ವಿಜಯಪುರ: ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ಪ್ರಕಾಶ್ ರಾಠೋಡ್ ಅವರಿಗೆ ಮಾತೃ ವಿಯೋಗ ಆಗಿದೆ. ಆಶಾದೇವಿ ರಾಠೋಡ್ (85) (Ashadevi Rathod) ವಯೋಸಹಜ ಕಾಯಿಲೆಯಿಂದ ವಿಧಿವಶರಾಗಿದ್ದಾರೆ.
ಇವರು ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ನಗರದ ಉಪ್ಪಲಿ ಬುರ್ಜ್ ಬಳಿ ಇರುವ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಂತರ ಕುಟುಂಬಸ್ಥರು ಪಾರ್ಥಿವ ಶರೀರವನ್ನು ಬೆಂಗಳೂರಿಗೆ ತೆಗೆದುಕೊಂಡು ಹೋಗಲಿದ್ದಾರೆ.
ಇದನ್ನೂ ಓದಿ: Road Accident: ಮದುವೆಗೆಂದು ಹೋಗುತ್ತಿದ್ದಾಗ ಸ್ಕಾರ್ಪಿಯೋ ಪಲ್ಟಿ; ಒಬ್ಬ ಸಾವು, ಇಬ್ಬರು ಗಂಭೀರ
ಸೋಮವಾರ (ಮಾ. 20) ಮಧ್ಯಾಹ್ನ 2 ಗಂಟೆಯ ಬಳಿಕ ಬೆಂಗಳೂರಿನಲ್ಲಿ ಅಂತ್ಯಕ್ರಿಯೆ ನಡೆಸುವುದಾಗಿ ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ಆಶಾದೇವಿ ರಾಠೋಡ್ ನಿಧನಕ್ಕೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್, ಶಾಸಕರಾದ ಶಿವಾನಂದ ಪಾಟೀಲ್, ಯಶವಂತರಾಯಗೌಡ ಪಾಟೀಲ್ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರ ಹಾಗೂ ಮಠಾಧೀಶರ ಸಂತಾಪ ಸೂಚಿಸಿದ್ದಾರೆ.