ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಮೆಡಿಕಲ್ ಕಾಲೇಜು ಕಟ್ಟಡದ ನಿರ್ಮಾಣದ ಚಾವಣಿಯ ಕಾಂಕ್ರೀಟ್ ಕುಸಿದು ೮ ಕಾರ್ಮಿಕರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಚಿಕ್ಕಬಳ್ಳಾಪುರ (Chikkaballapur) ತಾಲೂಕು ಆರೂರು ಗ್ರಾಮದ ಬಳಿ ನಿರ್ಮಾಣವಾಗುತ್ತಿರುವ ಮೆಡಿಕಲ್ ಕಾಲೇಜು ನಿರ್ಮಾಣವಾಗುತ್ತದೆ. ಶನಿವಾರ ಏಕಾಏಕಿ ಚಾವಣಿಯ ಕಾಂಕ್ರೀಟ್ ಕುಸಿದಿದ್ದರಿಂದ ಎಂಟು ಕಾರ್ಮಿಕರು ಗಾಯಗೊಂಡಿದ್ದಾರೆ. ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿರುವ ಜಿಲ್ಲಾಸ್ಪತ್ರೆಗೆ ಜಿಲ್ಲಾಧಿಕಾರಿ ಹಾಗೂ ಎಸ್ಪಿ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.
ಇದನ್ನೂ ಓದಿ | Woman murder | ಹಗಲಲ್ಲೇ ಮನೆಗೆ ನುಗ್ಗಿ ಮಹಿಳೆಯ ಕತ್ತು ಸೀಳಿರುವ ಹಂತಕರು; ಮಾಸ್ಕ್ ಧರಿಸಿ ಬಂದಿದ್ದ ಇಬ್ಬರ ಮೇಲೆ ಖಾಕಿ ಕಣ್ಣು