Site icon Vistara News

ನ.1ರಂದು ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ; ವಿಧಾನಸೌಧ ಸುತ್ತಮುತ್ತ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ

ವಿಧಾನಸೌಧ

ಬೆಂಗಳೂರು: ನಗರದ ವಿಧಾನಸೌಧದ ಆವರಣದಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ ಹಾಗೂ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸಂಚಾರ ಪೊಲೀಸ್‌ ವಿಭಾಗ, ವಿಧಾನಸೌಧ ಸುತ್ತಮುತ್ತ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಿದೆ.

ಮಂಗಳವಾರ ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 10 ಗಂಟೆವರೆಗೂ ಮಾರ್ಗ ಬದಲಾವಣೆ ಮಾಡಲಾಗಿದ್ದು,
ವಿಧಾನಸೌಧ ಮುಂಭಾಗದ ರಸ್ತೆ ಸಂಪೂರ್ಣ ಬಂದ್ ಆಗಲಿದೆ. ಹೀಗಾಗಿ ಈ ರಸ್ತೆ ಬದಲಾಗಿ ಪರ್ಯಾಯ ಮಾರ್ಗ ಬಳಸಿಕೊಳ್ಳಲು ವಾಹನ ಸವಾರರಿಗೆ ಸಂಚಾರ ಪೊಲೀಸರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ | Karnataka Ratna | ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಬರಲಿದ್ದಾರೆ ರಜನಿಕಾಂತ್‌, ಜ್ಯೂ. ಎನ್‌ಟಿಆರ್‌

ಹಲವು ರಸ್ತೆಗಳಲ್ಲಿ ವಾಹನ ನಿಲುಗಡೆ ನಿಷೇಧ
ಕರ್ನಾಟಕ ರತ್ನ ಪ್ರಶಸ್ತಿ ಸಮಾರಂಭ ಹಿನ್ನೆಲೆಯಲ್ಲಿ ಈ ಭಾಗದಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸಲು ಡಾ.ಬಿ.ಆರ್‌.ಅಂಬೇಡ್ಕರ್ ಬೀದಿ, ಇನ್ಫೆಂಟ್ರಿ ರಸ್ತೆ, ಅಲಿ ಅಸ್ಕರ್ ರಸ್ತೆ, ಅರಮನೆ ರಸ್ತೆ, ಕಬ್ಬನ್ ರಸ್ತೆ, ರಾಜಭವನ ರಸ್ತೆ, ಕ್ವೀನ್ಸ್ ರಸ್ತೆ ಹಾಗೂ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ ವಾಹನ ನಿಲುಗಡೆಗೆ ನಿಷೇಧ ವಿಧಿಸಲಾಗಿದೆ. ಕಾರ್ಯಕ್ರಮಕ್ಕೆ ಬರುವವರಿಗೆ ಕಬ್ಬನ್ ಪಾರ್ಕ್‌ನಲ್ಲಿ ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.

ಶಕ್ತಿಕೇಂದ್ರದ ಸುತ್ತ ಬಿಗಿ ಪೊಲೀಸ್‌ ಬಂದೋಬಸ್ತ್‌
ವಿಧಾನಸೌದದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಹಿನ್ನೆಲೆಯಲ್ಲಿ ಭದ್ರತೆಗಾಗಿ ಪೊಲೀಸ್‌ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ ಎಂದು ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ ತಿಳಿಸಿದ್ದಾರೆ. ಪಶ್ಚಿಮ ದ್ವಾರದಲ್ಲಿ ವಿವಿಐಪಿಗಳಿಗೆ ಬರಲು ಅವಕಾಶ ಕಲ್ಪಿಸಿದ್ದು, ಪೂರ್ವ ದ್ವಾರದಲ್ಲಿ ವಿಐಪಿಗಳಿಗೆ ಅವಕಾಶ ಮಾಡಲಾಗಿದೆ. ಉಳಿದಂತೆ ಪಾಸ್ ಇದ್ದವರಿಗೆ ಮಾತ್ರ ವೇದಿಕೆ ಪ್ರವೇಶವಿರಲಿದೆ. ಪಾಸ್ ಇಲ್ಲದಿದ್ದರೆ ಕಾರ್ಯಕ್ರಮಕ್ಕೆ ಪ್ರವೇಶವಿಲ್ಲ. ಸಾರ್ವಜನಿಕರಿಗೆ ರಸ್ತೆಯಲ್ಲಿ ನಿಂತು ಕಾರ್ಯಕ್ರಮ ವೀಕ್ಷಿಸಲು ಅವಕಾಶ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ | Appu Namana | ಅಪ್ಪುಗೆ ನಾಳೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ, ಸಾವಿರಾರು ಜನರ ಆಗಮನ ನಿರೀಕ್ಷೆ

Exit mobile version