Site icon Vistara News

Chaya Singh: ನಟಿ ಛಾಯಾ ಸಿಂಗ್ ಮನೆಯಲ್ಲಿ ಕಳ್ಳತನ; ಚಿನ್ನಾಭರಣ ಕದ್ದಿದ್ದ ಮನೆಕೆಲಸದಾಕೆ ಬಂಧನ

Chaya Singh

ಬೆಂಗಳೂರು: ಕನ್ನಡದ ‘ಅಮೃತಧಾರೆ’ ಧಾರಾವಾಹಿಯ ನಟಿ ಛಾಯಾ ಸಿಂಗ್ (Chaya Singh) ಅವರ ತಾಯಿ ಮನೆಯಲ್ಲಿ ಕಳ್ಳತನ ಮಾಡಿದ್ದ ಮನೆಕೆಲಸದಾಕೆ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾಳೆ. ಛಾಯಾಸಿಂಗ್ ಅವರ ತಾಯಿ ಚಮನಲತಾ ಅವರ ಬಸವೇಶ್ವರನಗರದ ನಿವಾಸದಲ್ಲಿ ಕಳ್ಳತನ ನಡೆದಿತ್ತು. 66 ಗ್ರಾಂ ಚಿನ್ನಾಭರಣ, 150 ಗ್ರಾಂ ಬೆಳ್ಳಿ ಆಭರಣ ಸೇರಿದಂತೆ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಕಳವಾಗಿದ್ದವು. ಇದೀಗ ಮನೆಯಲ್ಲಿ ಕಳ್ಳತನ ಮಾಡಿರುವುದು ಮನೆಕೆಲಸದಾಕೆ ಎಂಬುವುದು ತಿಳಿದುಬಂದಿದ್ದು, ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ.

ನಟಿಯ ತಾಯಿ ಮನೆಯಲ್ಲಿ ಚಿನ್ನಾಭರಣ ಕಳವಾಗಿದ್ದ ಬಗ್ಗೆ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆಯ ವೇಳೆ ಕೆಲಸದಾಕೆ ಉಷಾ ಈ ಕೃತ್ಯ ಮಾಡಿರುವುದು ಬೆಳಕಿಗೆ ಬಂದಿದ್ದು, ಅವರನ್ನು ಬಂಧಿಸಿ ಆಭರಣಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೆಲಸದ ವೇಳೆ, ಚಿನ್ನಾಭರಣ ದೋಚಿ ಏನೂ ಅರಿಯದಂತೆ ಕೆಲಸದಾಕೆ ವರ್ತಿಸಿದ್ದಳು. ಇದೀಗ ಆಕೆಯ ಕಳ್ಳತನ ಮಾಡಿರುವುದು ಪೊಲೀಸರ ತನಿಖೆಯಿಂದ ಬಯಲಾಗಿದೆ.

ಇದನ್ನೂ ಓದಿ | Actor Dhanush: ಧನುಷ್‌ಗೆ ಐಶ್ವರ್ಯಾ ದೋಖಾ; ಐಶ್ವರ್ಯಾಗೆ ಧನುಷ್‌ ಮೋಸ! ಖ್ಯಾತ ಗಾಯಕಿಯಿಂದ ಸೆನ್ಷೆಷನಲ್‌ ಮಾಹಿತಿ

ಛಾಯಾ ಸಿಂಗ್ ಕುಟುಂಬ ಹಲವು ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದೆ. ಛಾಯಾ ಸಿಂಗ್ ಪ್ರಸ್ತುತ ಕನ್ನಡದ ‘ಅಮೃತಧಾರೆ’ ಧಾರಾವಾಹಿಯಲ್ಲಿ ನಾಯಕಿ ಭೂಮಿಕಾ ಪಾತ್ರಧಾರಿಯಾಗಿ ನಟಿಸುತ್ತಿದ್ದಾರೆ. ಇನ್ನು ಶಿವರಾಜ್‌ಕುಮಾರ್ ನಟನೆಯ ‘ಭೈರತಿ ರಣಗಲ್ ಸಿನಿಮಾದಲ್ಲಿ ಛಾಯಾ ಸಿಂಗ್ ಅಭಿನಯಿಸಿದ್ದು, ಈ ವರ್ಷಾಂತ್ಯದಲ್ಲಿ ಸಿನಿಮಾ ತೆರೆ ಕಾಣಲಿದೆ.

ನಟಿ ವೈಷ್ಣವಿ ಗೌಡಗೆ ನೋಟಿಸ್‌ ಕೊಟ್ಟ ಟ್ರಾಫಿಕ್‌ ಪೊಲೀಸರು; ಸೀತಮ್ಮ ಮಾಡಿದ ತಪ್ಪೇನು?

Vaishnavi Gowda

ಬೆಂಗಳೂರು: ಕಿರುತೆರೆಯ ಜನಪ್ರಿಯ ನಟಿ ವೈಷ್ಣವಿ ಗೌಡ (Vaishnavi Gowda) ಅವರಿಗೆ ಬೆಂಗಳೂರು ಟ್ರಾಫಿಕ್‌ ಪೊಲೀಸರು ದಂಡದ ಬಿಸಿ ಮುಟ್ಟಿಸಿದ್ದಾರೆ. ಧಾರಾವಾಹಿಯ ದೃಶ್ಯವೊಂದರಲ್ಲಿ ಹೆಲ್ಮೆಟ್‌ ಧರಿಸದೆ ಸ್ಕೂಟರ್‌ನಲ್ಲಿ ಸಂಚರಿಸಿದ ಕಾರಣಕ್ಕೆ ಪೊಲೀಸರು 500 ರೂ. ದಂಡ ವಿಧಿಸಿದ್ದಾರೆ ಎನ್ನಲಾಗಿದ್ದು, ಸದ್ಯ ಈ ವಿಚಾರ ಸೋಷಿಯಲ್‌ ಮೀಡಿಯಾದಲ್ಲಿ ಚರ್ಚೆಯಾಗುತ್ತಿದೆ.

ಸದ್ಯ ಝೀ ಕನ್ನಡ ವಾಹಿನಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ʼಸೀತಾ ರಾಮʼ ಧಾರಾವಾಹಿಯಲ್ಲಿ ವೈಷ್ಣವಿ ಗೌಡ ನಾಯಕಿ ಸೀತಾ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. 2023ರ ಜುಲೈ 17ರಂದು ಆರಂಭವಾದ ಈ ಧಾರಾವಾಹಿ ವೀಕ್ಷಕರ ಗಮನ ಸೆಳೆಯುತ್ತಿದೆ. ಆರಂಭವಾಗಿ ಸುಮಾರು 10 ತಿಂಗಳು ಕಳೆದಿದ್ದರೂ ಈಗಲೂ ಟಾಪ್‌ ಲಿಸ್ಟ್‌ನಲ್ಲಿದೆ. ಉತ್ತಮ ಟಿಆರ್‌ಪಿ ಪಡೆದುಕೊಳ್ಳುತ್ತಿರುವ ಈ ಧಾರಾವಾಹಿಯ ದೃಶ್ಯವೇ ಸದ್ಯ ವೈಷ್ಣವಿ ಗೌಡ ಅವರಿಗೆ ಫಜೀತಿ ತಂದಿಟ್ಟಿದೆ.

ಏನಿದು ಪ್ರಕರಣ?

ʼಸೀತಾ ರಾಮʼ ಧಾರಾವಾಹಿಯ 14ನೇ ಸಂಚಿಕೆಯ ದೃಶ್ಯ ಸದ್ಯ ಪ್ರಕರಣದ ಕೇಂದ್ರ ಬಿಂದು. ಇದರಲ್ಲಿ ಸೀತಾ (ವೈಷ್ಣವಿ ಗೌಡ) ಹಾಗೂ ಆಕೆಯ ಗೆಳೆತಿ ಪ್ರಿಯಾ (ಶ್ವೇತಾ ಶಂಕರಪ್ಪ) ಸ್ಕೂಟರ್‌ನಲ್ಲಿ ತೆರಳುವ ದೃಶ್ಯವಿದೆ. ಸ್ಕೂಟರ್‌ ಓಡಿಸುತ್ತಿದ್ದ ಶ್ವೇತಾ ಹೆಲ್ಮೆಟ್ ಧರಿಸಿದ್ದರೆ ಹಿಂದಿನ ಸೀಟಿನಲ್ಲಿದ್ದ ವೈಷ್ಣವಿ ಹೆಲ್ಮೆಟ್ ಧರಿಸಿರಲಿಲ್ಲ. ಇದನ್ನು ಉಲ್ಲೇಖಿಸಿ ಮಂಗಳೂರಿನ ಜಯಪ್ರಕಾಶ್‌ ಎಕ್ಕೂರು ಎನ್ನುವವರು ಮಂಗಳೂರು ನಗರ ಪೊಲೀಸ್‌ ಆಯುಕ್ತರಿಗೆ ದೂರು ನೀಡಿದ್ದರು. ವೈಷ್ಣವಿ ಗೌಡ ಟ್ರಾಫಿಕ್‌ ರೂಲ್ಸ್‌ ಉಲ್ಲಂಘಿಸಿದ್ದಾರೆ ಎಂದು ತಿಳಿಸಿದ್ದರು.

ಪ್ರಕರಣವನ್ನು ಗಂಭೀರವಾಗಿ ಪರಿಣಿಸಿದ ಪೊಲೀಸರಿಗೆ ಬಳಿಕ ಧಾರಾವಾಹಿಯ ಶೂಟಿಂಗ್ ಬೆಂಗಳೂರಿನ ನಂದಿನಿ ಲೇಔಟ್​ನಲ್ಲಿ ನಡೆದ ವಿಚಾರ ಗೊತ್ತಾಗಿತ್ತು. ಬಳಿಕ ಇದನ್ನು ಬೆಂಗಳೂರಿನ ರಾಜಾಜಿನಗರ ಠಾಣೆಗೆ ವರ್ಗಾಯಿಸಲಾಯಿತು. ಸದ್ಯ ಸ್ಕೂಟರ್‌ ಮಾಲೀಕರಾದ ಸವಿತಾ ಹಾಗೂ ವೈಷ್ಣವಿ ಅವರಿಗೆ ತಲಾ 500 ರೂ. ದಂಡ ವಿಧಿಸಲಾಗಿದೆ ಎಂದು ವರದಿಯೊಂದು ತಿಳಿಸಿದೆ.

ಹಿಂದಿಗೆ ರಿಮೇಕ್‌

ಸದ್ಯ ʼಸೀತಾ ರಾಮʼ ಧಾರಾವಾಹಿ ಹಿಂದಿಗೆ ರಿಮೇಕ್‌ ಆಗುತ್ತಿದೆ. ಹಿಂದಿ ರಿಮೇಕ್‌ಗೆ ‘ಮೇ ಹೂ ಸಾತ್ ತೆರೆ’ ಎನ್ನುವ ಶೀರ್ಷಿಕೆ ಇಡಲಾಗಿದೆ. ಇದು ಝೀ ಹಿಂದಿ ವಾಹಿನಿಯಲ್ಲಿ ಪ್ರಸಾರವಾಗಲಿದೆ. ಕನ್ನಡದಲ್ಲಿ ವೈಷ್ಣವಿ ಗೌಡ ಜತೆಗೆ ರಾಮ್‌ ಆಗಿ ಗಗನ್ ಚಿನ್ನಪ್ಪ ನಟಿಸುತ್ತಿದ್ದಾರೆ. ಧಾರಾವಾಹಿಯ ಪ್ರಧಾನ ಆಕರ್ಷಣೆಯಾದ ಸಿಹಿ ಪಾತ್ರದಲ್ಲಿ ಪುಟಾಣಿ ರೀತು ಸಿಂಗ್ ಮೋಡಿ ಮಾಡಿದ್ದಾರೆ. ಇವರ ಜತೆಗೆ ಪೂಜಾ ಲೋಕೇಶ್, ಅಶೋಕ್, ಮುಖ್ಯಮಂತ್ರಿ ಚಂದ್ರು ಮೊದಲಾದವರು ಈ ಧಾರಾವಾಹಿಯ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ. ಹಿಂದಿಯಲ್ಲಿ ಗಗನ್ ಚಿನ್ನಪ್ಪ ಮಾಡಿರುವ ರಾಮ್‌ ಪಾತ್ರವನ್ನು ಕರಣ್ ವೋಹ್ರಾ ನಿರ್ವಹಿಸಲಿದ್ದು, ವೈಷ್ಣವಿ ಗೌಡ ಅವರ ಸೀತಾ ಪಾತ್ರವನ್ನು ಪಾತ್ರವನ್ನು ‘ಜಾನ್ಸಿ ಕಿ ರಾಣಿ’ ಧಾರಾವಾಹಿ ಖ್ಯಾತಿಯ ಉಲ್ಕಾ ಗುಪ್ತಾ ಮಾಡುತ್ತಿದ್ದಾರೆ. ಇದರ ಜತೆಗೆ ʼಸೀತಾ ರಾಮʼ ಮಲೆಯಾಳಂಗೂ ಡಬ್‌ ಆಗುತ್ತಿದೆ. ಝೀ ಕೇರಳಂ ವಾಹಿನಿಯಲ್ಲಿ ಇದು ಪ್ರಸಾರವಾಗಲಿದೆ.

ಇದನ್ನೂ ಓದಿ: Seetha Raama Serial: ಹಿಂದಿಗೆ ರಿಮೇಕ್‌ ಆಗ್ತಿದೆ ಕನ್ನಡದ ಈ ಜನಪ್ರಿಯ ಧಾರಾವಾಹಿ

ವಿಶೇಷ ಎಂದರೆ ʼಸೀತಾ ರಾಮʼ ಧಾರಾವಾಹಿಯೂ ರಿಮೇಕ್‌. ಇದು ಮರಾಠಿಯ ‘ಮಜಿ ತುಜಿ ರೆಶಿಮಗತ್’ ಧಾರಾವಾಹಿಯ ಕಥೆಯನ್ನು ಆಧರಿಸಿ ತಯಾರಾಗಿದೆ. ಈ ಧಾರಾವಾಹಿ ಝೀ ಮರಾಠಿಯಲ್ಲಿ 2021ರ ಆಗಸ್ಟ್​ನಿಂದ 2023ರ ಜನವರಿವರೆಗೆ ಪ್ರಸಾರವಾಗಿತ್ತು. 458 ಕಂತುಗಳನ್ನು ಹೊಂದಿದ್ದ ಇದರಲ್ಲಿ ಪ್ರಾರ್ಥನಾ ಬೆಹೆರೆ ಹಾಗೂ ಶ್ರೇಯಸ್ ತಲ್ಪಡೆ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.

Exit mobile version