ಶಿರಸಿ: ಆಷಾಢ ಪೂರ್ಣಿಮೆ ಹಿನ್ನೆಲೆಯಲ್ಲಿ ಬುಧವಾರ (ಜು.೧೩) ಶಿರಸಿಯ ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದಲ್ಲಿ 32ನೇ ಚಾತುರ್ಮಾಸ್ಯ ವ್ರತಕ್ಕೆ ಸ್ವರ್ಣವಲ್ಲೀ ಮಠಾಧೀಶರಾದ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿಯವರು ಸಂಕಲ್ಪ ನೇರವೇರಿಸಿದರು.
ಬಳಿಕ ಚಾತುರ್ಮಾಸ್ಯದ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು. ಬೆಳಗ್ಗೆ 10 ಗಂಟೆಗೆ ವ್ಯಾಸಪೂಜೆ ನೇರವೇರಿಸಿ ಚಾತುರ್ಮಾಸ್ಯ ವ್ರತ ಸಂಕಲ್ಪವನ್ನು ಶ್ರೀಗಳು ಕೈಗೊಂಡರು. ನಂತರ ‘ಭಕ್ತರ ಪರವಾಗಿ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ವಿ.ಎನ್. ಹೆಗಡೆ ಬೊಮ್ನಳ್ಳಿ ದಂಪತಿ ಶ್ರೀಗಳ ಪಾದಪೂಜೆ ನೆರವೇರಿಸಿದರು. ಮಧ್ಯಾಹ್ನ 2 ಗಂಟೆಗೆ ಮಠದ ದೇವರಿಗೆ ಮಹಾ ಮಂಗಳಾರತಿ ಮಾಡಿ ಶ್ರೀಗಳು ಭಕ್ತರಿಗೆ ತೀರ್ಥ, ಪ್ರಸಾದ ವಿತರಿಸಿದರು.
ಇದನ್ನು ಓದಿ| ಮಾಜಿ ಪ್ರಧಾನಿ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ ಶೃಂಗೇರಿ ಶ್ರೀಗಳು