ಕರ್ನಾಟಕ
Pradeep Eashwar: ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್‌ಗೆ ಆಘಾತ, ಅನಾಥನನ್ನು ಬೆಳೆಸಿದ್ದ ಸಾಕು ತಾಯಿ ನಿಧನ
ಚಿಕ್ಕಬಳ್ಳಾಪುರದಲ್ಲಿ ಡಾ. ಕೆ. ಸುಧಾಕರ್‌ರನ್ನು ಸೋಲಿಸಿದ ಪ್ರದೀಪ್ ಈಶ್ವರ್ ಗೆಲುವಿನ ಸಂಭ್ರಮದಲ್ಲಿ ಇದ್ದರು. ಕಾಂಗ್ರೆಸ್ ನಾಯಕರ ಪಟ್ಟಾಭಿಷೇಕದ ಸಡಗರದಲ್ಲಿದ್ದ ಪ್ರದೀಪ್ ಅವರಿಗೆ ಮುಂಜಾನೆ ಬರಸಿಡಿಲು ಬಡಿದಂತಾಗಿದೆ.
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ (Chikkaballapur Election) ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ (Pradeep Eashwar) ಅವರ ಸಾಕು ತಾಯಿ ರತ್ನಮ್ಮ (72) ಶನಿವಾರ ಬೆಳಗ್ಗೆ ನಿಧನರಾಗಿದ್ದಾರೆ. ಪರೇಸಂದ್ರ ಗ್ರಾಮಕ್ಕೆ ಭೇಟಿ ನೀಡಿದ ಪ್ರದೀಪ್ ಪಾರ್ಥೀವ ಶರೀರದ ದರ್ಶನ ಪಡೆದರು. ಇದೇ ವೇಳೆ ಪ್ರದೀಪ್ ಸಾಕು ತಾಯಿಯ ಪಾದಗಳನ್ನು ಗಟ್ಟಿಯಾಗಿ ಹಿಡಿದು ನಮಸ್ಕರಿಸಿದರು.
ಪ್ರದೀಪ್ ಚಿಕ್ಕ ವಯಸ್ಸಿನಲ್ಲಿ ತಂದೆ-ತಾಯಿಯನ್ನು ಕಳೆದುಕೊಂಡು ಅನಾಥರಾಗಿದ್ದರು. ಆಗ ಪ್ರದೀಪ್ ಹಾಗೂ ಆತನ ತಮ್ಮ ಚೇತನ್‌ನನ್ನು ಸಂಬಂಧಿ ರತ್ನಮ್ಮನವರೇ ಸಾಕಿ ಸಲುಹಿ ದೊಡ್ಡವರನ್ನಾಗಿ ಮಾಡಿದ್ದರು. ಕಡು ಬಡತನದಲ್ಲಿ ಬೆಳೆದಿದ್ದ ಪ್ರದೀಪ್ ಸದ್ಯ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕನಾದ ಸಂತೋಷದಲ್ಲಿ ಇದ್ದರು.
ಇದನ್ನೂ ಓದಿ: DK Shivakumar Profile : ರಾಜ್ಯ ಕಾಂಗ್ರೆಸ್‌ಗೆ ಬಲ ತುಂಬಿದ ಬಲಿಷ್ಠ ನಾಯಕ ಡಿ ಕೆ ಶಿವಕುಮಾರ್; ಇಲ್ಲಿದೆ ಅವರ ಜೀವನಚಿತ್ರ
ಮಗ ಗೆದ್ದು ಬಿಟ್ಟ ಎಂಬ ಖುಷಿಯಲ್ಲಿ ರತ್ನಮ್ಮನವರು ಇದ್ದರು. ಇಂದು (ಮೇ 20) ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿ.ಎಕ.ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ ಮಾಡುವ ಸಂಭ್ರಮದಲ್ಲಿ ಪ್ರದೀಪ್ ಈಶ್ವರ್ ಇದ್ದರು. ಆದರೆ ಸಾಕು ತಾಯಿ ನಿಧನದ ಸುದ್ದಿಯು ಪ್ರದೀಪ್ ಅವರನ್ನು ದುಃಖತಪ್ತರಾಗುವಂತೆ ಮಾಡಿದೆ.
ರಾಜ್ಯದ ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಕರ್ನಾಟಕ
World Environment Day: ಶಿವಮೊಗ್ಗದಲ್ಲಿ ಸಹಸ್ರ ವೃಕ್ಷಾರೋಪಣ; ಸಾವಿರ ಗಿಡ ನೆಡುವ ಅಭಿಯಾನಕ್ಕೆ ಚಾಲನೆ
World Environment Day: ಶಿವಮೊಗ್ಗದ ತುಂಗಾ ಮೇಲ್ದಂಡೆ ಕಾಲುವೆಯ ಇಕ್ಕೆಲಗಳಲ್ಲಿ ಸಹಸ್ರ ವೃಕ್ಷಾರೋಪಣ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ನೀಡಲಾಯಿತು.
ಶಿವಮೊಗ್ಗ: ಪರಿಸರ ದಿನಾಚರಣೆ ನಿಮಿತ್ತ ವಿಸ್ತಾರ ನ್ಯೂಸ್ ಹಮ್ಮಿಕೊಂಡಿದ್ದ ಅಭಿಯಾನಕ್ಕೆ (World Environment Day) ಶಿವಮೊಗ್ಗದಲ್ಲಿ ಭಾರಿ ಬೆಂಬಲ ವ್ಯಕ್ತವಾಗಿದೆ. ತುಂಗಾ ಮೇಲ್ದಂಡೆ ಕಾಲುವೆಯ ಇಕ್ಕೆಲಗಳಲ್ಲಿ ಸಹಸ್ರ ವೃಕ್ಷಾರೋಪಣ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ದೊರಕಿದೆ. ನಗರ ವ್ಯಾಪ್ತಿಯ 11 ಕಿ.ಮೀ. ಉದ್ದದ ಕಾಲುವೆಯ ಎರಡೂ ಬದಿಗಳಲ್ಲಿ ಸಾವಿರ ಗಿಡಗಳನ್ನು ನೆಡುವ ಬೃಹತ್ ಅಭಿಯಾನಕ್ಕೆ ಆರ್‌ಎಸ್‌ಎಸ್ ದಕ್ಷಿಣ ಪ್ರಾಂತ ಕಾರ್ಯವಾಹ ಪಟ್ಟಾಭಿರಾಮ ಚಾಲನೆ ನೀಡಿದರು.
ನಿರ್ಮಲ ತುಂಗಾ ಅಭಿಯಾನ ತಂಡ, ಪರ್ಯಾವರಣ ಸಂರಕ್ಷಣೆ, ಸರ್ಜಿ ಫೌಂಡೇಶನ್, ವಿಸ್ತಾರ ನ್ಯೂಸ್ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಶಿವಮೊಗ್ಗ ಜಿಲ್ಲಾಡಳಿತ, ತುಂಗಾ ಮೇಲ್ದಂಡೆ ಯೋಜನೆ, ಅರಣ್ಯ ಇಲಾಖೆ ಸಹಯೋಗ ನೀಡಿದ್ದು, ನಗರದ ಪರಿಸರ ಪ್ರೇಮಿಗಳು ಪರಿಸರ ರಕ್ಷಣಾ ಕಾರ್ಯದಲ್ಲಿ ಕೈ ಜೋಡಿಸಿದ್ದಾರೆ.
ಆರ್‌ಎಸ್‌ಎಸ್ ವಿಭಾಗ ಕಾರ್ಯವಾಹ ಗಿರೀಶ್ ಕಾರಂತ್, ಜಿಲ್ಲಾ ಸಂಘಚಾಲಕ ರಂಗನಾಥ, ಸರ್ಜಿ ಫೌಂಡೇಶನ್ ಮುಖ್ಯಸ್ಥ ಡಾ. ಧನಂಜಯ ಸರ್ಜಿ, ಮಾಚೇನಹಳ್ಳಿ ಕೈಗಾರಿಕಾ ವಸಾಹತು ಸಂಘದ ಅಧ್ಯಕ್ಷ ರಮೇಶ್ ಹೆಗ್ಡೆ, ದಿನೇಶ್ ಶೇಟ್, ತ್ಯಾಗರಾಜ ಮಿತ್ಯಾಂತ, ಬಾಲಕೃಷ್ಣ ನಾಯ್ಡು, ಗೊ.ಕೃ. ಭಾಗವತ್, ರಂಗಭೂಮಿ ಮಂಜು, ನಾಗಭೂಷಣ್ ಸ್ವಾಮಿ, ಕುಮಾರಿಪ್ರಣಮ್ಯ, ಪ್ರಣೀತಾ, ಮುಂತಾದವರು ಇದ್ದರು.
ಉತ್ತರ ಕನ್ನಡ
Uttara Kannada News: ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರೂ ಕಂಕಣ ಬದ್ಧರಾಗಬೇಕು: ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ
Uttara Kannada News: ಶಿರಸಿಯ ಹೊರವಲಯದ ವೇದ ಆರೋಗ್ಯ ಕೇಂದ್ರದಲ್ಲಿ ಸೋಮವಾರ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರೂ ಕಂಕಣ ಬದ್ಧರಾಗಬೇಕು ಎಂದು ಬೆಳಗಾವಿ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಕರೆ ನೀಡಿದ್ದಾರೆ.
ಶಿರಸಿ: ಪರಿಸರ ಸಂರಕ್ಷಣೆಗೆ (Environmental protection) ಪ್ರತಿಯೊಬ್ಬರೂ (Everyone) ಕಂಕಣ ಬದ್ಧರಾಗಬೇಕು ಎಂದು ಬೆಳಗಾವಿ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು. ನಗರದ ಹೊರವಲಯದ ವೇದ ಆರೋಗ್ಯ ಕೇಂದ್ರದಲ್ಲಿ ಸೋಮವಾರ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವೃಕ್ಷಾರೋಪಣ ನಡೆಸಿ ಮಾತನಾಡಿದ ಶ್ರೀಗಳು, ಪ್ರಧಾನಿ ನರೇಂದ್ರ ಮೋದಿ ಅವರೂ ಸ್ವಚ್ಛ ಭಾರತ, ಕಸ ಮುಕ್ತ ಭಾರತದ ಕನಸು ಕಂಡಿದ್ದಾರೆ. ಹುಕ್ಕೇರಿ ಮಠದಿಂದಲೂ ಪ್ಲಾಸ್ಟಿಕ್ ಚೀಲ ಮುಕ್ತ ಮಾಡುವಲ್ಲಿ ನಮ್ಮದೇ ಕೊಡುಗೆ ಕೊಡಬೇಕು ಎಂದು 2.80 ಲಕ್ಷ ಬಟ್ಟೆ ಚೀಲಗಳನ್ನು ಹೊಲಿಸಿ ವಿತರಣೆ ಮಾಡಿದ್ದೆವು ಎಂದರು.
ಇದನ್ನೂ ಓದಿ: Kiccha Sudeep: ಅಭಿಷೇಕ್ ಅಂಬರೀಷ್ಗೆ ಭರ್ಜರಿ ಗಿಫ್ಟ್ ಕೊಟ್ಟ ಕಿಚ್ಚ ಸುದೀಪ್!
ಮಠ ಮಾನ್ಯಗಳು ಕೇವಲ ಪೂಜೆ ಪುನಸ್ಕಾರ ಮಾಡುವುದಲ್ಲ. ಭವಿಷ್ಯದ ಮಕ್ಕಳಿಗಾಗಿ ಹಾಗೂ ನಮಗಾಗಿ ಪರಿಸರದ ಸಂರಕ್ಷಣೆ ಮಾಡಬೇಕಿದೆ ಎಂದರು.
ಒಂದು ವೃಕ್ಷವು ಸ್ವಚ್ಛ ಮನದಿಂದ ಎಷ್ಟೆಲ್ಲ ನೆರವಾಗುತ್ತದೆ. ಹಾಗೆ ಪರಿಸರದ ಉಳಿವಿಗೆ ಸರ್ವರೂ ಕಂಕಣ ಬದ್ಧರಾಗಬೇಕು. ಇಲ್ಲವಾದರೆ ಭವಿಷ್ಯಕ್ಕೆ ದೊಡ್ಡ ಕಂಟಕ ಆಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿ, 1974 ರಿಂದ ಪರಿಸರದ ದಿನ ಆಚರಣೆ ಮಾಡುತ್ತಿದ್ದೇವೆ. ಈ ಬಾರಿಯ ಘೋಷ ವಾಕ್ಯ ಪ್ಲಾಸ್ಟಿಕ್ ಮಾಲಿನ್ಯ ತಡೆಯಬೇಕು. ಎಲ್ಲರಿಗೂ ವೈಯಕ್ತಿಕ, ಸಾಮಾಜಿಕ, ಕೌಟುಂಬಿಕ, ಸಂಘಟಿತ ಜೀವನದಲ್ಲಿ ಪರಿಸರದ ಮಹತ್ವ ಅರಿವಿದೆ. ಆದರೆ, ಈ ಅರಿವನ್ನು ವೈಯಕ್ತಿಕ ಜೀವನದಲ್ಲಿ ಅನುಷ್ಠಾನಕ್ಕೆ ತರಬೇಕು ಎಂದರು.
ಭವಿಷ್ಯದ ಜನಾಂಗದ ಭವಿಷ್ಯ ಅಂಧಕಾರಕ್ಕೆ ಹೋಗದಂತೆ ಪರಿಸರ ಸಂರಕ್ಷಿಸಬೇಕು. ಯಾರೂ ಉದಾಸೀನ ಮಾಡದೇ ಪರಿಸರ ಸಂರಕ್ಷಣೆ ಮಾಡಬೇಕು ಎಂದೂ ಹೇಳಿದರು.
ಇದನ್ನೂ ಓದಿ: Eco friendly Fashion: ಪರಿಸರ ಸ್ನೇಹಿ ಉಡುಪುಗಳಿಗೂ ಸಿಕ್ತು ಗ್ಲಾಮರ್ ಟಚ್
ಪ್ರಸಿದ್ಧ ವೈದ್ಯ ಡಾ. ವೆಂಕಟ್ರಮಣ ಹೆಗಡೆ ಮಾತನಾಡಿ, ಪ್ರಕೃತಿ ಸಂರಕ್ಷಣೆ ಎಲ್ಲರ ಜವಾಬ್ದಾರಿ. ನಿಸರ್ಗದ ಉಳಿದರೆ ಮಾತ್ರ ಎಲ್ಲ ಜೀವಿಗಳ ಉಳಿವು. ಈ ಸತ್ಯ ಅರಿತರೆ ಮಾತ್ರ ಪರಿಸರ ಉಳಿಸುವ ಜವಬ್ದಾರಿ ಹೃದಯದಿಂದ ಆರಂಭವಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಸಂಗೀತಾ ಹೆಗಡೆ, ನಾರಾಯಣ ಹೆಗಡೆ ಸೇರಿದಂತೆ ಇತರರು ಇದ್ದರು.
ಕರ್ನಾಟಕ
Bike Accident: ಚಾರ್ಮಾಡಿ ಘಾಟ್‌ನಲ್ಲಿ ಸಾರಿಗೆ ಬಸ್ ಚಕ್ರಕ್ಕೆ ಸಿಲುಕಿ ಸ್ಕೂಟರ್ ಸವಾರ ಸಾವು
Bike Accident: ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟ್‌ನ ಮೂರನೇ ತಿರುವಿನಲ್ಲಿ ಅಪಘಾತ ನಡೆದಿದೆ. ನಿಯಂತ್ರಣ ತಪ್ಪಿ ಸ್ಕೂಟರ್ ಸವಾರ ಬಸ್‌ನಡಿ ಸಿಲುಕಿ ಮೃತಪಟ್ಟಿದ್ದಾರೆ. ಮತ್ತೊಬ್ಬ ಸವಾರ ಗಾಯಗೊಂಡಿದ್ದಾರೆ.
ಚಿಕ್ಕಮಗಳೂರು: ಕಲ್ಯಾಣ ಕರ್ನಾಟಕ ಸಾರಿಗೆ ಬಸ್ (ಕೆಕೆಆರ್‌ಟಿಸಿ) ಹಿಂಬದಿ ಚಕ್ರಕ್ಕೆ ಸಿಲುಕಿ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್‌ನ ಮೂರನೇ ತಿರುವಿನಲ್ಲಿ ಸೋಮವಾರ ನಡೆದಿದೆ. ರಸ್ತೆ ತಿರುವಿನಲ್ಲಿ ನಿಯಂತ್ರಣ ತಪ್ಪಿ ಸ್ಕೂಟರ್ ಸವಾರ ಬಸ್ ಕೆಳಗೆ ಬಿದ್ದಿದ್ದರಿಂದ ದುರಂತ (Bike Accident) ಸಂಭವಿಸಿದೆ.
ಮಾಗುಂಡಿ ಗ್ರಾಮದ ಇರ್ಫಾನ್ (29) ಮೃತ ಸವಾರ, ಮತ್ತೊಬ್ಬ ಸವಾರನಿಗೆ ಗಂಭೀರ ಗಾಯಗಳಾಗಿವೆ. ಚಾರ್ಮಾಡಿ ಘಾಟ್‌ನಲ್ಲಿ ಧಾರಾಕಾರ ಮಳೆ ಸುರಿಯುತ್ತಿತ್ತು. ಈ ವೇಳೆ ಸ್ಕೂಟರ್‌ನಲ್ಲಿ ಸಾಗುವಾಗ ನಿಯಂತ್ರಣ ತಪ್ಪಿ ಸವಾರ ಕೆಳಗೆ ಬಿದ್ದಿದ್ದಾರೆ. ಇದೇ ವೇಳೆ ಬಸ್ ಹಿಂಬದಿ ಚಕ್ರ ಹರಿದಿದ್ದರಿಂದ ಗಂಭೀರವಾಗಿ ಗಾಯಗೊಂಡು ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಚಿಕ್ಕಮಗಳೂರು – ದಕ್ಷಿಣಕನ್ನಡಕ್ಕೆ ಸಂಪರ್ಕಿಸುವ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಧರ್ಮಸ್ಥಳದಿಂದ ಹರಪ್ಪನಹಳ್ಳಿಗೆ ತೆರಳುತ್ತಿದ್ದ ಬಸ್‌ನಡಿ ಸಿಲುಕಿ ಸವಾರ ಮೃತಪಟ್ಟಿದ್ದಾರೆ.
ಇದನ್ನೂ ಓದಿ | ಸರ್ಕಾರಿ ಬಸ್ ಓಡಿಸಿದ ಖಾಸಗಿ ವ್ಯಕ್ತಿ; ಕ್ರೂಸರ್‌ಗೆ ಡಿಕ್ಕಿ, ತಪ್ಪಿತು ಭಾರೀ ಅನಾಹುತ
ಕತ್ತು ಕೊಯ್ದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ
ತುಮಕೂರು: ನಗರದ ಅಂತಸರನಹಳ್ಳಿ ತರಕಾರಿ ಮಾರುಕಟ್ಟೆಯಲ್ಲಿ ಬಳಿ ಕತ್ತು ಕೊಯ್ದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಬಿಹಾರ ಮೂಲದ ಲಖನ್ ಮಾಂಜಿ (36) ಮೃತ ವ್ಯಕ್ತಿ. 6 ತಿಂಗಳಿಂದ ಮಾರುಕಟ್ಟೆಯಲ್ಲಿ ಟಾಯ್ಲೆಟ್ ಕೀಪರ್ ಆಗಿದ್ದ ಲಖನ್ ಮಾಂಜಿ ಕೆಲಸ ಮಾಡುತ್ತಿದ್ದ. ಸಾರ್ವಜನಿಕ ಟಾಯ್ಲೆಟ್‌ನಲ್ಲಿ ಶವ ಪತ್ತೆಯಾಗಿದೆ. ತುಮಕೂರು ನಗರ ಠಾಣೆ ಇನ್ ಸ್ಪೆಕ್ಟರ್ ದಿನೇಶ್ ಕುಮಾರ್ ಮತ್ತು ಸಿಬ್ಬಂದಿ ಸ್ಥಳ ಪರಿಶೀಲಿಸಿ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕರ್ನಾಟಕ
BJP Protest: ರಾಜ್ಯ ಸರ್ಕಾರದ ವಿರುದ್ಧ ಬೀದಿಗಿಳಿದ ಬಿಜೆಪಿ; ವಿದ್ಯುತ್ ದರ ಏರಿಕೆ, ಹಾಲಿನ ಖರೀದಿ ದರ ಕಡಿತಕ್ಕೆ ಆಕ್ರೋಶ
BJP Protest: ಬಿಜೆಪಿಯಿಂದ ಮಂಗಳವಾರವೂ ವಿವಿಧೆಡೆ ಪ್ರತಿಭಟನೆ ಮುಂದುವರಿಯಲಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೆಳಗ್ಗೆ 11ಕ್ಕೆ ಬೆಂಗಳೂರು ನಗರ ಜಿಲ್ಲೆ ಸೇರಿ ಮೂರು ಜಿಲ್ಲಾ ಘಟಕಗಳಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಯಲಿದೆ.
ಬೆಂಗಳೂರು: ವಿದ್ಯುತ್ ದರ ಏರಿಕೆ, ಹಾಲಿನ ದರ ಕಡಿತ, ಗ್ಯಾರಂಟಿ ಯೋಜನೆಗಳಿಗೆ ಹಲವು ಷರತ್ತು ಅನ್ವಯ ಸೇರಿ ರಾಜ್ಯ ಸರ್ಕಾರ ವಿವಿಧ ನೀತಿ, ನಿರ್ಧಾರಗಳನ್ನು ವಿರೋಧಿಸಿ ರಾಜ್ಯದ ವಿವಿಧೆಡೆ ಬಿಜೆಪಿ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಗಿದೆ. ವಿವಿಧೆಡೆ ಬೀದಿಗಿಳಿದು ಪ್ರತಿಭಟನೆ ನಡೆಸಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು, ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಸಚಿವರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು.
ಷರತ್ತುಗಳಿಲ್ಲದೆ ಗ್ಯಾರಂಟಿ ಯೋಜನೆ ಜಾರಿ ಮಾಡಿ
ರಾಮನಗರ: ಗ್ಯಾರಂಟಿ ಯೋಜನೆಗಳಿಗೆ ವಿವಿಧ ಷರತ್ತುಗಳ ಹೇರಿಕೆ ವಿರೋಧಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ನಗರದ ಐಜೂರು ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಚುನಾವಣಾ ಪೂರ್ವದಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲರಾಗಿದ್ದಾರೆ ಎಂದು ಸಿಎಂ ಹಾಗೂ ಡಿಸಿಎಂ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಯಾವುದೇ ಷರತ್ತುಗಳ ಹಾಕದೇ ಯೋಜನೆಗಳನ್ನು ಜಾರಿ ಮಾಡಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣಗೌಡ ಒತ್ತಾಯಿಸಿದರು.
ಬಿಟ್ಟಿ ಗ್ಯಾರಂಟಿಗಳನ್ನು ಘೋಷಣೆ ಮಾಡಿ ಅಧಿಕಾರಕ್ಕೆ ಏರಿರುವ @INCKarnatakaದ #ATMsarakara ಕ್ಕೆ ಬಿಜೆಪಿ ರಾಜ್ಯದಾದ್ಯಂತ ಇಂದು ಪ್ರತಿಭಟನೆ ಮೂಲಕ ಬಿಸಿ ಮುಟ್ಟಿಸಿದೆ.
— BJP Karnataka (@BJP4Karnataka) June 5, 2023
ಎಲ್ಲರಿಗೂ ಫ್ರೀ ಎನ್ನುತ್ತಲೇ ದಿಢೀರ್ ಬೆಲೆಗಳ ಏರಿಕೆ ಮಾಡುತ್ತಿರುವ, ಹಾಲಿನ ಪ್ರೋತ್ಸಾಹಧನ ಕಡಿತಗೊಳಿಸಿರುವ @siddaramaiah ನೇತೃತ್ವದ ಸರ್ಕಾರ ಜನರ ಹೊಟ್ಟೆ ಮೇಲೆ… pic.twitter.com/Y2hofA9pnG
ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ ಕೂಗಿದ ಕಾರ್ಯಕರ್ತರು
ಮೈಸೂರು: ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಮುಂಭಾಗ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ಕಾಂಗ್ರೆಸ್ 200 ಯೂನಿಟ್ ಉಚಿತ ವಿದ್ಯುತ್ ಭರವಸೆ ನೀಡಿತ್ತು. ಈಗ ಪ್ರತಿ ಯೂನಿಟ್‌ಗೆ 70 ಪೈಸೆ ಹೆಚ್ಚಳ ಮಾಡಿದೆ. ರೈತರಿಗೆ ನೀಡುತ್ತಿದ್ದು ಹಾಲಿನ ಪ್ರೋತ್ಸಾಹ ಧನ ಕಡಿತಗೊಳಿಸಿದೆ. ಬಿಟ್ಟಿ ಭಾಗ್ಯಗಳಿಗೆ ಹಣ ಹೊಂದಿಸಲು ಸಾರ್ವಜನಿಕರಿಗೆ ಬರೆ ಹಾಕುತ್ತಿದೆ. ಗೋಹತ್ಯೆ ನಿಷೇಧ ಕಾಯ್ದೆ ರದ್ದು ಮಾಡುವುದಾಗಿ ಹೇಳಿದೆ. ಆದ್ದರಿಂದ ಕಾಂಗ್ರೆಸ್ ಸರ್ಕಾರ ತೊಲಗಬೇಕೆಂದು ಕಾರ್ಯಕರ್ತರು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಪರಾಜಿತ ಅಭ್ಯರ್ಥಿಗಳಾದ ಕವೀಶ್‌ಗೌಡ, ಸಂದೇಶ್ ಸ್ವಾಮಿ, ಜಿಲ್ಲಾಧ್ಯಕ್ಷೆ ಮಂಗಳಾ ಸೋಮಶೇಖರ್, ವಿಭಾಗೀಯ ಪ್ರಭಾರ ಮೈ.ವಿ.ರವಿಶಂಕರ್ ಸೇರಿ ಪ್ರಮುಖರು ಭಾಗಿಯಾಗಿದ್ದರು.
ಗೋ ಭಕ್ಷಕ ಸಿದ್ದರಾಮಯ್ಯ ಎಂದು ಆಕ್ರೋಶ
ಕೋಲಾರ: ಗೋ ಹತ್ಯೆ ನಿಷೇಧ ಕಾಯ್ದೆ ಹಿಂಪಡೆಯುವ ನಿರ್ಧಾರ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ನಗರದಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಗೋ ಭಕ್ಷಕ ಸಿದ್ದರಾಮಯ್ಯ ಎಂದು ಕಾರ್ಯಕರ್ತರು ಧಿಕ್ಕಾರ ಕೂಗಿದರು. ಇದೇ ವೇಳೆ ಬಸ್ ನಿಲ್ದಾಣ ವೃತ್ತದಲ್ಲಿ ಸಂಚಾರ ತಡೆ ನಡೆಸಿ ಪ್ರತಿಭಟನೆ ನಡೆಸಿದರು.
ಇದನ್ನೂ ಓದಿ | Free Electricity: ಹೊರಬಿತ್ತು ಗೃಹ ಜ್ಯೋತಿ ಮಾರ್ಗಸೂಚಿ; ಬಾಡಿಗೆದಾರನಿಗಿಲ್ಲ ಉಚಿತ ವಿದ್ಯುತ್?
ವಿದ್ಯುತ್ ದರ ಏರಿಕೆ ಆದೇಶ ವಾಪಸ್ ಪಡೆಯಿರಿ
ವಿಜಯನಗರ: ವಿದ್ಯುತ್ ಬಿಲ್ ದರ ಏರಿಕೆ ವಿರೋಧಿಸಿ ಹೊಸಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಡಾ. ಪುನೀತ್ ರಾಜ್‍ಕುಮಾರ್ ವೃತ್ತದಿಂದ, ತಹಸೀಲ್ದಾರ್ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆಯಲ್ಲಿ ಸಾಗಿದ ಕಾರ್ಯಕರ್ತರು, ಬೆಲೆ ಏರಿಕೆ ಆದೇಶ ವಾಪಸ್ ಪಡೆಯಬೇಕು ಎಂದು ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.
ಮಂಗಳೂರು, ಚಾಮರಾಜನಗರ, ಬೀದರ್ ಸೇರಿ ವಿವಿಧೆಡೆ ಪ್ರತಿಭಟನೆ
ಹಾವೇರಿಯಲ್ಲಿ ಸಂಸದ ಶಿವಕುಮಾರ್ ಉದಾಸಿ ನೇತೃತ್ವದಲ್ಲಿ ಹೋರಾಟ
ಹಾವೇರಿ: ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಸಂಸದ ಶಿವಕುಮಾರ್ ಉದಾಸಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಗ್ಯಾರಂಟಿ ಯೋಜನೆಗಳಿಗೆ ಕಂಡಿಷನ್ ಹಾಕಿರುವುದಕ್ಕೆ ಆಕ್ರೋಶ ಹೊರಹಾಕಿದ ಪ್ರತಿಭಟನಾಕಾರರು, ವಿದ್ಯುತ್ ಬಿಲ್ ಏರಿಕೆಗೆ ಖಂಡನೆ ವ್ಯಕ್ತಪಡಿಸಿದರು.
ಕಾರಟಗಿಯಲ್ಲಿ ಪ್ರತಿಭಟನಾ ಮೆರವಣಿಗೆ
ಕೊಪ್ಪಳ: ಜಿಲ್ಲೆಯ ಕಾರಟಗಿ ಪಟ್ಟಣದಲ್ಲಿ ವಿದ್ಯುತ್ ದರ ಏರಿಕೆ, ಹಾಲಿನ ಖರೀದಿ ದರ ಕಡಿತ ಹಾಗೂ ಗೋಹತ್ಯೆ ನಿಷೇಧ ಕಾಯ್ದೆ ವಾಪಸ್ ಪಡೆಯುವ ನಿರ್ಧಾರ ಖಂಡಿಸಿ ಮಾಜಿ ಶಾಸಕ ಬಸವರಾಜ ದಡೇಸೂಗೂರು ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬಿಜೆಒಇ ಕಾರ್ಯಾಲಯದಿಂದ ಎಪಿಎಂಸಿವರೆಗೆ ಪಾದಯಾತ್ರೆ ನಡೆಸಿ ಪ್ರತಿಭಟನೆ ನಡೆಸಲಾಯಿತು.
ಚಿಕ್ಕಬಳ್ಳಾಪುರದಲ್ಲಿ ಪ್ರತಿಭಟನೆ
ಚಿಕ್ಕಬಳ್ಳಾಪುರ: ವಿದ್ಯುತ್ ಬೆಲೆ ಏರಿಕೆ, ಹಾಲಿನ ಖರೀದಿ ದರ ಇಳಿಕೆ ವಿರೋಧಿಸಿ ನಗರದ ಅಂಬೇಡ್ಕರ್ ವೃತ್ತದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ರಾಮಲಿಂಗಪ್ಪ ಹಾಗೂ ಸೀಕಲ್ಲು ರಾಮಚಂದ್ರಗೌಡ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಇದೇ ವೇಳೆ ಗೋಹತ್ಯೆ ನಿಷೇಧ ಕಾಯ್ದೆಯನ್ನು ಯಾವುದೇ ಕಾರಣಕ್ಕೂ ಹಿಂಪಡೆಯಬಾರದು ಎಂದು ಒತ್ತಾಯಿಸಿದರು.
ಶಿವಮೊಗ್ಗದಲ್ಲಿ ಬಿಜೆಪಿ ಪ್ರತಿಭಟನೆಯ ದೃಶ್ಯ
ಧಾರವಾಡ ಡಿಸಿ ಕಚೇರಿ ಎದುರು ಪ್ರತಿಭಟನೆ
ಧಾರವಾಡ: ಗ್ಯಾರಂಟಿ ಯೋಜನೆಗಳಿಗೆ ಮಾನದಂಡ ಅಳವಡಿಕೆ ಹಾಗೂ ವಿದ್ಯುತ್ ದರ ಏರಿಕೆ ಖಂಡಿಸಿ ನಗರದ ಡಿಸಿ ಕಚೇರಿ ಮುಂಭಾಗದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಹುಬ್ಬಳ್ಳಿ- ಧಾರವಾಡ ಮಹಾನಗರ ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ ಕಪಟಕರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಇದನ್ನೂ ಓದಿ | 200 ಯುನಿಟ್ ಫ್ರೀ ಕೊಡಿ ಅನ್ನುವವರಿಗೆ ವಿವೇಕ ಇದೆಯಾ? ಈಗೆಷ್ಟು ಬಳಸ್ತಿದ್ದಾರೋ ಅಷ್ಟೇ ಬಳಸಬೇಕೆಂದ ಸಿದ್ದರಾಮಯ್ಯ
ಮಂಗಳೂರಿನಲ್ಲಿ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಹೋರಾಟ
ಮಂಗಳೂರು: ನಗರದ ಮಿನಿ ವಿಧಾನಸೌಧ ಮುಂಭಾಗ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ಕಾರ್ಯಕರ್ತರು ಧಿಕ್ಕಾರ ಘೋಷಣೆ ಕೂಗಿದರು.
-
ಸುವಚನ18 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ದೇಶ23 hours ago
Odisha Train Accident: ಅಪಘಾತ ನಡೆದು 51 ಗಂಟೆಯಲ್ಲೇ ಹಳಿ ಸಿದ್ಧ, ರೈಲು ಸಂಚಾರ; 36 ತಾಸು ಸ್ಥಳದಲ್ಲೇ ಇದ್ದ ಸಚಿವ
-
ಕರ್ನಾಟಕ24 hours ago
Ullal News: ಆಪ್ತನ ಸಹೋದರನ ಅಂತಿಮಯಾತ್ರೆಗೆ ಹೆಗಲುಕೊಟ್ಟ ಸ್ಪೀಕರ್ ಯು.ಟಿ. ಖಾದರ್
-
ಕರ್ನಾಟಕ16 hours ago
Odisha Train Accident: ಒಡಿಶಾ ರೈಲು ದುರಂತಕ್ಕೆ ಕೋಮು ಬಣ್ಣ ನೀಡಿದ ಮಹಿಳೆ, ಒಡಿಶಾ ಪೊಲೀಸರಿಂದ ತನಿಖೆ
-
ಕರ್ನಾಟಕ23 hours ago
Shivamogga News: ಶಿಕಾರಿಪುರದಲ್ಲಿ ರಾಷ್ಟ್ರಕೂಟರ ಕಾಲದ ಪ್ರಾಚ್ಯಾವಶೇಷಗಳು ಪತ್ತೆ
-
ಕರ್ನಾಟಕ13 hours ago
ವಿಶ್ವ ಪರಿಸರ ದಿನ: ಸಸಿ ನೆಡಿ, ಫೋಟೊ ಕಳುಹಿಸಿ; ವಿಸ್ತಾರ ನ್ಯೂಸ್ ಅಭಿಯಾನ
-
ದೇಶ11 hours ago
Odisha Train Accident: ಗಾಯದ ಮೇಲೆ ಬರೆ ಎಂದರೆ ಇದೇ; ಒಡಿಶಾದಲ್ಲಿ ಹಳಿ ತಪ್ಪಿದ ಮತ್ತೊಂದು ರೈಲು
-
ದೇಶ15 hours ago
world environment day : ಇಂದು ವಿಶ್ವ ಪರಿಸರ ದಿನ 2023: ಈ ದಿನದ ಮಹತ್ವ, ಇತಿಹಾಸ, ಥೀಮ್ ತಿಳಿಯಿರಿ