ ದರ ಇಳಿಕೆ

ಕಾರ್ಯಕ್ರಮದಲ್ಲಿ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾರು ಹಾಗೂ ಶ್ರೀಸಂಸ್ಥಾನ ಗೋಕರ್ಣ ಶ್ರೀ ರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ಸಾನ್ನಿಧ್ಯ ವಹಿಸುವರು. ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಶಿವರಾಜ ವಿ. ಪಾಟೀಲ ಮತ್ತು ಪಿ.ಇ.ಎಸ್‌. ವಿಶ್ವವಿದ್ಯಾಲಯದ ಕುಲಾಧಿಪತಿ ಡಾ. ಎಂ.ಆರ್‌. ದೊರೆಸ್ವಾಮಿ ಉಪಸ್ಥಿತರಿರುವರು.

ಇದನ್ನೂ ಓದಿ: Para Badminton Ranking: ಮೊದಲ ಬಾರಿಗೆ ವಿಶ್ವ ನಂ.1 ಸ್ಥಾನಕ್ಕೇರಿದ ಕನ್ನಡಿಗ ಸುಹಾಸ್‌ ಯತಿರಾಜ್

ಸಂಜೆ 5 ಗಂಟೆಗೆ ಕಲಾಸ್ನೇಹಿ ಹಾಗೂ ನರ್ತನಯೋಗ ಸಂಸ್ಥೆಯ ನಿರ್ದೇಶಕಿ ಸ್ನೇಹಾ ನಾರಾಯಣ ಮತ್ತು ಯೋಗೇಶ್‌ ಕುಮಾರ್‌ ಅವರಿಂದ ಭರತನಾಟ್ಯ, ಸಂಜೆ 5.30 ಕ್ಕೆ ನೂರಕ್ಕೂ ಹೆಚ್ಚು ಗಣ್ಯರಿಂದ ಪುಸ್ತಕ ಲೋಕಾರ್ಪಣೆ, ಶ್ರೀಸಂಸ್ಥಾನದವರೊಂದಿಗೆ ಸಂವಾದ, ಎನ್. ರವಿಶಂಕರ್‌ ಸಂವಾದಕರಾಗಿ ಪಾಲ್ಗೊಳ್ಳುವರು. ಮಂತ್ರಾಲಯ ಶ್ರೀಗಳಿಂದ ಆಶೀರ್ವಚನ ಕಾರ್ಯಕ್ರಮ ಜರುಗಲಿದೆ.

Continue Reading
Advertisement
Prajwal revanna Case
ಕರ್ನಾಟಕ2 mins ago

Prajwal Revanna Case: ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಜಾ; ಮತ್ತೆ ಜೈಲೇ ಗತಿ

Actress Akshita entry to kollywood cinema
ಕಾಲಿವುಡ್7 mins ago

Actress Akshita: ಕನ್ನಡತಿ ಅಕ್ಷಿತಾ ಈಗ ತಮಿಳು ಚಿತ್ರದ ನಾಯಕಿ!

ಕ್ರೀಡೆ9 mins ago

Yusuf Pathan: ಈಶ್ವರನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿ ಜೈ ಹಿಂದ್‌ ಘೋಷಣೆ ಕೂಗಿದ ಯೂಸುಫ್ ಪಠಾಣ್

ಕಿರುತೆರೆ35 mins ago

Shri Devi Mahathme: ಬರ್ತಿದೆ ಪಾರ್ವತಿ ಜಗನ್ಮಾತೆಯಾದ ಕಥೆ “ಶ್ರೀ ದೇವೀ ಮಹಾತ್ಮೆ”; ವೀಕ್ಷಣೆ ಎಲ್ಲಿ?

Renuka Swamy Murder
ಕರ್ನಾಟಕ42 mins ago

Renuka Swamy Murder: ರೇಣುಕಾಸ್ವಾಮಿ ಕೊಲೆ ಕೇಸ್‌; ಬೆಂಗಳೂರಿನಿಂದ ತುಮಕೂರು ಜೈಲು ಸೇರಿದ ನಾಲ್ವರು ಆರೋಪಿಗಳು

IND vs ENG Semi Final
ಕ್ರೀಡೆ43 mins ago

IND vs ENG Semi Final: ಇಂಡೋ-ಆಂಗ್ಲ ಸೆಮಿಫೈನಲ್​ ಪಂದ್ಯದ ಸಂಭಾವ್ಯ ತಂಡ, ಪಿಚ್​ ರಿಪೋರ್ಟ್​ ಹೀಗಿದೆ

Lok Sabha Speaker
ದೇಶ46 mins ago

Lok Sabha Speaker: ತುರ್ತು ಪರಿಸ್ಥಿತಿ ಬಗ್ಗೆ ಓಂ ಬಿರ್ಲಾ ಪ್ರಸ್ತಾಪ; ಪ್ರತಿಪಕ್ಷಗಳಿಂದ ಪ್ರತಿಭಟನೆ

actor producer and Cow lover Mahendra Munnoth donated 51 lakh rupees to cow shelter
ಬೆಂಗಳೂರು46 mins ago

Bengaluru News: ಗೋ ಶಾಲೆಗಳಿಗೆ 51 ಲಕ್ಷ ರೂ. ದೇಣಿಗೆ ನೀಡಿದ ಗೋಪ್ರೇಮಿ ಮಹೇಂದ್ರ ಮುನ್ನೋತ್

Bhaavaramayana Ramavatarana book release programme on June 29 in Bengaluru
ಕರ್ನಾಟಕ49 mins ago

Book Release: ಬೆಂಗಳೂರಿನಲ್ಲಿ ಜೂ.29ರಂದು ‘ಭಾವರಾಮಾಯಣ ರಾಮಾವತರಣʼ ಪುಸ್ತಕ ಲೋಕಾರ್ಪಣೆ

Varthur Santhosh Animal Transport Rules Violation Allegation
ಕ್ರೈಂ52 mins ago

Varthur Santhosh: ಹಳ್ಳಿಕಾರ್ ರೇಸ್ ನಡೆಸಲು ಸಜ್ಜಾಗುತ್ತಿದ್ದ ವರ್ತೂರು ಸಂತೋಷ್​ ವಿರುದ್ಧ ಪ್ರಕರಣ ದಾಖಲು

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌