CM Bommai | ಎಸ್‌ಸಿ-ಎಸ್‌ಟಿ ವಿದ್ಯಾರ್ಥಿಗಳ ಉದ್ಯೋಗಕ್ಕಾಗಿ 10 ಲಕ್ಷ ರೂ. ಸ್ಕೀಮ್: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ - Vistara News

ಕರ್ನಾಟಕ

CM Bommai | ಎಸ್‌ಸಿ-ಎಸ್‌ಟಿ ವಿದ್ಯಾರ್ಥಿಗಳ ಉದ್ಯೋಗಕ್ಕಾಗಿ 10 ಲಕ್ಷ ರೂ. ಸ್ಕೀಮ್: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ, ಹಲವು ಕಾರ್ಯಕ್ರಮಗಳನ್ನು ರೂಪಿಸಿದ್ದೇವೆ. ಎಸ್‌ಸಿ ಎಸ್‌ಟಿ ವಿದ್ಯಾರ್ಥಿಗಳಿಗೆ 100 ಹಾಸ್ಟೆಲ್‌ಗಳನ್ನು ನಿರ್ಮಿಸಲಾಗುತ್ತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ (CM Bommai) ತಿಳಿಸಿದ್ದಾರೆ.

VISTARANEWS.COM


on

ಬಸವರಾಜ ಬೊಮ್ಮಾಯಿ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ತುಮಕೂರು: ರಾಜ್ಯದ ಪ್ರತಿ ತಾಲೂಕಿನಲ್ಲಿ 100 ಎಸ್‌ಸಿ ಎಸ್‌ಟಿ ವಿದ್ಯಾರ್ಥಿಗಳಿಗೆ 5 ರಿಂದ 10 ಲಕ್ಷ ರೂಪಾಯಿ ಧನಸಹಾಯ ನೀಡಿ ಉದ್ಯೋಗ ಸೃಷ್ಟಿ ಮಾಡುವ ವಿಶೇಷ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Bommai) ತಿಳಿಸಿದರು.

ನಗರದಲ್ಲಿ ಭಾನುವಾರ ಏರ್ಪಡಿಸಿದ್ದ ರಾಜ್ಯ ಮಟ್ಟದ ಭೋವಿ ಜನಜಾಗೃತಿ ಸಮಾವೇಶ ಉದ್ಘಾಟಿಸಿ ಮಾತನಾಡಿ, 21ನೇ ಶತಮಾನ ಜ್ಞಾನದ ಶತಮಾನ, ನಿಮ್ಮ ಜ್ಞಾನವೇ ತಂತ್ರಾಂಶವಾಗಿದೆ. ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ, ಹಲವು ಕಾರ್ಯಕ್ರಮಗಳನ್ನು ರೂಪಿಸಿದ್ದೇವೆ. ಎಸ್‌ಸಿ ಎಸ್‌ಟಿ ವಿದ್ಯಾರ್ಥಿಗಳಿಗೆ 100 ಹಾಸ್ಟೆಲ್‌ಗಳನ್ನು ಬೆಂಗಳೂರು, ಮೈಸೂರು, ಹುಬ್ಬಳ್ಳಿ-ಧಾರವಾಡ, ಗುಲ್ಬರ್ಗಾ, ಮಂಗಳೂರಿನಲ್ಲಿ ನಿರ್ಮಿಸಲಾಗುತ್ತಿದೆ ಎಂದು ತಿಳಿಸಿದರು.

ಎಸ್‌ಸಿ-ಎಸ್‌ಟಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಉನ್ನತ ಶಿಕ್ಷಣಕ್ಕೆ ಸಹಾಯ ನೀಡಲಾಗುತ್ತಿದೆ. ಬಡತನ ರೇಖೆಗಿಂತ ಕೆಳಗಿರುವ ಎಸ್‌ಸಿ, ಎಸ್‌ಟಿ ಮನೆಗಳಿಗೆ 75 ಯೂನಿಟ್‌ ಉಚಿತ ವಿದ್ಯುತ್ ನೀಡಲು ಈಗಾಗಲೇ ಆದೇಶ ಹೊರಡಿಸಲಾಗಿದೆ. ಭೂ ಒಡೆತನಕ್ಕೆ 15 ಲಕ್ಷ ರೂಪಾಯಿ, ಮನೆ ನಿರ್ಮಾಣಕ್ಕೆ 2 ಲಕ್ಷ ರೂಪಾಯಿ ನೀಡಲಾಗುತ್ತಿದೆ. ಭೋವಿ ಅಭಿವೃದ್ಧಿ ನಿಗಮಕ್ಕೆ 175 ಕೋಟಿ ರೂ.ಗಳ ಯೋಜನೆಯನ್ನು ರೂಪಿಸಿ ಪ್ರಾರಂಭಿಸಲು ಸೂಚಿಸಲಾಗಿದೆ ಎಂದರು.

ಭೋವಿ ಅಭಿವೃದ್ಧಿ ನಿಗಮಕ್ಕೆ ಶೀಘ್ರದಲ್ಲೇ ಅಧ್ಯಕ್ಷರ ನೇಮಕ
ಭೋವಿ ಅಭಿವೃದ್ಧಿ ನಿಗಮಕ್ಕೆ ದಕ್ಷ ಅಧ್ಯಕ್ಷರನ್ನು ಸದ್ಯದಲ್ಲಿಯೇ ನೇಮಿಸಲಾಗುವುದು. ಸ್ತ್ರೀ ಸಾಮರ್ಥ್ಯ ಯೋಜನೆಯಡಿ ಎಸ್‌ಸಿ ಎಸ್‌ಟಿ ಸ್ತ್ರೀ ಶಕ್ತಿ ಸಂಘಕ್ಕೆ 10 ಲಕ್ಷ ರೂಪಾಯಿವರೆಗೂ ಬ್ಯಾಂಕ್ ಸಾಲ ಸೌಲಭ್ಯ, ರಾಜ್ಯ ಸರ್ಕಾರದಿಂದ ಧನಸಹಾಯ ನೀಡಲಾಗುತ್ತಿದೆ. ಭೋವಿ ಸಮಾಜದ ಗುರುಗಳ ಮಾರ್ಗದರ್ಶನದಲ್ಲಿ ಸಮುದಾಯ ಅಭಿವೃದ್ಧಿಯನ್ನು ಕಾಣಲಿದೆ. ಸಾಮಾಜಿಕ ನ್ಯಾಯ ಭಾಷಣದ ಸರಕಲ್ಲ. ಸಮಾಜದವರು ಜಾಗೃತರಾಗಬೇಕು. ಸಾಮಾಜಿಕ ನ್ಯಾಯಕ್ಕಾಗಿ ಶಿಕ್ಷಣ, ಉದ್ಯೋಗ, ಸಬಲೀಕರಣಕ್ಕಾಗಿ ಸರ್ಕಾರ ಬದ್ಧವಾಗಿದೆ ಎಂದರು.

ಭೋವಿಕುಲದಲ್ಲಿ ಜ್ಞಾನ ಮತ್ತು ಧ್ಯಾನ ರಕ್ತಗತವಾಗಿದೆ
ಸಿದ್ಧರಾಮೇಶ್ವರರು ಬದುಕಿನ ದಾರಿಯನ್ನು ತೋರಿಸಿದ ಪವಾಡ ಪುರುಷರು. ಬದುಕಿನಲ್ಲಿ ದುಡಿಮೆಯಿಲ್ಲದಿದ್ದರೆ ಅದು ಬದುಕೇ ಅಲ್ಲ. ಬೆವರು ಹರಿಸಿ ದುಡಿದರೆ ದೇವರಿಗೆ ಮೆಚ್ಚುಗೆಯಾಗುತ್ತದೆ. ಬಸವಣ್ಣ ಅವರು ಕಾಯಕವೇ ಕೈಲಾಸ ಎಂದು ತಿಳಿಸಿದ್ದಾರೆ. ಪೂಜೆಗಿಂತ ಶ್ರೇಷ್ಠವಾದುದು ಕಾಯಕ. ಕಾಯಕಯೋಗಿಗಳಿಂದ ರಾಷ್ಟ್ರ ನಿರ್ಮಾಣವಾಗುತ್ತಿದೆ. ಕಲ್ಲನ್ನು ಮೇಣದಂತೆ ಕಡಿದು ರೂಪಗೊಳಿಸುವ ಕಲೆ, ಜ್ಞಾನ ಮತ್ತು ಧ್ಯಾನ ಭೋವಿಕುಲದಲ್ಲಿ ರಕ್ತಗತವಾಗಿದೆ. ಸಿದ್ಧರಾಮೇಶ್ವರರು ಕೆರೆಕಟ್ಟೆಗಳ ನಿರ್ಮಾಣ, ದೇವಸ್ಥಾನಗಳ ನಿರ್ಮಾಣ ಮಾಡಿರುವ ಕಾಯಕ ಶ್ರೇಷ್ಠವಾದುದಾಗಿದೆ ಎಂದರು.

ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿರುವ ಮಂಜುನಾಥ ಪ್ರಸಾದ್ ಅವರು, ಎಲ್ಲ ವರ್ಗದ ಜನರ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದಾರೆ. ಸಮಸ್ಯೆಗಳಿಗೆ ಪರಿಹಾರದ ಭಾಗವಾಗಿದ್ದಾರೆ. ಭೋವಿ ಸಮಾಜದ ಎಲ್ಲರಿಗೂ ಇವರು ಪ್ರೇರಣೆಯಾಗಿದ್ದಾರೆ ಎಂದು ಪ್ರಶಂಸಿಸಿದರು.

ಇದನ್ನೂ ಓದಿ | ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಕಾಂಗ್ರೆಸ್‌: ಕೆ.ಎಚ್‌.ಮುನಿಯಪ್ಪ ಮನೆಗೆ ಸುರ್ಜೇವಾಲಾ ಭೇಟಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

Neha Murder Case: ನೇಹಾ ಕೊಲೆ ಪ್ರಕರಣ ರಾಜಕೀಯಕ್ಕೆ ಬಳಕೆ; ಕೊಲೆಗಾರನಿಗೆ ಉಗ್ರ ಶಿಕ್ಷೆ ಎಂದ ಸಿದ್ದರಾಮಯ್ಯ

Neha Murder Case: ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಬಗ್ಗೆ ಪ್ರತಿಪಕ್ಷಗಳ ಆರೋಪದ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಎಲ್ಲ ಕಾಲದಲ್ಲಿಯೂ ಕೊಲೆಗಳಾಗಿವೆ. ಹಾಗೆಂದು ಕಾನೂನು ಸುವ್ಯವಸ್ಥೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದಲ್ಲ. ಕರ್ನಾಟಕದಲ್ಲಿ ಇರುವಷ್ಟು ಶಾಂತಿ ಸುವ್ಯವಸ್ಥೆ ಬೇರೆ ರಾಜ್ಯಗಳಲ್ಲಿಲ್ಲ. ನಾವು ಯಾವುದೇ ಕೃತ್ಯ ನಡೆದರೂ, ಅದನ್ನು ತೀವ್ರವಾಗಿ ಖಂಡಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ರಾಜಕೀಯಕ್ಕಾಗಿ ಒಬ್ಬರ ಸಾವನ್ನು ಬಳಸಿಕೊಳ್ಳುವುದು ದುರ್ದೈವ ಹಾಗೂ ಖಂಡನೀಯ ಎಂದು ಹೇಳಿರುವ ಸಿಎಂ ಸಿದ್ದರಾಮಯ್ಯ, ಕೊಲೆಗಾರನಿಗೆ ಉಗ್ರ ಶಿಕ್ಷೆ ನೀಡಲು ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ.

VISTARANEWS.COM


on

Koo

ಮೈಸೂರು: ಪ್ರತಿಪಕ್ಷಗಳು ನೇಹಾ ಕುಲಕರ್ಣಿ ಅವರ ಕೊಲೆ ಪ್ರಕರಣವನ್ನು (Neha Murder Case) ರಾಜಕೀಯಕ್ಕೆ ಬಳಸುತ್ತಿದ್ದಾರೆ. ಆಕೆಯನ್ನು ಕೊಂದವನಿಗೆ ಉಗ್ರ ಶಿಕ್ಷೆಯನ್ನು ಕೊಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಶನಿವಾರ ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ನೇಹಾ ಕುಲಕರ್ಣಿ ಕೊಲೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಕೊಲೆಗಾರನನ್ನು ಕೂಡಲೇ ಬಂಧಿಸಲಾಗಿದೆ. ಇದು ಲವ್ ಜಿಹಾದ್ ಪ್ರಕರಣವಲ್ಲ. ಸರ್ಕಾರ ತನಿಖೆಯನ್ನು ಗಂಭೀರವಾಗಿ ಕೈಗೊಂಡಿದ್ದು, ಕೊಲೆಗಾರನಿಗೆ ಉಗ್ರ ಶಿಕ್ಷೆ ನೀಡಲು ಪ್ರಯತ್ನ ಮಾಡಲಾಗುವುದು ಎಂದರು.

ರಾಜಕೀಯಕ್ಕಾಗಿ ಒಬ್ಬರ ಸಾವನ್ನು ಬಳಸಿಕೊಳ್ಳುವುದು ದುರ್ದೈವ

ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಬಗ್ಗೆ ಪ್ರತಿಪಕ್ಷಗಳ ಆರೋಪದ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಎಲ್ಲ ಕಾಲದಲ್ಲಿಯೂ ಕೊಲೆಗಳಾಗಿವೆ. ಹಾಗೆಂದು ಕಾನೂನು ಸುವ್ಯವಸ್ಥೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದಲ್ಲ. ಕರ್ನಾಟಕದಲ್ಲಿ ಇರುವಷ್ಟು ಶಾಂತಿ ಸುವ್ಯವಸ್ಥೆ ಬೇರೆ ರಾಜ್ಯಗಳಲ್ಲಿಲ್ಲ. ನಾವು ಯಾವುದೇ ಕೃತ್ಯ ನಡೆದರೂ, ಅದನ್ನು ತೀವ್ರವಾಗಿ ಖಂಡಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ರಾಜಕೀಯಕ್ಕಾಗಿ ಒಬ್ಬರ ಸಾವನ್ನು ಬಳಸಿಕೊಳ್ಳುವುದು ದುರ್ದೈವ ಹಾಗೂ ಖಂಡನೀಯ ಎಂದು ಹೇಳಿದರು. ಇನ್ನು ರಾಜ್ಯಾದ್ಯಂತ ಪ್ರತಿಭಟನೆಗಳಾಗುತ್ತಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಇದರ ಪರಿಣಾಮ ಸರ್ಕಾರದ ಮೇಲೆ ಆಗುವುದಿಲ್ಲ ಎಂದು ಹೇಳಿದರು.

ದೇಶದಲ್ಲಿ ಅಥವಾ ಕರ್ನಾಟಕದಲ್ಲಿ ಮೋದಿ ಅಲೆ ಇಲ್ಲ

ರಾಜ್ಯದಲ್ಲಿ ಚುನಾವಣಾ ವಾತಾವರಣ ಉತ್ತಮವಾಗಿದ್ದು ದೇಶದಲ್ಲಿ ಅಥವಾ ಕರ್ನಾಟಕದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಲೆ ಇಲ್ಲ. ಬಿಜೆಪಿ ಅಭ್ಯರ್ಥಿಗಳು ಮೋದಿ ಹೆಸರಿನಲ್ಲಿ ಮತ ಯಾಚಿಸುತ್ತಿದ್ದಾರೆ. ಮೋದಿಯವರ ಮೇಲೆ ಅವಲಂಬನೆಯಾಗಿದ್ದು, ಜನ ಮೋದಿ ಸರ್ಕಾರದ ವಿರುದ್ಧವಾಗಿದ್ದಾರೆ. ದೇಶದಲ್ಲಿ ಇಂಡಿಯಾ ಪರವಾದ ವಾತಾವರಣವಿದೆ ಎಂದರು.

ಬಿಜೆಪಿ ಸರ್ಕಾರ ಜನರಿಗೆ ಖಾಲಿ ಚೆಂಬು ಕೊಟ್ಟಿದೆ

ಕಾಂಗ್ರೆಸ್‌ನ ಚೆಂಬು ಜಾಹೀರಾತನ್ನು ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿರುವುದರ ಚಿಹ್ನೆ ಎಂಬ ಬಿಜೆಪಿ ಟೀಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ನಿನ್ನೆ ಕೊಟ್ಟಿರುವ ಜಾಹೀರಾತು ಈ ದೇಶದ ಜನರಿಗೆ ಬಿಜೆಪಿ ಸರ್ಕಾರ ಖಾಲಿ ಚೆಂಬು ಕೊಟ್ಟಿದೆ ಎಂದು ತಿಳಿಸಲು. ದೇಶದ ಜನರಿಗೆ 15 ಲಕ್ಷ ರೂಪಾಯಿ ಕೊಟ್ಟರೇ? 2 ಕೋಟಿ ಉದ್ಯೋಗ ಸೃಷ್ಟಿ ಆಯಿತೇ? ರೈತರ ಆದಾಯ ದುಪ್ಪಟ್ಟು ಆಯಿತೇ? ಅಚ್ಚೇ ದಿನ್ ಬಂದಿದೆಯೇ? ಅದಕ್ಕೆ ಚೆಂಬು ಕೊಟ್ಟಿದ್ದಾರೆ ಎಂದು ಜಾಹೀರಾತು ನೀಡಲಾಗಿದೆ ಎಂದು ಪ್ರತಿಕ್ರಿಯೆ ನೀಡಿದರು.

ನರೇಂದ್ರ ಮೋದಿ ರಾಜ್ಯಕ್ಕೆ ಬರುತ್ತಿದ್ದು, 11 ತಿಂಗಳಲ್ಲಿ ಬೊಕ್ಕಸ ಖಾಲಿಯಾಗಿದೆ ನಮಗೆ ಭಿಕ್ಷೆ ಕೊಡಿ ಎಂಬ ಅರ್ಥದಲ್ಲಿ ಜಾಹೀರಾತು ನೀಡಿದೆ ಎಂದು ಬಿಜೆಪಿ ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿ ಕೊಟ್ಟಿರುವ ಆಶ್ವಾಸನೆಗಳಲ್ಲಿ ಒಂದನ್ನೂ ಈಡೇರಿಸಿಲ್ಲ. ದೇಶದ ಜನರಿಗೆ ಖಾಲಿ ಚೆಂಬು ನೀಡಿದ್ದಾರೆ ಎಂದು ಜಾಹೀರಾತು ನೀಡಿದ್ದೇವೆ. ಅವರು ಏನಾದರೂ ಹೇಳಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಬೊಕ್ಕಸ ಖಾಲಿಯಾಗಿಲ್ಲ. ಎಲ್ಲ ಗ್ಯಾರಂಟಿಗಳನ್ನು ಜಾರಿ ಮಾಡಿ ಅಭಿವೃದ್ಧಿ ಕೆಲಸವನ್ನೂ ಮಾಡಿದ್ದೇವೆ ಎಂದರು.

ಭಯವಿರುವುದರಿಂದ ಬಿಜೆಪಿ ಜತೆಗೆ ಜೆಡಿಎಸ್ ಮೈತ್ರಿ

ಏಣಿ ಹತ್ತಿಸಿ ನಂತರ ಸರ್ವನಾಶ ಮಾಡುತ್ತಾರೆ ಎಂಬ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಎಚ್‌.ಡಿ. ಕುಮಾರಸ್ವಾಮಿ ಅವರು ಕೋಮುವಾದಿಗಳಾಗಿದ್ದು, ಜನತಾ ದಳ (ಎಸ್) ಪಕ್ಷವನ್ನು ರದ್ದು ಮಾಡಬೇಕು. ನನಗೆ ಅವರ ಬಗ್ಗೆ ಭಯವಿದ್ದರೆ ಇವರಿಬ್ಬರ ವಿರುದ್ಧ ಹೋರಾಟ ಮಾಡುತ್ತಿರಲಿಲ್ಲ. ಅವರಿಗೆ ಭಯವಿರುವುದರಿಂದ ಮೈತ್ರಿ ಮಾಡಿಕೊಂಡಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: CET 2024 exam: ಸಿಇಟಿಯಲ್ಲಿ 50 ಔಟ್ ಆಫ್ ಸಿಲೆಬಸ್ ಪ್ರಶ್ನೆ; ಮರು ಪರೀಕ್ಷೆ ಅಥವಾ ಗ್ರೇಸ್‌ ಮಾರ್ಕ್ಸ್‌? ಇಂದು ನಿರ್ಧಾರ

ಏನಿದು ಪ್ರಕರಣ?

ಪ್ರೀತಿಸಲು‌ ನಿರಾಕರಿಸಿದಳು (Refusal to love) ಎಂಬ ಕಾರಣಕ್ಕಾಗಿ ಪಾಗಲ್‌ ಪ್ರೇಮಿ ಫಯಾಜ್‌, ಕಾರ್ಪೋರೇಟರ್‌ ಮಗಳನ್ನು ಭೀಕರವಾಗಿ ಕೊಲೆ (Stab wound) ಮಾಡಿದ್ದ. ಚಾಕುವಿನಿಂದ 9 ಬಾರಿ ಇರಿದು (Murder Case) ಕೊಂದಿದ್ದಾನೆ. ಹುಬ್ಬಳ್ಳಿಯ ಬಿವಿಬಿ ಕಾಲೇಜು (Hubballi BVB College) ಆವರಣದಲ್ಲಿ ಕೊಲೆ ನಡೆದಿದೆ. ನೇಹಾ ಹಿರೇಮಠ ಕೊಲೆಯಾದ ಯುವತಿ. ನೇಹಾ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಮಗಳಾಗಿದ್ದಾಳೆ.

ಪ್ರೀತಿಸಲು ನಿರಾಕರಿಸಿದ್ದಕ್ಕೆ ಕೊಲೆ

ನೇಹಾ ಹಿರೇಮಠ ಹುಬ್ಬಳ್ಳಿಯ ಬಿವಿಬಿ‌ ಕಾಲೇಜಿನಲ್ಲಿ ಓದುತ್ತಿದ್ದಾಳೆ. ಈ ವೇಳೆ ಆರೋಪಿ ಪ್ರೀತಿಸುವಂತೆ ಹಿಂದೆ ಬಿದ್ದಿದ್ದ. ಆದರೆ, ನೇಹಾ ನಿರಾಕರಣೆ ಮಾಡುತ್ತಲೇ ಬಂದಿದ್ದಾಳೆ. ಇದರಿಂದ ರೊಚ್ಚಿಗೆದ್ದ ಆತ ಗುರುವಾರ ಕಾಲೇಜು ಕ್ಯಾಂಪಸ್‌ಗೆ ಬಂದಿದ್ದಾನೆ. ಪುನಃ ಆಕೆ ಬಳಿ ಪ್ರೇಮ ನಿವೇದನೆ ಮಾಡಿಕೊಂಡಿದ್ದಾನೆ. ಆದರೆ, ನೇಹಾ ಪ್ರೀತಿಸಲು‌ ನಿರಾಕರಿಸಿದ್ದಾಳೆ. ಹೀಗಾಗಿ ಮೊದಲೇ ನಿರ್ಧರಿಸಿ ಬಂದಿದ್ದ ಆರೋಪಿಯು ನೇಹಾಳಿಗೆ ಕಾಲೇಜು ಕ್ಯಾಂಟೀನ್‌ನಲ್ಲಿಯೇ ಚಾಕುವಿನಿಂದ ಇರಿದಿದ್ದಾನೆ. ಯುವತಿಗೆ ಮನಬಂದಂತೆ ಚಾಕುವಿನಿಂದ ಇರಿದಿದ್ದಾನೆ. ಒಟ್ಟು ಒಂಭತ್ತು ಬಾರಿ ಚಾಕುವಿನಿಂದ ಚುಚ್ಚಿದ್ದು, ನೇಹಾಳಿಗೆ ತೀವ್ರ ರಕ್ತಸ್ರಾವವಾಗಿದೆ. ಸ್ಥಳೀಯರು ತಕ್ಷಣವೇ ಕಿಮ್ಸ್ ಆಸ್ಪತ್ರೆಗೆ ಆಕೆಯನ್ನು ರವಾನೆ ಮಾಡಿದ್ದಾರೆ. ಆದರೆ, ಅಷ್ಟರಲ್ಲಾಗಲೇ ನೇಹಾ ಮೃತಪಟ್ಟಿದ್ದಾಳೆ ಎಂದು ವೈದ್ಯರು ಘೋಷಿಸಿದ್ದಾರೆ.

Continue Reading

ಕೊಡಗು

Road Accident : ಯಮ ರೂಪಿ ಕೆಎಸ್‌ಆರ್‌ಟಿಸಿ ಬಸ್‌ಗೆ ಸ್ಕೂಟರ್‌ ಸವಾರ ಸಾವು, ಬಾಲಕ ಗಂಭೀರ

Road Accident : ಪ್ರತ್ಯೇಕ ಕಡೆಗಳಲ್ಲಿ ನಡೆದ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರನೊಬ್ಬ ಪ್ರಾಣ ಕಳೆದುಕೊಂಡರೆ, ಹಲವರು ಗಂಭೀರ ಗಾಯಗೊಂಡಿದ್ದಾರೆ. ಬೆಂಗಳೂರು ಹಾಗೂ ದಕ್ಷಿಣ ಕನ್ನಡದಲ್ಲಿ ಲಾರಿ ಬ್ರೇಕ್‌ ಫೇಲ್ಯೂರ್‌ ಆಗಿ ಸರಣಿ ಅಪಘಾತಗಳೇ ಸಂಭವಿಸಿವೆ.

VISTARANEWS.COM


on

By

Road Accident in karnataka
Koo

ಕೊಡಗು: ಕೆಎಸ್ಆರ್‌ಟಿಸಿ ಹಾಗೂ ಸ್ಕೂಟರ್‌ ನಡುವೆ ಅಪಘಾತ ಸಂಭವಿಸಿದ್ದು, ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಬಾಲಕನ ಸ್ಥಿತಿ ಗಂಭೀರವಾಗಿದೆ. ಕೊಡಗಿನ ವಿರಾಜಪೇಟೆ ತಾಲೂಕಿನ ಬಿಟ್ಟಂಗಾಲ ಗ್ರಾಮದಲ್ಲಿ ಅಪಘಾತ (Road Accident) ಸಂಭವಿಸಿದೆ.

ಸವಾರ ವೇಣುಗೋಪಾಲ್ ಮೃತ ದುರ್ದೈವಿ. ಸ್ಕೂಟಿಯಲ್ಲಿದ್ದ 11 ವರ್ಷದ ಬಾಲಕನ ಸ್ಥಿತಿ ಗಂಭೀರವಾಗಿದ್ದು, ವಿರಾಜಪೇಟೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕ್ಯಾಂಟರ್ ಬ್ರೇಕ್ ಫೇಲ್ಯೂರ್ ಆಗಿ ಸರಣಿ ಅಪಘಾತ

ಕ್ಯಾಂಟರ್ ವಾಹನದ ಬ್ರೇಕ್ ಫೇಲ್ಯೂರ್ ಆಗಿದ್ದರಿಂದ ಸರಣಿ ಅಪಘಾತ ಸಂಭವಿಸಿದೆ. ಬೆಂಗಳೂರಿನ ಮಾಗಡಿ ಮುಖ್ಯ ರಸ್ತೆಯ ಓಲ್ಡ್ ರಿಂಗ್ ರೋಡ್ ಬಳಿ ಘಟನೆ ನಡೆದಿದೆ. ಕ್ಯಾಂಟರ್‌ ವಾಹನವು ಕಾರು ಮತ್ತು ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಸದ್ಯ ಘಟನೆಯಲ್ಲಿ ಮೂರು ವಾಹನಗಳಿಗೆ ಮಾತ್ರ ಡ್ಯಾಮೇಜ್ ಆಗಿದ್ದು, ಯಾರುಗೂ ಪ್ರಾಣ ಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Rain News : ಶುರುವಾಯ್ತು ಮಳೆ ಅವಘಡ; ಮಲಗಿದ್ದಾಗ ಚಾವಣಿ ಕುಸಿದು ಮಹಿಳೆ ಸಾವು

ಮೂಡಬಿದ್ರೆಯಲ್ಲಿ ಮಣ್ಣಿನ ಲಾರಿಯ ಬ್ರೇಕ್ ಫೇಲ್

ದಕ್ಷಿಣ ಕನ್ನಡದ ಎಡಪದವು ರಾಮಮಂದಿರದ ಬಳಿ ಮಂಗಳೂರು ಕಡೆಯಿಂದ ಮೂಡಬಿದ್ರೆಗೆ ತೆರಳುತ್ತಿದ್ದ ಲಾರಿಯ ಬ್ರೇಕ್ ಫೇಲ್ ಆಗಿತ್ತು. ಲಾರಿ ನಿಲ್ಲಿಸಲು ಆಗದೆ, ಸುಮಾರು 500 ಮೀಟರ್ ದೂರದವರೆಗೂ ಹೋಗಿ ಮೊದಲಿಗೆ ಎದುರಿಗೆ ಬಂದ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಾರು ಸಂಪೂರ್ಣ ಜಖಂಗೊಂಡಿದ್ದು, ಕಾರಿನಲ್ಲಿದ್ದವರಿಗೆ ಗಾಯವಾಗಿದೆ.

ಬಳಿಕ ಮುಂದೆ ಚಲಿಸಿದ ಲಾರಿ, ಎಣ್ಣೆ ಪೂರೈಕೆ ಮಾಡುತ್ತಿದ್ದ ಪಿಕ್ಅಫ್ ವಾಹನಕ್ಕೆ ಡಿಕ್ಕಿಯಾಗಿತ್ತು. ಪರಿಣಾಮ ಪಿಕ್‌ಅಪ್‌ ವಾಹನ ಉರುಳಿ ಬಿದ್ದು ಎಣ್ಣೆ ಪ್ಯಾಕೆಟ್ಗಳು ಚೆಲ್ಲಾಪಿಲ್ಲಿಯಾಗಿದ್ದವು. ಎದುರಿನಿಂದ ಬಂದ ಟ್ಯಾಂಕರ್‌ವೊಂದು ಲಾರಿ ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿ ಬಿದ್ದಿತ್ತು. ಬಳಿಕ ಎಡಪದವು ಪೇಟೆಯ ಬಳಿ ಬಸ್‌ಗೆ ಡಿಕ್ಕಿ ಹೊಡೆದು ಲಾರಿ ನಿಂತಿತ್ತು. ಮೂಡಬಿದ್ರೆಯಿಂದ ಮಂಗಳೂರಿಗೆ ಬರುತ್ತಿದ್ದ ನಿಶ್ಮತ ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದರು. ಸರಣಿ ಅಪಘಾತದ ನಡುವೆ ಅಗರಿ ಎಂಟರ್‌ರ್ಪ್ರೈಸಸ್ ಎಂಬ ಅಂಗಡಿಯ ಕಟ್ಟಡಕ್ಕೂ ಹಾನಿಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Rain News : ಶುರುವಾಯ್ತು ಮಳೆ ಅವಘಡ; ಮಲಗಿದ್ದಾಗ ಚಾವಣಿ ಕುಸಿದು ಮಹಿಳೆ ಸಾವು

Rain News : ಒಂದು ಕಡೆ ಸಿಡಿಲಿಗೆ ಸಾವು-ನೋವು ಸಂಭವಿಸುತ್ತಿದ್ದರೆ, ಮತ್ತೊಂದು ಕಡೆ ರಾತ್ರಿ ಮಲಗಿದ್ದಾಗ ದಿಢೀರ್‌ ಮನೆ ಚಾವಣಿ ಕುಸಿದಿದೆ. ಪರಿಣಾಮ ಮಹಿಳೆಯೊಬ್ಬರು ಗಂಭೀರ ಗಾಯಗೊಂಡು ಆಸ್ಪತ್ರೆಪಾಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಮೃತಪಟ್ಟಿದ್ದಾರೆ.

VISTARANEWS.COM


on

By

Rain news
Koo

ವಿಜಯನಗರ: ಧಾರಕಾರವಾಗಿ ಸುರಿಯುತ್ತಿರುವ ಮಳೆ (Rain News) ನಾನಾ ಅವಾಂತರವನ್ನು ಸೃಷ್ಟಿ ಮಾಡಿದ್ದು, ಜನರ ಸಾವು-ನೋವಿಗೆ ಕಾರಣವಾಗಿದೆ. ಭಾರಿ ಮಳೆಗಾಳಿಗೆ ಚಾವಣಿ ಕುಸಿದು ಮಹಿಳೆಯೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ಹರಾಳು ಗ್ರಾಮದಲ್ಲಿ ಘಟನೆ ನಡೆದಿದೆ. ನಾಗಮ್ಮ (48) ಮೃತ ದುರ್ದೈವಿ.

ರಾತ್ರಿ ಪೂರ್ತಿ ಸುರಿದ ಭಾರಿ ಮಳೆಯೊಂದಿಗೆ, ರಭಸವಾಗಿ ಬೀಸಿದ ಗಾಳಿಗೆ ಮನೆ ಚಾವಣಿ ಕುಸಿದಿದೆ. ಈ ವೇಳೆ ನಾಗಮ್ಮ ಗಂಭೀರ ಗಾಯಗೊಂಡಿದ್ದರು. ಕೂಡಲೇ ಕುಟುಂಬಸ್ಥರು ಕೊಟ್ಟೂರು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಕೊಪ್ಪಳ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ನಾಗಮ್ಮ ಮೃತಪಟ್ಟಿದ್ದಾರೆ. ಕೊಟ್ಟೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಗುಡುಗು ಮಳೆಗೆ ಕೆರೆಯಂತಾದ ರಸ್ತೆಗಳು

ಬಿಸಿಲಿನ ಧಗೆಗೆ ತತ್ತರಿಸಿದ್ದ ಬೀದರ್ ಜನತೆಗೆ ಶುಕ್ರವಾರ ರಾತ್ರಿಯಿಂದಲೇ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗಿದೆ. ಏಕಾಏಕಿ ಮಳೆಯಿಂದಾಗಿ ವಾಹನ ಸವಾರರು, ಸಾರ್ವಜನಿಕರ ಪರದಾಡಿದರು. ಮಳೆಯಿಂದಾಗಿ ನಗರದ ಪ್ರಮುಖ ರಸ್ತೆಗಳು ಕೆರೆಯಂತಾಗಿದ್ದವು. ತರಕಾರಿ, ತೋಟಗಾರಿಕೆ ಬೆಳೆಗಳು ಭಾರಿ ಪ್ರಮಾಣದಲ್ಲಿ ಹಾನಿಯಾಗಿವೆ. ಸಿಡಿಲು ಬಡಿದು ಬರೂರು ಗ್ರಾಮದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದರು. ಔರಾದ್, ಕಮಲನಗರ, ಭಾಲ್ಕಿ ತಾಲೂಕಿನಲ್ಲಿ‌ ಧಾರಾಕಾರ ಮಳೆ ಆಗುತ್ತಿದ್ದರೆ, ಬಸವಕಲ್ಯಾಣ, ಹುಮನಾಬಾದ್‌, ಚಿಟಗುಪ್ಪಾ ತಾಲೂಕುಗಳಲ್ಲಿ ಸಾಧಾರಣ ಮಳೆಯಾಗುತ್ತಿದೆ.

ಇದನ್ನೂ ಓದಿ: Rain News : ಸಿಡಿಲಿಗೆ ವ್ಯಕ್ತಿ ಸೇರಿ ಜಾನುವಾರುಗಳು ಮೃತ್ಯು; ವ್ಯಾಪಕ ಮಳೆಗೆ ಜನರು ಕಂಗಾಲು

ಮಳೆಯಲ್ಲಿಯೇ ಕ್ರಿಕೆಟ್‌ ಆಟ

ಕೊಪ್ಪಳದಲ್ಲಿ ಶನಿವಾರ ಬೆಳ್ಳಂಬೆಳಗ್ಗೆ ವರುಣನ ಆಗಮನದಿಂದ‌ ಜನರು ಸಂತಸಗೊಂಡಿದ್ದರು. ಬಿಸಿಲಿನಿಂದ‌ ಕಂಗೆಟ್ಟಿದ್ದವರು ಮಳೆಯಲ್ಲಿಯೇ ಯುವಕರು ಕ್ರಿಕೆಟ್ ಆಡಿದರು. ಗದಗ ಜಿಲ್ಲೆಯ ಮುಂಡರಗಿ, ಶಿರಹಟ್ಟಿ ಸೇರಿದಂತೆ ಹಲವೆಡೆ ಬಿರುಗಾಳಿ ಸಮೇತ ಗುಡುಗು ಮಳೆಯಾಗುತ್ತಿದೆ. ಮಳೆ ಶುರುವಾದ ಹಿನ್ನೆಲೆ ಜನಜೀವನ‌ ಅಸ್ತವ್ಯಸ್ತವಾಗಿತ್ತು. ಯಾದಗಿರಿ ನಗರದಲ್ಲಿ ಜಿಟಿ ಜಿಟಿ ಮಳೆಯಾಗುತ್ತಿದ್ದು, ಕಳೆದ ಅರ್ಧ ಗಂಟೆಯಿಂದ ಸುರಿಯುತ್ತಿದೆ. ಹುಬ್ಬಳ್ಳಿಯಲ್ಲೂ ಎಡಬಿಡದೇ ಮಳೆ ಸುರಿಯುತ್ತಿದೆ. ಕೊಪ್ಪಳ ಜಿಲ್ಲೆಯಲ್ಲೂ ಭಾರಿ ಮಳೆಗೆ ಕೆಲವು ಕಡೆ ಹೊಲದ ಒಡ್ಡುಗಳು ಒಡೆದು ಹೋಗಿವೆ. ಕೊಪ್ಪಳ ತಾಲೂಕಿನ ಬೆಟಗೆರಿ ಹಾಗೂ ಬೋಚನಹಳ್ಳಿಯಲ್ಲಿ ಗ್ರಾಮದಲ್ಲಿ ಘಟನೆ ನಡೆದಿದೆ.

ಕರಾವಳಿಯಲ್ಲೂ ಮಳೆ ಅಬ್ಬರ

ಕರಾವಳಿಯ ಉತ್ತರಕನ್ನಡಕ್ಕೂ ವರುಣ ಕಾಲಿಟ್ಟಿದ್ದಾನೆ. ಕಳೆದೆರಡು ದಿನಗಳಿಂದ ಘಟ್ಟದ ಮೇಲಿನ ತಾಲೂಕುಗಳಲ್ಲಿ ಮಳೆ ಅಬ್ಬರಿಸುತ್ತಿತ್ತು. ಶನಿವಾರ ಬೆಳಗ್ಗೆಯಿಂದ ಕುಮಟಾ, ಅಂಕೋಲಾ ಭಾಗದಲ್ಲಿ ಮಳೆಯಾಗುತ್ತಿದೆ. ಹವಾಮಾನ ಇಲಾಖೆಯು ಏಪ್ರಿಲ್ 22ರವರೆಗೆ ಮಳೆಯ ಮುನ್ಸೂಚನೆ ನೀಡಿದೆ. ಶಿರಸಿ, ಸಿದ್ದಾಪುರ, ಮುಂಡಗೋಡ, ಹಳಿಯಾಳ ಭಾಗದಲ್ಲಿ ಕಳೆದೆರಡು ದಿನಗಳಿಂದ ಭಾರೀ ಮಳೆಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಶಿಕ್ಷಣ

CET 2024 exam: ಸಿಇಟಿಯಲ್ಲಿ 50 ಔಟ್ ಆಫ್ ಸಿಲೆಬಸ್ ಪ್ರಶ್ನೆ; ಮರು ಪರೀಕ್ಷೆ ಅಥವಾ ಗ್ರೇಸ್‌ ಮಾರ್ಕ್ಸ್‌? ಇಂದು ನಿರ್ಧಾರ

CET 2024 exam: ಈ ಸಮಸ್ಯೆಯನ್ನು ಸರಿಪಡಿಸಲಾಗದ ಸ್ಥಿತಿಗೆ ಕೆಇಎ ಬಂದಿದೆ ಎನ್ನಲಾಗಿದೆ. ನಾಲ್ಕು ವಿಷಯಗಳಲ್ಲಿ ಒಟ್ಟು 50 ಪ್ರಶ್ನೆಗಳು ಔಟ್ ಆಫ್ ಸಿಲೆಬಸ್ ಇರುವುದರಿಂದ ಕೆಇಎ ಮುಂದೆ ಏನು ಮಾಡಲಿದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಈಗ ಗ್ರೇಸ್ ಮಾರ್ಕ್ಸ್ ನೀಡಲು ಸಾಧ್ಯವೇ? ಮರು ಪರೀಕ್ಷೆ ನಡೆಸಬೇಕಾ? ಎಂಬ ಗೊಂದಲ ಏರ್ಪಿಟ್ಟಿದೆ. ಈ ಬಗ್ಗೆ ಇಂದೇ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆ ಹೆಚ್ಚಿದೆ.

VISTARANEWS.COM


on

50 out of syllabus question in CET 2024 exam Re examination or grace marks
Koo

ಬೆಂಗಳೂರು: ಎಂಜಿನಿಯರಿಂಗ್, ಕೃಷಿ ಸೇರಿದಂತೆ ಹಲವು ವೃತ್ತಿಪರ ಕೋರ್ಸ್‌ಗಳಿಗೆ ಬುಧವಾರ, ಗುರುವಾರ ನಡೆದಿದ್ದ ದಿನದ ಸಿಇಟಿ-2024 ಪರೀಕ್ಷೆಯಲ್ಲಿ (CET 2024 exam) ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (KEA) ಮಹಾ ಎಡವಟ್ಟು ಆಗಿದೆ. ನಾಲ್ಕು ವಿಷಯಗಳಿಂದ ಒಟ್ಟು 50 ಪ್ರಶ್ನೆಗಳು ಔಟ್ ಆಫ್ ಸಿಲೆಬಸ್ ಬಂದಿವೆ. ಹೀಗಾಗಿ ಈ ಬಗ್ಗೆ ಪರಿಶೀಲಿಸಿ ತೀರ್ಮಾನ ಕೈಗೊಳ್ಳಲು ಇಂದೇ (ಶನಿವಾರ – ಏಪ್ರಿಲ್‌ 20) ಸಮಿತಿಯನ್ನು ರಚನೆ ಮಾಡಲು ಮುಂದಾಗಿದೆ. ಅಲ್ಲದೆ, ಮರು ಪರೀಕ್ಷೆ ಮಾಡಲಿದೆಯೇ? ಅಥವಾ ಗ್ರೇಸ್‌ ಮಾರ್ಕ್ಸ್‌ ಕೊಡಲಿದೆಯೇ ಎಂಬ ಪ್ರಶ್ನೆಗಳು ಎದುರಾಗಿವೆ.

ಮೊದಲ ದಿನದ ಸಿಇಟಿ ಪರೀಕ್ಷೆಯಲ್ಲಿ ಗಣಿತ ಹಾಗೂ ಜೀವಶಾಸ್ತ್ರದ ವಿಷಯದಲ್ಲಿ ಔಟ್ ಆಫ್ ಸಿಲಬಸ್ ಪ್ರಶ್ನೆಗಳನ್ನು ಕೇಳಲಾಗಿತ್ತು. ಎರಡನೇ ದಿನದ ಪರೀಕ್ಷೆಯಲ್ಲಿಯೂ ಈ ಸಮಸ್ಯೆ ಪುನರಾವರ್ತನೆಯಾಗಿತ್ತು. ಭೌತಶಾಸ್ತ್ರದಲ್ಲಿ 8 ಹಾಗೂ ರಸಾಯನಶಾಸ್ತ್ರ ವಿಷಯದಲ್ಲಿ 18 ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗಳನ್ನು ಕೇಳಲಾಗಿತ್ತು. ಇದು ವಿದ್ಯಾರ್ಥಿಗಳ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ.

ಈ ಸಮಸ್ಯೆಯನ್ನು ಸರಿಪಡಿಸಲಾಗದ ಸ್ಥಿತಿಗೆ ಕೆಇಎ ಬಂದಿದೆ ಎನ್ನಲಾಗಿದೆ. ನಾಲ್ಕು ವಿಷಯಗಳಲ್ಲಿ ಒಟ್ಟು 50 ಪ್ರಶ್ನೆಗಳು ಔಟ್ ಆಫ್ ಸಿಲೆಬಸ್ ಇರುವುದರಿಂದ ಕೆಇಎ ಮುಂದೆ ಏನು ಮಾಡಲಿದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಈಗ ಗ್ರೇಸ್ ಮಾರ್ಕ್ಸ್ ನೀಡಲು ಸಾಧ್ಯವೇ? ಮರು ಪರೀಕ್ಷೆ ನಡೆಸಬೇಕಾ? ಎಂಬ ಗೊಂದಲ ಏರ್ಪಿಟ್ಟಿದೆ.

ಇದನ್ನೂ ಓದಿ: Neha Murder Case: ನೇಹಾಳನ್ನು ಮದುವೆ ಮಾಡಿಸುವಂತೆ ಆಕೆಯ ಹೆತ್ತವರ ಪ್ರಾಣ ತಿಂದಿದ್ದ ಫಯಾಜ್!‌

ಮರು ಪರೀಕ್ಷೆ ಮಾಡುತ್ತಾ?

ಮರು ಪರೀಕ್ಷೆ ನಡೆಸಲು ಕೆಇಎ ಮುಂದಾಗುತ್ತದೆಯೇ? ಒಂದು ವೇಳೆ ಈ ನಿರ್ಧಾರಕ್ಕೆ ಬಂದರೆ ದೂರದೂರಿನಿಂದ ಬಂದು ಪರೀಕ್ಷೆ ಬರೆದ ಮಕ್ಕಳಿಗೆ ಮತ್ತೊಂದು ಸವಾಲು ಎದುರಾಗಲಿದೆ. ಹೀಗಾಗಿ ಮಕ್ಕಳಿಗೆ ಗ್ರೇಸ್ ಮಾರ್ಕ್ಸ್ ಕೊಡಿ. ಇಲ್ಲದಿದ್ದರೆ ಮಕ್ಕಳ ಭವಿಷ್ಯವೇ ಹಾಳಾಗುತ್ತದೆ ಎಂದು ಪೋಷಕರು ಒತ್ತಾಯ ಮಾಡುತ್ತಿದ್ದಾರೆ.

ಏಪ್ರಿಲ್‌ 27ರವರೆಗೆ ಆಕ್ಷೇಪಣೆ ಸಲ್ಲಿಕೆಗೆ KEA ಅವಕಾಶ

ಈ ಬಾರಿ ಸಿಇಟಿಯಲ್ಲಿ ನೋಂದಣಿ ಮಾಡಿಕೊಂಡಿದ್ದ 3,49,637 ವಿದ್ಯಾರ್ಥಿಗಳ ಪೈಕಿ ಶೇ.92ರಷ್ಟು ಮಂದಿ ಪರೀಕ್ಷೆ ಬರೆದಿದ್ದಾರೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಈ ವರ್ಷ ಪಠ್ಯದಲ್ಲಿ ಇಲ್ಲದ ವಿಷಯಕ್ಕೆ ಸಂಬಂಧಿಸಿದಂತೆ ಪರೀಕ್ಷಾ ಪ್ರಾಧಿಕಾರ ಪ್ರಶ್ನೆ ಕೇಳಿದೆ. ಪಿಯು ಮಂಡಳಿ ನಿಗದಿ ಪಡಿಸಿರುವ ಪಿಯು ಪಠ್ಯಪುಸ್ತಕದ ಆಧಾರದ ಮೇಲೆ ಸಿಇಟಿ ಪರೀಕ್ಷೆ ನಡೆಸಬೇಕು. ಆದರೆ ಪಿಯು ಮಂಡಳಿ ನಿಗದಿ ಮಾಡದ ಪಠ್ಯ ಪುಸ್ತಕದ ಪ್ರಶ್ನೆ ಕೇಳಿ ಕೆಇಎ ಗೊಂದಲ ಸೃಷ್ಟಿಸಿದೆ. ಕೆಇಎ ಎಡವಟ್ಟಿಗೆ ವಿದ್ಯಾರ್ಥಿಗಳು ಕಂಗಾಲಾಗಿದ್ದಾರೆ. ಈ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಏಪ್ರಿಲ್ 27ರವರೆಗೆ ಕಾಲಾವಕಾಶವನ್ನು ಕೆಇಎ ನೀಡಿದೆ.

ಪ್ರಶ್ನೆಪತ್ರಿಕೆಯಲ್ಲಿನ ಯಾವುದೇ ಪ್ರಶ್ನೆಗಳ ಬಗ್ಗೆ ಆಕ್ಷೇಪಣೆಗಳು ಇದ್ದರೆ, ವಿಷಯ, ವರ್ಷನ್‌ ಕೋಡ್, ಪ್ರಶ್ನೆ ಸಂಖ್ಯೆಗಳನ್ನು ನಮೂದಿಸಿ keaugcet24@gmail.com ಗೆ ಇ – ಮೇಲ್‌ ಮೂಲಕ ಸಂಜೆ 5.30ರ ಒಳಗೆ ದೂರು ಸಲ್ಲಿಸಲು ಕೆಇಎ ಸೂಚಿಸಿದೆ. ಇದಕ್ಕೆ ತಜ್ಞರ ಸಮಿತಿಯು ಪರಿಶೀಲಿಸಿ ಸೂಕ್ತ ಪರಿಹಾರವನ್ನು ನೀಡಲಿದೆ ಎಂದು ಕೆಇಎ ಸ್ಪಷ್ಟಪಡಿಸಿದೆ.

ಈ ಬಗ್ಗೆ ಪರೀಕ್ಷಾ ಪ್ರಾಧಿಕಾರ ಹಾಗೂ ಪಿಯು ಮಂಡಳಿ ನಡುವೆ ಆರೋಪ ಪ್ರತ್ಯಾರೋಪ ನಡೆದಿದೆ. ಪಿಯು ಮಂಡಳಿ ನೀಡಿದ ಪಠ್ಯ ಪುಸ್ತಕದ ಆಧಾರದ ಮೇಲೆಯೇ ಸಿಇಟಿ ಪ್ರಶ್ನೆ ಪತ್ರಿಕೆ ತಯಾರಿಸಲಾಗಿದೆ ಎಂದು ಕೆಇಎ‌ ಹೇಳಿದೆ. ತಾವು ನೀಡಿದ ಪರಿಷ್ಕೃತ ಪಠ್ಯಪುಸ್ತಕ ಕೆಇಎ ಅನುಸರಿಸಿಲ್ಲ ಎಂದು ಪಿಯು ಮಂಡಳಿ ಆರೋಪಿಸಿದೆ. ಎರಡು ಇಲಾಖೆ ನಡುವೆ ಪತ್ರವ್ಯವಹಾರ ನಡೆದಿದೆ. ಪಠ್ಯಪುಸ್ತಕ ಪರಿಷ್ಕರಣೆ ಆಧಾರದ ಮೇಲೆ ಸಿಇಟಿ ಪರೀಕ್ಷೆ ನಡೆಸುವಂತೆ ಪಿಯು ಬೋರ್ಡ್ ಮೊದಲೇ ಪತ್ರ ಬರೆದಿತ್ತು. ಪಿಯು ಬೋರ್ಡ್ ಪತ್ರಕ್ಕೆ ಉತ್ತರವನ್ನೂ ಕೆಇಎ ನೀಡಿತ್ತು. ಪರಿಷ್ಕೃತ ಪಠ್ಯಪುಸ್ತಕ ಅನುಸರಿಸಲಾಗಿದೆ ಎಂದಿದೆ. ಕೊನೆಗೆ ಪಿಯು ಬೋರ್ಡ್ ನೀಡಿದ ಪರಿಷ್ಕೃತ ಪಠ್ಯಪುಸ್ತಕವನ್ನು ಕೆಇಎ ನಿರ್ಲಕ್ಷ್ಯ ಮಾಡಿದೆ.

ಇಂದು ಈ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಕೆಇಎ ಸೂಚನೆ ನೀಡಿದೆ. ಆಕ್ಷೇಪಣೆಗಳ ಆಧಾರದ ಮೇಲೆ ಪರಿಶೀಲನೆಗೆ ಸಮಿತಿ ರಚಿಸುವ ಭರವಸೆಯನ್ನು ಕೆಇಎ ನೀಡಿದ್ದು, ಸಮಿತಿ ನೀಡುವ ವರದಿಯ ಆಧಾರದ ಮೇಲೆ‌ ಕ್ರಮ ಕೈಗೊಳ್ಳಲಾಗುವುದು ಎಂದು ಕೆಇಎ ನಿರ್ದೇಶಕಿ ರಮ್ಯಾ ಹೇಳಿದ್ದಾರೆ.

Continue Reading
Advertisement
Uttarakaanda Movie bande kaaka rangayana Raghu
ಸ್ಯಾಂಡಲ್ ವುಡ್12 mins ago

Uttarakaanda Movie: ‘ಬಂಡೆ ಕಾಕಾ’ ನಾಗಿ ‘ಉತ್ತರಕಾಂಡ’ದಲ್ಲಿ ಕಾಣಿಸಿಕೊಳ್ಳಲಿದ್ದಾರೆ ರಂಗಾಯಣ ರಘು

India Economy
ಪ್ರಮುಖ ಸುದ್ದಿ15 mins ago

Indian Economy : ಭಾರತದ ಆರ್ಥಿಕತೆ ಚೀನಾಕ್ಕಿಂತ ವೇಗವಾಗಿ ಬೆಳೆಯುತ್ತಿದೆ ಎಂದ ಐಎಮ್​ಎಫ್​

ರಾಜಕೀಯ18 mins ago

Neha Murder Case: ನೇಹಾ ಕೊಲೆ ಪ್ರಕರಣ ರಾಜಕೀಯಕ್ಕೆ ಬಳಕೆ; ಕೊಲೆಗಾರನಿಗೆ ಉಗ್ರ ಶಿಕ್ಷೆ ಎಂದ ಸಿದ್ದರಾಮಯ್ಯ

Road Accident in karnataka
ಕೊಡಗು20 mins ago

Road Accident : ಯಮ ರೂಪಿ ಕೆಎಸ್‌ಆರ್‌ಟಿಸಿ ಬಸ್‌ಗೆ ಸ್ಕೂಟರ್‌ ಸವಾರ ಸಾವು, ಬಾಲಕ ಗಂಭೀರ

Gut Health
ಲೈಫ್‌ಸ್ಟೈಲ್35 mins ago

Gut Health: ನಿಮ್ಮ ಕರುಳಿನ ಆರೋಗ್ಯಕ್ಕಾಗಿ ಬೇಸಿಗೆಯಲ್ಲಿ ಈ ಡ್ರಿಂಕ್ಸ್ ಸೇವಿಸಿ

Viral news
ವೈರಲ್ ನ್ಯೂಸ್36 mins ago

Viral news: ಚುನಾವಣೆಗೆ ಮೊದಲೇ 19 ಲಕ್ಷ ಇವಿಎಂ ಕಾಣೆಯಾಗಿದ್ದು ನಿಜವೇ? ಏನಿದರ ಅಸಲಿಯತ್ತು ?

Manjummel Boys ott malayalam to premiere on may
ಮಾಲಿವುಡ್41 mins ago

Manjummel Boys: ಕನ್ನಡದಲ್ಲೂ ಬರಲಿದೆ ʻಮಂಜುಮ್ಮೆಲ್ ಬಾಯ್ಸ್ʼ? ಒಟಿಟಿಗೆ ಯಾವಾಗ?

China Missile
ವಿದೇಶ45 mins ago

China Missile : ಪಾಕಿಸ್ತಾನಕ್ಕೆ ಗುಟ್ಟಾಗಿ ಕ್ಷಿಪಣಿ ಕಳುಹಿಸಿದ ಚೀನಾದ ಎರಡು ಕಂಪನಿಗಳಿಗೆ ಅಮೆರಿಕದ ನಿರ್ಬಂಧ

Rain news
ಮಳೆ45 mins ago

Rain News : ಶುರುವಾಯ್ತು ಮಳೆ ಅವಘಡ; ಮಲಗಿದ್ದಾಗ ಚಾವಣಿ ಕುಸಿದು ಮಹಿಳೆ ಸಾವು

50 out of syllabus question in CET 2024 exam Re examination or grace marks
ಶಿಕ್ಷಣ1 hour ago

CET 2024 exam: ಸಿಇಟಿಯಲ್ಲಿ 50 ಔಟ್ ಆಫ್ ಸಿಲೆಬಸ್ ಪ್ರಶ್ನೆ; ಮರು ಪರೀಕ್ಷೆ ಅಥವಾ ಗ್ರೇಸ್‌ ಮಾರ್ಕ್ಸ್‌? ಇಂದು ನಿರ್ಧಾರ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Rain News
ಮಳೆ1 hour ago

Rain News : ಸಿಡಿಲಿಗೆ ವ್ಯಕ್ತಿ ಸೇರಿ ಜಾನುವಾರುಗಳು ಮೃತ್ಯು; ವ್ಯಾಪಕ ಮಳೆಗೆ ಜನರು ಕಂಗಾಲು

Neha Murder Case
ಹುಬ್ಬಳ್ಳಿ2 hours ago

Neha Murder Case : ನನ್ನ ಮಗನಿಗೆ ಶಿಕ್ಷೆ ಆಗಲಿ; ಇಬ್ಬರೂ ಲವ್‌ ಮಾಡ್ತಿದ್ದರು ಅನ್ನೋದು ಸತ್ಯ ಎಂದ ಫಯಾಜ್‌ ತಾಯಿ

Dina Bhavishya
ಭವಿಷ್ಯ9 hours ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಕೂಡಿಬರಲಿದೆ ಶುಭ ಘಳಿಗೆ

Neha Murder Case
ಹುಬ್ಬಳ್ಳಿ22 hours ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ1 day ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ3 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ4 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20245 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20246 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

ಟ್ರೆಂಡಿಂಗ್‌