Channapatna doll | ದಶಪಥ ಹೆದ್ದಾರಿಯ ವೇಗದೊಳಗೆ ಕಳೆದು ಹೋಗುತ್ತಿರುವ ಚನ್ನಪಟ್ಟಣದ ಬೊಂಬೆ! - Vistara News

ಕರ್ನಾಟಕ

Channapatna doll | ದಶಪಥ ಹೆದ್ದಾರಿಯ ವೇಗದೊಳಗೆ ಕಳೆದು ಹೋಗುತ್ತಿರುವ ಚನ್ನಪಟ್ಟಣದ ಬೊಂಬೆ!

Channapatna doll | ಚನ್ನಪಟ್ಟಣ ಬೊಂಬೆ ಅಂಗಡಿಗಳಲ್ಲಿ ಖಾಲಿ ಕೂರುವಂತಹ ಪರಿಸ್ಥಿತಿ ತಲುಪಿದೆ. ಮೈಸೂರು ಹಾಗೂ ಬೆಂಗಳೂರಿಗೆ ಹೆದ್ದಾರಿ ಮೂಲಕ ಪ್ರಯಾಣಿಕರು ಸಂಚರಿಸುತ್ತಿದ್ದು, ಇತ್ತ ಬರುವವರ ಸಂಖ್ಯೆ ಕ್ಷೀಣಿಸಿದೆ. ಹೀಗಾಗಿ ವ್ಯಾಪಾರ ಕುಸಿದಿದೆ. ಚನ್ನಪಟ್ಟಣ ಕರಕುಶಲಕರ್ಮಿಗಳು ಆತಂಕಕ್ಕೆ ಒಳಗಾಗಿದ್ದಾರೆ.

VISTARANEWS.COM


on

chennapattana bombe 2
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
ವಿಸ್ತಾರ ವಿಶೇಷ

ಮಾಗಡಿ ಕೆ.ಎಸ್ ರಾಜು, ರಾಮನಗರ
ವಿಶ್ವಪ್ರಸಿದ್ಧ ಬೊಂಬೆ ನಾಡಿದ ಚನ್ನಪಟ್ಟಣಕ್ಕೆ (Channapatna doll) ಈಗ ಸಂಕಷ್ಟ ಎದುರಾಗಿದೆ. ಉದ್ಯಾನ ನಗರಿಯಿಂದ ಸಾಂಸ್ಕೃತಿಕ ನಗರಿಗೆ ಹಾದು ಹೋಗುತ್ತಿದ್ದಾಗ ಕೈಬೀಸಿ ಕರೆಯುತ್ತಿದ್ದ ಬೊಂಬೆನಗರಿ ಈಗ ಅಕ್ಷರಶಃ ಮೂಕವೇದನೆ ಅನುಭವಿಸುತ್ತಿದೆ. ಜೀವಂತಿಕೆ ತುಂಬಿದ್ದ ಗೊಂಬೆಗಳಲ್ಲೀಗ ನೋವಿನ ಛಾಯೆ ಕಾಣಿಸುತ್ತಿದೆ. ವಾರಾಂತ್ಯ ಬಂದರೆ ಸಂತೆಯಂತಾಗುತ್ತಿದ್ದ ನಾಡು ಈಗ ಬಣಗುಡುತ್ತಿದೆ. ಇಷ್ಟೆಕ್ಕೆಲ್ಲ ಕಾರಣವಾಗಿರುವುದು ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ.

Channapatna doll

ಅತಿಯಾದ ಮಳೆಯಿಂದಾಗಿ ಪ್ರವಾಹದ ಪರಿಸ್ಥಿತಿ ಎದುರಿಸಿದ್ದ ರಾಮನಗರ ಹಾಗೂ ಚನ್ನಪಟ್ಟಣದ ಅದೆಷ್ಟೋ ಮಂದಿಯ ಬದುಕು ಈಗ ಡೋಲಾಯಮಾನವಾಗಿದೆ. ಭಾರಿ ಸದ್ದು ಮಾಡಿದ್ದ ದಶಪಥ ಹೆದ್ದಾರಿಯು ಕರಕುಶಲಕರ್ಮಿಗಳಿಗೆ ಆತಂಕವನ್ನು ಹುಟ್ಟುಹಾಕಿದೆ. ಬಹುಬೇಗನೆ ಮೈಸೂರು – ಬೆಂಗಳೂರು ಸಂಪರ್ಕಿಸಲು ಹೆಚ್ಚಾಗಿ ದಶಪಥ ಹೆದ್ದಾರಿ ಮಾರ್ಗ ಹಿಡಿದಿರುವ ಪ್ರವಾಸಿಗರು ಬೊಂಬೆನಗರಿ ಚನ್ನಪಟ್ಟಣದತ್ತ ಮುಖವನ್ನೂ ಮಾಡುತ್ತಿಲ್ಲ. ಈ ಹಿನ್ನೆಲೆಯಲ್ಲಿ ಇತಿಹಾಸ ಪ್ರಸಿದ್ಧ ಮರದ ಆಟಿಕೆ ವ್ಯಾಪಾರ ನೆಲಕಚ್ಚುವ ಹಂತಕ್ಕೆ ಹೋಗಲಿದೆಯೆ ಎನ್ನುವ ಪ್ರಶ್ನೆ ಕಾಡಲು ಆರಂಭಿಸಿದೆ.

ಇದನ್ನೂ ಓದಿ | ಅವೈಜ್ಞಾನಿಕ ಬೆಂಗಳೂರು- ಮೈಸೂರು ಹೆದ್ದಾರಿ ಕಾಮಗಾರಿ ಸರಿಪಡಿಸಿ; ನಿತಿನ್ ಗಡ್ಕರಿಗೆ ಡಿಕೆ ಬದರ್ಸ್‌ ಮನವಿ

Channapatna doll

ವಿದ್ಯುತ್‌ ಬಿಲ್‌ ಕಟ್ಟುವುದೂ ಕಷ್ಟ
ಚನ್ನಪಟ್ಟಣ ಬೊಂಬೆಗಳು ಕೊಂಡುಕೊಳ್ಳುವವರ ಸಂಖ್ಯೆ ಕ್ಷೀಣಿಸಿದ್ದು, ಬಾಡಿಗೆ ಹಾಗೂ ವಿದ್ಯುತ್ ಬಿಲ್ ಕಟ್ಟುವುದಕ್ಕೂ ಸಾಧ್ಯವಾಗದ ಪರಿಸ್ಥಿತಿಯಲ್ಲಿ ಇಲ್ಲಿನ ವ್ಯಾಪಾರಿಗಳು ಇದ್ದಾರೆ. ವೀಕೆಂಡ್‌ನಲ್ಲಿ ಭರ್ಜರಿ ವ್ಯಾಪಾರ ಆಗುತ್ತಿದ್ದ ಅಂಗಡಿಗಳಲ್ಲಿ ಈಗ ಆಗೊಬ್ಬ-ಈಗೊಬ್ಬರು ಎನ್ನುವಂತಾಗಿದೆ. ವ್ಯಾಪಾರವೇ ಇಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿಬಿಟ್ಟಿದೆ. ಇದಕ್ಕೊಂದು ಪರ್ಯಾಯ ವ್ಯವಸ್ಥೆ ಆಗಬೇಕಿದೆ ಎಂದು ಬೊಂಬೆ ಅಂಗಡಿ ವ್ಯಾಪಾರಿ ಚನ್ನಪ್ಪ ಚಂಗಪ್ಪಗೌಡ ವಿಸ್ತಾರ ನ್ಯೂಸ್‌ಗೆ ತಿಳಿಸಿದ್ದಾರೆ.

ಬೋರ್ಡ್‌, ಫೋಟೊ ಹಾಕಿ
ಅಭಿವೃದ್ಧಿ ದೃಷ್ಟಿಯಿಂದ ಉತ್ತಮ ರಸ್ತೆಗಳು ಬೇಕು. ಈ ರಸ್ತೆಗಳ ಪಕ್ಕದಲ್ಲಿಯೇ ನಮ್ಮ ಬದುಕನ್ನು ಕಟ್ಟಿಕೊಂಡಿದ್ದೇವೆ. ಇದನ್ನೇ ನಂಬಿಕೊಂಡು ಅನೇಕ ಕುಟುಂಬಗಳು ಜೀವನ ಮಾಡುತ್ತಿವೆ. ಆದರೆ, ಈಗ ಪ್ರವಾಸಿಗರು ದಶಪಥದಲ್ಲಿ ಹೋಗುವುದರಿಂದ ಇಲ್ಲಿನ ವ್ಯಾಪಾರಕ್ಕೆ ಹೊಡೆತ ಬಿದ್ದಿದೆ. ಇಂತಹ ದೊಡ್ಡ ಮೊತ್ತದ ಯೋಜನೆ ಮಾಡುವಾಗ ಪಾರಂಪರಿಕ ಕಲೆಯನ್ನು ಉಳಿಸುವ ನಿಟ್ಟಿನಲ್ಲಿಯೂ ಯೋಜನೆಗಳು ಆಗಬೇಕಿತ್ತು. ಈ ಭಾಗಕ್ಕೆ ದೊಡ್ಡ ಬೋರ್ಡ್‌ಗಳು, ಫೋಟೊಗಳ ಸಹಿತ ಇನ್ನಿತರ ಕ್ರಮಗಳನ್ನು ಕೈಗೊಂಡು ಪ್ರವಾಸಿಗರನ್ನು ಆಕರ್ಷಿಸುವ ಕೆಲಸವನ್ನು ಸರ್ಕಾರ ಮಾಡಬೇಕು ಎಂದು ಬೊಂಬೆ ಅಂಗಡಿ ವ್ಯಾಪಾರಿ ಮಾಲಿನಿ ವಿಸ್ತಾರ ನ್ಯೂಸ್‌ಗೆ ಹೇಳಿದರು.

Channapatna doll

ಅಲ್ಲಲ್ಲಿ ಸರಿಯಾದ ಎಂಟ್ರಿ ಮತ್ತು ಎಕ್ಸಿಟ್ ವ್ಯವಸ್ಥೆ ಮಾಡುವ ಕೆಲಸ ಆಗಬೇಕು. ರಸ್ತೆ ಕಾಮಗಾರಿ ಮುಗಿಯುವುದರೊಳಗೇ ತುರ್ತು ಕ್ರಮಗಳನ್ನು ಸರ್ಕಾರ ತೆಗೆದುಕೊಳ್ಳಬೇಕು. ಈಗಾಗಲೇ ರಸ್ತೆ ಪಕ್ಕದಲ್ಲಿದ್ದ ಅನೇಕ ಹೋಟೆಲ್‌ಗಳು ಬಾಗಿಲು ಮುಚ್ಚಿವೆ. ಬಿಡದಿ ತಟ್ಟೆ ಇಡ್ಲಿ ವ್ಯಾಪಾರವೂ ಕಡಿಮೆಯಾಗಿದೆ. ಈ ನಿಟ್ಟಿನಲ್ಲಿ ಸರ್ಕಾರದ ಮಧ್ಯಪ್ರವೇಶದ ಅವಶ್ಯಕತೆ ಇದೆ ಎಂಬ ಕೂಗು ಕೇಳಿಬರುತ್ತಿದೆ.

ಪ್ರಧಾನಿ ಮೋದಿ ಕೊಂಡಾಡಿದ್ದರು
ಚನ್ನಪಟ್ಟಣ ಬೊಂಬೆಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸಹ ಕೊಂಡಾಡಿದ್ದರು. ಈ ಆಟಿಕೆ ಗೊಂಬೆಗಳು ಜಗತ್ತಿನ ಎಲ್ಲ ಮಕ್ಕಳಿಗೆ ಸಿಗುವಂತಾಗಬೇಕು. ಈ ನಿಟ್ಟಿನಲ್ಲಿ ಉದ್ಯಮವನ್ನು ಜಾಗತಿಕ ಮಟ್ಟದಲ್ಲಿ ಕೊಂಡೊಯ್ಯಬೇಕು. ನಾನು ಇದಕ್ಕೆಲ್ಲ ಬೆಂಬಲವಾಗಿ ನಿಲ್ಲುತ್ತೇನೆ ಎಂದು ಇಂಡಿಯಾ ಟಾಯ್‌ಫೇರ್‌ – 2021ರಲ್ಲಿ ಹೇಳಿಕೆ ನೀಡಿದ್ದರು. ಈ ಸಂವಾದದಲ್ಲಿ ಚನ್ನಪಟ್ಟಣದ 6 ಕರಕುಶಲಕರ್ಮಿಗಳು ಭಾಗಿಯಾಗಿದ್ದರು.

ಸೂಕ್ತ ವ್ಯವಸ್ಥೆಗಾಗಿ ಎದ್ದ ಕೂಗು
ಈ ಕಲೆಗೆ ಬೆಲೆ ಸಿಗಬೇಕಿದೆ. ಇವುಗಳನ್ನು ಸಿದ್ಧಪಡಿಸುವ ಕರಕುಶಲಕರ್ಮಿಗಳ ಅಭ್ಯುದಯಕ್ಕಾಗಿ ಸರ್ಕಾರ ಸಮರ್ಪಕ ಕ್ರಮಗಳನ್ನು ತೆಗೆದುಕೊಳ್ಳಬೇಕು. ಅಲ್ಲದೆ, ಪ್ರವಾಸೋದ್ಯಮಕ್ಕೆಂದೇ ಪ್ರತ್ಯೇಕ ಕ್ರಮಗಳನ್ನು ಕೈಗೊಳ್ಳಬೇಕು. ಜಾಗತಿಕ ಮಟ್ಟದಲ್ಲಿ ಚನ್ನಪಟ್ಟಣ ಗೊಂಬೆ ಸಿಗುವ ನಿಟ್ಟಿನಲ್ಲಿ ತುರ್ತು ಕ್ರಮವಹಿಸಬೇಕು ಎಂಬ ಆಗ್ರಹಗಳು ಕೇಳಿಬಂದಿವೆ.

ಇದನ್ನೂ ಓದಿ | Dasara Shopping Trend | ಮಾರುಕಟ್ಟೆಗೆ ಲಗ್ಗೆ ಇಟ್ಟ ಟ್ರೆಂಡಿ ದಸರಾ ಗೊಂಬೆಗಳು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಪ್ರಮುಖ ಸುದ್ದಿ

Lok Sabha Election 2024: ಮುಂಜಾನೆಯಿಂದಲೇ ಮತದಾನ ಬಿರುಸು, ಎಲ್ಲೆಡೆ ಶಾಂತಿಯುತ

ರಾಜ್ಯದ 14 ಮತಕ್ಷೇತ್ರಗಳ 28,269 ಮತಗಟ್ಟೆಗಳಲ್ಲಿ ಮುಂಜಾನೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಮತದಾರರು ಕ್ಯೂ ನಿಂತು ಮತ ಚಲಾಯಿಸಿದರು, ಯಾವುದೇ ಅಹಿತಕರ ಘಟನೆಗಳಿಲ್ಲದೆ ಸಂಪೂರ್ಣ ಶಾಂತಿಯುತವಾಗಿ ಇದುವರೆಗೆ ಮತದಾನ ನೆರವೇರಿದೆ.

VISTARANEWS.COM


on

lok sabha electon 2024 voting navadurge
Koo

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆಯ (Lok Sabha Election 2024) ಮತದಾನ ಮಂಗಳವಾರ ಬೆಳಗ್ಗೆ 7 ಗಂಟೆಗೆ ಆರಂಭವಾಗಿದ್ದು, ಮುಂಜಾನೆಯಿಂದಲೇ ಮತದಾನ ಬಿರುಸಾಗಿ ನಡೆಯಿತು. ಮಧ್ಯಾಹ್ನ ಬಿಸಿಲು ಹಾಗು ಸಂಜೆ ಮಳೆಯ ಆತಂಕದ ಹಿನ್ನೆಲೆಯಲ್ಲಿ ಮತದಾರರು ಬೆಳಗ್ಗೆಯೇ ಮತ ಹಾಕಲು ಧಾವಿಸಿದರು. ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದೆ.

ಕೆಲವು ಕಡೆ ಆರಂಭದಲ್ಲೇ ಮತಯಂತ್ರಗಳು ಕೈಕೊಟ್ಟವು,. ತಂತ್ರಜ್ಞರು ಸರಿಪಡಿಸಿದ ಬಳಿಕ ಮತದಾನ ಮುಂದುವರಿಯಿತು. ನವದುರ್ಗೆಯಯ ಮೊದಲ ಮತ, ದಿವ್ಯಾಂಗ ಯುವತಿಯ ಮೊದಲ ಮತ ಹೀಗೆ ಕೆಲವೆಡೆ ವಿಶೇಷತೆಗಳು ಕಂಡುಬಂದವು. ಕಾರವಾರ ಸೇಂಟ್ ಮೈಕಲ್ ಶಾಲೆಯ ಮತಗಟ್ಟೆ ಸಂಖ್ಯೆ 107ರಲ್ಲಿ ಮಷಿನ್ ಸಮಸ್ಯೆಯಿಂದ ಮತದಾನ ಒಂದು ಘಂಟೆ ವಿಳಂಬವಾಯಿತು. ಮೂರು ಯಂತ್ರ ಬದಲಿಸಿದ ಬಳಿಕ ಮತಯಂತ್ರ ಸರಿಯಾಯಿತು.

ರಾಜ್ಯದಲ್ಲಿ ಎರಡನೇ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. 14 ಕ್ಷೇತ್ರಗಳಲ್ಲಿ 28,269 ಮತಗಟ್ಟೆ ಸ್ಥಾಪಿಸಿದ್ದು, ಶಾಂತಿಯುತ ಚುನಾವಣೆ ನಡೆಸಲು ಸುಮಾರು 40 ಸಾವಿರ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ. ಮತದಾನ ಕೇಂದ್ರದಲ್ಲಿ ಮತದಾರರ ಅನುಕೂಲಕ್ಕಾಗಿ ಕುಡಿಯುವ ನೀರು ಸೇರಿ ಅಗತ್ಯ ವ್ಯವಸ್ಥೆ ಮಾಡಲಾಗಿದ್ದು, ಮತಗಟ್ಟೆಗಳ ಸುತ್ತ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಸೂಕ್ತ ಭದ್ರತೆ ಏರ್ಪಡಿಸಲಾಗಿದೆ.

ದೇಶದ 11 ರಾಜ್ಯ ಮತ್ತು ಕೇಂದ್ರಾಡಳಿತದ ಪ್ರದೇಶಗಳ 93 ಕ್ಷೇತ್ರಗಳಲ್ಲಿ ಮೂರನೇ ಹಂತದ ಮತದಾನ ಆರಂಭವಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಮತ್ತು ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಗುಜರಾತ್‌ನ ಅಹಮದಾಬಾದ್‌ನಲ್ಲಿ ಮತದಾನ ಮಾಡಿದರು. ಮೂರನೇ ಹಂತದಲ್ಲಿ ಸುಮಾರು 120 ಮಹಿಳೆಯರು ಸೇರಿದಂತೆ 1,300ಕ್ಕೂ ಹೆಚ್ಚು ಅಭ್ಯರ್ಥಿಗಳು ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. 8.39 ಕೋಟಿ ಮಹಿಳೆಯರು ಸೇರಿದಂತೆ 17.24 ಕೋಟಿ ಜನರು ಮತ ಚಲಾಯಿಸಲು ಅರ್ಹರಾಗಿದ್ದು, 18.5 ಲಕ್ಷ ಅಧಿಕಾರಿಗಳು ಕಾರ್ಯ ನಿರ್ವಹಿಸುತ್ತಿದ್ದಾರೆ. 1.85 ಲಕ್ಷ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.

ರಾಜ್ಯದಲ್ಲಿ ಕಾಂಗ್ರೆಸ್, ಬಿಜೆಪಿ ಎಲ್ಲಾ ಕ್ಷೇತ್ರಗಳಲ್ಲೂ ಸ್ಪರ್ಧಿಸಿದ್ದರೆ, ಬಿಎಸ್‌ಪಿ 9, ನೋಂದಾಯಿತ ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳು 23, ಸ್ವತಂತ್ರ ಅಭ್ಯರ್ಥಿಗಳು 117 ಸೇರಿ ಒಟ್ಟು 227 ಅಭ್ಯರ್ಥಿಗಳು ಸ್ಪರ್ಧೆಗಿಳಿದಿದ್ದಾರೆ. ಇದರಲ್ಲಿ 206 ಪುರುಷ, 21 ಮಹಿಳಾ ಅಭ್ಯರ್ಥಿಗಳಿದ್ದಾರೆ. ಈ ಕ್ಷೇತ್ರಗಳಲ್ಲಿ 2,59,52,958 ಮತದಾರರಿದ್ದು, 1,29,48,978 ಪುರುಷ, 1,29,64,570 ಮಹಿಳಾ ಹಾಗೂ 1,945 ತೃತೀಯ ಲಿಂಗಿ ಮತದಾರರು ಇದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಅತೀ ಕಡಿಮೆ 16,41,156 ಮತದಾರರಿದ್ದರೆ, ಅತಿ ಹೆಚ್ಚು ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ 20,98,202 ಮತದಾರರಿದ್ದಾರೆ.

ಇದನ್ನೂ ಓದಿ: Lok Sabha Election 2024: ಮೂರನೇ ಹಂತದ ಮತದಾನ ಆರಂಭ; ಇಂದು ವೋಟು ಮಾಡಲಿದ್ದಾರೆ ಮೋದಿ, ಅಮಿತ್‌ ಶಾ

Continue Reading

Lok Sabha Election 2024

Lok Sabha Election 2024 Live news: ರಾಜ್ಯದಲ್ಲಿ ಎರಡನೇ ಹಂತದ ಮತದಾನ ಆರಂಭ

Lok Sabha Election 2024: ಕಾಂಗ್ರೆಸ್, ಬಿಜೆಪಿ ಎಲ್ಲಾ ಕ್ಷೇತ್ರಗಳಲ್ಲೂ ಸ್ಪರ್ಧಿಸಿದ್ದರೆ, ಬಿಎಸ್‌ಪಿ 9, ನೋಂದಾಯಿತ ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳು 23, ಸ್ವತಂತ್ರ ಅಭ್ಯರ್ಥಿಗಳು 117 ಸೇರಿ ಒಟ್ಟು 227 ಅಭ್ಯರ್ಥಿಗಳು ಸ್ಪರ್ಧೆಗಿಳಿದಿದ್ದಾರೆ. ಇದರಲ್ಲಿ 206 ಪುರುಷ, 21 ಮಹಿಳಾ ಅಭ್ಯರ್ಥಿಗಳಿದ್ದಾರೆ.

VISTARANEWS.COM


on

lok sabha election 2025 voting
Koo

ರಾಜ್ಯದ 14 ಕ್ಷೇತ್ರಗಳಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆಯ (Lok Sabha Election 2024) ಮತದಾನ ಇಂದು ಬೆಳಗ್ಗೆ 7ರಿಂದ ಆರಂಭವಾಯಿತು. ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದ್ದು, ಎಲ್ಲ ಬಗೆಯ ಸಿದ್ಧತೆ ಹಾಗೂ ಭದ್ರತಾ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಕಾಂಗ್ರೆಸ್, ಬಿಜೆಪಿ ಎಲ್ಲಾ ಕ್ಷೇತ್ರಗಳಲ್ಲೂ ಸ್ಪರ್ಧಿಸಿದ್ದರೆ, ಬಿಎಸ್‌ಪಿ 9, ನೋಂದಾಯಿತ ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳು 23, ಸ್ವತಂತ್ರ ಅಭ್ಯರ್ಥಿಗಳು 117 ಸೇರಿ ಒಟ್ಟು 227 ಅಭ್ಯರ್ಥಿಗಳು ಸ್ಪರ್ಧೆಗಿಳಿದಿದ್ದಾರೆ. ಇದರಲ್ಲಿ 206 ಪುರುಷ, 21 ಮಹಿಳಾ ಅಭ್ಯರ್ಥಿಗಳಿದ್ದಾರೆ.

Continue Reading

ಮಳೆ

karnataka Weather : ಇಂದು ಮಳೆಗೂ ಮುನ್ನವೇ ವೋಟ್‌ ಹಾಕಿಬಿಡಿ; ಸಂಜೆಗೆ ಭಾರಿ ವರ್ಷಧಾರೆ

Karnataka Weather Forecast : ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಂಗಳವಾರ ಮಳೆಯು (Rain News) ಅಬ್ಬರಿಸಲಿದೆ. ಜೋರಾದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ರಾಜ್ಯದ ವಿವಿಧೆಡೆ ಇಂದಿನಿಂದ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗುವ (Rain News) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ. ಗುಡುಗು ಸಹಿತ ಮಳೆಯಾಗಲಿದ್ದು, ಬಿರುಗಾಳಿಯು ಜತೆಗೆ ಇರಲಿದೆ. ಹೀಗಾಗಿ ರಾಜ್ಯದಲ್ಲಿ ನಡೆಯುತ್ತಿರುವ ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ಪ್ರಕ್ರಿಯೆಗೆ ಮಳೆಗೂ ಮುನ್ನವೇ ವೋಟ್‌ ಹಾಕಿಬಿಡಿ.

ಆಲಿಕಲ್ಲು ಮಳೆ ಎಚ್ಚರಿಕೆ

ದಕ್ಷಿಣ ಒಳನಾಡಿನ ಚಾಮರಾಜನಗರ ಮತ್ತು ರಾಮನಗರದ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗಲಿದೆ. ಗುಡುಗು ಸಹಿತ ಅಲ್ಲಲ್ಲಿ ಆಲಿಕಲ್ಲು ಮಳೆಯಾಗಲಿದೆ. ಮಲೆನಾಡಿನಲ್ಲಿ ಮಾಯವಾಗಿದ್ದ ಮಳೆಯು ಮತ್ತೆ ಹಾಜರಾತಿ ಹಾಕಿದೆ. ಮಲೆನಾಡಿನ ಕೊಡಗು ಹಾಗೂ ದಕ್ಷಿಣ ಒಳನಾಡಿನ ಮೈಸೂರು ಮತ್ತು ಮಂಡ್ಯದಲ್ಲಿ ಕೆಲವೆಡೆ ಭಾರೀ ಮಳೆಯೊಂದಿಗೆ ಅಬ್ಬರಿಸಲಿದೆ.

ಕರಾವಳಿಯಲ್ಲೂ ಮಳೆಯಿಲ್ಲದೇ ತಾಪಮಾನ ಹೆಚ್ಚಾಗಿತ್ತು. ಮಂಗಳವಾರ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಸೇರಿ ಉತ್ತರ ಒಳನಾಡಿನ ರಾಯಚೂರು, ಯಾದಗಿರಿ, ಬಳ್ಳಾರಿಯಲ್ಲೂ ಮಳೆ ಅಬ್ಬರಿಸಲಿದೆ. ಇನ್ನೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ವಿಜಯನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯೊಂದಿಗೆ ಗುಡುಗು ಇರಲಿದೆ.

ಬೆಂಗಳೂರಲ್ಲಿ ಸಂಜೆ ಮಳೆ

ರಾಜಧಾನಿ ಬೆಂಗಳೂರಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಸಂಜೆ ಅಥವಾ ರಾತ್ರಿ ವೇಳೆಗೆ ಹಗುರದೊಂದಿಗೆ ಸಾಧಾರಣ ಮಳೆಯಾಗಲಿದೆ. ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 37 ಮತ್ತು 24 ಡಿ.ಸೆ ಇರಲಿದೆ.

ಗುಡುಗು ಸಹಿತ ಮಳೆಗೆ ಯೆಲ್ಲೋ ಅಲರ್ಟ್

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

ಮಳೆ ನಡುವೆಯೂ ಈ ಜಿಲ್ಲೆಗಳಿಗೆ ಹೀಟ್‌ ವೇವ್‌

ಒಂದು ಕಡೆ ಮಳೆಯು ಅಬ್ಬರಿಸುತ್ತಿದ್ದರೆ ಇತ್ತ ಹೀಟ್‌ ವೇವ್‌ ಎಚ್ಚರಿಕೆಯನ್ನು ಹವಾಮಾನ ತಜ್ಞರು ನೀಡಿದ್ದಾರೆ. ಏ.7ರಂದು ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ ಹಾಗೂ ದಕ್ಷಿಣ ಒಳನಾಡಿನ ವಿಜಯನಗರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಖದ ಅಲೆಯ ವಾತಾವರಣವು ಹೆಚ್ಚಾಗುವ ಸಾದ್ಯತೆ ಇದೆ.

ಶಾಖ ತರಂಗಕ್ಕೆ ಈ ಜಿಲ್ಲೆಗಳಿಗೆ ಆರೆಂಜ್ ಹಾಗೂ ಯೆಲ್ಲೋ ಎಚ್ಚರಿಕೆ

ವಿಜಯನಗರ, ಬಳ್ಳಾರಿ, ಯಾದಗಿರಿ, ವಿಜಯಪುರ, ಯಾದಗಿರಿ, ಕೊಪ್ಪಳ, ಕಲಬುರಗಿ, ಬೀದರ್, ಬಾಗಲಕೋಟೆಯ ಜಿಲ್ಲೆಗಳಲ್ಲಿ ತಾಪಮಾನ ದುಪ್ಪಟ್ಟು ಆಗಲಿದೆ. ಹೀಗಾಗಿ ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಉಳಿದಂತೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಿಗೆ ಯೆಲ್ಲೋ ಎಚ್ಚರಿಕೆ ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Lok Sabha Election : ಇಂದು 2ನೇ ಹಂತದ ವೋಟಿಂಗ್​; ನಿಮ್ಮ ‘ಮತ’ ಕಳವಾದರೆ ಹೀಗೆ ಮಾಡಿ..

Lok Sabha Election : ಒಂದು ವೇಳೆ ಅಕ್ರಮವಾಗಿ ಅಥವಾ ಆಕಸ್ಮಿಕವಾಗಿ ನಮ್ಮ ಮತವನ್ನು ಬೇರೆಯವರು ಚಲಾಯಿಸಿದರೆ ಏನು ಮಾಡಬೇಕು, ಹೀಗಾದಾಗ ನಮ್ಮ ಮತದಾನದ ಹಕ್ಕನ್ನು ನಾವು ಮತ್ತೆ ಚಲಾಯಿಸಲು ಸಾಧ್ಯವೇ ? ಈ ಸಂದರ್ಭದಲ್ಲಿ ನಾವು ಏನು ಕ್ರಮ ಕೈಗೊಳ್ಳಬಹುದು ಮೊದಲಾದ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ.

VISTARANEWS.COM


on

Lok Sabha Election
Koo

ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯ (Lok Sabha Election 2024) ಎರಡನೇ ಹಂತದ ಮತದಾನವು ಮಂಗಳವಾರ (ಮೇ 7) ನಿಗದಿಯಾಗಿದೆ. ಉತ್ತರ ಕರ್ನಾಟಕ ಭಾಗದ 14 ಕ್ಷೇತ್ರಗಳಲ್ಲಿ ಈ ಹಂತದಲ್ಲಿ ಚುನಾವಣೆ ನಡೆಯಲಿದೆ. ಮತದಾನದ ದಿನ ಹತ್ತಿರ ಬಂದ ಬಳಿಕವೂ ಇನ್ನೂ ಮತದಾರರಲ್ಲಿ (voters) ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಇರುತ್ತವೆ . ಇದರಲ್ಲಿ ನಮ್ಮ ಮತವನ್ನು (vote) ಬೇರೆಯವರು ಚಲಾವಣೆ ಮಾಡಿದರೆ ಏನಾಗುತ್ತದೆ ಎಂಬ ಪ್ರಶ್ನೆ ಖಂಡಿತಾ ಇರುತ್ತದೆ. ಹಾಗಾದರೆ ಈ ಸಂದರ್ಭದಲ್ಲಿ ನೀವು ಏನು ಮಾಡಬೇಕು ಎಂಬುದನ್ನು ಇಲ್ಲಿ ವಿವರಿಸಲಾಗಿದೆ.

ದೇಶದ ಬಹುದೊಡ್ಡ ಚುನಾವಣೆಗಾಗಿ ಚುನಾವಣಾ ಅಧಿಕಾರಿಗಳು (election officers), ವಿವಿಧ ಪಕ್ಷಗಳ ಅಭ್ಯರ್ಥಿಗಳು, ವಿವಿಧ ಇಲಾಖೆಯ ಅಧಿಕಾರಿಗಳು ಈಗಾಗಲೇ ಕರ್ತವ್ಯದಲ್ಲಿ ನಿರತರಾಗಿದ್ದಾರೆ. ಆದರೆ ಇದರಲ್ಲಿ ಬಹುದೊಡ್ಡ ಪಾಲುದಾರ ಪ್ರತಿಯೊಬ್ಬ ಮತದಾರ. ಅವರ ಅಧಿಕಾರ, ಹಕ್ಕನ್ನು ಬೇರೆಯವರು ಚಲಾಯಿಸಲು ಸಾಧ್ಯವಿಲ್ಲ. ಒಂದು ವೇಳೆ ಅಕ್ರಮವಾಗಿ ಅಥವಾ ಆಕಸ್ಮಿಕವಾಗಿ ನಮ್ಮ ಮತವನ್ನು ಬೇರೆಯವರು ಚಲಾಯಿಸಿದರೆ ಏನು ಮಾಡಬೇಕು, ಹೀಗಾದಾಗ ನಮ್ಮ ಮತದಾನದ ಹಕ್ಕನ್ನು ನಾವು ಮತ್ತೆ ಚಲಾಯಿಸಲು ಸಾಧ್ಯವೇ ? ಈ ಸಂದರ್ಭದಲ್ಲಿ ನಾವು ಏನು ಕ್ರಮ ಕೈಗೊಳ್ಳಬಹುದು ಮೊದಲಾದ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ.

ಬೇರೆಯವರು ನಮ್ಮ ಮತ ಚಲಾಯಿಸಬಹುದೇ?

ಬೇರೆಯವರು ನಮ್ಮ ಮತ ಚಲಾಯಿಸಲು ಸಾಧ್ಯವಿಲ್ಲ. ಒಂದು ವೇಳೆ ಚಲಾಯಿಸಿದ್ದರೆ ಅಂತಹ ಪರಿಸ್ಥಿತಿಯಲ್ಲಿ ಚುನಾವಣಾ ಆಯೋಗದಿಂದ ಒಂದು ನಿಬಂಧನೆಯನ್ನು ಮಾಡಲಾಗಿದೆ. ಮತದಾರನ ಬಳಿ ವೋಟರ್ ಐಡಿ ಮತ್ತು ವೋಟಿಂಗ್ ಸ್ಲಿಪ್ ಇದ್ದರೆ ಮತದಾನ ಮಾಡಲು ಅವಕಾಶ ನೀಡಲಾಗುತ್ತದೆ. ಆದರೆ ನಿಮ್ಮ ಮತವನ್ನು ಟೆಂಡರ್ಡ್ ಬ್ಯಾಲೆಟ್ ಪೇಪರ್ ಎಂದು ಗುರುತಿಸಲಾಗುತ್ತದೆ ಮತ್ತು ಪ್ರತ್ಯೇಕವಾಗಿ ಇರಿಸಲಾಗುತ್ತದೆ.

ತಕ್ಷಣ ದೂರು ನೀಡಿ

ಮತಗಟ್ಟೆ ಅಧಿಕಾರಿಯು ಮತಗಟ್ಟೆಯೊಳಗೆ ಬರುವಾಗ ನಿಮ್ಮ ಮತವು ಈಗಾಗಲೇ ಚಲಾವಣೆಯಾಗಿದೆ ಎಂದು ತಿಳಿಸಿದರೆ ಭಾರತೀಯ ಚುನಾವಣಾ ಕಾಯಿದೆ 1961ರ ಅಡಿಯಲ್ಲಿ ಯಾರಾದರೂ ನಿಮ್ಮ ಹೆಸರಿನಲ್ಲಿ ಮತ ಚಲಾಯಿಸಿದರೆ ತಕ್ಷಣ ಸ್ಥಳದಲ್ಲಿರುವ ಪ್ರಿಸೈಡಿಂಗ್ ಅಧಿಕಾರಿಗೆ ದೂರು ನೀಡಿ. ಆಗ ಟೆಂಡರ್ಡ್ ಮತವನ್ನು ಚಲಾಯಿಸಲು ಕಾನೂನು ನಿಮಗೆ ಅವಕಾಶ ನೀಡುತ್ತದೆ.

ಇದನ್ನೂ ಓದಿ: Lok Sabha Election 2024: ಮತದಾನ ಮಾಡಲು ದುಬೈನಿಂದ ಗಂಗಾವತಿಗೆ ಆಗಮಿಸಿದ ದಂಪತಿ

ಚುನಾವಣಾ ನಿಯಮಗಳ ನಿಯಮ 49ಪಿ ಪ್ರಕಾರ ಟೆಂಡರ್ಡ್ ಬ್ಯಾಲೆಟ್ ಪೇಪರ್ ಅನ್ನು ನಿಮಗೆ ನೀಡಲಾಗುತ್ತದೆ ಮತ್ತು ಟೆಂಡರ್ ಮಾಡಿದ ಮತಗಳ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಸಹಿ ಮಾಡಬೇಕಾಗುತ್ತದೆ. ವಿದ್ಯುನ್ಮಾನ ಮತಯಂತ್ರದಲ್ಲಿ ಇದನ್ನು ಮಾಡಲು ಸಾಧ್ಯವಿಲ್ಲ. ಟೆಂಡರ್ ಮಾಡಿದ ಮತಪತ್ರವು ಬ್ಯಾಲೆಟ್ ಯೂನಿಟ್‌ನಲ್ಲಿ ಪ್ರದರ್ಶಿಸಲಾದ ಬ್ಯಾಲೆಟ್ ಪೇಪರ್‌ನಂತೆಯೇ ಇರುತ್ತದೆ. ಟೆಂಡರ್ಡ್ ಬ್ಯಾಲೆಟ್ ಪೇಪರ್ ಅನ್ನು ಪ್ರಿಸೈಡಿಂಗ್ ಅಧಿಕಾರಿಗೆ ಮರಳಿ ನೀಡಬೇಕು.

ಹೇಗೆ ಮತ ಹಾಕುವುದು?

ಬಾಣದ ಕ್ರಾಸ್ ಮಾರ್ಕ್ ರಬ್ಬರ್ ಸ್ಟಾಂಪ್ ಸಹಾಯದಿಂದ ನಿಮ್ಮ ಅಭ್ಯರ್ಥಿಯ ಆಯ್ಕೆಯನ್ನು ಗುರುತಿಸಿದ ಅನಂತರ ನೀವು ಟೆಂಡರ್ ಮಾಡಿದ ಮತಪತ್ರವನ್ನು ಪ್ರಿಸೈಡಿಂಗ್ ಅಧಿಕಾರಿಗೆ ಹಸ್ತಾಂತರಿಸಬೇಕು. ಅವರು ಅದನ್ನು ಪ್ರತ್ಯೇಕ ಕವರ್‌ನಲ್ಲಿ ಇಡುತ್ತಾರೆ.

ಚಾಲೆಂಜ್ಡ್ ವೋಟ್

ಟೆಂಡರ್ ಮಾಡಿದ ಬ್ಯಾಲೆಟ್ ಪೇಪರ್ ಅನ್ನು ಚಾಲೆಂಜ್ಡ್ ವೋಟ್ ಎಂದೂ ಕರೆಯುತ್ತಾರೆ. ಬಳಿಕ ನಿಮ್ಮ ಜಾಗದಲ್ಲಿ ಯಾರು ಮತ ಹಾಕಿದ್ದಾರೆ ಎಂಬುದನ್ನು ಚುನಾವಣಾ ಅಧಿಕಾರಿಗಳು ಪರಿಶೀಲಿಸಿ ಅದನ್ನು ತೆಗೆದು ನಿಮ್ಮ ಮತವನ್ನು ಎಣಿಕೆಗೆ ಹಾಕಲಾಗುತ್ತದೆ.

ಗುರುತಿನ ಪುರಾವೆ ನೀಡಬೇಕು

ಮತದಾರರಾಗಿ ನಿಮ್ಮ ಗುರುತಿನ ಬಗ್ಗೆ ಯಾವುದೇ ಅಭ್ಯರ್ಥಿಯ ಪೋಲಿಂಗ್ ಏಜೆಂಟ್‌ ಪ್ರಶ್ನಿಸಿದರೆ ಚುನಾವಣಾ ಅಧಿಕಾರಿಗಳು ನಿಮ್ಮ ಗುರುತಿನ ಪುರಾವೆಯನ್ನು ಕೇಳುತ್ತಾರೆ. ಇದಕ್ಕಾಗಿ ನೀವು ಎಪಿಕ್ ಅಥವಾ ಪಾಸ್‌ಪೋರ್ಟ್, ರೇಷನ್ ಕಾರ್ಡ್‌ನಂತಹ ಯಾವುದೇ ದಾಖಲೆಯನ್ನು ಹೊಂದಿರಬೇಕು. ಆದರೂ ಅವರು ಸವಾಲು ಮಾಡಿ ಮತದಾನಕ್ಕೆ ಅನುಮತಿ ನೀಡದೇ ಇದ್ದರೆ ಪ್ರಿಸೈಡಿಂಗ್ ಅಧಿಕಾರಿಯಿಂದ ಲಿಖಿತ ದೂರನ್ನು ಪೊಲೀಸರಿಗೆ ಹಸ್ತಾಂತರಿಸಲಾಗುತ್ತದೆ.

ಎಷ್ಟು ಮತದಾರರು?

ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಸುಮಾರು 97 ಕೋಟಿ ಭಾರತೀಯರು ಮತ ಚಲಾಯಿಸಲು ಅರ್ಹರಾಗಿದ್ದಾರೆ ಎಂದು ಭಾರತೀಯ ಚುನಾವಣಾ ಆಯೋಗ ಮಾಹಿತಿ ನೀಡಿದೆ. ಭಾರತದಲ್ಲಿ 96.88 ಕೋಟಿ ಜನರು ಮುಂಬರುವ ಸಾರ್ವತ್ರಿಕ ಚುನಾವಣೆಗಳಿಗೆ ಮತ ಚಲಾಯಿಸಲು ನೋಂದಾಯಿಸಿಕೊಂಡಿದ್ದಾರೆ, ಇದು ವಿಶ್ವದ ಅತಿದೊಡ್ಡ ಮತದಾರರ ಪೂಲ್ ಆಗಿದೆ. ಆಯೋಗದ ಪ್ರಕಾರ, 2019 ರ ಲೋಕಸಭಾ ಚುನಾವಣೆ ಬಳಿಕ ನೋಂದಾಯಿತ ಮತದಾರರ ಸಂಖ್ಯೆ ಶೇ. 6ರಷ್ಟು ಹೆಚ್ಚಾಗಿದೆ

Continue Reading
Advertisement
IPL 2024 Points Table
ಕ್ರೀಡೆ8 mins ago

IPL 2024 Points Table: ಕೊನೆಯ ಸ್ಥಾನದಿಂದ ಮೇಲೆದ್ದ ಮುಂಬೈ ಇಂಡಿಯನ್ಸ್​

Lok Sabha Election 2024
Lok Sabha Election 202410 mins ago

Lok Sabha Election 2024: ಹಕ್ಕು ಚಲಾಯಿಸಿದ ಪ್ರಧಾನಿ ಮೋದಿ; ಮತದಾನ ಮಾಡಲು ಕನ್ನಡದಲ್ಲೇ ಕರೆ

Google doodle
ದೇಶ12 mins ago

Lok Sabha Elections 2024: ಗೂಗಲ್‌ ಡೂಡಲ್‌ನಲ್ಲೂ ಪ್ರಜಾಪ್ರಭುತ್ವ ಹಬ್ಬದ ಸಂಭ್ರಮ

lok sabha electon 2024 voting navadurge
ಪ್ರಮುಖ ಸುದ್ದಿ38 mins ago

Lok Sabha Election 2024: ಮುಂಜಾನೆಯಿಂದಲೇ ಮತದಾನ ಬಿರುಸು, ಎಲ್ಲೆಡೆ ಶಾಂತಿಯುತ

Road rage
ಕ್ರೈಂ52 mins ago

Road rage: BMW ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದು ಪುಂಡರ ಅಟ್ಟಹಾಸ, ಇಲ್ಲಿದೆ ವಿಡಿಯೋ

Lok Sabha Election 2024
Lok Sabha Election 20241 hour ago

Lok Sabha Election 2024: ಮೂರನೇ ಹಂತದ ಮತದಾನ ಆರಂಭ; ಇಂದು ವೋಟು ಮಾಡಲಿದ್ದಾರೆ ಮೋದಿ, ಅಮಿತ್‌ ಶಾ

rajamarga column voting 1
ಪ್ರಮುಖ ಸುದ್ದಿ1 hour ago

ರಾಜಮಾರ್ಗ ಅಂಕಣ: ಭಾರತದಲ್ಲಿ ಕಡ್ಡಾಯ ಮತದಾನ ಕಾನೂನು ಯಾಕೆ ಸಾಧ್ಯವಿಲ್ಲ?

Summer Food Tips
ಆಹಾರ/ಅಡುಗೆ2 hours ago

Summer Food Tips: ಬೇಸಿಗೆಯಲ್ಲಿ ನಮ್ಮ ದೇಹವನ್ನು ತಂಪಾಗಿರಿಸುವ ಸರಳ ಆಹಾರಗಳಿವು!

lok sabha election 2025 voting
Lok Sabha Election 20242 hours ago

Lok Sabha Election 2024 Live news: ರಾಜ್ಯದಲ್ಲಿ ಎರಡನೇ ಹಂತದ ಮತದಾನ ಆರಂಭ

Lok Sabha Election
ಪ್ರಮುಖ ಸುದ್ದಿ2 hours ago

Lok Sabha Election : ಇಂದು 2ನೇ ಹಂತದ ವೋಟಿಂಗ್​; ನಿಮ್ಮ ‘ಮತ’ ಕಳವಾದರೆ ಹೀಗೆ ಮಾಡಿ..

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ14 hours ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ15 hours ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ15 hours ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ2 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ2 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ2 days ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ3 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ4 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

ಟ್ರೆಂಡಿಂಗ್‌