ಗಂಗಾವತಿ: ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ (ISRO) ಕೈಗೊಂಡಿರುವ ಚಂದ್ರಯಾನ-3 (Chandrayaan-3) ಯಶಸ್ವಿಯಾಗಲಿ ಎಂದು ಹಾರೈಸಿ ಇಲ್ಲಿನ ಲಿಟಲ್ ಹಾರ್ಟ್ ಶಾಲೆಯಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಬೃಹತ್ ಆಕಾರದ ರಂಗೋಲಿ (Huge Rangoli) ಬಿಡಿಸಿ ಗಮನ ಸೆಳೆದರು.
30 ಅಡಿ ಉದ್ದ 30 ಅಡಿ ಅಗಲದ ವಿಶಾಲ ರಂಗೋಲಿಯಲ್ಲಿ ಚಂದ್ರಯಾನ-3 ರ ಆಕೃತಿ ರಚಿಸಲಾಗಿತ್ತು. ಕೆಳಗೆ ಕೇಸರಿ, ಬಿಳಿ, ಹಸಿರು ಬಣ್ಣಗಳನ್ನು ತುಂಬಿ ಬಿಡಿಸಲಾಗಿದ್ದ ರಾಕೆಟ್ ಮಾದರಿಯ ರಂಗೋಲಿ ಚಿತ್ರ ಎಲ್ಲರನ್ನು ಆಕರ್ಷಿಸಿತು.
ಈ ಸಂದರ್ಭದಲ್ಲಿ ಶಾಲೆಯ ಕಾರ್ಯದರ್ಶಿ ಜಗನ್ನಾಥ ಆಲಂಪಲ್ಲಿ ಮಾತನಾಡಿ, ಇಸ್ರೋ ದ ಮಹತ್ವದ ಯೋಜನೆಯಾದ ಚಂದ್ರಯಾನ-3 ರ ಮೂಲಕ ಬಾಹ್ಯಾಕಾಶ ಸಂಶೋಧನಾ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು ಸ್ಥಾಪನೆಗೆ ಸಜ್ಜಾಗಿದೆ.
ಇದನ್ನೂ ಓದಿ: Vijayanagara News: ನೂತನ ಮೆಡಿಕಲ್ ಕಾಲೇಜು ಸ್ಥಾಪನೆಗೆ ಅಗತ್ಯ ವರದಿ ನೀಡಲು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೂಚನೆ
ಈ ಸಾಧನೆ ಮಾಡಿದ ವಿಶ್ವದ ನಾಲ್ಕನೇ ರಾಷ್ಟ್ರವಾಗಿ ಭಾರತ ಹೊರಹೊಮ್ಮಲಿ. ಇಸ್ರೋದ ಎಲ್ಲ ವಿಜ್ಞಾನಿಗಳಿಗೆ ಚಂದ್ರಯಾನ-3 ಯಶಸ್ವಿಗೊಳ್ಳಲಿ ಎಂದು ಶಾಲೆಯ ಸಾವಿರಾರು ಮಕ್ಕಳು ಸಾಮೂಹಿಕವಾಗಿ ಶುಭ ಹಾರೈಸಿದ್ದಾರೆ ಎಂದು ತಿಳಿಸಿದರು.
ಶಾಲೆಯ ಮುಖ್ಯ ಶಿಕ್ಷಕಿ ಪ್ರಿಯಾಕುಮಾರಿ ಮಾತನಾಡಿ, ಬಾಹ್ಯಾಕಾಶ ರಂಗದಲ್ಲಿ ಭಾರತ ಹೊಸ ಹೆಜ್ಜೆ ಇಡುತ್ತಿದೆ. ಚಂದ್ರಯಾನ-3 ರ ಮೂಲಕ ಚಂದಿರದ ಹತ್ತಿರಕ್ಕೆ ಹೋಗುತ್ತಿರುವ ವಿಕ್ರಮ್ ಲ್ಯಾಂಡರ್ ದಕ್ಷಿಣ ಧ್ರುವದಲ್ಲಿ ಇಳಿಯುತ್ತಿರುವ ಪ್ರಥಮ ನೌಕೆ ಇದಾಗಿದೆ.
ಈ ಅಪರೂಪದ ಕ್ಷಣಕ್ಕೆ ಇಡೀ ಭಾರತ ಸಾಕ್ಷಿಯಾಗಲಿ. ಚಂದ್ರಯಾನ-3 ಯೋಜನೆ ಯಶಸ್ವಿಯಾಗಲಿ. ಇಸ್ರೋ ದ ಕಾರ್ಯ ಸಫಲಗೊಳ್ಳಲಿ ಎಂದು ಹಾರೈಸಿ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಬಗ್ಗೆ ಜನ ಜಾಗೃತಿಯೂ ಮೂಡಿಸಲಾಗಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: India vs Ireland: ಅಂತಿಮ ಟಿ20 ಪಂದ್ಯಕ್ಕೆ ಕ್ಷಣಗಣನೆ; ಭಾರತ ತಂಡದಲ್ಲಿ ಬದಲಾವಣೆ ಖಚಿತ
ಈ ಸಂದರ್ಭದಲ್ಲಿ ಶಾಲೆಯ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಇತರರು ಉಪಸ್ಥಿತರಿದ್ದರು.